ಮಡಿಕೇರಿ ಅ.14 NEWS DESK : ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ನ (ನೀಮಾ) ಕೊಡಗು ಜಿಲ್ಲಾ ಘಟಕದ ವತಿಯಿಂದ ಧನ್ವಂತರಿ ಜಯಂತಿ ಮತ್ತು ಬೆಳ್ಳಿ ಮಹೋತ್ಸವ ಸಮಾರಂಭ ಅ.18 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ನೀಮಾ ಅಧ್ಯಕ್ಷ ಡಾ.ರಾಜಾರಾಮ ಎ.ಆರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶನಿವಾರ ಬೆಳಿಗ್ಗೆ 7 ಗಂಟೆಗೆ ಗಣಪತಿ ಹೋಮ ಮತ್ತು ಧನ್ವಂತರಿ ಹವನ ನಡೆಯಲಿದೆ. 10 ಗಂಟೆಗೆ ಗಣ್ಯರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನೀಮಾದ ಮಾಜಿ ಅಧ್ಯಕ್ಷರು ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಸಹಸ್ರಾಕ್ಷ, ಉಕ್ಕಿನಡ್ಕ ಡಾ.ಜಯ ಗೋವಿಂದ ಯು. ‘ಸಮಾಜದ ಮೇಲೆ ನೀಮಾ’ದ ಪ್ರಭಾವ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಅಲ್ಲದೆ ‘ನೀಮಾ’ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಹೊರ ತರಲಾಗುತ್ತಿರುವ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಿದ್ದಾರೆ. ಬೆಂಗಳೂರು ಕೆಎಯುಪಿಯ ಡಾ.ಎಂ.ಡಿ.ರಫಿ ಹಕೀಂ ಹಾಗೂ ಕೆಎಸ್‍ಬಿ ನೀಮಾ ಅಧ್ಯಕ್ಷರು ಮಾತನಾಡಲಿದ್ದಾರೆ ಎಂದು ಹೇಳಿದ್ದಾರೆ. *ಸನ್ಮಾನ* ತಮ್ಮ…
ಲೇಖಕ: admin
ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನವೆಂಬರ್ 4 2002 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5581 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5558 ಪ್ರಕರಣಗಳು ಇತ್ಯರ್ಥಗೊಂಡಿದೆ. 2025-26 ನೇ ಆರ್ಥಿಕ ಸಾಲಿನಲ್ಲಿ 162 ಪ್ರಕರಣಗಳು ದಾಖಲಾಗಿ, 143 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 23 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.2,50,000 ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ 2025-26 ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ…
ಮಡಿಕೇರಿ ಅ.15 NEWS DESK : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರ(ಪ್ಯಾರ ಲೀಗಲ್ ವಾಲೆಂಟಿಯರ್ಸ್) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗಾಗಿ ಸೇವಾ ಮನೋಭಾವನೆಯಿಂದ ಕೆಲಸ ನಿರ್ವಹಿಸಲು ಹಾಗೂ ಕಾನೂನು ಸೇವಾ ಕೇಂದ್ರ ಮತ್ತು ಸಾಮಾನ್ಯ ಜನರ ನಡುವೆ ಸೇತುವೆಯಾಗಿ ಕೆಲಸ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ಈ ಸೇವೆ ಸಲ್ಲಿಸುವವರಿಗೆ ಯಾವುದೇ ವೇತನ, ಶುಲ್ಕ ಇಲ್ಲದಿದ್ದರು ಕೆಲವೊಮ್ಮೆ ಗೌರವ ಧನಕ್ಕೆ ಅರ್ಹರಾಗಿರುತ್ತಾರೆ. ಅರೆಕಾಲಿಕ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಮಾಜಿ ಸೈನಿಕರು ತಮ್ಮ ಇಚ್ಚೆಯನ್ನು ಅಕ್ಟೋಬರ್, 23 ರೊಳಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ತಿಳಿಸಿದ್ದಾರೆ.
ಕುಶಾಲನಗರ ಅ.15 NEWS DESK : ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಮತ್ತು ಜಿಲ್ಲಾ ಛೇಂಬರ್ ಆಫ್ ಕಾಮರ್ಸ್ ಸಂಘಟನೆ ಹಾಗೂ ಮತ್ತಿತರ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಕೊಡಗು- ಸುಂದರ ಕೊಡಗು: ಸ್ವಚ್ಛತಾ ಅಭಿಯಾನವನ್ನು ಜಿಲ್ಲೆಯ ವಾಣಿಜ್ಯ ನಗರಿಯಾದ ಕುಶಾಲನಗರ ಪಟ್ಟಣದಲ್ಲಿ ವಿವಿಧ ಸಂಘ- ಸಂಸ್ಥೆಗಳು ಹಾಗೂ ನಾಗರಿಕರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಕುಶಾಲನಗರ ಪಟ್ಟಣದಲ್ಲಿಗಣಪತಿ ದೇವಸ್ಥಾನದ ಮುಂಭಾಗದಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಛತೆ ಕುರಿತ ಘೋಷಣೆಗಳು ಹಾಗೂ ಸ್ವಚ್ಚತಾ ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ದಾರಿಯಲ್ಲಿ ಬಿದ್ದಿದ್ದ ಕಸ,ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಮತ್ತಿತರ ಕಸವನ್ನು ಹೆರಕಿ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛ ಮಾಡಲಾಯಿತು. ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು, ಕುಶಾಲನಗರ ಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದರು. ಸ್ವಚ್ಛತಾ ಕಾರ್ಯದ ಉದ್ದೇಶ ಕುರಿತು…
ಪೊನ್ನಂಪೇಟೆ ಅ.15 NEWS DESK : ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು 2024-2025 ನೇ ಸಾಲಿನಲ್ಲಿ ರೂ. 73.10 ಲಕ್ಷ ಮೊತ್ತದ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಕಾಡ್ಯಮಾಡ ಎಸ್. ಭರತ್ ತಿಳಿಸಿದ್ದಾರೆ. ಸಂಘದ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯರು ಕಟ್ಟಿ ಬೆಳೆಸಿ ಭದ್ರಬುನಾದಿ ಹಾಕಿಕೊಟ್ಟ ಕಾನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವು ಸದಸ್ಯರ ಮತ್ತು ಗ್ರಾಹಕರ ನೆರವಿನಿಂದ ಉತ್ತಮವಾಗಿ ನಡೆಯುತ್ತಿದೆ. ಪ್ರಸ್ತುತ ಸದಸ್ಯರಿಗೆ ಶೇ.25 ಡಿವಿಡೆಂಡ್ ನೀಡಲು ನಿರ್ದಾರ ಕೈಗೊಳ್ಳಲಾಗಿದೆ ತಿಳಿಸಿದರು. ಸಂಘದಲ್ಲಿ ಪ್ರಸ್ತುತ ಒಟ್ಟು 1570 ಸದಸ್ಯರಿದ್ದು, ಈ ಸಾಲಿನ ಸಂಘದ ಮಹಾಸಭೆಗೆ ಒಟ್ಟು 1143 ಸದಸ್ಯರು ಪಾಲ್ಗೊಂಡಿದ್ದಾರೆ. ಸಂಘದಲ್ಲಿ 31.03.2025ರ ಅವಧಿಗೆ ರೂ. 1,77,01,000 ಪಾಲು ಬಂಡವಾಳ ಹಾಗು ಸಂಚಯ ಠೇವಣಿ, ನಿರಖು ಠೇವಣಿ . ಪಿಗ್ಮಿ ಠೇವಣಿ ಮತ್ತು ಸಿಬ್ಬಂದಿ ಠೇವಣಿ, ಮರಣ ನಿಧಿ ಸೇರಿ…
ಮಡಿಕೇರಿ NEWS DESK ಅ.15 : ಪಂಚಾಯತ್ ರಾಜ್, ಗ್ರಾಮೀಣ ಅಭಿವೃದ್ಧಿ ಮತ್ತು ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ವೈಫಲ್ಯಗಳನ್ನು ಮರೆಮಾಚಲು ಹಾಗೂ ಕಾಂಗ್ರೆಸ್ ಹೈಕಮಾಂಡ್ ನ್ನು ಮೆಚ್ಚಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಅತ್ಯಂತ ಪ್ರಮುಖ ಖಾತೆಗಳನ್ನು ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಾಗದೆ ವೈಫಲ್ಯವನ್ನು ಕಾಣುತ್ತಿದ್ದಾರೆ. ತಮ್ಮ ಇಲಾಖೆಗಳ ನ್ಯೂನತೆಯನ್ನು ಮರೆಮಾಚಲು ಮತ್ತು ಚರ್ಚೆಯ ದಿಕ್ಕನ್ನು ಬದಲಾಯಿಸುವ ಉದ್ದೇಶದಿಂದ ಆರ್‌ಎಸ್‌ಎಸ್ ವಿರುದ್ಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ, ಅಲ್ಲದೆ ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇವರು ಆರ್‌ಎಸ್‌ಎಸ್ ವಿರುದ್ಧ ಹಲವು ಬಾರಿ ದ್ವೇಷ ಕಾರಿದ್ದಾರೆ. ಆರ್‌ಎಸ್‌ಎಸ್…
ಮಡಿಕೇರಿ ಅ.15 NEWS DESK : ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛ ಕೊಡಗು – ಸುಂದರ ಕೊಡಗು ಹೆಸರಿನ ಸ್ವಚ್ಛತಾ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನೆ ದೊರಕಿದೆ. ಜಿಲ್ಲೆಯ ಎಲ್ಲೆಲ್ಲೂ ಸಾವಿರಾರು ಸಂಖ್ಯೆಯಲ್ಲಿ ವಿವಿಧ ಸಂಘಸಂಸ್ಥೆಗಳ ಸದಸ್ಯರು ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕೊಡಗಿನ ಸ್ವಚ್ಛತೆ ಸಂಬಂಧಿತ ಕಾಳಜಿ ತೋರಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಕಸ ಹೆಕ್ಕುವ ಮೂಲಕ ಸ್ವಚ್ಛ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಶಾಸಕ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು. ಸ್ವಚ್ಛ ಮತ್ತು ಸುಂದರ ಕೊಡಗು ನಿರ್ಮಾಣದ ಜವಾಬ್ದಾರಿ ಜಿಲ್ಲೆಯ ಪ್ರತೀಯೋವ೯ರ ಮೇಲಿದೆ. ಕೊಡಗನ್ನು ಅಸುಚಿತ್ವದಿಂದ ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಸ್ವಚ್ಛತಾ ಆಂದೋಲನದ ಆಯೋಜನೆ ಶ್ಲಾಘನೀಯ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆಯ ಸುಂದರ ಪ್ರಕೃತಿ, ಸಂಪನ್ಮೂಲ…
ಮಡಿಕೇರಿ ಅ.15 NEWS DESK : ಸಮಥ೯ ಕನ್ನಡಿಗರು ಸಂಸ್ಥೆ ವತಿಯಿಂದ ನ.9 ರಂದು ಮಡಿಕೇರಿ ನಗರದ ಓಂಕಾರ ಸದನದಲ್ಲಿ “ನಿಮ್ಮ ಪ್ರತಿಭೆ- ನಮ್ಮ ವೇದಿಕೆ ಹಿಮವನ ಸಾಂಸ್ಕೃತಿಕ ಸಂಗಮ” ಎಂಬ ಸಾಂಸ್ಕೃತಿಕ ಸ್ಪಧಾ೯ ಕಾಯ೯ಕ್ರಮಗಳನ್ನು ಮಹಿಳೆಯರು ಹಾಗೂ ಮಕ್ಕಳಿಗಾಗಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಜಿಲ್ಲಾ ಸಂಚಾಲಕಿ ಕೆ.ಜಯಲಕ್ಷ್ಮಿ ತಿಳಿಸಿದ್ದಾರೆ. :: ಸ್ಪಧೆ೯ಗಳ ವಿವರಗಳು :: ಛದ್ಮವೇಷ ಸ್ಪರ್ಧೆ :: 1 ರಿಂದ 3 ವರ್ಷದ ಮಕ್ಕಳಿಗೆ ಮತ್ತು 4 ರಿಂದ 7 ವರ್ಷದ ಮಕ್ಕಳಿಗೆ ಪ್ರತ್ಯೇಕ ವಿಭಾಗದಲ್ಲಿ. ಹೆಸರು ನೋಂದಣಿಗಾಗಿ ಸಂಪರ್ಕಿಸಬೇಕಾದ ಸಂಖ್ಯೆ : 9902651146 – ಬಿ. ಸಿ. ಶಾಂತಿ ಅಚ್ಚಯ್ಯ., 7022884803 – ಕಡ್ಲೇರ ತುಳಸಿ ಮೋಹನ್. :: ಸಮೂಹ ನೃತ್ಯ :: 8 ರಿಂದ 12 ವರ್ಷದ ಮಕ್ಕಳಿಗೆ. – ನಿಯಮಗಳು. – ತಂಡದಲ್ಲಿ ಕನಿಷ್ಠ 6 ಗರಿಷ್ಠ 10 ಮಕ್ಕಳು ಇರಬೇಕು. ಹಾಡು ಕನ್ನಡದ್ದೇ ಆಗಿರಬೇಕು. ಸಮಯ 4 ನಿಮಿಷ. ಹೆಸರು ನೋಂದಣಿಗಾಗಿ ಸಂಪರ್ಕಿಸಿ,…
ಮಡಿಕೇರಿ ಅ.15 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್, ರೋಟರಿ ಲಯನ್ಸ್ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಗದಲ್ಲಿ ನಡೆದ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಕೈಜೋಡಿಸಿದ್ದಾರೆ. ನಗರದ ಜನರಲ್ ತಿಮ್ಮಯ್ಯ ವೃತ್ತದಿಂದ ಖಾಸಗಿ ಬಸ್ ನಿಲ್ದಾಣದವರೆಗೆ ರಸ್ತೆಗಳಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಿದ್ಯಾರ್ಥಿಗಳು ಹೆಕ್ಕಿ ಸ್ವಚ್ಛಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಮಾತನಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿದರು. ಅಭಿಯಾನದಲ್ಲಿ ಕಾಲೇಜಿನ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಕೆ.ಪಿ.ನಾಗರಾಜ್, ಎನ್‌ಎಸ್‌ಎಸ್ ಯೋಜನಾಧಿಕಾರಿಗಳಾದ ಡಾ.ಶೈಲಶ್ರೀ ಕೆ ಹಾಗೂ ಅಲೋಕ್ ಬಿ.ಜೈ, ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕರು ಹಾಗೂ 70ಕ್ಕೂ ಹೆಚ್ಚು ಸ್ವಯಂಸೇವಕರು ಪಾಲ್ಗೊಂಡಿದ್ದರು.
ಮಡಿಕೇರಿ ಅ.15 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನದ ಅಂಗವಾಗಿ ಮಡಿಕೇರಿ ವಿಪತ್ತು ನಿರ್ವಾಹಣ ಘಟಕದ ಶೌರ್ಯ ತಂಡದಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಮಡಿಕೇರಿ ಭಗವತಿ ನಗರದ ಅಂಗನವಾಡಿ ಕೇಂದ್ರದ ಸುತ್ತ ಬೆಳೆದಿದ್ದ ಗಿಡ ಗಂಟಿಗಳನ್ನು ತಂಡದ ಪ್ರಮುಖರು ಹಾಗೂ ಪದಾಧಿಕಾರಿಗಳು ಕಡಿದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ತಂಡದ ಸಂಯೋಜಕಿ ಲೀಲಾ ಶೇಷಮ್ಮ, ಪ್ರೇಮಾ, ಸದಸ್ಯರಾದ ಹರಿಣಾಕ್ಷಿ, ಲತಾ ರಘು, ತಾಜುನೀಸ, ಬಾನು, ತಾರಮಣಿ, ವೀಣಾ, ಶಕ್ತಿಸಂಘದ ಇಂದಿರಾ, ಸರಸ್ವತಿ, ಲೀಲಾವತಿ ರೈ, ಅಂಗನವಾಡಿ ಶಿಕ್ಷಕಿ ಶಶಿ, ಸಹಾಯಕಿ ಮೋಹಿನಿ ಪಾಲ್ಗೊಂಡಿದ್ದರು.






