ಲೇಖಕ: admin

ಮಡಿಕೇರಿ NEWS DESK  ಜ.9 : ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಹೊಸೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಸಕೋಟೆಯಲ್ಲಿ ನಿವೇಶನ ರಹಿತರಿಗಾಗಿ ಮೀಸಲಿಟ್ಟಿರುವ ಜಾಗದಲ್ಲಿ, ಈಗಾಗಲೇ ಅಲ್ಲಿ ನೆಲೆ ನಿಂತಿರುವ 76 ಕುಟುಂಬಗಳಿಗೆ ಶೀಘ್ರ 50*40 ಅಡಿ ಅಳತೆಯ ನಿವೇಶನ ಮುಂಜೂರು ಮಾಡಬೇಕೆಂದು ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸಿ.ಶೈಲೇಂದ್ರ ಅವರು ನಿವೇಶನಕ್ಕಾಗಿ ಆಗ್ರಹಿಸಿ ಜ.12ರಿಂದ ಅಮ್ಮತ್ತಿ ಹೊಸೂರು ಪಂಚಾಯ್ತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ತಿಳಿಸಿದರು. ಹೊಸೂರು ಪಂಚಾಯ್ತಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡುತ್ತಿರುವ ಲೈನ್ ಮನೆಯ ಬಡ ಕುಟುಂಬಗಳಿಗೆ ನಿವೇಶನ ಮತ್ತು ವಸತಿ ಒದಗಿಸಲು ಹೊಸಕೋಟೆಯಲ್ಲಿ 3.30 ಏಕರೆ ಸರ್ಕಾರಿ ಜಾಗವನ್ನು ಗುರುತಿಸಲಾಗಿತ್ತು. ಅದನ್ನು ಸಮಗ್ರ ಗಿರಿಜನ ಯೋಜನೆ(ಐಟಿಡಿಪಿ) ಇಲಾಖೆಯ ಹೆಸರಿಗೆ ಈಗಾಗಲೇ ವರ್ಗಾಯಿಸಲಾಗಿದೆ. ಸೂಚಿತ ಜಾಗದಲ್ಲಿ ಕನಿಷ್ಟ ಮೂಲ ಸೌಲಭ್ಯಗಳು ಇಲ್ಲದೆ 76 ಕುಟುಂಬಗಳು ಪ್ಲಾಸ್ಟಿಕ್ ಹೊದಿಕೆಯ…

Read More

ಮಡಿಕೇರಿ NEWS DESK ಜ.9 : ಕೂರ್ಗ್ ಟೇಬಲ್ ಟೆನ್ನಿಸ್ ಯೂತ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ “ಕೂರ್ಗ್ ಚಾಂಪಿಯನ್ ಶಿಪ್ ಕಪ್-2026” ಪಂದ್ಯಾವಳಿಯು ಜ.16, 17 ಹಾಗೂ 18 ರಂದು ನಡೆಯಲಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಮಲ್ಲೇಂಗಡ ರಚನ್ ಪೊನ್ನಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಾವಳಿಯನ್ನು ಜ.16 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಖ್ಯಾತಿ ಉದ್ಯಮಿ ಯಶಿಲಾ ಉತ್ತಯ್ಯ ಚಿಯಕ್ ಪೂವಂಡ ಉದ್ಘಾಟಿಸಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಕೊಡಗು ವೈದ್ಯಕೀಯ ಕಾಲೇಜ್ ನ ನಿವೃತ್ತ ಮುಖ್ಯ ಆಡಳಿತಾಧಿಕಾರಿ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಹಾಗೂ ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್ ಪಾಲ್ಗೊಳ್ಳಲಿದ್ದಾರೆ. ಜ.18 ರಂದು ಸಂಜೆ 5 ಗಂಟೆಗೆ ಪಂದ್ಯಾವಳಿಯ ಸಮಾರೋಪ ಹಾಗೂ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು,…

Read More

ಮಡಿಕೇರಿ NEWS DESK  ಜ.9 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.11ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ. ಅಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರು ತಮ್ಮ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಗುರು ಸದನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ…

Read More

ಮಡಿಕೇರಿ NEWS DESK ಜ.9 : ಮೈಸೂರಿನಿಂದ-ಮಂಗಳೂರು ಕಡೆಗೆ ಫ್ಲೈ ವುಡ್ ಶೀಟ್‌ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬೆಂಕಿ ಅವಘಡದಿಂದ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಕೊಲ್ಲಿ ಬಳಿ ನಡೆದಿದೆ. ಫ್ಲೈ ವುಡ್  ತುಂಬಿದ್ದ ಲಾರಿ ಮೈಸೂರಿನಿಂದ ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಬಳಿ ಬೆಳಗಿನ ಜಾವ ಆಗಮಿಸಿದೆ. ಈ ವೇಳೆ ಇಂಜಿನ್ ಭಾಗದಿಂದ ಹೊಗೆ ಕಂಡು ಬಂದಿದ್ದು, ಚಾಲಕ ಕೆಳಕ್ಕಿಳಿದು ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಲಾರಿಯನ್ನು ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಪ್ರಯತ್ನ ಮಾಡಿದರು. ಬೆಂಕಿ ವ್ಯಾಪಿಸಿದ್ದ ಹಿನ್ನೆಲೆ ಜೆಸಿಬಿ ಯಂತ್ರ ಬಳಸಿ ಲಾರಿಯಿಂದ ಫ್ಲೈ ವುಡ್ ಹೊರ ತೆಗೆದು ಬೆಂಕಿ ನಂದಿಸಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಡಿಕೇರಿ NEWS DESK ಜ.9 : ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಮತ್ತು ಸಿಬ್ಬಂದಿಗಳು ಸೌಜನ್ಯ ತೋರುತ್ತಿಲ್ಲ ಎನ್ನುವ ಗಂಭೀರ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಶಾಸಕರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಂತರ ರೋಗಿಗಳೊಂದಿಗೆ ಸಮಾಲೋಚನೆ ನಡೆಸಿ ಸೌಲಭ್ಯಗಳ ಕುರಿತು ಚರ್ಚಿಸಿದರು. ಆಸ್ಪತ್ರೆಯ ಲೋಪದೋಷಗಳನ್ನು ತಕ್ಷಣ ಸರಿಪಡಿಸಿ ಉತ್ತಮ ರೀತಿಯ ಜನಸ್ನೇಹಿ ವಾತಾವರಣವನ್ನು ಸೃಷ್ಟಿಸುವಂತೆ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

Read More

ಮಡಿಕೇರಿ NEWS DESK ಜ.9 : ಕೊಡಗು ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಲ್ಪಸಂಖ್ಯಾತರಿಗೆ ವಿಧಾನ ಪರಿಷತ್ ಸ್ಥಾನ ಮತ್ತು ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮನವಿ ಸಲ್ಲಿಸಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಅಲ್ಪಸಂಖ್ಯಾತ ಮುಖಂಡರು ಕೊಡಗು ಜಿಲ್ಲೆಯ ಶೇ.99 ರಷ್ಟು ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿದ್ದಾರೆ ಎಂದು ಗಮನ ಸೆಳೆದರು. ಯಾವುದೇ ಚುನಾವಣೆ ಬಂದರೂ ತಮ್ಮ ರಾಜಕೀಯ ನಿಲುವನ್ನು ಬದಲಾಯಿಸದ ಅಲ್ಪಸಂಖ್ಯಾತರು ಇತರ ಪಕ್ಷಗಳನ್ನು ಬೆಂಬಲಿಸದೆ ನಿರಂತರವಾಗಿ ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸುತ್ತಲೇ ಬಂದಿದ್ದಾರೆ. ಇದೀಗ ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರೇ ಇದ್ದಾರೆ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ. ಆದರೆ ಕೊಡಗಿನ ಅಲ್ಪಸಂಖ್ಯಾತರಿಗೆ ಅಧಿಕಾರ ಸ್ಥಾನದಲ್ಲಿ ಯಾವುದೇ ಸ್ಥಾನಮಾನ ದೊರೆಯದೆ ಇರುವುದು ಬೇಸರ ಮೂಡಿಸಿದೆ. ಆದ್ದರಿಂದ ವಿಧಾನ ಪರಿಷತ್ ಸ್ಥಾನ ಮತ್ತು…

Read More

ಸೋಮವಾರಪೇಟೆ ಜ.8 NEWS DESK : ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಪಿಗೆಕೊಲ್ಲಿ ಗ್ರಾಮದ ಕಾಫಿ ಬೆಳೆಗಾರರಾದ ಡಿ.ಎಸ್. ಪೊನ್ನಪ್ಪ(82) ಹೃದಯಾಘಾತದಿಂದ ನಿಧನರಾದರು. ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ, ಐಗೂರು ಗ್ರಾಮ ಪಂಚಾಯಿತಿ, ಆರ್‍ಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವ ಗ್ರಾಮದಲ್ಲಿ ನಡೆಯಿತು.

Read More

ಮಡಿಕೇರಿ ಜ.8 NEWS DESK : ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿನ ಪ್ರಾಯೋಜಕತ್ವ, ವಿಶೇಷ ಪಾಲನೆ, ಉಪಕಾರ್ ಹಾಗೂ ಮುಖ್ಯಮಂತ್ರಿ ಅವರ ಬಾಲಸೇವಾ ಯೋಜನೆಯನ್ನು ಅರ್ಹರಿಗೆ ತಲುಪಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವ್ಯಾಪ್ತಿಯ ಪ್ರಾಯೋಜಕತ್ವ ಹಾಗೂ ಪೋಷಕತ್ವ ಅನುಮೋದನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಿಷನ್ ವಾತ್ಸಲ್ಯ ಮಾರ್ಗಸೂಚಿಯಂತೆ ಪ್ರಾಯೋಜಕತ್ವ ಯೋಜನೆ ಜಾರಿಗೊಳಿಸಿದ್ದು, 18 ವರ್ಷದೊಳಗಿನ ಮಕ್ಕಳ ರಕ್ಷಣೆ, ಪಾಲನೆ ಮತ್ತಿತರ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಎಸ್.ಹೊನ್ನೇಗೌಡ ಅವರು ಪ್ರಾಯೋಜಕತ್ವ ಯೋಜನೆಯಡಿ 4 ಸಾವಿರ ರೂ. ನೀಡಲಾಗುತ್ತಿದ್ದು, 2025-26 ನೇ ಸಾಲಿನ ಮೂರನೇ ತ್ರೈಮಾಸಿಕಕ್ಕೆ 102 ಅರ್ಜಿಗಳು ಸ್ವೀಕೃತವಾಗಿದ್ದು, ಈ ಅರ್ಜಿಗಳಲ್ಲಿ 92 ಅರ್ಜಿಗಳು ಜಿಲ್ಲಾ ಪ್ರಾಯೋಜಕತ್ವ ಮತ್ತು ಪೋಷಕತ್ವ ಅನುಮೋದನಾ ಸಮಿತಿಗೆ ಮಂಡಿಸಲಾಗಿದೆ ಎಂದರು. ವಿಶೇಷ ಪಾಲನಾ…

Read More

ಸುಂಟಿಕೊಪ್ಪ ಜ.8 NEWS DESK : ಗರಗಂದೂರು ರಾಯಲ್ ಪಾರ್ಮೆರ್ಸ್ ಕ್ಲಬ್ ವತಿಯಿಂದ ಹರದೂರು ಗ್ರಾಮ ಪಂಚಾಯಿತಿ ಕಚೇರಿಗೆ ಗಡಿಯಾರವನ್ನು ಕೊಡುಗೆಯಾಗಿ ನೀಡಿದ್ದಾರೆ.  ರಾಯಲ್ ಪಾರ್ಮೆರ್ಸ್ ಕ್ಲಬ್ ಉದ್ಘಾಟನೆಯ ಅಂಗವಾಗಿ ಸಂಘದ ಅಧ್ಯಕ್ಷ ವಿ.ಸಂತೋಷ್ ಹಾಗೂ ಪದಾಧಿಕಾರಿಗಳು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಗೋಡೆ ಗಡಿಯಾರವನ್ನು ಅಧ್ಯಕ್ಷೆ ಭೋಜಮ್ಮ, ಪಂಚಾಯಿತಿ ಅಧಿಕಾರಿ ಪೂರ್ಣಿಮಾ ಅವರಿಗೆ ಕೊಡುಗೆಯಾಗಿ ನೀಡಿದರು. ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷ ಮುಸ್ತಾಫ, ಸದಸ್ಯರುಗಳು ರಾಯಲ್ ಪಾರ್ಮೆರ್ಸ್ ಕ್ಲಬ್‍ನ ಉಪಾಧ್ಯಕ್ಷ ಸುಧಾಕರ್, ಕಾರ್ಯದರ್ಶಿ ವಿ.ಎ.ಸಂತೋಷ್ ಹಾಗೂ ಪದಾಧಿಕಾರಿಗಳು ಇದ್ದರು.

Read More

ಮಡಿಕೇರಿ ಜ.8 NEWS DESK : ಮಾನವಕುಲ ಭೂಮಂಡಲದಲ್ಲಿ ಸೃಷ್ಟಿಯಾದ ಗಳಿಗೆಯಿಂದಲೂ ಆದಿಮಸಂಜಾತ ಏಕ ಬುಡಕಟ್ಟು ಜನಾಂಗದ ಕೊಡವರು ಆರ್ವಿಭವಿಸಿ ಕೊಡವಲ್ಯಾಂಡ್ ನಲ್ಲಿ ಅರಳಿ ವಿಕಾಸವಾಗಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೊಡವರ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಪ್ರಯತ್ನದಲ್ಲಿ ತೊಡಗಿದ್ದು, ಇವರುಗಳ ವಿರುದ್ಧ ಕೊಡವರು ಜಾಗೃತರಾಗಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕರೆ ನೀಡಿದ್ದಾರೆ. ಸಿಎನ್‍ಸಿ ವತಿಯಿಂದ ಭಾಗಮಂಡಲದಲ್ಲಿ ನಡೆದ 23ನೇ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಳೆದ 40 ವರ್ಷಗಳಿಂದ ಕೊಡವರ ನೈಜ ಚರಿತ್ರೆಯನ್ನು ಬುಡಮೇಲು ಮಾಡುವ ಪ್ರಯತ್ನಗಳು ವಿಶ್ವ ವಿದ್ಯಾನಿಲಯವೊಂದರ ವ್ಯಕ್ತಿಗಳಿಂದ ನಡೆಯುತ್ತಿದೆ. ಕೊಡಗು ಹಾಗೂ ಈ ದೇಶಕ್ಕೆ ಕೊಡವರ ಕಾಣಿಕೆ ಏನೇನೂ ಇಲ್ಲ ಎಂದು ಪ್ರತಿಬಿಂಬಿಸುವ ಮೂಲಕ ಕೊಡವರನ್ನು ಖಳನಾಯಕರಂತೆ ತೋರಿಸುವ ಕ್ರೂರ ಹುನ್ನಾರ ಮುಂದುವರೆದಿದೆ. ದುರುಳ ಚರಿತ್ರೆಯನ್ನೇ ಕೊಡವರ ಕುರಿತಾದ ಅಧಿಕೃತ ಚರಿತ್ರೆ ಎಂದು ಬಿಂಬಿಸಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ,…

Read More