ಲೇಖಕ: admin

ಕುಶಾಲನಗರ ಡಿ.1 NEWS DESK :  ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ವಿಜ್ಞಾನದ‌ ಕೌತುಕ  ವಿನೂತನ ಪ್ರಯೋಗಗಳ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಕಂಡುಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದು  ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2025-26 ನೇ ಸಾಲಿನ ರಾಷ್ಟ್ರೀಯ‌ ಆವಿಷ್ಕಾರ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು  ಉದ್ಘಾಟಿಸಿ ಮಾತನಾಡಿದರು.  ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ  ಹೆಚ್ಚು ಆಸಕ್ತಿ ಹಾಗೂ ಕುತೂಹಲ ಹೊಂದಬೇಕು. ಇದರಿಂದ‌ ತಮ್ಮಲ್ಲಿರುವ ಸುಪ್ತ‌ ಪ್ರತಿಭೆಯನ್ನು ಹೊರಹಾಕಿ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸಾಧ್ಯ ಎಂದರು. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡರೆ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬಹುದು ಎಂದರು.…

Read More

ನಾಪೋಕ್ಲು ಡಿ.1 NEWS DESK : ಹದಗೆಟ್ಟ ರಸ್ತೆಯ ಗುಂಡಿಗಳನ್ನು ಮುಚ್ಚುವ ಮೂಲಕ ಕೊಟ್ಟಮುಡಿಯ ಜೀನತ್ ಯುವಕ ಸಂಘದ ಪದಾಧಿಕಾರಿಗಳು, ಸದಸ್ಯರು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕೊಟ್ಟಮುಡಿ ಇಂದ ಕಾವೇರಿ ನದಿ ಸೇತುವೆಯವರೆಗೆ ಹದಗೆಟ್ಟ ರಸ್ತೆಯಲ್ಲಿ ಶ್ರಮದಾನ ನಡೆಸಿ, ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಮಡಿಕೇರಿ – ನಾಪೋಕ್ಲು ಮುಖ್ಯ ರಸ್ತೆಯಲ್ಲಿ ಕೊಟ್ಟಮುಡಿ ಇಂದ ಕಾವೇರಿ ನದಿ ಸೇತುವೆಯವರೆಗೆ ರಸ್ತೆಗಳು ಗುಂಡಿ ಬಿದ್ದು ಸಂಚಾರಕ್ಕೆ ತೊಡಕು ಉಂಟಾಗಿತ್ತು. ಅಪಘಾತಗಳು ಹೆಚ್ಚಾಗುತ್ತಿತ್ತು. ಈ ನಿಟ್ಟಿನಲ್ಲಿ ರಸ್ತೆ ದುರಸ್ತಿಗೆ ಒತ್ತಾಯಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ. ರಸ್ತೆ ದುರಸ್ತಿಗೆ ಅಧಿಕಾರಿಗಳ ಸ್ಪಂದನೆ ಸಿಗದಿದ್ದರಿಂದ ಕೊಟ್ಟ ಮುಡಿಯ ಜೀನತ್ ಯುವಕ ಸಂಘದ ಪದಾಧಿಕಾರಿಗಳು ತಮ್ಮ ವಾಹನದಲ್ಲೇ ಮಣ್ಣು ತಂದು ರಸ್ತೆ ಹುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಮುಂದಾದರು. ಗುಂಡಿಗಳಿಗೆ ಮಣ್ಣು ಕಲ್ಲು ತುಂಬಿ ದುರಸ್ತಿ ಕಾರ್ಯ ನಡೆಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಶ್ರಮದಾನದಲ್ಲಿ…

Read More

ಮಡಿಕೇರಿ ಡಿ.1 NEWS DESK : ಬೆಂಗಳೂರಿನಲ್ಲಿ ಬೆಂಗ್ ನಾಡ್ ಕೊಡವ ಒತ್ತೋರ್ಮೆ ಕೂಟ ಆಯೋಜಿಸಿದ ಇಂಟರ್ ನಾಡು ಹಾಕಿ ಪಂದ್ಯಾವಳಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.  ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಕಿ ಮೈದಾನದಲ್ಲಿ ನಡೆದ ಫೈನಲ್ ಪಂದ್ಯಾಟದ ವೀಕ್ಷಣೆಯನ್ನು ನೆರವೇರಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದ ಶಾಸಕರು, ಕೊಡಗಿನ ಜನತೆಯ ಉಸಿರಿನಲ್ಲಿ ಹಾಕಿ ಪಂದ್ಯಾವಳಿ ಹಾಸುಹೊಕ್ಕಿದೆ. ಪ್ರತಿಷ್ಠಿತವಾದ ಈ ಪಂದ್ಯಾವಳಿಯ ವೀಕ್ಷಣೆಯನ್ನು ಮಾಡಿ ಈ ಪಂದ್ಯಾಟದ ರೋಚಕತೆಯನ್ನು ಆಸ್ವಾದಿಸುವ ಸೌಭಾಗ್ಯ ಒದಗಿದ್ದು, ತನಗೆ ಸಂತೋಷ ತಂದಿದೆ. ಯುವ ಪ್ರತಿಭೆಗಳನ್ನು ಲೋಕಕ್ಕೆ ಪರಿಚಯಿಸುವಂತಹ ಇಂಥ ಕ್ರೀಡಾಕೂಟಗಳು ಮತ್ತಷ್ಟು ನಡೆಯಲಿ ಎಂದು ಹಾರೈಸುತ್ತಾ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಬೆಂಗ್ ನಾಡ್ ಕೊಡವ ಒತ್ತೋರ್ಮೆ ಕೂಟ್ಟದ ಅಧ್ಯಕ್ಷರಾದ ಕೇಕಡ ಎ ದೇವಯ್ಯ, ಭಾರತಿಯ ಹಾಕಿ ತಂಡದ ಮಾಜಿ ನಾಯಕ ಮೋಳೆರ ಪಿ…

Read More

ಗೋಣಿಕೊಪ್ಪ ಡಿ.1 NEWS DESK : ವಿರಾಜಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಹಿರಿಯ ಮುಖ್ಯ ಶುಶ್ರೂಷಾಧಿಕಾರಿಯಾಗಿರುವ ಇಂದಿರಾವತಿ ಎಂ.ಬಿ ಅವರು ಫ್ಲಾರೆನ್ಸ್ ನೈಟಿಂಗೇಲ್ ನರ್ಸ್ ಪ್ರಶಸ್ತಿ -2025 ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕರ್ನಾಟಕ ಸುದ್ದಿ ಸಂಘ” ಮತ್ತು “ಭಾರತದ ರಾಷ್ಟ್ರೀಯ ಪತ್ರಿಕಾ ಮಂಡಳಿ” ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ನೀಡುವ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಯನ್ನು ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಟೌನ್‌ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಮೂರ್ನಾಡಿನ ಅವಂದೂರು ಗ್ರಾಮದ ಶಾಸ್ತ್ರಿ ನಗರದ ನಿವಾಸಿ, ಮೊಟೇರ ಜಯರಾಮ್ ಅವರ ಧರ್ಮ ಪತ್ನಿಯಾಗಿದ್ದಾರೆ.

Read More

ಮಡಿಕೇರಿ ಡಿ.1 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ ವರ್ಷಂಪ್ರತಿಯಂತೆ ಮೂರು ದಿನಗಳ ಪುತ್ತರಿ ಈಡ್ ಕಾರ್ಯಕ್ರಮಕ್ಕೆ  ಪುತ್ತರಿ ಕೋಲ್ ಮಂದ್ ನಲ್ಲಿ ಚಾಲನೆ ನೀಡಲಾಯಿತು. ಮಡಿಕೇರಿ ಕೊಡವ ಸಮಾಜದ ಅಧೀನದಲ್ಲಿ‌ ಜಿಲ್ಲಾ ಕ್ರೀಡಾಂಗಣದ ಸನೀಹದಲ್ಲಿರುವ ಮಂದ್ ಈ ಬಾರಿ ನವೀಕರಣಗೊಂಡಿದ್ದು‌, ಹೊಸದಾಗಿ ಆಲ್ ಮರ ನೆಡುವ ಕಾರ್ಯವನ್ನು ನಡೆಸಲಾಗಿತ್ತು. ಪುತ್ತರಿ ಹಬ್ಬಕ್ಕೂ ಮುನ್ನ ಕೊಡವ ಜನಪದ ಕಲೆಗಳನ್ನು ಯುವಕ ಪೀಳಿಗೆಗೂ ಕಲಿಸುವ ಮೂಲಕ ಈಡ್ ಹೆಸರಿನಲ್ಲಿ ತಾಲೀಮು ನಡೆಸುವುದು ಸಂಪ್ರದಾಯಬದ್ದವಾದ ವಾಡಿಕೆಯಾಗಿದೆ. ಆರಂಭಿಕ ದಿನದಂದು ನಗರ ವ್ಯಾಪ್ತಿಯ ಹಲವಷ್ಟು ಕೊಡವ ಬಾಂಧವರು ಪಾಲ್ಗೊಂಡಿದರು.‌ ಕೊಡವ ಸಮಾಜದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ, ಕೊಡವ ಸಾಂಪ್ರದಾಯಿಕ ಉಡುಪಿನೊಂದಿಗೆ ನವೀಕೃತಗೊಂಡಿರುವ ಮಂದ್ ತೆರೆಯುವ ಕಾರ್ಯಕ್ರಮದೊಂದಿಗೆ ಪುತ್ತರಿ ಈಡಿಗೆ ಚಾಲನೆ ನೀಡಿ ಮಾತನಾಡಿದರು. ಮಂದ್ ನೆಲೆಯ ಬೃಹತ್ ಮರ ಮುರಿದು ಬಿದ್ದು ಅದೇ ನೆಲೆಯಲ್ಲಿ ಅರಳಿ ಗಿಡವನ್ನು ಸಂಪ್ರದಾಯವಾಗಿ ನೆಡಲಾಯಿತು. ಹಿಂದಿನ ಸಂಪ್ರದಾಯದಂತೆ ಪುತ್ತರಿ ನಮ್ಮೆಯ ಮೂರು ದಿನ ಮುಂಚಿತವಾಗಿ ಈ ಮಂದ್‌ನಲ್ಲಿ…

Read More

ಬೆಂಗಳೂರು NEWS DESK ನವೆಂಬರ್ 30 : ಕನ್ನಡ ಭಾಷೆ ರಾಜ್ಯದ  ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು  ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು   ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ  ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ  ಕಾರ್ಯಕ್ರಮವನ್ನು ಉದ್ಘಾಟಿಸಿ,  ಮಾತನಾಡಿದರು. *ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ* ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು ಲಕ್ಷಕ್ಕೂ ಹೆಚ್ಚಿದೆ. 1882 ನೇ ಗೆಜೆಟ್ ಬಂದಾಗ ಸಕಲೇಶಪುರದಲ್ಲಿದ್ದು,  ಬರಗಾಲದ ಸಂದರ್ಭದಲ್ಲಿ ಹೇಮಾವತಿ ನದಿ ಬತ್ತಿದಾಗ ಪಕ್ಕದ ಜಿಲ್ಲೆ ಸುಳ್ಯಕ್ಕೆ ಬಂದು ನೆಲೆಯೂರುತ್ತಾರೆ, ತುಳು,  ಕೊಂಕಣಿ ಜೊತೆಗೆ ಕನ್ನಡ ಸೇರಿ ಅರೆಭಾಷೆಯಾಗಿದೆ. ಹೋಗುತ್ತೇನೆ ಎನ್ನುವುದು ವೋನೆ , ಬರುತ್ತೇನೆ ಎನ್ನುವುದು ಬನೇ ಎಂದು ಹೇಳುತ್ತಾರೆ. ಹೀಗೆ ಕೆಲವು ಅಕ್ಷರಗಳು ಬಿಟ್ಟುಹೋಗಿ  ಅರೆಭಾಷೆಯಾಗಿದೆ ಎಂದರು.…

Read More

ಮಡಿಕೇರಿ NEWS DESK ನ.30 : ಹೆಚ್ಚಿನ ಸಂಖ್ಯೆಯಲ್ಲಿರುವ ಒಕ್ಕಲಿಗ ಜನಾಂಗ ಬಾಂಧವರು ಸಂಘಟಿತರಾಗಿ ಗುರುತಿಸಿಕೊಳ್ಳಲು ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಕುಶಾಲನಗರ ತಾಲ್ಲೂಕು ಒಕ್ಕಲಿಗರ ಸಂಘದ ಖಜಾಂಚಿ ಅರುಣ್ ಚಂಗಪ್ಪ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನವಾಗಿದ್ದು, ರಾಜ್ಯ ಒಕ್ಕಲಿಗರ ಸಂಘದ ಸದಸ್ಯತ್ವದ ಅರ್ಜಿಗಳನ್ನು ನಾಡಪ್ರಭು ಪತ್ತಿನ ಬ್ಯಾಂಕ್, ಕುಶಾಲನಗರ, ಡಿ.ಸಿ.ಸಿ ಬ್ಯಾಂಕ್‌ನ ಜಿಲ್ಲಾ ಮತ್ತು ತಾಲ್ಲೂಕು ಶಾಖೆಗಳಲ್ಲಿ ವಿತರಿಸಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಕ್ಕಲಿಗ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಆದರೆ ಸಂಘಟಿತರಾಗಿ ಗುರುತಿಸಿಕೊಳ್ಳುವ ಪ್ರಮಾಣ ತುಂಬಾ ಕಡಿಮೆ ಇದೆ. ಆದ್ದರಿಂದ ಪ್ರತಿಯೊಬ್ಬರೂ ಸದಸ್ಯತ್ವ ಪಡೆಯುವ ಮೂಲಕ ಒಕ್ಕಲಿಗ ಸಮುದಾಯದ ಶಕ್ತಿಯನ್ನು ಹೆಚ್ಚಿಸಲು ಮುಂದಾಗಬೇಕೆAದು ಕರೆ ನೀಡಿದ್ದಾರೆ. ನಿಗಧಿತ ದಿನಾಂಕದೊಳಗೆ ಸದಸ್ಯತ್ವ ಶುಲ್ಕ ಪಾವತಿಸಿ ಅರ್ಜಿ ಪಡೆಯಬೇಕು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬAಧಿಸಿದ ಬ್ಯಾಂಕ್ ಶಾಖೆಗೆ ಸಲ್ಲಿಸಬೇಕು ಎಂದು ಅರುಣ್ ಚಂಗಪ್ಪ ಹೇಳಿದ್ದಾರೆ.

Read More

ಮಡಿಕೇರಿ NEWS DESK ನ.30 : ಕಳೆದ 40 ವರ್ಷಗಳಿಂದ ಕೊಡವರ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಪ್ರಯತ್ನಗಳು ನಡೆಯುತ್ತಿದೆ. ಕೊಡಗು ಹಾಗೂ ಈ ದೇಶಕ್ಕೆ ಕೊಡವರ ಕಾಣಿಕೆ ಏನೇನೂ ಇಲ್ಲ ಎಂದು ಪ್ರತಿಬಿಂಬಿಸುವ ಮೂಲಕ ಕೊಡವರನ್ನು ಖಳನಾಯಕರಂತೆ ತೋರಿಸುವ ಕ್ರೂರ ಹುನ್ನಾರ ಮುಂದುವರೆದಿದೆ. ಕೊಡವ ಲ್ಯಾಂಡ್ ಗಾಗಿ ಒತ್ತಾಯಿಸಿ ಮತ್ತು ಕೊಡವರ ಕುರಿತು ಸುಳ್ಳು ಚರಿತ್ರೆ ಸೃಷ್ಟಿಯ ವಿರುದ್ಧ ಜನಜಾಗೃತಿ ಮೂಡಿಸಲು ಜನವರಿ ತಿಂಗಳಿನಿಂದ ಜಿಲ್ಲೆಯಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ತಿಳಿಸಿದ್ದಾರೆ. 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಪಾಲಿಬೆಟ್ಟದಲ್ಲಿ ನಡೆದ 21ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿ.ರಿಚರ್ ಬರೆದ ‘ಕೂರ್ಗ್ ಗೆಜಿಟಿಯರ್’, ಡಿ.ಎನ್.ಕೃಷ್ಣಯ್ಯ ಅವರು ಬರೆದ ‘ಕೊಡಗಿನ ಇತಿಹಾಸ’, ಕೃಷ್ಣಮೂರ್ತಿ ಅವರು ಬರೆದ…

Read More

ಸೋಮವಾರಪೇಟೆ ನ.29 NEWS DESK : ನಾವು ಕನ್ನಡದಲ್ಲಿ ಮಾತನಾಡಿದಾಗ, ಕನ್ನಡದಲ್ಲಿ ಬರೆದಾಗ, ಕನ್ನಡದ ಸಾಹಿತ್ಯ ಓದಿದಾಗ, ಕನ್ನಡದ ಕಲೆಯನ್ನು ಬೆಂಬಲಿಸಿದಾಗ ಕನ್ನಡ ಭಾಷೆ ಬದುಕುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಸಂತ ಜೋಸೆಫರ ವಿದ್ಯಾ ಸಂಸ್ಥೆ ಮತ್ತು ಜಿಲ್ಲಾ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಸಂಭ್ರಮ- 2025 ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು. ಕನ್ನಡ ಅತೀ ಪ್ರಾಚೀನ ಭಾಷೆಯಾಗಿದೆ. ತರ್ಕಬದ್ಧಭಾಷೆಯೂ ಕೂಡ. 8 ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕನ್ನಡಿಗರು ಕನ್ನಡವನ್ನು ಹೆಮ್ಮೆಯಿಂದ ಮಾತನಾಡಬೇಕು. ಪರಭಾಷಿಕರಿಗೆ ಕನ್ನಡವನ್ನು ಮಾತನಾಡುವಂತೆ ಹೇಳಿಕೊಡಬೇಕು ಎಂದು ಹೇಳಿದರು. ಕನ್ನಡ ನಮ್ಮ ಮಾತೃಭಾಷೆ, ಹೃದಯದ ಭಾಷೆಯಾಗಿದೆ. ಕನ್ನಡ ಅನ್ನಕೋಡುವ ಭಾಷೆ, ಆದರೂ ಇತರ ಭಾಷೆಯನ್ನು ಕಲಿಯಬೇಕು. ಗೌರವಿಸಬೇಕು ಎಂದು ಕಿವಿ ಮಾತು ಹೇಳಿದರು. ಭಾರತಾಂಬೆ ತಾಯಿಯಾದರೆ ಕನ್ನಡಾಂಭೆಯನ್ನು ಮಗಳಾಗಿ…

Read More

ಮಡಿಕೇರಿ ನ.29 NEWS DESK : ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ದೇಶಕ್ಕೆ ಯಶಸ್ವಿಯನ್ನು ತಂದು ಕೊಡಿ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ  ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಶಸ್ವಿಯಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಆಶಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಚಿತ್ರಾ ವೈ. ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು. ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಖಜಾಂಚಿ ವಿವಿಯನ್ ಅಂತೋಣಿ ಆಲ್ವಾರಿಸ್ ಮಾತನಾಡಿ, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳಿಗೆ ಹೆಚ್ಚಿನ…

Read More