ಲೇಖಕ: admin

ಮಡಿಕೇರಿ ನ.19 NEWS DESK : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ನವೆಂಬರ್, 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಹಾಗೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.

Read More

ಬೆಂಗಳೂರು NEWS DESK ನ.18 : ಪೊಲೀಸ್‌ ಇಲಾಖೆಯ ಎಲ್ಲಾ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲಾ ಇಲಾಖೆಯ ನೇಮಕಾತಿಗೂ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

Read More

ಮಡಿಕೇರಿ NEWS DESK ನ.18 : ಮುಂದಿನ 5 ವರ್ಷಗಳ ಅವಧಿಗೆ ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದೆ. ಸಾಮಾನ್ಯ ಕ್ಷೇತ್ರದಿಂದ ಮಡಿಕೇರಿ ತಾಲ್ಲೂಕಿನಿಂದ ಸೂದನ ಎಸ್.ಈರಪ್ಪ, ಕೆ.ಆರ್.ಅನಂತಕುಮಾರ್ ತಳೂರು ಕೆ.ದಿನೇಶ್ ಕುಮಾರ್, ಕುಂಬಗೌಡನ ವಿನೋದ್ ಕುಮಾರ್, ಮಂದ್ರೀರ ಮೋಹನ್ ದಾಸ್, ವಿರಾಜಪೇಟೆ ತಾಲ್ಲೂಕಿನಿಂದ ಮಾಚೇಟಿರ ಕೆ.ಕುಟ್ಟಪ್ಪ, ಪೆಮ್ಮಂಡ ಟಿ.ಬೋಪಣ್ಣ, ಎಸ್.ಎಸ್.ಸುರೇಶ್, ಸೋಮವಾರಪೇಟೆ ತಾಲ್ಲೂಕಿನಿಂದ ಡಿ.ಸಿ.ರಾಜು ಸಿ.ಪಿ.ವಿಜಯಕುಮಾರ್, ಎ.ಜೆ.ಕೃಷ್ಣಪ್ಪ, ಮಹಿಳಾ ಮೀಸಲು ಕ್ಷೇತ್ರದಿಂದ ಕೆ.ಈ.ಸೌಮ್ಯ, ಬಿ.ಬಿ.ಪುಷ್ಪಾವತಿ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಕುಡಿಯರ ಕೆ.ಮುತ್ತಣ್ಣ, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಎಸ್.ಸಿ.ಸತೀಶ್, ಹಿಂದುಳಿದ ಪ್ರವರ್ಗ ‘ಎ’ ಯಿಂದ ವಿ.ಹರೀಶ್ ಹಾಗೂ ಹಿಂದುಳಿದ ಪ್ರವರ್ಗ ‘ಬಿ’ ಯಿಂದ ಪೇರಿಯನ ಉದಯ ಕುಮಾರ್ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ನ.19 NEWS DESK : ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರ ಸಂಬಂಧ ಕ್ರಮವಹಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಶಶಿಧರ ಅವರು ಮಾಹಿತಿ ನೀಡಿದರು. ರಾಜಾಸೀಟಿನಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುವುದು ಎಂದು ಅವರು ವಿವರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಅವರು ರಾಜಾಸೀಟಿನಲ್ಲಿ ಜಿಪ್‍ಲೈನ್ ನಿರ್ವಹಣೆಯನ್ನು ಕನ್ನಡ ಭಾಷೆ ಬರದಿರುವವರು ನಡೆಸುತ್ತಿದ್ದು, ಈ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಜನರ ಜೊತೆ ಸಂವಾದ ನಡೆಸುವವರನ್ನು ನಿಯೋಜಿಸುವಂತೆ ಸಲಹೆ ಮಾಡಿದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಅವರು ಮಾತನಾಡಿ ರಾಜಾಸೀಟಿನಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ತಿಳಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ…

Read More

ಮಡಿಕೇರಿ ನ.18 NEWS DESK : ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಮತ್ತು ಅರಿವು ಕಾರ್ಯಕ್ರಮ ನಡೆಯಿತು. ಅಂಗನವಾಡಿ ಕೇಂದ್ರದ ಮಕ್ಕಳಿಗೆ ಛದ್ಮವೇಷ ಮತ್ತು ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ವಿವಿಧ ರೀತಿಯ ಸ್ಲೋಗನ್‍ಗಳನ್ನು ಬರೆಸಿ ಮಕ್ಕಳಿಂದ ಗ್ರಾಮಸ್ಥರಿಗೆ ಸ್ವಚ್ಛತೆ ಹಾಗೂ ಪರಿಸರ ರಕ್ಷಣೆ ಬಗ್ಗೆ ಮಾಹಿತಿ ಕೊಡಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ರಕ್ಷಿತ್, ತಾಲೂಕು ಹಿಂದುಳಿದ ವರ್ಗದ ವಿಸ್ತರಣಾಧಿಕಾರಿ ಶ್ರೀಕಾಂತ್, ತಾಲೂಕು ಪಂಚಾಯಿತಿ ಸಾಮಾಜಿಕ ಲೆಕ್ಕ ಪರಿಶೋಧನಾಧಿಕಾರಿ ಸುಂದರೇಶ್, ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್, ಅರಣ್ಯ ಸಂರಕ್ಷಣಾಧಿಕಾರಿ ಪ್ರೇಮ್‍ನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ, ಸದಸ್ಯರಾದ ಪುಷ್ಪ, ಮುತ್ತಮ್ಮ, ಅನಿಫ್, ದಿನೇಶ್, ಸುಶೀಲಾವತಿ, ಕೀರ್ತನ್ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆ ಹೇಮಲತಾ, ರಮ್ಯಾ ಸಹಾಯಕಿ ಬೇಬಿ ರವರು ಉತ್ತಮವಾಗಿ ನಡೆಸಿಕೊಟ್ಟರು.

Read More

ಮಡಿಕೇರಿ ನ.18 NEWS DESK : ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿನಾಯಿಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) ಕನಿಷ್ಠ 1 ಎಕರೆ ಜಾಗ ಕಾಯ್ದಿರಿಸಿ ಸುತ್ತುಗೋಡೆ ನಿರ್ಮಿಸುವಂತೆ ನಿರ್ದೇಶನ ನೀಡಿದರು. ನಗರಾಭಿವೃದ್ದಿ, ಪಂಚಾಯತ್ ರಾಜ್, ಪಶುಪಾಲನೆ ಹಾಗೂ ಪಶು ವೈದ್ಯಕೀಯ, ಶಿಕ್ಷಣ, ಸಾರಿಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಯುವ ಸಬಲೀಕರಣ ಸೇರಿದಂತೆ ವಿವಿಧ ಇಲಾಖೆಗಳು ಬೀದಿನಾಯಿಗಳ ಹಾವಳಿ ನಿಯಂತ್ರಣ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳು,…

Read More

ಮಡಿಕೇರಿ ನ.18 NEWS DESK : ಕೊಡವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಲ್ಲ. ಆದರೆ ಇಂದು ಜನಗಣತಿಯೂ ಸೇರಿದಂತೆ ರಾಜ್ಯದ ದಾಖಲೆಗಳ ಎಲ್ಲಾ ಕಾಲಂಗಳು ಈ ದೇಶದ ಬಹುಧರ್ಮ, ಪ್ರಬಲಧರ್ಮ ಮತ್ತು ಬಲಾಢ್ಯ ಜಾತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಚಿಸಲ್ಪಟ್ಟಿದೆ. ಧರ್ಮ ಮತ್ತು ಜಾತಿ ಬಗ್ಗೆ ಮಾತ್ರ ಉಲ್ಲೇಖ ಇರುವುದರಿಂದ ಆನಿಮಿಸ್ಟಿಕ್ ನಂಬಿಕೆಯ ಕೊಡವರು ಅನಿವಾರ್ಯವಾಗಿ ಧರ್ಮ ಮತ್ತು ಜಾತಿ ಕಾಲಂಗಳನ್ನು ಒಪ್ಪಿಕೊಂಡು ಕೊಡವ ಎಂದು ದಾಖಲಿಸಬೇಕಾದ ಪರಿಸ್ಥಿತಿ ಬಂದಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಆದಿಮ ಸಂಜಾತ ಏಕ-ಜನಾಂಗೀಯ ಆನಿಮಿಸ್ಟಿಕ್ ಕೊಡವರು 2026-27ರಲ್ಲಿ ನಡೆಯಲಿರುವ 16ನೇ ರಾಷ್ಟ್ರೀಯ ಜನಗಣತಿ ಸಂದರ್ಭ ಪ್ರತ್ಯೇಕವಾಗಿ ‘ಕೊಡವ’ ಎಂದು ದಾಖಲೀಕರಣಗೊಳ್ಳುವಂತೆ ಜನಜಾಗೃತಿ ಮೂಡಿಸುವ ಸಲುವಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ ಕುಟ್ಟದಲ್ಲಿ ನಡೆದ 20ನೇ ಮಾನವ ಸರಪಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡವಲ್ಯಾಂಡ್ ಭೂ ರಾಜಕೀಯ ಸ್ವಯಂ ಆಡಳಿತ, ಕೊಡವರಿಗೆ ವಿಶ್ವರಾಷ್ಟ್ರ ಸಂಸ್ಥೆಯ ಇಂಡಿಜಿನಸ್ ಪಿಪಲ್ಸ್…

Read More

ವಿರಾಜಪೇಟೆ ನ.18 NEWS DESK : ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ವಿದ್ಯಾಸಂಸ್ಥೆಯೊಂದರ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿರಾಜಪೇಟೆಯ ಸರ್ಕಾರಿ ಪಿ ಯು ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ  ಚಿಲ್ಲವಂಡ ಕಾವೇರಪ್ಪ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಪೋಷಕರ ಸಭೆ 2025-26 ರ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆಯನ್ನು ಮಾಡಬೇಕು. ಶಿಸ್ತನ್ನು ಮೈಗೂಡಿಸಿಕೊಳ್ಳುವುದರ ಮೂಲಕ ವಿದ್ಯಾಸಂಸ್ಥೆ ಗೂ ಪೋಷಕರಿಗೂ ಕೀರ್ತಿಯನ್ನು ತರಬೇಕು. ಶೈಕ್ಷಣಿಕ ಪ್ರಗತಿಯಿಂದ ಸಂಸ್ಥೆಯ ಬೆಳವಣಿಗೆ ಆಗಲು ಸಾಧ್ಯ ಎಂದರು. ಪೋಷಕರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ಗಮನಿಸುತ್ತಿರಬೇಕು ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಪೋಷಕರು ಆಗಿಂದಾಗೆ ವಿದ್ಯಾರ್ಥಿಗಳ ಪ್ರಗತಿಯನ್ನು ಪರಿಶೀಲಿಸಬೇಕು. ಮೊಬೈಲ್ ಗೀಳಿಗೆ ಮಕ್ಕಳು ಒಳಗಾಗದಂತೆ ಪೋಷಕರು ಎಚ್ಚರವಹಿಸಬೇಕು ಎಂದು ಹೇಳಿದರು. ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರುಗಳನ್ನು ಅಭಿನಂದಿಸಿದ ಅವರು, ನೂತನ ಪ್ರಶ್ನೆ ಪತ್ರಿಕೆ ನೀಲಿ…

Read More

ಮಡಿಕೇರಿ ನ.18 NEWS DESK : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆಯು ಶೋಚನೀಯವಾದ ಸ್ಥಿತಿಯನ್ನು ತಲುಪುತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಹೇಮಂತ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು ನಾಮಕರಣ ಮಾಡಿದ ಸುದಿನವನ್ನು ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ. ಕನ್ನಡ ಭಾಷೆ ಜಗತ್ತಿನಲ್ಲೇ ಅತ್ಯಂತ ಶ್ರೀಮಂತ ಭಾಷೆ. ಈ ನಾಡಿನ ರಾಜರ ಪರಾಕ್ರಮ ಉತ್ತರ ಭಾರತದವರಿಗೂ ಹರಡಿತ್ತು ಇಮ್ಮಡಿ ಪುಲಕೇಶಿ, ಮುಮ್ಮಡಿ ಗೋವಿಂದರಂತಹ ರಾಜರ ಇತಿಹಾಸಗಳು ಇದಕ್ಕೆ ಸಾಕ್ಷಿಯಾಗಿ ನಿಂತಿವೆ. ಎಲ್ಲಾ ಕ್ಷೇತ್ರಗಳಲ್ಲೂ ಶ್ರೇಷ್ಠತೆಯನ್ನು ಹೊಂದಿರುವ ಕನ್ನಡ ಭಾಷೆಯ ಅನನ್ಯತೆ, ಹಿರಿಮೆ, ಸುಲಲಿತತೆ ತಿಳಿಯದೆ ಇರುವುದರಿಂದ ಹೆಚ್ಚಿನವರು ಭಾಷೆಯನ್ನು…

Read More

ಮಡಿಕೇರಿ ನ.18 NEWS DESK : ಕೊಡಗು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿ ಬಿ.ಜಿ.ಮಂಜು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಂ.ವಿನೋದ್, ಸಹ ಕಾರ್ಯದರ್ಶಿಯಾಗಿ ಲೋಹಿತ್ ಮಾಗುಲುಮನೆ, ಹಾಗೂ ನಿದೇರ್ಶಕರಾಗಿ ಬಾಚರಣಿಯಂಡ ಅನುಕಾರ್ಯಪ್ಪ, ಮನೋಜ್ ಕುಮಾರ್, ಸ್ಟ್ಯಾನ್ಲಿ.ಡಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More