ಗೋಣಿಕೊಪ್ಪ, NEWS DESK ಸೆ.15 : ಗೋಣಿಕೊಪ್ಪದ ಉಮಾಮಹೇಶ್ವರಿ ಬಡಾವಣೆಯ ಪ್ರಸನ್ನ ಗಣಪತಿ ಸೇವಾ ಸಂಘದ ವತಿಯಿಂದ 15ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಗಣಪತಿ ಪ್ರತಿಷ್ಠಾಪನೆ ಹಾಗೂ ಗ್ರಾಮೀಣ ಕ್ರೀಡಾಕೂಟವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಮಂಗಳವಾರ ಬೆಳಗ್ಗೆ 6 ಗಂಟೆಗೆ ಗಣಪತಿ ಹೋಮ ನೆರವೇರಿಸಲಾಯಿತು. ಬಳಿಕ ಬೆಳಗ್ಗೆ 7 ಗಂಟೆಗೆ ಅರ್ಚಕ ನಾಗೇಶ್ ಅವರ ನೇತೃತ್ವದಲ್ಲಿ ಗಣಪತಿ ಪ್ರತಿಷ್ಠಾಪನೆ ಹಾಗೂ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ನಂತರ ಸ್ಥಳೀಯರಿಗಾಗಿ ಗ್ರಾಮೀಣ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಕಾಳೇಗೌಡ ಅವರು ಪುಷ್ಪ ತುಂಬಿದ ಬಲೂನ್ ಸಿಡಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಗಣೇಶೋತ್ಸವವು ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗಿರದೆ, ಜನರಲ್ಲಿ ಒಗ್ಗಟ್ಟು, ಬಾಂಧವ್ಯ ಹಾಗೂ ರಾಷ್ಟ್ರೀಯ ಚಿಂತನೆ ಬೆಳೆಸುವ ಉದ್ದೇಶದಿಂದ ಆಚರಣೆಗೆ ಬಂದಿರುವ ಮಹತ್ವದ ಹಬ್ಬವಾಗಿದೆ. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸುವಲ್ಲಿ ಗಣೇಶೋತ್ಸವ ಪ್ರಮುಖ ಪಾತ್ರ ವಹಿಸಿತ್ತು. ಅದೇ ಆಶಯವನ್ನು ಇಂದಿನ ಗಣೇಶೋತ್ಸವ ಸಮಿತಿಗಳು…
ಲೇಖಕ: admin
ಮಡಿಕೇರಿ, NEWS DESK ಸೆ.15 : ನಗರದ ರಾಜಾಸೀಟ್ ರಸ್ತೆಯಲ್ಲಿರುವ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 23ನೇ ವಾರ್ಷಿಕೋತ್ಸವ ಸೆ.24ರಿಂದ 26ರವರೆಗೆ ವಿವಿಧ ಧಾರ್ಮಿಕ ಕೈಂಕರ್ಯ ಹಾಗೂ ಪೂಜಾ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಸೆ.24ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪಾರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.25ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಹಾಗೂ ತೀರ್ಥಪ್ರಸಾದ ವಿನಿಯೋಗವಾಗಲಿದೆ. ಸಂಜೆ 6 ಗಂಟೆಯಿAದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭಗೊAಡು ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಟಾವಧಾನ ಸೇವೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ. ಸೆ.26ರಂದು ಗುರು ಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆಯಾಗಲಿದೆ. ವಾರ್ಷಿಕೋತ್ಸವದ ಎಲ್ಲಾ…
ಪೊನ್ನಂಪೇಟೆ, NEWS DESK ಸೆ.14 : ಕೊಡವ ಜನಾಂಗದವರು ತಮ್ಮ ನೈಜ ಆಚರಣೆ, ಸಂಪ್ರದಾಯ ಹಾಗೂ ಸಂಸ್ಕೃತಿಯನ್ನು ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು. ಜಬ್ಬೂಮಿ ಚಾರಿಟೇಬಲ್ ಟ್ರಸ್ಟ್ (ರಿ) ಆಶ್ರಯದಲ್ಲಿ ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿರುವ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಪುಸ್ತಕವನ್ನು ಓದದೆ ಯಾವುದೇ ವಿಚಾರವನ್ನು ಸಮರ್ಪಕವಾಗಿ ವಿಶ್ಲೇಷಿಸಲು ಸಾಧ್ಯವಿಲ್ಲ. ಒಂದು ಅಧ್ಯಯನಾತ್ಮಕ ಪುಸ್ತಕವನ್ನು ಹೊರತರುವುದು ಅತ್ಯಂತ ಕಷ್ಟದ ಕೆಲಸವಾಗಿದೆ. ಕೊಡವರು ಗುರು ಕಾರೋಣವನ್ನು ಪ್ರಾರ್ಥಿಸಿ ಕೇಳಿಕೊಂಡಾಗ ಅವರೇ ಎಲ್ಲವನ್ನೂ ತಿಳಿಸುವಂತಹ ಪೂರ್ವಕಾಲದಿಂದಲೂ ಬಂದಿರುವ ಆಧ್ಯಾತ್ಮಿಕ ಸಂಪರ್ಕವನ್ನು ಹೊಂದಿದ್ದಾರೆ ಎಂದು ಹೇಳಿದರು. ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಅವರು ರಚಿಸಿರುವ ಪುಸ್ತಕವನ್ನು ಎಲ್ಲರೂ ಓದಬೇಕು. ಪುಸ್ತಕವು ಉತ್ತಮವಾಗಿ ಮೂಡಿಬಂದಿದ್ದು, ಲೇಖಕರಿಗೆ ಯಶಸ್ಸು ದೊರೆಯಲಿ ಎಂದು ಹಾರೈಸಿದರು. ತಮ್ಮ ತಾತ 1963ರಲ್ಲಿ ಕೋವಿ ಹಕ್ಕಿನ ಕುರಿತು ಕಾನೂನು ಹೋರಾಟ ನಡೆಸಿದ್ದರು ಎಂದು ಸ್ಮರಿಸಿದ…
ಮಡಿಕೇರಿ NEWS DESK ಸೆ.14 : ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗಿನಿಂದಲೇ ಹೋಮಹವನಾದಿ ವಿಶೇಷ ಪೂಜೆಗಳು ಜರುಗಿದವು. ಅಭಿಷೇಕ, ಅಲಂಕಾರ ಪೂಜೆ, ಅರ್ಚನೆ, ಮಹಾಪೂಜೆಗೆ ಅಧಿಕ ಸಂಖ್ಯೆಯ ಭಕ್ತರು ಸಾಕ್ಷಿಯಾದರು. ಹರಕೆಯ ರೂಪದಲ್ಲಿ ಭಕ್ತರು ಸಾವಿರಾರು ಸಂಖ್ಯೆಯ ಈಡುಗಾಯಿ ಸೇವೆ ಅರ್ಪಿಸಿದರು. ಮಹಾ ಮಂಗಳಾರತಿಯ ನಂತರ ಭಕ್ತ ಸಮೂಹಕ್ಕೆ ಪ್ರಸಾದ ವಿತರಿಸಲಾಯಿತು.
ಗೋಣಿಕೊಪ್ಪ, NEWS DESK ಸೆ.14 : ಕಾವೇರಿ ದಸರಾ ಸಮಿತಿಯ ವತಿಯಿಂದ ಗೋಣಿಕೊಪ್ಪ ದಸರಾ ಉತ್ಸವದ ಪೂರ್ವಭಾವಿ ಸಭೆ ಪೊನ್ನಂಪೇಟೆ ತಾಲ್ಲೂಕಿನ ಜೋಡುಬಟ್ಟಿ ಭಾಗದಲ್ಲಿರುವ ಶ್ರೀ ಭಗವತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಕಾವೇರಿ ದಸರಾ ಸಮಿತಿ ಅಧ್ಯಕ್ಷರು, ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ ದಸರಾ ಉತ್ಸವದ ಸಿದ್ಧತೆಗಳ ಕುರಿತು ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಈ ಬಾರಿ ಗೋಣಿಕೊಪ್ಪ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಹೆಚ್ಚಿನ ಅನುದಾನ ದೊರೆತಿದೆ. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಗೋಣಿಕೊಪ್ಪ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಆಚರಿಸಲು ಅಗತ್ಯ ಕಾರ್ಯತಂತ್ರಗಳನ್ನು ರೂಪಿಸಿ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು. ದಸರಾ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಮೋದ್ ಗಣಪತಿ ಹಾಗೂ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತಿತೀರ…
ಪೊನ್ನಂಪೇಟೆ, NEWS DESK ಸೆ.14 : ಪೊನ್ನಂಪೇಟೆಯ ಸಾಯಿ ಶಂಕರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡಿದ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿ ಮಾಲೇಟ್ಟಿರ ಛಾಲ್ಸಿ ಜಿ. ಚಾಲ್ಸಿ ಪ್ರಥಮ ಸ್ಥಾನ, ಏಳನೇ ತರಗತಿಯ ವಿದ್ಯಾರ್ಥಿನಿ ಅಮ್ಮಂಡ ಗಿಯಾನಾ ಎ. ತೃತೀಯ ಸ್ಥಾನ ಹಾಗೂ ಆರನೇ ತರಗತಿಯ ವಿದ್ಯಾರ್ಥಿನಿ ರೋನಿಕಾ ಐದನೇ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಆರನೇ ತರಗತಿಯ ವಿದ್ಯಾರ್ಥಿ ಶರ್ಯ ಬಿ.ಎಸ್. ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಒಂಬತ್ತನೇ ತರಗತಿಯ ವಿದ್ಯಾರ್ಥಿ ಸಚಿನ್ ಎ. ಐದನೇ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಚೆಸ್ ಮಾಸ್ತರಾದ ಮಣಿ ಅವರು ತರಬೇತಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಧೇಶ್ ಬಿ.ಎಸ್. ಅವರು ಉಪಸ್ಥಿತರಿದ್ದರು. ತಾಲೂಕು ಮಟ್ಟದಲ್ಲಿ ಸಾಧನೆ ಮಾಡಿ…
ಮಡಿಕೇರಿ NEWS DESK ಸೆ.14 : ಕೊಡವ ನ್ಯಾಷನಲ್ ಕೌನ್ಸಿಲ್ (CNC) ವತಿಯಿಂದ ಕೊಡವ ಪ್ರದೇಶದಾದ್ಯಂತ ಹಮ್ಮಿಕೊಂಡಿರುವ ಜನಜಾಗೃತಿ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 19ರಂದು ಚೆಟ್ಟಳ್ಳಿಯಲ್ಲಿ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ. ನೂರೊಕ್ಕನಾಡಿನ ಚೆಟ್ಟಳ್ಳಿಯಲ್ಲಿ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಕೊಡವ ಜನಾಂಗದ ಅಸ್ತಿತ್ವ, ಗುರುತು, ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆ ಹಾಗೂ ಆರ್ಥಿಕ ಮತ್ತು ರಾಜಕೀಯ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು CNC ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡವಲ್ಯಾಂಡ್‌ಗೆ ಸಂವಿಧಾನದ 244, 371ನೇ ವಿಧಿಗಳು ಹಾಗೂ 5 ಮತ್ತು 6ನೇ ಶೆಡ್ಯೂಲ್‌ಗಳ ಅಡಿಯಲ್ಲಿ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ನೀಡಬೇಕು. ಕೊಡವ ಜನಾಂಗಕ್ಕೆ ಮೂಲನಿವಾಸಿ ಸಮುದಾಯವಾಗಿ ವಿಶೇಷ ಸಂವಿಧಾನಬದ್ಧ ಮಾನ್ಯತೆ ನೀಡಬೇಕು. ಕೊಡವರ ಪವಿತ್ರ ಗನ್-ಠೋಕ್ ಆಚರಣೆಯನ್ನು ಸಂವಿಧಾನದ 25, 26 ಮತ್ತು 28ನೇ ವಿಧಿಗಳ ಅಡಿಯಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿ ಮುಂದುವರಿಸಬೇಕು. ಕೊಡವತಕ್ಕ್ ಭಾಷೆಯನ್ನು ಸಂವಿಧಾನದ 8ನೇ ಶೆಡ್ಯೂಲ್‌ಗೆ…
ಮಡಿಕೇರಿ, NEWS DESK ಸೆ.14 : ಗಣೇಶ ಚತುರ್ಥಿ ಸಂಭ್ರಮದ ಅಂಗವಾಗಿ ಮೇಕೇರಿ ಶ್ರೀ ಗೌರಿಶಂಕರ ದೇವಾಲಯಕ್ಕೆ ಪೂಜ್ಯ ಶ್ರೀ ಶ್ರೀ ಶ್ರೀ ಬಸವಲಿಂಗ ಶಿವಯೋಗಿ ಸ್ವಾಮೀಜಿಗಳು ಆಗಮಿಸಿದರು. ಸ್ವಾಮೀಜಿಗಳ ಆಗಮನದ ಸಂದರ್ಭದಲ್ಲಿ ಮಾತೆಯರು ಪೂರ್ಣಕುಂಭದೊಂದಿಗೆ ಭಕ್ತಿಪೂರ್ವಕ ಸ್ವಾಗತ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಗಣೇಶ ಚತುರ್ಥಿಯ ಮಹತ್ವ, ಧಾರ್ಮಿಕ ಆಚರಣೆಗಳು ಹಾಗೂ ಸಮಾಜದಲ್ಲಿ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಗತ್ಯದ ಕುರಿತು ಸ್ವಾಮೀಜಿಗಳು ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಗಣೇಶ ಚತುರ್ಥಿಯನ್ನು ಸಂಭ್ರಮ, ಭಕ್ತಿಭಾವದಿಂದ ಆಚರಿಸಿದರು.
ವಿರಾಜಪೇಟೆ NEWS DESK ಸೆ.14 : ಪಟ್ಟಣದ ಮಲಬಾರ್ ರಸ್ತೆಯಲ್ಲಿರುವ ನಂಬರ್ 376ನೇ ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಬಿ.ವಿ. ಭವಾನಿ ಶಂಕರ್ ಬೋರ್ಕರ್, ಕೃಷ್ಣರಾವ್ ಹಾಗೂ ಸುಮಿತ್ರಬಾಯಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಹೆಗ್ಗಳ ಗ್ರಾಮದ ಅರ್ಚಕ ವೇಣುಗೋಪಾಲ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಮಾಜಿ ಅಧ್ಯಕ್ಷರು ಹಾಗೂ ಭೂಸೇನೆಯ ನಿವೃತ್ತ ಕ್ಯಾಪ್ಟನ್ ಬಿ.ವಿ. ಭವಾನಿ ಶಂಕರ್ ಬೋರ್ಕರ್ ಅವರು, ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಸಂಘವಾಗಿದೆ. ಮಲಬಾರ್ ರಸ್ತೆಯ ಬಳಿ ಸಂಘಕ್ಕೆ 1952ರಲ್ಲಿ ನಿವೇಶನ ದೊರೆತಿದ್ದು, 1955ರಲ್ಲಿ ಅಂದಿನ ಕೊಡಗು ಸಿ ರಾಜ್ಯದ ಮುಖ್ಯಮಂತ್ರಿ ಸಿ.ಎಂ. ಪೂಣಚ್ಚ ಅವರು ಸಂಘದ ಕಟ್ಟಡವನ್ನು ಉದ್ಘಾಟಿಸಿದ್ದರು ಎಂದು ಸ್ಮರಿಸಿದರು. ಸದಸ್ಯರ ಪ್ರೋತ್ಸಾಹ ಹಾಗೂ ಸಹಕಾರದಿಂದ ಸಂಘವು ಹಲವು ವರ್ಷಗಳಿಂದ ವಿವಿಧ…
ವಿರಾಜಪೇಟೆ, NEWS DESK ಸೆ.14 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಸಂಘ ಹಾಗೂ ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕು ಅನುದಾನ ರಹಿತ ಪ್ರೌಢಶಾಲೆಗಳ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿ ಶ್ರೀವತ್ಸ ಯು.ಎಸ್. ಅವರಿಗೆ ತಾಲೂಕಿಗೆ ಕೀರ್ತಿ ತಂದ ಸಾಧನೆಗಾಗಿ “ಗೌರವ ಪ್ರತಿಭಾ ಪುರಸ್ಕಾರ” ನೀಡಿ ಅಭಿನಂದಿಸಲಾಯಿತು. ಅದೇ ರೀತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯಲು ಶ್ರಮಿಸಿದ ಕಾವೇರಿ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದವನ್ನು ಪ್ರಶಂಸಿಸಿ ಅಭಿನಂದನಾ ಫಲಕ ನೀಡಿ ಗೌರವಿಸಲಾಯಿತು. ಶಾಲೆಯ ಪರವಾಗಿ ಈ ಪುರಸ್ಕಾರವನ್ನು ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು. ಅವರು ಸ್ವೀಕರಿಸಿದರು. ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆ ಹಾಗೂ ಶಾಲೆಯ ಶೇ.100ರಷ್ಟು ಫಲಿತಾಂಶಕ್ಕಾಗಿ ದೊರೆತ ಈ…






