ಕುಶಾಲನಗರ ನ.18 NEWS DESK : ಸ್ವಚ್ಛ ಕಾವೇರಿಗಾಗಿ 15ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ ಪೂಂಪ್ ಹಾರ್ ನಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪವಿತ್ರ ಕಾವೇರಿಯನ್ನು ಸಮುದ್ರ ಸಂಗಮದಲ್ಲಿ ವಿಸರ್ಜನೆ ಗೊಳಿಸುವ ಮೂಲಕ ಸಮಾಪ್ತಿ ಗೊಂಡಿತು. ಅಖಿಲ ಭಾರತ ಸನ್ಯಾಸಿ ಸಂಘ ಕಾವೇರಿ ನದಿ ಸ್ವಚ್ಛತಾ ಆಂದೋಲನ ಕಾವೇರಿ ರಿವರ್ ವಾಟರ್ ಪ್ರೊಟೆಕ್ಷನ್ ಟ್ರಸ್ಟ್ ನಮಾಮಿ ಕಾವೇರಿ ಸಹಯೋಗದೊಂದಿಗೆ ತಲಕಾವೇರಿ ಕ್ಷೇತ್ರದಿಂದ ಆರಂಭಗೊಂಡ ರಥಯಾತ್ರೆ ಪವಿತ್ರ ಕಾವೇರಿ ತೀರ್ಥಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾವೇರಿ ನದಿ ಮತ್ತು ಬಂಗಾಳ ಕೊಲ್ಲಿ ಸಮುದ್ರ ಸಂಗಮದಲ್ಲಿ ವಿಶೇಷ ಪೂಜಾ ಸಲ್ಲಿಸಿ ದಕ್ಷಿಣ ಭಾರತದ ಸಾಧುಸಂತರ ಸಮ್ಮುಖದಲ್ಲಿ ಯಾತ್ರೆ ವಿದ್ಯುಕ್ತವಾಗಿ ಸಮಾಪ್ತಿಗೊಂಡಿತು. ಅಕ್ಟೋಬರ್ ತಿಂಗಳ 24ರಂದು ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಚಾಲನೆಗೊಂಡ ರಥ ಯಾತ್ರೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನದಿ ತಟಗಳಲ್ಲಿ ಕಾವೇರಿ ಮಾತೆಯನ್ನು ಹೊತ್ತ ರಥ ಮೂಲಕ ಸಾಗಿ ಜನರಿಗೆ ಕಾವೇರಿ ನದಿ ಸಂರಕ್ಷಣೆಯ ಬಗ್ಗೆ ಅರಿವು ಜಾಗೃತಿ ಮೂಡಿಸುವ ಕಾರ್ಯ…
ಲೇಖಕ: admin
ಮಡಿಕೇರಿ ನ.18 NEWS DESK : ಮಕ್ಕಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಪ್ರತಿಷ್ಠಿತ ಸಿಸ್ಕೋ ಕಂಪೆನಿ ಹಾಗೂ ಜಾಗೃತಿ ಸಂಸ್ಥೆ ( NGO) ಸಹಯೋಗದಲ್ಲಿ ಬಾಳುಗೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಕಲಿಕಾ ಹಾಗೂ ವೈಯುಕ್ತಿಕ ಆರೈಕೆ ಉತ್ಪನ್ನಗಳ ಕಿಟ್ ವಿತರಿಸಲಾಯಿತು. ಬೆಂಗಳೂರಿನ ಜಾಗೃತಿ ಸಂಸ್ಥೆಯು ರಾಜ್ಯಾದ್ಯಂತ ಕಳೆದ ಹಲವು ವರ್ಷಗಳಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಕುಂದು ಕೊರತೆಗಳಿಗೆ ಸ್ಪಂದಿಸುತ್ತಾ, ಅವರಿಗೆ ಅತ್ಯವಶ್ಯಕ ಇರುವ ವಸ್ತುಗಳನ್ನು ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ಕೊಡಗಿನ ಅನೇಕ ಶಾಲೆಗಳನ್ನು ಗುರುತಿಸಿ ಅವರಿಗೆ ಸಹಾಯ ಹಸ್ತ ನೀಡುತ್ತಿರುವುದಾಗಿ ಸಂಸ್ಥೆಯ ಕಾರ್ಯನಿರ್ವಾಹಕ ಸದಸ್ಯರುಗಳಾದ ನೋಯಲ್ ಹಾಗೂ ಕಣ್ಣನ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿಸ್ಕೋ ಕಂಪನಿ ಉದ್ಯೋಗಿಗಳಾದ ನಾಗೇಶ್ ಹಾಗೂ ಜಯ, ಸಂಸ್ಥೆಯ ಕಾರ್ಯಕರ್ತರುಗಳು, ಸ್ಥಳೀಯರಾದ ಬಿ.ಟಿ.ದಿನೇಶ್, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ರವಿಕುಮಾರ್ ಬಿ.ಎನ್ ಹಾಗೂ ಶಾಲೆಯ ಶಿಕ್ಷಕಿಯರು ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಉಪಾಧ್ಯಾಯನಿಯರಾದ ರಮ್ಲತ್ ಅವರು ಕಾರ್ಯಕ್ರಮ ನಿರೂಪಿಸಿ ಕೊನೆಗೆ ಎಲ್ಲರನ್ನು ವಂದಿಸಿದರು.…
ಸೋಮವಾರಪೇಟೆ ನ.18 NEWS DESK : ಗ್ರಾಮ ಪಂಚಾಯ್ತಿಗಳು ಹಾಗೂ ಗ್ರಾಮ ಸಭೆಗಳು ಬಲಿಷ್ಟವಾದವು ಅವುಗಳಿಗೆ ಇರುವ ಅಧಿಕಾರಗಳನ್ನು ತಿಳಿದುಕೊಳ್ಳಬೇಕೆಂದು ಶಾಸಕ ಮಂತರ್ ಗೌಡ ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ತಾಲ್ಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸಿದೆ ಎಂದರು. ಗ್ರಾಮ ಪಂಚಾಯತಿ ಹಾಗೂ ಗ್ರಾಮ ಸಭೆಗಳು ಅತ್ಯಂತ ಪ್ರಭಾವ ಶಾಲಿಯಾಗಿದೆ. ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರು ತಮ್ಮ ಅಧಿಕಾರವನ್ನು ಅರಿತು ಕರ್ತವ್ಯ ನಿರ್ವಹಿಸಿ, ನೀವುಗಳು ಮಾಡಿದ ನಿರ್ಣಯಗಳನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಎಂದರು. ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ 25,686.56 ಲಕ್ಷ ರೂಪಾಯಿಗಳ ಕ್ರಿಯಜೋಜನೆಗೆ ಅನುಮೋದನೆ ನೀಡಲಾಯಿತು.ಸಭೆಯಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸದಸ್ಯರುಗಳಾದ ನಿಡ್ತಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್, ಬ್ಯಾಡಗೊಟ್ಟಾ ಅಧ್ಯಕ್ಷೆ ಪಾವನ,…
ಬೆಂಗಳೂರು ನ.18 NEWS DESK : ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ ಬೆಂಗಳೂರಿನಲ್ಲಿ ಆಯೋಜಿಸಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ನ 28ನೇ ಆವೃತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಐಟಿ, ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕಿಯೋನಿಕ್ಸ್ ಅಧ್ಯಕ್ಷರಾದ ಶರತ್ ಬಚ್ಚೇಗೌಡ ಸೇರಿದಂತೆ ದೇಶ ವಿದೇಶಗಳಿಂದ ಆಗಮಿಸಿದ್ದ ತಂತ್ರಜ್ಞಾನ ವಲಯದ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮಡಿಕೇರಿ ನ.18 NEWS DESK : ಬೊಟ್ಟಿಯತ್ ನಾಡಿನ ಆರು ಗ್ರಾಮಗಳಾದ ಕುಂದಾ, ಮುಗುಟಗೇರಿ, ಹಳ್ಳಿಗಟ್ಟು, ಹುದೂರು, ಈಚೂರು, ಅರ್ವತೋಕ್ಲುವಿಗೆ ಸೇರಿದ ಕುಂದಾ ಬೆಟ್ಟದ ಶ್ರೀ ಈಶ್ವರ ದೇವಸ್ಥಾನದಲ್ಲಿ (ಬೊಟ್ಲಪ್ಪ) ಕಾರ್ತಿಕಾ ಸೋಮವಾರದ ಕೊನೆಯ ದಿನವಾದ ಇಂದು ಮನೆಯಪಂಡ ಹಾಗೂ ಸಣ್ಣುವಂಡ ಕುಟುಂಬದ ತಕ್ಕಾಮೆಯಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಿತು. ದೇವಸ್ಥಾನ ತಕ್ಕಮುಖ್ಯಸ್ಥರು ಸೇರಿದಂತೆ ವಿವಿಧ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಪಾಂಡವರ ಕಾಲದ ಇತಿಹಾಸವಿರುವ ಈ ದೇವಾಲಯವನ್ನು ವನವಾಸದಲ್ಲಿದ್ದ ಪಾಂಡವರೇ ನಿರ್ಮಿಸಿದರು ಎಂಬ ಪ್ರತೀತಿ ಇದೆ. ಇಲ್ಲಿ ತೀರ್ಥೋದ್ಭವ ಮರುದಿನ ಕಾವೇರಿ ತೀರ್ಥವನ್ನು ತಂದು ಅಭಿಷೇಕ ಮಾಡುವುದರ ಮೂಲಕ ಕೊಡಗಿನ ಮೊದಲ ಬೋಡ್ ನಮ್ಮೆಗೆ ಚಾಲನೆ ದೊರೆತರೆ, ನಂತರ ಕಾರ್ತಿಕ ಮಾಸದಲ್ಲಿ ನಾಲ್ಕು ಸೋಮವಾರ ಪೂಜೆ ಹೊರತುಪಡಿಸಿದರೆ ಇಲ್ಲಿ ನಿತ್ಯ ಪೂಜೆಗೆ ಅವಕಾಶ ಇಲ್ಲ. ಕಾರ್ತಿಕ ಮಾಸದಲ್ಲಿ ಕೊನೆಯ ಸೋಮವಾರ ಶ್ರದ್ಧಾಭಕ್ತಿಯಿಂದ ಪೂಜೆ ಹಾಗೂ ಅನ್ನದಾನ ನಡೆಯುತ್ತದೆ.
ಕುಶಾಲನಗರ ನ.18 NEWS DESK : ಕೊಡಗು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೋಮವಾರಪೇಟೆ ಆಶ್ರಯದಲ್ಲಿ 14 ಮತ್ತು 17ರ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಕೂಡಿಗೆ ಕ್ರೀಡಾಶಾಲಾ ಮೈದಾನದಲ್ಲಿ ನಡೆಯಿತು. ಓಟದ ಸ್ಪರ್ಧೆ, ಉದ್ದ ಜಿಗಿತ, ಭಾರದ ಗುಂಡು ಎಸೆತ, ಜವಲಿಂಗ್ ಹಾಗೂ ತಟ್ಟೆ ಎಸೆತ ಸೇರಿದಂತೆ ಇನ್ನಿತರ ಮೇಲಾಟ ಸ್ಪರ್ಧೆಗಳು ನಡೆದವು. 17ರ ವಯೋಮಿತಿಯ ಬಾಲಕರ ವಿಭಾಗದ ಮೂರು ಸಾವಿರ ಮೀಟರ್ ಓಟ ಸ್ಪರ್ಧೆಯಲ್ಲಿ ಗೋಣಿಕೊಪ್ಪ ಸೆಂಟ್ ಥಾಮಸ್ ಹೈಸ್ಕೂಲ್ ನ ವಿದ್ಯಾರ್ಥಿ ನಿಖಿಲ್ ಬಿ.ಕೆಟ್ಟಿ ಪ್ರಥಮ ಸ್ಥಾನ, ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಎಚ್.ಕಾರ್ತಿಕ್ ದ್ವಿತೀಯ ಸ್ಥಾನ, ಮಡಿಕೇರಿ ಸೆಂಟ್ ಮೈಕಲ್ ಹೈಸ್ಕೂಲ್ ನ ಎಚ್.ಎಸ್.ತರುಣ್ ತೃತೀಯ ಸ್ಥಾನ ಗಳಿಸಿದರು. ಬಾಲಕಿಯರ ವಿಭಾಗದಲ್ಲಿ ಕಳಾತ್ಮಾಡು ಲಯನ್ಸ್ ಹೈಸ್ಕೂಲ್ ನ ವಿದ್ಯಾರ್ಥಿನಿ ಎಂ.ವಿ.ವಿದ್ಯಾಪೊನ್ನಮ್ಮ ಪ್ರಥಮ ಸ್ಥಾನ,ಪೊನ್ನಂಪೇಟೆ ಕೆಪಿಎಸ್ ಶಾಲೆಯ ವಿದ್ಯಾರ್ಥಿ ಕೆ.ಎಸ್.ಧನ್ಯ ದ್ವಿತೀಯ ಸ್ಥಾನ ಹಾಗೂ ಭಾಗಮಂಡಲ ಅಟಲ್ ಬಿಹಾರಿ…
ದೆಹಲಿ ನ.18 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವರು ಮತ್ತು ಶಾಸಕ ಪೊನ್ನಣ್ಣ ಅವರಿಂದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಭೇಟಿ ಅವರನ್ನು ಭೇಟಿಯಾಗಿ ಹಲವು ಮಹತ್ವದ ಮಾತುಕತೆ ನಡೆಸಿದರು. ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಮದುರ್ಗ ಶಾಸಕರು ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ಪ್ರಮುಖರು ಉಪಸಿತರಿದ್ದರು.
ವಿರಾಜಪೇಟೆ ನ.18 NEWS DESK : ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಫಾತಿಮಾ ಉದ್ಘಾಟಿಸಿದರು. ಸುಮಾರು 11 ಶಾಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 40 ಶಿಕ್ಷಕರು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 24 ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಕಂಠಪಾಠ, ಧಾರ್ಮಿಕ ಪಠಣ, ಚಿತ್ರಕಲೆ ಕ್ಲೇ ಮಾಡಲಿಂಗ್, ದೇಶಭಕ್ತಿ ಗೀತೆ, ಪ್ರಬಂಧ, ರಸಪ್ರಶ್ನೆ ಇನ್ನಿತರ ವಿಷಯಗಳಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರು ಹಾಗು ದಾನಿಗಳು ಆದ ಸಲಾಂ ಎಂ.ಕೆ. ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಬಹುಮಾನಕ್ಕಿಂತ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು. ಗ್ರಾಮ ಪಂಚಾಯಿತಿ ಸದಸ್ಯರಾದ ಸುಬೀರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿಗಳು ಉತ್ತಮ ವೇದಿಕೆಯಾಗಿದ್ದು, ಇದನ್ನು ಸದುಪಯೋಗ ಪಡೆಯಬೇಕಾಗಿದೆ ಎಂದು ನುಡಿದರು. ಚೆಯ್ಯಂಡಾಣೆ ಪ್ರಾರ್ಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಕೆ.ಎಂ.ವಿಮಲಾ ಮತ್ತು ಮೂರ್ನಾಡು ಶಾಲಾ…
ಮಡಿಕೇರಿ ನ.18 NEWS DESK : ಶ್ರೀಮಂಗಲ ಜೆ.ಸಿ.ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳು 2025-26 ನೇ ಸಾಲಿನ ಜಿಲ್ಲಾಮಟ್ಟದ ಕ್ರೀಡಾಕೂಟ ದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಟ್ ಪುಟ್ ಅನನ್ಯ ಎಂ. ಪ್ರಥಮ, ಎತ್ತರ ಜಿಗಿತ ಹರ್ಷಿತ ಕೆ. ಹೆಚ್ ಪ್ರಥಮ, ಕರಾಟೆ ವೈಷ್ಣವ್ ಪಿ. ಎಸ್. ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪದ್ಯಾಯರು, ಆಡಳಿತ ಮಂಡಳಿ, ಪೋಷಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ನ.18 NEWS DESK : ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೇಟಿಕ್ಸ್ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಾದ ಅಶಿಕ್ ಮಂದಣ್ಣ ಕೆ. ಪಿ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ, ಜೀವ ನಾಣಯ್ಯ 400 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಶರಣ್ ಚಂಗಪ್ಪ ಪಿ. ಸಿ ತಟ್ಟೆ ಎಸೆತದಲ್ಲಿ ಮೂರನೇ ಸ್ಥಾನ ಪಡೆದುಕೊಂಡಿರುತ್ತಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಶಾಲಾ ವ್ಯವಸ್ಥಾಪಕಿ ನಾಟೋಳಂಡ ಶ್ರೀಮತಿ ಸರೋಜಿನಿ, ಶಾಲಾ ಮುಖ್ಯ ಶಿಕ್ಷಕರಾದ ಕುದುಪಜೆ ಕವನ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸ್ವರೂಪ ಕೆ. ಬಿ. ದೈಹಿಕ ಶಿಕ್ಷಣ ಶಿಕ್ಷಕಿ ಕರವಂಡ ಸೀಮಾ ಗಣಪತಿ ಇದ್ದಾರೆ.






