ಸೋಮವಾರಪೇಟೆ, ನ.18 NEWS DESK : ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಮಹಾಸಭಾದ ಸೋಮವಾರಪೇಟೆ ಘಟಕ ಹಾಗೂ ಜಿಲ್ಲಾ ಯುವ ಘಟಕದ ಸಹಯೋಗದೊಂದಿಗೆ ಸೋಮವಾರಪೇಟೆ ತಾಲ್ಲೂಕಿನ ಗೌಡಳ್ಳಿ ಬಿ.ಜಿ.ಎಸ್.ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಸಮುದಾಯದ ಕ್ರೀಡಾಕೂಟಗಳ ಮಹತ್ವ ಕುರಿತು ಮಾತನಾಡಿದ ಅರಮೇರಿ- ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿಸ್ತು- ಸಂಯಮ, ಉತ್ತಮ ನಾಯಕತ್ವ ಗುಣ , ಪರಸ್ಪರ ಪ್ರೀತಿ- ವಿಶ್ವಾಸ , ಉತ್ತಮ ನಾಯಕತ್ವ ಗುಣ ಬೆಳೆಸಲು ಹಾಗೂ ಸಹಬಾಳ್ವೆ ಜೀವನಕ್ಕೆ ಕ್ರೀಡೆಗಳು ತುಂಬಾ ಸಹಕಾರಿಯಾಗಿವೆ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಪಿ.ಚಂದ್ರಶೇಖರ್ ಮಾತನಾಡಿ, ಯುವ ಜನಾಂಗ ಕ್ರೀಡಾ ಸ್ಪೂರ್ತಿ ಬೆಳೆಸಿಕೊಂಡು ಉತ್ತಮ ಜೀವನ ಕಂಡುಕೊಳ್ಳಬೇಕು. ಇಂತಹ ಕ್ರೀಡಾಕೂಟಗಳು ಪರಸ್ಪರ ಕ್ರೀಡಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದರು. ಕೊಡ್ಲಿಪೇಟೆ ಕಲ್ಮಠದ ಮಹಾಂತ ಸ್ವಾಮೀಜಿ ಮಾತನಾಡಿ,ಗ್ರಾಮೀಣ ಕ್ರೀಡೆಗಳನ್ನು ಉಳಿಸಲು ಮತ್ತು ಪರಸ್ಪರ ಪ್ರೀತಿ, ವಿಶ್ವಾಸ…
ಲೇಖಕ: admin
ಮಡಿಕೇರಿ ನ.18 NEWS DESK : ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮವು ನ.19 ರಿಂದ 25 ರವರೆಗೆ ನಡೆಯಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ರಾಜಕೀಯ) ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಕೆ ಸಂದೀಪ್ ಅವರು ತಿಳಿಸಿದ್ದಾರೆ.
ಮಡಿಕೇರಿ NEWS DESK ನ.17 : ವಿರಾಜಪೇಟೆ ಗೌಡ ಸಮಾಜಕ್ಕೆ ಭೂಮಿಯನ್ನು ದಾನವಾಗಿ ನೀಡಿದ ಸಮಾಜ ಸೇವಕ ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಹಾಗೂ ಜಾನಕಿ ದಂಪತಿಗಳ ಪುತ್ರರಾದ ಡಾ.ಚಿದಾನಂದ ಗೌಡರು ಮತ್ತು ಡಾ.ರೇಣುಕಾ ಪ್ರಸಾದ್ ಅವರಿಗೆ ಅಭಿನಂದನಾ ಸಮಾರಂಭ ವಿರಾಜಪೇಟೆ ಗೌಡ ಸಮಾಜದಲ್ಲಿ ನಡೆಯಿತು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಡಾ.ಚಿದಾನಂದ ಅವರು ಸುಮಾರು 20 ವರ್ಷಗಳಿಂದ ಬಾಕಿ ಉಳಿದಿದ್ದ ಭೂಮಿಯ ನೋಂದಣಿ ಪ್ರಕ್ರಿಯೆಯನ್ನು ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ ಹಾಗೂ ಅವರ ತಂಡವು ನಮ್ಮೊಂದಿಗೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ. ಇದೀಗ ಜಾಗ ಗೌಡ ಸಮಾಜದ ಅಧೀನದಲ್ಲಿದ್ದು, ಶೀಘ್ರ ಉತ್ತಮವಾದ ಗೌಡ ಸಮಾಜವನ್ನು ನಿರ್ಮಿಸಿ ಎಂದು ಕರೆ ನೀಡಿದರು. ನೂತನ ಕಟ್ಟಡ ನಿರ್ಮಾಣದ ಸಂದರ್ಭ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಸನ್ಮಾನವನ್ನು ತಂದೆ, ತಾಯಿಯರಿಗೆ ಅರ್ಪಿಸುವುದಾಗಿ ಹೇಳಿದರು. ಡಾ.ಕೆ.ವಿ.ರೇಣುಕಾ ಪ್ರಸಾದ್ ಅವರು ಮಾತನಾಡಿ ಗೌಡ ಸಮಾಜಕ್ಕೆ ದೊರೆತ್ತಿರುವ ಜಾಗದಲ್ಲಿ ಸುಂದರವಾದ ಸಮಾಜ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ…
ಮಡಿಕೇರಿ ನ.17 NEWS DESK : ಶತ ಶತಮಾನಗಳಿಂದ ತಾರತಮ್ಯ, ದೌರ್ಜನ್ಯಕ್ಕೆ ಒಳಗಾಗಿ, ಅಭಿವೃದ್ಧಿಯನ್ನೇ ಕಾಣದಿರುವ ಸಮುದಾಯಗಳಿಗೆ ಇರುವ ಎಸ್‍ಸಿ ಮತ್ತು ಎಸ್‍ಟಿ ಪಟ್ಟಿಯಲ್ಲಿ ಬಲಾಢ್ಯ ಸಮುದಾಯಗಳು ಸೇರ್ಪಡೆಗೊಳ್ಳಲು ಮುಂದಾಗುತ್ತಿರುವ ಪ್ರಯತ್ನಗಳು ಅವೈಜ್ಞಾನಿಕ ಮತ್ತು ಅಸಂಬದ್ಧವೆಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಡಾ.ಎಸ್.ವೈ.ಗುರುಶಾಂತ್ ಅಭಿಪ್ರಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕುರುಬ ಮತ್ತು ಕೊಡವ ಸಮುದಾಯದ ಕೆಲವರು ತಮ್ಮ ಸಮುದಾಯವನ್ನು ಎಸ್‍ಟಿ ಪಟ್ಟಿಗೆ ಸೇರ್ಪಡೆಮಾಡುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಇದರಲ್ಲಿ ಕೊಡವ ಸಮುದಾಯವನ್ನು ಎಸ್‍ಟಿ ಪಟ್ಟಿಯೊಂದಿಗೆ ಭೌಗೋಳಿಕ ರಾಜಕೀಯ ಸ್ಥಾನಮಾನವನ್ನು ಮತ್ತು ಸ್ವಾಯತ್ತತೆಯನ್ನು ಕಲ್ಪಿಸಲು ಆಯೋಗ ರಚಿಸುವಂತೆ ಸಿಎನ್‍ಸಿ ಸಂಘಟನೆ ರಾಜ್ಯ ಉಚ್ಚನ್ಯಾಯಾಲಯದಲ್ಲಿ ಮನವಿಯನ್ನು ಸಲ್ಲಿಸಿದೆಯೆಂದು ಮಾಹಿತಿ ನೀಡಿದರು. ಕೊಡವ ಸಮುದಾಯದ ಈ ಕೋರಿಕೆಯ ಬಗ್ಗೆ ಕೊಡಗಿನ ದಲಿತ, ಆದಿವಾಸಿ ಸಂಘಟನೆಗಳು ಹಾಗೂ ಕೊಡವ ಭಾಷಿಕ ಸಮುದಾಯಗಳು ತಮ್ಮ ಸ್ಪಷ್ಟ ವಿರೋಧವನ್ನು ವ್ಯಕ್ತಪಡಿಸಿವೆ ಮಾತ್ರವಲ್ಲ, ಈ ಬಗ್ಗೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಆಕ್ಷೇಪವನ್ನು ವ್ಯಕ್ತಪಡಿಸಿರುವುದಾಗಿ ಸ್ಪಷ್ಟಪಡಿಸಿದರು.…
ಮಡಿಕೇರಿ ನ.17 NEWS DESK : ಇದೇ ನ.21 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಾಗೂ ನ.22 ರಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಧಿಕಾರಿಗಳು ಅಂಕಿ ಅಂಶಗಳ ಸಹಿತ ನಿಖರ ಮಾಹಿತಿ ಒದಗಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಪೂರ್ವಸಿದ್ಧತೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಈ ಕಾರ್ಯಕ್ರಮಗಳು ಸರ್ಕಾರದ ಮಹತ್ವಾಕಾಂಕ್ಷೆ ಆಗಿದೆ. ಈ ಸಂಬಂಧ ಅಂಕಿ ಅಂಶಗಳ ಸಹಿತ ಮಾಹಿತಿ ಒದಗಿಸಬೇಕು. ಅಂಕಿ ಅಂಶಗಳು ತಾಳೆಯಾಗುವಂತೆ…
ಮಡಿಕೇರಿ ನ.17 NEWS DESK : ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿದಂತೆ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕುರಿತಂತೆ ‘ಕಲಾಜಾಥಾ ಪ್ರಚಾರ ಆಂದೋಲನ’ ವಾಹನಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಮತ್ತು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಪ್ರತ್ಯೇಕವಾಗಿ ಚಾಲನೆ ನೀಡಿದರು. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಹಾಗೂ ಜಿಲ್ಲಾ ಪಂಚಾಯಿತಿ ಭವನದ ಆವರಣದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಹಾಗೂ ಜಿ.ಪಂ.ಸಿಇಒ ಅವರು ಚಾಲನೆ ನೀಡಿದರು. ಈ ಸಂದರ್ಭ ಗ್ಯಾರಂಟಿ ಯೋಜನೆ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್, ಪಿ.ಆರ್.ಪಂಕಜ, ಸದಸ್ಯರಾದ ಬಿ.ಒ.ಅಣ್ಣಯ್ಯ, ಸುಂದರ, ಕೆ.ಎಂ.ಬಶೀರ್, ಧನ್ಯ, ಕೆ.ಜಿ.ಫೀಟರ್, ಮಂದ್ರಿರ ಮೋಹನ್ ದಾಸ್, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ರಾಮಚಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್,…
ಮಡಿಕೇರಿ ನ.17 NEWS DESK : ಉತ್ತರ ಕನ್ನಡ ಕಿವುಡರ ಸಂಘದ ವತಿಯಿಂದ ನ.20 ಮತ್ತು 21 ರಂದು ನಡೆಯಲಿರುವ 15ನೇ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟದಲ್ಲಿ ಕೊಡಗು ತಂಡ ಭಾಗವಹಿಸಲಿದ್ದು, ದಾನಿಗಳು ಸಹಕರಿಸುವಂತೆ ಸಂಘದ ಉಪಾಧ್ಯಕ್ಷ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉತ್ತರ ಕನ್ನಡ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲಾ ಕಿವುಡರ ಸಂಘ ಕೊಡಗು ಜಿಲ್ಲೆಯನ್ನು ಪ್ರತಿಧಿಸಲಿದೆ. ಈ ನಿಟ್ಟಿನಲ್ಲಿ ಅನುದಾನದ ಅಗತ್ಯ ಇದ್ದು, ದಾನಿಗಳು ಸಹಕರಿಸುವಂತೆ ಸಂಘದ ಕೆ.ಕೆ.ಶಂಕರ ನಾರಾಯಣ ಕೋರಿದ್ದಾರೆ. ಆಸಕ್ತರು ಸಂಘದ ಖಾತೆ ಸಂಖ್ಯೆ AAGAK2464F, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಖಾತೆ ಸಂಖ್ಯೆ : 520101254608758, ಐಎಫ್‍ಎಸ್‍ಸಿ : UBIN0900087 ಹಣ ಪಾವತಿಸಬಹುದಾಗಿದೆ.
ಮಡಿಕೇರಿ ನ.17 NEWS DESK : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಕಂದಾಯ ಗ್ರಾಮಗಳಾದ ಕಾಲೂರು ಹಾಗೂ ಹಮ್ಮಿಯಾಲ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳಾಗಿ ಘೋಷಿಸುವ ಕುರಿತು ಗ್ರಾಮ ಪಂಚಾಯತಿಯಲ್ಲಿ ಈಗಾಗಲೇ ಸಭೆ ನಡೆಸಿ ತೀರ್ಮಾನಿಸಿದಂತೆ ಕಾಲೂರು ಗ್ರಾಮಕ್ಕೆ ತಂಬಾಕು ಕೋಶದ ತಂಡ ಭೇಟಿ ನೀಡಿ ಮಹಿಳಾ ಸಂಘದ ಸದಸ್ಯರುಗಳಿಗೆ ಈ ಕುರಿತು ಮಾಹಿತಿ ನೀಡಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಅವರು ಮಾತನಾಡಿ ತಂಬಾಕು ಸೇವನೆಯಿಂದ ಕ್ಯಾನ್ಸರ್ ನಂತಹ ಸಾಕಷ್ಟು ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಬಗ್ಗೆ ಮತ್ತು ದುಷ್ಪರಿಣಾಮಗಳ ಕುರಿತು ವಿವರಣೆ ನೀಡಿದರು. ಮನೆಗಳಿಂದಲೇ ತಂಬಾಕು ಮುಕ್ತಗೊಳಿಸಲು ಮಹಿಳೆಯರು ಮುಂದೆ ಬರುವಂತೆ ತಿಳಿಸಿ, ಮುಂದಿನ ಪೀಳಿಗೆಗಳಿಗೆ ಆರೋಗ್ಯಕರ ವಾತಾವರಣ ಸೃಷ್ಟಿಸಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಲಾಯಿತು. ಗ್ರಾಮದಲ್ಲಿ ಎಲ್ಲರ ಸೇರಿ ತಂಬಾಕು ಮಾರಾಟ ಮತ್ತು ಉತ್ಪನ್ನಗಳಿಗೆ ಅವಕಾಶ ನೀಡದೆ ಮಾದರಿ ಗ್ರಾಮವನ್ನಾಗಿಸಲು ಎಲ್ಲರ ಸಹಕಾರ ಕೋರಿದರು. ಜಿಲ್ಲಾ…
ಮಡಿಕೇರಿ ನ.17 NEWS DESK : ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ 5/2025ರಲ್ಲಿ ನೀಡಿರುವ ನಿರ್ದೇಶನದಂತೆ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಸಂಸ್ಥೆಯ ಆವರಣದಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಅದನ್ನು ಪರಿಶೀಲಿಸಿ ತಕ್ಷಣ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಮಡಿಕೇರಿ ನಗರಸಭೆ ಆರೋಗ್ಯ ಶಾಖೆ, ಆರೋಗ್ಯ ನಿರೀಕ್ಷಕರು ಮೊಬೈಲ್ ಸಂಖ್ಯೆ 9900526762 ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡುವಂತೆ ನಗರಸಭೆಯ ಪೌರಾಯುಕ್ತ ಎಚ್.ಆರ್.ರಮೇಶ್ ಅವರು ತಿಳಿಸಿದ್ದಾರೆ. ತಮ್ಮ ಸಂಸ್ಥೆಯ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರದೇಶ ನಿಯಂತ್ರಿಸಲು ಕ್ರಮ ವಹಿಸುವುದು. ಮಡಿಕೇರಿ ನಗರಸಭೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂಧಿಸುವುದನ್ನು ಮೇಲ್ವಿಚಾರಣೆ ಮಾಡಲು ತಮ್ಮ ಸಂಸ್ಥೆ ವತಿಯಿಂದ ಒಬ್ಬ ಜವಾಬ್ದಾರಿಯುತ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ…
ಮಡಿಕೇರಿ ನ.17 NEWS DESK : ಕೊಡವ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 4ನೇ ವರ್ಷದ ಐಪಿಎಲ್ ಮಾದರಿಯ ಕೊಡವ ಪ್ರೀಮಿಯರ್ ಲೀಗ್ ಸೀಸನ್-4 ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಂಜಿಗೇರಿ ನಾಡ್ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದೆ. ಕೊಡವ ನೈಟ್ಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರೆ, ಎಂಟಿಬಿ ರಾಯಲ್ಸ್ ತೃತೀಯ ಮತ್ತು ಕೊಡವ ಬಂಬಂಗ ತಂಡ ನಾಲ್ಕನೇ ಸ್ಥಾನ ಪಡೆದವು. ಪ್ರಥಮ ವಿಜೇತ ತಂಡಕ್ಕೆ ರೂ.2 ಲಕ್ಷ, ದ್ವಿತೀಯ ರೂ.1 ಲಕ್ಷ, ತೃತೀಯ ರೂ.50 ಸಾವಿರ, ನಾಲ್ಕನೇ ವಿಜೇತ ತಂಡಕ್ಕೆ 25 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ಸೇರಿದಂತೆ ವೈಯುಕ್ತಿಕ ಬಹುಮಾನ ನೀಡಲಾಯಿತು. ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಕ್ರೀಡಾ ಜಿಲ್ಲೆ ಕೊಡಗಿನಲ್ಲಿ ಈ ರೀತಿಯ ಕ್ರೀಡಾಕೂಟಗಳು ಹೆಚ್ಚು ಹೆಚ್ಚಾಗಿ ನಡೆಯುತ್ತಿರುವುದು ಶ್ಲಾಘನೀಯ. ಜಿಲ್ಲೆಯ ಕ್ರೀಡಾ ಕ್ಷೇತ್ರದ…






