ಲೇಖಕ: admin

ಮಡಿಕೇರಿ ಡಿ.24 NEWS DESK : ಹಿರಿಯ ನಾಗರಿಕರ ವೇದಿಕೆ ಮತ್ತು ಮಡಿಕೇರಿ ಲಯನ್ಸ್ ಕ್ಲಬ್ ಇವರ ಜಂಟಿ ಆಶ್ರಯದಲ್ಲಿ ಕಿವಿ ತಪಾಸಣೆ ಉಚಿತ ಶಿಬಿರವು ಡಿಸೆಂಬರ್, 26 ರಂದು ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.24 NEWS DESK : ಹಿರಿಯ ನಾಗರಿಕರ ವೇದಿಕೆಯ 2024-25ನೇ ಸಾಲಿನ ಮಹಾಸಭೆಯು ಡಿಸೆಂಬರ್, 31 ರಂದು ಬೆಳಗ್ಗೆ 10.45 ಗಂಟೆಗೆ ನಗರದ ಬಾಲಭವನದಲ್ಲಿ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಕೊಂಗಾಂಡ ಎ.ತಿಮ್ಮಯ್ಯ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ಡಿ.24 NEWS DESK : ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್, 01, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗೆ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕ.ವಿ.ಪ್ರ.ನಿ.ನಿ, ಕೆಎಸ್‍ಆರ್‍ಟಿಸಿ, ವಿಶ್ವವಿದ್ಯಾಲಯ, ಶಾಲಾ-ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದು. ನೋಂದಣಿತರು ಶುಲ್ಕ ಕೊಡಬೇಕಿಲ್ಲ. ಕರ್ನಾಟಕದ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗೆ ನೋಂದಾಯಿಸಿಕೊಂಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ಕರ್ನಾಟಕ ಸರ್ಕಾರದ ಅಧಿಸೂಚನೆಯಂತೆ ವಿನಾಯಿತಿಯಿದೆ. ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ…

Read More

ಗೋಣಿಕೊಪ್ಪ ಡಿ.24 NEWS DESK : ಗೋಣಿಕೊಪ್ಪದ ಕೊಡಗು ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಅಮೃತ್‍ರಾಜ್ ಸಮಾಜ ಸೇವಾ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಹಾಸನ ಜಿಲ್ಲೆಯ ಶಿವಲಿಂಗೇಶ್ವರ ಕಲ್ಯಾಣ ಮಂದಿರದಲ್ಲಿ ನಡೆದ ಶಿಕ್ಷಣ ಮತ್ತು ಜ್ಞಾನ ಮಾಸಪತ್ರಿಕೆಯ 23ನೇ ವಾರ್ಷಿಕೋತ್ಸವ ಮತ್ತು ರಾಜ್ಯಮಟ್ಟದ ಶಿಕ್ಷಣ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭ ಹಾಸನ ಜಿಲ್ಲೆಯ ಪ್ರಮುಖರಾದ ನಾಗರಾಜ್, ರಾಮಚಂದ್ರ, ರವೀಂದ್ರನಾಥ್, ಶ್ರೀಧರ್, ಪ್ರಸನ್ನಕುಮಾರ್, ಲಿಂಗರಾಜು, ಲೋಲಾಕ್ಷಿ, ರುದ್ರಪ್ಪ ಸೇರಿದಂತೆ ಹಲವಾರು ಭಾಗಿಯಾಗಿದ್ದರು. ಈ ಸಂದರ್ಭ ಸುಮಾರು 20ಕ್ಕೂ ಹೆಚ್ಚು ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

Read More

ವಿರಾಜಪೇಟೆ ಡಿ.24 NEWS DESK : ಕಾನೂರು ವಲಯದ ಕೋತೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಕಾರ್ಯಕ್ರಮದಡಿಯಲ್ಲಿ ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ ಸಮಗ್ರ ಕೃಷಿಕರಾದ ಕೃಷ್ಣ ಅವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಪಶು ವೈದ್ಯಧಿಕಾರಿಗಳಾದ ಡಾ. ಚಂದ್ರಶೇಖರ್ ಅವರು, ಲಾಭದಾಯಕ ಹೈನುಗಾರಿಕೆ, ಹಟ್ಟಿ ರಚನೆ ವಿಧಾನಗಳು, ಹಸುಗಳ ಆಯ್ಕೆ, ಕರುಗಳ ಪಾಲನೆ, ಹಸುಗಳಿಗೆ ಸಂಪೂರ್ಣ ಆಹಾರ ನೀಡುವ ಬಗ್ಗೆ, ಹಸುಗಳಿಗೆ ಬರುವ ಸಾಂಕ್ರಾಮಿಕ ಕಾಯಿಲೆಗಳು ಮತ್ತು ಸಿಗುವ ಲಸಿಕೆಗಳ ಬಗ್ಗೆ ಮತ್ತು ಪಶು ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ, ಹೈನುಗಾರಿಕೆಯ ಸ್ವಯಂ ಉದ್ಯೋಗಕ್ಕೆ ಒಂದು ಉತ್ತಮ ಅವಕಾಶವಾಗಿದೆ. ಇದರಿಂದ ಜನರು ತಮ್ಮದೇ ಆದ ಉದ್ಯೋಗವನ್ನು ಸೃಷ್ಟಿಸಿಕೊಳ್ಳುವುದು ಎಂದು ಸಮಗ್ರ ಮಾಹಿತಿ ನೀಡಿದರು. ಕೃಷಿ ಮೇಲ್ವಿಚಾರಕರು ವಸಂತ ಗ್ರಾಮಾಭಿವೃದ್ಧಿ ಯೋಜನೆಯ ಮುಖಾತರ ಹೈನುಗಾರಿಕೆಗೆ ಸಿಗುವ ತರಬೇತಿ ಪ್ರಗತಿ ನಿಧಿ ಇನ್ನಿತರ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾನೂರು ಪಶು ಸಖಿಯಾದ ಮೋನಿಕಾ, ಸೇವಾ ಪ್ರತಿನಿಧಿ ಕಾವೇರಿ,…

Read More

ಮಡಿಕೇರಿ NEWS DESK ಡಿ.23 : ಕೊಡವ ಭಾಷೆಯನ್ನು ಭಾರತ ಸಂವಿಧಾನದ 8ನೇ ಶೆಡ್ಯೂಲ್ ಗೆ ಸೇರ್ಪಡೆಗೊಳಿಸುವ ಬಗ್ಗೆ ಶಿಫಾರಸ್ಸು ಮಾಡಬೇಕಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕೊಡವ ಭಾಷೆಯ ಐತಿಹಾಸಿಕ ಹಿನ್ನೆಲೆ ಹಾಗೂ ಸಂಸ್ಕೃತಿ ಕುರಿತು ತಜ್ಞರಿಂದ ವರದಿಯನ್ನು ಪಡೆದು ಒಂದು ತಿಂಗಳೊಳಗೆ ಸಲ್ಲಿಸುವಂತೆ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಪತ್ರ ಬರೆದಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆ ಆರಂಭಿಸಿರುವುದು ಸ್ವಾಗತಾರ್ಹ ಕ್ರಮವಾಗಿದ್ದು, ಇದು ಸಿಎನ್‌ಸಿಯ ಹೋರಾಟಕ್ಕೆ ದೊರೆತ ಜಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಕೊಡವ ಭಾಷೆ ಕುರಿತು ಸಿಎನ್‌ಸಿ ಸಂಘಟನೆ ಸೇರಿದಂತೆ ಭಾರತದಾದ್ಯಂತ ವಿವಿಧ ಆಧಿಮಸಂಜಾತ ಮಾತೃಭಾಷೆಗಳ ನಿರಂತರ ಪ್ರಯತ್ನಗಳು ಮತ್ತು ಇತರ ಪಾಲುದಾರರಿಂದ ಬೇಡಿಕೆಗಳ ಹಿನ್ನೆಲೆಯಲ್ಲಿ, ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರವು 8ನೇ ಶೆಡ್ಯೂಲ್‌ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು…

Read More

ಸಿದ್ದಾಪುರ ಡಿ.23 NEWS DESK : ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5s ಫುಟ್ಬಾಲ್ ಪಂದ್ಯಾವಳಿ ಜ.9, 10 ಮತ್ತು 11 ರಂದು ಪಾಲಿಬೆಟ್ಟ ಮೈದಾನದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಯಂಗ್ ಇಂಡಿಯಾ ಯೂಥ್ ಕ್ಲಬ್ ಅಧ್ಯಕ್ಷ ಪಿ.ಎ.ಸಲೀಂ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮೂವತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ತಂಡಗಳ ನೋಂದಾವಣೆ ಕಾರ್ಯ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಗ್ಯಾಲರಿಯಲ್ಲಿ ನಡೆಯಲಿದ್ದು,  ಮೈದಾನದ ಸಿದ್ಧತೆಗೆ ಟಾಟಾ ಕಾಫಿ ಸಂಸ್ಥೆ ಹೆಚ್ಚಿನ ಸಹಕಾರ ನೀಡುತ್ತಿದೆ.  ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ದಾನಿಗಳು ಗಣ್ಯರು, ಹಿರಿಯ ಆಟಗಾರರು ಆಗಮಿಸಲಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ  ಮುಹಮ್ಮದ್ ಶಮೀಲ್ ಮಾತನಾಡಿ, 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯೂತ್ ಕ್ಲಬ್…

Read More

ಮಡಿಕೇರಿ ಡಿ.23 NEWS DESK : ಕೊಡಗಿನ ಹಿರಿಯ ಜಾನಪದ ಕಲಾವಿದರಾದ ಕುಡಿಯ ಸಮುದಾಯದ ಅಮ್ಮಣಿ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವ ಪ್ರಸಾದ್ ಹಾಗೂ ರಿಜಿಸ್ಟ್ರಾರ್ ಎನ್.ನಮೃತ ಅವರು ಇಂದು ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳನ್ನು ಘೋಷಿಸಿದ್ದಾರೆ. ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಹೆಗ್ಗಳ ಸಮೀಪದ ತೋರ ಗ್ರಾಮದ ಅಮ್ಮಣಿ ಅವರು ‘ಕುಡಿಯ ಜನಾಂಗದ ಹಾಡುಗಾರಿಕೆ ಮತ್ತು ಸೂಲಗಿತ್ತಿ’ ವಿಭಾಗಕ್ಕೆ ಸಂಬಂಧಿಸಿದಂತೆ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಕೊಡಗಿನ ಕುಡಿಯ ಸಮಾಜಕ್ಕೆ ಸೇರಿದ 60 ವರ್ಷದ ಅಮ್ಮಣಿ ಅವರು ಪತಿ ಭೀಮಯ್ಯ ಅವರೊಂದಿಗೆ ತೋರದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿಕೊಂಡು ಬದುಕು ಕಟ್ಟಿಕೊಂಡವರು. ಇವರು ಕಳೆದ ನಾಲ್ಕು ದಶಕಗಳಿಂದ ಕುಡಿಯ ಸಮೂಹದ ವಿಶಿಷ್ಟ ಸಂಸ್ಕøತಿಯ ಜಾನಪದ ಹಾಡು ಮತ್ತು ಕುಣಿತವನ್ನು ರಕ್ತಗತ ಮಾಡಿಕೊಂಡು ಅದನ್ನು ಯುವ ಸಮೂಹಕ್ಕೆ ತಲುಪಿಸುವ ಮಹತ್ತರ ಕಾರ್ಯವನ್ನು ಮಾಡುತ್ತಿದ್ದಾರೆ. ಅಮ್ಮಣಿ ಅವರು ಸೂಲಗಿತ್ತಿಯಾಗಿಯೂ ಸೇವೆ ಸಲ್ಲಿಸಿರುವುದು ವಿಶೇಷ. ಇವರ…

Read More

ಮಡಿಕೇರಿ ಡಿ.23 NEWS DESK : ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಪಿ.ಜಿ.ಮಾನಸ ಮತ್ತು ಎ.ಮಾನಸ ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ ತೃತೀಯ ಸ್ಥಾನ ಪಡೆದರು. ಸ್ಪರ್ಧೆಯನ್ನು ಪೊಕ್‍ಲಂಡ್ರ ಪ್ರಹ್ಲಾದ್ ಅವರು ನಡೆಸಿಕೊಟ್ಟರು. ರಸಪ್ರಶ್ನೆಯು ಎರಡು ಹಂತದಲ್ಲಿ ನಡೆಯಿತು. ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಅರ್ಹತೆ ಪಡೆದ 8 ತಂಡಗಳಿಗೆ ಮೌಖಿಕ ಪ್ರಶ್ನೋತರದ ಮೂಲಕ ವಿವಿಧ ವಿಷಯಗಳ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳಲ್ಲಿ ಜ್ಞಾನ ಅರಿವನ್ನು ಹೆಚ್ಚಿಸಲು ಪ್ರಯತ್ನಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡಲಾಯಿತು. ಭಾರತಿ ವಿದ್ಯಾಸಂಸ್ಥೆಯ ಮಳ್ಳಂದೀರ ಕೃಷ್ಣರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಲ್ಲಿ…

Read More

ಮಡಿಕೇರಿ ಡಿ.23 NEWS DESK : ತಾಲ್ಲೂಕಿನ ಊರುಬೈಲು ಬಳಿ 43 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಿರು ಸೇತುವೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ನಂತರ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಬಳಿಕ ಮಾತನಾಡಿದ ಶಾಸಕರು ಮಳೆಗಾಲದಲ್ಲಿ ತುಂಬಾ ತೊಂದರೆ ಅನುಭವಿಸುವ ಗ್ರಾಮಸ್ಥರ ಅನುಕೂಲಕ್ಕಾಗಿ ಕಿರು ಸೇತುವೆಯನ್ನು ಶಾಸಕರ ನಿಧಿಯಿಂದ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಸೇತುವೆ, ಸಾರಿಗೆ ಸಂಪರ್ಕ ಮತ್ತಿತರ ಕನಿಷ್ಠ ಸೌಲಭ್ಯಗಳು ಅತ್ಯಗತ್ಯ. ಆ ನಿಟ್ಟಿನಲ್ಲಿ ಮೂಲ ಸೌಲಭ್ಯ ಒದಗಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಬಳಿಕ ಅನ್ಯಾಳ ಭಾಗದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೈಗೊಳ್ಳಲಾಗುವ ತಡೆಗೋಡೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಇದೇ ಸಂದರ್ಭ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು. ಚೆಂಬು ಸರ್ಕಾರಿ ಹಿರಿಯ…

Read More