ಲೇಖಕ: admin

ಬಾಳೆಲೆ, NEWS DESK ಸೆ.15: ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನಡೆದ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಸರ್ವದೈವತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ಅವರು ತರಬೇತಿ ನೀಡಿದ್ದರು.

Read More

ಸಂಪಾಜೆ, NEWS DESK ಸೆ.15: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಸಂಪಾಜೆಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಪಂಚಲಿಂಗೇಶ್ವರ ದೇವರ ದರ್ಶನ ಪಡೆದು ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Read More

ಪೊನ್ನಂಪೇಟೆ, NEWS DESK ಸೆ.15: ಕೊಡಗು ಜಿಲ್ಲೆಯಲ್ಲಿ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ಅವಕಾಶ ಕಲ್ಪಿಸುವ ಉದ್ದೇಶದಿಂದ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಪೊನ್ನಂಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ರೀಡಾ ಕೇಂದ್ರ ನಿರ್ಮಾಣಕ್ಕೆ ರಾಜ್ಯ ಬಜೆಟ್‌ನಲ್ಲಿ ₹30 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ಧವಾಗಿದ್ದು, ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ಅನುದಾನ ನೀಡುವ ಭರವಸೆ ದೊರೆತಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಗುದ್ದಲಿಪೂಜೆ ಮುಂದೂಡಲಾಗಿದ್ದರೂ ಕಾಮಗಾರಿ ಸ್ಥಗಿತಗೊಳಿಸದೆ ಮುಂದುವರಿಸಲಾಗುತ್ತಿದೆ ಎಂದು ತಿಳಿಸಿದರು. ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬಾಸ್ಕೆಟ್‌ಬಾಲ್ ಕೋರ್ಟ್ ನಿರ್ಮಾಣ ಪೂರ್ಣಗೊಂಡಿದ್ದು, ಅದನ್ನು ಒಳಾಂಗಣ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಲು ₹1 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಲ್ಲೆಯ ವಿವಿಧ ಕ್ರೀಡಾ ಯೋಜನೆಗಳಿಗೂ ಅಗತ್ಯ ಅನುದಾನ ಒದಗಿಸಲಾಗುತ್ತಿದೆ ಎಂದರು. ಕೊಡಗು ಜಿಲ್ಲೆ ಕ್ರೀಡೆಗೆ ಹೆಸರುವಾಸಿಯಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯನ್ನು…

Read More

ಸಂಪಾಜೆ, NEWS DESK ಸೆ.15: ಸಂಪಾಜೆ ಭಾಗದ ಬಿಜೆಪಿ ಮುಖಂಡರಾಗಿದ್ದ ದಿವಂಗತ ಕೆದಂಬಾಡಿ ಜಗದೀಶ್ ಅವರ ನಿವಾಸಕ್ಕೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ದಿವಂಗತ ಜಗದೀಶ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪೊನ್ನಣ್ಣ ಅವರು, ಕುಟುಂಬಸ್ಥರೊಂದಿಗೆ ದುಃಖ ಹಂಚಿಕೊಂಡರು. ಜಗದೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

Read More

ವಿರಾಜಪೇಟೆ ಸೆ.15 NEWS DESK : ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ವಿರಾಜಪೇಟೆ ಪುರಸಭೆಯು 2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ಪ್ಲಾಸ್ಟಿಕ್ ನೀರಿನ ಬಾಟಲ್‌ಗಳ ಬಳಕೆ, ಸಂಗ್ರಹಣೆ ಹಾಗೂ ಮಾರಾಟವನ್ನು ನಿಷೇಧಿಸಿರುವ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಅವರು ಹೊರಡಿಸಿರುವ ಸಾರ್ವಜನಿಕ ಪ್ರಕಟಣೆಯ ಪ್ರಕಾರ, ಸರ್ಕಾರ ಈಗಾಗಲೇ ನಿಷೇಧಿಸಿರುವ ವಿವಿಧ ಪ್ಲಾಸ್ಟಿಕ್ ವಸ್ತುಗಳ ಜೊತೆಗೆ, ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ಬಳಕೆ, ಶೇಖರಣೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಲಾಗಿದೆ. ಆದರೆ, ಪರಿಸರ ಸಂರಕ್ಷಣೆಯ ಉದ್ದೇಶವನ್ನು ಸಾರ್ವಜನಿಕರು ಸ್ವಾಗತಿಸಿದರೂ, ಕೇವಲ 2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ಮೇಲೆ ಮಾತ್ರ ನಿರ್ಬಂಧ ಹೇರಿರುವುದು ಎಷ್ಟು ಸಮಂಜಸ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಯಾಣಿಕರು, ಪ್ರವಾಸಿಗರು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸಾಮಾನ್ಯ ಜನರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 500 ಮಿ.ಲೀ., 1…

Read More

ಮಡಿಕೇರಿ, ಸೆ.15 NEWS DESK : ಭಾರತವು ವಿಶ್ವದಲ್ಲೇ ಬೃಹತ್ ಲಿಖಿತ ಸಂವಿಧಾನವನ್ನು ಹೊಂದಿದ್ದು, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತದ ಸಂವಿಧಾನವು ಮೂಲತಃ 395 ವಿಧಿಗಳನ್ನು ಒಳಗೊಂಡಿದ್ದು, ಪ್ರಸ್ತುತ 25 ಭಾಗಗಳು, 12 ಅನುಸೂಚಿಗಳು ಸೇರಿದಂತೆ ಬೃಹತ್ ಸಂವಿಧಾನವಾಗಿ ರೂಪುಗೊಂಡಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವದ ಬಗ್ಗೆ ಅಧ್ಯಯನ ಮಾಡುವುದರ ಜೊತೆಗೆ ಮೂಲಭೂತ ಹಕ್ಕುಗಳನ್ನು ಅರಿತುಕೊಂಡು ಕರ್ತವ್ಯಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸರ್ಕಾರ ಯುವ ಸಂಸತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.…

Read More

ಸುಂಟಿಕೊಪ್ಪ, ಸೆ.15 NEWS DESK : ಸುಂಟಿಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿವಿಧ ಸಂಘ-ಸಮಿತಿಗಳ ವತಿಯಿಂದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಮಿತಿ ವತಿಯಿಂದ 8ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಸೋಮವಾರ ಬೆಳಿಗ್ಗೆ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಕೊಡಗರಹಳ್ಳಿ ಬೈತೂರಪ್ಪ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಮೀಪದ 7ನೇ ಹೊಸಕೋಟೆಯ ಗೆಳೆಯರ ಬಳಗದ ವತಿಯಿಂದ 41ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಎಮ್ಮೆಗುಂಡಿ ಶ್ರೀ ಬಾಲಗಣಪತಿ ಮಿತ್ರ ಮಂಡಳಿ ವತಿಯಿಂದ 2ನೇ ವರ್ಷದ ಗೌರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸುಂಟಿಕೊಪ್ಪದ ಅಯ್ಯಪ್ಪ ಸ್ವಾಮಿ ದೇವಾಲಯದ ಅರ್ಚಕ ಗಣೇಶ್ ಭಟ್ ಅವರ ನೇತೃತ್ವದಲ್ಲಿ ಗಣಹೋಮ ಹಾಗೂ ವಿಶೇಷ ಪೂಜಾ ವಿಧಿ-ವಿಧಾನಗಳು ನೆರವೇರಿದವು. ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು.…

Read More

ಮಡಿಕೇರಿ ಸೆ.15 NEWS DESK : ಮಡಿಕೇರಿಯಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘ 2025-26ನೇ ಸಾಲಿಗೆ 54.60 ರೂ. ಲಕ್ಷ ನಿವ್ವಳ ಲಾಭವನ್ನು ಗಳಿಸಿದ್ದು, ಸದಸ್ಯರಿಗೆ ಶೇ.7ರ ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಮಹಾಸಭೆ ಸೆ.20ರಂದು ನಗರದ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ ಎಂದರು. ಕಳೆದ ಆರ್ಥಿಕ ಸಾಲಿನಲ್ಲಿ ಸಂಘ 24 ಲಕ್ಷ ರೂ. ನಿವ್ವಳಲಾಭ ಗಳಿಸಿತ್ತು, ಈ ಸಾಲಿನಲ್ಲಿ ದುಪ್ಪಟ್ಟು ಲಾಭ ಗಳಿಸಿದೆ. ಸಂಘವು 1925 ರಲ್ಲಿ ಸ್ಥಾಪನೆಯಾಗಿ ಶತಮಾನೋತ್ಸವವನ್ನು ಈಗಾಗಲೆ ಆಚರಿಸಿಕೊಂಡಿದೆ. ಸಂಘದಲ್ಲಿ ಪ್ರಸ್ತುತ 2276 ಸದಸ್ಯರುಗಳಿದ್ದು, ವಾರ್ಷಿಕ ವಹಿವಾಟು 49.81 ಕೋಟಿ ರೂ.ಗಳಷ್ಟಿದೆ. ಸದಸ್ಯರ ಷೇರು ಬಂಡವಾಳ 2.95 ಕೋಟಿ ರೂ.ಗಳಾಗಿದ್ದು, 13.69 ಕೋಟಿಯಷ್ಟು ಠೇವಣಿಗಳಿದೆ. ದುಡಿಯುವ ಬಂಡವಾಳ 18.37 ಲಕ್ಷ ಗಳಿದ್ದು, 15 ಕೋಟಿಗೂ ಹೆಚ್ಚಿನ ಸಾಲವನ್ನು ನೀಡಲಾಗಿದ್ದು, ಒಟ್ಟಾಗಿ 2.21 ಲಕ್ಷ ಆದಾಯವನ್ನು…

Read More

ಮಡಿಕೇರಿ ಸೆ.15 NEWS DESK : ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಭೌಗೋಳಿಕ ಸ್ವಾಯತ್ತತೆ ಹಾಗೂ ವಿಶೇಷ ರಾಜಕೀಯ ಸ್ಥಾನಮಾನ ನೀಡುವ ಬೇಡಿಕೆ ಮತ್ತು ಮುಂದೆ ಇದರಿಂದಾಗುವ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯವನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ಸಂವಿಧಾನಾತ್ಮಕ ಕರ್ತವ್ಯವೆಂದು ಭಾವಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗು ಯಾವುದೇ ಒಂದು ಸಮುದಾಯಕ್ಕೆ ಸೇರಿದ ಪ್ರದೇಶವಲ್ಲ. ಕೊಡಗಿನ ನೆಲದಲ್ಲಿ ತಲೆತಲಾಂತರಗಳಿಂದ ಕೊಡವರು, ಅರೆಭಾಷಿಕ ಗೌಡ ಸಮೂಹ ಸೇರಿದಂತೆ ವಿವಿಧ ಸಮುದಾಯಗಳು ಸಹಬಾಳ್ವೆಯನ್ನು ನಡೆಸಿಕೊಂಡು ಬರುತ್ತಿವೆ. ಈ ಸಮುದಾಯಗಳ ಹಕ್ಕು, ಗೌರವ ಮತ್ತು ಅಸ್ತಿತ್ವವನ್ನು ನಾವು ಎಂದಿಗೂ ಗೌರವಿಸುವುದಾಗಿ ತಿಳಿಸಿದರು. ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ರಾಜಕೀಯ ಆಡಳಿತಾತ್ಮಕ ಅಧಿಕಾರಗಳನ್ನು ನೀಡುವ ಬೇಡಿಕೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಅದರ ಪರಿಣಾಮಗಳು ಜಿಲ್ಲೆಯಲ್ಲಿ ನೆಲೆಸಿರುವ ವಿವಿಧ ಸಮುದಾಯಗಳ ಮೇಲೆ ಹೇಗಿರಬಹುದು ಎನ್ನುವುದನ್ನು ಪ್ರಶ್ನಿಸುವುದು ನಮ್ಮ ಸಂವಿಧಾನಾತ್ಮಕ ಕರ್ತವ್ಯವಾಗಿದೆ.…

Read More

ಸುಂಟಿಕೊಪ್ಪ, NEWS DESK ಸೆ. 15: ಸುಂಟಿಕೊಪ್ಪದ ಶ್ರೀದೇವಿ ನಾರ್ಗಾಣೆ ಗ್ರಾಮ ಹಾಗೂ ಪಂಪ್‌ಹೌಸ್ ರಸ್ತೆಯ ಅಂಬೇಡ್ಕರ್ ನಗರದಲ್ಲಿ ಶ್ರೀ ವಿನಾಯಕ ಸೇವಾ ಸಮಿತಿ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿಯ ವತಿಯಿಂದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಶ್ರೀದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿಯ 13ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಅಣ್ಣಪ್ಪಸ್ವಾಮಿ ದೇವಸ್ಥಾನದಲ್ಲಿ ಶ್ರೀ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಸೋಮವಾರ ಬೆಳಿಗ್ಗೆ ಗಿರಿಯಪ್ಪ ಅವರ ಮನೆಯ ಗೌರಮ್ಮ ಬಾವಿಯಿಂದ ಗಂಗಾಜಲವನ್ನು ನಾದಸ್ವರ ವಾದನಗಳೊಂದಿಗೆ ಮೆರವಣಿಗೆ ಮೂಲಕ ದೇವಾಲಯಕ್ಕೆ ತಂದು ಗೌರಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬೆಳಿಗ್ಗೆ 10.30ಕ್ಕೆ ಗಣಹೋಮದೊಂದಿಗೆ ವಿಶೇಷ ಪೂಜಾ ಕೈಂಕರ್ಯಗಳು ಆರಂಭಗೊಂಡು, 11.30 ಗಂಟೆಗೆ ತುಲಾ ಲಗ್ನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಹಿರಿಯ ಕೆದಕಲ್ ಈಶ್ವರ ಮಹಾದೇವ ದೇವಾಲಯದ ಅರ್ಚಕರಾದ ಲೋಕೇಶ್ ಆರಾಧ್ಯ ಹಾಗೂ ಅವಿನಾಶ್ ಆರಾಧ್ಯ ಅವರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಮಹಾಮಂಗಳಾರತಿಯ ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ…

Read More