ಲೇಖಕ: admin

ವಿರಾಜಪೇಟೆ ಡಿ.12 NEWS DESK : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐ.ಕ್ಯೂ.ಎ.ಸಿ. ಘಟಕ, ಮಾನವ ಹಕ್ಕುಗಳ ಸಮಿತಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ದಿನದ ಅಂಗವಾಗಿ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ.ಯವರು, ವಿದ್ಯಾರ್ಥಿಗಳಿಗೆ ಮಾನವ ಹಕ್ಕುಗಳ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ.ಬಸವರಾಜು ಕೆ, ಮಾನವ ಹಕ್ಕುಗಳ ಸಮಿತಿಯ ಸಂಚಾಲಕರು ಮತ್ತು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯ ಎಂ.ಬಿ., ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಮಧುರಾ ವಿ.ಆರ್, ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರು ಗ್ರಂಥಾಲಯ ವಿಭಾಗದ ಡಾ.ರೂಪಾ, ಇ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಮಯಂತಿ ಪಿ.ಟಿ.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ವಿರಾಜಪೇಟೆ ಡಿ.12 NEWS DESK : ರಕ್ತದಾನ ಮಾಡುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದೆ. ಅದ್ದರಿಂದ ಅರ್ಹರು ರಕ್ತದಾನ ಮಾಡಿ, ಜೀವ ಉಳಿಸಿ ಎಂದು ನಗರ ವರ್ತಕರ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಹೇಳಿದರು. ವಿರಾಜಪೇಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ವತಿಯಿಂದ ಸಾಲುಮರದ ತಿಮ್ಮಕ್ಕ ಅವರ ಸ್ಮರಾಣಾರ್ಥ ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಸಾಲುಮರದ ತಿಮ್ಮಕ್ಕ ಅವರು ಮರಗಿಡಗಳನ್ನು ತನ್ನ ಮಕ್ಕಳಂತೆ ಸಲುಹಿದ ಮಹಾತಾಯಿ. ಅವರ ಸ್ಮರಾಣಾರ್ಥ ರಕ್ತದಾನ ಶಿಬಿರ ಆಯೋಜನೆ ಮಾಡಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯೋಗೇಶ್ ನಾಯ್ಡು ಅವರ ಕಾರ್ಯ ಶ್ಲಾಘನೀಯ. ಅಪಘಾತ ಮತ್ತು ಇನ್ನಿತರ ಗಂಭೀರ ಸ್ವರೂಪದ ಕಾಯಿಲೆಗಳಿಗೆ ತುತ್ತಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿಗೆ ಇರುತ್ತದೆ. ಮಾನವ ರಕ್ತಕ್ಕೆ ಪರ್ಯಾಯವಾಗಿ ಇನ್ನಿತರ ಧ್ರವಗಳು ಇಲ್ಲದಿರುವುದರಿಂದ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದೆ. ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ಅವಶ್ಯಕ ರೋಗಿಗಳಿಗೆ ನೀಡಲಾಗುತ್ತದೆ.…

Read More

ನಾಪೋಕ್ಲು ಡಿ.12 NEWS DESK : ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮದ ಪ್ರೌಢಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪಾಂಡುರಂಗ ಪ್ರಥಮ ಸ್ಥಾನವನ್ನು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಐರಿನ್ ಉಷಾ ದ್ವಿತೀಯ ಸ್ಥಾನವನ್ನು ಪಡೆದರು. ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಮೋದ್ ಹಾಗೂ ಇಸಿಓ ಜಾನೆಟ್ ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದರು. ಸಾಮಾನ್ಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಸಿ.ಎಂ.ಮುನೀರ್, ಬಿ.ಎಂ.ಮೀನಾ ಹಾಗೂ ಬಿ.ಎನ್.ಜಯಂತಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗಮಂಡಲದ ಜ್ಞಾನೋದಯ ಪ್ರೌಢಶಾಲೆಯ ಶಿಕ್ಷಕಿ ಪ್ರತಿಭಾ ಎಂ ಪ್ರಥಮ ಸ್ಥಾನ ಗಳಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಮಡಿಕೇರಿಯ ಯುರೋ ಕಿಡ್ಸ್ ಶಾಲೆಯ ಶಿಕ್ಷಕಿ ರಶ್ಮಿ ದೀಪ ಪ್ರಥಮ ಸ್ಥಾನವನ್ನು ಪುತ್ಯಪೆರಾಜೆ ಸರ್ಕಾರಿ ಹಿರಿಯ…

Read More

ನಾಪೋಕ್ಲು ಡಿ.12 NEWS DESK : ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ದಮೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಪೂನ್ನಚ್ಚನ ವೃಂಧಾ ಹಾಗೂ ಎಂ.ಬಿ.ಎ.ಸ್ನಾತಕೋತರ ಪದವಿಯಲ್ಲಿ ಅತ್ಯುತ್ತಮ ಇಂಟರ್ನಶಿಫ್ ಪ್ರಶಸ್ತಿ ಪಡೆದ ಕೋಟ್ಟಕೇರಿಯನ ಮೋನಿಕಾ ಅವರುಗಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಹಿರಿಯ ವಕೀಲರಾದ ಕೊಟ್ಟಕೇರಿಯನ ದಯಾನಂದ ಸಂಘದ ಸಮಗ್ರ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆಯನ್ನು ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಯರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವುದು ಹೀಗೆ ವಿವಿಧ ಕ್ರೀಡೆಗಳಲನ್ನು ಆಯೋಜಿಸಿ ವಿಜೇತರಾದವರಿಗೆ…

Read More

ಮಡಿಕೇರಿ ಡಿ.12 NEWS DESK : ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಲಿಖಿತ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದ ನಿಯೋಗ ಎಸ್.ಪಿ.ಯನ್ನು ಭೇಟಿಯಾಗಿ, ಕೊಡಗು ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವೃತ್ತಿ ಮಾಡದಿರುವವರು ಕೂಡ ಪ್ರೆಸ್ ಹಾಗೂ ಮೀಡಿಯಾ ಸ್ಟಿಕ್ಕರ್‍ಗಳನ್ನು ವಾಹನದಲ್ಲಿ ಅಂಟಿಸಿಕೊಂಡು ಪತ್ರಕರ್ತರೆಂದು ಬಿಂಬಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಇದರಿಂದ ನೈಜ ಪತ್ರಕರ್ತರು ಹಾಗೂ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಗುರುತಿನ ಚೀಟಿ ಅಥವಾ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ವಾಹನಗಳಲ್ಲಿ ‘ಪ್ರೆಸ್-ಮೀಡಿಯಾ’ ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು…

Read More

ಮಡಿಕೇರಿ ಡಿ.11 NEWS DESK : ನಗರದ ಮಹದೇವಪೇಟೆಯಲ್ಲಿರುವ ಶ್ರೀರಾಜೇಶ್ವರಿ ವಿದ್ಯಾಲಯದ ವತಿಯಿಂದ ಜ.10 ಮತ್ತು 11 ರಂದು ‘’ಎಸ್‌ಆರ್‌ವಿ ಕನೆಕ್ಟ್- ಹಳೆಯ ವಿದ್ಯಾರ್ಥಿಗಳ ಕ್ರೀಡಾಕೂಟ’ ನಡೆಯಲಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಮ್ಯಾನೆಜಿಂಗ್ ಟ್ರಸ್ಟಿ ಸಚಿನ್ ವಾಸುದೇವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ಶ್ರೀ ರಾಜೇಶ್ವರಿ ವಿದ್ಯಾಲಯದ 1991 ಬ್ಯಾಚ್‍ನಿಂದ 2024ರ ವರೆಗಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿದ್ಯಾಲಯದ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.  ಕ್ರಿಡೋತ್ಸವದಲ್ಲಿ ಕ್ರಿಕೆಟ್ ಹಾಗೂ ವಾಲಿಬಾಲ್ ತಂಡಗಳಿಗೆ ತಲಾ 8 ಹಾಗೂ ಫುಟ್ಬಾಲ್‍ಗೆ 12 ಫ್ರ್ರಾಂಚೈಸ್‍ಗಳಿದ್ದು, ಥ್ರೋಬಾಲ್ ಹಾಗೂ ಶಾಲಾ ಮಟ್ಟದ ಅಂಡರ್ 16 ಬಾಲಕ ಬಾಲಕಿಯರಿಗೆ 5ಎ ಸೈಡ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ. ಅಲ್ಲದೇ ಹಳೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.  ಹಳೇ ವಿದ್ಯಾರ್ಥಿ ಸಂಘದ ಖಜಾಂಚಿ ಬೊಟ್ಟೋಳಂಡ ನಿವ್ಯ ಕಾವೇರಮ್ಮ ಮಾತನಾಡಿ,…

Read More

ಮಡಿಕೇರಿ ಡಿ.11 NEWS DESK : ಕೊಡವ ಜಮ್ಮಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್‍ನ ಸಹಯೋಗದೊಂದಿಗೆ ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ 2026ನೇ ಸಾಲಿನ ಏ.24 ರಿಂದ ಮೇ 1ರ ವರೆಗೆ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರಿಗೆ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷರಾದ ಪುಡಿಯಂಡ ಉಸ್ಮಾನ್ ತಿಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮಿಯಾಲ-ಅರಮೇರಿ ಗ್ರಾಮದಲ್ಲಿರುವ ಎಸ್.ಎಂ.ಎಸ್. ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರುಗಳು ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳು, ಕೊಡವ ಜಮ್ಮಾ ಮುಸ್ಲಿಂ ಸಂಘಟನೆ ಆಡಳಿತ ಮಂಡಳಿ, ಕೆ.ಎಂ.ಎ ಆಡಳಿತ ಮಂಡಳಿ, ಕುಟುಂಬದ ಎಲ್ಲಾ ತಕ್ಕ ಮುಖ್ಯಸ್ಥರುಗಳು ಹಾಗೂ ಎಲ್ಲಾ ಜನಾಂಗದ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ಜಮ್ಮಾ ಮುಸ್ಲಿಂ ಸಮುದಾಯದ ಯುವಕರ ಪ್ರತಿಭೆ ಪ್ರದರ್ಶಿಸಲು ಪಂದ್ಯಾವಳಿ ಅವಕಾಶಕಲ್ಪಿಲಿದೆ. ಇದರೊಂದಿಗೆ ಶಿಕ್ಷಣಕ್ಕೆ ಒತ್ತು ನೀಡುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು. ಕ್ರೀಡಾಕೂಟವು…

Read More

ಮಡಿಕೇರಿ ಡಿ.11 NEWS DESK : ಜಿಲ್ಲೆಯಾದ್ಯಂತ ಡಿ.21 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ವಿಡಿಯೋ ಸಂವಾದ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು. ಡಿ.21 ರಂದು ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 3 ತಿಂಗಳಿನಿಂದ 5 ವರ್ಷದ ವರೆಗಿನ ಒಟ್ಟು 42,477 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 4,400, ಗ್ರಾಮೀಣ ಭಾಗದಲ್ಲಿ 37,975 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,80,720 ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ 57,727, ಗ್ರಾಮೀಣ ಭಾಗದಲ್ಲಿ…

Read More

ನಾಪೋಕ್ಲು ಡಿ.11 NEWS DESK : ವಲಯ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಿದಿಲಾಜ್ ಸಾಧನೆ ಮಾಡಿದ್ದಾನೆ. ವಲಯ ಮಟ್ಟದ ದೇಶಭಕ್ತಿ ಗೀತೆಯಲ್ಲಿ ಪ್ರಥಮ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಮೆಚ್ಚುಗೆ ವ್ಯಕ್ತಪಡಿಸಿದೆ.

Read More

ನಾಪೋಕ್ಲು ಡಿ.11 NEWS DESK : ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪಾಲ್ಗೊಂಡಿದ್ದ ಏಳನೇ ತರಗತಿ ವಿದ್ಯಾರ್ಥಿ ಜಹೀರ್ ಟಿ.ಎ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More