ಲೇಖಕ: admin

ಮಡಿಕೇರಿ ನ.29 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮಡಿಕೇರಿಯ ಸಂತ ಜೋಸೆಪರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ‘ಸ್ವಚ್ಛ ಕೊಡಗು ಸುಂದರ ಕೊಡಗು’ ಸ್ವಚ್ಛತಾ ಅಭಿಯಾನವು ನಗರದ ಮುಖ್ಯರಸ್ತೆಯಲ್ಲಿ ನಡೆಯಿತು. ನಗರದ ರಾಜಾಸೀಟು ಮುಂಭಾಗದಲ್ಲಿ ನಗರ ಪೊಲೀಸ್ ಅಧಿಕಾರಿ ರಾಧಾ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ನಗರದ ಮುಖ್ಯರಸ್ತೆಗಳ ಇಕ್ಕೆಲಗಳಲ್ಲಿ ತ್ಯಾಜ್ಯ ಕಸವನ್ನು ಹೆಕ್ಕಿ ವಿಲೇವಾರಿ ಮಾಡಲಾಯಿತು. ಬಳಿಕ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತೆರಳಿದ ವಿದ್ಯಾರ್ಥಿಗಳು ಅಲ್ಲಿಯೂ ಸ್ವಚ್ಛತಾ ಅಭಿಯಾನ ಕೈಗೊಂಡರು. ಸಂತ ಜೋಸೆಫರ ಗೈಡ್ ಶಿಕ್ಷಕಿ ಎನ್.ಪಿ.ಪ್ರೇಮ, ಶಿಕ್ಷಕಿಯರಾದ ಡಯನಾ ಚಂಗಪ್ಪ, ಪ್ರದೀಪ್, ಸ್ಕೌಟ್ಸ್‍ನ ಜಿಲ್ಲಾ ಸಹಾಯಕ ಆಯುಕ್ತರಾದ ಗಣೇಶ್, ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಪಿಲೋಮಿನಾ ಡಿ’ಸೋಜ, ಜಿಲ್ಲಾ ಸಂಘಟಕರಾದ ದಮಯಂತಿ, ಸಂತ ಜೋಸೆಫರ ಶಾಲಾ ಶಿಕ್ಷಕರುಗಳಾದ ಮೋಹಿನಿ ಸಿ.ಸಿ., ದಿವ್ಯ, ಹಾಗೂ…

Read More

ಗೋಣಿಕೊಪ್ಪ ನ.29 NEWS DESK : ಒಬ್ಬರ ರಕ್ತದಿಂದ ಮೂವರ ಜೀವ ಉಳಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮನವಿ ಮಾಡಿಕೊಂಡರು. ಮಾಧ್ಯಮ ಸ್ಪಂದನ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ರೋಟರಿ ಸಹಯೋಗದಲ್ಲಿ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಒಬ್ಬರು ನೀಡುವ ರಕ್ತದಿಂದ ಕನಿಷ್ಠ ಮೂವರ ಜೀವ ಉಳಿಸಲು ಸಾಧ್ಯವಿದೆ. ಇದರಿಂದ ರಕ್ತದಾನ ಮಹತ್ವವನ್ನು ಅರಿತುಕೊಂಡು ಸ್ವಯಂಪ್ರೇರಿತವಾಗಿ ನೀಡಲು ಮುಂದಾಗಬೇಕಿದೆ ಎಂದು ಮನವಿ ಮಾಡಿಕೊಂಡರು. ಕೊಡಗು ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಾಗುತ್ತಿದ್ದು, ಶಿಬಿರ ಆಯೋಜನೆ ಮೂಲಕ ಬೇಡಿಕೆ ಪೂರೈಸಿಕೊಳ್ಳುವ ಕಾರ್ಯದಲ್ಲಿ ರಕ್ತನಿಧಿ ಕೇಂದ್ರ ತೊಡಗಿಕೊಂಡಿದೆ. ವಾರಕ್ಕೆ ಕನಿಷ್ಟ 3 ಶಿಬಿರಗಳು ರಕ್ತದಾನಕ್ಕಾಗಿ ಮೀಸಲಿಡುವ ಅನಿವಾರ್ಯತೆ ಎದುರಾಗಿದೆ. ಪ್ರಸ್ತುತ ವರ್ಷಕ್ಕೆ ಸುಮರು 100 ಶಿಬಿರ…

Read More

ಮಡಿಕೇರಿ ನ.29 NEWS DESK : ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ಮತ್ತು ಒಂದು ಲೀಟರ್ ನ ಪ್ಲಾಸ್ಟಿಕ್ ಬಾಟಲ್ ಗಳ ಮಾರಾಟವನ್ನು ನಿಷೇಧಿಸಿರುವಂತೆ ಕೊಡಗು ಜಿಲ್ಲೆಯಾದ್ಯಂತ ಈ ಕ್ರಮವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ವಿರಾಜಪೇಟೆಯ ಯೋಗೇಶ್ ನಾಯ್ಡು ಟಿ.ಎಂ ಅವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು ಪ್ಲಾಸ್ಟಿಕ್ ಬಾಟಲ್ ಗಳಿಂದ ಜಿಲ್ಲೆಯ ಪರಿಸರದ ಮೇಲೆ ಉಂಟಾಗುತ್ತಿರುವ ವ್ಯತಿರಿಕ್ತ ಪರಿಣಾಮದ ಕುರಿತು ವಿವರಿಸಿದರು. ಪ್ಲಾಸ್ಟಿಕ್ ಬಾಟಲಿಗಳ ನಿಷೇಧದ ಕ್ರಮ ಮಡಿಕೇರಿ ನಗರದಲ್ಲಿ ಯಶಸ್ವಿಯಾಗಿದೆ. ಆದರೆ ಜಿಲ್ಲೆಯ ಇತರ ಭಾಗಗಳಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ನ ಪ್ಲಾಸ್ಟಿಕ್ ಬಾಟಲ್ ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದಾಗಿ ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಾಟಲ್ ಗಳ ರಾಶಿ ಕಂಡು ಬರುತ್ತಿದ್ದು, ಅಶುಚಿತ್ವಕ್ಕೆ ಕಾರಣವಾಗಿದೆ. ಚರಂಡಿ ಮತ್ತು ತೋಡುಗಳಲ್ಲಿ ನೀರಿನ ಹರಿವಿಗೂ ತೊಡಕುಂಟಾಗುತ್ತಿದೆ. ವಿರಾಜಪೇಟೆ ಭಾಗದಲ್ಲಿ ಪ್ಲಾಸ್ಟಿಕ್ ಬಾಟಲ್ ಗಳು ವ್ಯಾಪಕವಾಗಿ…

Read More

ಕುಶಾಲನಗರ ನ.29 NEWS DESK : ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸರಕಾರಿ ಬಸ್ ನಿಲ್ದಾಣ ಆವರಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕನ್ನಡ ರಾಜ್ಯೋತ್ಸವನ್ನು ಉದ್ಯಮಿ ಹಾಗೂ ಆಟೋ ಚಾಲಕರ ಸಂಘದ ಕಟ್ಟಡಕ್ಕೆ ಸ್ಥಳ ದಾನಿಗಳಾದ ವಿ.ಎನ್.ತೇಜಸ್ ನಾಗೇಶ್ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಕನ್ನಡ ಭಾಷೆ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕು. ಮನೆ ಮನದಲ್ಲಿ ಕನ್ನಡ ಭಾಷೆ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು. ಕುಶಾಲನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಕೃಷ್ಣದರ್ಶನ್ ಅಧ್ಯಕ್ಷತೆ ವಹಿಸಿದ್ದರು. ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಗೌಡ, ಖಜಾಂಚಿ ಮುನೀರ್, ಮಾಜಿ ಕಾರ್ಯದರ್ಶಿ ಮೂರ್ತಿ, ಮಂಜು ಬೆಳ್ಳುಳ್ಳಿ, ಕಾರು ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಉದಯಕುಮಾರ್, ಲಾರಿ ಟ್ರಾನ್ಸ್ ಸ್ಪೋರ್ಟ್ಸ್ ಮಾಲೀಕರ ಸಂಘದ…

Read More

ಗೋಣಿಕೊಪ್ಪ ನ.29 NEWS DESK : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದ್ದು, ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ ಹೆಚ್ಚು ಹೆಚ್ಚು ಓದುವುದರಿಂದ ಜ್ಞಾನ ಬಂಡಾರವನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸುಗಳಿಸಲು ಸಾಧ್ಯವಾಗುತ್ತದೆ. ಆದರೆ ಇಂದಿನ ಯುವಜನತೆ ಪತ್ರಿಕೆ ಹಾಗೂ ಪುಸ್ತಕ ಓದುವುದನ್ನು ಕಡಿಮೆ ಮಾಡಿ, ಮೊಬೈಲ್ ಫೋನ್ ಕಡೆಗೆ ಆಕರ್ಷಿತರಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಮಯ ಕಳೆಯುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ತಮ್ಮ ಓದಿಕೆ ಪೂರಕವಾಗಿ, ಕ್ರಿಯಾಶೀಲತೆಯನ್ನು ಬೆಳೆಸಿಕೊಳ್ಳಲು ಹಿತಮಿತವಾಗಿ ಬಳಸಿಕೊಳ್ಳಬೇಕು.…

Read More

ಮಡಿಕೇರಿ ನ.29 NEWS DESK : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನ.30 ರಂದು ಬೆಳಗ್ಗೆ 9.30 ಗಂಟೆಗೆ 2024 ನೇ ವರ್ಷದ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಡಾ.ಯು.ಟಿ.ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾಜಿ ಸಚಿವರಾದ ಡಿ.ವಿ.ಸದಾನಂದ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರು ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕಸರಾದ ಡಾ.ಮಂತರ್ ಗೌಡ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ.ಗರುಡಾಚಾರ್, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ…

Read More

ಮಡಿಕೇರಿ ನ.29 NEWS DESK : ಶನಿವಾರಸಂತೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F3-ಶನಿವಾರಸಂತೆ ಟೌನ್ ಫೀಡರ್‌ನಲ್ಲಿ ನ.30 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ಫೀಡರ್‌ನಿಂದ ಹೊರಹೊಮ್ಮುವ ಶನಿವಾರಸಂತೆ ಪಟ್ಟಣ, ಗುಡುಗಳಲೆ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಕುಶಾಲನಗರ ನ.29 NEWS DESK : ಕಾಂಗ್ರೆಸ್ ಹೈಕಮಾಂಡ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೂಡಲೇ ಮುಖ್ಯಮಂತ್ರಿಯಾಗಿ ಘೋಷಿಸಬೇಕೆಂದು ಒತ್ತಾಯಿಸಿ ಕುಶಾಲನಗರ ತಾಲ್ಲೂಕಿನ ಒಕ್ಕಲಿಗರ ಸಮಾಜದಿಂದ ಒಕ್ಕೊರಲಿನಿಂದ ಒತ್ತಾಯದೊಂದಿಗೆ ಜಯಕಾರಗಳು ಮೊಳಗಿದವು. ತೊರೆನೂರು ಒಕ್ಕಲಿಗರ ಸಮಾಜದ ಅಧ್ಯಕ್ಷ ಟಿ.ಪಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಗ್ರಾಮದ ಬಸವೇಶ್ವರ ದೇವಾಲಯದ ಬಳಿ ಜಮಾವಣೆಗೊಂಡ ಸಮಾಜ ಬಾಂಧವರು ಹಾಗೂ ಡಿಕೆಶಿ ಅಭಿಮಾನಿಗಳು ಡಿಕೆಶಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.  ಬಳಿಕ ಭಾವಚಿತ್ರ ಹಿಡಿದು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತಾಯಿ ಹರಸಲಿ. ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಘೋಷಣೆಯಾಗಲಿ ಎಂದು ಒತ್ತಾಯಿಸಲಾಯಿತು. ಈ ಸಂದರ್ಭ ಮಾತನಾಡಿದ ಸಮಾಜದ ಅಧ್ಯಕ್ಷ ಸೋಮಶೇಖರ್, 2023 ರ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಅವಿರತ ಶ್ರಮದ ಫಲವಾಗಿ ರಾಜ್ಯದಲ್ಲಿ ಹಿಂದೆಂದು ಕೇಳಿರದಂತಹ 136 ಸೀಟುಗಳು ಬರುವ ಮೂಲಕ ಕಾಂಗ್ರೆಸ್ ಬಹುಮತಗಳಿಂದ ಅಧಿಕಾರಕ್ಕೆ ಬಂತು. ದೈವಭಕ್ತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಶ್ರಮದಿಂದಾಗಿ ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿ ಇರುವ ಒಕ್ಕಲಿಗರು ಡಿ.ಕೆ.ಶಿವಕುಮಾರ್…

Read More

ಕುಶಾಲನಗರ ನ.29 NEWS DESK : ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೊಸದಾಗಿ ಜಾರಿಗೆ ತಂದಿರುವ ಪಠ್ಯಾಧಾರಿತ ಮೌಲ್ಯಾಂಕವನ್ನು ಚಾಚು ತಪ್ಪದೇ ಪರಿಪಾಲಿಸುವ ಮೂಲಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ಪ್ರೌಢಶಾಲಾ ಶಿಕ್ಷಕರು ವಿಶೇಷ ಕಾಳಜಿ ವಹಿಸಬೇಕು ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಶುಕ್ರವಾರ ತಾಲ್ಲೂಕಿನ ಪ್ರೌಢಶಾಲಾ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ಶಿಕ್ಷಕರಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶವನ್ನು ಸುಧಾರಿಸುವ ಕುರಿತಂತೆ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶಾಲಾ ಶಿಕ್ಷಣ ಇಲಾಖೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಪಠ್ಯಾಧಾರಿತ ಮೌಲ್ಯಾಂಕ( ಎಲ್.ಬಿ.ಎ.) ಬೋಧನೆ ಮೂಲಕ ಮಕ್ಕಳ ಕಲಿಕಾ ಪ್ರಗತಿಯ ಉನ್ನತೀಕರಣಕ್ಕೆ ಶಿಕ್ಷಕರು ಹೆಚ್ಚಿನ ಗಮನ ಹರಿಸಬೇಕು ಎಂದರು. ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ರಶ್ಮಿ ಮಹೇಶ್ ಅವರ…

Read More

ಬಾರ್ದಿಲ ಶ್ರೀ ಸಾಂಬಸದಾಶಿವ ದೇವಸ್ಥಾನವು ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದಲ್ಲಿದೆ. ತೇತ್ರಾಯುಗದ ಕ್ಷತ್ರಿಯ ಸಂಹಾರಕ ಭಗವಾನ್ ಪರಶುರಾಮರು ತನ್ನ ಕೊಡಲಿಯನ್ನೆಸೆದು ಸೃಷ್ಟಿಸಿದ ಪವಿತ್ರ ಸ್ಥಳ. ಈ ತುಳು ನಾಡಿನ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲೆಂಜಾರು ಗ್ರಾಮದ ದೇವರಗುಡ್ಡೆ ಎಂಬ ಎತ್ತರವಾದ ಗುಡ್ಡದಲ್ಲಿರುವ ಶ್ರೀ ಕ್ಷೇತ್ರದಲ್ಲಿ “ಅಂಬಾ(ಪಾರ್ವತಿ)ಗಣಪತಿ” ಸಮೇತರಾಗಿ ‘ಶಿವ ದೇವರು’ ನೆಲೆಸಿರುವುದರಿಂದ “ಸಾಂಬಸದಾಶಿವ” ಎಂಬ ಹೆಸರಿನಿಂದ ಆರಾಧಿಸಲ್ಪಡುತ್ತಿದ್ದು, ಶ್ರೀ ಕ್ಷೇತ್ರವು ಕಾರಣಿಕ ಹಿನ್ನಲೆಯುಳ್ಳ ಪರಮ ಪವಿತ್ರ ಕ್ಷೇತ್ರವಾಗಿದೆ.  :: ಇತಿಹಾಸ ::  ಸಾವಿರಾರು ವರ್ಷಗಳ ಹಿಂದೆ ಭಗವಾನ್ ಪರಶುರಾಮ ದೇವರು ಈ ಎತ್ತರವಾದ ಗುಡ್ಡ ಪ್ರದೇಶದಲ್ಲಿ ತಪಸ್ಸನ್ನಾಚರಿಸಿದರು. ತದನಂತರ ಋಷಿಮುನಿಗಳು ಈ ಪ್ರದೇಶದಲ್ಲಿ ಹಲವು ಕಾಲ ಯಾಗ, ಯಜ್ಞ, ತಪಸ್ಸುಗಳನ್ನು ಮಾಡಿದ ತಪೋಭೂಮಿಯಾಯಿತು. ನಂತರದ ಕಾಲದಲ್ಲಿ ಇಲ್ಲಿಯ ಮೂಲ ನಿವಾಸಿಗಳು ತಮಗೆ ಬಂದ ತೊಂದರೆಗಳನ್ನು ಕಂಡು, ಈ ಪ್ರದೇಶದಲ್ಲಿ ದೈವಿ ಶಕ್ತಿಯಿದೆಯೆಂದು ತಿಳಿದು ತಮ್ಮದೇ ರೀತಿಯಲ್ಲಿ ದೇವಿ ಶಕ್ತಿ/ಕಾಳಿಶಕ್ತಿಯನ್ನು ಪೂಜಿಸಿ ಆರಾಧಿಸಿಕೊಂಡು ಬಂದಿದ್ದರು. ತದನಂತರ ರಾಜ ಮಹಾರಾಜರ ಆಳ್ವಿಕೆಯ…

Read More