ಲೇಖಕ: admin

ವಿರಾಜಪೇಟೆ ಜ.10 NEWS DESK  : ಬಾಳುಗೋಡು ಗ್ರಾಮದ ಕಂಡಿಮಕ್ಕಿ ಎಂಬಲ್ಲಿ ಅತ್ಯಂತ ಬಡ ಕುಟುಂಬವೊಂದರ ಮನೆಯ ಕನಸನ್ನು ಸಮಾಜಸೇವಕ ಬಿ.ಎಂ.ಗಣೇಶ್ ಮುಂದೆ ನಿಂತು ನನಸು ಮಾಡಿದ್ದಾರೆ. ಕಂಡಿಮಕ್ಕಿಯ ದಿವಂಗತ ಸನ್ನಿ ಎಂಬುವವರ ಪತ್ನಿ ಮಂಜುಳಾ ತಮ್ಮ ಇಬ್ಬರು ಮಕ್ಕಳೊಂದಿಗೆ ತೀರ ದುರ್ಬಲ ಮನೆಯಲ್ಲಿ ವಾಸವಿದ್ದರು. ಪುಟ್ಟ ಜೋಪಡಿಯಲ್ಲಿ ವಾಸಿಸುತ್ತಿದ್ದ ಇವರನ್ನು ಕಂಡು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ.ಗಣೇಶ್ ಸೂರು ಒದಗಿಸಿಕೊಡುವ ಭರವಸೆ ನೀಡಿದ್ದರು. ಕುಟುಂಬದ ದಯಾನೀಯ ಸ್ಥಿತಿಯನ್ನು ಸ್ಥಳೀಯರಾದ ಮಧು ಅವರ ಮೂಲಕ ತಿಳಿದುಕೊಂಡ ಗಣೇಶ್ ತಮ್ಮ ಸ್ವಂತ ಹಣದಲ್ಲಿ ಎರಡು ಲಕ್ಷ ವೆಚ್ಚದ ಮೂರು ಕೋಣೆಗಳುಳ್ಳ ಮನೆಯನ್ನು ನಿರ್ಮಿಸಿಕೊಟ್ಟಿದ್ದಾರೆ. ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದ್ದ ಬಡ ಕುಟುಂಬಗಳಿಗೆ ಈಗಾಗಲೇ 5 ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬದಂದು ಹೊಸಬೆಳಕು ಎಂದು ಮನೆಗೆ ಫಲಕ ಅಳವಡಿಸಿ ಮಂಜುಳಾ ಅವರಿಗೆ ಮನೆಯ ಕಿಲಿಕೈಯನ್ನು ಹಸ್ತಾಂತರ ಮಾಡಿದ್ದಾರೆ. ಬಳಿಕ ಮಾತನಾಡಿದ ಬಿ.ಎಂ. ಗಣೇಶ್ ಮಾತನಾಡಿ, ಕುಟುಂಬ ವಾಸಿಸುತ್ತಿರುವ ಗುಡಿಸಲು…

Read More

ಮಡಿಕೇರಿ ಜ.10 NEWS DESK : ಕೊಡಗಿನ ವಿವಿಧೆಡೆ ವ್ಯಾಘ್ರನ ಉಪಟಳ ಹೆಚ್ಚಾಗಿದ್ದು, ಜಾನುವಾರುಗಳನ್ನು ಕೊಂದು ಹಾಕಿದ ಪ್ರಕರಣಗಳು ಬೆಳಕಿಗೆ ಬಂದಿದೆ. ಕಾಫಿ ತೋಟ ಮತ್ತು ಭತ್ತದ ಗದ್ದೆಗಳಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿದೆ. ಬಿಟ್ಟಂಗಾಲ ಸಮೀಪದ ಕಂಡಂಗಾಲ ಗ್ರಾಮದ 1ನೇ ರುದ್ರಗುಪ್ಪೆಯ ರೈತ ಬಲ್ಲಡಿಚಂಡ ಲೋಕನಾಥ್ ಎಂಬುವವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಕಳೆದ 15 ದಿನಗಳಲ್ಲಿ ಈ ಭಾಗದಲ್ಲಿ 3 ಜಾನುವಾರುಗಳು ನಾಪತ್ತೆಯಾಗಿದ್ದು, ಕಾರ್ಮಿಕರು ತೋಟಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. *ಗ್ರಾಮಸ್ಥರ ಅಸಮಾಧಾನ* ಹುಲಿ ಸೆರೆಗೆ ಆಗ್ರಹಿಸಿ ಹಲವು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರೆಯದ ಕಾರಣ ರೈತ ಸಂಘದ ಪ್ರಮುಖರು ಸ್ಥಳಕ್ಕೆ ಆಗಮಿಸಿ ಅರಣ್ಯ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹುಲಿ ಸೆರೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೀಗ ಘಟನಾ ಸ್ಥಳದಲ್ಲಿ ಹುಲಿ ಸೆರೆಗೆ ಬೋನನ್ನು ಅಳವಡಿಸಿರುವ ಅಧಿಕಾರಿಗಳು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿ ಕೂಂಬಿಂಗ್ ಕಾರ್ಯಾಚರಣೆಯನ್ನು…

Read More

ಸುಂಟಿಕೊಪ್ಪ ಜ.10 NEWS DESK : ಮಕ್ಕಳು ಕಷ್ಟಪಟ್ಟು ವಿದ್ಯೆಯನ್ನು ಕಲಿಯುವುದಕ್ಕಿಂತ ಇಷ್ಟಪಟ್ಟು ಕಲಿಯುವ ಮೂಲಕ ತಾವು ಕಲಿತ ಶಾಲೆಗೆ ಮತ್ತು ಶಿಕ್ಷಕ ವೃಂದಕ್ಕೆ ಗೌರವ ತರುವ ಮಾಡಬೇಕೆಂದು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಕರೆ ನೀಡಿದರು. ಸುಂಟಿಕೊಪ್ಪ ಸಂತ ಅಂತೋಣಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ನೀಡಲಾಗುತ್ತಿರುವ ಸ್ವಟರ್ ವಿತರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶೈಕ್ಷಣಿಕ ವರ್ಷದಲ್ಲಿ 30 ಸಾವಿರ ಸ್ವೆಟರ್‍ಗಳ ವಿತರಣೆಯನ್ನು ಹಮ್ಮಿಕೊಂಡಿದ್ದು, ಮೊದಲ ಹಂತದಲ್ಲಿ ಸರಕಾರಿ ಶಾಲೆಗಳನ್ನು ಆಯ್ದುಕೊಂಡಿದ್ದೇವೆ. ನಂತರ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೂ ವಿತರಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಬ್ಯಾಗ್‍ಗಳನ್ನು ಕೂಡ ವಿತರಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು. ಸರಕಾರಿ ಶಾಲೆಗಳಲ್ಲಿ ಕಲಿತು ಬದುಕು ಕಟ್ಟಿಕೊಂಡವರು ನಾವು ಕಲಿತ ಶಾಲೆಯನ್ನು ಮರೆಯಬಾರದೆಂದು ಹೇಳಿದÀರು. ಸಾಧ್ಯವಾದಷ್ಟು ಸಹಾಯ ಮಾಡಬೇಕೆಂದು ಸಲಹೆ ನೀಡಿದರು. ನಂತರ ಕೊಡಗರಹಳ್ಳಿಯ ಶಾಂತಿನಿಕೇತನ ಶಾಲೆ, 7ನೇ ಹೊಸಕೋಟೆಯ ದೀಪ್ತಿ ಶಾಲೆಗೆ ಸ್ವೆಟರ್ ವಿತರಣೆ ಮಾಡಿದರು. ಈ ಸಂದರ್ಭ…

Read More

ಮಡಿಕೇರಿ ಜ.10 NEWS DESK : ವಿರಾಜಪೇಟೆ ಪುರಾಸಭೆ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ವಿರಾಜಪೇಟೆ ಪಟ್ಟಣ ಪಂಚಾಯತ್ ವ್ಯಾಪ್ತಿಯ, ರೂ.24 ಲಕ್ಷ ನಿಸರ್ಗ ಬಡಾವಣೆ ಹಾಗೂ ರೂ.5ಲಕ್ಷ ವಿಜಯನಗರ ಬಡಾವಣೆ ವ್ಯಾಪ್ತಿಯಲ್ಲಿ ಶಾಸಕರ ಅನುದಾನದಲ್ಲಿ ಎರಡು ಕಾಂಕ್ರೀಟೀಕರಣ ಕಾಮಗಾರಿ ಕೈಗೊಳ್ಳಲಾಗಿತ್ತು. ರಸ್ತೆ ಉದ್ಘಾಟಿಸಿ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಈ ರಸ್ತೆ ತೆರಳಲು ತುಂಬಾ ಕಷ್ಟಕರವಾಗಿರುವುದನ್ನು ಸ್ಥಳೀಯರು ತನ್ನ ಗಮನಕ್ಕೆ ತಂದಿದ್ದು, ಸಾರ್ವಜನಿಕರ ಬೇಡಿಕೆಯಂತೆ ಈ ಎರಡು ರಸ್ತೆಯನ್ನು ನಿರ್ಮಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.  ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಾಸಭೆ ಮಾಜಿ ಅಧ್ಯಕ್ಷರಾದ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷರಾದ ಫಸಿಯಾ ತಬ್ಸುಂ, ಮಾಜಿ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ಮತೀನ್, ಅತಿಫ್ ಮನ್ನ, ರಜಿನಿಕಾಂತ್, ಪೃಥ್ವಿನಾಥ್, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತರ…

Read More

ಮಡಿಕೇರಿ NEWS DESK ಜ.10 : ಸಾಮಾಜಿಕ ಜಾಲತಾಣದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜನರಿಂದ ಆಯ್ಕೆಯಾದ ಗೌರವಾನ್ವಿತ ಶಾಸಕರನ್ನು ಸಾಮಾಜಿಕ ಜಾಲತಾಣದಲ್ಲಿ ನಿಂದಿಸಲಾಗಿದೆ. ‘ಶ್ರದ್ಧಾಂಜಲಿ’ ಪೋಸ್ಟ್ ಹಾಕುವ ಮೂಲಕ ಪರಿಶಿಷ್ಟ ಸಮುದಾಯದ ಮಹಿಳೆಯ ಆತ್ಮಗೌರವಕ್ಕೆ ದಕ್ಕೆ ತರಲಾಗಿದೆ. ಇದೊಂದು ಹೇಯ ಕೃತ್ಯವಾಗಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರಕಾರದ ಬಿಗಿ ತಪ್ಪಿದ ಆಡಳಿತವೇ ಕಾರಣವೆಂದು ಟೀಕಿಸಿದ್ದಾರೆ. ಪ್ರತಿ ಬಾರಿ ಸಾಮಾಜಿಕ ಬದ್ಧತೆ ಮತ್ತು ಅಹಿಂದ ಪರ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟರು ಹಾಗೂ ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಪರಿಶಿಷ್ಟ ಸಮುದಾಯದ ಶಾಸಕಿಯೊಬ್ಬರಿಗೆ ಅವಮಾನವಾದಾಗ ಸರಕಾರ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಿತ್ತು. ಆದರೆ ಭಾಗೀರಥಿ ಮುರುಳ್ಯ ಅವರನ್ನು ಅವಹೇಳನ ಮಾಡಿರುವ ಪ್ರಕರಣವನ್ನು…

Read More

ಮಡಿಕೇರಿ ಜ.10 NEWS DESK : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಉತ್ಸವ ಸಮಿತಿ ವತಿಯಿಂದ ನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಯಲ್ಲಿ 36ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ ಜ.14ರಂದು ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂರ್ಯನು ಧನುರ್ ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವ ‘ಉತ್ತರಾಯಣ’ ಪುಣ್ಯಕಾಲದ ಮಕರಸಂಕ್ರಾಂತಿ ಉತ್ಸವ ಅತ್ಯಂತ ವಿಶೇಷವಾದದ್ದು. ಮಕರ ಸಂಕ್ರಾಂತಿಯ ದಿನದಿಂದ ಸೂರ್ಯನ ಚಲನೆ ದಕ್ಷಿಣದಿಂದ ಉತ್ತರದಿಕ್ಕಿನತ್ತ ಸರಿಯಲಾರಂಭಿಸುತ್ತದೆ. ವೈಜ್ಞಾನಿಕವಾಗಿಯು ಇದೊಂದು ಮಹತ್ವದ ದಿನ ಮತ್ತು ಹಬ್ಬವಾಗಿದೆ ಎಂದರು. ಮಕರಸಂಕ್ರಾಂತಿಯ ಮುನ್ನಾ ದಿನವಾದ ಜ.13 ರಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಇತ್ಯಾದಿ ಸೇವೆ ನಡೆಯಲಿದೆ. ಜ.14ರ ಬೆಳಗ್ಗೆ 6.30 ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, 7 ಗಂಟೆಗೆ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, 7.30ರಿಂದ ಪಂಚಾಮೃತಾಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ,…

Read More

ಮಡಿಕೇರಿ ಜ.10 NEWS DESK : ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಮಡಿಕೇರಿಯಲ್ಲಿ  ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ದೈವಜ್ಞ ಬ್ರಾಹ್ಮಣ ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮೀಜಿ ಹಾಗೂ ಶ್ರೀಶ್ರೀ ಸುಜ್ಞಾನೇಶ್ವರ ಭಾರತೀ ಸ್ವಾಮೀಜಿಗಳ ದೈವಜ್ಞ ದರ್ಶನ ಕಾರ್ಯಕ್ರಮ  ನಡೆಯಿತು. ಶ್ರೀಗಳ ಪುರಪ್ರವೇಶದ ನಂತರ ಪೂರ್ಣ ಕುಂಭ ಮೆರವಣಿಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಚೌಡೇಶ್ವರಿ ದೇವಾಲಯದವರೆಗೆ ಸಾಗಿತು. ನಂತರ ಶ್ರೀಗಳ ಪಾದುಕಾ ಪೂಜೆ, ಶ್ರೀಗಳಿಂದ ಆಶೀರ್ವಚನ, ಫುಲಪುಷ್ಪ ಸಮರ್ಪಣೆ, ಫಲ ಮಂತ್ರಾಕ್ಷತೆ ನೆರವೇರಿತು. ಸ್ವಾಮೀಜಿಗಳ ಭವ್ಯ ಸ್ವಾಗತಕ್ಕಾಗಿ ನಗರದ ಮಹದೇವಪೇಟೆ ಹಾಗೂ ಶ್ರೀಚೌಡೇಶ್ವರಿ ದೇವಾಲಯವನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಆಕರ್ಷಣೀಯವಾಗಿ ಅಲಂಕಾರಗೊಳಿಸಲಾಗಿತ್ತು. ದೈವಜ್ಞ ಬ್ರಾಹ್ಮಣ ಸಮಾಜದ ಬಂಧುಗಳು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Read More

ಮಡಿಕೇರಿ ಜ.10 NEWS DESK : ನಗರದ ಮೈತ್ರಿ ಭವನದ ಬಳಿ ನೂತನವಾಗಿ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಿರುವ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಹಳೆ ರೈಫಲ್ ರೇಂಜ್ ವಸತಿ ಗೃಹಗಳ ಸಮುಚ್ಚಯಕ್ಕೆ ಭೇಟಿ ನೀಡಿ ಅಲ್ಲಿರುವ ಸಿಬ್ಬಂದಿ ಕುಟುಂಬದವರೊಂದಿಗೆ ಮಾತನಾಡಿ ಮೂಲಭೂತ ಸೌಕರ್ಯ ಮತ್ತು ಸಮಸ್ಯೆಗಳ ಬಗ್ಗೆ ಆಲಿಸಿದರು.

Read More

ಮಡಿಕೇರಿ ಜ.10 NEWS DESK : ಬಾಳೆಲೆ ವಿಜಯಲಕ್ಷ್ಮಿ ವಿದ್ಯಾ ಸಂಸ್ಥೆಯಲ್ಲಿ 1997- 1998ನೇ ಶೈಕ್ಷಣಿಕ ವರ್ಷಗಳಲ್ಲಿ ವ್ಯಾಸಂಗ ಮುಗಿಸಿದ ಹಳೆಯ ಹಳೇಯ ವಿದ್ಯಾರ್ಥಿಗಳಿಂದ ಶಾಲಾಭಿವೃದ್ಧಿಗೆ ಆರ್ಥಿಕ ನೆರವು ನೀಡ ಲಾಯಿತು. ವಿದ್ಯಾರ್ಥಿಗಳಾದ ಶಿವದಾಸನ್, ವನಿತಾ, ಸುಂದರ, ಶಿವಪ್ಪ, ಮುಕುಂದ, ಅಶ್ವಿನಿ , ವಸಂತಿ, ಅರವಿಂದ, ಪವನ್, ಮಂಜುನಾಥ್, ಬೀಮಣಿ  ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದನ್ನು ಪ್ರೋತ್ಸಾಹಿಸಲು 20,250ರೂ. ಗಳ ಧನ ಸಹಾಯವನ್ನು ನೀಡಿದರು. ಈ ಸಂದರ್ಭ ಮಾತನಾಡಿದ ಹಳೇಯ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಮಂಜುನಾಥ್,  ನಾವು ಈಗ ನೀಡಿದ ಅರ್ಥಿಕ ನೆರವಿನ ರೀತಿಯಲ್ಲಿ ವಿದ್ಯಾರ್ಥಿಗಳು ಚೆನ್ನಾಗಿ ವ್ಯಾಸಾಂಗ ಮಾಡಿ ಭವಿಷ್ಯದಲ್ಲಿ ಕಷ್ಟದಲ್ಲಿ ಇರುವವರಿಗೆ ನೆರವು ನೀಡಿ ಸಮಾಜದ ಮುಖ್ಯವಾಹಿನಿಗೆ ಬರಲು ಸಹಕರಿಸುವಂತೆ ಕರೆ ನೀಡಿದರು. ವಿದ್ಯಾಸಂಸ್ಥೆಯ ಪರವಾಗಿ ಹಿರಿಯ ಸಹಾಯಕ ಅಧ್ಯಾಪಕರಾದ ಚಂದ್ರಶೇಖರ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಗದನ್ನು ಸ್ವೀಕರಿಸಿದರು.

Read More

ವಿರಾಜಪೇಟೆ ಜ.10 NEWS DESK : ಜೀವನದಲ್ಲಿ ನಮ್ಮ ಮನಸ್ಸಿನ ಯೋಚನೆ, ಉತ್ತಮವಾದ ಚಿಂತನೆಗಳೇ ಎಲ್ಲದಕ್ಕೂ ಕಾರಣವಾಗುತ್ತವೆ. ನಾವು ಯೋಚಿಸುವ ರೀತಿ, ನಡೆಯುವ ಮಾರ್ಗ ಸೂಕ್ತವಾಗಿದ್ದರೆ ನಮ್ಮ ಬದುಕು ಉತ್ತಮವಾಗಿರುತ್ತದೆ ಎಂದು ಶ್ರೀ ಕ್ಷೇತ್ರ ಕರ್ಕಿ ದೈವಜ್ಞ ಬ್ರಾಹ್ಮಣ ಮಠದ ಜ್ಞಾನೇಶ್ವರಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಸ್ವಾಮೀಜಿ ನುಡಿದರು. ವಿರಾಜಪೇಟೆಯ ನಿಸರ್ಗ ಬಡಾವಣೆಯ ದೈವಜ್ಞ ಬ್ರಾಹ್ಮಣ ಸಮಾಜದಲ್ಲಿ ದಕ್ಷಿಣ ಕೊಡಗು ದೈವಜ್ಞ ಬ್ರಾಹ್ಮಣ ಸಮಾಜದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ದೈವಜ್ಞ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಸ್ವಾಮಿಜಿಗಳು, ನಾಲ್ಕು ದಶಕಗಳ ಹಿಂದೆ ದೈವಜ್ಞ ಸಮಾಜ ತೀರಾ ಹಿಂದುಳಿದಿತ್ತು. ಸಾಮಾಜಿಕ, ಶೈಕ್ಷಣಿಕವಾಗಿ ಬೆಳೆಯಬೇಕೆಂಬ ಸಂಕಲ್ಪ, ಶ್ರಮದಿಂದ ಈಗ ಉತ್ತಮ ಪ್ರಗತಿ ಕಂಡಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಮೋಹದಲ್ಲಿ ನಮ್ಮತನ ಕಳೆದುಕೊಳ್ಳಬಾರದು. ಮಕ್ಕಳಿಗೆ ಸನಾತನ ಪರಂಪರೆಯ ಸಂಸ್ಕಾರ ನೀಡುವ ಹೊಣೆ ಪಾಲಕರದ್ದು ಎಂದ ಶ್ರೀಗಳು, ಸಮಾಜ ಬಾಂಧವರೆಲ್ಲರೂ ಸಂಘಟಿತರಾಗಿ ಶ್ರಮಿಸಿದರೆ ಅದು ಅಸಾಧ್ಯವೇನಲ್ಲ. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲೂ ಆಸ್ತಿ,…

Read More