ನವದೆಹಲಿ ಜ.13 NEWS DESK : ಈ ವರ್ಷ ನವದೆಹಲಿಯಲ್ಲಿ ನಡೆಯಲಿರುವ ಬ್ರಿಕ್ಸ್ (BRICS) ಶೃಂಗಸಭೆಗೆ ಸಂಬಂಧಿಸಿದಂತೆ ಅದರ ಲೋಗೋ, ಥೀಮ್ ಮತ್ತು ಅಧಿಕೃತ ವೆಬ್‌ಸೈಟ್‌ನ್ನು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಇಂದು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ನವದೆಹಲಿಯಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಡಾ. ಜೈಶಂಕರ್, ಶೃಂಗಸಭೆಯ ಅವಧಿಯಲ್ಲಿ ಜಾಗತಿಕ ಕಲ್ಯಾಣಕ್ಕಾಗಿ ಬ್ರಿಕ್ಸ್ ರಾಷ್ಟ್ರಗಳ ಸಾಮರ್ಥ್ಯವನ್ನು ಒಟ್ಟುಗೂಡಿಸಲು ಭಾರತ ಗಟ್ಟಿಯಾದ ಪ್ರಯತ್ನ ನಡೆಸಲಿದೆ ಎಂದು ಹೇಳಿದರು. :: ಲೋಗೋ ವಿನ್ಯಾಸಕ್ಕೆ ಸಾಂಸ್ಕೃತಿಕ ಸ್ಪರ್ಶ : : ಬ್ರಿಕ್ಸ್ ಶೃಂಗಸಭೆಯ ಲೋಗೋ ಕುರಿತು ವಿವರಿಸಿದ ಸಚಿವರು, ಬ್ರಿಕ್ಸ್ ಧ್ವಜದ ಬಣ್ಣಗಳಲ್ಲಿ ದಳಗಳನ್ನು ಹೊಂದಿರುವ ಕಮಲ ಹೂವು ಹಾಗೂ ಅದರ ಮಧ್ಯಭಾಗದಲ್ಲಿ ನಮಸ್ತೆ ಸೂಚಕವನ್ನು ಒಳಗೊಂಡ ವಿನ್ಯಾಸವನ್ನು ಪರಿಚಯಿಸಿದರು. ಈ ಲೋಗೋ ಭಾರತದ ಸಂಸ್ಕೃತಿ ಮತ್ತು ಆತಿಥ್ಯ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು. :: ಶೃಂಗಸಭೆಯ ಆದ್ಯತೆಗಳು : : ಭಾರತದ ಬ್ರಿಕ್ಸ್ ಅಧ್ಯಕ್ಷತೆಯಲ್ಲಿ, ಕೆಳಗಿನ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ…
ಲೇಖಕ: admin
ಮಡಿಕೇರಿ ಜ.13 NEWS DESK : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜನವರಿ, 14 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಜ.13 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮವು ಜ.14 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಟಿ.ಎಂ.ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಡಿ.ಸುಜಿತ್, ನಾಪೋಕ್ಲು…
ಮಡಿಕೇರಿ ಜ.13 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರುಗಳ ನೂತನ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮಡಿಕೇರಿ ಬ್ಲಾಕ್ ಅಧ್ಯಕ್ಷರಾಗಿ ಕೊಂಪುಳಿರ ಇಂದಿರಾ ರಾಮಚಂದ್ರ, ನಗರಾಧ್ಯಕ್ಷರಾಗಿ ಶಶಿಕಲಾ ಭಗವತಿ ನಗರ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷರಾಗಿ ಜಾನಕಿ ವೆಂಕಟೇಶ್ ಚೌಡ್ಲು, ನಗರಾಧ್ಯಕ್ಷರಾಗಿ ಶುಭ ಸೋಮವಾರಪೇಟೆ, ಕುಶಾಲನಗರ ಬ್ಲಾಕ್ ಅಧ್ಯಕ್ಷರಾಗಿ ಸವಿತಾ ಸುರೇಶ್ ಶಿರಂಗಾಲ ಹಾಗೂ ನಗರಾಧ್ಯಕ್ಷರಾಗಿ ಸಂಗೀತ ರವಿಕುಮಾರ್ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಮೂರು ಬ್ಲಾಕ್ ಅಧ್ಯಕ್ಷರುಗಳೊಂದಿಗೆ ಚರ್ಚಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿಯವರ ಒಪ್ಪಿಗೆ ಮೇರೆಗೆ ನೂತನ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್ ತಿಳಿಸಿದರು. ನೂತನ ಅಧ್ಯಕ್ಷರುಗಳಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಡಾ.ಮಂತರ್ ಗೌಡ ಅವರು ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು. ಈ ಸಂದರ್ಭ ಸೋಮವಾರಪೇಟೆ…
ಚೆಟ್ಟಳ್ಳಿ ಜ.13 NEWS DESK : ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತಕ್ಕೆ ಸಹಕಾರ ವಿದ್ಯಾನಿಧಿ ಚೆಕ್ಕನ್ನು ವಿತರಿಸಲಾಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಿಬ್ಬಂದಿ ಅರುಣ್ ಕುಮಾರ್ ಅವರಿಗೆ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ನಿರ್ದೇಶಕರಾದ ಬಿ.ಎಂ.ಕಾಶಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಕೆ.ಎಸ್.ನಂದಿನಿ ಹಾಜರಿದ್ದರು.
ಮಡಿಕೇರಿ ಜ.13 NEWS DESK : ಅಪರಾಧ ಪತ್ತೆ ಕಾರ್ಯದಲ್ಲಿ ಉತ್ತಮ ದಕ್ಷತೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅಭಿನಂದಿಸಿದರು. ನಗರದ ಜಿಲ್ಲಾ ಕವಾಯತಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಈ ಸಂದರ್ಭ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಬಾರಿಕೆ ದಿನೇಶ್ ಇದ್ದರು.
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಪ್ರಶಸ್ತಿ ಪುರಸ್ಕಾರ ಪಡೆಯಲು ಆಸಕ್ತ ಮಹಿಳಾ ಲೇಖಕಿಯರು ತಾವು ರಚಿಸಿದ ಸೃಜನಶೀಲ, ಸಮಾಜಮುಖಿ ಕಥೆ, ಕಾದಂಬರಿ, ಕವನ ಸಂಕಲನ ಕೃತಿಗಳ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಕಳುಹಿಸಬೇಕು. 2020ರ ನಂತರ ಪ್ರಕಟಿತ ಪುಸ್ತಕಗಳನ್ನು ಮಾತ್ರ ಕಳುಹಿಸಬೇಕು. ಸ್ಪರ್ಧೆಗೆ ಪುಸ್ತಕ ಕಳಿಸುವ ಲೇಖಕಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಓರ್ವ ಲೇಖಕಿ ಒಂದು ಕೃತಿಯನ್ನು ಮಾತ್ರ ಕಳುಹಿಸಬೇಕು. ಲಕೊಟೆಯ ಮೇಲೆ “ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ” ಎಂದು ಬರೆಯತಕ್ಕದ್ದು. ಕೊಡಗು ಜಿಲ್ಲೆಯ ಲೇಖಕಿಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. :: ಕಳುಹಿಸಬೇಕಾದ ವಿಳಾಸ : ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್ ಸಂಖ್ಯೆ…
ಮೈಸೂರು ಜ.13 NEWS DESK : ಯುವ ಸಮುದಾಯಕ್ಕೆ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಜ್ಞಾನಿಕ ಉತ್ತೇಜನಕ್ಕಾಗಿ ಮೈಸೂರಿನಲ್ಲಿ ಪ್ಲಾನೆಟೋರಿಯಂ ನಿರ್ಮಾಣಕ್ಕೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಐದು ಕೋಟಿ ರೂ. ಅನುದಾನವನ್ನು ಸಂಸದರ ನಿಧಿಯಿಂದ ಬಿಡುಗಡೆ ಮಾಡಿರುವುದು ಶ್ಲಾಘನೀಯ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಂಸದರು, ಮೈಸೂರಿನಲ್ಲಿ ಕಾಸ್ಮೋಲಜಿ ಎಜುಕೇಷನ್ ಅಂಡ್ ರೀಸರ್ಚ್ ಟ್ರೇನಿಂಗ್ ಸೆಂಟರ್ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಹೆಚ್ಚುವರಿ ಅನುದಾನ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಕಾಸ್ಮೋಸ್ ಪ್ಲಾನೆಟೇರಿಯಮ್ ಯೋಜನೆಯು ನಮ್ಮ ಯುವಜನರಿಗೆ ಕುತೂಹಲ, ಕಲಿಕೆ, ಸಂಶೋಧನೆ ಮತ್ತು ನಾವೀನ್ಯತೆಗೆ ಹೆಚ್ಚು ಒತ್ತು ನೀಡುತ್ತದೆ ಎಂದು ವಿವರಿಸಿದ್ದಾರೆ. ಈ ಪ್ರಮುಖ ಯೋಜನೆಯು ಮೈಸೂರಿನ ಪ್ರವಾಸಿ ತಾಣದ ಹೆಗ್ಗುರುತಿಗೆ ಮತ್ತೊಂದು ಸೇರ್ಪಡೆಯಾಗಲಿದೆ. ಸ್ಥಳೀಯ ಅಭಿವೃದ್ಧಿಗೆ ಹೊಸ ಮಾರ್ಗ ಅವಕಾಶ ಒದಗಿಸುತ್ತದೆ ಜೊತೆಗೆ. ಜ್ಞಾನದ ಕೇಂದ್ರವಾಗಿ ಮೈಸೂರಿನ ಪರಂಪರೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿವರಿಸಿದ್ದಾರೆ.…
ಮಡಿಕೇರಿ ಜ.13 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನೀಡಲಾಗುವ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಲೇಖಕಿ ಪೂಜಾರಿರ ಕೃಪಾ ದೇವರಾಜ್ ಬರೆದ ‘ಮಂತ್ರ ಪುಷ್ಪ ಕಥೆಗಳ ಕ್ಯಾನ್ವಾಸ್’ ಕೃತಿ ಪಡೆದುಕೊಂಡಿದೆ. ಈ ದತ್ತಿಯನ್ನು ಗೌರಮ್ಮ ಅವರ ಪುತ್ರ. ಬಿ.ಜಿ.ವಸಂತ ಅವರು ಸ್ಥಾಪಿಸಿದ್ದು, ಕೊಡಗಿನ ಮಹಿಳಾ ಲೇಖಕಿಯರು ಪ್ರಕಟಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಇದುವರೆಗೆ 22 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಪಾ ದೇವರಾಜ್ ಹಲವು ಪುಸ್ತಕಗಳನ್ನು ರಚಿಸಿದ್ದು, ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಮಡಿಕೇರಿ ಜ.13 NEWS DESK : ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಭಾರತೀಯ ಕ್ರೀಡಾ ಪ್ರಾಧಿಕಾರದ ನೇತಾಜಿ ಸುಭಾಷ್ ದಕ್ಷಿಣ ಕೇಂದ್ರಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿ ನೀಡಿದರು. ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳ ಸಾಧನೆ, ಕ್ರೀಡಾ ಕೊಠಡಿ, ಕ್ರೀಡೆಗೆ ಸಂಬಂಧಿತ ಉಪಕರಣಗಳು, ಸುಸಜ್ಜಿತ ಕ್ರೀಡಾಂಗಣಾದ ಒಳ ಹಾಗೂ ಹೊರ ನೋಟವನ್ನು ವೀಕ್ಷಿಸಿದರು. ಕ್ರೀಡಾಪಟುಗಳನ್ನು ಭೇಟಿ ಮಾಡಿ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡುವಂತೆ ಎಂದು ಪ್ರೋತ್ಸಾಹಿಸಿದರು. ಕ್ರೀಡಾ ಪ್ರಾಧಿಕಾರದ ನಿರ್ದೇಶಕರಾದ ವಿಷ್ಣು ಸುಧಾಕರನ್, ನಿಕಟ ಪೂರ್ವ ನಿರ್ದೇಶಕರಾದ ಎಂ.ಕೆ ಗಣೇಶನ್ ಹಾಗೂ ಹಿರಿಯ ಕ್ರೀಡಾಪಟುಗಳು ಉಪಸ್ಥಿತರಿದ್ದರು.






