ಮಡಿಕೇರಿ ನ.26 NEWS DESK : ಕೇಂದ್ರ ಸರಕಾರ ಕಾರ್ಮಿಕರ ವಿರೋಧದ ನಡುವೆಯೂ ನಾಲ್ಕು ನೂತನ ಕಾರ್ಮಿಕ ಸಂಹಿತೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಮುಂದಾಗಿದೆ ಎಂದು ಆರೋಪಿಸಿ ಮತ್ತು ಕಾರ್ಮಿಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಲ್ಲ ನಿಯಮಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನ ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಸಿಐಟಿಯು ಸಂಘಟನೆ ಬೆಂಬಲ ಸೂಚಿಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿತು. ಕಾರ್ಮಿಕ ವಿರೋಧಿ ನೀತಿಗಳು ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕಾರ್ಮಿಕರ ಅಳಲನ್ನು ಆಡಳಿತ ನಡೆಸುವವರು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಸಿಐಟಿಯು ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರು ಮಾತನಾಡಿ ಕಾರ್ಮಿಕ ವಿರೋಧಿಯಾದ ಕಾರ್ಮಿಕ ಸಂಹಿತೆಗಳನ್ನು ಏಕಪಕ್ಷೀಯವಾಗಿ…
ಲೇಖಕ: admin
ಮಡಿಕೇರಿ ನ.26 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಂಜಾನೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಮಧ್ಯಾಹ್ನ ಶ್ರೀ ಸುಬಹ್ಮಣ್ಯ ದೇವರ ಶ್ರೀ ಭೂತ ಬಲಿ(ಕ್ಷೇತ್ರ ಪ್ರದಕ್ಷಿಣೆ), ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನೆರವೇರಿತು. :: ದೈವಗಳ ವೆಳ್ಳಾಟಂ :: ಬೆಳಿಗ್ಗೆ ಶ್ರೀ ಕುಟ್ಟಿಚಾತನ್ ದೇವರ ವಳ್ಳಾಟಂ, ಶ್ರೀ ಮುತ್ತಪ್ಪ ದೇವರ ವೆಳ್ಳಾಟಂ, ಶ್ರೀ ಗುಳಿಗ ದೇವರ ವೆಳ್ಳಾಟಂ, ಶ್ರೀ ಪೋದಿ ದೇವರ ವೆಳ್ಳಾಟಂ ಜರುಗಿತು. ಸಂಜೆ 6 ಗಂಟೆಗೆ ಶ್ರೀ ಮುತ್ತಪ್ಪ ಮಹಿಳಾ ವೇದಿಕೆಯಿಂದ ಭಜನಾ ಕಾರ್ಯಕ್ರಮ, 7 ಗಂಟೆಗೆ ರಂಗಪೂಜೆ, 8 ಗಂಟೆಗೆ ಮಹಾಪೂಜೆಯ ನಂತರ ಪ್ರಸಾದ…
ಮಡಿಕೇರಿ ನ.26 NEWS DESK : ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಡಿ.3 ರಿಂದ 5ರವರೆಗೆ ಯಾದಗಿರಿ ಜಿಲ್ಲೆಯಲ್ಲಿ ನಡೆಯುಲ್ಲಿದೆ ಎಂದು ಜಿಲ್ಲಾ ಯುವ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ. ಮಡಿಕೇರಿ ಜೂನಿಯರ್ ಕಾಲೇಜುವಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ತಾಲ್ಲೂಕು ಯುವ ಒಕ್ಕೂಟದ ಆಶ್ರಯದಲ್ಲಿ ನಡೆದ ಜಿಲ್ಲಾ ಯುವಜನೋತ್ಸವದಲ್ಲಿ ಭಾಗವಹಿಸಿ ಗುಂಪು ಹಾಗೂ ವ್ಯಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದ ಯುವಜನೋತ್ಸವದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದು, ವಿಜೇತರು ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಸಂಪರ್ಕಿಸಲು ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಮೈಸೂರು ನ.26 NEWS DESK : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ವಾಣಿಜ್ಯ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಸಂಸದರು, ತಂಬಾಕು ಖರೀದಿಗೆ ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ಈಗಿರುವ ಮಾಹಿತಿ ಪ್ರಕಾರ ಸುಮಾರು 10 ಸಾವಿರ ಕಾರ್ಡ್‌ದಾರ ಬೆಳೆಗಾರರು ಸುಮಾರು 10 ಮಿಲಿಯನ್ ಕೆಜಿ ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ ಇದನ್ನು ಅನಧಿಕೃತ ಎಂದು ಘೋಷಣೆ ಮಾಡಿರುವುದರಿದ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಪಾರು ಮಾಡಲು ಈ ಕೂಡಲೇ ತಂಬಾಕು ಬೆಳೆಯ ಖರೀದಿಗೆ ಅವಕಾಶ ಮಾಡಿಕೊಡಬೇಕೆಂದು ವಾಣಿಜ್ಯ ಸಚಿವರಿಗೆ ಯದುವೀರ್ ಒಡೆಯರ್ ಮನವಿ ಮಾಡಿದ್ದಾರೆ. ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ…
ಮಡಿಕೇರಿ ನ.26 NEWS DESK : ಗ್ರಾಮಸಭೆಗೆ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲು ಕುಂದಚೇರಿ (ಚೆಟ್ಟಿಮಾನಿ) ಗ್ರಾ.ಪಂ ನಿರ್ಧಾರ ಕೈಗೊಂಡಿದೆ. ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ 2025-26ನೇ ಸಾಲಿನ ಗ್ರಾಮಸಭೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಮೀನುಗಾರಿಕೆ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಪಶು ವೈದ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಸಣ್ಣ ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗಿದ್ದರು. ಗ್ರಾಮ ಸಭೆಯಲ್ಲಿ ಹಾಜರಿದ್ದ ಸಾರ್ವಜನಿಕರು ಗೈರು ಹಾಜರಾದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದರು. ಈ ಹಿನ್ನಲೆಯಲ್ಲಿ ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿ.ಪಂ ಮುಖ್ಯಕಾರ್ಯನಿರ್ವಣಾಧಿಕಾರಿಗಳಿಗೆ ಪತ್ರ…
ಮಡಿಕೇರಿ ನ.26 NEWS DESK : ಕೊಡಗಿನ ಪವಿತ್ರ ಕಾವೇರಿ ನದಿಯ ಸ್ವಚ್ಛತೆ, ಪಾವಿತ್ರ್ಯತೆ ಕಾಪಾಡಿ ಸಂರಕ್ಷಿಸುವ ಮತ್ತು ನದಿಯ ಪ್ರವಾಹ ನಿರ್ವಹಣೆ ಹಾಗೂ ನದಿ ತೀರದ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕೊಡಗು ಅಭಿವೃದ್ಧಿ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಪ್ರಮುಖರು ಹಾಗೂ ಪದಾಧಿಕಾರಿಗಳು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ಸಮಿತಿಯ ಪ್ರಮುಖರು ಮಾತನಾಡಿ, ಕಾವೇರಿ ನದಿಯ ಸಂರಕ್ಷಣೆ ಮತ್ತು ಅದರ ಪ್ರವಾಹ ನಿರ್ವಹಣೆ ನಮ್ಮೆಲ್ಲರ ಹೊಣೆಯಾಗಿದೆ. ಕಾವೇರಿಯು ಕರ್ನಾಟಕ ರಾಜ್ಯದ ಜೀವನದಿಯಾಗಿದ್ದು, ಅನ್ನದಾತ ರೈತರ ಪಾಲಿಗೆ ವರದಾನವಾಗಲಿದೆ. ಇದು ನಮ್ಮ ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ಮಹತ್ವದ ಕೊಡಗುಗೆ ನೀಡುತ್ತದೆ ಎಂದರು. ಕಾವೇರಿ ನದಿಯ ಮೂಲ ಪ್ರದೇಶಗಳು, ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ಅರಣ್ಯವನ್ನು ಮತ್ತು ಜಲಮೂಲಗಳನ್ನು ರಕ್ಷಿಸಲು ಬಹುಮುಖ್ಯವಾಗಿದೆ. ಕಾವೇರಿ ನದಿಯ ಹಾನಿಯು ನದಿ ದಡದ ಸಮೃದಧ ಪರಿಸರ, ಜನರ ಜೀವನ ಹಾಗೂ ಕೃಷಿಗೆ ಮಾರಕವಾಗಲು ಅಪಾಯ ಎದುರಾಗುತ್ತಿದೆ. ಈ…
ಮೈಸೂರು, ನ.26 NEWS DESK : ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಫಿಟ್ ಯುವ ಫಾರ್ ವಿಕಸಿತ್ ಭಾರತದ ಯೋಜನೆಯಡಿ ಮೈಸೂರಿನಲ್ಲಿ ಈ ಬಾರಿ ವಿಶೇಷ ಕ್ರೀಡೆಯನ್ನು ಆಯೋಜಿಸಲಾಗಿದೆ. ಅತ್ಯಂತ ಪ್ರಾಚೀನ ಹಾಗೂ ಹಳ್ಳಿ ಸೊಗಡಿನ ಮತ್ತು ದೈಹಿಕ ಸಾಮರ್ಥ್ಯದ ಜೊತೆಗೆ ಚಾಣಾಕ್ಷತನವನ್ನೂ ಕೋರುವ “ಹಗ್ಗ-ಜಗ್ಗಾಟ” ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದೇ ನವೆಂಬರ್ 30ರ ಭಾನುವಾರದಂದು ಬೆಳಗ್ಗೆ 8 ಗಂಟೆಗೆ ಮೈಸೂರಿನ ವಿಶ್ವವಿದ್ಯಾಲಯದ ಓವಲ್ ಗ್ರೌಂಡ್‌ನಲ್ಲಿ ಈ ಕ್ರೀಡಾಕೂಟ ನಡೆಯಲಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್” ನೇತೃತ್ವದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಮೈಸೂರಿನಲ್ಲಿ ನಡೆಯಲಿರುವ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಪುರುಷ-ಮಹಿಳೆಯರ ತಂಡಗಳು ಭಾಗವಹಿಸಬಹುದಾಗಿದೆ. ಪ್ರತಿ ತಂಡದಲ್ಲಿ ಕನಿಷ್ಠ 8 ಮಂದಿ ಇರಬೇಕಾಗಿದೆ. ಪುರುಷರಿಗೆ 560 ಕೆಜಿಗಿಂತ ಕಡಿಮೆ, 640 ಕೆಜಿಗಿಂತ ಕಡಿಮೆ ಹಾಗೂ 720 ಕೆಜಿಗಿಂತ ಕಡಿಮೆ ತೂಕದ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ 500 ಕೆಜಿಗಿಂತ ಕಡಿಮೆ ಹಾಗೂ 540 ಕೆಜಿ ಕಡಿಮೆ ತೂಕದ ವಿಭಾಗದಲ್ಲಿ…
ಕಣಿವೆ ನ.26 NEWS DESK : ಕೊಡಗು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿಯಲ್ಲಿ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಹಿಳೆಯರ ವಿಭಾಗದ ವಿದ್ಯಾರ್ಥಿನಿಯರ ತಂಡ ಪ್ರಥಮ ಬಹುಮಾನ ಪಡೆದುಕೊಂಡು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪಂದ್ಯದ ಉತ್ತಮ ದಾಳಿಗಾರ್ತಿಯಾಗಿ ದಿವ್ಯಾ ಧರ್ಮೇಗೌಡ ಗಮನ ಸೆಳೆದರು. ಪಂದ್ಯದ ಪುರುಷರ ವಿಭಾಗಲ್ಲೂ ದ್ವಿತೀಯ ಬಹುಮಾನ ಗಳಿಸಿದ್ದು, ವಿದ್ಯಾರ್ಥಿ ಹರ್ಷ ಉತ್ತಮ ದಾಳಿಕಾರನಾಗಿ ಗಮನ ಸೆಳೆದಿದ್ದಾನೆ. ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಪುಟ್ಟರಾಜು ಪ್ರಶಂಶಿಸಿದ್ದಾರೆ. ತಂಡದ ತರಬೇತುದಾರರಾಗಿ ಡಾ.ಪಿ.ಪಿ. ಜಯಂತಿ ಕಾರ್ಯನಿರ್ವಹಿಸಿದ್ದರು.
ಮಡಿಕೇರಿ ನ.26 NEWS DESK : ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಮಡಿಕೇರಿ ನ.26 NEWS DESK : ಅಪಘಾತದಲ್ಲಿ ಸಾವನ್ನಪ್ಪಿದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾದ ಸುದ್ದಿ ತಿಳಿದು ಅತ್ಯಂತ ದುಃಖವನ್ನುಂಟುಮಾಡಿದೆ. ರಾಜ್ಯದ ಆಡಳಿತ ವ್ಯವಸ್ಥೆಯ ಹಲವು ಜಿಲ್ಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ, ಜನಮಾನಸದಲ್ಲಿ ಉತ್ತಮ ವ್ಯಕ್ತಿಯಾಗಿದ್ದ ಇವರ ಅಗಲಿಕೆಯು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ದಿವ್ಯಾತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬದವರಿಗೆ ಹಾಗೂ ಅವರ ಬಂಧು-ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.






