ಲೇಖಕ: admin

ಮಡಿಕೇರಿ ಡಿ.24 NEWS DESK : ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಆನೆಕಾಡು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಪ್ರವಾಸಿಗರು ಎಸೆದಿದ್ದ ಅನುಪಯುಕ್ತ ವಸ್ತುಗಳು, ತ್ಯಾಜ್ಯವನ್ನು ತೆರವುಗೊಳಿಸುವ ಕಾಯಕದಲ್ಲಿ ತೊಡಗಿಸಿಕೊಂಡ ಸುಂಟಿಕೊಪ್ಪ ಪರಿಸರ ಪ್ರೇಮಿ ಡೇವಿಡ್ ಡಿಸೋಜಾ ಅವರನ್ನು ಕುಶಾಲನಗರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲ್ಲೂಕು ಅಧ್ಯಕ್ಷರಾದ ಅಣ್ಣಯ್ಯ ನೇತೃತ್ವದಲ್ಲಿ ಸಮೀಪದ ಕಿಂಗ್ಸ್ ವೇ ರೆಸಾರ್ಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಸ್ವಚ್ಛ ಕೊಡಗು ಸುಂದರ ಕೊಡಗು ಅಭಿಯಾನದಿಂದ ಪ್ರೇರಣೆಗೊಂಡ ಡೇವಿಡ್ ತಾನು ತೆರಳುವ ಮಾರ್ಗದಲ್ಲಿ ಆನೆಕಾಡು ಮೀಸಲು ಅರಣ್ಯ ಬಳಿ ಎಲ್ಲೆಂದರಲ್ಲಿ ಪ್ರವಾಸಿಗರು ಎಸೆದಿರುವ ತ್ಯಾಜ್ಯಗಳನ್ನು ಸತತ ನಾಲ್ಕು ದಿನಗಳ ಕಾಲ ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದಾರೆ. 7ನೇ ಹೊಸಕೋಟೆ ಮೆಟ್ನಳ್ಳ ಬಳಿಯಿಂದ ಆನೆಕಾಡು ವ್ಯಾಪ್ತಿಯ ಉದ್ದಕ್ಕೂ ಪ್ಲಾಸ್ಟಿಕ್ ಮತ್ತು ನಿರುಪಯುಕ್ತ ವಸ್ತುಗಳನ್ನು ಸಂಗ್ರಹಿಸಿ ನಂತರ ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ಸಹಕಾರದೊಂದಿಗೆ ಟ್ರ್ಯಾಕ್ಟರ್ ನಲ್ಲಿ ಸಾಗಿಸಿ ವಿಲೇವಾರಿ ಮಾಡಲು ಕ್ರಮ ಕೈಗೊಂಡಿದ್ದಾರೆ. ಸುಮಾರು…

Read More

ಮಡಿಕೇರಿ ಡಿ.24 NEWS DESK : ಕಾಳಸಂತೆಯಲ್ಲಿ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಮಾರಾಟವಾಗುವುದನ್ನು ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಪ್ರಶಾಂತ್ ಸೂಚನೆ ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ನಡೆದ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಡವರ ಹಸಿವು ನೀಗಿಸುವುದಕ್ಕಾಗಿ ‘ಅನ್ನಭಾಗ್ಯ’ ಯೋಜನೆಯ ಮೂಲಕ ಅಕ್ಕಿಯನ್ನು ವಿತರಿಸಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಕುರಿತು ಆರೋಪಗಳಿವೆ. ನ್ಯಾಯಬೆಲೆ ಅಂಗಡಿಗಳಲ್ಲಿ ಸೂಚನಾ ಫಲಕ ಅಳವಡಿಸಬೇಕೆನ್ನುವ ನಿಯಮವಿದ್ದರೂ ಅದನ್ನು ಪಾಲಿಸುತ್ತಿಲ್ಲ. ತಕ್ಷಣ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು. ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ಸಭೆ ನಿರ್ಧರಿಸಿತು. ಚೆಸ್ಕಾಂ ಇಲಾಖೆಯಿಂದ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ ಎಂದು ಸಭೆಯಲ್ಲಿ ಸರ್ವಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ…

Read More

ಸೋಮವಾರಪೇಟೆ ಡಿ.24 NEWS DESK : ಐಪಿಎಲ್‌ನಲ್ಲಿ ಬಾಂಗ್ಲಾದೇಶದ ಆಟಗಾರರನ್ನು ಒಳಪಡಿಸದಂತೆ ನಿರ್ಧಾರ ಕೈಗೊಳ್ಳುವಂತೆ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಅಪ್ಪಚ್ಚು ರಂಜನ್ ಪ್ರಧಾನಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಇತ್ತೀಚಿನ ಅಂತರರಾಷ್ಟ್ರೀಯ ಬೆಳವಣಿಗೆಗಳು, ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುವ ಘಟನೆಗಳು, ಆಂತರಿಕ ಭದ್ರತಾ ಸಂವೇದನಾಶೀಲತೆಗಳು ಹಾಗೂ ಭಾರತೀಯ ನಾಗರಿಕರ ಮನೋಭಾವಗಳನ್ನು ಪರಿಗಣಿಸಿ, ಐಪಿಎಲ್ನಂತಹ ಪ್ರಮುಖ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿದೇಶಿ ಆಟಗಾರರ ಪಾಲ್ಗೊಳ್ಳುವಿಕೆಗೆ ಸಂಬಂಧಿಸಿದ ಪ್ರಸ್ತುತ ನೀತಿಗಳನ್ನು ಸರ್ಕಾರವು ಪರಿಶೀಲಿಸಬೇಕಿದೆ. ರಾಷ್ಟ್ರೀಯ ಹಿತಾಸಕ್ತಿ, ಆಂತರಿಕ ಭದ್ರತಾ ಪರಿಗಣನೆಗಳು ಹಾಗೂ ಸಾರ್ವಜನಿಕ ಸಾಮರಸ್ಯದ ಆಧಾರದ ಮೇಲೆ ಕೈಗೊಳ್ಳುವ ಇಂತಹ ನಿರ್ಧಾರಗಳು ನಾಗರಿಕರಲ್ಲಿ ವಿಶ್ವಾಸವನ್ನು ಮೂಡಿಸಿ, ಭಾರತೀಯ ಕ್ರೀಡೆಯ ಗೌರವ ಹಾಗೂ ಅಖಂಡತೆಯನ್ನು ಕಾಪಾಡುತ್ತದೆ. ಈ ವಿಷಯದಲ್ಲಿ ಸ್ಪಷ್ಟ ಮಾರ್ಗಸೂಚಿಗಳು ಮತ್ತು ಪಾರದರ್ಶಕ ಸಂವಹನವನ್ನು ನೀಡುವಂತೆ ವಿನಂತಿಸಿದ್ದಾರೆ. ಭಾರತದ ಏಕತೆ, ಭದ್ರತೆ ಮತ್ತು ಮೌಲ್ಯಗಳನ್ನು ರಕ್ಷಿಸುವಲ್ಲಿ ನಿಮ್ಮ ನಾಯಕತ್ವ ಮತ್ತು ವಿವೇಕದ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದೂ ಅಪ್ಪಚ್ಚು ರಂಜನ್ ಪತ್ರದಲ್ಲಿ…

Read More

ಮಡಿಕೇರಿ ಡಿ.24 NEWS DESK : ಕೊಡಗು ಜಿಲ್ಲಾ ಯೋಜನಾ ಸಮಿತಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತ ಸದಸ್ಯರ ಪೈಕಿ 8 ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲು ಚುನಾವಣಾ ವೇಳಾಪಟ್ಟಿ ಪಟ್ಟಿ ಪ್ರಕಟಿಸಲಾಗಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ನಾಮನಿರ್ದೆಶನ ಪತ್ರವನ್ನು ನಿಗದಿತ ನಮೂನೆ-1 ರಲ್ಲಿ ಚುನಾವಣಾಧಿಕಾರಿಗಳಾದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಕೊಡಗು ಜಿಲ್ಲಾ ಪಂಚಾಯತ್ ರವರಿಗೆ ಕೆಳಕಂಡ ಚುನಾವಣಾ ವೇಳಾಪಟ್ಟಿಯಂತೆ ಸಲ್ಲಿಸಬಹುದಾಗಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳಿಗೆ ಸಹಕರಿಸಲು ಸಹಾಯಕ ಚುನಾವಣಾಧಿಕಾರಿಯಾಗಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಡಗು ಜಿಲ್ಲೆ ಅವರನ್ನು ನೇಮಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಪೈಕಿ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಸದಸ್ಯರ ಸಂಖ್ಯೆ 08, ಜನವರಿ, 02 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಕೊಡಗು ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಸುವುದು. ಜ.2 ರಂದು ಅಪರಾಹ್ನ 4 ಗಂಟೆಯಿಂದ 5.30 ಗಂಟೆವರೆಗೆ…

Read More

ಮಡಿಕೇರಿ ಡಿ.24 NEWS DESK : ಸರ್ಕಾರದ ವತಿಯಿಂದ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಸುಮಾರು 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಸಿದ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಜಿಲ್ಲೆಯ ಮಸೀದಿಯ ಅಧ್ಯಕ್ಷರುಗಳು ಆಗಮಿಸಿ ಸನ್ಮಾನ ಮಾಡಿದರು. ಈ ಸಂದರ್ಭ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಹನೀಫ್, ತಾಲ್ಲೂಕು ಅಲ್ಪಸಂಖ್ಯಾತ ಅಧ್ಯಕ್ಷರಾದ ಕೋಳುಮಂಡ ರಫೀಕ್, ಹಿರಿಯರಾದ ಎರ್ಮು ಹಾಜಿ, ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮಾನ್,ಶಾಫಿ ಎಡಪಾಲ, ನಾಪೋಕ್ಲು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ಪ್ರಮುಖರಾದ ಸಲಾಂ, ಇಸ್ಮಾಯಿಲ್, ಹಮೀದ್, ಅಂದಾಯಿ, ನೌಶಾದ್, ರಜಾಕ್, ಶಬೀರ್, ಸಿರಾಜ್, ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.  ಅಲ್ಲದೆ ಮುಂದಿನ ದಿನಗಳಲ್ಲಿ, ಅಲ್ಪಸಂಖ್ಯಾತ ಸಚಿವರನ್ನು ಜಿಲ್ಲೆಗೆ ಆಹ್ವಾನಿಸಿ, ಬೃಹತ್ ಸಮಾವೇಶ ನಡೆಸಿ ಕೊಡುವಂತೆ ಮಾನ್ಯ ಶಾಸಕರಲ್ಲಿ ಮನವಿ ಮಾಡಿದರು.

Read More

ಸುಂಟಿಕೊಪ್ಪ, ಡಿ.24 NEWS DESK : ಮಹಾ ಶಿವರಾತ್ರಿಯ ಹಿನ್ನೆಲೆಯಲ್ಲಿ ಕೊಯಂಬತ್ತೂರಿನ ಈಶಾ ಕೇಂದ್ರ್ರದ ವತಿಯಿಂದ ಕೃಷ್ಣನ ನಗರಿ ಉಡುಪಿಯಿಂದ ಆರಂಭಗೊಂಡ ‘ಆದಿ ಯೋಗಿ ರಥ ಯಾತ್ರೆ’ಗೆ ಗದ್ದೆಹಳ್ಳದ ಗಾಂಧಿ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಗದ್ದೆಹಳ್ಳದಿಂದ ನೂರಾರು ಸಂಖ್ಯೆ ಯಲ್ಲಿ ನೇರಿದ್ದ ಭಕ್ತಾಧಿಗಳು ರಥವನ್ನು ಎಳೆದು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟದಲ್ಲಿ ತಂಗಿತು. ನಂತರ ಬೆಳಗ್ಗಿನ ಪೂಜೆಯನ್ನು ಸಲ್ಲಿಸಿದ ಬಳಿಕ ಕುಶಾಲನಗರದತ್ತ ಪ್ರಯಾಣ ಬೆಳೆಸಿತು. ಶ್ರೀಪುರಂ ಅಯ್ಯಪ್ಪ ಕ್ಷೇತ್ರದ ಬಳಿ ಪೂಜೆಯನ್ನು ಸ್ವೀಕರಿಸಿದ ಬಳಿಕ ಕೊಡಗರಹಳ್ಳಿ ಶ್ರೀ ಬೈತೂರಪ್ಪ ದೇವಾಲಯಕ್ಕೆ ಆಗಮಿಸಿತು. ದೇವಾಲಯದಲ್ಲಿ ಪೂಜೆ ನೇರವೇರಿಸಿದ ಬಳಿಕ ಧ್ಯಾನ ಭಜನೆಯ ಮೂಲಕ ಕೊಡಗರಹಳ್ಳಿ ಮಾರುತಿ ನಗರದ ಶ್ರೀ ಆಂಜನೇಯ ದೇವಸ್ಥಾನ, 7ನೇ ಹೊಸಕೋಟೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ಕೃಷ್ಣ ದೇವಸ್ಥಾನ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಧ್ಯಾಹ್ನ ದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭ ಆಯಾ ವ್ಯಾಪ್ತಿಯ ದೇವಸ್ಥಾನ…

Read More

ಮಡಿಕೇರಿ ಡಿ.24 NEWS DESK : ಮುಂದಿನ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಕೊಡವ ಕುಟುಂಬಗಳ ನಡುವಿನ ‘ಚೇನಂಡ ಕಪ್ ಹಾಕಿ ಉತ್ಸವ’ದ ಅಂಗವಾಗಿ ಪ್ರತಿಭಾವಂತ ಯುವ ಹಾಕಿ ಪಟುಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಿ ಜ.1 ರಿಂದ 4 ರವರೆಗೆ ಮೂರ್ನಾಡುವಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇನಂಡ ಕಪ್ ಹಾಕಿ ಉತ್ಸವದ ಆಯೋಜನಾ ಸಮಿತಿಯ ಅಧ್ಯಕ್ಷ ಚೇನಂಡ ಕಂಬಣಿ ಕರುಂಬಯ್ಯ ಅವರು 4ನೇ ತರಗತಿಯಿಂದ 7ನೇ ತರಗತಿವರೆಗಿನ ಪ್ರಾಥಮಿಕ ವಿಭಾಗ ಮತ್ತು 8 ರಿಂದ 10ನೇ ತರಗತಿವರೆಗಿನ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರಿಗಾಗಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿ ಯಾವುದೇ ಒಂದು ಸಮೂಹಕ್ಕೆ ಸೀಮಿತವಾಗಿಲ್ಲ, ಮುಕ್ತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ಪಂದ್ಯಾವಳಿಗೆ ಕೊಡಗಿನ ಎಲ್ಲಾ ಪಾಥಮಿಕ ಮತ್ತು ಪೌಢಶಾಲಾ ಶಾಲೆಗಳ ಪ್ರಮುಖರು ತಮ್ಮ ಶಾಲೆಯ ಹಾಕಿ ತಂಡಗಳನ್ನು ಕಳುಹಿಸಿ ಕೊಡಬೇಕು. ಯಾವುದೇ ಶಾಲೆಯಲ್ಲಿ…

Read More

ಮಡಿಕೇರಿ ಡಿ.24 NEWS DESK : ಶತಮಾನೋತ್ಸವದ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ‘ಶತ ಸಂಭ್ರಮ’ದ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ಡಿ.25 ರಂದು ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ಮಿಲನ ಭರತ್ ಉದ್ಘಾಟಿಸಲಿದ್ದಾರೆ. ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರು ಪ್ರಸಾದ್ ಬಂಗೇರ, ಮಡಿಕೇರಿಯ ವೃತ್ತ ನಿರೀಕ್ಷ ಪಿ.ಕೆ.ರಾಜು ಹಾಗೂ ಮಡಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್ ಎಂ.ಎನ್. ಅವರು ಪಾಲ್ಗೊಳ್ಳಲಿದ್ದಾರೆ. ಸೌಹಾರ್ದ ಸಹಕಾರಿಯ ಶತಮಾನೋತ್ಸವದ ಅಂಗವಾಗಿ ಕೊಡಗು ಜಿಲ್ಲಾ ಸರಕಾರಿ…

Read More

ವಿರಾಜಪೇಟೆ ಡಿ.24 NEWS DESK : ವಿರಾಜಪೇಟೆ ಸಮೀಪದ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೂತಂಡ ಪೂವಯ್ಯ ಮತ್ತು ಪಾರ್ವತಿ ಪೂವಯ್ಯ ಜ್ಞಾಪಕಾರ್ಥವಾಗಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾಧನೆ ಬಗ್ಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಹರ್ಷ ಹಾಗೂ ಪುಣ್ಯ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಏಕಲವ್ಯ ವಸತಿ ಕಾಲೇಜಿನ ಪವಿತ್ರ ಹಾಗೂ ನವಿತಾ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಹರಿಕೃಷ್ಣ ಹಾಗೂ ಕಾರ್ಯಪ್ಪ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕೂರ್ಗ್ ಎಜುಕೇಶನ್ ಫಂಡಿನ ಸದಸ್ಯರಾದ ಕೆ.ಪಿ.ಉತ್ತಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕೆ.ಜೆ.ದಿವಾಕರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಾಬು ಕಾಳಪ್ಪ ಎಂ.ಎಂ, ಪಾಲಿಬೆಟ್ಟ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಕೆ.ವಾಣಿ ಉತ್ತಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು…

Read More

ಮಡಿಕೇರಿ ಡಿ.24 NEWS DESK : ವಿರಾಜಪೇಟೆಯ ಮಾಜಿ ಸೈನಿಕರ ಸಂಘದ  ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯ ಮಾಜಿ ಸೈನಿಕರ ಸಂಘದ ಮೂರನೇ ಮಹಡಿಯ ಕಟ್ಟಡ ನಿರ್ಮಾಣಕ್ಕೆ, ಸರ್ಕಾರದ ವತಿಯಿಂದ ಹಣಕಾಸು ನೆರವು ಕೇಳಿದ್ದು, ಸರ್ಕಾರದ ವತಿಯಿಂದ ಹಣ ಬರುವುದು ಸ್ವಲ್ಪ ವಿಳಂಬ ಆಗಬಹುದು ಎಂಬ ಕಾರಣದಿಂದಾಗಿ ಶಾಸಕ ಪೊನ್ನಣ್ಣ  ಅವರು, ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕಾಮಗಾರಿ ಮುಂದುವರೆಯಲು ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ  ಮಾಜಿ ಸೈನಿಕ ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಶಾಸಕರ ಗೃಹ ಕಚೇರಿಯಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜೋಕಿಮ್, ಬಟ್ಟಕಳ್ಳಂಡ ರಾಜ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಮಂಜುನಾಥ್, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಮಾಜಿ…

Read More