ಲೇಖಕ: admin

ಮಡಿಕೇರಿ ನ.27 NEWS DESK : ಯುವಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ದ ಪೋಷಕರು ಮತ್ತು ಸಮಾಜವನ್ನು ಜಾಗ್ರತಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾಯ೯ಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ದವಾಗಿರುವ ಮೈಸೂರಿನಲ್ಲಿಯೇ 400 ಕೋಟಿ ಮೌಲ್ಯದ ಮಾದಕ ಪದಾಥ೯ಗಳು ದೊರಕಿರುವುದು ಕಳವಳಕಾರಿ ಸಂಗತಿಯಾಗಿದೆ. ಶಾಲಾ, ಕಾಲೇಜುಗಳಲ್ಲಿ ಚಾಕೋಲೇಟ್ ಸೇರಿದಂತೆ ವಿವಿಧ ರೂಪಗಳಲ್ಲಿ ಮಾದಕ ದ್ರವ್ಯ ವಿತರಿಸುವ ಜಾಲ ಬೖಹದಾಕಾರದಲ್ಲಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಮಾದಕ ವ್ಯಸನದ ಅಪಾಯವನ್ನು ವಿದ್ಯಾಥಿ೯ಗಳು, ಪೋಷಕರಿಗೆ ತಿಳಿಸಿ, ಜಾಗೃತಿ ಉಂಟು ಮಾಡುವ ಕಾಯ೯ಕ್ರಮಗಳು ಹೆಚ್ಚಾಗಿ ಆಯೋಜಿತವಾಗಬೇಕೆಂದು ಅವರು ಕರೆ ನೀಡಿದರು. ಮನೆ ಮತ್ತು ಶಾಲೆಯಲ್ಲಿ ಮಕ್ಕಳ ವಿಚಿತ್ರ ಅಥವಾ ಅತಿರೇಕದ ವತ೯ನೆ ಕಂಡುಬಂದಾಗ ಸೂಕ್ಷ್ಯವಾಗಿ ಇಂಥ ವತ೯ನೆಗಳನ್ನು ಶಿಕ್ಷಕರು, ಪೋಷಕರು ಗಮನಿಸಿ ಎಚ್ಚತ್ತುಕೊಂಡು ಸೂಕ್ತ ಚಿಕಿತ್ಸೆ…

Read More

ವಿರಾಜಪೇಟೆ ನ.27 NEWS DESK : ಪೊನ್ನಂಪೇಟೆಯ ಸರ್ಕಾರಿ ಶಾಲೆಯಲ್ಲಿ 1994-1999 ಬ್ಯಾಚ್ ನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ದೇವಗೇರಿ, ಗುರುಗಳು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಾರೆ. ಗುರುಗಳ ಆಶೀರ್ವಾದದಿಂದ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಗುರುಗಳಿಗೆ ಗೌರವವನ್ನು ಸೂಚಿಸುದರ ಮೂಲಕ ಕಾರ್ಯಕ್ರಮವನ್ನು ಆಯೋಜಿಸಿರುವುದು ಗಮನಾರ್ಹ ಎಂದು ಹೇಳಿದರು. ಪೊನ್ನಂಪೇಟೆ ಸರ್ಕಾರಿ ಶಾಲೆಯ ಶಿಕ್ಷಕಿ ಅಂಬುಜ, ದೇವಕಿ ಹಾಗೂ ಶಾಂತಿ ಮಾತನಾಡಿ, ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಕರೆ ನೀಡಿದರು.  ಕಾರ್ಯಕ್ರಮದಲ್ಲಿ  16 ಶಿಕ್ಷಕರುಗಳನ್ನು ಸನ್ಮಾನಿಸುವುದರ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು. ಪೊನ್ನಂಪೇಟೆ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಎಸ್ ಡಿ ಎಂ ಸಿ ಸದಸ್ಯರಾದ ರಾಮಕೃಷ್ಣ, ಅನೀಶ್, ಸೌಕಾತಾಲಿ, ಪೊನ್ನಣ್ಣ, ಮಹಮದ್ ಆಲಿ, ಜೀಷ, ಶ್ರೀಜ ಮೊದಲಾದವರು ಹಾಜರಿದ್ದರು. ಅಬ್ದುಲ್…

Read More

ಸಿದ್ದಾಪುರ ನ.27  NEWS DESK : ಇತಿಹಾಸ ಪ್ರಸಿದ್ಧ ಬೈರಂಬಾಡದ ಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.  ದೇವಾಲಯದ ಪ್ರಧಾನ ಅರ್ಚಕರ ಗೋಪಾಲಕೃಷ್ಣ ಅವರ ಸಮ್ಮುಖದಲ್ಲಿ ಪೂಜಾ ಕೈಂಕರ್ಯಗಳೊಂದಿಗೆ ನಡೆಯಿತು. ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ, ಮೂರ್ನಾಡು, ನಾಪೊಕ್ಲು,  ವಿರಾಜಪೇಟೆ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟ, ಒಂಟಿಯಂಗಡಿ, ಮರಗೋಡು, ಹಾಕತ್ತೂರು ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ  ಬಂದಿದ್ದ ಭಕ್ತರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು. ತೀರ್ಥಪ್ರಸಾದ ಸ್ವೀಕರಿಸಿದರು. ದೇವರಿಗೆ ಮಹಾಮಂಗಳಾರತಿ ಸೇವೆ ನಡೆದ ಬಳಿಕ ಮಧ್ಯಾಹ್ನ ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂರ್ತಪಣೆ ನಡೆಯಿತು. ದೇವಾಲಯದ ಹೊರಭಾಗದಲ್ಲಿ ಹರಕೆ ಹೊತ್ತ ಭಕ್ತಾದಿಗಳು ಬೆಳಿಗ್ಗೆಯಿಂದ ಕೇಶ ಮುಂಡನ ನೆರವೇರಿಸಿದರು. ಭಕ್ತಾದಿಗಳಿಗೆ ಕುಳಿತುಕೊಳ್ಳಲು ಸೂಕ್ತ ಪೆಂಡಾಲ್ ವ್ಯವಸ್ಥೆ ಮಾಡಲಾಗಿತ್ತು. ಸರ್ಕಲ್ ಇನ್ಸ್ಪೆಕ್ಟರ್ ಪಿ.ಕೆ.ರಾಜು, ಸಿದ್ದಾಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.  ದೇವಸ್ಥಾನ ಸಮಿತಿ ಮುಖ್ಯಸ್ಥರಾದ ಬೆಳ್ಳಿಯಪ್ಪ, ಅಯ್ಯಪ್ಪ, ಕರುಂಬಯ್ಯ, ಮುತ್ತಣ್ಣ, ಮಾದಪ್ಪ, ಪೆಮ್ಮಯ್ಯ, ಸುಬ್ರಮಣಿ,…

Read More

ವಿರಾಜಪೇಟೆ ನ.27 NEWS DESK : ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಭೋದಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಂವಿಧಾನವು ಶ್ರೇಷ್ಠ ಕಾನೂನು ಆಗಿದ್ದು ಅದು ರಾಷ್ಟ್ರದ ಐಕ್ಯತೆಯ ಪ್ರತೀಕವಾಗಿದೆ. ಪ್ರಜೆಗಳಿಗೆ ಹಕ್ಕನ್ನು ನೀಡಿ ಕರ್ತವ್ಯವನ್ನು ಪಾಲಿಸಲು ನಿರ್ದೇಶನವನ್ನು ನೀಡುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಸಂವಿಧಾನವೇ ಮೂಲಧಾರವಾಗಿದೆ ಎಂದರು. ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಮಾತನಾಡಿದರು. ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ವಿರಾಜಪೇಟೆ ನ.27 NEWS DESK : ವಿದ್ಯಾರ್ಥಿಗಳು ಸಮಾಜದಲ್ಲಿ ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಿ ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ಎನ್.ಸಿ.ಚಂದ್ರಶೇಖರ್  ಅಭಿಪ್ರಾಯಪಟ್ಟರು. ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ಎನ್ ಎಸ್ ಎಸ್ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೆಚ್ ಐ ವಿ/ಏಡ್ಸ್ ಅರಿವು ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳು ಹೆಚ್ ಐ ವಿ /ಏಡ್ಸ್ ನ ಬಗ್ಗೆ ಸಮಾಜದಲ್ಲಿ ಜಾಗೃತಿಯನ್ನು ಮೂಡಿಸಬೇಕು. 2030 ರ ವೇಳೆಗೆ ಹೆಚ್ ಐ ವಿ ಯನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿ ಹೊಂದಲಾಗಿದ್ದು, ರೆಡ್ ರಿಬ್ಬನ್ ಕ್ಲಬ್ ಗಳ ಪಾತ್ರವು ಅದರಲ್ಲಿ ಬಹಳಷ್ಟಿದೆ. ಏಡ್ಸ್ ಮಾರಕ ಕಾಯಿಲೆ ಎಂಬುವುದಕ್ಕಿಂತ ಅದರ ಜಾಗೃತಿ ಮೂಡಿದಾಗ ಮಾತ್ರ ನಿಯಂತ್ರಣ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ರವರು…

Read More

ಮಡಿಕೇರಿ ನ.27 NEWS DESK : ಸಂವಿಧಾನ ಜೀವನದ ಅಂಗವಾಗಿದ್ದು, ನಮ್ಮೆಲ್ಲ ಕರ್ತವ್ಯ , ಕೆಲಸಗಳು ಸರಾಗವಾಗಿ ನಡೆಯಲು ಕಾರಣವೇ ನಮ್ಮ ಸಂವಿಧಾನ ಎಂದು ಎರಡನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಎಸ್.ನಟರಾಜ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಲಾ , ತಾಲ್ಲೂಕು ಕಾನೂನು ಸೇವೆಗಳ ಸಮಿತಿ ವಿರಾಜಪೇಟೆ, ವಿರಾಜಪೇಟೆ ಕಾವೇರಿ ಕಾಲೇಜಿನ ಎನ್ಎಸ್ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ನಾವೆಲ್ಲ ಇಂದು ಇಷ್ಟು ಶಿಸ್ತಿನಿಂದ ಹಾಗೂ ಸ್ವತಂತ್ರದಿಂದ ಬದುಕಲು ಸಂವಿಧಾನವೇ ಮೂಲ ಕಾರಣ. ವಿವಿಧ ದೇಶಗಳಿಗೆ ನಮ್ಮ ದೇಶವನ್ನು ಹೋಲಿಕೆ ಮಾಡಿದರೆ ಸಂವಿಧಾನದ ಮಹತ್ವ ಏನೆಂದು ತಿಳಿಯುತ್ತದೆ. ನಮ್ಮ ಸಂವಿಧಾನ ಅದ್ಭುತವಾದ ಜೀವಂತ ಸಂವಿಧಾನವಾಗಿದ್ದು, ಇದನ್ನು ರಚಿಸಲು ಪಟ್ಟಂತಹ ಶ್ರಮವನ್ನು ಅರಿಯುವುದರೊಂದಿಗೆ, ರಚಿಸಿದಂತಹ ಅಂಬೇಡ್ಕರ್ ಹಾಗೂ ರಚನಾ ಸಮಿತಿಯಲ್ಲಿದ್ದ ಪ್ರತಿಯೊಬ್ಬರನ್ನು ಸ್ಮರಿಸಬೇಕು. ಸಂವಿಧಾನವು ಎಲ್ಲಾ ಕಾನೂನಿನ ತಾಯಿ ಎಂಬುದನ್ನು ಅರಿತು ಪ್ರತಿಯೊಬ್ಬರ ಹಕ್ಕು ಕರ್ತವ್ಯಗಳನ್ನು…

Read More

ವಿರಾಜಪೇಟೆ ನ.27 NEWS DESK : ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ.ಘಟಕ, ಎನ್.ಎಸ್.ಎಸ್ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು. ಭಾರತದ ಸಂವಿಧಾನ ಪ್ರಸ್ತಾವನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಅರ್ಜುನ್ ಮೌರ್ಯ ಅವರು ಸಂವಿಧಾನ ಪ್ರಸ್ತಾವನೆ ಮತ್ತು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ವಯವಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಟ್ಟ ಕೀರ್ತಿ ನಮ್ಮದು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯವನ್ನೊಳಗೊಂಡ ನಮ್ಮ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಮತ್ತು ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಕಾನೂನಿಗೆ ಸಂಬಂಧಿಸಿದ ಯಾವುದೇ ವಿಚಾರಗಳಿಗೂ ಭಾರತೀಯ ಸಂವಿಧಾನದ ಒಳಗಡೆ ಪರಿಹಾರ ಇದ್ದೇ ಇದೆ. ಇಂತಹ ಸಂವಿಧಾನವನ್ನು ರಚನೆ ಮಾಡಿ ನೀಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂವಿಧಾನವನ್ನು ಕುರಿತ ಸಂಪೂರ್ಣ ಜ್ಞಾನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕೊಡಗು ವಿಶ್ವವಿದ್ಯಾನಿಲಯದ ರಾ.ಸೇ.ಯೋ.ಯ ನೋಡಲ್ ಅಧಿಕಾರಿ ಪ್ರೊ. ದಯಾನಂದ…

Read More

ನಾಪೋಕ್ಲು ನ.27 NEWS DESK : ನಾಪೋಕ್ಲುವಿನ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ನಡೆಯಿತು. ಬಲ್ಲಮಾವಟಿ ಗ್ರಾಮದ ಭಗವತಿ ದೇವಾಲಯದಲ್ಲಿ ವಿಶೇಷ ನಾಗನ ಪೂಜೆಯನ್ನು ನೆರವೇರಿಸಲಾಯಿತು. ಬಲ್ಲಮಾವಟಿ, ನೆಲಜಿ, ಪುಲಿಕೋಟು ಗ್ರಾಮದ ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನ ಮಹಾಪೂಜೆ ನೆರವೇರಿಸಲಾಯಿತು. ಭಕ್ತರಿಗೆ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ಸದಸ್ಯರು, ತಕ್ಕ ಮುಖ್ಯಸ್ಥರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ನ.27 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಷಷ್ಠಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ನಾಗನ ಬನಕ್ಕೆ ರುದ್ರಾಭಿಷೇಕ, ಹಾಲು ಎಳೆ ನೀರು ಸೇರಿದಂತೆ ವಿವಿಧ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಅರುಣ್ ಕುಮಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಪಾರುಪತ್ಯಗಾರ ಟಿ.ಕೆ.ಮನು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ನ.27 NEWS DESK : ಹಳೆತಾಲ್ಲೂಕಿನ ಶಿವಚಾಳಿಯಂಡ ಕುಟುಂಬದ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ದೇವರಿಗೆ ಹಾಲು, ಎಲೆನೀರು ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭ ಹಿರಿಯರಾದ ವಚಾಳಿಯಂಡ ಸಹದೇವ, ಮಾದಪ್ಪ, ಅಂಬಿ ಕಾರ್ಯಪ್ಪ, ಕಿಶೋರ್ ಬೋಪಣ್ಣ, ಲವ, ಸುಭಾಷ್ ಇನ್ನಿತರ ಉಪಸ್ಥಿತರಿದ್ದು. ವರದಿ : ದುಗ್ಗಳ ಸದಾನಂದ. 

Read More