ವಿರಾಜಪೇಟೆ ಡಿ.29 NEWS DESK : ಆರ್ಜಿ-ಪೆರುಂಬಾಡಿ ಗ್ರಾಮದ ಶ್ರೀ ಅಯ್ಯಪ್ಪ ಭಜನಾ ಮಂದಿರದ 30ನೇ ವರ್ಷದ ಮಂಡಲ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಮಂಡಲ ಪೂಜೆಯ ಅಂಗವಾಗಿ ಭಜನಾ ಮಂದಿರದ ಆವರಣದ ಸಭಾಂಗಣದಲ್ಲಿ ಸಂಜೆ ಗ್ರಾಮದ ಮಕ್ಕಳಿಂದ ಭಕ್ತಿ ಪ್ರದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶನಿವಾರ ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪೂಜಾ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ಮಧ್ಯಾಹ್ನ ವಿಶೇಷ ಪೂಜೆ ಭಜನೆ ಮಾಹಾಪೂಜೆ ನಡೆಯಿತು. ಸಂಜೆ ಮಂದಿರ ಮುಂಭಾಗದಿಂದ ಶ್ರೀ ಅಯ್ಯಪ್ಪನ ಉತ್ಸವ ಮೂರ್ತಿ ವಿದ್ಯುತ್ ಅಲಂಕೃತ ಮಂಟಪದೊಂದಿಗೆ ಮಹಿಳೆಯರು ಮಕ್ಕಳ ತಾಲಾಪೊಲಿ, ಅಯ್ಯಪ್ಪ ವೃತಧಾರಿಗಳ ಕಳಶ ಹೊತ್ತು ಅಯ್ಯಪ್ಪ ಘೋಷ, ಚೆಂಡೆ ವಾದ್ಯಗಳೊಂದಿಗೆ ಶೋಭಾಯತ್ರೆ ಜರುಗಿತು. ಮೆರವಣಿಗೆ ಚೆಕ್ ಪೋಸ್ಟ್ ವರೆಗೆ ಸಾಗಿ ಚಾಮುಂಡಿ ಮಾಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಜನ ಮಂದಿರದಲ್ಲಿ ಅಂತ್ಯಗೊಂಡಿತು. ಪದಿನೆಟ್ಟ್ ಪಡಿ ಪೂಜೆ, ಮಾಹಾಪೂಜೆ ನಡೆಯಿತು. ಮಂಡಲ ಪೂಜಾ ಮಹೋತ್ಸವ ಅಂಗವಾಗಿ ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಿತು. ಶ್ರೀ ಅಯ್ಯಪ್ಪ…
ಲೇಖಕ: admin
ಮಡಿಕೇರಿ ಡಿ.29 NEWS DESK : ತಿತಿಮತಿಯ ಲ್ಯಾಂಪ್ಸ್ ಅಕಾಡೆಮಿಯ ಬೆಳ್ಳಿಹಬ್ಬ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ ಬೆಳ್ಳಿ ಹಬ್ಬದ ಶುಭಾಶಯಗಳು ಹಾರೈಸುತ್ತಾ ಮಾತನಾಡಿದ ಮಾನ್ಯ ಶಾಸಕರು, ಲ್ಯಾಂಪ್ ಅಕಾಡೆಮಿಯು ದಶಕಗಳಿಂದ ಉತ್ತಮ ಸೇವೆ ಸಲ್ಲಿಸುತ್ತಾ ಈ ಭಾಗದ ಮಕ್ಕಳ ವಿದ್ಯಾರ್ಜನೆಗೆ ಶ್ರಮವಹಿಸುತ್ತಿದೆ. ಇಲ್ಲಿ ಕಲಿತ ಮಕ್ಕಳು ಸಮಾಜದಲ್ಲಿ ಉತ್ತಮ ಹೆಸರು ಗಳಿಸುತ್ತಿದ್ದಾರೆ. ಮುಂದೆಯೂ ಸಹ ನಾಡಿಗೆ ಉತ್ತಮ ವ್ಯಕ್ತಿಗಳನ್ನು ಈ ಅಕಾಡೆಮಿಯ ಮೂಲಕ ಕೊಡುವಂತಾಗಲಿ ಎಂದು ಹಾರೈಸಿದರು. :: ವಿದ್ಯಾರ್ಥಿನಿಗೆ ವಿದ್ಯಾರ್ಥಿವೇತನ ಘೋಷಣೆ :: ಎಸ್‍ಎಸ್‍ಎಲ್‍ಸಿಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿನಿ ಮೋಕ್ಷಿತಾಗೆ ಗೆ ಇದೇ ಸಂದರ್ಭ ಮುಂದಿನ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದರು. ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 613 ಅಂಕ ಗಳಿಸಿದ ಬಡ ವಿದ್ಯಾರ್ಥಿನಿ ಮೋಕ್ಷಿತ ಗೆ ಶಾಸಕರು ಅವರ ದತ್ತಿನಿದಿಯಿಂದ ಮುಂದಿನ ಐದು ವರ್ಷಗಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನವನ್ನು ಘೋಷಿಸಿದರು. ಬಡ ಕುಟುಂಬದಿಂದ ಬಂದಿರುವ ಮೋಕ್ಷಿತ ಲೈನ್ ಮನೆಯಲ್ಲಿ ವಾಸವಿದ್ದುಕೊಂಡು ಸ್ವ ಪ್ರಯತ್ನದಿಂದ…
ಸುಂಟಿಕೊಪ್ಪ ಡಿ.29 NEWS DESK : ಆಧುನಿಕ ಜೀವನದ ಒತ್ತಡ ಜೀವನ ಶೈಲಿ ಮತ್ತು ಆಶಾಂತಿಯಿಂದ ಆರೋಗ್ಯ ಮತ್ತು ನೆಮ್ಮದಿ ಹಾಳಾಗುತ್ತಿರುವ ಈ ದಿನಗಳಲ್ಲಿ ವಿವಿಧ ರೀತಿಯ ಚಿಕಿತ್ಸಾ ಕೇಂದ್ರಗಳು ತಲೆ ಎತ್ತುತ್ತಿರುವುದು ಎಲ್ಲಾರಿಗೂ ತಿಳಿದ ವಿಚಾರ. ಆದರೆ ಒತ್ತಡದ ಬದುಕನ್ನು ಆಶಾಂತಿ ಮತ್ತು ನಿರಾಶೆಯ ನಡುವೆ ಜ್ಞಾನವನ್ನು ಪಡೆದು ಧ್ಯಾನದಿಂದ ಸನತಾನ ಧರ್ಮದ ಮೂಲಪವಿತ್ರ ಗ್ರಂಥಗಳಾದ ವೇದ, ಉಪನಿಷತ್, ಭಗವತ್ ಗೀತೆ ಗ್ರಂಥಗಳ ಸ್ವ ಅಧ್ಯಯನ, ಮಾರ್ಗದರ್ಶನ ಪಡೆಯುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು-ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಆಶಾಕಿರಣವಾಗಿ ರೂಪುಗೊಂಡಿದೆ. ಪತ್ರಿಕೆಯೊಂದಿಗೆ ತಮ್ಮ ಕನಸ್ಸಿನ ಯೋಜನೆ ಇದೀಗ ಅಂಬೆಗಾಲಿಟ್ಟು ಸರಳವಾಗಿ ಉದ್ಘಾಟನೆಗೊಂಡಿರುವ ಬಗ್ಗೆ ಮಂದಿರ ಉಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ್ ಮಾಹಿತಿ ನೀಡಿದರು. ಹಿಮಾಲಯದ ತಪ್ಪಲಿನ ಋಷಿಕೇಶದ ಸ್ವಾಮಿಜಿಯೊಬ್ಬರ ಆಕಸ್ಮಿಕ ಭೇಟಿ ಅವರ ಆರ್ಶಿವಾದದಿಂದ ವೇದ, ಉಪನಿಷತ್ತು, ಭಗವದ್ಗೀತೆ ಹಾಗೂ ಆಧ್ಯಾತ್ಮದೆಡೆಗೆ ಆಕರ್ಷಿತರಾದ ಬಗ್ಗೆ ಹೇಳಿದರು. ಈ ಹಿನ್ನಲೆಯಲ್ಲಿ ತಮ್ಮ…
ಸುಂಟಿಕೊಪ್ಪ ಡಿ.29 NEWS DESK : ಕೊಡಗು ಜಿಲ್ಲೆಯಿಂದ ಪ್ರಥಮ ಬಾರಿಗೆ ಫುಟ್ಬಾಲ್ ತೀರ್ಪುಗಾರರಾಗಿ ಆಯ್ಕೆಯಾದ ಕೊಡಗಿನ ಧೀರಾಜ್ ರೈ ಶ್ರೀನಿವಾಸ್ ಅವರನ್ನು ಅಮ್ಮತ್ತಿಯಲ್ಲಿರುವ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಅಮ್ಮತ್ತಿಯ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ ಕಾರ್ಯದರ್ಶಿ ಪಿ.ಎ.ನಾಗೇಶ್ ಉಪಾಧ್ಯಕ್ಷರಾದ ಕ್ರಿಸ್ಟೋಫರ್ ಮಡಿಕೇರಿ, ಖಜಾಂಚಿ ದೀಪು ಮಾಚಯ್ಯ, ಸಮಿತಿ ಸದಸ್ಯರಾದ ವಿಜೇಶ್ ಆಮ್ಮತ್ತಿ ತೀರ್ಪುಗಾರರಾದ ದರ್ಶನ್ ಸುಕುಮಾರ್ ಮತ್ತು ಆಶ್ವಥ್ ಇದ್ದರು.
ಮಡಿಕೇರಿ NEWS DESK ಡಿ.29 : ಜೀವನದಿ ಕಾವೇರಿಯ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕೊಡಗು ಅಭಿವೃದ್ಧಿ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆಗಳ ಪ್ರಮುಖರು, ಕಾವೇರಿ ನದಿ ಕಲುಷಿತಗೊಳ್ಳುವುದನ್ನು ಮತ್ತು ನದಿದಂಡೆ ಒತ್ತುವರಿಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೊಟೇಲ್ ಹಾಗೂ ವ್ಯಾಪಾರಿಕ ತ್ಯಾಜ್ಯಗಳನ್ನು ನದಿಗೆ ಹಾಗೂ ನದಿ ತೀರದ ಪ್ರದೇಶಗಳಿಗೆ ಅಕ್ರಮವಾಗಿ ಎಸೆಯುತ್ತಿರುವುದು ಅತ್ಯಂತ ವಿಷಾದನೀಯ ಎಂದರು. ಇದು ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಗಂಭೀರ ಅಪಾಯವನ್ನುಂಟು ಮಾಡಲಿದ್ದು,…
ವಿಜಯಪುರ ಡಿ.29 : ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ಹೋಟೆಲ್ ಹೊತ್ತಿ ಉರಿದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಅಗ್ನಿ ಅವಘಡದಲ್ಲಿ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಮಡಿಕೇರಿ ಡಿ.29 NEWS DESK : ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದಲ್ಲಿ ಕೊಡಗು ಜನತೆಯನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮ ಹಾಗೂ ಪಟ್ಟೇದಾರ್ ಸಮಸ್ಯೆ ನಿವಾರಣೆಗೆ ಕಾನೂನು ರೂಪಿಸಲು ಕರ್ನಾಟಕ ಭೂಕಂದಾಯ ಮಸೂದೆಗೆಯನ್ನು ಅಂಗೀಕಾರಗೊಳಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೊಡಗು ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭ ಕೊಡವ ಮುಸ್ಲಿಂ ಅಸೋಸಿಯೇಷನ್ ಅಧ್ಯಕ್ಷರು ದುಡಿಯಂಡ ಸೂಫಿ ಹಾಜಿ, ಉಪಾಧ್ಯಕ್ಷರು ಚಿಮ್ಮಿಚೀರ ಇಬ್ರಾಹಿಂ, ಕೋಶಾಧಿಕಾರಿ ಹಂಸ ಕೊಟ್ಟಮುಡಿ, ಸಂಘಟನಾ ಕಾರ್ಯದರ್ಶಿ ಇಸ್ಮಾಯಿಲ್, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್ ,ವಿರಾಜಪೇಟೆ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್, ರಜಕ್, ಮೈದು, ಪರವಂಡ ಸಿರಾಜ್, ಅಂದಾಯಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಡಿ.29 NEWSDESK : ಸರ್ವ ಧರ್ಮದಲ್ಲು ಸಮಾನತೆ ಮುಖ್ಯ ಆಗಿದ್ದಲ್ಲಿ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಸಭಾಂಗಣದಲ್ಲಿ ನಡೆದ ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಆಯೋಜಿಸಿದ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕೇಕ್ ಕತ್ತರಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ ಧರ್ಮ ಗಳಲ್ಲಿ ಸಮಾನತೆ ಕಾಣುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರಕಾರ ಮಾಡುತ್ತಿದ್ದು, ಜನತೆಗೆ ನೀಡಿದ ಭರವಸೆಯನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಅಮ್ಮತ್ತಿಯ ಸಂತ ಅಂತೋಣಿ ದೇವಾಲಯದ ಧರ್ಮ ಗುರುಗಳಾದ ಫಾಧರ್ ಮಧುಲೈ ಮುತ್ತು ಪ್ರಾಸ್ತಾವಿಕವಾಗಿ ಮಾತನಾಡಿದ್ದರು. ದಕ್ಷಿಣ ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು ಅಧ್ಯಕ್ಷರ ನುಡಿಗಳನ್ನು ತಿಳಿಸಿದರು. ಈ ಸಂದರ್ಭ ವೇದಿಕೆಯಲ್ಲಿ ಸಿಸ್ಟರ್ ಎಲಿಜಬೆತ್, ಸಮಾಜ ಸೇವಕರಾದ ಜಾರ್ಜ್, ಸಂಘದ…
ಬೆಂಗಳೂರು ಡಿ.29 NEWS DESK : ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌವ ಭಾಷೆ,ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಯಾರೇ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ನಾನು ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು ಎಂದರು. ಹೊರರಾಜ್ಯಗಳಿಗೆ ಬರೆಯುವಾಗ ಮಾತ್ರ ಆಂಗ್ಲ ಭಾಷೆ ಬಳಸಿದರೂ ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದರು.ರಾಜ್ಯ ಸರ್ಕಾರ ಹಿಂದಿಯನ್ನು ವಿರೋಧಿಸುವುದಿಲ್ಲ. ಆದರೆ ಹಿಂದಿ ನಮ್ಮ ರಾಷ್ಟ್ರ ಭಾಷೆ ಅಲ್ಲ. ಕನ್ನಡವೇ ಸಾರ್ವಭೌವ ಭಾಷೆ. 1956 ನಲ್ಲಿ ಭಾಷಾವಾರು ಪ್ರಾಂತ್ಯ ವಿಂಗಡಣೆ ಆಗಿದೆ. 1973 ರಲ್ಲಿ ದೇವರಾಜ ಅರಸು ಅವರ ಮುಖ್ಯಮಂತ್ರಿ ಆಗಿದ್ದಾಗ…
ಮಡಿಕೇರಿ ಡಿ.29 NEWS DESK : ಕನ್ನಡ ಭವನದ ವತಿಯಿಂದ ಕೊಡಮಾಡುವ ನಾಡೋಜ ಡಾ.ಕಯ್ಯಾರ ರಾಷ್ಟ್ರೀಯ ಪ್ರಶಸ್ತಿಗೆ ಬರಹಗಾರ, ಪತ್ರಕರ್ತ ಚಂದನ್ ನಂದರಬೆಟ್ಟು ಭಾಜನರಾಗಿದ್ದಾರೆ. ಡಾ.ವಾಮನ್ ರಾವ್ ಬೇಕಲ್-ಸಂದ್ಯಾ ರಾಣಿ ನೇತೃತ್ವದ ಕಾಸರಗೋಡುವಿನ ಕನ್ನಡ ಭವನ ರಜತ ಸಂಭ್ರಮ ಅಂಗವಾಗಿ ಜ.18 ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ.ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






