ಸುಂಟಿಕೊಪ್ಪ ಜ.10 NEWS DESK : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ 2026-27ನೇ ಸಾಲಿನ ಅಧ್ಯಕ್ಷರಾಗಿ ಶಂಕರನಾರಾಯಣ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಕೆ.ಧರ್ಮ, ಸಹ ಕಾರ್ಯದರ್ಶಿಯಾಗಿ ದಯಾನಂದ ರೈ, ಖಜಾಂಚಿಯಾಗಿ ಕೆ.ಎಸ್.ವಿನೋದ್, ಕ್ರೀಡಾಕಾರ್ಯದರ್ಶಿಯಾಗಿ ಟಿ.ಕೆ.ಚಂದ್ರು, ಆಶೋಕ(ದೇವೆಂದ್ರ), ಪಿ.ಎಂ.ರವಿ, ಸಾಂಸ್ಕøತಿಕ ಕಾರ್ಯದರ್ಶಿಯಾಗಿ ಎಸ್.ಬಿ.ಪ್ರವೀಣ್‍ಕುಮಾರ್, ಗೌರವಧ್ಯಕ್ಷರಾಗಿ ಬಿ.ಎ.ವಸಂತ, ಸಲಹೆಗಾರರಾಗಿ ಕೆ.ಎಸ್.ಜಗದೀಶ್, ಬಿ.ಜಿ.ರಮೇಶ್, ಪಿ.ಟಿ.ಪೌಲಸ್, ಪಿ.ಎಸ್.ಅನಿಲ್‍ಕುಮಾರ್, ಪಿ.ಕೆ.ದಿನೇಶ್, ಕೆ.ಕೆ.ವಿಜೇಶ್, ಸಮಿತಿ ಸದಸ್ಯರುಗಳಾಗಿ ಎ.ಎಸ್.ಸಂದೀಪ್, ಪಿ.ಎಸ್.ಅಜಿತ್‍ಕುಮಾರ್ ಅವರುಗಳನ್ನು ಆಯ್ಕೆಗೊಳಿಸಲಾಯಿತು.
ಲೇಖಕ: admin
ಮಡಿಕೇರಿ ಜ.10 NEWS DESK : ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೂ.10.77 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಮೈಸೂರು -ಗೋಣಿಕೊಪ್ಪ ಮುಖ್ಯರಸ್ತೆಯ, ಆಯ್ದ ಭಾಗಗಳಲ್ಲಿ ರೂ. 3.80 ಕೋಟಿ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ತಿತಿಮತಿ ಪಟ್ಟಣ ವ್ಯಾಪ್ತಿಯಲ್ಲಿ ತಿತಿಮತಿ ಸೇತುವೆಯಿಂದ ದೇವರಪುರದವರೆಗಿನ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು, ಈ ಕಾಮಗಾರಿ ಅತಿ ಶೀಘ್ರದಲ್ಲಿ ಗುಣಮಟ್ಟ ಕಾಯ್ದುಕೊಂಡು ಮುಗಿಸಬೇಕೆಂದು ಗುತ್ತಿಗೆದಾರರಿಗೆ ಹೇಳಿದರು. ಅತ್ಯಂತ ಹೆಚ್ಚು ವಾಹನ ದಟ್ಟಣೆ ಇರುವ ಪ್ರಮುಖ ರಸ್ತೆ ಇದಾಗಿರುವುದರಿಂದ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾರ್ಯ ನಿರ್ವಹಿಸಿ ಎಂದು ಸೂಚನೆ ನೀಡಿದರು. ಬಳಿಕ, ಮೈಸೂರು-ಪೊನ್ನಂಪೇಟೆ ಮುಖ್ಯರಸ್ತೆಯ, ದೇವರಪುರದಿಂದ ಸೀಗೆತೋಡು ಸೇತುವೆ ತನಕ, ರೂ. 3.50 ಕೋಟಿ ಅನುದಾನದಲ್ಲಿ, ಸುಮಾರು 4.34 ಕಿ.ಮೀ ಉದ್ದದ ರಸ್ತೆಯ ಉದ್ಘಾಟನೆ ನೆರವೇರಿಸಿದರು. ದೇವರಪುರ ಪಟ್ಟಣದಲ್ಲಿ ಈ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ನೆರವೇರಿಸಿದರು. ಗೋಣಿಕೊಪ್ಪ-ಪೊನ್ನಂಪೇಟೆ ಮುಖ್ಯ…
ನಾಪೋಕ್ಲು ಜ.10 NEWS DESK : ಚಳ್ಳಕೆರೆಯ ಕರ್ನಾಟಕ ಅಕಾಡೆಮಿ ಆಫ್ ಮ್ಯಾಥಮೆಟಿಕ್ಸ್ ವತಿಯಿಂದ ನಡೆಸಲಾಗಿದ್ದ ಗಣಿತ ಪ್ರತಿಭಾ ಪರೀಕ್ಷೆಯಲ್ಲಿ ಮೂರ್ನಾಡಿನ ಮಾರುತಿ ವಿದ್ಯಾಸಂಸ್ಥೆಯ 87 ವಿದ್ಯಾರ್ಥಿಗಳು ಭಾಗವಹಿಸಿದ್ದು, ಕೆಲವು ವಿದ್ಯಾರ್ಥಿಗಳು ರಾಷ್ಟ್ರಮಟ್ಟ, ರಾಜ್ಯಮಟ್ಟ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿದ್ಯಾಸಂಸ್ಥೆಯ ಎರಡನೇ ತರಗತಿಯ ವಿದ್ಯಾರ್ಥಿ ಟಿ.ಆರ್.ಅಭಿನವ ರಾಷ್ಟ್ರಮಟ್ಟದಲ್ಲಿ ಐದನೇ ಸ್ಥಾನವನ್ನು 9ನೇ ತರಗತಿಯ ವಿದ್ಯಾರ್ಥಿನಿ ಎಂ.ಎಸ್.ಲಿಪಿಕಾ ಎಂಟನೇ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ರಾಜ್ಯಮಟ್ಟದಲ್ಲಿ ವಿದ್ಯಾರ್ಥಿಗಳಾದ ಮೂರನೇ ತರಗತಿಯ ವಿದ್ಯಾರ್ಥಿ ಪಿ.ಬಿ.ಅಲೋಕ್ ಎರಡನೇ ಸ್ಥಾನವನ್ನು, 5ನೇ ತರಗತಿ ವಿದ್ಯಾರ್ಥಿನಿ ಕೃತಿಕಾ ನಾಲ್ಕನೇ ಸ್ಥಾನವನ್ನು, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ತಂಗಮ್ಮ ಸಿ.ಎನ್ ಆರನೆಯ ಸ್ಥಾನವನ್ನು, 5ನೇ ತರಗತಿಯ ವಿದ್ಯಾರ್ಥಿನಿ ಸಿ.ಎಸ್.ದ್ವಿತಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜಿಲ್ಲಾ ಮಟ್ಟದಲ್ಲಿ 5ನೇ ತರಗತಿಯ ವಿದ್ಯಾರ್ಥಿನಿ ಪುಣ್ಯ ಕೀರ್ತನ ಹಾಗೂ ಒಂದನೇ ತರಗತಿಯ ವಿದ್ಯಾರ್ಥಿನಿ ಆದ್ಯಚಂದಮ್ಮ ಕ್ರಮವಾಗಿ ಏಳನೇ ಮತ್ತು 8ನೇ ಸ್ಥಾನವನ್ನು ಗಳಿಸಿದ್ದಾರೆ. ಮೂರನೇ ತರಗತಿ ವಿದ್ಯಾರ್ಥಿ…
ಮಡಿಕೇರಿ ಜ.10 NEWS DESK : ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಆರೋಗ್ಯ ಸೇವೆಗಳನ್ನು ಪಡೆಯಲು ಇರುವ ನ್ಯೂನ್ಯತೆ/ ಅಡೆತಡೆಗಳನ್ನು ನಿವಾರಿಸಿ ಹಾಗೂ ಉತ್ತಮ ಸೇವೆಯನ್ನು ದೊರೆಯುವಂತೆ ಮಾಡಲು ಟ್ರೈಬಲ್ ಹೆಲ್ತ್ ನ್ಯಾವಿಗೇಟರ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಸಂಬಂಧ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಂದ ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರು (1 ಹುದ್ದೆ) ಹಾಗೂ ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ(03 ಹುದ್ದೆ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕವು ತಾತ್ಕಾಲಿಕವಾಗಿದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾಸಿಕ ವೇತನ ರೂ.25 ಸಾವಿರ ಮತ್ತು ತಾಲ್ಲೂಕು ಆದಿವಾಸಿ ಆರೋಗ್ಯ ಕಾರ್ಯಕರ್ತೆಯರ ಹುದ್ದೆಗೆ ಮಾಸಿಕ ವೇತನ ರೂ.20 ಸಾವಿರ ಆಗಿರುತ್ತದೆ. ಜಿಲ್ಲಾ ಆದಿವಾಸಿ ಆರೋಗ್ಯ ಸಂಯೋಜಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಆರೋಗ್ಯ/ ಸಮಾಜ ಸೇವೆ ವಿಷಯದಲ್ಲಿ ಪದವಿ ಪಡೆದವರಿಗೆ ಪ್ರಥಮ ಆಧ್ಯತೆ ನೀಡಲಾಗುವುದು. ಆರೋಗ್ಯ ವಿಷಯದಲ್ಲಿ ಯಾವುದೇ ಸಂಘ ಸಂಸ್ಥೆಗಳಲ್ಲಿ ಅಥವಾ ಸರ್ಕಾರದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವವಿದ್ದವರಿಗೆ ಅವಕಾಶ ನೀಡಲಾಗುವುದು. ಆರೋಗ್ಯ…
ನಾಪೋಕ್ಲು ಜ.10 NEWS DESK : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಟಾಧಿಕಾರಿಗಿ ಅಧಿಕಾರ ಸ್ವೀಕರಿಸಿರುವ ಆರ್.ಎನ್.ಬಿಂದುಮಣಿ ಅವರನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟ ಅಭಿನಂದಿಸಿದೆ. ಜಿಲ್ಲಾ ವರಿಷ್ಠಾಧಿಕಾರಿಗಳ ಕಚೇರಿಯಾಗೆ ಭೇಟಿ ನೀಡಿದ ಒಕ್ಕೂಟದ ಪ್ರಮುಖರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ಸಂದರ್ಭ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕೊಡಗಿನ ಮತ್ತು ಸಮುದಾಯದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಪರಿಪಾಲನೆಗೆ ಇಲಾಖೆ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ಕೊಡಗಿನ ಗೌಡ ಸಮುದಾಯದವರು ಸಹಕರಿಸುವುದಾಗಿ ಹೇಳಿದರು. ಇದಕ್ಕೆ ಪ್ರತಿಕ್ರಿಸಿದ ಎಸ್ಪಿ ಬಿಂದುಮಣಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಉತ್ತಮ ಜನಪರ ಕೆಲಸ ಕಾರ್ಯಗಳು ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಹೆಚ್ಚುವರಿ ಎಸ್ಪಿ ಬಾರಿಕೆ ದಿನೇಶ್, ಇಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ, ಖಜಾಂಚಿ ಅಂಬೆಕಲ್ಲು ನವೀನ್, ಕುಶಾಲನಗರ ಯುವಕ ಸಂಘದ ಅಧ್ಯಕ್ಷ ಕೊಡಗನ ಹರ್ಷ, ನಡುವಟ್ಟಿರ ಶಿವ ಪ್ರಕಾಶ್, ಕೊಡಗು ಗೌಡ ಸಮಾಜದ ನಿರ್ದೇಶಕರಾದ ಪೊನ್ನಚ್ಚನ ಮಧು, ಪುದಿಯನೆರವನ ರೇವತಿ,…
ನಾಪೋಕ್ಲು ಜ.10 NEWS DESK : ಹುಣ್ಣಿಮೆ ಅಂಗವಾಗಿ ನಾಪೋಕ್ಲು ಗ್ರಾಮ ಪಂಚಾಯಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಾಗಮಂಡಲ ವತಿಯಿಂದ ಸಮೀಪದ ಕೊಟ್ಟಮುಡಿಯಲ್ಲಿ ಕಾವೇರಿ ನದಿಗೆ 181ನೇ ಮಹಾ ಆರತಿ ನಡೆಯಿತು. ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ನಾಪೋಕು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸುಭಾಷ್ ನಗರದ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ ಪಾಲ್ಗೊಂಡಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಕುಲ್ಲೆಟಿರ ಅರುಣ್ ಬೇಬ, ಬಿ.ಎಮ್ ಪ್ರತಿಪ ಒಕ್ಕೂಟದ ಪ್ರತಿನಿಧಿಗಳು, ನವ ಜೀವನ ಸಮಿತಿ ಸದಸ್ಯರು, ಪಾಲ್ಗೊಂಡಿದ್ದರು. – ವರದಿ : ದುಗ್ಗಳ ಸದಾನಂದ.
ಮಡಿಕೇರಿ ಜ.10 NEWS DESK : ಶಬರಿಮಲೆಯ ಶ್ರೀ ಅಯ್ಯಪ್ಪನ ದರ್ಶನಕ್ಕೆ ತೆರಳುವ ವ್ರತಧಾರಿಗಳಿಗೆ ಕಟ್ಟು ತುಂಬುವ ವಿಶೇಷ ಪೂಜಾ ಕಾರ್ಯಕ್ರಮ ನಗರದ ಓಂಕಾರ ಸದನದಲ್ಲಿ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ಗುರುಸ್ವಾಮಿ ಕಣ್ಣನ್ ಅವರ ನೇತೃತ್ವದಲ್ಲಿ 55 ಮಂದಿ ಶ್ರೀ ಅಯ್ಯಪ್ಪನ ವ್ರತಧಾರಿಗಳಿಗೆ, ಕೊಬ್ಬರಿಗೆ ತುಪ್ಪ ತುಂಬುವ ಮೂಲಕ ಕಟ್ಟು ಕಟ್ಟುವ ಕಾರ್ಯ ನೂರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಶ್ರೀ ಅಯ್ಯಪ್ಪನ ಘೋಷಣೆಗಳೊಂದಿಗೆ ಕಟ್ಟು ಪೂಜೆ ನೆರವೇರಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣಾ ಕಾರ್ಯ ನೆರವೇರಿತು.
ಮಡಿಕೇರಿ NEWS DESK ಜ.9 : ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಭವನದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದಲ್ಲಿ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿ ನಗರದ ಕಾರ್ಪೋರೇಟರ್ ಸುವರ್ಣ ಅವರು ನೀಡಿದ ದೂರನ್ನೆ ಆಧರಿಸಿ, ಬಿಜೆಪಿ ಕಾರ್ಯಕರ್ತೆಯೊಬ್ಬರನ್ನು ಬಂಧಿಸಿ, ವಿವಸ್ತ್ರ ಗೊಳಿಸಿ ಹಲ್ಲೆ ಮಾಡಲಾಗಿದೆ. ಪೊಲೀಸರು ಮಹಿಳೆಯ ಮೇಲೆ ದರ್ಪ ಪ್ರದರ್ಶಿಸಿರುವ ಘಟನೆ ರಾಜ್ಯದಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರೆನ್ನುವುದಕ್ಕೆ ಮತ್ತು ರಾಜ್ಯ ಸರಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಮಹಿಳೆಯ ಮೇಲೆ ದರ್ಪ ತೋರಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಸುಳ್ಯ ತಾಲ್ಲೂಕಿನ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ‘ಶ್ರದ್ಧಾಂಜಲಿ’ ಪೋಸ್ಟ್ ಹಾಕಿರುವವರ…
ಮಡಿಕೇರಿ NEWS DESK ಜ.9 : ಮಡಿಕೇರಿ ತಾಲ್ಲೂಕಿನ ಬಲ್ಲಮಾವಟಿ ಗ್ರಾಮದ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ 13ನೇ ವರ್ಷದ ನಾಲ್ನಾಡ್ ವ್ಯಾಪ್ತಿಯ ಅಂತರ ಗ್ರಾಮ ಹಾಕಿ ಪಂದ್ಯಾವಳಿ ಮತ್ತು ಹಗ್ಗಜಗ್ಗಾಟ ಸ್ಪರ್ಧೆಯನ್ನು ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ಮಾ.29ರಿಂದ 5 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾಕೂಟದ ಸಂಚಾಲಕ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪಂದ್ಯಾವಳಿಯಲ್ಲಿ ನಾಲ್ನಾಡ್ ವ್ಯಾಪ್ತಿಯ ಬಲ್ಲಮಾವಟಿ, ನಾಪೋಕ್ಲು, ಕಕ್ಕಬೆ-ಕುಂಜಿಲ, ಎಮ್ಮೆಮಾಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ 14 ಗ್ರಾಮ ತಂಡಗಳು ಭಾಗವಹಿಸಲಿವೆ. ಪುರುಷರಿಗೆ ಹಾಕಿ ಪಂದ್ಯಾವಳಿ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಹಾಕಿ ಕ್ರೀಡೆಗೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಏ.2ರಿಂದ ಬೇಸಿಗೆ ರಜೆ ಸಂದರ್ಭ ಮಕ್ಕಳಿಗೆ ನುರಿತ ತರಬೇತುದಾರರಿಂದ 20 ದಿನಗಳ ಕಾಲ ಉಚಿತ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಕಳೆದ ಬಾರಿ 70 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ…
ಮಡಿಕೇರಿ NEWS DESK ಜ.9 : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ 150 ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರು ವಿವರಿಸಿದರು. ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಿದ್ದು,…






