ನಾಪೋಕ್ಲು ಡಿ.12 NEWS DESK : ಬಲಮುರಿ ಗ್ರಾಮದ ನೆಬ್ಬೂರು ಗೌಡ ಸಂಘದ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ ಕಟ್ರತನ ಲೋಕನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಮುಖ್ಯ ಅತಿಥಿಯಾಗಿ ಮಡಿಕೇರಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಭಾಗವಹಿಸಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯ ಶಿಕ್ಷಕರು, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಕೊಟ್ಟಕೇರಿಯನ ದಮೇಂದ್ರ, ಕ್ರೀಡಾ ಕ್ಷೇತ್ರದಲ್ಲಿ ರಾಜ್ಯಮಟ್ಟದಲ್ಲಿ ಮೂರನೇ ಸ್ಥಾನ ಪಡೆದ ಪೂನ್ನಚ್ಚನ ವೃಂಧಾ ಹಾಗೂ ಎಂ.ಬಿ.ಎ.ಸ್ನಾತಕೋತರ ಪದವಿಯಲ್ಲಿ ಅತ್ಯುತ್ತಮ ಇಂಟರ್ನಶಿಫ್ ಪ್ರಶಸ್ತಿ ಪಡೆದ ಕೋಟ್ಟಕೇರಿಯನ ಮೋನಿಕಾ ಅವರುಗಳನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಹಿರಿಯ ವಕೀಲರಾದ ಕೊಟ್ಟಕೇರಿಯನ ದಯಾನಂದ ಸಂಘದ ಸಮಗ್ರ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆಯನ್ನು ನೀಡಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕಾಯರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವುದು ಹೀಗೆ ವಿವಿಧ ಕ್ರೀಡೆಗಳಲನ್ನು ಆಯೋಜಿಸಿ ವಿಜೇತರಾದವರಿಗೆ…
ಲೇಖಕ: admin
ಮಡಿಕೇರಿ ಡಿ.12 NEWS DESK : ಪತ್ರಕರ್ತರಲ್ಲದ ಕೆಲವರು ತಮ್ಮ ವಾಹನಗಳಲ್ಲಿ ‘ಮೀಡಿಯಾ-ಪ್ರೆಸ್’ ಫಲಕ ಅಳವಡಿಸಿಕೊಂಡು ಮಾಧ್ಯಮದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರಿಗೆ ಲಿಖಿತ ಮನವಿ ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ನೇತೃತ್ವದ ನಿಯೋಗ ಎಸ್.ಪಿ.ಯನ್ನು ಭೇಟಿಯಾಗಿ, ಕೊಡಗು ಜಿಲ್ಲೆಯಲ್ಲಿ ಮಾಧ್ಯಮಗಳಲ್ಲಿ ವೃತ್ತಿ ಮಾಡದಿರುವವರು ಕೂಡ ಪ್ರೆಸ್ ಹಾಗೂ ಮೀಡಿಯಾ ಸ್ಟಿಕ್ಕರ್‍ಗಳನ್ನು ವಾಹನದಲ್ಲಿ ಅಂಟಿಸಿಕೊಂಡು ಪತ್ರಕರ್ತರೆಂದು ಬಿಂಬಿಸಿಕೊಳ್ಳುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ. ಇದರಿಂದ ನೈಜ ಪತ್ರಕರ್ತರು ಹಾಗೂ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ನಿಟ್ಟಿನಲ್ಲಿ ಪತ್ರಿಕೆ ಹಾಗೂ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕೃತ ಗುರುತಿನ ಚೀಟಿ ಅಥವಾ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗುರುತಿನ ಚೀಟಿ ಹೊಂದಿರುವವರನ್ನು ಹೊರತುಪಡಿಸಿ ವಾಹನಗಳಲ್ಲಿ ‘ಪ್ರೆಸ್-ಮೀಡಿಯಾ’ ಎಂಬ ಸ್ಟಿಕ್ಕರ್ ಅಂಟಿಸಿಕೊಂಡು ಮಾಧ್ಯಮ ಕ್ಷೇತ್ರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು…
ಮಡಿಕೇರಿ ಡಿ.11 NEWS DESK : ನಗರದ ಮಹದೇವಪೇಟೆಯಲ್ಲಿರುವ ಶ್ರೀರಾಜೇಶ್ವರಿ ವಿದ್ಯಾಲಯದ ವತಿಯಿಂದ ಜ.10 ಮತ್ತು 11 ರಂದು ‘’ಎಸ್‌ಆರ್‌ವಿ ಕನೆಕ್ಟ್- ಹಳೆಯ ವಿದ್ಯಾರ್ಥಿಗಳ ಕ್ರೀಡಾಕೂಟ’ ನಡೆಯಲಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಮ್ಯಾನೆಜಿಂಗ್ ಟ್ರಸ್ಟಿ ಸಚಿನ್ ವಾಸುದೇವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ಶ್ರೀ ರಾಜೇಶ್ವರಿ ವಿದ್ಯಾಲಯದ 1991 ಬ್ಯಾಚ್‍ನಿಂದ 2024ರ ವರೆಗಿನ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಆಯೋಜಿಸಲಾಗಿದ್ದು, ವಿದ್ಯಾಲಯದ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಕ್ರಿಡೋತ್ಸವದಲ್ಲಿ ಕ್ರಿಕೆಟ್ ಹಾಗೂ ವಾಲಿಬಾಲ್ ತಂಡಗಳಿಗೆ ತಲಾ 8 ಹಾಗೂ ಫುಟ್ಬಾಲ್‍ಗೆ 12 ಫ್ರ್ರಾಂಚೈಸ್‍ಗಳಿದ್ದು, ಥ್ರೋಬಾಲ್ ಹಾಗೂ ಶಾಲಾ ಮಟ್ಟದ ಅಂಡರ್ 16 ಬಾಲಕ ಬಾಲಕಿಯರಿಗೆ 5ಎ ಸೈಡ್ ಫುಟ್ಬಾಲ್ ಪಂದ್ಯಾವಳಿ ನಡೆಯಲಿದೆ. ಅಲ್ಲದೇ ಹಳೆ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು. ಹಳೇ ವಿದ್ಯಾರ್ಥಿ ಸಂಘದ ಖಜಾಂಚಿ ಬೊಟ್ಟೋಳಂಡ ನಿವ್ಯ ಕಾವೇರಮ್ಮ ಮಾತನಾಡಿ,…
ಮಡಿಕೇರಿ ಡಿ.11 NEWS DESK : ಕೊಡವ ಜಮ್ಮಾ ಮುಸ್ಲಿಂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್‍ನ ಸಹಯೋಗದೊಂದಿಗೆ ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ 2026ನೇ ಸಾಲಿನ ಏ.24 ರಿಂದ ಮೇ 1ರ ವರೆಗೆ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರಿಗೆ 3ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷರಾದ ಪುಡಿಯಂಡ ಉಸ್ಮಾನ್ ತಿಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾಮಿಯಾಲ-ಅರಮೇರಿ ಗ್ರಾಮದಲ್ಲಿರುವ ಎಸ್.ಎಂ.ಎಸ್. ಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಪರಿಷತ್ ಸದಸ್ಯರು, ಶಾಸಕರುಗಳು ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳು, ಕೊಡವ ಜಮ್ಮಾ ಮುಸ್ಲಿಂ ಸಂಘಟನೆ ಆಡಳಿತ ಮಂಡಳಿ, ಕೆ.ಎಂ.ಎ ಆಡಳಿತ ಮಂಡಳಿ, ಕುಟುಂಬದ ಎಲ್ಲಾ ತಕ್ಕ ಮುಖ್ಯಸ್ಥರುಗಳು ಹಾಗೂ ಎಲ್ಲಾ ಜನಾಂಗದ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ಜಮ್ಮಾ ಮುಸ್ಲಿಂ ಸಮುದಾಯದ ಯುವಕರ ಪ್ರತಿಭೆ ಪ್ರದರ್ಶಿಸಲು ಪಂದ್ಯಾವಳಿ ಅವಕಾಶಕಲ್ಪಿಲಿದೆ. ಇದರೊಂದಿಗೆ ಶಿಕ್ಷಣಕ್ಕೆ ಒತ್ತು ನೀಡುವುದು ನಮ್ಮ ಪ್ರಮುಖ ಧ್ಯೇಯವಾಗಿದೆ ಎಂದು ಹೇಳಿದರು. ಕ್ರೀಡಾಕೂಟವು…
ಮಡಿಕೇರಿ ಡಿ.11 NEWS DESK : ಜಿಲ್ಲೆಯಾದ್ಯಂತ ಡಿ.21 ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ವಿಡಿಯೋ ಸಂವಾದ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ಪಲ್ಸ್ ಪೋಲಿಯೋ ಲಸಿಕೆಯು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಇದರ ಯಶಸ್ಸಿಗೆ ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು. ಡಿ.21 ರಂದು ಅಗತ್ಯ ಸಿಬ್ಬಂದಿಗಳ ನಿಯೋಜನೆ, ವಾಹನ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪೋಲಿಯೋ ಹನಿ ನೀಡುವ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಮಾಹಿತಿ ನೀಡಿ, ಜಿಲ್ಲೆಯಲ್ಲಿ 3 ತಿಂಗಳಿನಿಂದ 5 ವರ್ಷದ ವರೆಗಿನ ಒಟ್ಟು 42,477 ಮಕ್ಕಳಿದ್ದು, ನಗರ ವ್ಯಾಪ್ತಿಯಲ್ಲಿ 4,400, ಗ್ರಾಮೀಣ ಭಾಗದಲ್ಲಿ 37,975 ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 5,80,720 ಜನಸಂಖ್ಯೆ ಇದ್ದು, ನಗರ ವ್ಯಾಪ್ತಿಯಲ್ಲಿ 57,727, ಗ್ರಾಮೀಣ ಭಾಗದಲ್ಲಿ…
ನಾಪೋಕ್ಲು ಡಿ.11 NEWS DESK : ವಲಯ ಮಟ್ಟ ಹಾಗೂ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಿದಿಲಾಜ್ ಸಾಧನೆ ಮಾಡಿದ್ದಾನೆ. ವಲಯ ಮಟ್ಟದ ದೇಶಭಕ್ತಿ ಗೀತೆಯಲ್ಲಿ ಪ್ರಥಮ, ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾನೆ. ಈತನ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕವೃಂದ ಮೆಚ್ಚುಗೆ ವ್ಯಕ್ತಪಡಿಸಿದೆ.
ನಾಪೋಕ್ಲು ಡಿ.11 NEWS DESK : ತಾಲ್ಲೂಕು ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದ ಏಳು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತಂಡದಲ್ಲಿ ಪಾಲ್ಗೊಂಡಿದ್ದ ಏಳನೇ ತರಗತಿ ವಿದ್ಯಾರ್ಥಿ ಜಹೀರ್ ಟಿ.ಎ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗಳ ಪ್ರತಿಭೆಗೆ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಮಾರ್ಗದರ್ಶನ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ.
ವಿರಾಜಪೇಟೆ ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹರಡುವವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತೀವ್ರ ಕಳವಳಕಾರಿಯಾಗಿದೆ. ಬಂಧಿತರಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂಥವರ ವಿರುದ್ಧ ಹೊಸ ಕಾನೂನು ಜಾರಿಯಾಗಬೇಕೆಂದು ಒತ್ತಾಯಿಸಿದರು. ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಮಂಜುನಾಥ್ ಒತ್ತಾಯಿಸಿದ್ದಾರೆ.
ಮಡಿಕೇರಿ ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಕುರಿತು ಅವಹೇಳನ ವಿಡಿಯೋ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಟಿಪ್ಪು ಜಯಂತಿ ಆಚರಣೆ ಪುನರಾರಂಭ ಕುರಿತು ಸರಕಾರಕ್ಕೆ ಪ್ರಸ್ತಾಪಿಸಿರುವುದನ್ನು ವಿರೋಧಿಸಿ ಕೊಡಗು ಜಿಲ್ಲಾ ಬಿಜೆಪಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತ (ಚೌಕಿ)ದಲ್ಲಿ ಜಮಾಯಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು, ಮಾನವ ಸರಪಳಿ ನಿರ್ಮಿಸಿ ಅಸಮಾಧಾನ ವ್ಯಕ್ತಪಡಿಸಿದರು. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ಕೈಗೊಳ್ಳಬೇಕು ಮತ್ತು ಆರೋಪಿಗಳನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಮುಖರಾದ ಅರುಣ್ ಕುಮಾರ್, ಕಿಶೋರ್ ಕುಮಾರ್, ಮನುಮುತ್ತಪ್ಪ, ಕೆ.ಎಸ್.ರಮೇಶ್, ಅರುಣ್ ಶೆಟ್ಟಿ, ಪಿ.ಎಂ.ರವಿ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪ್ರತಿಭಟನೆಯಲ್ಲಿ…
ಕುಶಾಲನಗರ ಡಿ.11 NEWS DESK : ರಾಜ್ಯ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಹಳೆ ಪಿಂಚಣಿ ಯೋಜನೆ ಜಾರಿ, ಮಕ್ಕಳ ದಾಖಲಾತಿಯಲ್ಲಿ ವಿನಾಯಿತಿ, ಶಾಲೆ ಮಾನ್ಯತೆ ನವೀಕರಣ ಸೇರಿದಂತೆ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.17 ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಕೊಡಗು ಜಿಲ್ಲಾ ಅನುದಾನಿತ ನೌಕರರ ಸಂಘದ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಹಳೆಯ ಪಿಂಚಣಿ ಅತಿ ಶೀಘ್ರವಾಗಿ ಜಾರಿಗೆ ಒತ್ತಾಯಿಸಿ ಬೃಹತ್ ಹೋರಾಟಕ್ಕೆ ರಾಜ್ಯ ಸಂಘ ಈಗಾಗಲೇ ತೀರ್ಮಾನಿಸಿದ್ದು ಸಂಘಟನೆಯ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ. ಅನುದಾನಿತ ನೌಕರರ ಮತ್ತು ಸಂಸ್ಥೆಗಳ ಉಳಿವಿಗಾಗಿ ಹೋರಾಟ ಅನಿವಾರ್ಯ ಆಗಿದೆ. ಆದ್ದರಿಂದ ಕೊಡಗು ಜಿಲ್ಲಾ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಅನುದಾನಿತ ಶಾಲಾ ಕಾಲೇಜುಗಳ…






