ಲೇಖಕ: admin

ನಾಪೋಕ್ಲು ಡಿ.12 NEWS DESK : ಬಲ್ಲಮಾವಟಿ ಶ್ರೀ ಭಗವತಿ ದೇವಾಲಯದ ಗರ್ಭಗುಡಿ ಹಾಗೂ ಮುಖ ಮಂಟಪ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಶಡಾಧಾರ ಪೂಜೆ ಶಡಾಧಾರ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ಜರುಗಿತು. ದೇವಾಲಯದ ಹೃದಯ ಭಾಗದ ಗರ್ಭಗುಡಿಯ ನಿರ್ಮಾಣಕ್ಕೆ ನೆಲ ಮಟ್ಟದಿಂದ 7.25 ಅಡಿ ಭೂಮಿಯ ಒಳಗಿನಿಂದ ಅಡಿಪಾಯ ಹಾಕಿದ್ದು, ಗರ್ಭಗುಡಿ ಹಾಗೂ ಮುಖ ಮಂಟಪ ಅಡಿಪಾಯಕ್ಕೆ ಉಪ್ಪು ಮಿಶ್ರಿತ ಮರಳು ತುಂಬಿಸುವ ಕಾರ್ಯವನ್ನು ಊರಿನವರು ನೆರವೇರಿಸಿದರು. ಪೂಜೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಸ್ಥಾನದ ತಕ್ಕ ಮುಖ್ಯಸ್ಥರಾದ ಕೋಟೆರ ಸುಬ್ಬಯ್ಯ, ನೆರವಂಡ ಭೀಮಯ್ಯ, ಅಧ್ಯಕ್ಷರು ಕೋಟೆರ ಸುಬ್ಬಯ್ಯ, ಉಪಾಧ್ಯಕ್ಷರಾದ ಬೈರುಡ ಮಾಚಯ್ಯ, ಕಾರ್ಯಾಧ್ಯಕ್ಷರು ಮತ್ತು ಖಜಾಂಚಿ ಬೊಟ್ಟೋಳಂಡ ತಿಮ್ಮಯ್ಯ, ಚಂಗೇಟಿರ ಅಪ್ಪಯ್ಯ, ಕಾರ್ಯದರ್ಶಿ ಕೋಟೆರ ಧನುಷ್ ಬೋಪಣ್ಣ, ಮಾಜಿ ಕಾರ್ಯದರ್ಶಿ ಅಪ್ಪಚೆಟ್ಟೊಳಂಡ ರಾಜಭೀಮಯ್ಯ, ತಕ್ಕ ಮುಖ್ಯಸ್ಥರು, ಸಮಿತಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ತಂತ್ರಿ ದಿವಾಕರ್ ಭಟ್, ಮುಖ್ಯ ಅರ್ಚಕ…

Read More

ನಾಪೋಕ್ಲು ಡಿ.12 NEWS DESK  : ಮೂರ್ನಾಡು ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ನಿಯಂತ್ರಣ ಹಾಗೂ ಹದಿಹರೆಯದವರ ಸಮಸ್ಯೆಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಸೂಪರ್ವೈಸರ್ ಸುನಿತಾ ಮುತ್ತಣ್ಣ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಏಡ್ಸ್ ಕಾಯಿಲೆ ಹರಡುವ ಮತ್ತು ತಡೆಗಟ್ಟುವ ವಿಧಾನ, ಚಿಕಿತ್ಸೆ, ಸುರಕ್ಷತೆ ಹಾಗೂ ಅನುಸರಿಸಬೇಕಾದ ಕ್ರಮಗಳ ಬಗ್ಗೆ, ಆರೋಗ್ಯಕರ ಜೀವನ ನಡೆಸುವ ಬಗ್ಗೆ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಲೈಡ್ ಶೋ ಮುಖಾಂತರ ಅರಿವು ಮೂಡಿಸಿದರು. ಏಡ್ಸ್‍ಅನ್ನು ಜಾಗೃತಿಯಿಂದ ಮತ್ತು ಜ್ಞಾನದಿಂದ ನಿಯಂತ್ರಿಸಬಹುದು. ಯುವ ಪೀಳಿಗೆ ಏಡ್ಸ್ ಮುಕ್ತ ಸಮಾಜ ನಿರ್ಮಿಸಲು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು. ಹದಿಹರೆಯದಲ್ಲಿ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಬರುತ್ತಿದ್ದು ಯಾವುದೇ ಸಮಸ್ಯೆಗಳಿಗೆ ವಿದ್ಯಾರ್ಥಿಗಳು ಕುಗ್ಗದೆ ತಮ್ಮ ಆರೋಗ್ಯದ ಬಗ್ಗೆ ತಿಳಿದುಕೊಂಡರೆ ಅವರು ಸುರಕ್ಷಿತ ಮತ್ತು ಬಲಿಷ್ಠರಾಗುತ್ತಾರೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಮಾಹಿತಿಯನ್ನು ನೀಡಿ ಆರೋಗ್ಯಕರ ಸಂಬಂಧಗಳ ಬಗ್ಗೆ ಅರಿವು…

Read More

ಮಡಿಕೇರಿ ಡಿ.12 NEWS DESK : ಕೊಡಗು ಜಿಲ್ಲೆಯ ಪ್ರಸಿದ್ಧ ಕೇಂದ್ರವಾದ ಮೇಕೇರಿ ಮಸೀದಿಯ ಮಖಾಂ ಉರೂಸ್ ಸಮಾರಂಭವು 2026 ಏ.24 ರಿಂದ 28ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮೇಕೇರಿಯ ಕಿಜರ್ ಜುಮ್ಮಾ ಮಸೀದಿ ಮತ್ತು ಮನವಿರುಲ್ ಇಸ್ಲಾಂ ಅರಬ್ಬಿ ಮದರಸದ ಪ್ರಧಾನ ಕಾರ್ಯದರ್ಶಿ ಎಂ.ಎಲ್.ರಹೀಮ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.    

Read More

ಮಡಿಕೇರಿ ಡಿ.12 NEWS DESK : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ತಂಬಾಕು ಮುಕ್ತ ಯುವ ಅಭಿಯಾನದ ಸಮಾರೋಪ ಸಮಾರಂಭವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಬಿ.ಎಲ್.ಶ್ರೀನಿವಾಸ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಥಮ ದರ್ಜೆ ವಿದ್ಯಾರ್ಥಿಗಳಿಗೆ ತಂಬಾಕು ಮುಕ್ತ ಯುವ ಅಭಿಯಾನ ವಿಷಯದ ಕುರಿತು ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇ.ಡಾ.ರಾಘವ್ ಬಿ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಎಫ್‍ಎಂಸಿ ಕಾಲೇಜು ಎನ್‍ಎಸ್‍ಎಸ್ ಘಟಕಾಧಿಕಾರಿ ಡಾ.ಶೈಲಾ ಅವರು ಮಾತನಾಡಿದರು.   ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಪುನೀತ ರಾಣಿ ಎಸ್. ಹಾಗೂ ಎನ್.ಎಸ್.ಎಸ್ ಅಧಿಕಾರಿ ಅಲೋಕ್ ಬಿಜೈ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಿಬ್ಬಂದಿಗಳು ಹಾಗೂ ಎಫ್.ಎಂ.ಸಿ. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ತಾಲ್ಲೂಕು ಹಿರಿಯ…

Read More

ಮಡಿಕೇರಿ ಡಿ.12 NEWS DESK : ನಗರದ ಸ್ಪೈಸಸ್ ಅಂಗಡಿಯೊಂದರಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅವಹೇಳನ ಮಾಡುವ ವಿಡಿಯೋವನ್ನು ಚಿತ್ರೀಕರಿಸಿ ವೈರಲ್ ಮಾಡಿರುವ ಪ್ರಕರಣ ವ್ಯಾಪಾರಿ ಕ್ಷೇತ್ರದ ಗೌರವಕ್ಕೆ ದಕ್ಕೆ ಉಂಟು ಮಾಡಿದೆ. ಈ ರೀತಿಯ ಪ್ರಕರಣಗಳು ಮುಂದೆ ನಡೆಯದಂತೆ ವರ್ತಕ ಸಮುದಾಯ ಎಚ್ಚರದಿಂದಿರಬೇಕು ಮತ್ತು ಸಿಬ್ಬಂದಿಗಳ ಮೇಲೆ ನಿಗಾ ವಹಿಸಬೇಕು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ನಿರ್ದೇಶಕ ಎಂ.ಧನಂಜಯ ಮನವಿ ಮಾಡಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಮಂತ್ರಿಗಳನ್ನು ಅವಹೇಳನ ಮಾಡಿರುವ ಪ್ರಕರಣ ರಾಜ್ಯವ್ಯಾಪಿ ಟೀಕೆಗೆ ಗುರಿಯಾಗಿದ್ದು, ವರ್ತಕ ಸಮುದಾಯ ತಲೆ ತಗ್ಗಿಸುವಂತ್ತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜ್ಞಾವಂತರ ಜಿಲ್ಲೆ ಕೊಡಗಿನ ವರ್ತಕರು ಪ್ರವಾಸೋದ್ಯಮವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಕಾನೂನಿಗೆ ವಿರುದ್ಧವಾದ ಈ ರೀತಿಯ ಚಟುವಟಿಕೆಗಳಿಂದ ವ್ಯಾಪಾರೋದ್ಯಮಕ್ಕೂ ಹೊಡೆತ ಬೀಳಲಿದೆ. ನಗರದ ವರ್ತಕರು ಹಾಗೂ ಅಂಗಡಿ ಮಳಿಗೆಗಳ ಮಾಲೀಕರು ತಮ್ಮ ಬಳಿ ಕಾರ್ಯನಿರ್ವಹಿಸುತ್ತಿರುವವರ ಬಗ್ಗೆ ಗಮನ ಹರಿಸಬೇಕು. ಈ ರೀತಿಯ ನಿಯಮಬಾಹಿರ ವರ್ತನೆಗಳಿಗೆ…

Read More

ವಿರಾಜಪೇಟೆ ಡಿ.12 NEWS DESK  : ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ ನಡೆದ ಕಾವೇರಿ ಕಲೋತ್ಸವದ ಕ್ರೀಡಾ ಸ್ಪರ್ಧೆಯಲ್ಲಿ ವಿರಾಜಪೇಟೆ ಕಾವೇರಿ ಶಾಲೆಯ ಪ್ರೌಢಶಾಲಾ ವಿಭಾಗದ ಬಾಲಕಿಯರು, ಥ್ರೋಬಾಲ್ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ತಂಡದಲ್ಲಿ ಸ್ಪರ್ಧಿಸಿದ ಆಟಗಾರ್ತಿಯರು 10ನೇ ತರಗತಿಯ ಮುಲ್ಲೆಂಗಡ ಪೂರ್ವಿಕ ಪೂವಮ್ಮ, ನೀಲಮಾಡ್,  ತನ್ಯ ರೈ ಬಿ.ಎಸ್ ,ಹನಾಫಲಕ್ ಎಸ್.ಎಂ.ಕುಟ್ಟನ ಯಶ್ಮಿತ, ಪಳೆಯಂಡ ಕಾಜಲ್ ಪಿ.ಎಸ್, 9ನೇ ತರಗತಿಯ ಚೇಂದಿರ ದರಾನಿಯತ ಸ್ಲಿನ್ಟಿ ಜೆ, ನೆಲ್ಲಚಂಡ ಪೊನ್ನಮ್ಮ ಎನ್, ಗುಡ್ಡಂಡ ಮಾನ್ವಿಮುತ್ತಮ್ಮ, ಬೊವ್ವೇರಿಯಂಡ ಹನ್ಸಿಕ ಪೊನ್ನಪ್ಪ ಹಾಗೂ 8ನೇ ತರಗತಿಯ ನಾಯಕಂಡ ಮಾನ್ಯ ಎನ್.ಬಿ,ಹೋಲಿಕ ಪಿ.ಇವರಿಗೆ ಶಾಲಾ ದೈಹಿಕ ಶಿಕ್ಷಕಿಯರುಗಳಾದ ಮೋನಿಕಾ ಹಾಗೂ ಲಾವಣ್ಯ ಮಾರ್ಗದರ್ಶನ ನೀಡಿರುತ್ತಾರೆ. ಇವರ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಬೋಧಕ-ಬೋದಕೇತರ ವೃಂದದವರು, ವಿದ್ಯಾರ್ಥಿಗಳ ಪೋಕಷರು ಅಭಿನಂದಿಸಿದ್ದಾರೆ.

Read More

ನಾಪೋಕ್ಲು ಡಿ.12 NEWS DESK : ರಾಜ್ಯ ಮಟ್ಟದ ರಿಲೆಯಲ್ಲಿ ಡಿ.ಕೆ.ಭವಿಷ್ಯ ಸ್ಪರ್ಧಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ಲಕ್ಕೋದಲ್ಲಿ ನಡೆಯಲಿರುವ 69ನೇ ರಾಷ್ಟ್ರ ಮಟ್ಟದ 4*400 ರಿಲೆ ಆಯ್ಕೆಯಾಗಿದ್ದಾಳೆ. ಡಿ.ಕೆ.ಭವಿಷ್ಯ ದೇರಾಜೆ ಕಿರಣ್ ಹಾಗೂ ಗೀತಾ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ.

Read More

ಮಡಿಕೇರಿ, ಡಿ.12 NEWS DESK : ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ, ಉಡುಪಿಯ ಪೂರ್ಣಪ್ರಜ್ಞ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ, ಡಿ.9 ರಂದು ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ, ವಿಜೇತರಾದ ಕೊಡಗು ಜಿಲ್ಲೆಯ ಎಂಟು ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಅರ್ವತ್ತೊಕ್ಲಿನ ವಿದ್ಯಾನಿಕೇತನ ಪ.ಪೂ. ಕಾಲೇಜು ಪ್ರಥಮ ಪಿಯುಸಿಯ ಎಂ.ಹರಿಕೃಷ್ಣನ್ ಪ್ರಥಮ ಸ್ಥಾನ ಗಳಿಸಿದ್ದಾನೆ. ಈತ ಚಿಣ್ಣಪ್ಪ- ಶೋಭಾ ದಂಪತಿಯ ಪುತ್ರ. ಇದೇ ಕಾಲೇಜಿನ ಗುಡ್ಡಾಂಡ ಕಾರ್ಯಪ್ಪ ದ್ವಿತೀಯ ಪಿ.ಯು.ಸಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾನೆ. ಕಾರ್ಯಪ್ಪ, ಮನೋಹರನ್ – ಶ್ರೀದೇವಿ ದಂಪತಿಯ ಪುತ್ರ. ಚರ್ಚಾ ಸ್ಪರ್ಧೆ ಸ್ಪರ್ಧೆಯಲ್ಲಿ ಪೊನ್ನಂಪೇಟೆ ಸಿಐಟಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪುಗ್ಗೇರ ಕ್ಷಮಾ ಕಾವೇರಮ್ಮ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕಿಶನ್ ಪೂವಣ್ಣ – ದಿವ್ಯ ದಂಪತಿಯ ಪುತ್ರಿ. ಜನಪದ ನೃತ್ಯ ವಿಭಾಗದಲ್ಲಿ ಮಡಿಕೇರಿ…

Read More

ನಾಪೋಕ್ಲು ಡಿ.15 NEWS DESK : ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಡಿ.15 ರಂದು ಅರೆ ಭಾಷೆ ದಿನಾಚರಣೆ ಮೂರ್ನಾಡಿನ ಗೌಡ ಸಮಾಜದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಲಿದ್ದು, ಕಾರ್ಯಕ್ರಮವನ್ನು ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ.ಹರೀಶ್, ಮೂರ್ನಾಡು ಗೌಡ ಸಮಾಜದ ಮಾಜಿ ಅಧ್ಯಕ್ಷ ಚೆಟ್ಟಿಮಾಡ ಟಿ.ಕಾರ್ಯಪ್ಪ, ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಪಾಲ್ಗೊಳ್ಳಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷ ಸೂರ್ತಲೆ ಸೋಮಣ್ಣ ಪಾಲ್ಗೊಳ್ಳಲಿದ್ದು, ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿಗೆ ನಮ್ಮ ಹಿರಿಯರ ಕೊಡುಗೆ ಎಂಬ ವಿಷಯದ ಬಗ್ಗೆ ಪ್ರಬಂಧ ಮಂಡಿಸಲಿದ್ದಾರೆ. ಕೊಡಗು ಗೌಡ ನಿವೃತ್ತ ನೌಕರರ ಸಂಘದ…

Read More

ನಾಪೋಕ್ಲು ಡಿ.12 NEWS DESK : ಚೇರಂಬಾಣೆ ಗ್ರಾಮ ಪಂಚಾಯಿತಿಯ ಕೋಪಟ್ಟಿ ಗ್ರಾಮದ ನಿವಾಸಿ ದಾಯನ ಶಿವಾಜಿ (75) ವಯೊಸಹಜವಾಗಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗೃಹದಲ್ಲಿ ಜರುಗಲಿದೆ. ಮೃತರು ತಾಯಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ದಾಯನ ಶಿವಾಜಿ ಅವರು ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Read More