ಮಡಿಕೇರಿ ಅ.13 NEWS DESK : ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಅತ್ಯುತ್ತಮ ಸ್ಪಂದನ ದೊರಕಿದ್ದು, ಅ. 15 ರಂದು ಸ್ವಚ್ಚತೆ ಸಂಬಂಧಿತ ಬೃಹತ್ ಅಭಿಯಾನ ನಡೆಯಲಿದೆ ಎಂದು ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ತಿಳಿಸಿದ್ದಾರೆ. ಕೂಗ್೯ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ನೇತೃತ್ವದಲ್ಲಿ ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಚೇಂಬರ್ ಆಫ್ ಕಾಮಸ್೯, ಕೊಡಗು ಹೋಂಸ್ಟೇ ಅಸೋಸಿಯೇಷನ್, ರೋಟರಿ , ಲಯನ್ಸ್ ಸಂಸ್ಥೆಗಳು, ಪ್ರವಾಸೋದ್ಯಮ ಇಲಾಖೆ, ರೆಡ್ ಕ್ರಾಸ್, ಸ್ಥಳೀಯ ಸಂಘ ಸಂಸ್ಥೆಗಳು, ಹಲವಾರು ಶಿಕ್ಷಣ ಸಂಸ್ಥೆಗಳು, ವಿವಿಧ ಸಂಘಟನೆಗಳು ಈ ಬೖಹತ್ ಅಭಿಯಾನಕ್ಕೆ ಕೈ ಜೋಡಿಸಿದೆ. ಜಿಲ್ಲೆಯಾದ್ಯಂತಲಿನಿಂದ ಅಭಿಯಾನಕ್ಕೆ ಸಹಕಾರ ನೀಡುವುದಾಗಿ ನಿರೀಕ್ಷೆಗೂ ಮೀರಿದ ಸ್ಪಂದನೆ ಸಂಘಟನೆಗಳ ಪ್ರಮುಖರಿಂದ ದೊರಕಿದೆ. ಅ.15 ರಂದು ಬುಧವಾರ ಸ್ವಚ್ಚ ಕೊಡಗು ಸುಂದರ ಕೊಡಗು ಅಭಿಯಾನಕ್ಕೆ ಜಿಲ್ಲಾ ಕೇಂದ್ರವಾದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬೆಳಗ್ಗೆ 8 ಗಂಟೆಗೆ ಶಾಸಕ…
ಲೇಖಕ: admin
ಮಡಿಕೇರಿ ಅ.13 NEWS DESK : ಕಳೆದ ಹಲವಾರು ವರ್ಷಗಳಿಂದ ಪ್ರತಿಭಾವಂತ ಬಡ ವಿದ್ಯಾರ್ಥಿನಿಯರಿಗೆ ಎ.ಕೆ ಸುಬ್ಬಯ್ಯ-ಪೊನ್ನಮ್ಮ ಸುಬ್ಬಯ್ಯ ದತ್ತಿ ನಿಧಿ ಹಾಗೂ ಚಾರಿಟೇಬಲ್ ಟ್ರಸ್ಟ್ ಮೂಲಕ ನೀಡುತ್ತಿರುವ ವಿದ್ಯಾರ್ಥಿ ವೇತನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿತರಿಸಿದರು. ಪ್ರಸಕ್ತ ಸಾಲಿನಲ್ಲಿ ನೂರಾರು ಅರ್ಜಿಗಳು ಬಂದಿದ್ದು, ಉನ್ನತ ಮಟ್ಟದ ಆಯ್ಕೆ ಸಮಿತಿಯಿಂದ ಪುರಸ್ಕೃತಗೊಂಡ ಅರ್ಹ ವಿದ್ಯಾರ್ಥಿನಿಯರಿಗೆ ವಿರಾಜಪೇಟೆಯ ಶಾಸಕರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಶಾಸಕರು, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿನಿಯರಿಗೆ ಮುಂದಿನ 3 ವರ್ಷದ ವಿದ್ಯಾಭ್ಯಾಸಕ್ಕೆ ತಲಾ 10,000 ದಂತೆ, ಪ್ರತಿ ವರ್ಷ ಆರ್ಥಿಕ ನೆರವು ಪಡೆಯಲಿದ್ದಾರೆ ಎಂದು ತಿಳಿಸಿದರು. ಕೊಡಗಿನ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಆರ್ಥಿಕ ಸಮಸ್ಯೆಯಿಂದಾಗಿ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದು ಎಂಬ ಕಾರಣದಿಂದ, ತಂದೆ ತಾಯಿಯ ಹೆಸರಿನಲ್ಲಿ ಶೈಕ್ಷಣಿಕ ಕಳಕಳಿಯ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾಗಿ ತಿಳಿಸಿದರು. ಈಗಾಗಲೇ ನೂರಾರು ವಿದ್ಯಾರ್ಥಿಗಳು ಇದರ ಫಲಾನುಭವಿಗಳಾಗಿದ್ದು, ಈ ಕಾರ್ಯಕ್ರಮವು ನಿರಂತರವಾಗಿ…
ಮಡಿಕೇರಿ ಅ.13 NEWS DESK : ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ, ಶಿವಮೊಗ್ಗ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂಧ್ಯರ ಸಂಘದ ವತಿಯಿಂದ ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ್ ನಾರಾಯಣ ಅವರನ್ನು ಗೌರವಿಸಲಾಯಿತು. ಸಂಘದ ವತಿಯಿಂದ ಶಿವಮೊಗ್ಗದ ಸುವರ್ಣ ಸಂಸ್ಕೃತಿ ಭವನದಲ್ಲಿ ನಡೆದ ವಿಶ್ವ ಕಿವುಡರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸ್ಮರಣಿಕೆ ನೀಡಿ, ಅಭಿನಂದಿಸಿದರು. ಈ ಸಂದರ್ಭ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ಹೆಚ್.ಶಂಕರ್, ಅಧ್ಯಕ್ಷ ಕೆ.ಎಸ್.ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಕೆ.ಎಸ್.ದೇವರಾಜ್, ಅರಣು ಇಲಾಖೆ ಸಿಸಿಎಫ್ ಹನುಮಂತಪ್ಪ, ರಾಜ್ಯ ಕಿವುಡರ ಕ್ರೀಡಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ನವೀನ್ ಕುಮಾರ್, ಶಿವಮೊಗ್ಗ ಮೂಕರ ಮತ್ತು ಶ್ರವಣಮಾಂಧ್ಯ ಸಂಘದ ಗೌರವಾಧ್ಯಕ್ಷ ಎಸ್.ಎಸ್.ಸಂದೇಶ್, ಹೆಲ್ಪಿಂಗ್ ಹ್ಯಾಂಡ್ಸ್‍ನ ನಂದಿನಿ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ಶ್ರವಣ ಮಾಂಧ್ಯರು ಹಾಜರಿದ್ದರು.
ಮಡಿಕೇರಿ ಅ.13 NEWS DESK : ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನದಲ್ಲಿ ಸ್ಥಳೀಯ ಯುವಕರಿಂದ ಸ್ವಚ್ಛತಾ ಶ್ರಮದಾನ ನಡೆಯಿತು. ಕುಶಾಲನಗರದ ಬಸವನಹಳ್ಳಿ ಪ್ರೌಢ ಶಾಲೆಯ ಮೈದಾನ ನಿರ್ವಹಣೆ ಇಲ್ಲದೆ ಮೈದಾನದ ತುಂಬಾ ಹುಲ್ಲು ಗಿಡಗಂಟಿಗಳು ಬೆಳೆದು ಶಾಲಾ ಮಕ್ಕಳು ಮೈದಾನದಲ್ಲಿ ಆಟವಾಡಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡ ಗ್ರಾಮದ ಯುವಕರು ಸುಮಾರು 3 ಏಕರೆ ಗಿಂತ ಅಧಿಕವಿರುವ ಮೈದಾನದಲ್ಲಿ ಬೆಳೆದಿದ್ದ ಹುಲ್ಲು ಮತ್ತು ಗಿಡ ಗಂಟಿಗಳನ್ನು ತಮ್ಮ ಸ್ವಂತ ಖರ್ಚಿನಿಂದ ವೀಡ್ ಕಟರ್ ಮೂಲಕ ಸ್ವಚ್ಛಗೊಳಿಸಿದರು. ಸ್ಥಳೀಯ ಯುವಕರ ಉತ್ತಮ ಕಾರ್ಯಕ್ಕೆ ಶಾಲಾ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ಅ.13 NEWS DESK : ಕೊಡಗು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ್ಲಿ PMAY(U)2.0 ಯೋಜನೆಯಡಿ ವಸತಿ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಯುತ್ತಿದ್ದು, ನಗರ ಪ್ರದೇಶಗಳಲ್ಲಿ ವಾಸಿಸುವ ನಿವೇಶನ ಹೊಂದಿರುವ ಅಥವಾ ಹಳೆಯ ಕಚ್ಚಾ ಮನೆಯಲ್ಲಿ ವಾಸವಿರುವಂತಹ (ಸ್ವಂತ RCC ಮನೆ ಹೊಂದಿರಬಾರದು) ಇದುವರೆಗೂ ಯಾವುದೇ ವಸತಿ ಯೋಜನೆಗಳ ಸೌಲಭ್ಯ ಪಡೆಯದೇ ಇರುವ ವಾರ್ಷಿಕ ರೂ,3.00 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ವಿವಾಹಿತ ಮಹಿಳೆಯರು, ಗೃಹಿಣಿಯರು, ಮಾಜಿ ಸೈನಿಕರು, ವಿಧುದರು, ಅಂಗವಿಕಲರು, ಹಿರಿಯ ನಾಗರೀಕರು ವಿಷೇಶವಾಗಿ ಸಪಾಯಿ ಕರ್ಮಚಾರಿಗಳು, ಬೀದಿ ಬದಿ ವ್ಯಾಪಾರಿಗಳು, ಅಂಗನವಾಡಿ ಕಾರ್ಯ ಕರ್ತೆಯರು, ಪಿ.ಎಂ.ವಿಶ್ವಕರ್ಮ ಯೋಜನೆಯ ಫಲಾನುಭವಿಗಳು, ಕಟ್ಟಡ ಕಾರ್ಮಿಕರು ಮತ್ತು ಕೊಳಚೆ ಪ್ರದೇಶದ ನಿವಾಸಿಗಳು ಹೊಸ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನ ಪಡೆಯಲು ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನಿವೇಶನ/ಹಳೆ ಕಚ್ಚಾ ಮನೆಯ ದಾಖಲೆಗಳು ಹಾಗೂ ಜಾತಿ & ಆಧಾಯ ಪ್ರಮಾಣ ಪತ್ರದೊಂದಿಗೆ PMAY(U)2.0…
ವಿರಾಜಪೇಟೆ ಅ.13 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವಿರಾಜಪೇಟೆ ತಾಲ್ಲೂಕು, ಮೂರ್ನಾಡು ವಲಯದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪಾರಣೆ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಎ.ಬಿ.ಕಾರ್ಯಕ್ಷೇತ್ರದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಜಿ ಸೈನಿಕರು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ವಿ.ಎಂ.ಸುಬ್ರಮಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಯೋಜನೆ ಕಾರ್ಯಕ್ರಮಗಳು ಜನರ ಬೆಳವಣಿಗೆ ಹಾಗೂ ಸಮಾಜಮುಖಿ ಚಿಂತನೆಯಿಂದ ಕೂಡಿರುತ್ತದೆ. ಅಂತೆಯೇ ಹಿಂದಿನ ಕಾಲದಲ್ಲಿ ಊರಿನ ಜನರುಗಳನ್ನು ಒಗ್ಗೂಡಿಸಲು ಈ ಪೂಜಾ ಕಾರ್ಯಕ್ರಮಗಳನ್ನು ನಾವು ಮಾಡುತ್ತಿದ್ದು, ಪೂಜೆಗಳು ನಮ್ಮ ಮುಂದಿನ ಪೀಳಿಗೆಗೆ ಒಂದು ಮಾದರಿ ಎಂದು ತಿಳಿಸಿದರು. ವಿರಾಜಪೇಟೆ ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪಿ.ಹರೀಶ್. ಮಾತನಾಡಿ ಯೋಜನೆಯಲ್ಲಿ ಹತ್ತು ಹಲವು ಜನಮಂಗಳ ಹಾಗೂ ಸಮಾಜಮುಖ ಕಾರ್ಯಗಳು ನಡೆಸಿದ್ದು, ಇವುಗಳಲ್ಲಿ ಜ್ಞಾನದೀಪ ಶಿಕ್ಷಕರ…
ನಾಪೋಕ್ಲು ಅ.13 NEWSDESK : ನಾಪೋಕ್ಲು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಬೇತು ಗ್ರಾಮದ ನಿವಾಸಿ ಪಾರ್ವತಿ ಎಂಬವರ ದನದ ಕೊಟ್ಟಿಗೆ ಕುಸಿದುಬಿದ್ದಿದ್ದು, ಶೀಟುಗಳು ಪುಡಿಪುಡಿಯಾಗಿ ನಷ್ಟ ಸಂಭವಿಸಿದೆ. ದನಗಳನ್ನು ಮೇಯಲು ಬಿಟ್ಟಿದ್ದ ಕಾರಣ ಅಪಾಯದಿಂದ ಪಾರಾಗಿದೆ ಎಂದು ಪಾರ್ವತಿ ಅವರು ಮಾಹಿತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಅ.13 NEWS DESK : ವಿರಾಜಪೇಟೆ ಜನ ಸೇವಾ ಟ್ರಸ್ಟ್, ಕೊಡಗು ಬ್ಲಡ್ ಡೊನರ್ಸ್ ಹಾಗೂ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ವಿರಾಜಪೇಟೆಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಿತು. ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ 56 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ರಕ್ತದ ಅಭಾವ ಇರುವ ಕಾರಣ ಕೊಡಗು ಬ್ಲಡ್ ಡೋನರ್ಸ್ ನಿಂದ ವಿರಾಜಪೇಟೆಯ ಯುವಕರಲ್ಲಿ ಐದು ಯೂನಿಟ್ ರಕ್ತಕ್ಕಾಗಿ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿದ ವಿರಾಜಪೇಟೆಯ ಯುವಕರ ತಂಡ ನಾವೇ ಶಿಬಿರ ಆಯೋಜಿಸಿ 50ಯೂನಿಟ್ ರಕ್ತವನ್ನು ನೀಡುವುದಾಗಿ ಭರವಸೆ ನೀಡದ್ದರು. ಅದರಂತೆ ಕೇವಲ 24 ಗಂಟೆಗಳಲ್ಲಿ ಶಿಬಿರ ಆಯೋಜಿಸಿ 56 ಯೂನಿಟ್ ರಕ್ತವನ್ನು ಸಂಗ್ರಹಿಸುವುದರ ಮೂಲಕ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. :: ಕರ್ತವ್ಯಕ್ಕೂ ಸೈ ಸಮಾಜ ಸೇವೆಗೂ ಎತ್ತಿದ ಕೈ :: ರಕ್ತದ ಅಭಾವ ಇರುವ ಹಲವು ಸಂದೇಶಗಳನ್ನು ಮನಗಂಡ ವಿರಾಜಪೇಟೆ ಪೊಲೀಸರು ತಮ್ಮ ಕರ್ತವ್ಯದ ನಡುವೆಯೂ ಶಿಬಿರಕ್ಕೆ ಆಗಮಿಸಿ …
ಮಡಿಕೇರಿ NEWS DESK ಅ.13 : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ಪಲ್ಟಿಯಾಗಿ ಇಬ್ಬರು ವ್ಯಕ್ತಿಗಳು ಹಾಗೂ ಮೂರು ಹಸುಗಳು ಗಾಯಗೊಂಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯ ಕಾಗಡಿಕಟ್ಟೆ ಬಳಿ ನಡೆದಿದೆ. ಇಂದು ನಸುಕಿನಲ್ಲಿ ಈ ಘಟನೆ ನಡೆದಿದ್ದು, ಗೋವುಗಳ ಸಾಗಾಟ ಕುರಿತು ಹಿಂದೂ ಜಾಗರಣಾ ವೇದಿಕೆ ಆಕ್ಷೇಪ ವ್ಯಕ್ತಪಡಿಸಿದೆ. ಪಲ್ಟಿಯಾದ ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟವಾಗುತ್ತಿತ್ತು ಎಂದು ಆರೋಪಿಸಿರುವ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ಅವರು ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಗೋವುಗಳ ಸಾಗಾಟ, ಹತ್ಯೆ, ಗೋಮಾಂಸ ಮಾರಾಟಕ್ಕೆ ನಿಷೇಧವಿದ್ದರೂ ಇತ್ತೀಚಿನ ದಿನಗಳಲ್ಲಿ ಗೋವುಗಳ ಕಳ್ಳತನ, ಸಾಗಾಟ ಮತ್ತು ಹತ್ಯೆ ಪ್ರಕರಣಗಳು ಮಿತಿ ಮೀರುತ್ತಿದೆ. ಪೊಲೀಸ್ ಇಲಾಖೆ ಇದನ್ನು ನಿಯಂತ್ರಿಸದಿದ್ದಲ್ಲಿ ಹಿಂದೂ ಸಂಘಟನೆಗಳು ಬೃಹತ್ ಹೋರಾಟವನ್ನು ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ಅ.13 NEWS DESK : ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದ ಪ್ರಕರಣವನ್ನು ಖಂಡಿಸಿ ಪ್ರಗತಿಪರ, ಚಿಂತಕರ, ದಲಿತಪರ ಸಂಘಟನೆಗಳ ಒಕ್ಕೂಟ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಒಕ್ಕೂಟದ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಯನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಕೃತ್ಯವೆಸಗಿದ ವಕೀಲನ ವಿರುದ್ಧ ಕೇಂದ್ರ ಸರಕಾರ ‘ದೇಶ ದ್ರೋಹ’ದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಹಿಂದ ಒಕ್ಕೂಟದ ಸ್ಥಾಪಕ ಅಧ್ಯಕ್ಷ ಟಿ.ಪಿ.ರಮೇಶ್ ಅವರು ಮಾತನಾಡಿ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಅಂಬೇಡ್ಕರ್ ವಿಚಾರವಾದಿ ಸಿ.ಜೆ.ಮೋಹನ್ ಮೌರ್ಯ ಅವರು ಮಾತನಾಡಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ವಿರುದ್ಧ ನಡೆದಿರುವ ಘಟನೆ ಸಂವಿಧಾನ ವಿರೋಧಿ ಕೃತ್ಯವಾಗಿದ್ದು, ನ್ಯಾಯಾಂಗ ವ್ಯವಸ್ಥೆಗೆ ಅಪಮಾನ ಮಾಡಲಾಗಿದೆ. ದುಷ್ಕೃತ್ಯವೆಸಗಿದ ವಕೀಲನ ವಿರುದ್ಧ ಕೇಂದ್ರ ಸರ್ಕಾರ ‘ದೇಶ ದ್ರೋಹ’ದ ಪ್ರಕರಣವನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಪ್ರಗತಿಪರ…






