ಬೆಂಗಳೂರು ಡಿ.1 NEWS DESK : ಹಿಂದುಳಿದವರ-ದಲಿತರ-ಮಹಿಳೆಯರ ಮೀಸಲಾತಿಯನ್ನು ವಿರೋಧಿಸಿದ್ದು ಬಿಜೆಪಿ- ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಗಳನ್ನು ವಿತರಿಸಿ ಹಾಗೂ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದರು. ಹೀಗಾಗಿ ಇವತ್ತು ಶೇ.50ರಷ್ಟು ಮಹಿಳಾ ಮೀಸಲಾತಿ ರಾಜೀವ್ ಗಾಂಧಿ ಮತ್ತು ಕಾಂಗ್ರೆಸ್ಸಿನ ಕೊಡುಗೆ. ಇದನ್ನು ವಿರೋಧ ಮಾಡಿದ್ದು ಬಿಜೆಪಿಯ ಉಪಾಧ್ಯಕ್ಷರಾಗಿದ್ದ ರಾಜ್ಯಸಭಾ ಸದಸ್ಯ ರಾಮಾಜೋಯಿಸ್. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸುಮ್ಮನೆ ಬಿಜೆಪಿಗೆ ಚಪ್ಪಾಳೆ ತಟ್ಟಬಾರದು ಎಂದರು. ಗ್ರಾಮದಿಂದಲೇ ಅಧಿಕಾರ, ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದರು. ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬಹಳ ಮುಖ್ಯ. ರಾಜೀವ್ ಗಾಂಧಿಯವರು ಪ್ರಧಾನಿ ಆದಾಗ ಸಂವಿಧಾನ…
ಲೇಖಕ: admin
ಮಡಿಕೇರಿ ಡಿ.1 NEWS DESK : ಏಡ್ಸ್ ನಿಮೂರ್ಲನೆಗೆ ಯುವ ಜನತೆ ಪಾತ್ರ ಮುಖ್ಯ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ಬಿ.ರಾಘವ ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮ ನಡೆಯಿತು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್‌ಐವಿ ಏಡ್ಸ್ ದೂರವಿರಲು ಸ್ವಯಂ ನಿಯಂತ್ರಣ ಹಾಗೂ ತಾಳ್ಮೆ ಅತೀ ಮುಖ್ಯ ಎಂದು ಅಭಿಪ್ರಾಯಪಟ್ಟರು. ಸ್ವಯಂ…
ಮೈಸೂರು ಡಿ.1 NEWS DESK : ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು, ಇಂದು ನಡೆದ ಹಗ್ಗ- ಜಗ್ಗಾಟ ಕ್ರೀಡೆ ಭಾರಿ ಯಶಸ್ಸು ಕಂಡಿದೆ ಹಾಗೂ ಭಾರಿ ಆಕರ್ಷಣೆ ಪಡೆದಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಸಂಸದರ ಕ್ರೀಡಾ ಮಹೋತ್ಸವದ ಫಿಟ್ ಯುವ ಫಾರ್ ವಿಕಸಿತ್ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಹಗ್ಗ-ಜಗ್ಗಾಟ ಉದ್ಘಾಟನೆ ನಂತರ ಸಂಸದರು ಮಾತನಾಡಿದರು. ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಹಳ್ಳಿ ಸೊಗಡಿನ “ಹಗ್ಗ-ಜಗ್ಗಾಟ” ಸ್ಪರ್ಧೆಯಲ್ಲಿ ಇಷ್ಟೊಂದು ಜನರು ಭಾಗವಹಿಸಿದ್ದು ನಿಜಕ್ಕೂ ಖುಷಿ ತಂದಿದೆ ಎಂದರು. ಮೈಸೂರಿನ ವಿಶ್ವವಿದ್ಯಾಲಯದ ಓವಲ್ ಗ್ರೌಂಡ್ ನಿಜಕ್ಕೂ ಇಂದು ಕ್ರೀಡಾ ಸಂಗಮಕ್ಕೆ ಸಾಕ್ಷಿಯಾಗಿತ್ತು ಎಂದು ಯದುವೀರ್ ಒಡೆಯರ್ ತಿಳಿಸಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಚಂದ್ರಕಲಾ ಮಾತನಾಡಿ, ಈ ರೀತಿಯ ಪಂದ್ಯಗಳು ಆಯೋಜನೆಗೊಂಡಿದ್ದು ಖುಷಿ ತಂದಿದೆ ಎಂದು ಸಂತಸ ಹಂಚಿಕೊಂಡರು. ಮೈಸೂರು…
ನಾಪೋಕ್ಲು ಡಿ.1 NEWS DESK : ಕೊಡಗಿನ ಕ್ರೀಡಾಪಟುಗಳು ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ನಲ್ಲಿ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದ 45ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ವೆಂಟ್ರನ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ ಮತ್ತು ಬಳ್ಳಾರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಯುಕ್ತ ಆಶ್ರಯದಲ್ಲಿ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟದಲ್ಲಿ ಕೊಡಗಿನ ಮಹಿಳಾ ಕ್ರೀಡಾಪಟುಗಳು ಪಾಲ್ಗೊಂಡು ಅತ್ಯುತ್ತಮ ಸಾಧನೆಯೊಂದಿಗೆ ಬಹುತೇಕ ಪದಕಗಳನ್ನು ಮುಡಿಗೇರಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಾಂಗಾಲ ಬಿಟ್ಟಂಗಲ ಗ್ರಾಮದ ಚೇಮೀರ ಸೀತಮ್ಮ ಪ್ರೇಮ ಭಾರತದ ಗುಂಡು ಎಸೆತದಲ್ಲಿ ಪ್ರಥಮ, ತಟ್ಟೆ ಎಸೆತದಲ್ಲಿ ಪ್ರಥಮ, ಜವಾಲಿನ್ ಎಸೆತದಲ್ಲಿ ಪ್ರಥಮ, ಹ್ಯಾಮರ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಬಾಳೆಲೆಯ ಕೊಟ್ಟಗೇರಿ ಗ್ರಾಮದ ಅರಮಣಮಾಡ ಮಮತಾ ಮನು ಭಾರದ ಗುಂಡು ಎಸೆದ ಸ್ಪರ್ಧೆಯಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಟಿ.ಶೆಟ್ಟಿಗೇರಿ ಪೆಮ್ಮಂಡ ಸಬಿತ ಕುಶಾಲಪ್ಪ ಡಿಸ್ಕಸ್ ಥ್ರೊ ಸ್ಪರ್ಧೆಯಲ್ಲಿ ಪ್ರಥಮ, ಭಾರದ ಗುಂಡು…
ಮಡಿಕೇರಿ ಡಿ.1 NEWS DESK : ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಅಧ್ಯಕ್ಷ ಎಂ.ಡಿ.ನಾಣಯ್ಯ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಮಡಿಕೆ ತಯಾರಕರ ಸಹಕಾರ ಸಂಘದಲ್ಲಿ ಕಳೆದ 19 ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸಿದ್ದೇನೆ. ಸದಸ್ಯ, ಖಜಾಂಚಿ ಮತ್ತು ಅಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕಳೆದ 7 ವರ್ಷಗಳಿಂದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡು ಸಂಘದ ಪದಾಧಿಕಾರಿಗಳ ಸಹಕಾರದಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ. ಪ್ರಸ್ತುತ ಅನಾರೋಗ್ಯದ ಕಾರಣ ಸಂಘದ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದ ಸಂಘದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದೇನೆ. ಮುಂದಿನ ದಿನಗಳಲ್ಲಿ ಪದಾಧಿಕಾರಿಗಳು ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗಲಿ ಎಂದು ಎಂ.ಡಿ.ನಾಣಯ್ಯ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.1 NEWS DESK : ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ ದಶಮಾನೋತ್ಸವದ ಸಂಭ್ರಮದಲ್ಲಿದೆ. 10ನೇ ವಾರ್ಷಿಕೋತ್ಸವದ ಅಂಗವಾಗಿ ಡಿ.5, 6 ಮತ್ತು 7 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹುದವಿ ಬಿರುದು ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಶಿಕ್ಷಣ ಸಂಸ್ಥೆಯ ಸದಸ್ಯ ಸಿ.ಎಂ.ಹಮೀದ್ ಮೌಲಾವಿ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸಮನ್ವಯ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನಮಾನ ಪಡೆದಿರುವ ಕೇರಳದ ಚಿಮ್ಮಾಡ್ ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯದ ಸಹ ಸಂಸ್ಥೆ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ನೂರುಲ್ ಹುದಾ ಶಿಕ್ಷಣ ಸಂಸ್ಥೆ, 2015 ಆಗಸ್ಟ್ 19 ರಂದು ಪುತ್ತೂರು ತಾಲ್ಲೂಕಿನ ಮಾಡನ್ನೂರ್ ನಲ್ಲಿ ಆರಂಭಗೊಂಡಿತು. ಕೇವಲ ಹತ್ತು ವರ್ಷಗಳಲ್ಲಿ ಸಂಸ್ಥೆಯು ತನ್ನ ಗುರಿಯತ್ತ ಶ್ರದ್ಧೆಯಿಂದ ಹೆಜ್ಜೆಯಿಟ್ಟಿದ್ದು, ಪ್ರಸ್ತುತ 360ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಅರಬ್ಬಿ, ಇಂಗ್ಲೀಷ್, ಉರ್ದು, ಕನ್ನಡ, ಮಲಯಾಳಂ ಸೇರಿದಂತೆ ವಿವಿಧ ಅಂತರ ರಾಷ್ಟ್ರೀಯ ಭಾಷೆಗಳಲ್ಲಿ…
ಮಡಿಕೇರಿ ಡಿ.1 NEWS DESK : ಐಗೂರು ಗ್ರಾಮದ ದಿವಂಗತ ಸಿ.ಕುಂಞರಾಮನ್ ಅವರ ಪತ್ನಿ ಭಾರ್ಗವಿ (84) ಅವರು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಮೂವರು ಪುತ್ರಿಯರನ್ನು ಆಗಲಿದ್ದಾರೆ.
ಸುಂಟಿಕೊಪ್ಪ ಡಿ.1 NEWS DESK : ಆಧುನೀಕರಣದ ಭರಾಟೆಯಲ್ಲಿ ಜಾನಪದ ಸಂಸ್ಕೃತಿ, ಹಳ್ಳಿ ಜೀವನ ನಶಿಸುತ್ತಿದೆ ಎಂದು ಸಾಹಿತಿ ಹೆಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಆತಂಕ ವ್ಯಕ್ತಪಡಿಸಿದ್ದಾರೆ. ಚೆಟ್ಟಳ್ಳಿ ಪ್ರೌಢಶಾಲೆಯಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ಘಟಕ ಸಂಯುಕ್ತಾಶ್ರಯದಲ್ಲಿ ನಡೆದ ಜಾನಪದ ಉತ್ಸವದಲ್ಲಿ ಮುಖ್ಯ ಭಾಷಣಕರರಾಗಿ ಆಗಮಿಸಿ ಅವರು ಮಾತನಾಡಿದರು. ನಾವು ಮತ್ತು ನಮ್ಮ ಹಿರಿಯರ ಬದುಕು, ಜನಪದ ಸಂಸ್ಕøತಿ, ಪದ್ಧತಿ, ಪರಂಪರೆಯಿಂದ ಕೂಡಿದ್ದು, ನಮ್ಮ ಮಕ್ಕಳ ಮತ್ತು ಮೊಮ್ಮಕ್ಕಳ ತಲೆಮಾರು ಆಧುನಿಕತೆಯ ಭರಾಟೆಯಲ್ಲಿ ಕಳೆದು ಹೋಗುತ್ತಿದೆ. ಆಳುವ ಮಕ್ಕಳನ್ನು ಜೋಗುಳ ಹಾಡಿ ಮಲಗಿಸುವ ಅಥವಾ ಪ್ರೀತಿಯ ಮಾತುಗಳಿಂದ ಒಲಿಸಿಕೊಳ್ಳುವ ಜಾಗದಲ್ಲಿ ಮೊಬೈಲ್ ರಿಲ್ಸ್ ಆಕ್ರಮಿಸಿಕೊಂಡಿದೆ ಎಂದು ವಿಷಾಧಿಸಿದರು. ಹಿಂದೆ ಕೂಡುಕುಟುಂಬ, ಅಜ್ಜ ಅಜ್ಜಿಯ ಪ್ರೀತಿ, ಕುಂಟಬಿಲ್ಲೆ, ಲಗೋರಿ, ಕಣ್ಣಾಮುಚ್ಚಾಲೆ ಆಟ, ಹಸಿರ ಪಕೃತಿಯ ನಡುವೆ ನಾವು ಬೆಳೆದ ದಿನಗಳು ಇಂದು ನಮ್ಮ ಮತ್ತು ಮೊಮ್ಮಕ್ಕಳಿಗೆ ಮರಿಚಿಕೆಯಾಗಿದೆ ಎಂದು ಹೇಳಿದರು. ವಿವಿಧ ಭಾಷೆ ಜನಾಂಗಗಳಿಗೆ ಸೇರಿದ ನಾವು ಕನ್ನಡವನ್ನು ಹೆಚ್ಚಾಗಿ…
ಸುಂಟಿಕೊಪ್ಪ ಡಿ.1 NEWS DESK : ಸರಕಾರ ಸೇವೆಯಲ್ಲಿ ವಯೋನಿವೃತ್ತಿ ಸಹಜ. ಆದರೆ ನಿಮ್ಮ ಶಿಕ್ಷಣ, ವೃತ್ತಿ ಜೀವನವನ್ನು ಕೊನೆಗೊಳಿಸದೆ ಸಮಾಜ ಸೇವೆಯಲ್ಲಿ ತೊಡಗಿಕೊಳ್ಳಬೇಕೆಂದು ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಹೇಳೀದರು. ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಸಿ.ಎ.ಗೀತಾ ಪಾರ್ಥ, ಅವರಿಗೆ ಬೋಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು. ಶಾಲೆಗೆ ಆಗಮಿಸುವ ಮಕ್ಕಳು ಹಾಗೂ ಪೋಷಕರೊಂದಿಗೆ ಸದಾಗೌರವ, ಹಸನ್ಮುಖಿಯಾಗಿರುವ ಗೀತಾ ಅವರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪುಗೊಳಿಸಿದ್ದಾರೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಏರಿಕೆಗೊಳಿಸುವಲ್ಲಿಯೂ ಅವರ ಪರಿಶ್ರಮ ಅಪರಿಮಿತವಾಗಿದೆ. ಅಲ್ಲದೆ ಶಾಲೆಯ ಅಭಿವೃದ್ಧಿಗೆ ತನ್ನದೆಯಾದ ರೀತಿಯಲ್ಲಿ ಕೊಡುಗೆಯನ್ನು ನೀಡಿರುವುದು ಆಶಾದಾಯಕ ಎಂದರು. ಸಹಶಿಕ್ಷಕರಿಗೆ ಪಠ್ಯದಷ್ಟೇ ಮಹತ್ವವನ್ನು ಪಠ್ಯೇತರ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳಲು ಶಿಕ್ಷಕರಿಗೆ ಪ್ರೇರೆಪಿಸುವ ಮೂಲಕ ಪ್ರತಿಭೆಗಳನ್ನು ಅನಾವರಣಗೊಳಿಸುವಲ್ಲಿ ಮುಖ್ಯ ಶಿಕ್ಷಕಿ ಗೀತಾ ಅವರ ಪಾತ್ರ ಮಹತ್ವದಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹಾಗೂ ಗ್ರಾ.ಪಂ.ಸದಸ್ಯ ರಫೀಕ್‍ಖಾನ್,…
ಸುಂಟಿಕೊಪ್ಪ ಡಿ.1 NEWS DESK : 7ನೇ ಹೋಸಕೋಟೆ ನಿವಾಸಿ, ನಿವೃತ್ತ ಯೋಧ ವಚನ್ ಅವರನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. 7ನೇ ಹೋಸಕೋಟೆ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಇ.ಬಿ.ಜೋಸೆಫ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದೀಶ್, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು, 17 ವರ್ಷಗಳ ದೇಶಕ್ಕೆ ಯೋಧರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡು ಸ್ವ ಗ್ರಾಮಕ್ಕೆ ಆಗಮಿಸಿದ ಗ್ರಾಮದ ನಿವಾಸಿ ಕೊರಗಪ್ಪ ಹಾಗೂ ಗಿರಿಜ ದಂಪತಿಗಳ ಪುತ್ರ ವಚನ್ ಅವರನ್ನು 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಉಪಾಧ್ಯಕ್ಷೆ ಸೌಮ್ಯಶ್ರೀ, ಕೆ.ಎಂ.ಮುಸ್ತಾಫ, ಮಧುಸೂದನ್, ಸಿದ್ಧೀಕ್, ವೇದಾವತಿ, ಕಮಲ ಚಂದ್ರಾವತಿ, ಪಂಚಾಯಿತಿ ಕಾರ್ಯದರ್ಶಿ ಸ್ವಾಮಿ ನಾಯಕ್, ಸಿಬ್ಬಂದಿಗಳಾದ ಪೂರ್ಣಿಮ, ಬೀನಾ, ಸರಿತಾ, ಹೇಮಾವತಿ ಮತ್ತಿತರರು ಇದ್ದರು.






