ಮಡಿಕೇರಿ ಅ.27 NEWS DESK : ಕೊಡವ ಕುಟುಂಬಗಳ ನಡುವಣ ಮುಂದಿನ ಸಾಲಿನ ‘ಚೇನಂಡ ಕಪ್ ಹಾಕಿ ಉತ್ಸವ’ಕ್ಕೆ 450ಕ್ಕೂ ಹೆಚ್ಚಿನ ಕೊಡವ ಕುಟುಂಬ ತಂಡಗಳು ಪಾಲ್ಗೊಳ್ಳುವಂತೆ ಮಾಡುವ ಗುರಿಯೊಂದಿಗೆ, ಅತ್ಯಂತ ವಿಶಿಷ್ಟವಾಗಿ ಉತ್ಸವವನ್ನು ಹಾಕಿ ಆಚರಿಸಲು ಉದ್ದೇಶಿಸಲಾಗಿದೆಯೆಂದು ಹಾಕಿ ಉತ್ಸವ ಆಯೋಜಕ ಸಮಿತಿಯ ಪದಾಧಿಕಾರಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಗಳನ್ನು ನೀಡಿದ ಚೇನಂಡ ಕಪ್ ಹಾಕಿ ಉತ್ಸವ ಆಯೋಜಕ ಸಮಿತಿಯ ಕಾರ್ಯದರ್ಶಿ ಸಿ.ಎಸ್. ಮಧು ದೇವಯ್ಯ, ನಾಪೋಕ್ಲುವಿನಲ್ಲಿ ಮುಂದಿನ 2026ನೇ ಸಾಲಿನ ಏ.5ರಿಂದ ಮೇ 2ರವರೆಗೆ 26ನೇ ಸಾಲಿನ ಚೇನಂಡ ಕಪ್ ಹಾಕಿ ಉತ್ಸವ ನಡೆಯಲಿದೆ. ಈ ಹಿಂದೆ 2024 ರಲ್ಲಿ ಆಯೋಜಿತ ಕುಂಡ್ಯೋಳಂಡ ಕುಟುಂಬದ ಹಾಕಿ ಉತ್ಸವವು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದ್ದರೆ, ಈ ಸಾಲಿನಲ್ಲಿ ನಡೆದ ಮುದ್ದಂಡ ಕಪ್ ಹಾಕಿ ಉತ್ಸವ ಬುಕ್ ಆಫ್ ವಲ್ರ್ಡ್ ರೆಕಾರ್ಡ್‍ನಲ್ಲಿ ಸೇರ್ಪಡೆಯಾಗಿದೆ. ಚೇನಂಡ ಕಪ್ ಹಾಕಿ ಉತ್ಸವದಲ್ಲಿ ಈ ಹಿಂದಿನ ಉತ್ಸವಗಳಲ್ಲಿನ ಮಹತ್ವದ ಕಾರ್ಯಕ್ರಮಗಳನ್ನು ಮುಂದುವರೆಸುವುದರೊಂದಿಗೆ, ಮತ್ತಷ್ಟು ವಿಶೇಷವಾಗಿ ನಡೆಸುವ…
ಲೇಖಕ: admin
ಮಡಿಕೇರಿ ಅ.27 NEWS DESK : ಮಡಿಕೇರಿ ಅ.27 : ಕೊಡವ ನೆಲದ ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರ ಸರ್ವಾಂಗೀಣ ವಿಕಾಸ, ಸಬಲೀಕರಣ ಮತ್ತು ರಕ್ಷಣೆ ದೇಶದ ಪವಿತ್ರ ಸಂವಿಧಾನದಿಂದ ಮಾತ್ರ ಸಾಧ್ಯವೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪ್ರತಿಪಾದಿಸಿದ್ದಾರೆ. ಸಿಎನ್‍ಸಿ ವತಿಯಿಂದ ಕುರ್ಚಿ ತೋಡನಾಡ್ ನ ಶ್ರೀಮಂಗಲದಲ್ಲಿ ನಡೆದ 17ನೇ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಶ್ರೇಷ್ಠ ಸಂವಿಧಾನದ ಆಶಯಕ್ಕೆ ಬದ್ಧರಾಗಿ ಕೊಡವರ ಪರವಾಗಿ ನಿರಂತರ ಶಾಂತಿಯುತ ಹೋರಾಟಗಳನ್ನು ರೂಪಿಸುತ್ತಿರುವ ಸಿಎನ್‍ಸಿಯ ಗುರಿ ಮತ್ತು ಹೋರಾಟದ ಬಗ್ಗೆ ವಿಶ್ವಾಸವಿಡುವಂತೆ ಕರೆ ನೀಡಿದರು. ಆದಿಮಸಂಜಾತ ಏಕ ಜನಾಂಗೀಯ ಆ್ಯನಿಮಿಸ್ಟಿಕ್ ನಂಬಿಕೆಯ ಕೊಡವರು ಯಾವುದೇ ಜಾತಿ, ಧರ್ಮದ ಬಂಧನ ಅಥವಾ ಕಳಂಕವಿಲ್ಲದೆ ಸ್ವತಂತ್ರವಾಗಿ ಬದುಕಿದ ಮತ್ತು ಬದುಕುತ್ತಿರುವ ಅತೀ ಅಪರೂಪದ ಸೂಕ್ಷ್ಮ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಕೊಡವ ನೆಲ ಬಿಟ್ಟರೆ ಬೇರೆ ಎಲ್ಲೂ ಕೊಡವರಿಗೆ ಸ್ವಂತ ಸ್ಥಳವಿಲ್ಲ. ಇಂದಿನ ಕಾಲಮಾನದಲ್ಲಿ…
ಮಡಿಕೇರಿ ಅ.27 NEWS DESK : ಮೃತದೇಹಗಳನ್ನು ಉಚಿತವಾಗಿ ಕೊಂಡೊಯ್ಯಲು ಬಡವರಿಗೆ ಅನುಕೂಲವಾಗಲಿ ಎಂದು ಸರಕಾರ ಕೊಡಗು ಜಿಲ್ಲೆಗೆ ನೀಡಿದ್ದ ‘ಶ್ರದ್ಧಾಂಜಲಿ’ ವಾಹನ ಇದೀಗ ಸ್ವತ: ಶ್ರದ್ಧಾಂಜಲಿಗಾಗಿ ಕಾಯುತ್ತಿರುವ ಪರಿಸ್ಥಿತಿ ಎದುರಾಗಿದೆ ಎಂದು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆಂಬ್ಯುಲೆನ್ಸ್ ಗಳಿಗೆ ಹಣ ನೀಡಿ ಶವಗಳನ್ನು ಸ್ಥಳಾಂತರಿಸಲು ಸಾಧ್ಯವಾಗದ ಬಡವರ ಉಚಿತ ಸೇವೆಗಾಗಿ 2018 ರಲ್ಲಿ ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಆರೋಗ್ಯ ಇಲಾಖೆ ಮೂಲಕ ‘ಶ್ರದ್ಧಾಂಜಲಿ’ ವಾಹನವನ್ನು ನೀಡಲಾಯಿತು. ಈ ಯೋಜನೆಯಡಿ ಕೊಡಗು ಜಿಲ್ಲೆಗೂ ವಾಹನ ಬಂದಿದ್ದು, ಈಗಾಗಲೇ ಏಳು ವರ್ಷಗಳನ್ನು ಪೂರೈಸಿದೆ. ಆದರೆ ‘ಶ್ರದ್ಧಾಂಜಲಿ’ ವಾಹನದ ಸ್ಥಿತಿ ಆ ಸರಕಾರಕ್ಕೇ ಪ್ರೀತಿ ಎನ್ನುವಂತ್ತಿದೆ ಎಂದು ಟೀಕಿಸಿದ್ದಾರೆ. ಶ್ರದ್ಧಾಂಜಲಿ ವಾಹನ ದುರಸ್ತಿಗೀಡಾಗಿ ಮಂಗಳೂರು ವರ್ಕ್‍ಶಾಪ್ ಸೇರಿ ಹಲವು ದಿನಗಳೇ ಕಳೆದಿದೆ. ಜಿಲ್ಲಾಸ್ಪತ್ರೆಗೆ ಬರುವ ಬಡವರು ಮೃತದೇಹಗಳನ್ನು ಸ್ಥಳಾಂತರಿಸಲು ಆಂಬ್ಯುಲೆನ್ಸ್ ಗಳಿಗೆ ದುಬಾರಿ…
ಮಡಿಕೇರಿ ಅ.27 NEWS DESK : ಇಂದಿರಾನಗರದ ಡಾ.ಬಿ.ಆರ್.ಅಂಬೇಡ್ಕರ್ ಅರುಣೋದಯ ಸಮುದಾಯ ಭವನದ ಸುತ್ತ ಮುತ್ತಲಿನ ಪರಿಸರವನ್ನು ಅಲ್ಲಿನ ನಿವಾಸಿಗಳು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ಕುಂದುರುಮೊಟ್ಟೆ ಶ್ರೀ ಮಾರಿಯಮ್ಮ ದೇವಸ್ಥಾನದ ಅಧ್ಯಕ್ಷರು, ಸದಸ್ಯರು ಹಾಗೂ ಸಮುದಾಯ ಭವನದ ಅಧ್ಯಕ್ಷ ಕುಮಾರ್ ಹಾಗೂ ಉಪಾಧ್ಯಕ್ಷ ಗಣೇಶ್ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಹಾಜರಿದ್ದರು.
ಮಡಿಕೇರಿ ಅ.27 NEWS DESK : ಕೊಡಗು ಜಿಲ್ಲೆಗೆ ಸಂಬಂಧಿಸಿದ 2025ನೇ ಸಾಲಿನ ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಎರಡನೇ ಸಭೆ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿಧಾನ ಸೌಧ ಕೊಠಡಿ ಸಂಖ್ಯೆ 106ರಲ್ಲಿ ನಡೆದ ಸಭೆಯಲ್ಲಿ ಕಂದಾಯ ಸಚಿವರು ಈ ತಿದ್ದುಪಡಿ ವಿಧೇಯಕದ ಕುರಿತು ಮುಂದುವರಿಸಿ ಸಭೆಯಲ್ಲಿ ವಿವರಿಸಿ ಅಧಿಕಾರಿಗಳಿಂದ ವಿವರಣೆ ಪಡೆದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ. ಎಸ್ ಪೊನ್ನಣ್ಣ ಅವರು ಸಭೆಯಲ್ಲಿ ಕೊಡಗು ಜಿಲ್ಲೆಯ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿವರಿಸಿ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಡಿಕೇರಿ ಶಾಸಕರು ಡಾ.ಮಂಥರ್ ಗೌಡ, ವಿಧಾನ ಸಭೆಯ ಸದಸ್ಯರುಗಳಾದ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಡಾ. ಶ್ರೀನಿವಾಸ ಎನ್.ಟಿ, ಭೀಮಾಣ್ಣ ಟಿ ನಾಯ್ಕ, ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯ ಆಮ್ಲ ಬಿಸ್ವಾಸ್, ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ಕಂದಾಯ ಇಲಾಖೆಯ ಉನ್ನತ ಅಧಿಕಾರಿಗಳು, ಕೊಡಗು…
ಮಡಿಕೇರಿ ಅ.27 NEWS DESK : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ಕೊಡಗು ಜಿಲ್ಲೆಯಲ್ಲಿ ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಗುರುತಿಸಿ ಈ ಸಂದರ್ಭ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಗಳ ಪರವಾಗಿ ಭಾರತ್ ಸ್ಕೌಟ್ಸ್, ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ , ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರೂ ಆದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಯೋಜಕ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಹಾಗೂ ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್ಸ್ ನ ತಿತಿಮತಿಯಲ್ಲಿ ವನ್ಯಜೀವಿಗಳು ಮತ್ತು ಮಾನವ ಸಂಘರ್ಷದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಪ್ರಾಜೆಕ್ಟ್ ಮೆನೇಜರ್ ಆದ ವಿನೋದ್ ಅವರನ್ನು ಮಾಲಿನ್ಯ ಮಂಡಳಿಯ ವತಿಯಿಂದ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರಾದ…
ಮಡಿಕೇರಿ ಅ.27 NEWS DESK : ಮನ್ ಕಿ ಬಾತ್ ಕಾರ್ಯಕ್ರಮದ 127ನೇ ಸಂಚಿಕೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಫಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಮಾತುಗಳನ್ನಾಡಿದ್ದು, ಇದರಿಂದ ಕಾಫಿ ಬೆಳೆಗಾರರ ಉತ್ಸಾಹ ಇಮ್ಮಡಿಯಾಗಿದೆ. ಕರ್ನಾಟಕ ರಾಜ್ಯದ ಎಲ್ಲಾ ಕಾಫಿ ಬೆಳೆಗಾರರ ಪರವಾಗಿ ಪ್ರಧಾನಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕಾಫಿ ಮಂಡಳಿಯ ಸದಸ್ಯ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಶೇಷವಾಗಿ ಕರ್ನಾಟಕ ರಾಜ್ಯದ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಕಾಫಿ ಬೆಳೆಯುತ್ತಿರುವ ಬಗ್ಗೆ ಪ್ರಧಾನಿ ಉಲ್ಲೇಖಿಸಿದ್ದಾರೆ. ಕಾಫಿ ಕೃಷಿ ಮತ್ತು ಕಾಫಿ ಉದ್ಯಮದ ಬೆಳವಣಿಗೆಯ ಕುರಿತು ಮಾಡಿರುವ ಭಾಷಣ ಕಾಫಿ ಬೆಳೆಗಾರರು ಹಾಗೂ ಕಾಫಿ ಸೇವನೆ ಮಾಡುವವರಲ್ಲಿ ಹೊಸ ಸ್ಫೂರ್ತಿಯನ್ನು ತುಂಬಿದೆ. ಅದರಲ್ಲಿಯೂ ಕರ್ನಾಟಕದಲ್ಲಿ ಶೇ.70ರಷ್ಟು ಕಾಫಿ ಬೆಳೆಯುತ್ತಿರುವುದು ಮತ್ತು ಭಾರತೀಯ ಕಾಫಿ ವಿಶ್ವ ಪ್ರಸಿದ್ಧಿ ಹೊಂದಿರುವ ಬಗ್ಗೆ ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಕಾಫಿ ಬೆಳೆಗಾರರು ಹಾಗೂ ಕಾಫಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರಿಗೆ…
ಸೋಮವಾರಪೇಟೆ ಅ.27 NEWS DESK : ರೈತರ ಸಂಕಷ್ಟಕ್ಕೆ ನೆರವಾಗುವನಿಟ್ಟಿನಲ್ಲಿ ರೈತ ವಿಜ್ಞಾನಿಯಾಗುವ ಹಂಬಲ ವ್ಯಕ್ತಪಡಿಸಿದ ವಿದ್ಯಾರ್ಥಿ ಬಿ.ಎಂ.ಸೃಜನ್. ಇತೀಚೆಗೆ ನಡೆದ ಕೃಷಿ ಸಂಶೋದನಾ ಅರ್ಹತಾ ಪರೀಕ್ಷೆಯಲ್ಲಿ ದೇಶಕ್ಕೆ 34ನೇ ರ‍್ಯಾಂಕ್ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪೈಕಿ 18ನೆ ರ‍್ಯಾಂಕ್ ಪಡೆದು ಸಾಧನೆ ತೋರಿದ್ದ ಸೃಜನ್ ಇದೀಗ ರಾಷ್ಟ್ರದ ಪ್ರತಿಷ್ಠಿತ ದೆಹಲಿಯಲ್ಲಿರುವ ಭಾರತೀಯ ಕೃಷಿ ಸಂಶೋದನಾ ಸಂಸ್ಥೆಯಲ್ಲಿ ಸೀಟು ಪಡೆದಿದ್ದಾನೆ. ತನ್ನ ಮುಂದಿನ ಗುರಿಯ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೃಜನ್ ರೈತರು, ಕೃಷಿಕರ ಬಗ್ಗೆ ಅಪಾರ ಕಾಳಜಿ ತೋರಿದ್ದಾರೆ. ಇಂದು ರೈತಾಪಿ ವರ್ಗ ಅನುಭವಿಸುತ್ತಿರುವ ಕಷ್ಟ ಕಾರ್ಪಣ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಸೃಜನ್, ರೈತರ ಸಂಕಷ್ಟಕ್ಕೆ ನೆರವಾಗಬೇಕಾಗಿದೆ ಅದಕ್ಕಾಗಿ ನಾನು ರೈತ ವಿಜ್ಞಾನಿಯಾಗಬೇಕು ಎಂದು ಹಂಬಲ ವ್ಯಕ್ತಪಡಿಸಿದರು. ವಿಶೇಷವಾಗಿ ಹೊಸ ತಳಿಗಳ ಆವಿಷ್ಕಾರ ಹಾಗೂ ರೋಗಗಳಿಗೆ ಸಂಬಂಧಿಸಿದಂತೆ ಪರಿಹಾರ ಕಂಡುಹಿಡಿಯಬೇಕಾಗಿದೆ ಎಂದರು. ಸ್ನಾತಕೋತ್ತರ ಪದವಿಗೆ ಅರ್ಹತೆ ಪಡೆಯಲು ಕಷ್ಟಪಟ್ಟು ಅಭ್ಯಾಸ ಮಾಡಿ ಇದೀಗ ಸೀಟು ಪಡೆಯಲು ಸಾಧ್ಯವಾಯಿತು. ಮುಂದೆ ನನಗೆ…
ಮಡಿಕೇರಿ ಅ.27 NEWS DESK : ಹುದಿಕೇರಿ ಮಾಜಿ ಸೈನಿಕರ ಸಂಘದಿಂದ ದಕ್ಷಿಣ ಕೊಡಗಿನ ಅಂಜಿಗೇರಿ ನಾಡ್‍ನ ಹುದಿಕೇರಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಅಮರ್ ಜವಾನ್ ಸ್ಮಾರಕ’ ಮತ್ತು ಧ್ವಜ ಸ್ತಂಭವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸಿದರು.
ಮಡಿಕೇರಿ NEWS DESK ಅ.27 : ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ನಮನ ಸಮರ್ಪಣೆ ಕಾರ್ಯಕ್ರಮ ಅ.31ರಂದು ಮಡಿಕೇರಿಯಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಅವರು ಶುಕ್ರವಾರ ಬೆಳಿಗ್ಗೆ 9.30 ಗಂಟೆಗೆ ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಇರುವ ಸ್ಮಾರಕ ಸ್ಥಳದಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ. ಜಿಲ್ಲೆಯ ಸರ್ವ ಅರೆಭಾಷೆ ಗೌಡ ಬಂಧುಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವೀರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರಿಗೆ ಗೌರವ ಅರ್ಪಿಸಬೇಕೆಂದು ಮನವಿ ಮಾಡಿದ್ದಾರೆ. 1857ರಲ್ಲಿ ನಡೆದ ಸಿಪಾಯಿ ದಂಗೆಯನ್ನು ಮೊದಲ ಸ್ವಾತಂತ್ರ ಸಂಗ್ರಾಮ ಎಂದು ಗುರುತಿಸಲಾಗಿದೆ. ಆದರೆ ಅದಕ್ಕೂ ಮೊದಲೇ ಕೊಡಗು, ದಕ್ಷಿಣ ಕನ್ನಡ ಭಾಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ನಡೆದಿರುವ ಬಗ್ಗೆ ಇತಿಹಾಸವಿದೆ. ಬ್ರಿಟಿಷರ ವಿರುದ್ಧ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು 1837 ಅಕ್ಟೋಬರ್ 31…






