ಲೇಖಕ: admin

ಸೋಮವಾರಪೇಟೆ ಡಿ.2 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವಿಶ್ವ ಮಾನವ ಕುವೆಂಪು ವಿದ್ಯಾ ಸಂಸ್ಥೆಯ ಕಾಲೇಜು ವಿಭಾಗದ ವಿದ್ಯಾರ್ಥಿಗಳು  ಜೂನಿಯರ್ ಕಾಲೇಜಿನ ಗೇಟ್ ತನಕ ರಾಜ್ಯ ಹೆದ್ದಾರಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಪರಿಸರ ಸಂರಕ್ಷಣೆಯ ಸಂದೇಶ ನೀಡಿದರು.  ರಸ್ತೆ ಬದಿಗಳಲ್ಲಿ ಹರಡಿದ್ದ ಪ್ಲಾಸ್ಟಿಕ್, ಕಾಗದ ಹಾಗೂ ತ್ಯಾಜ್ಯ ವಸ್ತುಗಳನ್ನು ತೆಗೆದು ಸ್ವಚ್ಚಗೊಳಿಸಿದರು. ಇದೇ ಸಂದರ್ಭ ಇನ್ನರ್ ವ್ಹೀಲ್ ಕ್ಲಬ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಕಾಲೇಜಿಗೆ ಕಸ ಸಂಗ್ರಹದ ಕಬ್ಬಿಣದ ತೊಟ್ಟಿಯನ್ನು ವಿದ್ಯಾಸಂಸ್ಥೆಗೆ ನೀಡಲಾಯಿತು. ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ಯುವ ಸಮೂದಾಯ ಸ್ವಯಂಪ್ರೇರಿತವಾಗಿ ಪರಿಸರ ರಕ್ಷಣೆಯ ಹೊಣೆ ಹೊತ್ತರೆ ನಮ್ಮ ಕೊಡಗು ನಿಜವಾದ ಅರ್ಥದಲ್ಲಿ ಸ್ವಚ್ಛ ಕೊಡಗು–ಸುಂದರ ಕೊಡಗು ಆಗಲಿದೆ ಎಂದು ಹೇಳಿದರು.  ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಚಕ್ರವರ್ತಿ ಸುರೇಶ್ ಮಾತನಾಡಿ, ಜೂನಿಯರ್ ಕಾಲೇಜಿನ ಮುಂದಿನ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯುವವರಿಗೆ ತಕ್ಕ ಶಿಕ್ಷೆಯಾಗಬೇಕು. ವಿದ್ಯಾರ್ಥಿಗಳು ನಡೆದಾಡುವ ರಸ್ತೆಯಲ್ಲೇ ಕೋಳಿ ತ್ಯಾಜ್ಯಗಳನ್ನು ಎಸೆದು ಹೋಗುತ್ತಿದ್ದಾರೆ.…

Read More

ಗೋಣಿಕೊಪ್ಪ ಡಿ.2 NEWS DESK : ತಿತಿಮತಿ ಹನುಮೋತ್ಸವ ಸಮಿತಿ, ಶ್ರೀ ರಾಮ ಮಂದಿರ ವತಿಯಿಂದ ಎರಡನೇ ವರ್ಷದ ಹನುಮೋತ್ಸವ ತಿತಿಮತಿ ಗ್ರಾಮದಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಹನುಮನ ಆರಾಧನೆ, ಪಠಣ, ಸಾಹಸ, ವಿಶ್ವಾಸ, ಭಕ್ತಿಗಳ ಬಗ್ಗೆ ಹನುಮ ಭಕ್ತರೆಡೆಗೆ ಪಸರಿಸುವ ಆಧ್ಯಾತ್ಮಿಕ ಕಾರ್ಯ ನಡೆಯಲಿದೆ. ಆರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಗಳ ವಿವರಗಳನ್ನು ಸಮಿತಿ ಅಧ್ಯಕ್ಷ ಚಕ್ಕೇರ ಮನು ಕಾವೇರಪ್ಪ್ಪ ತಿತಿಮತಿ ಚಿಮ್ಮಿ ಸಂಕೀರ್ಣದಲ್ಲಿ ಹನುಮೋತ್ಸವ ಸಮಿತಿಯ ಪೂರ್ವ ತಯಾರಿ ಸಭೆಯಲ್ಲಿ ಮಾಹಿತಿ ನೀಡಿದರು. ದಿನಾಂಕ ಎರಡರಂದು ಹನುಮ ಮಾಲಧಾರಣೆ, ಆಂಜನೇಯ ಹೋಮ, ಮೂರರಂದು ನಿತ್ಯ ಪೂಜೆ ಹಾಗೂ ಹನುಮಂತನ ಭಜನೆ, ನಂತರ ದಿನಾಂಕ 6 ರಂದು ಬೆಳಗ್ಗೆ ಬಾರದ ಗುಂಡು ಎಸೆತ, ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಊಟದ ವ್ಯವಸ್ಥೆ ಏರ್ಪಡಿಸಲಾಗಿದ್ದು, ಸಂಜೆ 6 ಗಂಟೆಗೆ ದಿಪೋತ್ಸವ ಮತ್ತು ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಡಿ.7…

Read More

ಮಡಿಕೇರಿ ಡಿ.1 NEWS DESK : ಏಡ್ಸ್ ಹರಡುವುದು ಮತ್ತು ಅದರ ನಿಯಂತ್ರಣಕ್ಕೆ ಇರುವ ಕ್ರಮಗಳ ಕುರಿತು ಪ್ರತಿಯೊಬ್ಬರು ತಿಳಿದಿರಬೇಕು. ಹೆಚ್ಐವಿ ಏಡ್ಸ್ ನಿಯಂತ್ರಣ ಎಲ್ಲರ ಜವಾಬ್ದಾರಿ ಎಂದು ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಜಿ.ಸುರೇಂದ್ರ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿಯಲ್ಲಿ ನಡೆದ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮ ಸೋಮವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ನಗರದ ಜಿಲ್ಲಾ…

Read More

ಮಡಿಕೇರಿ ಡಿ.1 NEWS DESK : ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ಜನವರಿಯಲ್ಲಿ ‘ದಲಿತರ ಸ್ವಾಭಿಮಾನಿ ಸಮಾವೇಶ’ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ತಿಂಗಳ ಮೊದಲ ಅಥವಾ ಎರಡನೇ ಭಾನುವಾರ ನಗರದ ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದ್ದು, ಸಚಿವರಿಗೆ ಹಾಗೂ ಶಾಸಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಅಂದು ಬೆಳಿಗ್ಗೆ 10 ಗಂಟೆಗೆ ಅಶೋಕಪುರದಿಂದ ಬುದ್ಧ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರವಿರುವ ರಥದ ಮೆರವಣಿಗೆ ನಡೆಯಲಿದೆ. 100 ಬೈಕ್‍ಗಳು, ಕಳಸ ಹಿಡಿದ ಮಹಿಳೆಯರು, ಪೂರ್ವಿಕರ ಸ್ತಬ್ಧ ಚಿತ್ರ, ಡೊಳ್ಳು ಕುಣಿತ ಮತ್ತು ವೀರಗಾಸೆ ಕುಣಿತ ಗಮನ ಸೆಳೆಯಲಿದೆ ಎಂದು ತಿಳಿಸಿದರು. *ದಲಿತ ರತ್ನ ಪ್ರಶಸ್ತಿ ಪ್ರದಾನ* ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ…

Read More

ಮಡಿಕೇರಿ ಡಿ.1 NEWS DESK : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಇದೇ ಡಿ.5 ರಿಂದ 7 ರವರೆಗೆ ಮಂಡ್ಯದ ಕೃಷಿ ವಿಜ್ಞಾನಗಳ ವಿವಿಯ ವಿ.ಸಿ. ಫಾರಂನಲ್ಲಿ ‘ಸಮಗ್ರ ಕೃಷಿಯಿಂದ ಸುಸ್ಥಿರತೆ’ ಘೋಷವಾಕ್ಯದಡಿ ‘ಕೃಷಿ ಮೇಳ-2025’ ನಡೆಯಲಿದೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡಗು ಅರಣ್ಯ ಮಹಾವಿದ್ಯಾಲಯದ ಡೀನ್ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕÀ ಡಾ.ಜಿ.ಎಂ.ದೇವಗಿರಿ ಅವರು ಕೃಷಿ ವಿಶ್ವ ವಿಶ್ವವಿದ್ಯಾಲಯ ವ್ಯಾಪ್ತಿಯ ಕೊಡಗನ್ನು ಒಳಗೊಂಡಂತೆ ಮಂಡ್ಯ, ಮೈಸೂರು, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳ ರೈತರ ಅಭಿವೃದ್ಧಿಯ ಚಿಂತನೆಯಡಿ ಕೃಷಿ ಮೇಳವನ್ನು ರೂಪಿಸಲಾಗಿದೆ ಎಂದು ತಿಳಿಸಿದರು. ಕೃಷಿ ಮೇಳವನ್ನು ಆರಂಭಿಕ ದಿನವಾದ ಡಿ.5ರಂದು ಬೆಳಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೊಡಗಿನ 10 ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಡಾ.ಜಿ.ಎಂ.ದೇವಗಿರಿ ತಿಳಿಸಿದರು. ಕೊಡಗನ್ನು ಒಳಗೊಂಡಂತೆ ಕೃಷಿ ವಿವಿಯ…

Read More

ಮಡಿಕೇರಿ ಡಿ.1 NEWS DESK : ಮುಕ್ಕಾಟಿರ(ಬೇತ್ರಿ) ಕುಟುಂಬದ ವತಿಯಿಂದ ಕೊಡವ ಕುಟುಂಬಗಳ ನಡುವಣ 24ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ಉತ್ಸವ ‘ಮುಕ್ಕಾಟಿರ ಕಪ್ ಕ್ರಿಕೆಟ್-2026′ ಮುಂದಿನ ಏಪ್ರಿಲ್ 2 ರಿಂದ ಮೂರ್ನಾಡಿನಲ್ಲಿ ನಡೆಯಲಿದೆ ಎಂದು ಕ್ರಿಕೆಟ್ ಆಯೋಜನಾ ಸಮಿತಿಯ ಅಧ್ಯಕ್ಷ ಮುಕ್ಕಾಟಿರ ಸುರೇಶ್ ಪೆಮ್ಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಅವರು, ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ ಮೂರ್ನಾಡಿನ ಲಾಲೂ ಮುದ್ದಯ್ಯ ಕ್ರೀಡಾಂಗಣ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮೈದಾನ ಹಾಗೂ ಅರಮೇರಿ ಕಳಂಚೇರಿಯ ಎಸ್‍ಎಂಎಸ್ ವಿದ್ಯಾಪೀಠದ ಮೈದಾನಗಳಲ್ಲಿ ಏ.2 ರಿಂದ 28 ದಿನಗಳ ಕಾಲ ನಡೆಯಲಿದೆ ಎಂದರು. *400 ತಂಡಗಳ ನಿರೀಕ್ಷೆ* ಕಳೆದ ಸಾಲಿನ ಕೊಡವ ಕೌಟುಂಬಿಕ ಕ್ರಿಕೆಟ್ ಉತ್ಸವದ ಪುರುಷರ ವಿಭಾಗದಲ್ಲಿ 280 ತಂಡಗಳು ಪಾಲ್ಗೊಂಡಿದ್ದುವಾದರೆ, ಈ ಬಾರಿ 300 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕಳೆದ ಬಾರಿ ಮಹಿಳೆಯರ ವಿಭಾಗದಲ್ಲಿ 58 ತಂಡಗಳು ಪಾಲ್ಗೊಂಡಿದ್ದರೆ, ಈ ಬಾರಿ 100 ತಂಡಗಳು ಪಾಲ್ಗೊಳ್ಳಬಹುದಾಗಿದ್ದು,…

Read More

ಮಡಿಕೇರಿ ಡಿ.1 NEWS DESK : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹತ್ತಿರವಿರುವ ಜನರಲ್ ತಿಮ್ಮಯ್ಯ ಮ್ಯೂಸಿಯಂ (ಸನ್ನಿಸೈಡ್) ಯುದ್ಧ ಸ್ಮಾರಕದ ಆವರಣದಲ್ಲಿ ಡಿ.7 ರಂದು ಬೆಳಗ್ಗೆ 10 ಗಂಟೆಗೆ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾದ ನಿವೃತ್ತ ಮೇಜರ್ ಜನರಲ್ ಕೆ.ಸಿ.ಕಾರ್ಯಪ್ಪ ಅವರು ಯುದ್ಧ ಸ್ಮಾರಕಕ್ಕೆ ಪುಷ್ಪ ಗುಚ್ಚವನ್ನು ಅರ್ಪಿಸಿ ಗೌರವ ನಮನ ಸಲ್ಲಿಸಲಿದ್ದಾರೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ, ಇತರರು ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಮಾಜಿ ಯೋಧರು ಅವರ ಕುಟುಂಬದವರು ಹಾಗೂ ಸಾರ್ವಜನಿಕರು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ ಅವರು ತಿಳಿಸಿದ್ದಾರೆ.

Read More

ಗೋಣಿಕೊಪ್ಪ ಡಿ.1 NEWS DESK : ಗೋಣಿಕೊಪ್ಪ ರೋಟರಿ ಸಂಸ್ಥೆ ವತಿಯಿಂದ ಬೆಂಗಳೂರಿನ ಎಫ್‍ಕೆಸಿಸಿಐ ಸಂಸ್ಥೆ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿ ಪಡೆದುಕೊಂಡ ಚೇದಂಡ ಸುಮಿ ಸುಬ್ಬಯ್ಯ ಅವರನ್ನು ಸನ್ಮಾನಿಸಲಾಯಿತು. ಗೋಣಿಕೊಪ್ಪ ಕೂಕುನ್ ಸಭಾಂಗಣದಲ್ಲಿ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಭೇಟಿ ಹಿನ್ನಲೆ ನಡೆದ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ.ರಾಮಕೃಷ್ಣ, ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪಿ.ಕೆ.ವಿಜಯಕುಮಾರ್ ಸನ್ಮಾನಿಸಿ, ಗೌರವಿಸಿದರು. ಸಹಾಯಕ ಗವರ್ನರ್, ದಿಲಾನ್ ಚಂಗಪ್ಪ, ಝೋನಲ್ ರೆಫ್ಟಿನೆಂಟ್ ಕೆ.ಹೆಚ್.ಆದಿತ್ಯ, ಗೋಣಿಕೊಪ್ಪ ರೋಟರಿ ಕಾರ್ಯದರ್ಶಿ ಪ್ರಮೋದ್ ಕಾಮತ್, ಖಜಾಂಚಿ ಜಪ್ಪೆಕೋಡಿ ಸುಭಾಷಿಣಿ, ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರುಗಳು ಇದ್ದರು.

Read More

ಮಡಿಕೇರಿ ಡಿ.1 NEWS DESK : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಖಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಮಂಜುನಾಥ್‌ ಅವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್  ನಿವೃತ್ತರನ್ನು ಸನ್ಮಾನಿಸಿ ನಿವೃತ್ತ ಜೀವನ ಶುಭಪ್ರದವಾಗಿರಲೆಂದು ಹಾರೈಸಿದರು.  

Read More

ಬೆಂಗಳೂರು ಡಿ.1 NEWS DESK : ದಕ್ಷ ಆಡಳಿತಗಾರರಾಗಿದ್ದ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆದರ್ಶಗಳ ಹಾದಿಯಲ್ಲಿ ಸರಕಾರ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯ  ಅಂಗವಾಗಿ ವಿಧಾನಸೌಧದಲ್ಲಿರುವ ಹನುಮಂತಯ್ಯನವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ, ಗೌರವ ಸಮರ್ಪಿಸಿದರು.  ಕೆಂಗಲ್ ಹನುಮಂತಯ್ಯನವರು ಒಬ್ಬ ದಕ್ಷ ಆಡಳಿತಗಾರರಾಗಿದ್ದು, ಕರ್ನಾಟಕದ ಎರಡನೇ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯನಂತರವಿದ್ದ ಸಮಸ್ಯೆಗಳನ್ನು ಮುಖ್ಯಮಂತ್ರಿಯಾಗಿ ಸಮರ್ಥವಾಗಿ ಎದುರಿಸಿದರು. ವಿಧಾನಸೌಧದ ಭವ್ಯ ಕಟ್ಟಡ ನಿರ್ಮಾಣಕ್ಕೆ  ಅವರು ರೂವಾರಿಯಾಗಿದ್ದರೂ, ಕಟ್ಟಡದ ಉದ್ಘಾಟನೆಯ ವೇಳೆಗೆ ಅವರು ಅಧಿಕಾರದಲ್ಲಿರಲಿಲ್ಲ. ಜನಪ್ರತಿನಿಧಿಯಾಗಿ ಪ್ರಮಾಣಿಕ ಜನರ ಸೇವೆ ಸಲ್ಲಿಸುವುದು ಅತಿಮುಖ್ಯ ಎಂದು ವಿಧಾನಸೌಧದ ಕಟ್ಟಡದ ಪೂರ್ವಭಾಗದಲ್ಲಿ’ಜನರ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಕೆಂಗಲ್ ಹನುಮಂತಯ್ಯ ಅವರ ಸೇವೆಯನ್ನು ಸರಕಾರ ಸ್ಮರಿಸುತ್ತಿದೆ. ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದರು. ಕೆಂಗಲ್ ಹನುಮಂತಯ್ಯನವರ ಮೊಮ್ಮಗನಾದ ಕೆಂಗಲ್ ಶ್ರೀಪಾದ ರೇಣು, ಸಚಿವರಾದ ಪ್ರಿಯಾಂಕ್…

Read More