ಮಡಿಕೇರಿ ನ.3 NEWS DESK : ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತುವಂತೆ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು. ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು. ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ. ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ…
ಲೇಖಕ: admin
ಮಡಿಕೇರಿ ನ.3 NEWS DESK : ಸಿದ್ದಾಪುರ ಸಂತ ಅನ್ನಮ್ಮ ವಿದ್ಯಾಸಂಸ್ಥೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೊಡವ, ಕನ್ನಡ ಭಾಷೆಯ ಸಾಹಿತಿ ಮಂಡೇಪಂಡ ಗೀತಾ ಮಂದಣ್ಣ ಮಾತನಾಡಿ, ಭಾಷಾವಾರು ಪ್ರಾಂತ್ಯದ ಪ್ರಕಾರ ಕನ್ನಡ ನಾಡನ್ನ ಮೈಸೂರು ಸಂಸ್ಥಾನ ಮಾಡಿ ನಂತರ ಕರ್ನಾಟಕ ರಾಜ್ಯ ಎಂದು ಗುರುತು ಮಾಡಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ನಮ್ಮ ಕರ್ನಾಟಕ ಕನ್ನಡ ಭಾಷೆ, ಸಂಸ್ಕೃತಿ, ಸಿರಿವಂತಿಕೆಯಲ್ಲಿ, ವಿದ್ಯೆಯಲ್ಲಿ, ಸಾಹಿತ್ಯದಲ್ಲಿ, ಉದ್ಯೋಗದಲ್ಲಿ, ಮುಂಚೂಣಿಯಲ್ಲಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಕನ್ನಡವನ್ನು ಬೆಳೆಸುವುದು ಹಾಗೂ ಕನ್ನಡದಲ್ಲಿ ಮಾತನಾಡುವುದು ತುಂಬ ಕುಂಠಿತವಾಗುತ್ತಿದೆ ಹಾಗೂ ಇಂಗ್ಲೀಷ್ ಪ್ರಭಾವ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯನ್ನು ನಮ್ಮ ದೈನಂದಿನ ಬದುಕಿನಲ್ಲಿ ಬಳಸಬೇಕು ಹಾಗೂ ನಾಡು ನುಡಿಯನ್ನು ಗೌರವಿಸಿ ಪೋಷಿಸುವ ಕೆಲಸವಾಗಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನ್ನಮ್ಮ ಶಾಲೆಯ ವ್ಯವಸ್ಥಾಪಕಿ ಮಾರ್ಜರಿ ವಹಿಸಿದರು. ಸಂತ ಅನ್ನಮ್ಮ ಶಾಲೆಯ ಪ್ರಾಂಶುಪಾಲೆ ಲೆನಿಟ್, ಕಾಲೇಜು ಪ್ರಾಂಶುಪಾಲೆ ರಜಿನ ತೋಮಸ್,…
ಕುಶಾಲನಗರ ನ.3 NEWS DESK : ಇಂದಿನ ಯುವ ಪೀಳಿಗೆಯ ಕೈಯಲ್ಲಿ ಕರ್ನಾಟಕದ ನಾಳೆ ಇದೆ. ಸಾಂಸ್ಕೃತಿಕ ವೈವಿಧ್ಯತೆಯಿಂದ ಕೂಡಿದ ಕನ್ನಡ ನಾಡಿನಲ್ಲಿ ಮಾತನಾಡುವ ಭಾಷೆಯಲ್ಲಿ ಪ್ರೌಢಿಮೆ, ಕಲಿಯುವ ವಿಜ್ಞಾನದಲ್ಲಿ ಮಾನವೀಯತೆ, ಕಾಣುವ ಕನಸಿನಲ್ಲಿ ಪಾಂಡಿತ್ಯವನ್ನು ಮೈಗೂಡಿಸಿಕೊಳ್ಳಬೇಕೆಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕಅಳುವಾರ ಜ್ಞಾನ ಕಾವೇರಿ ಆವರಣದ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಭುವನೇಶ್ವರಿ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಸಾವಿರಾರು ವರ್ಷಗಳ ಸಾಂಸ್ಕೃತಿಕ ಅಸ್ಮಿತೆಯನ್ನು ಹೊಂದಿರುವ ಕನ್ನಡ ಭಾಷೆಗೆ ಭಾವನಾತ್ಮಕ ಬಾಂಧವ್ಯವಿದೆ. ನಾವೆಲ್ಲರೂ ಕನ್ನಡಿಗರು, ವಿಶ್ವಮಾನವ ಸಂದೇಶವು ನಮ್ಮ ಸಮಾಜವನ್ನು ವಿಶ್ವದೊಂದಿಗೆ ಸಂಪರ್ಕಿಸುವ ಜೀವನದ ದಾರಿಯಾಗಿದೆ. ಯುವಕರ ಉತ್ಸಾಹವೇ ನಾಳೆಯ ಕರ್ನಾಟಕ. ಸಂಶೋಧನೆ, ಆವಿಷ್ಕಾರ, ದೈವಿಕ ಶಕ್ತಿ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕನ್ನಡ ನಾಡು ನ್ಯಾಯ, ಪ್ರೀತಿ, ಸಹಿಷ್ಣುತೆ ಮತ್ತು ಮೌಲ್ಯಾಧಾರಿತ ಬದುಕಿಗೆ ಮಾದರಿಯಾಗಿದೆ. ಬಸವಾದಿ ಶರಣರಾದಿಯಾಗಿ ವಚನ ಸಾಹಿತ್ಯದಿಂದ ಡಿಜಿಟಲ್ ಕಾಲದಲ್ಲೂ…
ಕುಶಾಲನಗರ ನ.3 NEWS DESK : ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ಸ್ವ-ಉದ್ಯೋಗ ತರಬೇತಿಗಳನ್ನು ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವಕ -ಯುವತಿಯರಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಬಹುದು. ನ.26 ರಿಂದ ಡಿ.26ರ ವರೆಗೆ ಮಹಿಳೆಯರ ಹೊಲಿಗೆ ತರಬೇತಿ 31 ದಿನಗಳು, ಡಿ.1 ರಿಂದ ಡಿ.30 ರ ವರೆಗೆ ಉಚಿತ ಮೊಬೈಲ್ ರಿಪೇರಿ ತರಬೇತಿ 30 ದಿನಗಳು, ಡಿ.15 ರಿಂದ 26 ರವರೆಗೆ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ 12 ದಿನಗಳು ಹಾಗೂ ಜ.15 ರಿಂದ ಫೆ.18 ರವರೆಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ 35 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ. ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ ಎಂದು ಸಂಸ್ಥೆಯ ನಿರ್ದೇಶಕ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ 9686406181, 9449402081, 8618471801,…
ಸೋಮವಾರಪೇಟೆ NEWS DESK ನ.3 : ಸಿ ಅಂಡ್ ಡಿ ಭೂಮಿ ಕಾನೂನು ವಿರೋಧಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರಪೇಟೆಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ರಸ್ತೆತಡೆ ನಡೆಸಿದ ಪ್ರತಿಭಟನಾಕಾರರು ಸರಕಾರ, ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರಪೇಟೆ ತಾಲೂಕು ರೈತ ಹೋರಾಟ ಸಮಿತಿ, ರೈತ ಸಂಘ ಮತ್ತಿತರ ರೈತ ಸಂಘಟನೆಗಳ ನೇತೃತ್ವದಲ್ಲಿ ಜೆ.ಸಿ.ವೇದಿಕೆಯಲ್ಲಿ ಬಹಿರಂಗ ಪ್ರತಿಭಟನಾ ಸಭೆ ನಡೆಯಿತು. ಸಿ ಅಂಡ್ ಡಿ ಭೂಮಿ ಕಾನೂನು ತಿದ್ದುಪಡಿಯಿಂದ ಕೃಷಿಕರ ನೆಮ್ಮದಿ ಭಂಗವಾಗಿದೆ ಎಂದು ಸಂಘಟನೆಗಳ ಪ್ರಮುಖರು ಆರೋಪಿಸಿದರು.
ಕುಶಾಲನಗರ, ನ.3 NEWS DESK : ಕನ್ನಡ ಭಾಷೆಯನ್ನು ಬಳಸಿ ಉಳಿಸಿ ಬೆಳೆಸಬೇಕಾಗಿದೆ, ಕನ್ನಡದ ಅಸ್ಮಿತೆಯನ್ನು ಕಟ್ಟುವಂತಹ ಕೆಲಸ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ರಂಗಭೂಮಿ ಕಲಾವಿದ ಕೂಡ್ಲೂರಿನ ಭರಮಣ್ಣ ಟಿ.ಬೆಟಗೇರಿ ಮನವಿ ಮಾಡಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಕುಶಾಲನಗರ ಭಾರತ್ ಸ್ಕೌಟ್ಸ್, ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ ಹಾಗೂ ಕುಶಾಲನಗರ ಲಯನ್ಸ್ ಕ್ಲಬ್ ನ ಸಹಯೋಗದೊಂದಿಗೆ ಶಾಲಾ ಅಂಗಳದಲ್ಲಿ ಏರ್ಪಡಿಸಿದ್ದ 70 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ನಾಡು- ನುಡಿ, ಸಂಸ್ಕೃತಿ ಹಾಗೂ ಪರಂಪರೆಯ ವೈಭವದ ಬಗ್ಗೆ ಮಾತನಾಡಿದರು. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ ಎಂದರು. ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸುವ ಮೂಲಕ ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ…
ವಿರಾಜಪೇಟೆ ನ.3 NEWS DESK : ವಿರಾಜಪೇಟೆ ಕರ್ನಾಟಕ ಸಂಘದ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಅವರು ಸಂಘದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆಲೂರು ವೆಂಕಟರಾವ್ ಅವರು 1905 ರಲ್ಲಿ ಕರ್ನಾಟಕ ಏಕೀಕರಣ ಚಟುವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸು ಕಂಡ ಮೊದಲ ವ್ಯಕ್ತಿ. ಅವರನ್ನು ಸದಾ ಸ್ಮರಿಸಬೇಕು. ಕರ್ನಾಟಕ ರಾಜ್ಯದ ಏಕೀಕರಣಕ್ಕೆ ಕೀರ್ತಿ ಗಳಿಸಿದ ಇತರ ವ್ಯಕ್ತಿಗಳಲ್ಲಿ ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕೆ.ಶಿವರಾಮ ಕಾರಂತ, ಎ.ಎನ್.ಕೃಷ್ಣ ರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯ ಅವರು ಪ್ರಮುಖರು. ಕನ್ನಡಾಂಬೆಯ ಮಕ್ಕಳಾದ ನಾವು ಈ ಮಾಹಿತಿಯನ್ನು ಸದಾ ತಿಳಿದಿರಬೇಕು. ಅಷ್ಟೇ ಅಲ್ಲ ಕರ್ನಾಟಕಕ್ಕೆ ಆಗಮಿಸುವ ಅನ್ಯಭಾಷಿಗರಿಗೆ ಕನ್ನಡವನ್ನು ಕಲಿಸಿ, ನಾವು ಬಳಕೆ ಮಾಡುವ ಮೂಲಕ ಕನ್ನಡ…
ನಾಪೋಕ್ಲು ನ.3 NEWS DESK : ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ತಾಲ್ಲೂಕು, ಕನ್ನಡ ಸಾಹಿತ್ಯ ಪರಿಷತ್ತು ನಾಪೋಕ್ಲು ಹೋಬಳಿ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಮೂಲಕ ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳಬೇಕು. ತಮ್ಮ ಶೈಕ್ಷಣಿಕ ಪ್ರಗತಿಯಲ್ಲಿ ಗುರಿ ತಲುಪಿ ದೇಶ-ವಿದೇಶಗಳಲ್ಲಿ ಹೆಸರುಗಳಿಸಿರೆಂದು ಆಶಿಸಿದರು. ಮಡಿಕೇರಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕಡ್ಲೆರ ತುಳಸಿ ಮೋಹನ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮೊಳಗೆ ಅಡಗಿರುವ ಕಲೆಯನ್ನು ಹೊರತರಲು ಇಂತಹ ಸಂಭ್ರಮಾಚರಣೆಗಳು ಅವಶ್ಯಕ ಎಂದು ಹೇಳಿದರು, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಬಾಳೆಯಡ ದಿವ್ಯಾ ಮಂದಪ್ಪ ಮಾತನಾಡಿ, ವಿದ್ಯಾರ್ಥಿಗಳ ಶಿಸ್ತು ಶಿಕ್ಷಣ ಮತ್ತು ಗುರಿ ಸಾಧನೆಗೆ ದಾರಿಯಾಗುವುದು ಎಂದು ಹೇಳಿದರು. ನಾಪೋಕ್ಲು ಹೋಬಳಿಮಟ್ಟದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೆರವಂಡ ಉಮೇಶ್…
ಮಡಿಕೇರಿ ನ.3 NEWS DESK : ಕೊಡಗಿನಲ್ಲಿ ನ.11 ರಿಂದ ಡಿ.31ರ ತನಕ ನಡೆಯಲಿರುವ ಕಲಾ ಉತ್ಸವ-2025 ಕಾರ್ಯಕ್ರಮದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕೃಷ್ಣಾದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್, ಕಲಾವಿದ ಸಾದಿಕ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 2017 ರಿಂದ, ಸತತವಾಗಿ ಈ ಕಾರ್ಯಕ್ರಮ ವಾರ್ಷಿಕವಾಗಿ ನಡೆಯುತ್ತಿದ್ದು ರಾಜ್ಯ ಹೊರರಾಜ್ಯಗಳಿಂದ ಕಲಾವಿದರು ಆಗಮಿಸಿ ತಮ್ಮ ಕಲಾಕೃತಿಯನ್ನು ಪ್ರದರ್ಶಿಸುತ್ತಾರೆ.
ಮಡಿಕೇರಿ ನ.3 NEWS DESK : ಕೊಡಗು ಕೊಡವ ತಕ್ಕ್ ಒಕ್ಕೂಟದ ಲಾಂಭನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಗೃಹ ಕಛೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಕೊಡವ ತಕ್ಕ್ ಒಕ್ಕೂಟ ಮಾತನಾಡುವ 21 ಮೂಲನಿವಾಸಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು. ಕೊಡವ ತಕ್ಕ್ ಒಕೂಟ್ಟದ 21 ಮೂಲನಿವಾಸಿಗಳ ಅಭಿವೃದ್ಧಿಗೆ 8 ಎಕರೆ ಪೈಸಾರಿ ಜಾಗವನ್ನು ಮಂಜೂರು ಮಾಡಲು ಮನವಿ ಸಲ್ಲಿಸಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಮಂತ್ರಿ ಸ್ಥಾನ ನೀಡಲು ಮುಖ್ಯಮಂತ್ರಿಗಳಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ 21 ಕೊಡವ ತಕ್ಕ್ ಒಕ್ಕೂಟದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿಗಳು ಜಾಗ ಮಂಜೂರು ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಸಚಿವರುಗಳಾದ ಭೋಸರಾಜು, ಬೈರತಿ ಸುರೇಶ್, ಹಿಂದುಳಿದ ವರ್ಗಗಳ ಸಚಿವರು ಶಿವರಾಜ್ ತಂಗಡಗಿ, ಸಂಸ್ಥಾಪಕ ಅಧ್ಯಕ್ಷರು ಕೊರಕುಟ್ಟಿರ ಸರ ಚಂಗಪ್ಪ, ಅಧ್ಯಕ್ಷರು ಜಿ.ಅಯ್ಯಪ್ಪ,…






