ಲೇಖಕ: admin

ವಿರಾಜಪೇಟೆ NEWS DESK ಸೆ.14 : ಪಟ್ಟಣದ ಮಲಬಾರ್ ರಸ್ತೆಯಲ್ಲಿರುವ ನಂಬರ್ 376ನೇ ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಸಂಘದಲ್ಲಿ ಈ ಹಿಂದೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಬಿ.ವಿ. ಭವಾನಿ ಶಂಕರ್ ಬೋರ್ಕರ್, ಕೃಷ್ಣರಾವ್ ಹಾಗೂ ಸುಮಿತ್ರಬಾಯಿ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಹೆಗ್ಗಳ ಗ್ರಾಮದ ಅರ್ಚಕ ವೇಣುಗೋಪಾಲ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಮಾಜಿ ಅಧ್ಯಕ್ಷರು ಹಾಗೂ ಭೂಸೇನೆಯ ನಿವೃತ್ತ ಕ್ಯಾಪ್ಟನ್ ಬಿ.ವಿ. ಭವಾನಿ ಶಂಕರ್ ಬೋರ್ಕರ್ ಅವರು, ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಸಂಘವಾಗಿದೆ. ಮಲಬಾರ್ ರಸ್ತೆಯ ಬಳಿ ಸಂಘಕ್ಕೆ 1952ರಲ್ಲಿ ನಿವೇಶನ ದೊರೆತಿದ್ದು, 1955ರಲ್ಲಿ ಅಂದಿನ ಕೊಡಗು ಸಿ ರಾಜ್ಯದ ಮುಖ್ಯಮಂತ್ರಿ ಸಿ.ಎಂ. ಪೂಣಚ್ಚ ಅವರು ಸಂಘದ ಕಟ್ಟಡವನ್ನು ಉದ್ಘಾಟಿಸಿದ್ದರು ಎಂದು ಸ್ಮರಿಸಿದರು. ಸದಸ್ಯರ ಪ್ರೋತ್ಸಾಹ ಹಾಗೂ ಸಹಕಾರದಿಂದ ಸಂಘವು ಹಲವು ವರ್ಷಗಳಿಂದ ವಿವಿಧ…

Read More

ವಿರಾಜಪೇಟೆ, NEWS DESK ಸೆ.14 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಸಂಘ ಹಾಗೂ ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿಯ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕು ಅನುದಾನ ರಹಿತ ಪ್ರೌಢಶಾಲೆಗಳ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿ ಶ್ರೀವತ್ಸ ಯು.ಎಸ್. ಅವರಿಗೆ ತಾಲೂಕಿಗೆ ಕೀರ್ತಿ ತಂದ ಸಾಧನೆಗಾಗಿ “ಗೌರವ ಪ್ರತಿಭಾ ಪುರಸ್ಕಾರ” ನೀಡಿ ಅಭಿನಂದಿಸಲಾಯಿತು. ಅದೇ ರೀತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ಶೇ.100ರಷ್ಟು ಫಲಿತಾಂಶ ಪಡೆಯಲು ಶ್ರಮಿಸಿದ ಕಾವೇರಿ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದವನ್ನು ಪ್ರಶಂಸಿಸಿ ಅಭಿನಂದನಾ ಫಲಕ ನೀಡಿ ಗೌರವಿಸಲಾಯಿತು. ಶಾಲೆಯ ಪರವಾಗಿ ಈ ಪುರಸ್ಕಾರವನ್ನು ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು. ಅವರು ಸ್ವೀಕರಿಸಿದರು. ವಿದ್ಯಾರ್ಥಿಯ ಶೈಕ್ಷಣಿಕ ಸಾಧನೆ ಹಾಗೂ ಶಾಲೆಯ ಶೇ.100ರಷ್ಟು ಫಲಿತಾಂಶಕ್ಕಾಗಿ ದೊರೆತ ಈ…

Read More

ಮಡಿಕೇರಿ NEWS DESK ಸೆ.14 : ಪವಿತ್ರ ಈದ್ ಮಿಲಾದ್ ಅಂಗವಾಗಿ UmmathOne Kodagu Charitable Trust (R.) ವತಿಯಿಂದ “ಮಾನವ ಕುಲಕ್ಕೆ ಪ್ರವಾದಿ ಮುಹಮ್ಮದ್ (ಸ) ಅವರ ಕೊಡುಗೆಗಳು” ಎಂಬ ವಿಷಯದ ಕುರಿತು ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಸ್ಪರ್ಧೆಯಲ್ಲಿ 250ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಭಾಗವಹಿಸಿದ್ದು, ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮೌಲ್ಯಗಳು, ಕರುಣೆ ಹಾಗೂ ಮಾನವಕುಲಕ್ಕೆ ನೀಡಿದ ಶಾಶ್ವತ ಸಂದೇಶಗಳನ್ನು ಪ್ರತಿಬಿಂಬಿಸುವ ಪ್ರಬಂಧಗಳನ್ನು ಸಲ್ಲಿಸಿದ್ದರು. ತೀರ್ಪುಗಾರರ ಸಮಿತಿಯ ಮೌಲ್ಯಮಾಪನದ ಬಳಿಕ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿಜೇತರು: ಪ್ರಥಮ ಬಹುಮಾನ (ರೂ.15,000) : ಮೈಮೂನಾ ಟಿ.ಎ., ಕಡಂಗ ಮರೂರು ಗ್ರಾಮ. ದ್ವಿತೀಯ ಬಹುಮಾನ (10,000) : ಅಖೀಲಾ ಪರ್ವೀನ್, ಸಂಪಿಗೆಕಟ್ಟೆ ರಸ್ತೆ, ಮಡಿಕೇರಿ. ತೃತೀಯ ಬಹುಮಾನ (5000) : 1. ಚಂದ್ರ ಶೆಟ್ಟಿ ಬಿ.ಟಿ., ಬಾಪೂಜಿ ಬಡಾವಣೆ, ಕುಶಾಲನಗರ 2. ಆಯಿಷಾ ಎಸ್.ಎಸ್., ಕರ್ಕಳ್ಳಿ, ಸೋಮವಾರಪೇಟೆ. ಸಮಾಧಾನಕರ ಬಹುಮಾನ: 1. ಸಿಯಾಬುದ್ದೀನ್ ಕೆ.ಹೆಚ್., ಹಾಕತ್ತೂರು 2. ಶಶಿಕಲಾ ಕೆ., ಕಗ್ಗೋಡ್ಲು ಗ್ರಾಮ 3. ಫಾತಿಮತ್ ರಂಸೀನಾ, ನೆಲ್ಲಿಹುದಿಕೇರಿ.…

Read More

ಕುಶಾಲನಗರ NEWS DESK ಸೆ.14 : ಗಣೇಶ ಚತುರ್ಥಿಯ ಶುಭ ಸಂದರ್ಭವನ್ನು ಇನ್ನಷ್ಟು ಸಡಗರದಿಂದ ಆಚರಿಸಲು ಕುಶಾಲನಗರದ ಖ್ಯಾತ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತಮ್ಮ ಗ್ರಾಹಕರಿಗಾಗಿ ವಿಶೇಷ ಆಫರ್‌ಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 12ರಿಂದ 14ರವರೆಗೆ ಕೇವಲ 3ದಿನಗಳ ಕಾಲ ಈ ಸೀಮಿತ ಅವಧಿಯ ಕೊಡುಗೆಗಳು ಲಭ್ಯವಿರಲಿವೆ. ಚಿನ್ನಾಭರಣಗಳ VA ಶುಲ್ಕದ ಮೇಲೆ ಫ್ಲಾಟ್ 30% ರಿಯಾಯಿತಿ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ಫ್ಲಾಟ್ ರೂ.8000 ರಿಯಾಯಿತಿ ಪಡೆಯಬಹುದು. ಈ ಮೇಳದಲ್ಲಿ ಖರೀದಿ ಮಾಡುವ ಗ್ರಾಹಕರಿಗೆ 3 ದಿನಗಳವರೆಗೆ ವಿಶೇಷ ಕೊಡುಗೆ ನೀಡಲಾಗುತ್ತಿದ್ದು, ಹಬ್ಬದ ಪ್ರಯುಕ್ತ ವಿವಿಧ ವಿನ್ಯಾಸಗಳ ಚಿನ್ನ ಮತ್ತು ವಜ್ರಾಭರಣಗಳನ್ನು ಪರಿಚಯಿಸಲಾಗಿದೆ. ಈ ಆಫ‌ರ್ ಪುತ್ತೂರು ,ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ಲಭ್ಯವಿರುತ್ತದೆ. ಚಿನ್ನದ ನಾಣ್ಯ, ಚಿನ್ನದ ಗಟ್ಟಿ, ಚಿನ್ನಾಭರಣ ಸ್ಟೀಮ್, Yellow Tag ಆಭರಣಗಳು ಹಾಗೂ ಇತರೆ ಯಾವುದೇ ಯೋಜನೆಗಳೊಂದಿಗೆ ಈ ರಿಯಾಯಿತಿ ಅನ್ವಯವಾಗುವುದಿಲ್ಲ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 1957ರಿಂದ ಆಭರಣ ಕ್ಷೇತ್ರದಲ್ಲಿ…

Read More

ಮಡಿಕೇರಿ NEWS DESK ಸೆ.14 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 26ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಪೂಜೆ ನಡೆಯಲಿದೆ. ಬಳಿಕ 13 ದಿನಗಳ ಕಾಲ ಪ್ರತಿದಿನ ಸಂಜೆ ಭಜನೆ ಮತ್ತು ಮಹಾಪೂಜೆ ನಡೆಯಲಿದೆ. ಸೆಪ್ಟೆಂಬರ್ 23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ಧೂರಿ ಶೋಭಾಯಾತ್ರೆಯ ಮೂಲಕ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದು ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಸೆಪ್ಟೆಂಬರ್ 20ರಂದು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದೆ. ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಶಾಂತಿನಿಕೇತನ ಯುವಕ ಸಂಘದ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ…

Read More

ಕುಶಾಲನಗರ, NEWS DESK ಸೆ. 13: ಕೊಡಗು ಜಿಲ್ಲೆಯ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಪ್ರಕೃತಿ ಇಕೋ ಕ್ಲಬ್ ವತಿಯಿಂದ ಶಾಲಾ ಮಕ್ಕಳು ಪರಿಸರ ರಕ್ಷಣೆಯ ಸಂದೇಶದೊಂದಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ತಯಾರಿಸುವ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವದ ಕುರಿತು ಜಾಗೃತಿ ಮೂಡಿಸಿದರು. ಶಾಲಾ ಮೈದಾನದಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಒಟ್ಟಾಗಿ ಮಣ್ಣಿನಿಂದ ವಿವಿಧ ನಮೂನೆಯ ಗಣೇಶ ಮೂರ್ತಿಗಳನ್ನು ತಯಾರಿಸಿ, ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು. ಪಿ.ಓ.ಪಿ. ಹಾಗೂ ರಾಸಾಯನಿಕ ಬಣ್ಣ ಬಳಸಿ ತಯಾರಿಸುವ ಗಣೇಶ ಮೂರ್ತಿಗಳಿಂದ ಪರಿಸರ ಹಾಗೂ ಜಲಮೂಲಗಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಕ್ಕಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಶಾಲಾ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ, ಶಾಲೆಯ ರಾಷ್ಟ್ರೀಯ ಹಸಿರು ಪಡೆಯ ಪ್ರಕೃತಿ ಇಕೋ ಕ್ಲಬ್, ಶಾಲೆಯ ಮಕ್ಕಳ ಗೈಡ್ಸ್ ಘಟಕ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ತು ಘಟಕದ ಸಂಯುಕ್ತಾಶ್ರಯದಲ್ಲಿ…

Read More

ಮಡಿಕೇರಿ NEWS DESK ಸೆ.13 : ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆಯನ್ನು ಅ.20ರಂದು ನಡೆಸಲು ದಸರಾ ದಶಮಂಟಪ ಸಮಿತಿ ಹಾಗೂ ನಾಲ್ಕು ಕರಗ ಸಮಿತಿಗಳು ನಿರ್ಧರಿಸಿವೆ. ನಗರದ ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಆವರಣದಲ್ಲಿ ನಡೆದ ಸಮಿತಿಗಳ ಸಭೆಯಲ್ಲಿ ಶೋಭಾಯಾತ್ರೆಯ ದಿನಾಂಕ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆಯಲಾಯಿತು. ಅ.20ರಂದು ದಶಮಂಟಪಗಳ ಶೋಭಾಯಾತ್ರೆ ನಡೆಸಿ, ಅ.21ರಂದು ಬೆಳಿಗ್ಗೆ ಬನ್ನಿ ಕಡಿಯುವ ಮೂಲಕ ದಸರಾ ಹಬ್ಬಕ್ಕೆ ಮಂಗಳ ಹಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಶ್ರೀಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯದ ಪೂಜಾರಿಗಳಾದ ಬಾಲಕೃಷ್ಣ ಪೂಜಾರಿ, ಪಿ.ಪಿ.ಚಾಮಿ, ಧರ್ಮು ಪೂಜಾರಿ, ಶ್ರೀಕಂಚಿ ಕಾಮಾಕ್ಷಿಯಮ್ಮ ದೇವಾಲಯದ ಪಿ.ಸಿ.ಮಧುರಯ್ಯ, ದಂಡಿನ ಮಾರಿಯಮ್ಮ ದೇವಾಲಯದ ಉಮೇಶ್ ಪೂಜಾರಿ, ಶ್ರೀಕೋಟೆ ಮಾರಿಯಮ್ಮ ದೇವಾಲಯದ ಅನೀಶ್ ಕುಮಾರ್, ಉಮೇಶ್ ಸುಬ್ರಮಣಿ, ನಗರಸಭಾ ಅಧ್ಯಕ್ಷರು ಹಾಗೂ ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಬಿ.ಕೆ., ದಶಮಂಟಪ ಸಮಿತಿಯ…

Read More

ಬೆಂಗಳೂರು, NEWS DESK ಸೆ.13: ಗೌರಿ–ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳಿಗೆ ವಿಶೇಷ ಬಸ್‌ಗಳು ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಹೆಚ್ಚುವರಿಯಾಗಿ 270 ರಿಸರ್ವೇಶನ್ ಬಸ್‌ಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರಿನಲ್ಲಿ 240 ಬಿಎಂಟಿಸಿ ಬಸ್‌ಗಳನ್ನು ಕಾರ್ಯಾಚರಣೆಗೆ ಸಿದ್ಧವಾಗಿರಿಸಲಾಗಿದೆ. ಮೆಜೆಸ್ಟಿಕ್, ಸ್ಯಾಟಲೈಟ್ (ಮೈಸೂರು ರಸ್ತೆ) ಹಾಗೂ ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸೇವೆಗಳನ್ನು ನಿರ್ವಹಿಸಲಾಗುತ್ತದೆ. ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿದಂತೆ ಪ್ರಯಾಣಿಕರ ಬೇಡಿಕೆ ಹೆಚ್ಚಿರುವ ಹಲವು ಪ್ರಮುಖ ಮಾರ್ಗಗಳಿಗೆ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಲಾಗಿದೆ. ಹಬ್ಬ ಮುಗಿದ ಬಳಿಕ ಊರುಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಿಂದ ಬೆಂಗಳೂರಿಗೆ ವಾಪಸ್ ಬರುವ ಪ್ರಯಾಣಿಕರಿಗಾಗಿ ಕೂಡ…

Read More

ಮಡಿಕೇರಿ, NEWS DESK ಸೆ.12: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಕಾನೂನು ಹಾಗೂ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಗಣೇಶೋತ್ಸವ ಸಮಿತಿಗಳಿಗೆ ಮನವಿ ಮಾಡಿದ್ದಾರೆ. ಮಡಿಕೇರಿಯ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಠಾಣಾ ಹಾಗೂ ವಲಯ ಮಟ್ಟದಲ್ಲಿ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಗಣೇಶೋತ್ಸವ ಆಯೋಜನಾ ಸಮಿತಿಗಳ ಪ್ರಮುಖರ ಸಭೆ ನಡೆಸಿ, ಶಾಂತಿಯುತ ಹಾಗೂ ಕ್ರಮಬದ್ಧವಾಗಿ ಉತ್ಸವ ಆಚರಿಸಲು ಅಗತ್ಯ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು. ಗಣೇಶೋತ್ಸವ ಸಂದರ್ಭದಲ್ಲಿ ಧ್ವನಿವರ್ಧಕಗಳಲ್ಲಿ ‘ಪ್ರೆಷರ್ ಮಿಡ್’ ಅಳವಡಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸೆ.14ರಿಂದ ಅ.31ರವರೆಗೆ ಕೊಡಗು ಜಿಲ್ಲೆಯಾದ್ಯಂತ ಈ ನಿಷೇಧ ಜಾರಿಯಲ್ಲಿರಲಿದೆ. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ ಸೇರಿದಂತೆ ಸಾರ್ವಜನಿಕರ ಶಾಂತಿಗೆ ಭಂಗ ಉಂಟುಮಾಡುವ ಯಾವುದೇ ಧ್ವನಿವರ್ಧಕಗಳ ಬಳಕೆಗೆ ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ವಸತಿ ಪ್ರದೇಶಗಳಲ್ಲಿ ಹಗಲು 55 ಹಾಗೂ ರಾತ್ರಿ…

Read More

ಮಡಿಕೇರಿ ಸೆ.12 NEWS DESK : ವಿಶ್ವದ ಅತಿ ದೊಡ್ಡ ಕೌಶಲ್ಯ ಹಬ್ಬ ವಲ್ರ್ಡ್ ಸ್ಕಿಲ್ಸ್ ಸ್ಫರ್ಧೆಯು ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಜಗತ್ತಿನ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆ ಆಗಿದೆ. ಕರ್ನಾಟಕ ರಾಜ್ಯ ಕೌಶಲ್ಯ ಒಲಂಪಿಕ್ಸ್ 2026-27 ಅನ್ನು ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವತಿಯಿಂದ ಆಯೋಜಿಸಲಾಗುತ್ತಿದೆ. ‘ವಲ್ರ್ಡ್ ಸ್ಕಿಲ್-2028’ ಜಾಗತಿಕ ಮಟ್ಟದ ಸ್ಪರ್ಧೆಯು ಜಪಾನಿನ ಐಚಿಯಲ್ಲಿ ನಡೆಯಲಿದ್ದು, ಭಾರತವನ್ನು ಪ್ರತಿನಿಧಿಸಲು ಬಯಸುವ ಯುವಕ ಯುತಿಯರಿಗೆ ಇಂಡಿಯಾ ಸ್ಕಿಲ್ಸ್ -2026 ಕಾರ್ಯಕ್ರಮ ರಾಜ್ಯ ಮಟ್ಟದ ವೇದಿಕೆ ಒದಗಿಸುತ್ತಿದೆ. 63 ವಿವಿಧ ವೃತ್ತಿಪರ ಕೌಶಲ್ಯ ವಿಭಾಗಗಳಲ್ಲಿ ನೈಪುಣ್ಯತೆ ಹೊಂದಿರುವ 16 ರಿಂದ 25 ವರ್ಷ ವಯೋಮಿತಿಯ ಜಿಲ್ಲೆಯ ಯುವಜನರು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸಬಹದು. ಆಸಕ್ತಿಯಿರುವ ಅಭ್ಯರ್ಥಿಗಳು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಆಧಾರ್ ಮಾಹಿತಿಯೊಂದಿಗೆ https://www.skillindiadigital.gov.in/home  ಲಿಂಕ್‍ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಸ್ಪರ್ಧೆಗೆ ನೋಂದಾಯಿಸಿಕೊಳ್ಳಲು ಸೆಪ್ಟೆಂಬರ್ 15 ಕೊನೆ ದಿನವಾಗಿದೆ. ಸ್ಪರ್ಧೆಗೆ ಗುರುತಿಸಲಾಗಿರುವ 63 ವಿವಿಧ ವೃತ್ತಿಪರ ಕೌಶಲ್ಯಗಳ ಪಟ್ಟಿ,…

Read More