ಲೇಖಕ: admin

ಸುಂಟಿಕೊಪ್ಪ ಡಿ.22 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಹೆಚ್‍ಎಸ್ ಅವರಿಗೆ ಮುಂಬೈನಲ್ಲಿ ಬಾಲಿವುಡ್ ಸಿನಿ ತಾರೆ ಮಿಸ್ ಮಲೈಕಾ ಅರೋರಾ ಅವರು ಟೆಸ್ಕಾನ್-2025 ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಲೆಪ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಎಚ್‍ಎಸ್ ತಮ್ಮ ಸೇನಾ ಸೇವಾಧಿಯಲ್ಲಿ ಅತ್ಯುತ್ತಮ ಸೇವೆಗಾಗಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದು, ಈ ಪೈಕಿ ಕಾರ್ಗಿಲ್ ಸಮರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಸೇನಾ ಮೆಡಲ್ ಶೌರ್ಯ ಪ್ರಶಸ್ತಿಯನ್ನು ಪಡೆದಿರುವುದು ಉಲ್ಲೇಖಾರ್ಹ. ಡಾ. ಪ್ರಸಾದ್ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಅವರ ವೈಧ್ಯರಾಗಿ ಸರಿ ಸುಮಾರು 1 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನಾ ಪಡೆಯ ವೈದಕೀಯ ವಿಭಾಗದ ಮಹಾ ನಿರ್ದೇಶಕರಾಗಿದ್ದಾಗ ಅಂದಿನ ರಾಷ್ಟ್ರಪತಿ ಭಾರತ ರತ್ನ ಪ್ರಣಬ್‍ಮುಖರ್ಜಿಯವರ ಗೌರವ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನು ಗುರುತಿಸಿ ಭಾರತೀಯ ಸೇನಾ ಪಡೆಯ…

Read More

ಸುಂಟಿಕೊಪ್ಪ ಡಿ.22 NEWS DESK : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಪಲ್ಸ್‍ಪೊಲಿಯೋ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸುಂಟಿಕೊಪ್ಪದ ಪ್ರಥಮ ಪ್ರಜೆ ಸುಂಟಿಕೊಪ್ಪ ಗ್ರೇಡ್ 1 ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅವರು ಗದ್ದೆಹಳ್ಳದ ಅಂಗನವಾಡಿಯಲ್ಲಿ ದಿನದ ಮೊದಲ ಪಲ್ಸ್‍ಪೊಲಿಯೋ ಹನಿಯನ್ನು ನೀಡಿದರು. ನಂತರ ಸುಂಟಿಕೊಪ್ಪ ಬಸ್‍ನಿಲ್ಧಾಣದಲ್ಲಿ ನಡೆದ ಪಲ್ಸ್‍ಪೊಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿ, ಶ್ರೀದೇವಿ ಬಡಾವಣೆ ಮತ್ತು ಸುಂಟಿಕೊಪ್ಪ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Read More

ಸುಂಟಿಕೊಪ್ಪ ಡಿ.22 NEWS DESK : ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಬಿಳಿಗೇರಿ ಗ್ರಾಮದವರಾದ ನಿವೃತ್ತ ಲೆಪ್ಟಿನೆಂಟ್ ಜನರಲ್ ಡಾ. ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಹೆಚ್‍ಎಸ್ ಅವರಿಗೆ ಥೋರಾಸಿಕ್ ಎಂಡೋ ಸ್ಕೋಪಿ ಸೊಸೈಟಿ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ರಾಷ್ಟ್ರಮಟ್ಟದ ಜೀವಮಾನ ಸಾಧನೆ ಪ್ರಶಸ್ತಿ 2025 ನೀಡಿ ಗೌರವಿಸಲಾಗಿದೆ. ಲೆಪ್ಟಿನೆಂಟ್ ಜನರಲ್ ಡಾ.ಬಿ.ಎನ್.ಬಿ.ಎಂ.ಪ್ರಸಾದ್ ಎಸ್‍ಎಂವಿಎಸ್‍ಎಂ ಪಿಎಚ್‍ಎಸ್ ತಮ್ಮ ಸೇನಾ ಸೇವಾಧಿಯಲ್ಲಿ ಅತ್ಯುತ್ತಮ ಸೇವೆಗಾಗಿ ಹತ್ತು ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದು, ಈ ಪೈಕಿ ಕಾರ್ಗಿಲ್ ಸಮರದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಹಿನ್ನಲೆಯಲ್ಲಿ ಸೇನಾ ಮೆಡಲ್ ಶೌರ್ಯ ಪ್ರಶಸ್ತಿಯನ್ನು ಪಡೆದಿರುವುದು ಉಲ್ಲೇಖಾರ್ಹ. ಡಾ. ಪ್ರಸಾದ್ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಅವರ ವೈಧ್ಯರಾಗಿ ಸರಿ ಸುಮಾರು 1 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಭಾರತೀಯ ಸೇನಾ ಪಡೆಯ ವೈದಕೀಯ ವಿಭಾಗದ ಮಹಾ ನಿರ್ದೇಶಕರಾಗಿದ್ದಾಗ ಅಂದಿನ ರಾಷ್ಟ್ರಪತಿ ಭಾರತ ರತ್ನ ಪ್ರಣಬ್‍ಮುಖರ್ಜಿಯವರ ಗೌರವ ಸರ್ಜನ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದನ್ನು ಗುರುತಿಸಿ ಭಾರತೀಯ ಸೇನಾ…

Read More

ನಾಪೋಕ್ಲು ಡಿ.22 NEWS DESK : ಮೈಸೂರಿನ ಹೂಟಗಳ್ಳಿ ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘದ 11ನೇ ವರ್ಷದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಪೊನ್ನಚ್ಚನ ಪಿ.ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌಡ ಸಮಾಜ ಸಭಾಂಗಣದಲ್ಲಿ ನಡೆದ ಮಹಾಸಭೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಉಪಾಧ್ಯಕ್ಷರಾದ ಡಾ.ರಾಜೇಶ್ ತೇನನ ಮತ್ತು ದೇವಜನ ಗೀತಾ ಮೊಂಟಡ್ಕ ಉದ್ಘಾಟಿಸಿದರು. ಸಂಘದ ಉಪಾಧ್ಯಕ್ಷರಾದ ಬೆಪ್ಪುರನ ಲವ, ಕಾರ್ಯದರ್ಶಿ ಮುಕ್ಕಾಟಿ ಅರುಣ, ಸಹ ಕಾರ್ಯದರ್ಶಿ ಹೊಸೋಕ್ಲು ಅಪ್ಪಯ್ಯ, ಖಜಾಂಚಿ ಎಡಿಕೇರಿ ಪೂಣಚ್ಚ, ಸಲಹಾ ಸೂಚಕರಾಗಿ ನಡುಮನೆ ಚಂಗಪ್ಪ ಮತ್ತು ಚೆಟ್ಟಿಮಾಡ ಜನಾರ್ಧನ, ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿಶೇಷ ಸಾಧಕರಾದ ಕುಯ್ಯಮುಡಿ ಗೀತಾ ಹಾಗೂ ಸಂಘದ ಹಿರಿಯ ನಾಗರಿಕರಾದ ದಾಯನ ಬಾಲಕೃಷ್ಣ ಮತ್ತು ನಾಟೋಳನ ಭವಾನಿ ಮಾಚಯ್ಯ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಸಂಘದ ಶ್ರೇಯೋಭಿವೃದ್ಧಿಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆದು…

Read More

ನಾಪೋಕ್ಲು ಡಿ.22 NEWS DESK : ಹಳೇತಾಲ್ಲೂಕು ಅಂಗನವಾಡಿ ಕೇಂದ್ರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು. ಹಳೇತಾಲ್ಲೂಕು ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಸದಸ್ಯರು, ಸ್ಥಳ ದಾನಿಗಳಾದ ಕುಲ್ಲೇಟಿರ ಅರುಣ ಬೇಬ, ಪಂಚಾಯತ್ ಸದಸ್ಯರಾದ ಹೇಮಾ ಅರುಣ್ ಮತ್ತು ಪೊಲೀಸ್ ಠಾಣೆಯ ಮುಖ್ಯಪೇದೆ ರಾಮಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಲ್ಲೇಟಿರ ಅರುಣ ಬೇಬ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಪೋಲಿಯೋ ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿ ಶುಭ ಹಾರೈಸಿದರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತಯಾರಾದ ಭಾಗ್ಯವತಿ, ಪವಿತ್ರ, ಸುಜಾತಾ, ಆಶಾ ಕಾರ್ಯಕರ್ತರಾದ ರಮ್ಯ ಹಾಗೂ ಪೋಷಕರು ಮಕ್ಕಳು ಹಾಜರಾಗಿದ್ದರು. ವರದಿ : ದುಗ್ಗಳ ಸದಾನಂದ.

Read More

ಕಾರ್ಕಳ ಡಿ.22 NEWS DESK : ಕರಾವಳಿಯ ಶ್ರೀಮಂತ ಜಾನಪದ ಸಂಸ್ಕೃತಿಗೆ ವೈಚಾರಿಕ ಆಯಾಮ ನೀಡುವ ಮಹತ್ವದ ಸಂಶೋಧನಾ ಕೃತಿಯಾದ “ಭೂತಾರಾಧನೆ ಮಾಯದ ನಡೆ ಜೋಗದ ನುಡಿ” ಕೃತಿಯ ಬಿಡುಗಡೆ ಸಮಾರಂಭವು ಕ್ರಿಯೇಟಿವ್ ಪುಸ್ತಕ ಮನೆ, ಕಾರ್ಕಳ ಮತ್ತು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಎಲ್.ಎಫ್. ರಸ್ಕಿನ್ಹ ಸಭಾಂಗಣದಲ್ಲಿ ನಡೆಯಿತು. ಕೃತಿಯನ್ನು ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರು ಅನಾವರಣಗೊಳಿಸಿ ಮಾತನಾಡಿ, ಭೂತಾರಾಧನೆ ಕೇವಲ ಆಚರಣೆಯಲ್ಲ. ಅದು ಸಮುದಾಯದ ಸ್ಮೃತಿ, ನಂಬಿಕೆ ಮತ್ತು ಬದುಕಿನ ದರ್ಶನ ಎಂದು ಅಭಿಪ್ರಾಯಪಟ್ಟರು. ಡಾ. ಕೆ.ಚಿನ್ನಪ್ಪ ಗೌಡರ ಈ ಕೃತಿ ಜಾನಪದ ಅಧ್ಯಯನ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದರು.ಕೃತಿ ಅವಲೋಕನವನ್ನು ಡಾ. ರಾಜಶೇಖರ್ ಹಳೆಮನೆ ಅವರು ನಡೆಸಿ, ಭೂತಾರಾಧನೆಯ ಆಚರಣೆ, ನುಡಿ, ನಡೆ ಮತ್ತು ಸಮಾಜದ ಒಳಹೊಮ್ಮುಗಳನ್ನು ವೈಜ್ಞಾನಿಕ ದೃಷ್ಟಿಯಿಂದ ದಾಖಲಿಸುವ ಗಂಭೀರ ಸಂಶೋಧನಾ…

Read More

ನಾಪೋಕ್ಲು ಡಿ.22 NEWS DESK : ಜಾನುವಾರಗಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೊಂದು ತಿಂದ ಘಟನೆ ಅಯ್ಯಂಗೇರಿ ಗ್ರಾಮದಲ್ಲಿ ನಡೆದಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಅಯ್ಯಂಗೇರಿ ಗ್ರಾಮದ ನಿವಾಸಿ ಮಹಮ್ಮದ್ ಪಳ್ಳಿ ಎಂಬವರು ತಮ್ಮ ಜಾನುವಾರುಗಳನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಸಂದರ್ಭ ಬೀದಿ ನಾಯಿಗಳು ಜಾನುವಾರುಗಳ ಮೇಲೆ ದಾಳಿ ನಡೆಸಿ, ಹಸುವನ್ನು ಕೊಂದು ಬಹುತೇಕ ಭಾಗಗಳನ್ನು ತಿಂದು ಹಾಕಿವೆ. ಮೂರು ನಾಲ್ಕು ಜಾನುವಾರುಗಳಿಗೆ ಗಾಯಗಳಾಗಿವೆ. ಸ್ಥಳಕ್ಕೆ ಬಲ್ಲಮಾವಟ್ಟಿ ಪಶುವೈದ್ಯ ಡಾ.ಚೇತನ್ ಭೇಟಿ ನೀಡಿ ಗಾಯಗಳಿಗೊಳಗಾದ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ನೀಡಿ, ಪ್ರಕರಣವನ್ನು ದಾಖಲಿಸಿಕೊಂಡರು. ಈ ಭಾಗದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಈಗಾಗಲೇ ಕೆಲವು ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಹಚ್ಚಿದ ಘಟನೆಗಳು ಪುನರಾವರ್ತನೆಯಾಗುತ್ತಿದೆ. ಇದರಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಇನ್ನಷ್ಟು ಜೀವ ಹಾನಿ ಆಗುವ ಮೊದಲು ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಬೀದಿ ನಾಯಿಗಳನ್ನು ನಿಯಂತ್ರಿಸಬೇಕು, ಹಸುವನ್ನು ಕಳೆದುಕೊಂಡ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ವರದಿ…

Read More

ಮಡಿಕೇರಿ ಡಿ.22 NEWS DESK : ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್ ಮತ್ತು ಅನಂತಶಯನ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.

Read More

ಕೊಡ್ಲಿಪೇಟೆ ಡಿ.22 NEWS DESK : ವಿಶ್ವ ಆರೋಗ್ಯ ಸಂಸ್ಥೆಯು ಪೋಲಿಯೋ ಮುಕ್ತ ರಾಷ್ಟ್ರ ಎಂದು ಭಾರತವನ್ನು ಘೋಷಿಸಿದ್ದು, ಇದು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಬಹು ದೊಡ್ಡ ಗೆಲುವು ಸಾಧಿಸಿದ ದೇಶ ನಮ್ಮ ಭಾರತ ಎಂಬ ಗರಿಮೆ ಪಾತ್ರವಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ.ಜ಼ಮೀರ್ ಅಹಮದ್ ಅವರು ಶ್ಲಾಘಿಸಿದರು. ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರ್.ಸಿ.ಹೆಚ್., ವಿಭಾಗ, ಕೊಡಗು ಜಿಲ್ಲೆಯ ವತಿಯಿಂದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೋಲಿಯೋ ದಿನ – 2025 ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಉಪನ್ಯಾಸಕರುಗಳಾದ ಡಾ. ಜ಼ಮೀರ್ ಅಹಮದ್, ಡಾ.ನಗ್ಮಾಭಾನು ದಂಪತಿಗಳು ತಮ್ಮ ಮಗನಿಗೆ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಾತನಾಡಿದ ಅವರು, ಡಿ.21 ರಿಂದ 24 ರವರೆಗೆ 4 ದಿನಗಳ ಕಾಲ ‘ರಾಷ್ಟ್ರೀಯ ಪಲ್ಸ್ ಪೋಲಿಯೋ’ ಕಾರ್ಯಕ್ರಮ ಜರುಗಲಿದ್ದು, ಪ್ರಾಥಮಿಕವಾಗಿ ಪುಟ್ಟ ಮಕ್ಕಳ ಮೇಲೆ ಪರಿಣಾಮ ಬೀರುವ…

Read More

ಮಡಿಕೇರಿ ಡಿ.22 NEWS DESK : ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ. ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ನವರು ಎಂದು ನಂತರ ಮಾಹಿತಿ ಪಡೆದು  ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ (ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಖಡಕ್ ಸೂಚನೆ ನೀಡಿದ್ದಾರೆ.  ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ ಆರೋಗ್ಯ ವಿಚಾರಿಸಲು ಪೊನ್ನಣ್ಣ ಅವರು ಆಸ್ಪತ್ರೆಗೆ ಬಂದಾಗ ಪರಿಶಿಷ್ಟ ಪಂಗಡದ ಬಡ ಕುಟುಂಬದ ಪವನ್ ನನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭದಲ್ಲಿ ದಾಖಲಾತಿ ಇಲ್ಲದೆ ಇದ್ದುದರಿಂದ ಎ.ಪಿ.ಎಲ್ ಎಂದು ನಿರ್ಧರಿಸಿ ಬಿಲ್ ಕಟ್ಟಿಸಲಾಗಿತ್ತು.  ನಂತರ ಶಾಲಾ ದಾಖಲಾತಿಯನ್ನು ಸಲ್ಲಿಸಲಾಗಿತ್ತು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ  ತೆನ್ನಿರ ಮೈನಾ  ಶಾಸಕರ ಗಮನಕ್ಕೆ ತಂದರು. ತುರ್ತು ಸಂದರ್ಭದಲ್ಲಿ ಬಡ ರೋಗಿಗಳು…

Read More