ಮಡಿಕೇರಿ ನ.25 NEWS DESK : ಮೂರ್ನಾಡು 33/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ F2 ನಾಪೋಕ್ಲು ಹಾಗೂ F5 ಹೊದ್ದೂರು ಫೀಡರ್‌ಗಳಲ್ಲಿ ನ.26 ರಂದು ಬೆಳಿಗ್ಗೆ 10.00ರಿಂದ ಸಂಜೆ 5.00 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಲೇಖಕ: admin
ವಿರಾಜಪೇಟೆ ನ.25 NEWS DESK : ವಿರಾಜಪೇಟೆ ತಾಲ್ಲೂಕು ಘಟಕದಿಂದ ಪಿ.ಎ.ಮಂಜುನಾಥ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷದ ಮುಖಂಡರುಗಳು ಜಾತ್ಯಾತೀತ ಜನತಾದಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆಗೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿರಾಜಪೇಟೆಯ ಜೆಡಿಎಸ್ ನಿಯೋಗದ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷರಾದ ಪಿ.ಎ.ಮಂಜುನಾಥ್ ರಾಜ್ಯಧ್ಯಕ್ಷರಾದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಕೊಡಗಿನಲ್ಲಿ ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಆದಷ್ಟು ಬೇಗನೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಬೇಕು. ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಾಗ ಪ್ರಾಮಾಣಿಕ ಕಾರ್ಯಕರ್ತರು ಹಾಗೂ ಮುಖಂಡರನ್ನು, ಪಕ್ಷದ ಹಿರಿಯ ಕಾರ್ಯಕರ್ತರನ್ನ ಗಣನೆಗೆ ತೆಗೆದುಕೊಂಡು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಬೇಕೆಂದು ಮನವಿ ಮಾಡಿದರು. ಜಿಲ್ಲಾಧ್ಯಕ್ಷರನ್ನು ನೇಮಕ ಮಾಡುವಾಗ ಬೇರೆ ಪಕ್ಷದಿಂದ ವಲಸೆ ಬಂದಿರುವವರಿಗೆ ಮಣೆ ಹಾಕಿದರೆ ಪಕ್ಷನಿಷ್ಠೆ ಹಾಗೂ ಪ್ರಾಮಾಣಿಕ ಕಾರ್ಯಕರ್ತರು ಗೊಂದಲಕ್ಕೀಡಾಗುತ್ತಾರೆ ಎಂದು ರಾಜ್ಯಾಧ್ಯಕ್ಷರಾದ…
ವಿರಾಜಪೇಟೆ ನ.15 NEWS DESK : ಆರ್ಜಿ ಗ್ರಾಮದ ಪೆರುಂಬಾಡಿಯ ಸಂಶುಲ್ ಉಲಾಮಾ ಎಜುಕೇಶನಲ್ ಟ್ರಸ್ಟ್ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕಡಂಗ ಗ್ರಾಮದವರಾದ ಮಾಜಿ ಸೈನಿಕರು ಹಾಗೂ ಉದ್ಯಮಿಗಳಾದ ಸಲಾಂ ಎಂ.ಕೆ ಅವರು ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ, ಈ ವಿದ್ಯಾ ಸಂಸ್ಥೆಯ ಸಮಾಜ ಪರ, ಜಾತಿ, ಮತ ಭೇದವಿಲ್ಲದ ಕಾರ್ಯಕ್ರಮದ ಬಗ್ಗೆ ಹಾಗೂ ಸಂಸ್ಥೆಯ ಯಶಸ್ಸಿನ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು. ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡುವುದಕ್ಕೆ ಸಂತೋಷ ಹಾಗೂ ಅಭಿನಂದನೆ ಸಲ್ಲಿಸಿದರು. ಪ್ರತಿಯೊಂದು ವಿದ್ಯಾರ್ಥಿಗಳು ತಮಗೆ ಸಿಕ್ಕುವ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು. ಅಲ್ಲದೆ ತಮಗೆ ವಿದ್ಯೆ ನೀಡಿದ ಸಂಸ್ಥೆ, ಅಧ್ಯಾಪಕರನ್ನು ಸ್ಮರಿಸಿ ತಯ್ನಾಡಿನ ಕೀರ್ತಿಯನ್ನು ಬೆಳಗಿಸುವಂತಾಗಬೇಕು. ವಿದ್ಯಾರ್ಥಿಗಳು ಬೆಳೆಯುವ ಹಂತದಲ್ಲೆ ಉತ್ತಮ ಜ್ಞಾನಾರ್ಜನೆಯನ್ನು ಬೆಳೆಸಿಕೊಂಡು, ದುಷ್ಚಟಗಳಿಗೆ ದಾಸರಾಗದೇ ಮೊಬೈಲ್ ಗೀಳನ್ನು ಬಿಟ್ಟು ಸಮಾಜಮುಖಿಯಾಗಿ ಬೆಳೆಯಬೇಕು ಎಂದು ಕಿವಿಮಾತನ್ನು ಹೇಳಿದರು. ಬಳಿಕ ತನ್ನ ಯಶಸ್ಸಿಗೆ ಮೂಲ ಕಾರಣಕರ್ತರಾದ…
ಮಡಿಕೇರಿ NEWS DESK ನ.25 : ಕೊಡಗು ಜಿಲ್ಲಾ ಕಾರ್ಮಿಕ ಸಂಘಟನೆಗಳ ಮುಖಂಡ ಹಾಗೂ ಆದಿದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ, ಮಾದಾಪುರದ ನಿವಾಸಿ ಹೆಚ್.ಎಂ.ಸೋಮಪ್ಪ ಅವರ ಪತ್ನಿ ಕೆ.ಕೆ.ಪ್ರೇಮ (54) ಅವರು ನ.24 ರಂದು ರಾತ್ರಿ ನಿಧನ ಹೊಂದಿದರು. ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೆ.ಕೆ.ಪ್ರೇಮ ಅವರ ನಿಧನಕ್ಕೆ ಕಾರ್ಮಿಕ ಸಂಘಟನೆಗಳ ಮುಖಂಡರು, ಕಾರ್ಮಿಕರು ಹಾಗೂ ಆದಿದ್ರಾವಿಡ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ.
ನಾಪೋಕ್ಲು ನ.25 NEWS DESK : ಇಡೀ ಜಗತ್ತಿನಲ್ಲಿ ಮಾನವ ಕುಲವೊಂದೇ. ಎಲ್ಲಾ ಧರ್ಮಗಳ ಸಾರವು ಒಂದೇ. ಎಲ್ಲರ ಆಧ್ಯಾತ್ಮಿಕ ಚಿಂತನೆಯು ಒಂದೇ ಎನ್ನುವ ದಿವ್ಯ ಸಂದೇಶವನ್ನು ಈ ನಾಡಿಗೆ ನೀಡಿ ಎಲ್ಲರ ಹೃದಯದಲ್ಲಿ ಮನೆ ಮಾತಾಗಿರುವ ಸಂತ ನಾರಾಯಣ ಗುರುಗಳ ಜನ್ಮ ದಿನಾಚರಣೆಯನ್ನು ಸಂಘಟನೆಯೊಂದು ಆಚರಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಅರಮೇರಿ ಕಳಂಚೇರಿ ಮಠದ ಸ್ವಾಮೀಜಿ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು. ನಾಪೋಕ್ಲುವಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಾಪೋಕ್ಲು ವತಿಯಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಹಾಗೂ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಳಂಚೇರಿ ಮಠದ ಪೀಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವಚನ ನೀಡಿದರು. ಮನುಷ್ಯನಲ್ಲಿರುವ ದ್ವೇಷ ಕ್ಲೇಶಗಳನ್ನು ಕಳೆದು ಇಡೀ ಸಮಾಜವನ್ನು ಪ್ರೀತಿಸುವಂತಹ ವ್ಯಕ್ತಿ ಆಗಬೇಕು. ಶೋಷಿತ ವರ್ಗದವರಿಗೆ ಬದುಕನ್ನು ಕಟ್ಟಿಕೊಳ್ಳುವ, ಧಾರ್ಮಿಕವಾಗಿ ಸಾಮಾಜಿಕವಾಗಿ ಮೇಲೆ ಬರುವ ಚಿಂತನೆಗಳನ್ನು ಸಮಾಜದಲ್ಲಿ ಮೂಡಿಸಿದ ಶ್ರೇಷ್ಠ ಸಂತ…
ಕುಶಾಲನಗರ ನ.25 NEWS DESK : ಭಾರತೀಯ ಶ್ರೀಮಂತ ಸಂಸ್ಕೃತಿಯ ಪ್ರತೀಕ ರಂಗೋಲಿ. ಗೃಹಿಣಿಯ ದಿನ ಆರಂಭವಾಗುವುದೇ ಮನೆಯ ಮುಂದೆ ರಂಗೋಲಿ ಬಿಡಿಸುವುದರ ಮೂಲಕ. ಅಂತಹ ಕಲೆಯನ್ನು ಕಲಾವಿದರ ಮೂಲಕ ಅನಾವರಣ ಮಾಡಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಯಶಸ್ವಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಕುಶಾಲನಗರದ ರಥ ಬೀದಿಯಲ್ಲಿ ಆಯೋಜಿಸಿದ ರಂಗೋಲಿ ಸ್ಪರ್ಧೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ರಂಗೋಲಿ ಕೇವಲ ಮಹಿಳೆಯರಿಗೆ ಸೀಮಿತಗೊಳಿಸಬಾರದು. ಮುಂದಿನ ವರ್ಷದ ರಂಗೋಲಿ ಸ್ಪರ್ಧೆಯಲ್ಲಿ ನಾವುಗಳು ಭಾಗವಹಿಸೋಣ ಎಂದು ಕರೆ ನೀಡಿದರು. ಕಲೆ ಎನ್ನುವದು ಅತ್ಯಂತ ಶ್ರೇಷ್ಠವಾದದ್ದು. ಅಂತಹ ಅದ್ಬುತ ಪ್ರತಿಭೆಗಳನ್ನು ಗುರುತಿಸುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯುವಂತಾಗಬೇಕು ಎಂದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಕುಶಾಲನಗರ ಕಸಾಪ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನ ಸಾಮಾನ್ಯರ ಮನಃ ಗೆದಿದೆ. ರಂಗೋಲಿ ಎನ್ನುವುದು…
ಮಡಿಕೇರಿ NEWS DESK ನ.25 : ಮೇಕೇರಿ ಗ್ರಾ.ಪಂ ವ್ಯಾಪ್ತಿಯ ಬಿಳಿಗೇರಿ ಗ್ರಾಮದ ವಾರ್ಡ್ ಸಂಖ್ಯೆ 2 ರಲ್ಲಿರುವ ಮಳೆಹಾನಿ ಸಂತ್ರಸ್ತರ ಮನೆಗಳಿಗೆ ಕೊನೆಗೂ ಕುಡಿಯುವ ನೀರಿನ ಭಾಗ್ಯ ಸನ್ನಿಹಿತವಾಗಿದೆ. ಇತ್ತೀಚೆಗೆ ವಾರ್ಡ್ನ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಹಾಗೂ ಸ್ಥಳೀಯ ನಿವಾಸಿಗಳು ಮಳೆಹಾನಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಟ್ಟು 5 ವರ್ಷಗಳೇ ಕಳೆದಿದ್ದರೂ ಇಲ್ಲಿಯವರೆಗೆ ಶುದ್ಧ ಕುಡಿಯುವ ನೀರು ಒದಗಿಸದೆ ಇರುವ ಬಗ್ಗೆ ಮಾಧ್ಯಮಗಳ ಮೂಲಕ ಆಡಳಿತ ವ್ಯವಸ್ಥೆಯ ಗಮನ ಸೆಳೆದಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿರುವ ಜಿ.ಪಂ ಅಧಿಕಾರಿಗಳು ಜಲ್ ಜೀವನ್ ಮಿಷನ್ ಯೋಜನೆ ಮೂಲಕ ನೀರು ಒದಗಿಸಲು ಸೂಚನೆ ನೀಡಿದ ಬೆನ್ನಲ್ಲೇ ಕಾಮಗಾರಿ ಆರಂಭಗೊಂಡಿದೆ. ವಾರ್ಡ್ ಸಂಖ್ಯೆ 2 ರಲ್ಲಿರುವ ಮಳೆಹಾನಿ ಸಂತ್ರಸ್ತರ 22 ಮನೆಗಳಿಗೆ ನೀರು ಸರಬರಾಜು ಮಾಡಲು ಪೈಪ್ ಅಳವಡಿಸುವ ಕಾರ್ಯ ಭರದಿಂದ ಸಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಅವರು ನಮ್ಮ ಮನವಿ ತಕ್ಷಣ ಸ್ಪಂದನೆ ದೊರೆತ್ತಿದ್ದು, ಕ್ಷೇತ್ರದ ಶಾಸಕರು…
ಬೆಂಗಳೂರು ನ.25 NEWS DESK : ಶಿಡ್ಲಘಟ್ಟದಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್. ವ್ಯಾಲಿ 3ನೇ ಹಂತದ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ಸಚಿವರುಗಳಾದ ಕೆ.ಎಚ್ ಮುನಿಯಪ್ಪ, ಎಂ.ಸಿ ಸುಧಾಕರ್, ಬೋಸರಾಜ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ವೆಂಕಟೇಶ್, ಜಮೀರ್ ಅಹ್ಮದ್, ಬೈರತಿ ಸುರೇಶ್, ರಹೀಮ್ ಖಾನ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಶಾಸಕರು ಮತ್ತಿತರ ನಾಯಕರು ಭಾಗವಹಿಸಿದ್ದರು. ಇದೇ ಸಂದರ್ಭ ಎ.ಎಸ್ ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
ಮಡಿಕೇರಿ ನ.25 NEWS DESK : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನದಡಿಯಲ್ಲಿ ಡಿ.9 ರವರೆಗಿನ 14 ದಿನಗಳು ಆಶಾ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಅವರು ಚಾಲನೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಮಾತನಾಡಿ, ಕಳೆದ 5 ವರ್ಷಗಳ ಹಿಂದಿನ ರೋಗ ಪ್ರಕರಣಗಳು ಕಂಡು ಬಂದಿರುವ ಮಡಿಕೇರಿ ತಾಲ್ಲೂಕಿನ ಆಯ್ದ ಗ್ರಾಮಗಳಾದ ಗಾಳಿಬೀಡು ಮತ್ತು ಪೆರಾಜೆ ಗ್ರಾಮಗಳಲ್ಲಿ 14 ದಿನಗಳ ಸರ್ವೇಕ್ಷಣಾ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಯವರು ಕ್ಷೇತ್ರ ಭೇಟಿ ನೀಡಿ ಶಂಕಿತ ಕುಷ್ಠರೋಗ ಪ್ರಕರಣಗಳನ್ನು ಗುರುತಿಸಲು ಮನೆ ಮನೆಗಳಿಗೆ ಆಶಾ ಕಾರ್ಯಕರ್ತರು ಬರುವ ಸಮಯದಲ್ಲಿ ಸಹಕಾರ ನೀಡುವಂತೆ ಕೋರಿದರು. ಚರ್ಮದ ಮೇಲಿನ ಯಾವುದೇ ತಿಳಿ, ಬಿಳಿ,…
ಮಡಿಕೇರಿ ನ.25 NEWS DESK : ಟ್ರೇಡ್ಸ್ ಯೋಜನೆಯಡಿ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಹಲವು ಯೋಜನೆಗಳಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. 2025-26 ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೊಜನೆಯಡಿ ಕೊಡಗು ಜಿಲ್ಲೆಯಲ್ಲಿ ಉದ್ಯಮ ನೋಂದಣಿ ಪಡೆದಿರುವ ನೋಂದಾಯಿತ ಉದ್ಯಮಿಗಳಿಗೆ ಟ್ರೇಡ್ ರಿಸಿವೇಬಲ್ಸ್ ಡಿಸ್ಕೌಂಟಿಂಗ್ ಸಿಸ್ಟಮ್ (ಟಿಆರ್‍ಎಡಿಎಸ್) (ಟ್ರೆಡ್ಸ್ ಎಂದರೆ ವ್ಯಾಪಾರ ಹಣ ರಿಯಾಯಿತಿ ವ್ಯವಸ್ಥೆ) ಆನ್‍ಲೈನ್ ಪ್ಲಾಟ್‍ಫಾರ್ಮ್‍ಗೆ ಸಂಬಂಧಿಸಿದಂತೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವ ಜನರಿಗೆ ಉದ್ಯೋಗ ಒದಗಿಸುವಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪಾತ್ರ ಹೆಚ್ಚಿನದ್ದಾಗಿದೆ ಎಂದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ…






