ಮಡಿಕೇರಿ ನ.17 NEWS DESK : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26. ಭಾಗಮಂಡಲ ಶ್ರೀ ಆದಿಚುಂಚನಗಿರಿ ಸಂಸ್ಥಾನ ಆಶ್ರಯದ ಕಾವೇರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಏಳು ಪ್ರಥಮ ಬಹುಮಾನಗಳ ಸಮಗ್ರ ಪ್ರಶಸ್ತಿ ಯೊಂದಿಗೆ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ವಿಜೇತರೊಂದಿಗೆ ಪ್ರಾಂಶುಪಾಲರಾದ ಕೆ.ಜೆ.ದಿವಾಕರ್ ಮತ್ತು ಆಡಳಿತ ಮೇಲ್ವಿಚಾರಣ ಅಧಿಕಾರಿ ಕೀರ್ತಿ ಮತ್ತು ಗುರು ವೃಂದದವರು ಹಾಜರಿದ್ದರು. :: ಪ್ರಥಮ ಸ್ಥಾನ ವಿಜೇತರು :: ಭಾವಗೀತೆ :: ಸುಮಿತ್, ಜನಪದ ಗೀತೆ -ಲಾವಣ್ಯ, ಧಾರ್ಮಿಕ ಪಠಣ ಸಂಸ್ಕೃತ- ಪುನೀತ ಬಿಜೆ, ಧಾರ್ಮಿಕ ಪಠಣ ಅರೇಬಿಕ್- ನಜಾ ಫಾತಿಮಾ, ಕವನ ವಾಚನ- ಫೌಜಾನ, ಚರ್ಚಾ ಸ್ಪರ್ಧೆ -ಲಕ್ಷ್ಮಿ ಹೆಚ್ ಆರ್, ಚಿತ್ರಕಲೆ- ಅಭಿಷೇಕ್. :: ದ್ವಿತೀಯ ಬಹುಮಾನ ವಿಜೇತರು :: ಗಜಲ್- ಮಹಮ್ಮದ್ ಮಿಸ್ಹಬ್. ಆಶುಭಾಷಣ ಅರಸಿ ಡಿಜೆ, ರಸಪ್ರಶ್ನೆ -ಭುವನ ಮತ್ತು ಪುಣ್ಯ ಎಸ್ ಜಿ. ಕವ್ವಾಲಿ- ಮಹಮ್ಮದ್ ಮಿಸ್ಹಬ್ ತಂಡ. ::…
ಲೇಖಕ: admin
ಪೊನ್ನಂಪೇಟೆ ನ.17 NEWS DESK : ಕ್ರೀಡೆಯಲ್ಲಿ ಸಾಧಿಸಿದ ಸಾಧನೆಗಾಗಿ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ.ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ ಸಾಧನೆಗಾಗಿ ಮನೋಜ್ ಅವರನ್ನು ಬಿರ್ಸಾಮುಂಡಾ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸನ್ಮಾನಿಸಲಾಯಿತು. ಹಾಡಿಯಲ್ಲಿ ಹುಟ್ಟಿ ಬೆಳೆದು, ಇದೀಗ ತಿತಿಮತಿಯ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮನೋಜ್ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಹಿನ್ನೆಲೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಯೋಗೇಶ್ ಅವರು ಸರ್ಕಾರದ ಪರವಾಗಿ ಸನ್ಮಾನಿಸಿ ಅಭಿನಂದಿಸಿದರು.
ಗೋಣಿಕೊಪ್ಪ ನ.17 NEWS DESK : ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆ ಎಫ್‍ಕೆಸಿಸಿಐ ನೀಡುವ ಅತ್ಯುತ್ತಮ ಮಹಿಳಾ ಉದ್ಯಮಿ ಪ್ರಶಸ್ತಿಗೆ ಗೋಣಿಕೊಪ್ಪದ ಚೇದಂಡ ಸುಮಿ ಸುಬ್ಬಯ್ಯ ಆಯ್ಕೆಯಾಗಿದ್ದಾರೆ. ನ.19 ರಂದು ಬೆಂಗಳೂರಿನ ಎಫ್‍ಕೆಸಿಸಿಐ ಆಚರಿಸುವ ಅಂತರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನದಂದು ಪ್ರಶಸ್ತಿ ಪ್ರದಾನ ನಡೆಯಲಿದೆ. ಸುಮಿ ಸುಬ್ಬಯ್ಯ ಅವರು, ಕಳೆದ 40 ವರ್ಷಗಳಿಂದ ವ್ಯಾಪಾರ ಉದ್ಯಮದಲ್ಲಿ ತೊಡಗಿಸಿಕೊಂಡ ಪ್ರಥಮ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಸುಮಿ ಸುಬ್ಬಯ್ಯ, ಸಮಾಜಕ್ಕೆ ತನ್ನದೇ ಆದ ಸೇವೆಯನ್ನು ಸಲ್ಲಿಸುತ್ತಾ ಪ್ರಭಾವ ಬೀರಿದ್ದಾರೆ.
ಮಡಿಕೇರಿ ನ.17 NEWS DESK : ಬಿಹಾರ ಚುನಾವಣಾ ಹಂತದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ನೀಡಿದ ಹೇಳಿಕೆಗೆ ವಿರುದ್ಧವಾಗಿ, ಅವರನ್ನು ಮತ್ತು ಅವರ ಕಟುಂಬದವರನ್ನು ಸಾಮಾಜಿಕ ಜಾಲ ತಾಣದಲ್ಲಿ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಹಂಸ ಕೋಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಜನಾನುರಾಗಿಯಾಗಿರುವ ಶಾಸಕರನ್ನು ಮುಂದಿನ ದಿನಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಘಟನೆ ಮುಂದುವರಿದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಅವರು ನೀಡಿದರು. ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಗೌರೀಶ್ ರೈ ಮಾತನಾಡಿ, ಎಲ್ಲಾ ಸಮುದಾಯವರನ್ನು ಸಮಾನವಾಗಿ ಕಾಣುವ ಮೂಲಕ, ಅವರ ಬೇಡಿಕೆಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅತ್ಯಂತ ಕೀಳು ಮಟ್ಟದ ಭಾಷೆಯನ್ನು ಬಳಿಸಿ ನಿಂದಿಸಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪರವಂಡ ಸಿರಾಜ್ ಮಾತನಾಡಿ,…
ಮಡಿಕೇರಿ ನ.16 NEWS DESK : ಮುಲ್ಲೇಂಗಡ ಕೊಡವ ಕುಟುಂಬದ ವತಿಯಿಂದ ಇದೇ ಪ್ರಥಮ ಬಾರಿಗೆ ಕೊಡವ ಕುಟುಂಬಗಳ ನಡುವಣ ‘ಕಬಡ್ಡಿ ನಮ್ಮೆ-2026’, ದಕ್ಷಿಣ ಕೊಡಗಿನ ಕಂಡಂಗಾಲ ಗ್ರಾಮದಲ್ಲಿ ಮುಂದಿನ ಸಾಲಿನ ಏ.2ರಿಂದ 4ರವರೆಗೆ ನಡೆಯಲಿದೆಯೆಂದು ಪಂದ್ಯಾವಳಿ ಆಯೋಜನಾ ಸಮಿತಿ ಸಂಚಾಲಕರಾದ ಮುಲ್ಲೇಂಗಡ ಮದೋಷ್ ಪೂವಯ್ಯ ತಿಳಿಸಿದ್ದಾರೆ. ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೊಡವ ಕುಟುಂಬಗಳ ನಡುವೆ ಆರಂಭಿಕವಾಗಿ ಹಾಕಿ ಪಂದ್ಯಾವಳಿ ಆರಂಭವಾದ ಬಳಿಕ, ಕ್ರಿಕೆಟ್, ಹಗ್ಗಜಗ್ಗಾಟ, ಬೊಡಿ ನಮ್ಮೆ ಆರಂಭಗೊಂಡಿತು. ಇದೀಗ ಮೊದಲ ಪ್ರಯತ್ನವಾಗಿ ಕೊಡವ ಕುಟುಂಬಗಳ ನಡುವಿನ ಕಬಡ್ಡಿ ಪಂದ್ಯಾವಳಿಯನ್ನು ಕಂಡಂಗಾಲದ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗುತ್ತಿದೆಯೆಂದು ಮಾಹಿತಿ ನೀಡಿದರು. 50 ತಂಡಗಳ ನಿರೀಕ್ಷೆ :: ಕೊಡವ ಕುಟುಂಬಗಳ ನಡುವಣ ಕಬಡ್ಡಿ ಪಂದ್ಯಾವಳಿಯಲ್ಲಿ ಸುಮಾರು 50 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿ ‘ಮ್ಯಾಟ್’ನ್ನು ಬಳಸಲಾಗುತ್ತದೆ ಮತ್ತು ಪಂದ್ಯಗಳನ್ನು ನೋಂದಾಯಿತ ಕಬಡ್ಡಿ ತೀರ್ಪುಗಾರರು ನಡೆಸಿಕೊಡಲಿದ್ದಾರೆಂದು ಸ್ಪಷ್ಟಪಡಿಸಿದರು. ಕೊಡವ ಕುಟುಂಬದ ಕಬಡ್ಡಿ ಪಂದ್ಯಾವಳಿಯ ಪ್ರತಿ…
ಮಡಿಕೇರಿ ನ.17 NEWS DESK : ಕಲೆ, ಸಾಹಿತ್ಯದ ಬಗ್ಗೆ ಮಕ್ಕಳಲ್ಲಿ ಅಭಿರುಚಿ ಹೆಚ್ಚಿಸಬೇಕು ಮತ್ತು ಪರಿಸರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಕಿರಿಕೊಡ್ಲಿ ಮಠದ ಪೀಠಾಧ್ಯಕ್ಷರಾದ ಶ್ರೀಸದಾಶಿವ ಸ್ವಾಮಿ ಕರೆ ನೀಡಿದ್ದಾರೆ. ಮಡಿಕೇರಿ ನಗರದ ಮಹದೇವಪೇಟೆಯ ಎಸ್.ಎಸ್ ಆಸ್ಪತ್ರೆ ಮತ್ತು ಆರ್‍ಕೆ ಲ್ಯಾಬ್ ವತಿಯಿಂದ ವಿದ್ಯಾರ್ಥಿಗಳಿಗಾಗಿ 3ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 3 ವಿಭಾಗಗಳಲ್ಲಿ ನಡೆಯಿತು. ಎಎಲ್‍ಜಿ ಕ್ರೆಸೆಂಟ್ ಶಾಲೆಯಲ್ಲಿ ನಡೆದ ಸ್ಪರ್ಧೆಯ ಸಮಾರೋಪ ಮತ್ತು ಬಹುಮಾನ ವಿತರಣಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಸ್ವಾಮೀಜಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಇಂತಹ ಕಾರ್ಯಚಟುವಟಿಕೆಗಳಿಂದ ಮಕ್ಕಳಲ್ಲಿ ಕಲೆ ಮತ್ತು ಸಾಹಿತ್ಯದ ಬಗ್ಗೆ ಅಭಿರುಚಿ ಹೆಚ್ಚಾಗುತ್ತದೆ, ಅಲ್ಲದೆ ಪ್ರಕೃತಿಯ ಮೇಲೆ ಪ್ರೀತಿ ಮೂಡುತ್ತದೆ ಎಂದರು. ದಿನದಿಂದ ದಿನಕ್ಕೆ ಪ್ರಕೃತಿಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ, ಅದೇ ರೀತಿ ನಮ್ಮ ಜೀವನ ಶೈಲಿಯೂ ಬದಲಾವಣೆಯಾಗುತ್ತಿದೆ. ಅದು ಸಹಜ ಪ್ರಕ್ರಿಯೆ, ಆದರೆ ಬದಲಾವಣೆಗಳು ಮಾದರಿಯುಕ್ತವಾದಾಗ ಮಾತ್ರ ಒಂದು ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಎಂದು…
ಸೋಮವಾರಪೇಟೆ ನ.17 NEWS DESK : ದೆಹಲಿಯಲ್ಲಿ ಬಾಂಬ್ ಸ್ಪೋಟಿಸಿ ಅಮಾಯಕರ ಸಾವಿಗೆ ಕಾರಣರಾದ ಭಯೋತ್ಪಾದಕರ ನಡೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ್ ಬೋಜೇಗೌಡ ಅವರು, ದೇಶದೊಳಗಿನ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಜರುಗಿಸುವುದರೊಂದಿಗೆ ಭವಿಷ್ಯದಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿದರು. ಭಯೋತ್ಪಾದಕ ಕೃತ್ಯಗಳು ನಡೆದಾಗ ಅದನ್ನು ಸಂಭ್ರಮಿಸುವ ಪಾಕಿಸ್ತಾನಿ ಪ್ರೇರಿತ ಮೂಲಭೂತವಾದಿ ಭಯೋತ್ಪಾದಕರು ದೇಶದೊಳಗೂ ಇದ್ದಾರೆ. ಇವರುಗಳನ್ನು ಮಟ್ಟ ಹಾಕುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ. ಇಲಾಖೆಯೊಂದಿಗೆ ಪ್ರಜ್ಞಾವಂತ ಸಮಾಜ ಕೈಜೋಡಿಸಬೇಕಿದೆ ಎಂದರು. ದೆಹಲಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ ಅಮಾಯಕರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಈ ಸಂದರ್ಭ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಘಟಕದ ಸುಭಾಷ್ ತಿಮ್ಮಯ್ಯ, ತಾಲೂಕು ಸಂಯೋಜಕ್ ಎಂ.ಬಿ.…
ನಾಪೋಕ್ಲು ನ.17 NEWS DESK : ಚೆರಿಯ ಪರಂಬುವಿನ ಕಕ್ಕುಂದ ಕಾಡಿನ ಕರಿ ಚಾಮುಂಡಿ ದೇವಾಲಯಕ್ಕೆ ತೆರಳುವ ರಸ್ತೆಯ ಕಾಮಗಾರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಚಾಲನೆ ನೀಡಿದರು. ಶಾಸಕರ 5 ಲಕ್ಷ ರೂ.ಅನುದಾನದಲ್ಲಿ ಕಾಂಕ್ರೀಟ್ ರಸ್ತೆಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬಹು ದಿನಗಳ ಬೇಡಿಕೆಯನ್ನು ಈಡೇರಿಸಿದ ಶಾಸಕರ ಕಾಳಜಿಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಡಿಸಿಸಿ ಉಪಾಧ್ಯಕ್ಷ ಎಮ್.ಹೆಚ್ ಅಬ್ದುಲ್ ರೆಹಮಾನ್, ಗ್ರಾಮ ಪಂಚಾಯತಿ ಸದಸ್ಯ ಕೆ.ಎ.ಇಸ್ಮಾಯಿಲ್, ಮಾಚೇಟಿರ ಕುಸು ಕುಶಾಲಪ್ಪ, ತಿಮ್ಮಯ್ಯ, ಯುವಕರು ಕಾಂಗ್ರೆಸ್ಸಿನ ಅನುಷ್ಠಾನ ಸಮಿತಿ ಸದಸ್ಯ ಸಿರಾಜ್, ಎಮ್ ಎಚ್ ಉಭೈದು. ಟಿ.ಎ.ಇಬ್ರಾಹಿಂ. ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲ, ಖಜಾಂಚಿ ಸೂರ್ಯಕುಮಾರ್, ಭವಾನಿ, ಆಶಾಲತಾ, ವಸಂತ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ನ.19 NEWS DESK : ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ, ಸಮಾಜ ಸೇವಕ ಹರಪಳ್ಳಿ ರವೀಂದ್ರ ಅಪಾರ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು. ಸೋಮವಾರಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ, ಮಾಜಿ ಸಚಿವ ಅಪ್ಪಚ್ಚು ರಂಜನ್, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಪಕ್ಷದ ನಾಯಕರು ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಪಕ್ಷದ ಕಾರ್ಯಕರ್ತರು ಹಾಜರಿದ್ದರು.
ನಾಪೋಕ್ಲು ನ.17 NEWS DESK : ಮೂರ್ನಾಡು ವಿದ್ಯಾ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಯಿತು. ವಿದ್ಯಾ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ನೆರವಂಡ ಸೋಮಣ್ಣ ಬೊಳ್ಯವ್ವ ಜ್ಞಾಪಕಾರ್ಥ ಆಯೋಜಿಸಿದ ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಚೌರಿರ ಡಾ.ಜಗತ್ ತ್ತಿಮ್ಮಯ್ಯ ವಹಿಸಿದ್ದರು. ಕಾರ್ಯಕ್ರಮಕ್ಕೆ ಜಿಲ್ಲೆಯ ಒಟ್ಟು 14 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಆರು ತಂಡಗಳು ಅಂತಿಮವಾಗಿ ಆಯ್ಕೆಯಾದರು. ಇದರಲ್ಲಿ ಪ್ರಥಮ ಬಹುಮಾನವನ್ನು ಕಳತ್ಮಾಡು ಲೈನ್ಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು, ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು, ತೃತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡರು. ಮುಖ್ಯ ಅತಿಥಿಗಳಾಗಿ ಬಹುಮಾನ ಪ್ರಾಯೋಜಕರು ಕುಂಬಳದಾಳು ಗ್ರಾಮಸ್ಥರಾದ ನೇರವಂಡ ಮುತ್ತಪ್ಪ, ಮೂರ್ನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ವೇಣು ಅಪ್ಪಣ್ಣ ಹಾಗೂ ಮೂರ್ನಾಡು ವಿದ್ಯಾ ಸಂಸ್ಥೆಯ ಖಜಾಂಚಿ ವಿ.ಎ.ಯತೀಶ್, ನಿರ್ದೇಶಕರಾದ ಪುದಿಯೋಕ್ಕಡ ಹರೀಶ್ ದೇವಯ್ಯ ಹಾಜರಿದ್ದರು.…






