ವಿರಾಜಪೇಟೆ ನ.20 NEWS DESK : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ)ಯ ಅಧಿಕೃತ ಲಾಂಛನವನ್ನು ಅನಾವರಣಗೊಳಿಸಲಾಯಿತು. ಸಂಸ್ಥೆಗಾಗಿ ವಿನ್ಯಾಸಗೊಳಿಸಲಾಗಿದ್ದ ನೂತನ ಲಾಂಛನವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಆಗಿರುವ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬೆಂಗಳೂರಿನ ವಿಧಾನಸೌಧದ 2ನೇ ಮಹಡಿಯಲ್ಲಿರುವ ತಮ್ಮ ಕಚೇರಿಯಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಪೊನ್ನಣ್ಣ ಅವರು, ಕ್ರೀಡೆಗಳು ಜನರ ನಡುವೆ ಸೌಹಾರ್ದ ಬೆಳೆಸುತ್ತವೆ. ವಿವಿಧ ಹಿನ್ನೆಲೆಯ ಜನರು ಒಟ್ಟಾಗಿ ಆಡಲು ಮತ್ತು ಒಟ್ಟಿಗೆ ಕೆಲಸ ಮಾಡಲು ಅವಕಾಶ ನೀಡುತ್ತವೆ. ಮುಖ್ಯವಾಗಿ ಕ್ರೀಡಾಕೂಟಗಳು ಸಮುದಾಯಗಳನ್ನು ಒಟ್ಟುಗೂಡಿಸುತ್ತವೆ. ಕ್ರೀಡೆಗಳು ಮನಸ್ಸಿನ ಉಲ್ಲಾಸವನ್ನು ನೀಡುವುದರ ಜೊತೆಗೆ, ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗಿವೆ. ಇದು ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಅವಕಾಶ ಕಲ್ಪಿಸುತ್ತದೆ. ಈ ಕಾರಣಕ್ಕಾಗಿ ಕ್ರೀಡಾ ಸಂಸ್ಥೆಗಳು ಹೆಚ್ಚು ಮೂಡಿ ಬರಬೇಕಾಗಿದೆ ಎಂದು ಹೇಳಿದರು. ಕ್ರೀಡೆಗಳು ಶಿಸ್ತು ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಕಲಿಸುತ್ತವೆ, ಇದು ಸಮಾಜದಲ್ಲಿ ಉತ್ತಮ ಸಂಬಂಧಗಳನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಗಳಿಂದ ಕ್ರೀಡಾಪಟುಗಳು…
ಲೇಖಕ: admin
ಪುತ್ತೂರು ನ.20 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025 ಮತ್ತು ಕಾಲೇಜು ಆವರಣದಲ್ಲಿ ಪ್ರಾರಂಭಗೊಳ್ಳಲಿರುವ ಸ್ಟಾರ್ಟ್-ಅಪ್ ಗಳ ಉದ್ಘಾಟನೆ ನ.21 ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಕಾಲೇಜಿನ ಕೃಷ್ಣ ಚೇತನಾ ಕಟ್ಟಡದಲ್ಲಿ ನಿರ್ಮಾಣಗೊಂಡಿರುವ ನೂತನ ಸ್ಟಾರ್ಟ್-ಅಪ್ ವಿಭಾಗ ಲಾಂಚ್‍ವರ್ಸ್‍ನಲ್ಲಿ ದ ವೆಬ್ ಪೀಪಲ್ ಮತ್ತು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಇದರ ಕಛೇರಿಗಳ ಉದ್ಘಾಟನೆ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬೃಜೇಶ್ ಚೌಟ ದೀಪ ಪ್ರಜ್ವಲನೆ ಮಾಡಲಿದ್ದಾರೆ. ದ ವೆಬ್ ಪೀಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಣಾಧಿಕಾರಿ ಆದಿತ್ಯ ಕಲ್ಲೂರಾಯ, ಮುಖ್ಯ ಕಾರ್ಯಾಚರಣಾಧಿಕಾರಿ ಶರತ್ ಶ್ರೀನಿವಾಸ್, ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್‍ನ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಶ್ರೀಶ ಭಟ್, ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಇತರ ಗಣ್ಯರು ಇದರಲ್ಲಿ ಭಾಗವಹಿಸುತ್ತಾರೆ. ಬೆಳಿಗ್ಗೆ 10 ಗಂಟೆಗೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ ನವರಂಗ್-2025…
ಬೆಂಗಳೂರು ನ.20 NEWS DESK : ಕರ್ನಾಟಕ ವಿಧಾನಸಭೆಯ 2025 ನೇ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ವಿಧೇಯಕದ, ಪರಿಶೀಲನ ಸಮಿತಿಯ ಸಭೆ ಇಂದು ಬೆಂಗಳೂರಿನ ವಿಧಾನಸೌಧದ ಕೊಠಡಿಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಘನ ಸರಕಾರದ ಕಂದಾಯ ಸಚಿವರು ಹಾಗೂ ಪರಿಶೀಲನ ಸಮಿತಿಯ ಅಧ್ಯಕ್ಷರಾದ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಿತಿಯ ಎಲ್ಲಾ ಸದಸ್ಯರು ಭಾಗವಹಿಸಿದರು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎಸ್.ಪೊನ್ನಣ್ಣ ಅವರು, ಮಡಿಕೇರಿ ಶಾಸಕರಾದ ಮಂಥರ್ ಗೌಡ ಉಪಸ್ಥಿತರಿದ್ದರು. ಕೊಡಗು ಜಿಲ್ಲೆಯ ದಶಕಗಳ ಸಮಸ್ಯೆಯಾಗಿರುವ ಪಟ್ಟೇದಾರ್ ಭೂ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸುವ ಸಂಬಂಧ ಇಂದು ಮೂರನೇ ಬಾರಿಗೆ ಕರ್ನಾಟಕ ವಿಧಾನಸಭೆ ಪರಿಶೀಲನಾ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯವರೊಂದಿಗೆ ಚರ್ಚಿಸಿದ ಶಾಸಕರಾದ ಎ.ಎಸ್ ಪೊನ್ನಣ್ಣ, ಕೊಡಗಿನ ಜನತೆಗೆ ಮಾರಕವಾದ ಕೆಲವು ತಿದ್ದುಪಡಿಗಳನ್ನು ಕೈ ಬಿಟ್ಟು, ಕಂದಾಯ ವಿಷಯದಲ್ಲಿ ಹಲವು ದಶಕಗಳಿಂದ ಸಂಕಷ್ಟದಲ್ಲಿರುವ ಕೊಡಗಿನ ಜನತೆಗೆ…
ಗೋಣಿಕೊಪ್ಪ ನ.20 NEWS DESK : ಕೊಡಗಿನ ಕಲಾವಿದ ರತೀಶ್ ಹುದಿಕೇರಿ ನಟಿಸಿ, ನಿರ್ಮಿಸಿದ ಗಿಡುಗ ಸಿನಿಮಾ ನ.21 ರಂದು ಗೋಣಿಕೊಪ್ಪದ ಕೂರ್ಗ್ ಸಿನಿಫ್ಲೆಕ್ಸ್‍ನಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಕೆಂಪೆಗೌಡ ಮಾಗಡಿ ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಗೆ ಮೊದಲ ಪ್ರದರ್ಶನ ಕಾಣಲಿದ್ದು, ಗಿಡುಗ ಸಿನಿಮಾವೊಂದು ಕೊಡಗು, ಬೆಂಗಳೂರು, ಮಾಗಡಿ ಪ್ರದೇಶದಲ್ಲಿ ಶೂಟಿಂಗ್ ಮುಗಿಸಿ, ಬಿಡುಗಡೆಗೆ ಸಿದ್ಧವಾಗಿದೆ. ಕೆಂಪೆಗೌಡ ಮಾಗಡಿ ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಜತೆಗೆ ಬಂಡವಾಳ ಹೂಡಿದ್ದಾರೆ. ಶಂಕರ ನಾರಾಯಣ ನಂಬುದಿರಿ ಮತ್ತು ವಿ.ಎ.ರತೀಶ್ ಹುದಿಕೇರಿ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ದ ಹಂಟರ್ ಎಂಬ ಅಡಿಬರಹವಿದೆ. ಅಣ್ಣತಂಗಿ ಬಾಂಧವ್ಯದ ಕಥೆಯಳ್ಳ ಚಿತ್ರ ಇದಾಗಿದ್ದು, ಸಸ್ಪೆನ್ಸ್ ಮರ್ಡರ್ ಮಿಸ್ಟರಿ ಅಂಶಗಳನ್ನು ಒಳಗೊಂಡಿದೆ. ರತೀಶ್ ಕೂರ್ಗ್ ಈ ಚಿತ್ರದ ನಾಯಕ ತಂಗಿಯಾಗಿ ಭವಾನಿ ಉಳಿದಂತೆ ಭಾನು ಮೋಹನ್, ಚಾಮರಾಜು, ರೇವಣ್ಣ ಮಾಗಡಿ, ಚೆನ್ನಬಸವ, ಕಿಶೋರ್, ಸಂಜೀವ್, ಮಾಸ್ಟರ್ ಹೃದಯನ್ ಗೌಡ, ಮಾಸ್ಟಪುನೀತ್ ಮುಂತಾದವರು ನಟಿಸಿದ್ದಾರೆ. ಹಾಡುಗಳಿಗೆ ವಿನ್ಸೆಂಟ್ ಮುಕೇಶ್…
ಮಡಿಕೇರಿ ನ.20 NEWS DESK : ಕನ್ನಡದ ಮೊದಲ ನಾಡಗೀತೆ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡಿಗೆ ನೂರು ವಷ೯ಗಳು ತುಂಬಿರುವ ಹಿನ್ನಲೆಯಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ಪ್ರತಿಷ್ಟಿತ ಮುಳಿಯ ಚಿನ್ನಾಭರಣ ಸಂಸ್ಥೆಯ ಸಹಯೋಗದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಗೀತಗಾಯನ ಕಾಯ೯ಕ್ರಮವನ್ನು ನ.23 ರಂದು ಮಡಿಕೇರಿಯಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಭಾನುವಾರ ಸಂಜೆ 5.30 ಗಂಟೆಗೆ ನಗರದ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮಕ್ಕೆ ಮುಳಿಯ ಚಿನ್ನಾಭರಣ ಸಂಸ್ಥೆ ಸಹಯೋಗ ನೀಡಿದ್ದು 3 ಗಂಟೆ ಅವಧಿಯ ಕನ್ನಡ ಗೀತೆಗಳ ಕಾಯ೯ಕ್ರಮದಲ್ಲಿ ಜಿಲ್ಲೆಯ 33 ಗಾಯಕ, ಗಾಯಕಿಯರು ಹಾಡಲಿದ್ದಾರೆ ಎಂದರು. 1924 ರಲ್ಲಿ ಕನ್ನಡದ ಹೆಸರಾಂತ ಕವಿ, ಸಾಹಿತಿ ಹುಯಿಲಗೋಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು.. ಬೆಳಗಾವಿಯ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿ ಸಮ್ಮುಖದಲ್ಲಿ ಹಾಡಲ್ಪಟ್ಟು ಕನ್ನಡದ…
ಕುಶಾಲನಗರ NEWS DESK ನ.20 : ಅನಾದಿಕಾಲದಿಂದಲೂ ‘ಮಾಂಗಲ್ಯ ಸರ’ ಹೆಣ್ಣಿನ ಮನಸಿಗೂ-ಘನತೆಗೂ ಹಾಗೂ ಗಂಡನ ಆಯಸ್ಸು-ಶ್ರೇಯಸ್ಸು-ಆರೋಗ್ಯಕ್ಕೂ ಸಂಬಂಧ ಬೆಸೆಯುತ್ತ ಬಂದಿದೆ. ಮಂಗಳಸೂತ್ರ, ತಾಳಿ, ಕಂಠಿ, ಕರಿಮಣಿ ಇತ್ಯಾದಿ ವಿವಿಧ ಹೆಸರುಗಳಿರುವ, ಅತಿ ಪಾವಿತ್ರ್ಯದ, ಅತ್ಯಂತ ಭಾವನಾತ್ಮಕವಾದ ಆಭರಣ ಮಾಂಗಲ್ಯ ಸರ. ಇಷ್ಟೊಂದು ಪ್ರಾಮುಖ್ಯತೆ ಪಡೆದಿರುವ ಮಾಂಗಲ್ಯ ಸರವನ್ನು ಸುಮಂಗಲಿಯರು ಬದಲಾಯಿಸಲು ಅಥವಾ ಹೊಸ ಮಾಂಗಲ್ಯ ಸರ ಖರೀದಿಸಲು ಬಯಸುತ್ತಿದ್ದರೆ ಕುಶಾಲನಗರದ ಮುಖ್ಯ ರಸ್ತೆಯಲ್ಲಿರುವ ಜಿಎಲ್ ಆಚಾರ್ಯ ಜ್ಯುವೆಲ್ಲರ್‌ಗೆ ಭೇಟಿ ನೀಡಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ಪ್ರಸ್ತುತ ಪಡಿಸಿರುವ ಮಾಂಗಲ್ಯ ಸರ ಮೇಳವು ನ.23ರಂದು ಕೊನೆಗೊಳ್ಳಲಿದೆ. ಹಾಗಾದ್ರೆ ಇನ್ಯಾಕೆ ತಡ… ಬೇಗ ಬೇಗ ಬನ್ನಿ ಕೊನೆಯ ನಾಲ್ಕು ದಿನಗಳ ಕಾಲಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ. ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‌ನಲ್ಲಿ ನ.8 ರಿಂದ ಮಾಂಗಲ್ಯ ಸರ ಮೇಳ ಪ್ರಾರಂಭಗೊಂಡಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಗ್ರಾಹಕರಿಗಾಗಿ ವಿಶೇಷ ಆಫರ್ ನೀಡಲಾಗಿದೆ. ನ.8ರಿಂದ ಪ್ರಾರಂಭಗೊಂಡ ಮಾಂಗಲ್ಯ ಸರ ಮೇಳವು ನ.23ರಂದು…
ಮಡಿಕೇರಿ ನ.20 NEWS DESK : ಸಿನಿರಂಗದ ಹಿರಿಯ ನಟ ದೊಡ್ಡಣ್ಣ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಭೇಟಿ ಮಾಡಿ ಅವರ ಆರೋಗ್ಯ-ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಸಿನಿರಂಗದ ಇತರ ಹಿರಿಯ ಕಲಾವಿದರು ಉಪಸ್ಥಿತರಿದ್ದರು.
ಬೆಂಗಳೂರು ನ.20 NEWS DESK : ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸಿರ್ ಅಹ್ಮದ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಗಣ್ಯರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ನಾಪೋಕ್ಲು ನ.20 NEWS DESK : ಕ್ರೀಡೆಯು ವ್ಯಾಯಾಮ ಮಾತ್ರವಲ್ಲದೆ ಮನೋರಂಜನೆಯನ್ನು ಸಹ ನೀಡುತ್ತದೆ. ಕ್ರೀಡೆಗಳ ಆಯೋಜನೆಯಿಂದ ಸಮಾಜದಲ್ಲಿ ಪರಸ್ಪರ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಜಿಲ್ಲಾ ಎಸ್.ಎನ್.ಡಿ.ಪಿ ಅಧ್ಯಕ್ಷ ವಿ.ಕೆ. ಲೋಕೇಶ್ ಹೇಳಿದರು. ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಸೌಹಾರ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆ ಆರ್ಥಿಕವಾಗಿ ಸದೃಢವಾಗಲು ಮೂಲ ಕಾರಣ. ಸಮಾಜದಲ್ಲಿ ಯಾವುದೇ ಧರ್ಮ, ಜಾತಿ, ರಾಜಕೀಯವಿಲ್ಲದೆ ಕ್ರೀಡಾ ಪ್ರತಿಭೆಗಳಿಗೆ ಗೌರವ ಸಿಗುವುದು ಕ್ರೀಡೆಯಿಂದ ಮಾತ್ರ.ವಿವಿಧ ಭಾಗಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಪರಸ್ಪರ ಸೌಹಾರ್ದಯುತ ವಾಗಿ ಒಗ್ಗೂಡಲು ಕ್ರೀಡೆ ಒಂದು ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು. ಜಿಲ್ಲಾ ಎಸ್‍ಎನ್ಡಿಪಿ ಸಂಘಟನೆ ಕಾರ್ಯದರ್ಶಿ ಪ್ರೇಮಾನಂದ ಮಾತನಾಡಿ ಎಸ್‍ಎನ್‍ಡಿಪಿ ಸಂಘಟನೆ 1903ರಲ್ಲಿ ಮಾನವತಾವಾದಿ ಶ್ರೀ ನಾರಾಯಣ ಗುರುಗಳು ಹುಟ್ಟು ಹಾಕಿದ ಬಲಿಷ್ಠ ಸಂಘಟನೆಯಾಗಿದೆ. ಈ ಸಂಘಟನೆಯು ಇಂದು ಕೊಡಗಿನ ಜಿಲ್ಲಾದ್ಯಂತ 18 ಸಾವಿರಕ್ಕೂ ಅಧಿಕ ಸದಸ್ಯರನ್ನು ಒಳಗೊಂಡಿದ್ದು ಶ್ರೀ ನಾರಾಯಣ ಗುರು ಅವರ ಆದರ್ಶಗಳನ್ನು ಪಾಲಿಸಿ ಹತ್ತು ಹಲವು…
ವಿರಾಜಪೇಟೆ ನ.20 NEWS DESK : ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ದೇವಾಲಯದಲ್ಲಿ ಸುಬ್ರಹಣ್ಯ ಷಷ್ಠಿ ಪ್ರಯುಕ್ತ ನ.26 ರಂದು ಶ್ರೀ ನಾಗದೇವರ ಷಷ್ಠಿ ಪೂಜೆ ನಡೆಯಲಿದೆ. ಪೂಜೆಯ ಅಂಗವಾಗಿ ಬೆಳಿಗ್ಗೆ 8 ಗಂಟೆಯಿಂದ ನಾಗನಿಗೆ ಹಾಲಿನ ಅಭಿಷೇಕ ಬಳಿಕ ವಿಶೇಷ ಪೂಜೆಗಳು ನಡೆಯಲಿದೆ. ಬಳಿಕ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಪ್ರಸಾಧ ವಿನಿಯೋಗ ನಂತರ ಅನ್ನ ಸಂತಾರ್ಪಣೆ ನಡೆಯಲಿದೆ.






