ಲೇಖಕ: admin

ಮಡಿಕೇರಿ, NEWS DESK ಸೆ. 16: ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ 2025-26ನೇ ಸಾಲಿನಲ್ಲಿ 18.97 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಬಿ.ಕೆ. ಜಗದೀಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ವಾರ್ಷಿಕ ಮಹಾಸಭೆ ಸೆ. 19ರಂದು ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಬ್ಯಾಂಕ್ ಒಟ್ಟು 2,481 ಸದಸ್ಯರನ್ನು ಹೊಂದಿದ್ದು, ಒಟ್ಟು ದುಡಿಯುವ ಬಂಡವಾಳ 5,930.79 ಲಕ್ಷ ರೂ.ಗಳಾಗಿದೆ. ಪ್ರಸ್ತುತ 5,386.53 ಲಕ್ಷ ರೂ. ವಿವಿಧ ಠೇವಣಿಗಳನ್ನು ಹೊಂದಿದೆ. ಬ್ಯಾಂಕ್ ಮೂಲಕ ಗ್ರಾಹಕ ಸದಸ್ಯರಿಗೆ 3,505.37 ಲಕ್ಷ ರೂ. ಸಾಲವನ್ನು ವಿತರಿಸಲಾಗಿದೆ. ಇದರಲ್ಲಿ 557.41 ಲಕ್ಷ ರೂ. ಜಾಮೀನು ಸಾಲವಾಗಿದ್ದರೆ, 800.33 ಲಕ್ಷ ರೂ. ಮನೆ ಆಧಾರ ಸಾಲ ಹಾಗೂ 1,631.51 ಲಕ್ಷ ರೂ. ಚಿನ್ನಾಭರಣ ಈಡಿನ ಸಾಲ ನೀಡಲಾಗಿದೆ. ಸಾಲ ವಸೂಲಾತಿಯ ಪ್ರಮಾಣ ಶೇ. 97.04ರಷ್ಟಿದೆ ಎಂದು ತಿಳಿಸಿದರು. ಬ್ಯಾಂಕಿನ ಜಿ.ಟಿ. ರಸ್ತೆ ಶಾಖೆಯಲ್ಲಿ 116.55 ಲಕ್ಷ ರೂ. ಒಟ್ಟು…

Read More

ಸೋಮವಾರಪೇಟೆ, NEWS DESK ಸೆ.15: ದೊಡ್ಡಮಳ್ತೆ ಗ್ರಾಮದ ಹೊನ್ನಮ್ಮನಕೆರೆ ಕ್ಷೇತ್ರದಲ್ಲಿ ಸ್ವರ್ಣಗೌರಿ ಉತ್ಸವದ ಅಂಗವಾಗಿ ಕೆರೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವು ಗ್ರಾಮದ ಹಿರಿಯರ ಸಮ್ಮುಖದಲ್ಲಿ ಶ್ರದ್ಧಾಭಕ್ತಿಯಿಂದ ಸೋಮವಾರ ನೆರವೇರಿತು. ಬೆಳಿಗ್ಗೆ 10 ಗಂಟೆಗೆ ಸಂಪ್ರದಾಯದಂತೆ ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ಸ್ವರ್ಣಗೌರಿ ಹೊನ್ನಮ್ಮ ದೇವಾಲಯ ಸಮಿತಿ ಮತ್ತು ಹೊನ್ನಮ್ಮದೇವಿ ಕುಟುಂಬಸ್ಥರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಾಗಿನವನ್ನು ಬಂಗಾರದ ಕಲ್ಲಿನ ಮೇಲಿಟ್ಟು ಪೂಜಿಸಿ, ನಂತರ ಕೆರೆಯ ನೀರಿನಲ್ಲಿ ವಿಸರ್ಜಿಸಿದರು. ಗ್ರಾಮದ ಸಮೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಗೌರಿ ಹಬ್ಬದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಹೊನ್ನಮ್ಮನ ಕೆರೆಗೆ ವಿವಿಧೆಡೆಗಳಿಂದ ಆಗಮಿಸಿದ ನೂರಾರು ಭಕ್ತರು ಹೊನ್ನಮ್ಮ ತಾಯಿಯ ಆಶೀರ್ವಾದ ಪಡೆದರು. ವಿಶೇಷವಾಗಿ ನವದಂಪತಿಗಳು ಕೆರೆಗೆ ಬಾಗಿನ ಅರ್ಪಿಸಿ, ತಮ್ಮ ಇಷ್ಟಾರ್ಥಗಳು ನೆರವೇರಿಸುವಂತೆ ಪ್ರಾರ್ಥಿಸಿದರು. ಜಾತ್ರೋತ್ಸವದಲ್ಲಿ ಭಾಗವಹಿಸಿದ್ದ ಶಾಸಕ ಡಾ. ಮಂತರ್‌ಗೌಡ ಅವರು ಹೊನ್ನಮ್ಮ ತಾಯಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಹೊನ್ನಮ್ಮ ತಾಯಿ ದೇವಾಲಯದ ಅಭಿವೃದ್ಧಿಗಾಗಿ ₹10 ಲಕ್ಷ…

Read More

ಸೋಮವಾರಪೇಟೆ, NEWS DESK ಸೆ.15: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಪ್ರಪಂಚದಲ್ಲೇ ಅತ್ಯುನ್ನತ ಸ್ಥಾನದಲ್ಲಿದೆ ಎಂದು ಶಾಸಕ ಡಾ.ಮಂತರ್‌ಗೌಡ ಅಭಿಪ್ರಾಯಪಟ್ಟರು. ಪಟ್ಟಣದ ಕೊಡವ ಸಮಾಜದಲ್ಲಿ ಮಂಗಳವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಇಂದು ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲದಿದ್ದರೆ, ನಾವೆಲ್ಲರೂ ರಾಜಪ್ರಭುತ್ವದ ವ್ಯವಸ್ಥೆಯಲ್ಲಿ ಬದುಕಬೇಕಾಗಿತ್ತು. ಮೂಲಭೂತ ಹಕ್ಕುಗಳಿಂದಲೂ ವಂಚಿತರಾಗಬೇಕಾಗಿತ್ತು. ದೇಶದ ಸಂವಿಧಾನವು ಪ್ರಜೆಗಳಿಗೆ ಸಮಾನವಾಗಿ ಬದುಕುವ ಹಕ್ಕನ್ನು ನೀಡಿದೆ. ವ್ಯಕ್ತಿ ಸ್ವಾತಂತ್ರ್ಯದೊಂದಿಗೆ ಪ್ರಶ್ನಿಸುವ ಹಕ್ಕನ್ನೂ ನಾವೆಲ್ಲರೂ ಗಳಿಸಿಕೊಂಡಿದ್ದೇವೆ. ಮುಂದೆಯೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗದಂತೆ ಯುವ ಸಮುದಾಯ ಕಾವಲು ಕಾಯಬೇಕಿದೆ,” ಎಂದು ಹೇಳಿದರು. ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಅಭಿಮನ್ಯುಕುಮಾರ್ ಮಾತನಾಡಿ, ಚುನಾವಣೆಗಳಲ್ಲಿನ ಭ್ರಷ್ಟಾಚಾರವನ್ನು ಹೋಗಲಾಡಿಸಿದಾಗ ಮಾತ್ರ ಪ್ರಜಾಪ್ರಭುತ್ವಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು. ‘ಒಂದು ಮತ, ಒಂದು ಮೌಲ್ಯ’ ಎಂಬ ತತ್ವದಡಿ ರೂಪುಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಜನರೂ ಸಕ್ರಿಯವಾಗಿ ಮತದಾನದಲ್ಲಿ ಪಾಲ್ಗೊಂಡು, ವ್ಯವಸ್ಥೆ ಬಲಿಷ್ಠವಾಗಲು ಸಹಕಾರ ನೀಡಬೇಕೆಂದು ಹೇಳಿದರು. ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಕುಶಾಲನಗರ…

Read More

ಮಡಿಕೇರಿ, NEWS DESK ಸೆ. 16: ದಕ್ಷಿಣ ವಲಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಜಯಪತಾಕೆ ಹಾರಿಸಿದ ಕೊಡಗು ವಿದ್ಯಾಲಯದ ಬಾಲಕಿಯರ ತಂಡ ಹಾಗೂ ದ್ವಿತೀಯ ಸ್ಥಾನ ಪಡೆದು ರನ್ನರ್ಸ್‌ ಆದ ಬಾಲಕರ ತಂಡಕ್ಕೆ ಶಾಲೆಯ ವತಿಯಿಂದ ಸಂಭ್ರಮದ ಸ್ವಾಗತ ನೀಡಲಾಯಿತು. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡವು ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವುದು ಶಾಲೆಯ ಕ್ರೀಡಾ ಕ್ಷೇತ್ರಕ್ಕೆ ಹೆಮ್ಮೆಯ ಸಾಧನೆಯಾಗಿದೆ. ಶಾಲಾ ಆವರಣಕ್ಕೆ ಆಗಮಿಸಿದ ವಿಜೇತ ಕ್ರೀಡಾಪಟುಗಳನ್ನು ಬ್ಯಾಂಡ್‌ನೊಂದಿಗೆ ಪ್ರಾಂಶುಪಾಲರು, ಆಡಳಿತ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿ–ವಿದ್ಯಾರ್ಥಿನಿಯರು, ಪೋಷಕರು ಹಾಗೂ ಹಾಕಿ ಕೋಚ್‌ಗಳು ಸ್ವಾಗತಿಸಿದರು. ದಕ್ಷಿಣ ವಲಯ ಪಂದ್ಯಾವಳಿಯಲ್ಲಿ ಗಳಿಸಿದ ಟ್ರೋಫಿಯನ್ನು ಕ್ರೀಡಾಪಟುಗಳು ಪ್ರಾಂಶುಪಾಲರಾದ ಕೆ.ಎಸ್. ಸುಮಿತ್ರಾ ಅವರಿಗೆ ಹಸ್ತಾಂತರಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಪಂದ್ಯಾವಳಿಗೆ ಆಯ್ಕೆಯಾಗಿರುವ ಕೊಡಗು ವಿದ್ಯಾಲಯದ ಬಾಲಕಿಯರ ತಂಡವು ಅಮೃತಸರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ. ಈ ಮೂಲಕ ವಿದ್ಯಾರ್ಥಿನಿಯರು ರಾಷ್ಟ್ರೀಯ ಮಟ್ಟದಲ್ಲಿ ಶಾಲೆಯನ್ನು ಪ್ರತಿನಿಧಿಸಲಿರುವುದು ಶಾಲೆಗೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ.…

Read More

ಮಡಿಕೇರಿ, NEWS DESK ಸೆ.16: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳನ್ನು ಸ್ಮರಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಸೆ.17ರಿಂದ ಅ.17ರವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ತಿಂಗಳ ಅವಧಿಯಲ್ಲಿ ವಿವಿಧ ಸಾಮಾಜಿಕ ಹಾಗೂ ಜನಪರ ಸೇವಾ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಪಕ್ಷದ ಕಾರ್ಯಕರ್ತರು, ವಿವಿಧ ಮೋರ್ಚಾಗಳು ಹಾಗೂ ಘಟಕಗಳ ಸಹಯೋಗದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು. ನರೇಂದ್ರ ಮೋದಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಮಂತ್ರಿಯಾಗಿ 25 ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತವಾದ ಮಾದರಿ ಆಡಳಿತವನ್ನು ನೀಡಿದ್ದಾರೆ. ವಿಶ್ವ ಮಟ್ಟದಲ್ಲಿ ಭಾರತದ ಗೌರವವನ್ನು ಎತ್ತಿ ಹಿಡಿದ ಮೋದಿ ಅವರ ಜನಪರ ಕಾಳಜಿಯ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಅಭಿಯಾನವನ್ನು ನಡೆಸಲಾಗುತ್ತಿದೆ. ಆ ಮೂಲಕ ‘2047ರ ವಿಕಸಿತ…

Read More

ಭಾಗಮಂಡಲ NEWS DESK ಸೆ.16 : : ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ–2026ರ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ತಿಳಿಸಿದೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆಪ್ಟೆಂಬರ್ 27ರಂದು ಭಾನುವಾರ ಬೆಳಿಗ್ಗೆ 8.45ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ‘ಪತ್ತಾಯಕ್ಕೆ ಅಕ್ಕಿ’ ಹಾಕುವ ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 5ರಂದು ಸೋಮವಾರ ಬೆಳಿಗ್ಗೆ 10.35ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ. ಅಕ್ಟೋಬರ್ 15ರಂದು ಗುರುವಾರ ಮಧ್ಯಾಹ್ನ 12.35ಕ್ಕೆ ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳನ್ನು ಇಡುವ ಕಾರ್ಯಕ್ರಮ ಜರುಗಲಿದೆ. ಇನ್ನು ಶ್ರೀ ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್ 17ರಂದು ಶನಿವಾರ ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ನಡೆಯಲಿದೆ. ಕಾವೇರಿ…

Read More

ಮಡಿಕೇರಿ NEWS DESK ಸೆ.16 : ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ ಹೊದ್ದೂರು ಪಾಲೆಮಾಡುವಿನಲ್ಲಿ ನಡೆಯಿತು. ಟ್ರಸ್ಟ್ ನ ಅಧ್ಯಕ್ಷ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಟ್ರಸ್ಟ್ ನ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸುವುದು ಹಾಗೂ ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಕೈಜೋಡಿಸುವ ಕುರಿತು ಚರ್ಚಿಸಲಾಯಿತು. ಸದಸ್ಯರಿಗಾಗಿ ವಿವಿಧ ಮನೋರಂಜನಾ ಕ್ರೀಡೆಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದೇ ಸಂದರ್ಭ 10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಿ, ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಲಾಯಿತು. ಅಲ್ಲದೆ, ಟ್ರಸ್ಟ್ ನಲ್ಲಿ ನೂತನವಾಗಿ ಸದಸ್ಯತ್ವ ಪಡೆದವರಿಗೆ ಸದಸ್ಯತ್ವ ಪ್ರಮಾಣಪತ್ರ ವಿತರಿಸಲಾಯಿತು. ಟ್ರಸ್ಟ್ ನ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿಗಳು, ಸದಸ್ಯರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

Read More

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶ ಸಾರಿದರು. ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ 62ನೇ ವರ್ಷದ ಸ್ವರ್ಣ ಗೌರಿ ಮತ್ತು ಗಣೇಶೋತ್ಸವದ ಅಂಗವಾಗಿ ಮಂಗಳವಾರ ಪಟ್ಟಣದ ಕನ್ನಡ ವೃತ್ತದಲ್ಲಿ ನಡೆದ ಸ್ವರ್ಣ ಗೌರಿ ಮೆರವಣಿಗೆ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಭಕ್ತಾಧಿಗಳಿಗೆ ಸಿಹಿ ತಿಂಡಿ ಹಾಗೂ ತಂಪುಪಾನೀಯಗಳನ್ನು ವಿತರಿಸಿದರು. ಎಲ್ಲರೂ ಒಟ್ಟಾಗಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸೋಣ, ಒಂದಾಗಿ ಸಹಬಾಳ್ವೆಯಿಂದ ಬಾಳೋಣ ಎಂಬ ಸಂದೇಶವನ್ನು ಈ ಮೂಲಕ ಸಾರಿದರು. ಇದಕ್ಕೂ ಮುನ್ನ ಸೋಮವಾರ ಶ್ರೀರಾಮ ಮಂದಿರದಲ್ಲಿ ಸ್ವರ್ಣ ಗೌರಿ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ವಿವಿಧ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾಜಲ ತರುವ ಧಾರ್ಮಿಕ ಕಾರ್ಯಕ್ರಮದೊಂದಿಗೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮ…

Read More

ಕುಶಾಲನಗರ, NEWS DESK ಸೆ.15: ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದ ಕೋಟೆಯ ಎಸ್.ಆರ್. ಶಿವಪ್ರಸಾದ್ ಅವರ ಮನೆಯಲ್ಲಿ ಮಕ್ಕಳಾದ ಎಸ್. ಕೃತಿಕ ಪ್ರಸಾದ್ ಹಾಗೂ ಎಸ್. ಭರತೇಶ್ ಅವರು ಪರಿಸರ ಸ್ನೇಹಿ ಗಣೇಶೋತ್ಸವದ ಅಂಗವಾಗಿ ಮಣ್ಣಿನಿಂದ ಗಣೇಶ ಹಾಗೂ ಗೌರಿಯ ಮೂರ್ತಿಗಳನ್ನು ತಯಾರಿಸಿ ಪ್ರತಿಷ್ಠಾಪಿಸಿರುವುದು ಗಮನ ಸೆಳೆದಿದೆ. ಮಕ್ಕಳ ಈ ಪರಿಸರ ಕಾಳಜಿಗೆ ಅವರ ತಂದೆ ಎಸ್.ಆರ್. ಶಿವಪ್ರಸಾದ್ ಹಾಗೂ ತಾಯಿ ಚಂಪಕ ಅವರ ಪ್ರೇರಣೆ ಮತ್ತು ಸಹಕಾರ ಕಾರಣವಾಗಿದೆ. ಕೂಡಿಗೆ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಎಸ್. ಕೃತಿಕ ಪ್ರಸಾದ್, ಕಳೆದ ಐದು ವರ್ಷಗಳಿಂದ ತಮ್ಮ ಮನೆಯಲ್ಲಿ ರಾಸಾಯನಿಕ ಬಣ್ಣಗಳನ್ನು ಬಳಸದೆ ನೈಸರ್ಗಿಕವಾಗಿ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರುತ್ತಿದ್ದಾರೆ. ಮಕ್ಕಳ ಈ ಪರಿಸರ ಸ್ನೇಹಿ ಪ್ರಯತ್ನವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂ ಪರಿಸರ ಪ್ರೇಮಿ ಟಿ.ಜಿ. ಪ್ರೇಮಕುಮಾರ್ ಶ್ಲಾಘಿಸಿದ್ದು, ಇಂತಹ ಪ್ರಯತ್ನಗಳು ಇತರರಿಗೂ ಮಾದರಿಯಾಗಿವೆ…

Read More

ಬಾಳೆಲೆ, NEWS DESK ಸೆ.15: ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ಅವರು ತರಬೇತಿ ನೀಡಿದ್ದರು.

Read More