ಮಡಿಕೇರಿ ಡಿ.15 NEWS DESK : 66/11 ಕೆ.ವಿ.ವಿರಾಜಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಹೊರಹೊಮ್ಮುವ 33 ಕೆ.ವಿ ಸಿದ್ದಾಪುರ ವಿವಿ ಕೇಂದ್ರದಲ್ಲಿ ಡಿಸೆಂಬರ್, 16 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 5 ಎಂವಿಎ ಪರಿವರ್ತಕ ಬದಲಾವಣೆ ಹಾಗೂ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾಮಗಾರಿ ಕೈಗೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಸಿದ್ದಾಪುರ ಪಟ್ಟಣ, ಕರಡಿಗೋಡು, ಅವರೆಗುಂದ, ಕೆಸವಿನಹಳ್ಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಲೇಖಕ: admin
ಮಡಿಕೇರಿ ಡಿ.15 NEWS DESK : ಕನ್ನಡ ಉಪ ಭಾಷೆಗಳಲ್ಲಿ ಒಂದಾದ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಲು ಸಿನಿಮಾ, ನಾಟಕ ಹಾಗೂ ಕಿರುಚಿತ್ರಗಳ ನಿರ್ಮಾಣ ಕಾರ್ಯ ಹೆಚ್ಚಾಗಿ ಆಗಬೇಕು ಎಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಚೊಕ್ಕಾಡಿ ಎನ್.ಅಪ್ಪಯ್ಯ ಅವರು ಸಲಹೆ ಮಾಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಸಹಯೋಗದೊಂದಿಗೆ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಬೆಳವಣಿಗೆಯಲ್ಲಿ ಸಮಾಜಗಳ ಪಾತ್ರ ಕುರಿತು ಅವರು ಮಾತನಾಡಿದರು. ಇಂದಿನ ಸಾಮಾಜಿಕ ಮಾಧ್ಯಮ ಯುಗದಲ್ಲಿ ಸಿನಿಮಾ ನಾಟಕ, ಸಾಕ್ಷ್ಯಚಿತ್ರ, ಕಿರುಚಿತ್ರಗಳು, ಎಲ್ಲರನ್ನು ಗಮನಸೆಳೆಯುತ್ತವೆ. ಆದ್ದರಿಂದ ಸಾಮಾಜಿಕ ಮಾಧ್ಯಮವು ಪ್ರಬಲವಾಗಿದ್ದು, ಆ ನಿಟ್ಟಿನಲ್ಲಿ ಅರೆಭಾಷೆ ಬೆಳವಣಿಗೆಗೆ ಇವುಗಳ ನಿರ್ಮಾಣ ಕಾರ್ಯ ಅತ್ಯಗತ್ಯ ಎಂದು ಅಪ್ಪಯ್ಯ ಅವರು ಪ್ರತಿಪಾದಿಸಿದರು. ಅರೆಭಾಷೆಯಲ್ಲಿ ಪುಸ್ತಕಗಳನ್ನು ಹೆಚ್ಚಾಗಿ ಪ್ರಕಟಿಸುವಂತಾಗಬೇಕು. ಪುಸ್ತಕಗಳ ಪ್ರಕಟಣೆ ಒಂದು ಗ್ರಂಥವಾಗಿದ್ದು, ಆ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಯಬೇಕು ಎಂದು ಅಪ್ಪಯ್ಯ ಅವರು…
ಮಡಿಕೇರಿ ಡಿ.15 NEWS DESK : ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ 2ನೇ ವರ್ಷದ ಕೊಡಗು ಜಿಲ್ಲಾಮಟ್ಟದ ಪತ್ರಕರ್ತರ ವಾಲಿಬಾಲ್ ಪಂದ್ಯಾವಳಿಯಲ್ಲಿ ಟೀಂ ಸ್ಮ್ಯಾಶರ್ಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು. ಪಂದ್ಯಾಟದಲ್ಲಿ ಟೀಂ ಸ್ಮ್ಯಾಶರ್ಸ್, ಟೀಂ ಚೀತಾ, ಟೀಮ್ ಫ್ಲೈಯರ್ಸ್, ಟೀಂ ಜಂಪರ್ಸ್, ಟೀಂ ಹಂಟರ್ಸ್ ಮತ್ತು ಟೀಂ ಬ್ಲಾಕರ್ಸ್ ತಂಡಗಳು ಪಾಲ್ಗೊಂಡಿತ್ತು. ಲೀಗ್ ಮಾದರಿಯಲ್ಲಿ ನಡೆದ ಪಂದ್ಯಾಟದಲ್ಲಿ 4 ತಂಡಗಳು ಕ್ವಾಲಿಫಯರ್ ಹಂತಕ್ಕೆ ಪ್ರವೇಶ ಪಡೆಯಿತು. ಮೊದಲ ಕ್ಲಾಲಿಫೈಯರ್ ಪಂದ್ಯಾಟದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ಟೀಂ ಸ್ಮ್ಯಾಶರ್ಸ್ ತಂಡ 26-24 ಪಾಯಿಂಟ್‌ಗಳಿಂದ ಅಕ್ಷಯ್ ನಾಯಕತ್ವದ ಟೀಂ ಫ್ಲೈಯರ್ಸ್ ತಂಡವನ್ನು ಮಣಿಸಿತು. ನಂತರ ನಡೆದ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಪ್ರೇಮ್ ನಾಯಕತ್ವದ ಟೀಂ ಚೀತಾ ತಂಡ 25-19 ಪಾಯಿಂಟ್‌ಗಳಿಂದ ಆದರ್ಶ್ ನಾಯಕತ್ವದ ಟೀಂ ಜಂಪರ್ಸ್ ತಂಡವನ್ನು ಮಣಿಸಿತು. 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರೇಮ್ ನಾಯಕತ್ವದ ಟೀಂ ಚೀತಾ ತಂಡ 25-27…
ಮಡಿಕೇರಿ ಡಿ.15 NEWS DESK : ಮಡಿಕೇರಿ ತಾಲ್ಲೂಕಿನ ಮರಗೋಡು ಹೊಸ್ಕೇರಿ ಗ್ರಾಮದ ಬೇರಂಗಿ ಬೆಟ್ಟದ ‘ಬಯಲ ಈಶ್ವರ ಸನ್ನಿಧಿ’ಯಲ್ಲಿ ಡಿ.21 ರಂದು ಏಳನೇ ವಾರ್ಷಿಕೋತ್ಸವ ನಡೆಯಲಿದೆ. ವಾರ್ಷಿಕೋತ್ಸವ ಪ್ರಯುಕ್ತ ಅಂದು ಬೆಳಗ್ಗೆ 10 ಗಂಟೆಗೆ ಈಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ, ಮಹಾ ಮಂಗಳಾರತಿ ನಡೆಯಲಿದೆ. ಬಳಿಕ ಭಕ್ತರಿಗೆ ಅನ್ನದಾನವನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವತಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಿ.ಎಂ.ರಾಮಣ್ಣ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.15 NEWS DESK : ಕೊಡವರ ಕುರಿತು ಸುಳ್ಳು ಚರಿತ್ರೆಗಳನ್ನು ಸೃಷ್ಟಿಸುವ ಮೂಲಕ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವ ಸಮುದಾಯದ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ಕೊಡವರು ಜಾಗೃತರಾಗಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ. 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿಯಲ್ಲಿ ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು ಪ್ರತ್ಯೇಕವಾಗಿ `ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ತಿತಿಮತಿಯಲ್ಲಿ ನಡೆದ 22ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಅನೇಕ ವರ್ಷಗಳಿಂದ ಕೊಡವರ ಹಕ್ಕುಗಳ ಮೇಲೆ ಆಗುತ್ತಿರುವ ದಾಳಿಯನ್ನು ನಾವು ಸಹಿಸಿಕೊಂಡೇ ಬಂದಿದ್ದೇವೆ. ನಮ್ಮ ಹಕ್ಕನ್ನು ಕಸಿದುಕೊಳ್ಳುವವರಿಗೆ ಸರಕಾರ ಅಧಿಕಾರದಲ್ಲಿ ಉಳಿಯುವುದಕ್ಕಾಗಿ ಬೆಂಬಲವನ್ನು ನೀಡುತ್ತಾ ಬಂದಿದೆ, ಸರಕಾರ ಈ ನಾಡಿನ ಬಹುಸಂಖ್ಯಾತರ ಪರವಾಗಿದೆ ಎಂದು ಆರೋಪಿಸಿದರು. 1970ರ ನಂತರ ಈ ರೀತಿಯ…
ಮಡಿಕೇರಿ ಡಿ.15 NEWS DESK : ಬಾಳೆಹೊನ್ನೂರಿನ ಕಾಫಿ ಸಂಶೋಧನಾ ಸಂಸ್ಥೆ ನೂರು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ಆಶ್ರಯದಲ್ಲಿ ಡಿ.20ರಿಂದ 22 ರವರೆಗೆ ಬಾಳೆಹೊನ್ನೂರಿನಲ್ಲಿ ಶತಮಾನೋತ್ಸವ ಸಮಾರಂಭ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತ ಸರ್ಕಾರದ ಕೇಂದ್ರ್ರ ಕಾಫಿ ಮಂಡಳಿಯ ನಿರ್ದೇಶಕ ತಳೂರು ಕಿಶೋರ್ ಕುಮಾರ್ ಅವರು ಶತಮಾನೋತ್ಸವ ಸಮಾರಂಭವನ್ನು ಡಿ.20ರಂದು ಕೇಂಧ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಶ್ ಗೋಯಲ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಂಸದೀಯ ವ್ಯವಹಾರ ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ, ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರ ಸ್ವಾಮಿ, ಕೇಂದ್ರ ವಾಣಿಜ್ಯ ಸಚಿವರಾದ ಜತಿನ್ ಪ್ರಸಾದ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಸಂಸದರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಯದುವೀರ್ ಒಡೆಯರ್, ಕಾಫಿ ಮಂಡಳಿ ಅಧ್ಯಕ್ಷರಾದ ವಿ.ಜಿ.ದಿನೇಶ್ ಹಾಗೂ ಚಿಕ್ಕಮಗಳೂರು ಮತ್ತು ಕೊಡಗಿನ ಶಾಸಕರುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. *ಘೋಷವಾಕ್ಯ* ಅರೇಬಿಯಾ ದೇಶದಿಂದ ಬಾಬಾ ಬುಡನ್…
ಮಡಿಕೇರಿ ಡಿ.15 NEWS DESK : ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರಾರಂಭಗೊಂಡು ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ, ಕಳೆದ ಇಪ್ಪತ್ತೈದು ವರ್ಷಗಳ ಕಾಲ ನಡೆದ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಗಳ ನಡುವಣ ‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ಯು ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಡಿ.26 ರಿಂದ 30ರವರೆಗೆ ಮೂರ್ನಾಡಿನಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪಂದ್ಯಾವಳಿಯ ಕುರಿತು ವಿವರಗಳನ್ನಿತ್ತ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಈ ಪಂದ್ಯಾವಳಿಯನ್ನು ಹಾಕಿ ಕೂರ್ಗ್, ಎಂ.ಬಾಡಗ ಸ್ಪೋರ್ಟ್ಸ್ ರಿಕ್ರಿಯೇಷನ್ ಸಂಸ್ಥೆ ಮತ್ತು ಮೂರ್ನಾಡು ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಮೂರ್ನಾಡಿನ ದಿ.ಬಾಚೆಟ್ಟೀರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಲೀಗ್ ಮತ್ತು ನಾಕ್ ಔಟ್ ಮಾದರಿಯಲ್ಲಿ ಆಯೋಜಿಸುತ್ತಿರುವುದಾಗಿ ತಿಳಿಸಿದರು. :: ಯಾವೆಲ್ಲ ಕಟುಂಬಗಳು ಪಾಲ್ಗೊಳ್ಳಲಿವೆ ? :: ಕೊಡವ ಹಾಕಿ ಅಕಾಡೆಮಿ ಗೌರವ ಕಾರ್ಯದರ್ಶಿ ಕುಲ್ಲೇಟಿರ ಅರುಣ್ ಬೇಬ ಅವರು ಮಾತನಾಡಿ, ಕಳೆದ ಇಪ್ಪತ್ತೈದು ವರ್ಷಗಳಲ್ಲಿ ನಡೆದ ಕೌಟುಂಬಿಕ ಕೊಡವ ಹಾಕಿ…
ಕುಶಾಲನಗರ ಡಿ.15 NEWS DESK : ನಾಡು ಕಂಡ ಅಪರೂಪದ ರಾಜಕಾರಣಿ, ಶಿಕ್ಷಣ ಪ್ರೇಮಿ, ಸಮಾಜದ ಸಂಘಟಕ, ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರರ ಅಗಲಿಕೆ ಇಡೀ ನಾಡಿಗೆ ತುಂಬಲಾರದ ನಷ್ಟ ಎಂದು ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ವಿ.ಶಿವಪ್ಪ ವಿಷಾದಿಸಿದರು. ಕುಶಾಲನಗರದ ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಆವರಣದಲ್ಲಿ ನಡೆದ ಶ್ರದ್ದಾಂಜಲಿ ಸಭೆಯಲ್ಲಿ ಶಾಮನೂರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಅವರದ್ದೇ ಆದ ಕಲ್ಪನೆಯಲ್ಲಿ ದಾವಣಗೆರೆ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿದ್ದಲ್ಲದೇ 50 ಕ್ಕೂ ಹೆಚ್ಚಿನ ಶಿಕ್ಷಣ ಸಂಸ್ಥೆಗಳನ್ನು ತೆರೆದು ಸಹಸ್ರ ಮಂದಿಗೆ ಬೆಳಕಾದವರು. ವೀರಶೈವ ಸಮಾಜವನ್ನು ರಾಷ್ಟ್ರೀಯ ಮಟ್ಟದಲ್ಲಿ ಸಂಘಟಿಸಿ ಸಮಾಜದ ಪ್ರಶ್ನಾತೀತ ನಾಯಕರಾಗಿದ್ದರು ಎಂದು ಶಿವಪ್ಪ ಬಣ್ಣಿಸಿದರು. ಬಸವೇಶ್ವರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಭಶಿವಯ್ಯ ಮಾತನಾಡಿ, ವೀರಶೈವ ಸಮಾಜದಲ್ಲಿ ಗುಂಪುಗಳಾಗದಂತೆ ಎಚ್ಚರಿಕೆ ವಹಿಸಿ ಇಳಿ ವಯಸ್ಸನ್ನೂ ಲೆಕ್ಕಿಸದೇ ದಾವಣಗೆರೆಯಲ್ಲಿ ಪಂಚಪೀಠಗಳ ಶ್ರೀಗಳನ್ನು ಒಂದೆಡೆ ಸೇರಿಸಿ ನಡೆಸಿದ ಬೃಹತ್ ಸಮಾವೇಶ ಇತಿಹಾಸದ ಪುಟಗಳಲ್ಲಿ…
ವಿರಾಜಪೇಟೆ ಡಿ.15 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆ ಹಾಗೂ ಕೆದಮುಳ್ಳೂರು ಫಾತಿಮಾ ಮಾತೇಯ ದೇವಾಲಯದ ಸಂಯುಕ್ತ ಆಶ್ರಯದಲ್ಲಿ ಡಿ.17 ರಂದು ಕೆದಮುಳ್ಳೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ಕಾರ್ಯಕ್ರಮ ಸಂಚಾಲಕ ಕಿಶೋರ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೆದಮುಳ್ಳೂರು ಗ್ರಾಮದ ಸೆಂಟ್ ಮೇರೀಸ್ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಕಣ್ಣಿನ ಪೊರೆ ಚಿತ್ಸೆಯನ್ನು ಏರ್ಪಡಿಸಲಾಗಿದೆ. ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆಯ ನುರಿತ ವೈದ್ಯರು ಆರೋಗ್ಯ ಹಾಗೂ ನೇತ್ರ ಚಿಕಿತ್ಸೆಯನ್ನು ಒದಗಿಸಲಿದ್ದಾರೆ. ಅಂದು ಬೆಳಿಗ್ಗೆ 10 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಡಿ.15 NEWS DESK : ಸ್ಪಧಾ೯ತ್ಮಕ ಪರೀಕ್ಷೆಗಳಿಗೆ ಸೂಕ್ತ ತಯಾರಿ ಮಾಡಿಕೊಳ್ಳುವಲ್ಲಿ ವಾತಾ೯ ಪತ್ರಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಕೆ.ಕೆ.ಸುಮಿತ ಅಭಿಪ್ರಾಯಪಟ್ಟಿದ್ದಾರೆ. ಮಾದಾಪುರದ ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಥೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಹಾಸನ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರು ಮತ್ತು ಕಾಲೇಜಿನ ಮಾಜಿ ಉಪನ್ಯಾಸಕಿ ಕೆ.ಕೆ.ಸುಮಿತಾ , ವಿದ್ಯಾರ್ಥಿಗಳಿಗೆ ಗುರಿ ಮತ್ತು ಛಲ ಎರಡೂ ಇರಬೇಕು. ಪ್ರಚಲಿತ ವಿದ್ಯಮಾನ ಮತ್ತು ವಾರ್ತಾ ಪತ್ರಿಕೆಯಲ್ಲಿನ ಮುಖ್ಯಾಂಶಗಳನ್ನು ಬರೆದಿಟ್ಟುಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಸೂಕ್ತ ತಯಾರಿ ನಡೆಸಿಕೊಳ್ಳಬೇಕು. ಸತತ ಪರಿಶ್ರಮ ಹಾಗೂ ಆತ್ಮ ವಿಶ್ವಾಸ ದಿಂದ ಮುನ್ನಡೆಯಬೇಕೆಂದು ಅವರು ವಿದ್ಯಾಥಿ೯ಗಳಿಗೆ ಕಿವಿಮಾತು ಹೇಳಿದರು. ಸ್ವತಃ ಕ್ರೀಡಾಪಟುವಾದ ಸುಮಿತ, ಕ್ರೀಡೆ ಮತ್ತು ವಿದ್ಯಾಭ್ಯಾಸ ನಮ್ಮ ಭವಿಷ್ಯವನ್ನು ರೂಪಿಸುತ್ತದೆ ಎಂದು ಹೇಳಿದರು. ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಕರ್ನಲ್ ಬಿ ಜಿ ವಿ ಕುಮಾರ್ ಮಾತನಾಡಿ ಇಂದಿನ ಮಕ್ಕಳು ಸಂಸ್ಕಾರವನ್ನು ಮೈಗೂಡಿಸಿಕೊಳ್ಳಬೇಕೆಂದು…






