ಲೇಖಕ: admin

ಮಡಿಕೇರಿ NEWS DESK ಆ.22 : ಉಮ್ಮತ್ ಒನ್ ಕೊಡಗು ಸಂಘಟನೆಯ ವತಿಯಿಂದ ಪ್ರವಾದಿ ಮೊಹಮ್ಮದ್ ಪೈಗಂಬರ್‌ರವರ 1501ನೇ ಜನ್ಮದಿನಾಚರಣೆಯ ಪ್ರಯುಕ್ತ ಕೊಡಗು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಸಿ.ಎಂ.ಹಮೀದ್ ಮೌಲವಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರವಾದಿ ಪೈಗಂಬರವರು ಮನುಕುಲಕ್ಕೆ ನೀಡಿದ ಕೊಡುಗೆಗಳೇನು ಎಂಬ ವಿಷಯವನ್ನ ಮುಂದಿಟ್ಟುಕೊ0ಡು ಸ್ಪರ್ಧಿಗಳು ಕನ್ನಡದಲ್ಲಿ ಪ್ರಬಂಧವನ್ನು ಬರೆದು ಸೆ.5ರ ಒಳಗಾಗಿ ಉಮ್ಮತ್ ಒನ್ ಕೊಡಗು ಸಂಘಟನೆಯ ಮಡಿಕೇರಿ ಕಚೇರಿಗೆ ತಲುಪಿಸಬೇಕೆಂದು ಕೋರಿದರು. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವವರಿಗೆ 15 ಸಾವಿರ ರೂ., ದ್ವಿತೀಯ 10 ಸಾವಿರ, ತೃತೀಯ 5 ಸಾವಿರ ರೂ. ಬಹುಮಾನವನ್ನು ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳನ್ನು ಸಂಘಟನೆಯ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಲಾಗುತ್ತದೆ. ಪ್ರಬಂಧ ಸ್ಪರ್ಧೆಯ ಪ್ರಮುಖ ಉದ್ದೇಶ ಪ್ರವಾಸಿ ಮೊಹಮ್ಮದ್ ಪೈಗಂಬರ್ ಅವರು ಜಗತ್ತಿಗೆ ಸಾರಿದ ಮಾನವೀಯ ಮೌಲ್ಯಗಳು, ಸಾಮಾಜಿಕ ನ್ಯಾಯದ ಪರಿಕಲ್ಪನೆ, ಧಾರ್ಮಿಕ ಸ್ವಾತಂತ್ರ್ಯ ಮಹಿಳೆಯರ ಹಕ್ಕುಗಳು ಸೇರಿದಂತೆ ಅವರ ಸಂದೇಶಗಳನ್ನು…

Read More

ಮಡಿಕೇರಿ NEWS DESK ಆ.22 : ನೇಪಾಳದ ಕಠ್ಮಂಡುವಿನಲ್ಲಿ ನಡೆದ 3ನೇ ವಿಶ್ವ ಮಿಕ್ಸಡ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೋಮವಾರಪೇಟೆಯ ಪಿಎಂ ಶ್ರೀ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ ಭರ್ಜರಿ ಸಾಧನೆ ಮಾಡಿ ಚಿನ್ನದ ಪದಕ ಗೆದ್ದಿದ್ದಾನೆ. ಬಜೆಗುಂಡಿಯ ಅಬ್ದುಲ್ ಖಾದರ್ ಹಾಗೂ ರೈಯಾನ ದಂಪತಿಯ ಪುತ್ರ ಮೊಹಮ್ಮದ್ ಹಫೀಸ್, ಅತಿ ಚಿಕ್ಕ ವಯಸ್ಸಿನಲ್ಲೇ ಅಂತರರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದೇಶ, ರಾಜ್ಯ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತಂದಿದ್ದಾನೆ. ಮೊಹಮ್ಮದ್ ಹಫೀಸ್ ಸಾಧನೆಗೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸ್ಥಳೀಯರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರದ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಈತ ಬಾಕ್ಸಿಂಗ್ ನಲ್ಲಿ 2025 ರಲ್ಲಿ ಮಹಾರಾಷ್ಟ್ರದಲ್ಲಿ ಚಿನ್ನದ ಪದಕ ಹಾಗೂ ಕೊಯಮತ್ತೂರಿನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾನೆ.

Read More

ಮಡಿಕೇರಿ NEWS DESK ಆ.22 : ಪ್ರತೀಶ್ ಪೂವಯ್ಯ ಕಾಸ್ಟಿಂಗ್ ಏಜೆನ್ಸಿ ಮತ್ತು ಪತ್ತಕ್ ಪ್ರೊಡಕ್ಷನ್ಸ್ ಸಹಯೋಗದಲ್ಲಿ ಅದ್ದೂರಿ ಫ್ಯಾಷನ್ ಸಂಭ್ರಮ ‘ಕೂರ್ಗ್ ಫ್ಯಾಷನ್ ರನ್ ವೇ 2026’ ಆ.30ರಂದು ಕುಶಾಲನಗರದ ಆರ್ ಕ್ಯೂಬ್ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾರ್ಯಕ್ರಮದ ನಿರೂಪಕರಾದ ಮುಂಡಚಾಡಿರ ರಿನಿ ಭರತ್ ಅವರು ಕೊಡಗಿನಲ್ಲಿ ಇದೇ ಮೊದಲ ಬಾರಿಗೆ ವೃತ್ತಿಪರ ಮಟ್ಟದ ಫ್ಯಾಷನ್ ರನ್ ವೇ ಅನುಭವವನ್ನು ಸ್ಥಳೀಯ ಪ್ರತಿಭೆಗಳಿಗೆ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮಾನ್ಯವಾಗಿ ಇಂತಹ ಅವಕಾಶಗಳು ಪ್ರಮುಖ ನಗರಗಳಲ್ಲಿ ವೃತ್ತಿಪರ ಮಾಡೆಲ್ ಗಳಿಗೆ ಮಾತ್ರ ಹೆಚ್ಚು ಲಭ್ಯವಾಗುತ್ತದೆ. ಇದೀಗ ಆ ಅನುಭವವನ್ನು ಕೊಡಗಿನ ಪ್ರತಿಭೆಗಳಿಗೂ ಪರಿಚಯಿಸಲಾಗುತ್ತಿದೆ ಎಂದರು. 16 ರಿ0ದ 50 ವರ್ಷದೊಳಗಿನ ಆಸಕ್ತರು ಮಿಸೆಸ್, ಮಿಸ್, ಮಿಸ್ಟರ್, ಟೀನ್ ಗರ್ಲ್, ಟೀನ್ ಬಾಯ್, ಪ್ರಿನ್ಸ್ ಮತ್ತು ಪ್ರಿನ್ಸೆಸ್ ವಿಭಾಗಗಳಲ್ಲಿ ಭಾಗವಹಿಸಬಹುದು. ಭಾಗವಹಿಸುವವರಿಗೆ ವೃತ್ತಿಪರ ಫೋಟೋಶೂಟ್, ಪ್ರೀಮಿಯಂ ಕಾಸ್ಟ್ಯೂಮ್‌ಗಳು, ವೃತ್ತಿಪರ ಮೇಕಪ್…

Read More

ಮಹಾರಾಷ್ಟ್ರದ ಕಠಿಣ ಹಾಗೂ ನಿಯಮಾಧಾರಿತ ಆಡಳಿತದ ಮುಖವಾಗಿ ಗುರುತಿಸಿಕೊಂಡಿರುವ ಐಎಎಸ್ ಅಧಿಕಾರಿ ತುಕಾರಾಮ್ ಮುಂಢೆ ಅವರ ಜೀವನಯಾನವೇ ಒಂದು ಸುದೀರ್ಘ ಹೋರಾಟದ ಕಥೆ. ಬೀಡ್ ಜಿಲ್ಲೆಯ ಸಣ್ಣ ಹಳ್ಳಿಯ ರೈತ ಕುಟುಂಬದಲ್ಲಿ ಬೆಳೆದು, ಬಾಲ್ಯದಲ್ಲೇ ಹೊಲದಲ್ಲಿ ದುಡಿದು, ತರಕಾರಿ ಮಾರಿ, ವಿದ್ಯಾಭ್ಯಾಸದ ಜೊತೆಗೆ ಕುಟುಂಬದ ಜವಾಬ್ದಾರಿ ಹೊತ್ತ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ 20ನೇ ರ‍್ಯಾಂಕ್ ಪಡೆದು 2005ರ ಮಹಾರಾಷ್ಟ್ರ ಕೇಡರ್‌ನ ಐಎಎಸ್ ಅಧಿಕಾರಿಯಾಗಿ ಹೊರಹೊಮ್ಮಿದರು. ಎರಡು ದಶಕಗಳಿಗೂ ಹೆಚ್ಚು ಕಾಲದ ಸೇವೆಯಲ್ಲಿ ಅನೇಕ ಜಿಲ್ಲೆಗಳು, ಮಹಾನಗರ ಪಾಲಿಕೆಗಳು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿದ ಅವರು ತಮ್ಮ ನೇರ, ನಿಯಮಬದ್ಧ ಮತ್ತು ಕಠಿಣ ಆಡಳಿತಶೈಲಿಯಿಂದ ಜನರ ಗಮನ ಸೆಳೆದಿದ್ದಾರೆ. 2026ರ ಮೇನಲ್ಲಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ನಂತರ ಆಹಾರ ಕಲಬೆರಕೆ, ಅಸ್ವಚ್ಛತೆ ಮತ್ತು ನಿಯಮ ಉಲ್ಲಂಘನೆಗಳ ವಿರುದ್ಧ ಮತ್ತೊಮ್ಮೆ ದೊಡ್ಡ ಮಟ್ಟದ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ತುಕಾರಾಮ್ ಮುಂಢೆ ಯಾರು? ಪೂರ್ಣ…

Read More

ಮಡಿಕೇರಿ ಆ..21 – ಕಡಗದಾಳು ಸಕಾ೯ರಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಹಿರಿಯ ನಾಗರಿಕರ ದಿನಾಚರಣೆ ಆಯೋಜಿತವಾಗಿತ್ತು. ಗ್ರಾಮದ ಹಿರಿಯರಾದ, ಶಾಲೆಯ  ಹಳೇ ವಿದ್ಯಾಥಿ೯ಗಳೂ ಆಗಿದ್ದ ಸುಮಿತ್ರಾ ಮತ್ತು ತಂಗಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾಯ೯ಕ್ರಮದಲ್ಲಿ ಮಾತನಾಡಿದ ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ ಪ್ರಸಾದ್ ಗೌಡ, ಮಕ್ಕಳು ಹಿರಿಯರನ್ನು ಮನೆಯಲ್ಲಿ ಮತ್ತು ಸಮಾಜದಲ್ಲಿ ಗೌರವ ಭಾವನೆಯಿಂದ ಕಾಣಬೇಕು. ಹಿರಿಯರಿಗೆ ಗೌರವ  ನೀಡುವ ಮೂಲಕ ಶ್ರೇಷ್ಟವಾದ ಮೌಲ್ಯವನ್ನು ಜೀವನದಲ್ಲಿ ವಿದ್ಯಾಥಿ೯ಗಳು ಅಳವಡಿಸಿಕೊಂಡಂತಾಗುತ್ತದೆ ಎಂದರು. ರೋಟರಿ ಮಿಸ್ಟಿ ಹಿಲ್ಸ್ ಜಿಲ್ಲೆಯಾದ್ಯಂತಲಿನ 26 ಶಾಲೆಗಳಲ್ಲಿ ವಿಶ್ವಹಿರಿಯ ನಾಗರಿಕರ ದಿನದ ಪ್ರಯುಕ್ತ 85 ಹಿರಿಯಜೀವಿಗಳನ್ನು ಗೌರವಿಸುವ ಕಾಯ೯ಕ್ಕೆ ಮುಂದಾಗಿದೆ ಎಂದೂ ಪ್ರಸಾದ್ ಗೌಡ ಮಾಹಿತಿ ನೀಡಿದರು. ಶಾಲಾ ಮುಖ್ಯಶಿಕ್ಷಕಿ ಡೈಸಿ ಮಾತನಾಡಿ, ಹಿರಿಯರನ್ನು ಗೌರವಿಸುವುದು ವಿದ್ಯಾಥಿ೯ಗಳ ಜೀವನದಲ್ಲಿ ಆದ್ಯತೆಯಾಗಬೇಕೆಂದು ಕರೆ ನೀಡಿದರು. ಶಾಲಾ ಶಿಕ್ಷಕಿ ಪಿ.ಕೆ. ಪವಿತ್ರ ವಂದಿಸಿದ ಕಾಯ೯ಕ್ರಮವನ್ನು ಮಿಸ್ಟಿ ಹಿಲ್ಸ್ ನಿದೇ೯ಶಕ ಮೋಹನ್ ಪ್ರಭು ನಿವ೯ಹಿಸಿದರು. ಶಿಕ್ಷಕಿಯರಾದ  ನಮಿತಾ ಮತ್ತು ಪವಿತ್ರ ಸನ್ಮಾನಿತ…

Read More

  ಮಡಿಕೇರಿ, NEWS DESK ಆ.21-ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬದಲಿಗೆ ನೂತನವಾಗಿ ಜಾರಿಗೆ ಬಂದಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‍ಗಾರ್ ಮತ್ತು ಅಜೀವಿಕ್ ಮಿಷನ್ ಗ್ರಾಮೀಣ-2026 ಯೋಜನೆಯಡಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 15 ರ ವರೆಗೆ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ ಎಂದು ಕೊಡಗು ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ. ಜಿಲ್ಲೆಯ 102 ಗ್ರಾಮ ಪಂಚಾಯತ್ ಗಳಲ್ಲಿ ಒಂದು ತಿಂಗಳ ಕಾಲ ಜಾಬ್ ಕಾರ್ಡ್ ಮೇಳ ನಡೆಯಲಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು. ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಸಮುದಾಯ ಆಧಾರಿತ ಮತ್ತು ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ವೈಯಕ್ತಿಕ ಬಾವಿ, ದನದ ಕೊಟ್ಟಿಗೆ, ಕೋಳಿ ಶೆಡ್ ಸೇರಿದಂತೆ ಒಟ್ಟಾರೆ 318 ಕಾಮಗಾರಿಗಳಿಗೆ ಅವಕಾಶವಿದೆ ಎಂದು ತಿಳಿಸಿದರು. ಹಿಂದಿನ ನರೇಗಾ ಯೋಜನೆಯಡಿಯಲ್ಲಿ ಗ್ರಾಮೀಣ ಭಾಗದ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 100…

Read More

ಮಡಿಕೇರಿ, NEWS DESK ಆ.21-ವಿಶೇಷ ಚೇತನರ ಕುಂದುಕೊರತೆ ಅಹವಾಲು ಆಲಿಸುವ ಸಭೆಯು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಎರಡು ಗಂಟೆಗೂ ಹೆಚ್ಚು ಕಾಲ ವಿಶೇಷಚೇತನರ ಅಹವಾಲನ್ನು ಆಲಿಸಿ, ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು. ವಿಶೇಷಚೇತನರ ಕುಂದುಕೊರತೆ ಆಲಿಸುವ ಸಭೆಯನ್ನು ಪ್ರತೀ ಮೂರು ತಿಂಗಳಿಗೊಮ್ಮೆ ನಡೆಸಬೇಕು. ತಮ್ಮ ಹಂತದಲ್ಲಿ ಪರಿಹಾರ ಆಗದಿರುವ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ತಾಲ್ಲೂಕು ಮಟ್ಟದಲ್ಲಿಯೂ ಸಹ ವಿಶೇಷಚೇತನರ ಕುಂದುಕೊರತೆ ಆಲಿಸುವ ಸಭೆ ಏರ್ಪಡಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಜೊತೆಗೆ ಸೌಲಭ್ಯಗಳ ಬಗ್ಗೆಯೂ ಸಹ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.  ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ವಿಶೇಷಚೇತನರಿಗಾಗಿ ನಿಗಧಿ ಮಾಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಆಗಬೇಕಿರುವ ಕೆಲಸವನ್ನು ಆದ್ಯತೆ ಮೇಲೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಾಕೀತು ಮಾಡಿದರು.  ವಿಶೇಷಚೇತನರನ್ನು ಕಚೇರಿಗಳಲ್ಲಿ ಗೌರವಯುತವಾಗಿ ನಡೆಸಿಕೊಳ್ಳಬೇಕು.…

Read More

ಮಡಿಕೇರಿ ಆ.21 : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಉತ್ಸವ ಆಚರಣೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 2 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ನಗರ ದಸರಾ ಸಮಿತಿಯ ನಿಯೋಗ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಡಿಕೇರಿ ದಸರಾ ಉತ್ಸವಕ್ಕೆ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಿತು. ಇದಕ್ಕೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿಗಳು 2 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ, ಮಡಿಕೇರಿ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬೀತ, ಕಾರ್ಯದರ್ಶಿ ಮುದ್ದುರಾಜ್, ದಸರಾ ವೇದಿಕೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಆರ್.ಪಿ., ಅಲಂಕಾರ ಸಮಿತಿ ಅಧ್ಯಕ್ಷ ಮುನೀರ್ ಮಾಚಾರ್, ಯುವ ದಸರಾ ಅಧ್ಯಕ್ಷ ಕವನ್ ಕೊತ್ತೋಳಿ, ದಶ ಮಂಟಪ ಸಮಿತಿ ಅಧ್ಯಕ್ಷ ಸಜನ್ ಪೂಣಚ್ಚ, ಪ್ರಧಾನ ಕಾರ್ಯದರ್ಶಿ ವಿನೋದ್, ಪ್ರಕಾಶ್…

Read More

ಮಡಿಕೇರಿ, NEWS DESK ಆ.21  : ಕಣ್ಣಂಗಾಲ ಗ್ರಾಮ ಪಂಚಾಯತಿಗೆ ಒಳಪಡುವ ಯಡೂರು ವ್ಯಾಪ್ತಿಯಲ್ಲಿ ಕೃಷಿ ಫಸಲು ನಾಶ, ಸಾರ್ವಜನಿಕರ ಮೇಲೆ ದಾಳಿಗೆ ಮುಂದಾಗುತ್ತಿದ್ದ ಸುಮಾರು 38 ವರ್ಷದ ಗಂಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಬುಧವಾರ ಕಾಡಾನೆಯೊಂದನ್ನು ಸೆರೆ ಹಿಡಿದು ಗುರುವಾರ ತಾತ್ಕಾಲಿಕ ಬಿಡುವು ನೀಡಿ ಶುಕ್ರವಾರ ಮತ್ತೆ ಕಾರ್ಯಾಚರಣೆ ಆರಂಭಿಸಿದ ಅರಣ್ಯ ಇಲಾಖೆ ತಂಡ ಯಡೂರು ವ್ಯಾಪ್ತಿಯಲ್ಲಿ ಬೀಡುಬಿಟ್ಟಿದ್ದ ಮತ್ತೊಂದು ಕಾಡಾನೆಯನ್ನು ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಕಾರದಿಂದ 3 ಆನೆಗಳನ್ನು ಹಿಡಿಯಲು ಆದೇಶ ನೀಡಲಾಗಿತ್ತು. ಇದೀಗ ಎರಡು ಆನೆಗಳನ್ನು ಪತ್ತೆ ಹಚ್ಚಿ ಸೆರೆ ಹಿಡಿದು ದುಬಾರೆ ಶಿಬಿರಕ್ಕೆ ಸ್ಥಳಾಂತರ ಮಾಡಿರುವ ಅರಣ್ಯ ಇಲಾಖೆ ಶನಿವಾರ, ಭಾನುವಾರ ಮತ್ತೆ ಬಿಡುವು ನೀಡಿದ್ದು, ಉಪಟಳ ನೀಡುತ್ತಿರುವ ಮತ್ತೊಂದು ಆನೆಯನ್ನು ಪತ್ತೆ ಹಚ್ಚಿ ಸೋಮವಾರ ಮತ್ತೆ ಕಾರ್ಯಾಚರಣೆ ಮುಂದುವರೆಸಲಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ದುಬಾರೆ ಶಿಬಿರದ ಕ್ಯಾಪ್ಟನ್ ಸುಗ್ರೀವ ಒಳಗೊಂಡಂತೆ ಐದು ಸಾಕಣೆಗಳು ಭಾಗಿಯಾಗಿದ್ದವು. ಮುಖ್ಯ ಅರಣ್ಯ…

Read More

ಮಡಿಕೇರಿ ಆ.21 – ಸಿರಿವಂತನಾಗಬೇಕೆಂಬ    ಆತುರದಿಂದ    ಅಡ್ಡದಾರಿಯಲ್ಲಿ ತಪ್ಪು ಯೋಚನೆಗಳನ್ನು  ಎಂದಿಗೂ ಮಾಡಬೇಡಿ. ಶ್ರಮವಹಿಸಿ  ದುಡಿದರಷ್ಟೇ ಜೀವನದಲ್ಲಿ ಸೂಕ್ತ ಪ್ರತಿಫಲ ಖಂಡಿತಾ ದೊರಕುತ್ತದೆ ಎಂದು  ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ವಿದ್ಯಾಥಿ೯ಗಳಿಗೆ ಕಿವಿಮಾತು ಹೇಳಿದರು. ನಗರದ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಬ್ಲಾಸಂ ಶಾಲೆಯಲ್ಲಿ ಆಯೋಜಿಸಲ್ಪಟ್ಟಿದ್ದ ಹಿರಿಯ ಜೀವಿಗಳಿಗೆ ನಮನ ಕಾಯ೯ಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ರಮೇಶ್ ಮಾತನಾಡಿದರು. ವಿದ್ಯಾಥಿ೯ಗಳು ಶಿಕ್ಷಣ ಪಡೆಯುವ ಹಂತದಲ್ಲಿಯೇ ಮಾತನಾಡುವ ಕಲೆಯನ್ನು ಸಿದ್ದಿಸಿಕೊಂಡರೆ ಸಮಾಜದಲ್ಲಿ ಮುಂದೆ ಇದರಿಂದ ಸಾಕಷ್ಟು ಅನುಕೂಲವಾಗುತ್ತದೆ ಎಂದು  ಹೇಳಿದ ಟಿ.ಪಿ. ರಮೇಶ್,  ಜೀವನ ಎಂಬುದು ಸದಾ ಸುಖದಿಂದ ಕೂಡಿರುವುದಿಲ್ಲ. ಹೀಗಾಗಿ ಮಕ್ಕಳು ಸಾಕಷ್ಟು ಕಷ್ಟ, ಸೋಲುಗಳ ಸವಾಲನ್ನೂ ಎದುರಿಸಲು ಮಾನಸಿಕವಾಗಿ ಸಿದ್ದರಾಗಿರಬೇಕು. ಶ್ರೀಮಂತಿಕೆ ಪಡೆಯಲು ಯಾವುದೇ ಕಾರಣಕ್ಕಾ ತಪ್ಪು ಹಾದಿಯಲ್ಲಿ ಸಾಗಬಾರದು ಎಂದೂ ಕಿವಿಮಾತು ಹೇಳಿದರು. ಸನ್ಮಾನಿತರಾದ ತಳೂರು ಆನಂದ್ ಮಾತನಾಡಿ, ದುಡ್ಡಿಲ್ಲದ ಕಾಲಘಟ್ಟದಲ್ಲಿ ಬೆಳೆದ ತಮ್ಮಂಥ ಹಿರಿಯರು ಜೀವನದಲ್ಲಿ ಸಾಕಷ್ಟು ಶ್ರಮ ಪಟ್ಟಿದ್ದೇವೆ. ಇಂದಿನ…

Read More