ಲೇಖಕ: admin

ನಾಪೋಕ್ಲು ಡಿ.11 NEWS DESK : ವಲಯ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಿದಿಲಾಜ್ ಸಾಧನೆ ಮಾಡಿದ್ದಾನೆ. ವಲಯ ಮಟ್ಟದ ದೇಶಭಕ್ತಿ ಗೀತೆಯಲ್ಲಿ ಪ್ರಥಮ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಮೆಚ್ಚುಗೆ ವ್ಯಕ್ತಪಡಿಸಿದೆ.

Read More

ನಾಪೋಕ್ಲು ಡಿ.11 NEWS DESK : ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪಾಲ್ಗೊಂಡಿದ್ದ ಏಳನೇ ತರಗತಿ ವಿದ್ಯಾರ್ಥಿ ಜಹೀರ್ ಟಿ.ಎ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ. 

Read More

ವಿರಾಜಪೇಟೆ ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹರಡುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಬಂಧಿತರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂಥವರ ವಿರುದ್ಧ ಹೊಸ ಕಾನೂನು ಜಾರಿಯಾಗಬೇಕೆಂದು ಒತ್ತಾಯಿಸಿದರು. ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.

Read More

ಮಡಿಕೇರಿ ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಕುರಿತು ಅವಹೇಳನ ವಿಡಿಯೋ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಟಿಪ್ಪು ಜಯಂತಿ ಆಚರಣೆ ಪುನರಾರಂಭ ಕುರಿತು ಸರಕಾರಕ್ಕೆ ಪ್ರಸ್ತಾಪಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಮಾನವ ಸರಪಳಿ ನಿರ್ಮಿಸಿ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಅರುಣ್ ಕುಮಾರ್, ಕಿಶೋರ್ ಕುಮಾರ್, ಮನುಮುತ್ತಪ್ಪ, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ಪಿ.ಎಂ.ರವಿ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ…

Read More

ಕುಶಾಲನಗರ ಡಿ.11 NEWS DESK :  ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಹಳೆ ಪಿಂಚಣಿ ಯೋಜನೆ ಜಾರಿ, ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಸೇರಿದಂತೆ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.17 ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಹಳೆಯ ಪಿಂಚಣಿ ಅತಿ ಶೀಘ್ರವಾಗಿ ಜಾರಿಗೆ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ರಾಜ್ಯ ಸಂಘ ಈಗಾಗಲೇ ತೀರ್ಮಾನಿಸಿದ್ದು ಸಂಘಟನೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ. ಅನುದಾನಿತ ನೌಕರರ ಮತ್ತು ಸಂಸ್ಥೆಗಳ ಉಳಿವಿಗಾಗಿ ಹೋರಾಟ ಅನಿವಾರ್ಯ ಆಗಿದೆ. ಆದ್ದರಿಂದ ಕೊಡಗು ಜಿಲ್ಲಾ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅನುದಾನಿತ ಶಾಲಾ ಕಾಲೇಜುಗಳ…

Read More

ಬೆಳಗಾವಿ ಡಿ.11 NEWS DESK : ಬೆಳಗಾವಿ ಜಿಲ್ಲಾಡಳಿತ ಹಾಗೂ ಬೆಳಗಾವಿ ಲೋಕೋಪಯೋಗಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ, ಬೆಳಗಾವಿ ಸುವರ್ಣ ವಿಧಾನಸೌಧ ಆವರಣದಲ್ಲಿ ನಿರ್ಮಿಸಿರುವ, ಉದ್ಯಾನವನ ಹಾಗೂ ಕಾರಂಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ , ಸಚಿವರುಗಳಾದ  ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಡಾ.ಎಂ.ಸಿ ಸುಧಾಕರ್, ಡಾ.ಹೆಚ್.ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹಮದ್, ಶಾಸಕರುಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ಮೈಸೂರು ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದರು. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು. :: ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ ::  ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್‌ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ…

Read More

ಮಡಿಕೇರಿ ಡಿ.11 NEWS DESK :  ಮಾನವ ದೇಹಕ್ಕೆ ಅತ್ಯಂತ ಮುಖ್ಯವಾದ ಪೋಷಕಾಂಶಗಳಲ್ಲಿ ಒಂದಾದ ವಿಟಮಿನ್ ಡಿ3 ಯನ್ನು ಕೋಲೆಕ್ಯಾಲ್ಸಿಫೆರಾಲ್ ಎಂದೂ ಕರೆಯುತ್ತಾರೆ. ಇದು ದೇಹದಲ್ಲಿ ಹಾರ್ಮೋನ್‌ನಂತೆ ಕಾರ್ಯನಿರ್ವಹಿಸುತ್ತದೆ ಮತ್ತು ಮೂಳೆ ಆರೋಗ್ಯ, ರೋಗನಿರೋಧಕ ಶಕ್ತಿ, ಹೃದಯ ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಆಧುನಿಕ ಜೀವನದಲ್ಲಿ ಅದರ ಕೊರತೆಯು ಸಾಮಾನ್ಯವಾಗಿದ್ದರೂ, ಸರಳ ಕ್ರಮಗಳ ಮೂಲಕ ಅದನ್ನು ನಿಯಂತ್ರಿಸಬಹುದು. :: ವಿಟಮಿನ್ ಡಿ3ಯ ಮಹತ್ವ :: ಇದು ಮೂಳೆಗಳ ಬೆಳವಣಿಗೆ ಮತ್ತು ಬಲಕ್ಕೆ ಅತ್ಯಗತ್ಯ. ಇದು ನಮ್ಮ ಆಹಾರದಿಂದ ಕ್ಯಾಲ್ಸಿಯಂ ಮತ್ತು ಫಾಸ್ಫರಸ್ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಇದರಿಂದಾಗಿ ಆಸ್ಟಿಯೋಪೋರೋಸಿಸ್ ಮತ್ತು ರಿಕೆಟ್ಸ್ ನಂತಹ ಕಾಯಿಲೆಗಳನ್ನು ತಡೆಯುತ್ತದೆ. ರೋಗನಿರೋಧಕ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ಸೋಂಕುಗಳ ವಿರುದ್ಧ ಹೋರಾಡುತ್ತದೆ. ಸಂಶೋಧನೆಗಳ ಪ್ರಕಾರ, ವಿಟಮಿನ್ ಡಿ3 ಕ್ಯಾನ್ಸರ್, ಮಧುಮೇಹ, ಹೃದಯರೋಗಗಳು ಮತ್ತು ಖಿನ್ನತೆಯಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲರೂ ಮನೆಯ ಒಳಗಡೆ ಇದ್ದುದರಿಂದ ಬಿಸಿಲಿಗೆ ಮೈಯನ್ನು ಒಡ್ಡಿ ಕೊಳ್ಳುವುದು…

Read More

ಮಡಿಕೇರಿ ಡಿ.11 NEWS DESK : ವಿರಾಜಪೇಟೆಯ ಕಾವೇರಿ ಶಾಲೆಯಲ್ಲಿ ಪುತ್ತರಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಬೆಳಗಿನ ಶಾಲಾ ಸಭಾಂಗಣದಲ್ಲಿ ಪ್ರಾರ್ಥನಾ ಗೀತೆ, ನುಡಿಮುತ್ತು ಹಾಗೂ ಸುದ್ದಿ ಸಮಾಚಾರ ಒಳಗೊಂಡ ಸಂಪೂರ್ಣ ಕಾರ್ಯಕ್ರಮವನ್ನು ಕೊಡವ ಭಾಷೆಯಲ್ಲಿ ಹಮ್ಮಿಕೊಳ್ಳಲಾಯಿತು. ಕೊಡವ ಭಾಷೆಯ ಪ್ರಾರ್ಥನಾ ಗೀತೆಯನ್ನು ವಿದ್ಯಾರ್ಥಿಗಳಾದ ಕಂಜಿತಂಡ ಲಿಷ್ಮ ದೇಚಮ್ಮ, ಕೋಡಿರ ವಿಹಾನ ಮುತ್ತಣ್ಣ, ಮೇಕೆರಿರಾ ಪ್ರಿನಾಲ್ ಪೊನ್ನಕ್ಕ, ಮೇಕೇರಿರಾ ಮಾಚಮ್ಮ, ನಡುಮನೆ ಮೋಕ್ಷಿತ, ಕೊಪ್ಪಿರ ತನ್ವಿ ತಂಗಮ್ಮ, ಮಾನ್ವಿ ತಂಗಮ್ಮ, ಚೇಂದಿರ ಕನಿಷ್ಕ ಮಾದಪ್ಪ, ಮೇವಂಡ ಕುನಲ್ ಕುಟ್ಟಪ್ಪ, ಪುಗ್ಗೆರ ತಿಯಾರ ಮಂದಣ್ಣ ಹಾಡಿದರು. 6ನೇ ತರಗತಿಯ ಮೇಕೇರಿರ ಪ್ರಿನಲ್ ಪೊನ್ನಕ್ಕ ಕೊಡವ ನುಡಿಮುತ್ತು ಹಾಗೂ 8ನೇ ತರಗತಿಯ ವಿದ್ಯಾರ್ಥಿಯಾದ ಪಟ್ಟಡ ದೇಚಮ್ಮ ಬಿ ಸುದ್ದಿ ಸಮಾಚಾರ ಓದಿದರು. ಗತಕಾಲದ ಪುತ್ತರಿ ಹಬ್ಬದ ಕೊಡಗಿನ ಜನಪದ ಕಲೆ ಸಂಸ್ಕೃತಿ, ಬಿಂಬಿಸುವ ಸಾಂಪ್ರದಾಯಿಕ ಉಡುಗೆಯಲ್ಲಿ ತಾಳಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಂದ ಉಮ್ಮತಾಟ್ ನೃತ್ಯ ವನ್ನು ಎಂಟನೇ ತರಗತಿ ವಿದ್ಯಾರ್ಥಿಗಳಾದ ಪಟ್ಟಡ ಬಿ. ದೇಚಮ್ಮ, ಕುಪ್ಪಚ್ಚಿರ…

Read More

ಮಡಿಕೇರಿ NEWS DESK  ಡಿ.10 : ಕೊಡಗು ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ಧಿ ಕಾರ್ಯ ಆಮೆಗತಿಯಲ್ಲಿ ಸಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಶಾಸಕರುಗಳು ಸ್ಪಷ್ಟ ಸೂಚನೆಯನ್ನು ನೀಡುವ ಮೂಲಕ ಸಾರ್ವಜನಿಕರ ಹಿತ ಕಾಯಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾ ಒತ್ತಾಯಿಸಿದೆ. ವಿರಾಜಪೇಟೆ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದ ಅವರು ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎA.ಪರಮೇಶ್ವರ ಅವರು ಅತಿ ಮಳೆಯ ನೆಪವೊಡ್ಡಿ ರಸ್ತೆಗಳ ಗುಂಡಿ ಮುಚ್ಚುವ ತೇಪೆ ಕಾರ್ಯವನ್ನು ಇತ್ತೀಚೆಗಷ್ಟೇ ಆರಂಭಿಸಲಾಗಿದೆ. ಈ ಕಾಮಗಾರಿಯಲ್ಲಿ ನವೀನ ತಂತ್ರಜ್ಞಾನವನ್ನು ಬಳಸದೆ ಹಳೆಯ ಕ್ರಮವನ್ನು ಅನುಸರಿಸಲಾಗುತ್ತಿದೆ. ಇದು ಕಾಮಗಾರಿ ವಿಳಂಬಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು. ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳು ಗುಂಡಿಮಯವಾಗಿದ್ದು, ನಿಧಾನಗತಿಯ ಕಾಮಗಾರಿಯಿಂದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದೆ. ಈಗ ನಡೆಯುತ್ತಿರುವ ಕಾಮಗಾರಿಯ ವೇಗವನ್ನು ಗಮನಿಸಿದರೆ ಮುಂದಿನ ಮಳೆಗಾಲದವರೆಗೂ ಗುಂಡಿ ಮುಚ್ಚುವ ಕಾರ್ಯ ಮುಂದುವರಿಯುವ ಸಾಧ್ಯತೆ ಇದೆ ಎಂದು ವ್ಯಂಗ್ಯವಾಡಿದರು. ಜಿಲ್ಲೆಯ ಶಾಸಕದ್ವಯರು…

Read More