ಚೆಟ್ಟಳ್ಳಿ, NEWS DESK ಅ.3: ದಸರಾ ರಜೆಯ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ಪೋಷಕರಲ್ಲಿ ಸುರಕ್ಷತೆ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಕ ಪಡೆ ಸಿಬ್ಬಂದಿಗಳಾದ ಆಶಾ ಹಾಗೂ ಚಾಂದಿನಿ ಅವರು ವಿವಿಧ ಪ್ರದೇಶಗಳಿಗೆ ತೆರಳಿ ಸಾರ್ವಜನಿಕರು, ಮಕ್ಕಳು ಹಾಗೂ ಪೋಷಕರಿಗೆ ಮಾಹಿತಿ ನೀಡಿದರು. ಚೆಟ್ಟಳ್ಳಿ, ಚೇರಳ ಶ್ರೀಮಂಗಲ, ಅಯ್ಯತ್ ಮಂಗಲ, ಪೈಸರಿ, ಕೊಯ್ಲಾ ಎಸ್ಟೇಟ್ ಲೈನ್ ಮನೆ, ಸಿದ್ದಾಪುರ, ಗುಹ್ಯ ಗೂಡುಗಡ್ಡೆ, ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಬಿಜಿಎಸ್ ಗುಹ್ಯ ಮತ್ತು ಇಂಜಿಲಗೆರೆ ಸೇರಿದಂತೆ ವಿವಿಧೆಡೆ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ದಸರಾ ರಜೆಯ ಸಂದರ್ಭದಲ್ಲಿ ಪೋಷಕರು ತಮ್ಮ ಮಕ್ಕಳ ಚಲನ-ವಲನದ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಸಿಬ್ಬಂದಿ ಸಲಹೆ ನೀಡಿದರು. ಮಕ್ಕಳನ್ನು ಅಲ್ಪಾವಧಿಯ ಮೌಲ್ಯ ಶಿಕ್ಷಣ ಕಾರ್ಯಕ್ರಮಗಳಿಗೆ ಕಳುಹಿಸುವಂತೆ ಹಾಗೂ ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿಡುವಂತೆ ಪೋಷಕರಿಗೆ ತಿಳಿಸಿದರು. ಇದೇ ವೇಳೆ ಕಡ್ಡಾಯ ಶಿಕ್ಷಣ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಕುರಿತು ಮಕ್ಕಳಿಗೆ ಹಾಗೂ ಪೋಷಕರಿಗೆ…
ಲೇಖಕ: admin
ಮಡಿಕೇರಿ, NEWS DESK ಅ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗಳಲ್ಲಿ ಒಂದಾದ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಸಾಹಿತಿ ಡಾ. ಕೆ.ಪಿ. ಲಲಿತ (ರಶ್ಮಿ ನಂಜಪ್ಪ ಕಳ್ಳಿಚಂಡ) ಅವರು ರಚಿಸಿರುವ ‘ಕೊಡಗಿನ ಜಾನಪದ ಕಥೆಗಳು’ ಕೃತಿ ಆಯ್ಕೆಯಾಗಿದೆ. ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಿಸಿರುವ ಉತ್ತಮ ಕೃತಿಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುವ ಉದ್ದೇಶದಿಂದ ಗೌರಮ್ಮ ಅವರ ಪುತ್ರ ಬಿ.ಜಿ. ವಸಂತ ಅವರು ಈ ದತ್ತಿಯನ್ನು ಸ್ಥಾಪಿಸಿದ್ದಾರೆ. ಇದುವರೆಗೆ 23 ಮಂದಿ ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದ್ದು, 2026-27ನೇ ಸಾಲಿನ 24ನೇ ಪ್ರಶಸ್ತಿಗಾಗಿ ಒಟ್ಟು 9 ಲೇಖಕಿಯರು ತಮ್ಮ ಕೃತಿಗಳನ್ನು ಸಲ್ಲಿಸಿದ್ದರು. ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳನ್ನು ತೀರ್ಪುಗಾರರನ್ನಾಗಿ ನೇಮಿಸಲಾಗಿದ್ದು, ಅವರು ಸಲ್ಲಿಕೆಯಾಗಿದ್ದ ಎಲ್ಲ ಕೃತಿಗಳನ್ನು ಪರಿಶೀಲಿಸಿ ಅಂಕಗಳನ್ನು ನೀಡಿದ್ದರು. ತೀರ್ಪುಗಾರರು ಕಳುಹಿಸಿದ ಅಂಕಪಟ್ಟಿಗಳನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಸಭೆಯಲ್ಲಿ ಪರಿಶೀಲಿಸಿ, ಅಂಕಗಳನ್ನು ಕ್ರೋಢೀಕರಿಸಿದಾಗ ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ…
ಮಡಿಕೇರಿ, NEWS DESK ಅ.3: ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮದ ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದ ವತಿಯಿಂದ ಏರ್ಪಡಿಸಲಾಗಿದ್ದ ಕೈಲ್ ಮುಹೂರ್ತ ಸಂತೋಷಕೂಟದಲ್ಲಿ ಸಮಾಜ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು. ಗ್ರಾಮ ದೇವತೆ ಶ್ರೀ ಭದ್ರಕಾಳಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಂಪ್ರದಾಯದಂತೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮುಖ್ಯ ಬೀದಿಯಲ್ಲಿ ಮೆರವಣಿಗೆ ನಡೆಸಿ ವಿಎಸ್‌ಎಸ್‌ಎನ್ ಸಭಾಂಗಣಕ್ಕೆ ತೆರಳಲಾಯಿತು. ಸಭಾಂಗಣದಲ್ಲಿ ಸಮಾಜದ ಸದಸ್ಯರ ಮಕ್ಕಳು ಹಾಗೂ ಮಹಿಳೆಯರಿಗಾಗಿ ವಿವಿಧ ಮನರಂಜನಾ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, ಬಾಲಕರಿಗೆ ತಲೆಯ ಮೇಲೆ ಕಪ್ ಇಟ್ಟು ಓಟ, ಗೋಣಿ ಚೀಲ ಓಟ, ಬಾಲಕಿಯರಿಗೆ ನಿಂಬೆ ಚಮಚ ಓಟ ಹಾಗೂ ಮಹಿಳೆಯರಿಗೆ ‘ಬಾಂಬ್ ಇನ್ ದ ಸಿಟಿ’ ಆಟವನ್ನು ಏರ್ಪಡಿಸಲಾಗಿತ್ತು. ಸಮಾಜ ಬಾಂಧವರು ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು. ಬಡವರಿಗೆ ಸಹಾಯ ಮಾಡಬೇಕು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯರು ಹಾಗೂ ಗೌಡ ಸಮಾಜದ ಸ್ಥಳದಾನಿಗಳಾದ…
ವಿರಾಜಪೇಟೆ, NEWS DESK ಅ.03 : ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ಅರಮೇರಿ ಶ್ರೀ ಅರಮೇರಿ ಕಳಂಚೇರಿ ಮಠದ ಎಸ್‌ಎಂಎಸ್ ಅಕಾಡೆಮಿ ಫಾರ್ ಸೆಂಟ್ರಲ್ ಎಜುಕೇಶನ್‌ನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಮಡಿಕೇರಿ ಶಾಖೆಯ ಹಿರಿಯ ರಾಜಯೋಗ ಶಿಕ್ಷಕಿ ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ವಿದ್ಯಾರ್ಥಿಗಳಿಗೆ ವಿದ್ಯೆಯ ಪ್ರಾಮುಖ್ಯತೆ, ಜೀವನ ಮೌಲ್ಯಗಳು ಹಾಗೂ ಧ್ಯಾನದ ಮೂಲಕ ಮನಸ್ಸಿನ ಏಕಾಗ್ರತೆಯ ಮಹತ್ವದ ಕುರಿತು ಅರಿವು ಮೂಡಿಸಿದರು. ಸಮಾಜದಲ್ಲಿ ಹೆಚ್ಚುತ್ತಿರುವ ದುಶ್ಚಟಗಳಿಂದ ದೂರವಿದ್ದು, ನಶೆ ಹಾಗೂ ಇತರ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ರಾಜಯೋಗ ಧ್ಯಾನದ ಮೂಲಕ ವಿದ್ಯಾರ್ಥಿಗಳಿಗೆ ಶಾಂತಿಯ ಅನುಭೂತಿ ಮಾಡಿಸಲಾಯಿತು. ದೇಶ ಹಾಗೂ ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಸಂಕಲ್ಪದೊಂದಿಗೆ ‘ನಶಾ ಮುಕ್ತ ಭಾರತ’ ನಿರ್ಮಾಣಕ್ಕೆ ಕೈಜೋಡಿಸುವಂತೆ ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಮಾಡಿಸಲಾಯಿತು. ವಿರಾಜಪೇಟೆ ಸಂಚಾಲಕಿ ಬ್ರಹ್ಮಕುಮಾರಿ ಕೋಮಲ ಅವರು ಬ್ರಹ್ಮಕುಮಾರಿಸ್ ಸಂಸ್ಥೆಯ ಕಿರುಪರಿಚಯ ನೀಡುವುದರ ಜೊತೆಗೆ…
ಬೆಂಗಳೂರು, NEWS DESK ಅ.3: ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯಗೊಂಡು ಹಿಂಗಾರು ಹಂಗಾಮು ಆರಂಭವಾಗಿದ್ದು, ಈ ಬಾರಿ ಕರ್ನಾಟಕದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಹಿಂಗಾರು ಅವಧಿಯಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಹಾಗೂ ಜಲಾಶಯಗಳ ನೀರಿನ ನಿರ್ವಹಣೆಗೆ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಹವಾಮಾನ ಇಲಾಖೆಯ ಋತುಮಾನದ ಮುನ್ಸೂಚನೆಯ ಪ್ರಕಾರ, ಹಿಂಗಾರು ಅವಧಿಯಲ್ಲಿ ಕರ್ನಾಟಕದಾದ್ಯಂತ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಈ ಅವಧಿಯ ವಾಡಿಕೆ ಸರಾಸರಿ ಮಳೆ 182.2 ಮಿ.ಮೀ. ಆಗಿದ್ದು, ದಕ್ಷಿಣ ಒಳನಾಡಿನಲ್ಲಿ 201.9 ಮಿ.ಮೀ. ವಾಡಿಕೆ ಮಳೆಯಿದೆ. ಆದರೆ ಈ ಬಾರಿ ಈ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಎಲ್ ನಿನೋ ಪ್ರಭಾವ ಪೆಸಿಫಿಕ್ ಮಹಾಸಾಗರದ ಸಮಭಾಜಕ ಪ್ರದೇಶದಲ್ಲಿ ಪ್ರಬಲವಾಗಿರುವ ‘ಎಲ್ ನಿನೋ’ ಪರಿಸ್ಥಿತಿ ಮಳೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶವಾಗಿದೆ. ಸಮುದ್ರದ ಮೇಲ್ಮೈ ತಾಪಮಾನ ವಾಡಿಕೆಗಿಂತ…
ಸುಂಟಿಕೊಪ್ಪ, NEWS DESK ಅ.3: ಪ್ರಜಾ ಸೇವೆ ಅಭಿಯಾನದಲ್ಲಿ ಕೇವಲ ಅರ್ಜಿಗಳನ್ನು ಸ್ವೀಕರಿಸುವುದಷ್ಟೇ ಅಲ್ಲದೆ, ಅರ್ಜಿಗಳಲ್ಲಿರುವ ಸಮಸ್ಯೆ ಮತ್ತು ಬೇಡಿಕೆಗಳಿಗೆ ಕಾಲಮಿತಿಯೊಳಗೆ ಪರಿಹಾರ ಕಲ್ಪಿಸುವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗುರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಹೇಳಿದರು. ಶನಿವಾರ ಸುಂಟಿಕೊಪ್ಪ ಹೋಬಳಿ ಮಟ್ಟದ ಪ್ರಜಾ ಸೇವೆ ಅಭಿಯಾನದ ಅಂಗವಾಗಿ ಕೊಡಗರಹಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆಶಯದಂತೆ ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವ ಕಾರ್ಯ ನಡೆಯುತ್ತಿದೆ. ಇಂದಿನ ಸಭೆಯಲ್ಲಿ 60ರಿಂದ 70ಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಕಂದಾಯ, ಅರಣ್ಯ, ರಸ್ತೆ, ಶಿಕ್ಷಣ, ಆರೋಗ್ಯ, ವಸತಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದ ಬೇಡಿಕೆಗಳು ಬಂದಿವೆ. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಶಾಸಕ ಮಂತರ್‌ಗೌಡ ತಿಳಿಸಿದರು. ಜಿಲ್ಲೆಯ ಐದು…
ಮಡಿಕೇರಿ NEWS DESK ಅ.3 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ ಮತ್ತು ಪ್ರಕರಣವನ್ನು ರಾಜ್ಯ ಮಟ್ಟದ ವಿಶೇಷ ತನಿಖಾ ತಂಡದ ಮೂಲಕ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಕೊಡಗು ಜಿಲ್ಲಾ ಸಮಿತಿ ನಗರದ ಇಂದಿರಾಗಾoಧಿ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು. ಫಾರಂ ನಂ.7ರ ಮೂಲಕ ಅಲ್ಪಸಂಖ್ಯಾತರ ಹೆಸರನ್ನು ಮತಪಟ್ಟಿಯಿಂದ ತೆಗೆಯುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಮಾತನಾಡಿ, ಪ್ರಸ್ತುತ ಜಾರಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಎನ್ನುವುದು ಕಾನೂನು ಬಾಹಿರವಾದುದು. ಈ ಹಿಂದೆಯೆ ಎಸ್‌ಡಿಪಿಐ ಪಕ್ಷ ಎಸ್‌ಐಆರ್ ಪ್ರಕ್ರಿಯೆಗೆ ಸಂಬAಧಿಸಿದAತೆ ಹಲವಾರು ಆಕ್ಷೇಪಣೆಗಳನ್ನು ಸಲ್ಲಿಸಿದೆ. ಅಲ್ಲದೆ ಒಟ್ಟು ಪ್ರಕ್ರಿಯೆಯನ್ನು ಕೈಬಿಡುವಂತೆ ಜಾನಾಗ್ರಹ ಸಮಾವೇಶ ನಡೆಸಿ ಒತ್ತಾಯಿಸಿದೆ. ಆದರೆ…
ಮಡಿಕೇರಿ NEWS DESK ಅ.3: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಯುತ್ತಿರುವ ಜನಜಾಗೃತಿ ಕಾರ್ಯಕ್ರಮದ ಭಾಗವಾಗಿ ಅಕ್ಟೋಬರ್ 6ರಂದು ಬೆಳಗ್ಗೆ 10.30 ಗಂಟೆಗೆ ಬೇಂಗ್ ನಾಡಿನ ಚೇರಂಬಾಣೆಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ. ಕೊಡವಲ್ಯಾಂಡ್‌ಗೆ ಸಂವಿಧಾನದ 244 ಮತ್ತು 371ನೇ ವಿಧಿ ಹಾಗೂ 5 ಮತ್ತು 6ನೇ ಶೆಡ್ಯೂಲ್ ಅಡಿಯಲ್ಲಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು. ಕೊಡವ ಜನಾಂಗಕ್ಕೆ ಆದಿಮಸಂಜಾತ ಸಮುದಾಯವಾಗಿ ವಿಶೇಷ ಸಂವಿಧಾನಬದ್ಧ ಮಾನ್ಯತೆ ನೀಡಬೇಕು, ಕೊಡವರ ಪವಿತ್ರ ಗನ್-ತೋಕ್ ಆಚರಣೆಗೆ ಸಂವಿಧಾನದ 25, 26 ಮತ್ತು 28ನೇ ವಿಧಿಗಳ ಅಡಿಯಲ್ಲಿ ರಕ್ಷಣೆ ನೀಡಬೇಕು ಎಂದು ಕೊಡವ ಜನಜಾಗೃತಿ ಮಾನವ ಸರಪಳಿ ಸಂದರ್ಭ ಆಗ್ರಹಿಸಲಾಗುವುದು ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಕೊಡವ ಜನಾಂಗಕ್ಕೆ ಪ್ರತ್ಯೇಕ ಲೋಕಸಭಾ ಮತ್ತು ವಿಧಾನಸಭಾ ಕ್ಷೇತ್ರ, ಶಾಸ್ತ್ರೀಯ ಕೊಡವ ತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ ಸೇರ್ಪಡೆ, ಹಾಗೂ ಕೆಲದಿ/ಪಾಲೇರಿ ರಾಜರು ಮತ್ತು ಬ್ರಿಟಿಷರ…
ಮಡಿಕೇರಿ NEWS DESK ಅ.3 : ಈ ಬಾರಿ ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಎಚ್ಚರಿಸಿದ್ದಾರೆ. ವಿರಾಜಪೇಟೆ ತಾಲ್ಲೂಕು ಆಡಳಿತ ವತಿಯಿಂದ ವಿರಾಜಪೇಟೆ ಬಳಿ ನಡೆದ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ. ಇದರಿಂದಾಗಿ ಆಹಾರ ಉತ್ಪಾದನೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ, ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಮತ್ತಿತರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು. ಮುಂದಿನ ದಿನಗಳಲ್ಲಿ ಮೂರರಿಂದ ಆರು ಡಿಗ್ರಿ ಸೆಂಟಿಗ್ರೇಡ್ ನಷ್ಟು ಬಿಸಿಲಿನ ಪ್ರಖರತೆ ಹೆಚ್ಚಾಗಲಿದೆ. ಆದ್ದರಿಂದ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಕಿವಿಮಾತು ಹೇಳಿದರು. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಲಿದೆ. ಸೈಕ್ಲೋನ್ ಪರಿಣಾಮದಿಂದ ಅಲ್ಪಸ್ವಲ್ಪ…
ಮಡಿಕೇರಿ NEWS DESK ಅ.3 : ಕ್ಲೀನ್ ಕೊಡಗು ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಜಿ ಸೈನಿಕರು, ನಿವೃತ್ತ ಸರಕಾರಿ ನೌಕರರು ಹಾಗೂ ಸಾರ್ವಜನಿಕರು ಮಡಿಕೇರಿಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. ಫೀ.ಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಿಂಭಾಗದ ರಸ್ತೆಯಿಂದ ಐಟಿಐ ಜಂಕ್ಷನ್ ವರೆಗೆ ರಸ್ತೆಯ ಬದಿಯಲ್ಲಿದ್ದ ತ್ಯಾಜ್ಯ ಹಾಗೂ ಕಸವನ್ನು ತೆರವುಗೊಳಿಸಿದರು. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಪ್ರಮುಖರು ಮನವಿ ಮಾಡಿದರು. ಸ್ವಚ್ಛತಾ ಕಾರ್ಯದಲ್ಲಿ ಪ್ರಮುಖರಾದ ಪೊನ್ನಚೆಟ್ಟಿರ ಸುರೇಶ್, ಚೆರಿಯಮನೆ ಸುಂದರಮ್ಮ, ಪೂಜಾರಿರ ಪದ್ಮನಾಭ, ಬಿಟ್ಟಿರ ರಾಘವಯ್ಯ, ಯಾಲದಾಳು ಸನ್ನಿ, ಅಚ್ಚಲಪಾಡಿ ತಿಮ್ಮಯ್ಯ, ಕೋಳುಮಾಡಂಡ ರಾಮಚಂದ್ರ, ಇಂದಿರ, ನಯನ್ ಹಾಗೂ ತಾಜ್ ರೆಸಾರ್ಟ್ ನ ಪ್ರೀತಿ ಸೇರಿದಂತೆ ಮಾಜಿ ಸೈನಿಕರು, ನಿವೃತ್ತ ನೌಕರರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.






