ಲೇಖಕ: admin

ನಾಪೋಕ್ಲು ನ.17 NEWS DESK : ಬೇತು ಗ್ರಾಮದ ಸೇಕ್ರೆಡ್ ಹಾರ್ಟ್ಸ್ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪೊರುಕೊಂಡ ರಯಾನ್ ಪೆಮ್ಮಯ್ಯ ರಾಜ್ಯ ಮಟ್ಟದ ಕೊಡಗು ತಂಡದ ಪರವಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ಪ್ರೌಢಶಾಲಾ ಅಂಡರ್-17 ವಯೋಮಿತಿಯ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕೊಡಗು ತಂಡದ ಪರ ಆಡಿ ರಾಯಚೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಅಂಡರ್ – 17 ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇವರು ಹಳೆ ತಾಲೂಕು ನಿವಾಸಿ ಪೊರುಕೊಂಡ ಸುನಿಲ್ ಮತ್ತು ದಮಯಂತಿ ದಂಪತಿಗಳ ಪುತ್ರ. ವರದಿ : ದುಗ್ಗಳ ಸದಾನಂದ. 

Read More

ಸೋಮವಾರಪೇಟೆ ನ.17 NEWS DESK : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಸಿತು. ಮಾಜಿ ಸಚಿವ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಪಟ್ಟಣದ ವಿವೇಕಾನಂದ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಜೇಸಿ ವೇದಿಕೆಯಲ್ಲಿ ಸಮಾಪನಗೊಂಡಿತು. ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಗೌಡ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮಾದಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ, ಮಂಡಲ ಅಧ್ಯಕ್ಷ ಗೌತಮ್, ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷೆ ಅನಿತಾ, ತಾಲೂಕು ಅಧ್ಯಕ್ಷೆ ಕವಿತಾ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ತಿತರಿದ್ದರು.

Read More

ಮಡಿಕೇರಿ ನ.17 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಕಾನುನು ಸೇವ ಪ್ರಾಧಿಕಾರ, ಶಿಶು ಅಭಿವೃದ್ದಿ ಯೋಜನೆ ಹಾಗೂ ಮಡಿಕೇರಿ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟ ಸಂಯುಕ್ತಾಶ್ರಯದಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ವಾತ್ಸಲ್ಯ ಶಿಶು ಪಾಲನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ನ್ಯಾಯಾಧೀಶರು, ಮಕ್ಕಳ ಬಗ್ಗೆ ಪೋಷಕರಿಗೆ ಕಾಳಜಿ ಅಗತ್ಯ, ಇಂದು ಮಕ್ಕಳು ಮೊಬೈಲ್ ಗೀಳಿಗೆ ಒಳಗಾಗುತ್ತಿದ್ದಾರೆ. ಮೊಬೈಲ್‌ನಿಂದ ದೂರವಿರುವಂತೆ ಪೋಷಕರು ಎಚ್ಚರ ವಹಿಸಿಬೇಕು. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಿಕೊಡುವುದು ಮುಖ್ಯವಾಗಿದೆ. ಶಿಶುಪಾಲನ ಕೇಂದ್ರದ ಸಿಬ್ಬಂದಿಗಳು ಇಲ್ಲಿನ ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ನೋಡಿಕೊಳ್ಳುತ್ತಿದ್ದಾರೆ ಅದು ಶ್ಲಾಘನೀಯ ಎಂದರು. ಮಕ್ಕಳ ರಕ್ಷಣಾಧಿಕಾರಿ ಸಚಿನ್ ಸುವರ್ಣ ಮಾತನಾಡಿ, ಮಕ್ಕಳಿಲ್ಲದ ದಂಪತಿಗಳು ಕಾನೂನಾತ್ಮಕವಾಗಿ ಮಗುವನ್ನು ದತ್ತು ಪಡೆಯುವ ಅಧಿಕಾರವಿದೆ. ಒಂದು…

Read More

ಕುಶಾಲನಗರ ನ.17 NEWS DESK : ಸೈನಿಕ ಶಾಲೆ ಕೊಡಗಿನಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ “ನಾಳಿನ ರಕ್ಷಕರು – ಶಾಶ್ವತ ಭವಿಷ್ಯಕ್ಕಾಗಿ ಯುವ ಮನಸ್ಸುಗಳ ಪೋಷಣೆ” ಎಂಬ ಪ್ರೇರಣಾ ವಾಕ್ಯದಡಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ -ಬೋಧಕೇತರ ವರ್ಗ, ಶಾಲೆಯ ಅಧಿಕಾರಿ ವೃಂದ ಹಾಗೂ ಕುಟುಂಬ ಸದಸ್ಯರು ಒಂದೇ ವೇದಿಕೆಯಲ್ಲಿ ಸೇರಿ ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸುವುದರೊಂದಿಗೆ, ಜವಾಬ್ದಾರಿಯುತ, ಭವಿಷ್ಯೋನ್ಮುಖ ನಾಗರೀಕರನ್ನು ರೂಪಿಸುವ ಶಾಲೆಯ ದೃಷ್ಟಿಕೋನವನ್ನು ಮತ್ತೊಮ್ಮೆ ಸಾಭೀತುಪಡಿಸಿದರು. ಕಾರ್ಯಕ್ರಮವನ್ನು ಶಾಲೆಯ ಕಿರಿಯ ವಿದ್ಯಾರ್ಥಿಗಳಾದ 6ನೇ ತರಗತಿಯ ಕೆಡೆಟ್ ಅನ್ವಿತಾ ಮತ್ತು ಕೆಡೆಟ್ ಪುನೀತ್ ಉದ್ಘಾಟಿಸಿದರು. ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್‌ ಜೀತ್ ಸಿಂಗ್ ಮಾತನಾಡಿ, ವಿದ್ಯಾರ್ಥಿಗಳು “ಭವಿಷ್ಯದ ರಕ್ಷಕರು” ಎಂದು ನೆನಪಿಸಿದರು. ಶಿಕ್ಷಕರು ಅವರ ಜೀವನಯಾತ್ರೆಯಲ್ಲಿ ಅಲ್ಕೆಮಿಸ್ಟ್‌ ರೀತಿಯಲ್ಲಿ ಮಾರ್ಗದರ್ಶನ ನೀಡುತ್ತಾರೆ ಎಂದರು. ಕೃತಜ್ಞತೆ, ಮಾರ್ಗದರ್ಶನ ಮತ್ತು ಸಮತೋಲನ ಎಂಬ ತತ್ವಗಳನ್ನು ಅಳವಡಿಸಿಕೊಂಡು ಅರ್ಥಪೂರ್ಣ, ಶಾಶ್ವತ ಮತ್ತು ಯಶಸ್ವಿಯಾದ ಭವಿಷ್ಯವನ್ನು ನಿರ್ಮಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

Read More

ಮಡಿಕೇರಿ ನ.17 NEWS DESK : ಚೇರಂಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 19 ಪ್ರಥಮ ಬಹುಮಾನ, 11 ದ್ವಿತೀಯ ಬಹುಮಾನ ಹಾಗೂ 6 ತೃತೀಯ ಬಹುಮಾನಗಳನ್ನು ಗಳಿಸುದರ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. 1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ  ಕಥೆ ಹೇಳುವುದು – ತನ್ವಿತ ರಾಜೇಶ್ ಕೆ, ಧಾರ್ಮಿಕ ಪಠಣ -ತನ್ವಿತ ರಾಜೇಶ್ ಕೆ, ದೇಶಭಕ್ತಿ ಗೀತೆ – ಲಿಪಿ ಆಳ್ವ ಬಿ.ಎ,  ಚಿತ್ರಕಲೆ – ಯೋಗಿತ್ ಪಿ.ವಿ ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ. ಕನ್ನಡ ಕಂಠಪಾಠ – ಅನ್ವಿತ ಸುದೀಪ್ ಕೆ, ಅಭಿನಯಗೀತೆ – ಮೊನಾಲಿ ಎಂ.ಕೆ ದ್ವಿತೀಯ ಬಹುಮಾನ  ಪಡೆದುಕೊಂಡರು. ಛದ್ಮವೇಷ – ಓಶಿನ್ ಮುತ್ತಮ್ಮ ಬಿ.ಎ., ಕ್ಲೇ ಮಾಡೆಲ್ – ಪುನರ್ವಿ ಹೊಸೂರು ತೃತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡರು. 5…

Read More

ಸೋಮವಾರಪೇಟೆ ನ.14 NEWS DESK : ಓಣಂ ಎಂದರೆ ಕೇವಲ ಹಬ್ಬವಲ್ಲ ಅದು ಸಮಾನತೆಯ ಸಂಕೇತ, ಪ್ರೀತಿ–ಸೌಹಾರ್ದದ ಪರಂಪರೆ, ಪ್ರಕೃತಿ, ಕೃಷಿ ಮತ್ತು ಮಾನವೀಯ ಮೌಲ್ಯಗಳ ಆಚರಣೆ ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು. ಸೋಮವಾರಪೇಟೆ ತಾಲ್ಲೂಕು ಹಿಂದೂ ಮಲೆಯಾಳಿ ಸಮಾಜದ ವತಿಯಿಂದ ಜಾನಕಿ ಕನ್ವೆನಸನ್ ಹಾಲ್‍ನಲ್ಲಿ ನಡೆದ ಓಣಂ ಉತ್ಸವದ ಸಭಾ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. ವಿಶೇಷ ಸಂಸ್ಕೃತಿಯನ್ನು ಮಲೆಯಾಳಿ ಸಮುದಾಯವು ಸೋಮವಾರಪೇಟೆಯಲ್ಲಿಯೂ ಹೀಗೇ ಉಳಿಕೊಂಡಿರುವುದು ಶ್ಲಾಘನೀಯ ಎಂದು ಪ್ರಶಂಸೆ ಸಲ್ಲಿಸಿದರು. ಇಂತಹ ಸಾಂಸ್ಕೃತಿಕ ಹಬ್ಬಗಳು ನಾಡಿನ ಒಗ್ಗಟ್ಟು ಹೆಚ್ಚಿಸುತ್ತವೆ. ಮಕ್ಕಳಲ್ಲಿ ಕಲೆ-ಸಂಸ್ಕೃತಿಯ ಅರಿವು ಬೆಳೆಸುತ್ತವೆ. ನಾವು ಸದಾ ಸಮಾಜದ ಒಳ್ಳೆಯ ಕಾರ್ಯಗಳಿಗೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್, ರಾಜ್ಯ ಒಕ್ಕಲಿಗರ ಸಂಘದ ಜಿಲ್ಲಾ ಪ್ರತಿನಿಧಿ ಹರಪಳ್ಳಿ ರವೀಂದ್ರ, ಹಿಂದೂ ಮಲೆಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ತಾಲ್ಲೂಕು ಸಮಾಜದ ಸ್ಥಾಪಕ ಅಧ್ಯಕ್ಷ ಪಿ.ಡಿ.ಪ್ರಕಾಶ್ ಮಾತನಾಡಿದರು. ಸಮಾರಂಭದ ದಿವ್ಯಸಾನಿಧ್ಯವನ್ನು ಸೋಲೂರು ಆರ್ಯ ಈಡಿಗಾ ಮಹಾಸಂಸ್ಥಾನದ…

Read More

ಮಡಿಕೇರಿ ನ.17 NEWS DESK : ಕೂಡಿಗೆ ಕ್ರೀಡಾಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕನ್ರ್ನಂಡ ಕೃತಿಕಾ ಅಕ್ಕಮ್ ಪ್ರಥಮ, 200 ಮೀಟರ್ ಓಟದ ಸ್ಪರ್ಧೆಯಲ್ಲಿ ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಪ್ರಥಮ, 400 ಮೀಟರ್ ಓಟದ ಸ್ಪರ್ಧೆಯಲ್ಲಿ ಕರ್ನಂಡ ಶತಕ ದ್ವಿತೀಯ, 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕುಲ್ಲಚಂಡ ಭೂಮಿಕಾ ಭೋಜಮ್ಮ, ಕರ್ನಂಡ ಶತಕ ಕಾವೇರಮ್ಮ, ಕರ್ನಂಡ ಕೃತಿಕಾ ಅಕ್ಕಮ್ಮ, ಬೊವ್ವರಿಯಂಡ ಹನ್ಸಿಕ ಪೊನ್ನಪ್ಪ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ಅಥ್ಲೆಟಿಕ್ ತಂಡವು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದು ಶಾಲೆಯ ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ. ಈ ಸಂದರ್ಭ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದಂತಹ ವಿನೋದ್ ಪಿ. ಎನ್ ಉಪಸ್ಥಿತರಿದ್ದು ಮಕ್ಕಳಿಗೆ ಪ್ರೋತ್ಸಾಹ ನೀಡಿದ್ದಾರೆ. ತಂಡಕ್ಕೆ ಶಾಲೆಯ ದೈಹಿಕ ಶಿಕ್ಷಕರುಗಳಾದ ಮೋನಿಕ,…

Read More

ಮಡಿಕೇರಿ ನ.17 NEWS DESK : ನವ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸದರಾದ ಕಪಿಲ್ ಸಿಬಲ್ ರವರ, “ದಿಲ್ ಸೇ ವಿತ್ ಕಪಿಲ್ ಸಿಬಲ್” ಕಾರ್ಯಕ್ರಮದ 100ನೇ ಸಂಚಿಕೆಯ ಸಂಭ್ರಮಾಚರಣೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಗಣ್ಯರೊಂದಿಗೆ ಭಾಗವಹಿಸುವ ಅವಕಾಶ ನನಗೆ ಲಭಿಸಿದ್ದು ನನ್ನ ಭಾಗ್ಯ ಎಂದು ಶಾಸಕ ಪೊನ್ನಣ್ಣ ಅವರು ಹೇಳಿದರು. ಈ ಸಂಚಿಕೆಯ ತಂಡದ ಎಲ್ಲಾ ಸದಸ್ಯರಿಗೆ ಶುಭಾಶಯಗಳು ಕೋರುತ್ತಾ, ಇನ್ನು ಮುಂದೆಯೂ ಸಹ ಮತ್ತಷ್ಟು ಅರ್ಥಪೂರ್ಣ ಹಾಗೂ ಸ್ಪೂರ್ತಿದಾಯಕ ಸಂಚಿಕೆಗಳು ಹೊರಬರುವಂತಾಗಲಿ ಎಂದು ಆಶಿಸಿದರು. ಈ ಸಂದರ್ಭ ಸಚಿವರುಗಳಾದ ಕೆ.ಜೆ ಜಾರ್ಜ್, ಎಚ್.ಸಿ ಮಹದೇವಪ್ಪ, ಬೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ಎಂ.ಸಿ ಸುಧಾಕರ್, ಶಾಸಕರು ಅಶೋಕ್ ಪಟ್ಟಣ್, ಹಾಗೂ ಮತ್ತಿತರರು ಪ್ರಮುಖರು ಭಾಗವಹಿಸಿದ್ದರು.

Read More

ಮಡಿಕೇರಿ ನ.17 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ವಿರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನವೆಂಬರ್, 18 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ವಿರಾಜಪೇಟೆ ತಾಲ್ಲೂಕಿನ ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

Read More

ಗೋಣಿಕೊಪ್ಪ ನ.17 NEWS DESK : ಭಗವಾನ್ ಬಿರ್ಸಾ ಮುಂಡಾ ಅವರ 151ನೇ ಜಯಂತಿಯನ್ನು ತಿತಿಮತಿ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಆದಿವಾಸಿಗಳು ಮರೂರು ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಮುಂಭಾಗದಿಂದ ತಿತಿಮತಿ ಶಾಲೆಯವರೆಗೆ ಮೆರವಣಿಗೆ ನಡೆಸಿ ಬಿರ್ಸಾಮುಂಡಾ ಜಯಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಂತರ ಬುಡಕಟ್ಟು ಸಮುದಾಯದ ಸಂಸ್ಕøತಿಗಳನ್ನ ಅನಾವರಣಗೊಳಿಸಲಾಯಿತು. ಕಾರ್ಯಕ್ರಮವನ್ನು ವಿರಾಜಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ಜಾನ್ಸನ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ತನ್ನ ಸಣ್ಣ ಪ್ರಾಯದಲ್ಲೇ ಬಿರ್ಸಾಮುಂಡಾ ಬ್ರಿಟಿಷರ ವಿರುದ್ಧ ಹೋರಾಡಿ ತನ್ನ ಸಮುದಾಯದ ಉಳಿವಿಗಾಗಿ ಶ್ರಮಿಸಿದ ಜೀವಿ. ಆತನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾದ ಅಗತ್ಯತೆ ಇದೆ. ಬ್ರಿಟಿಷರ ಕ್ರೈಸ್ತ ಪಾದ್ರಿಗಳಾಗಿ ಬುಡಕಟ್ಟು ಸಮುದಾಯವನ್ನು ಮತಾಂತರ ಮಾಡುವ ಹುನ್ನಾರದ ವಿರುದ್ದ ಹೋರಾಡಿದ ವೀರ. ಆತನ ನಡೆ ನುಡಿಗಳು ಮತ್ತು ಸಾಹಸ…

Read More