ಲೇಖಕ: admin

ಮಡಿಕೇರಿ ನ.15 NEWS DESK : ಪ್ರಸಕ್ತ 2025-26ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೂಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ರೂ 25000 ಹಾಗೂ ತಾಲ್ಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲ್ಲೂಕಿನ 5 ರೈತರಿಗೆ ತಲಾ ರೂ10000/-ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು.  ಪ್ರಶಸ್ತಿಗಾಗಿ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವ್ಯೆಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ,  ಹೈನುಗಾರಿಕೆ,  ಕೋಳಿ ಸಾಕಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ ಇತ್ಯಾದಿ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಮತ್ತಿತರ…

Read More

ಮಡಿಕೇರಿ ನ.15 NEWS DESK : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 06 ಕೊನೆಯ ದಿನವಾಗಿದೆ. ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ ಬರುವ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರನ್ನು ಮಾತ್ರ ಈ ಸೌಲಭ್ಯಕ್ಕೆ ಪರಿಗಣಿಸತಕ್ಕದ್ದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದಲ್ಲಿ ರೂ.98 ಸಾವಿರ…

Read More

ಮಡಿಕೇರಿ ನ.15 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಟ್ಟಕಡೆಯ ಗ್ರಾಮವಾದ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ ಕಡಮಕಲ್ ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಗ್ರಾಮದ ಸಂಕ್ಷಿಪ್ತ ವರದಿಯನ್ನು ವಾರದ ಒಳಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕಂದಾಯ, ಗ್ರಾಮೀಣಾಭಿವೃದ್ಧಿ, ಅರಣ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸೇರಿ ಕಡಮಕಲ್ ನಿವಾಸಿಗಳೊಂದಿಗೆ ಕುಂದುಕೊರತೆ ಸಭೆ ನಡೆಸಿ ಜನರಿಂದ ಮಾಹಿತಿ ಪಡೆದ ಶಾಸಕರು ಮನೆ ಮತ್ತು ಜಮೀನಿನ ದಾಖಲೆಗಳು, ಕುಡಿಯುವ ನೀರು ಸರಬರಾಜು, ಟ್ಯಾಂಕ್ ನಿರ್ಮಾಣ, ವಿದ್ಯುತ್ ವ್ಯವಸ್ಥೆ ಉನ್ನತೀಕರಣ, ರಸ್ತೆ ನಿರ್ಮಾಣ,ಅರಣ್ಯ ಇಲಾಖೆ ಮತ್ತು ಗ್ರಾಮದ ಗಡಿ ಗೊಂದಲಗಳ ನಿವಾರಣೆ ಹಾಗೂ ಪಡಿತರ ವಿತರಣೆಯ ಬಗ್ಗೆ ಚರ್ಚೆ ಮಾಡಿ ನಿಯಮಾನುಸಾರ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಡಾ.ಮಂತರ್ ಗೌಡ ನಿರ್ದೇಶನ ನೀಡಿದರು. ಇದೇ ಪ್ರಪ್ರಥಮ ಬಾರಿಗೆ ಶಾಸಕರೊಬ್ಬರು ತಮ್ಮ ಬಳಿ ಅಧಿಕಾರಿಗಳೊಂದಿಗೆ ಬಂದು ಕುಂದು ಕೊರತೆ ನಿವಾರಣೆ ಸಭೆ…

Read More

ಮಡಿಕೇರಿ ನ.15 NEWS DESK : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ರಾಜ್ಯ ಬ್ರಾಹ್ಮಣ ಸಮುದಾಯದ ಪ್ರತಿಭಾವಂತ ಪದವೀಧರರು ನಾಗರಿಕ ಸೇವೆಗಳಾದ ಐ.ಎ.ಎಸ್.ಅಥವಾ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಭಾರತದ/ ಕರ್ನಾಟಕದ ಆಡಳಿತಾತ್ಮಕ ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತೇಜನ ನೀಡುವ ಸಲುವಾಗಿ “ಚಾಣಕ್ಯ ಆಡಳಿತ ತರಬೇತಿ ಯೋಜನೆ” ಯನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಐ.ಎ.ಎಸ್ ಅಥವಾ ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೇ ಎದುರಿಸಲು ತರಬೇತಿ ಪಡೆಯುವ ಸಂಬಂಧ 2025-26ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪಾವತಿಸಲಾದ ತರಬೇತಿ ಶುಲ್ಕದ ಮೊತ್ತದಲ್ಲಿ ಗರಿಷ್ಠ ರೂ.1 ಲಕ್ಷ ಗಳಿಗೆ ಮಿತಿಗೊಳಿಸಿ ಡಿಬಿಟಿ ಮೂಲಕ ನೇರವಾಗಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಾಡಲಾಗುವುದು.  ಆದ್ದರಿಂದ ಚಾಣಕ್ಯ ಆಡಳಿತ ತರಬೇತಿ ಯೋಜನೆಯಡಿ ನೋಂದಾಯಿಸಿಕೊಳ್ಳುವ ಫಲಾನುಭವಿಗಳು ಬ್ರಾಹ್ಮಣ ಸಮುದಾಯದ ಫಲಾನುಭವಿಗಳು ಡಿ.15 ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.  ವೆಬ್‍ಸೈಟ್ www.ksbdb.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತಾ ಮಾನದಂಡಗಳು ಯೋಜನೆಯ ಕುರಿತಾದ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8029605888/…

Read More

ಮಡಿಕೇರಿ ನ.15 NEWS DESK : ಎ.ಎಲ್.ಜಿ ಕ್ರೆಸೆಂಟ್ ಶಾಲೆಯಲ್ಲಿ “ಯಂಗ್ ಮೈಂಡ್ಸ್ ಫುಡ್ ಫೆಸ್ಟ್-2025″ ಉತ್ಸವ ನಡೆಯಿತು. ಕೊಡಗು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳ ಉತ್ಸಾಹ, ವಿವಿಧ ಹೋಟೆಲ್‍ಗಳ ಪರಿಕಲ್ಪನೆ, ವಿದ್ಯಾರ್ಥಿಗಳು ತಯಾರಿಸಿದ ರುಚಿಕರ ಖಾದ್ಯಗಳು ಹಾಗೂ ಪೋಷಕರು ಮತ್ತು ಶಿಕ್ಷಕರ ಶ್ರಮ ಅಭಿನಂದನಾರ್ಹ ಎಂದರು. ಮುಖ್ಯ ಅಥಿತಿಯಾಗಿ ಡೆಪ್ಯುಟಿ ಪ್ರಾಜೆಕ್ಟ್ ಕೋಆರ್ಡಿನೇಟರ್ ಎ.ಸೌಮ್ಯ ಪೊನ್ನಪ್ಪ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. “ಕ್ರೆಸೆಂಟ್ ಶಾಲೆಯ ಆಹಾರ ಮೇಳ ಮಕ್ಕಳ ಸೃಜನಶೀಲತೆ, ರುಚಿ, ಅರಿವು ಮತ್ತು ತಂಡಭಾವವನ್ನು ಒಟ್ಟಾಗಿ ಪ್ರದರ್ಶಿಸಿದ ರುಚಿಕರ ಉತ್ಸವವಾಗಿದೆ. ವಿದ್ಯಾರ್ಥಿಗಳ ಆತಿಥ್ಯ ಸತ್ಕಾರ ಎಲ್ಲರ ಮನ ಗೆದ್ದಿದೆ,” ಎಂದರು. ಶಾಲೆಯ ಪ್ರಾಂಶುಪಾಲರಾದ ಜೋಯಿಸಿ ಮಾತನಾಡಿ ಪೋಷಕರ ಸಹಕಾರ ಮತ್ತು ಮಕ್ಕಳ ಉತ್ಸಾಹ ಈ ಆಹಾರ ಉತ್ಸವವನ್ನು ವಿಶೇಷವಾಗಿ ಮಧುರವಾಗಿಸಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಕಾರಣಕರ್ತರಾದ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕ, ಶಿಕ್ಷಕೇತರ ವೃಂದಕ್ಕೆ ಅಭಿನಂದನೆಗಳನ್ನು…

Read More

ಮಡಿಕೇರಿ ನ.15 NEWS DESK : ಭಯೋತ್ಪಾದಕರಿಂದ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣವನ್ನು ಖಂಡಿಸಿ ಹಿಂದು ಜಾಗರಣಾ ವೇದಿಕೆ ನಗರದಲ್ಲಿ ನಡೆಸಿತು. ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಹಿಂದು ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಸದಸ್ಯ ಕುಕ್ಕೇರ ಅಜಿತ್ ಮಾತನಾಡಿ, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಹತ್ತಿಕ್ಕುವ ಕಾರ್ಯ ನಡೆಯಬೇಕಾಗಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ಮಟ್ಟ ಹಾಕುವವರೆಗೆ ಹಿಂದೂ ಸಮಾಜಕ್ಕೆ ಆತಂಕ ತಪ್ಪಿದ್ದಲ್ಲವೆಂದರು. ಈ ಹಿಂದೆ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ರಕ್ಷಣಾ ಪಡೆಗಳ ಮೇಲೆ ಕಲ್ಲುತೂರಾಟ ನಡೆಸಿದ ಸಂದರ್ಭ, ರಾಜಕೀಯ ಕಾರಣಗಳ ಹಿನ್ನೆಲೆಯಲ್ಲಿ ಅವರನ್ನು ಬಡವರು, ಉದ್ಯೋಗ ರಹಿತರು ಎಂದು ನಮ್ಮ ಸೋಗಲಾಡಿತನದ ರಾಜಕಾರಣಿಗಳು ಸಮರ್ಥಿಸಿಕೊಂಡಿದ್ದರು. ಇದೀಗ ದೆಹಲಿಯಲ್ಲಿ ನಡೆದಿರುವ ಭಯೋತ್ಪಾದಕ ಬಾಂಬ್ ಸ್ಫೋಟದ ಸಂಚು ರೂಪಿಸಿದವರೆಲ್ಲರು ಶಿಕ್ಷಣವಂತರು ಮಾತ್ರವಲ್ಲ ವೈದ್ಯರಾಗಿದ್ದಾರೆ. ಅಂದು ಭಯೋತ್ಪಾದಕರನ್ನು ಸಮರ್ಥಿಸಿಕೊಂಡವರು ಇಂದಿನ ಈ ದಾಳಿಯ ಬಗ್ಗೆ ಏನನ್ನು ಹೇಳುತ್ತಾರೆ…

Read More

ಮಡಿಕೇರಿ ನ.15 NEWS DESK : ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ಹಾಗೂ ಕೋಲಾರದ ಸ್ವರ್ಣಭೂಮಿ ಫೌಂಡೇಶನ್ ವತಿಯಿಂದ ಕೊಡಗಿನ ಮೂವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಸರಗೋಡುವಿನ ನುಳ್ಳಿಪಾಡಿಯಲ್ಲಿ ನಡೆದ ಗಡಿನಾಡು ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ಸಂಘಟನೆ ಮತ್ತು ಸಾಹಿತ್ಯ ಕ್ಷೇತ್ರ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷೆ ರುಬೀನಾ ಎಂ.ಎ ಅವರಿಗೆ ಸಾಹಿತ್ಯ ಕ್ಷೇತ್ರ ಹಾಗೂ ವಿಶ್ವ ಕುಂಬೂರು ಅವರಿಗೆ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ `ಕಾಸರಗೋಡು ಕನ್ನಡ ಭವನ ರಜತ ಮಹೋತ್ಸವ ಸಂಭ್ರಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2025′ ನೀಡಿ ಗೌರವಿಸಲಾಯಿತು. ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸ್ಥಾಪಕಾಧ್ಯಕ್ಷರಾದ ಡಾ.ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಟೀಚರ್, ಕೋಲಾರ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಪಿ.ನಾರಾಯಣಪ್ಪ ಹಾಗೂ ಸ್ವರ್ಣಭೂಮಿ ಫೌಂಡೇಶನ್‍ನ ಪ್ರಮುಖರಾದ ಬಿ.ಶಿವಕುಮಾರ್ ಸಾಧಕರಿಗೆ ಪ್ರಶಸ್ತಿ ನೀಡಿ…

Read More

ನಾಪೋಕ್ಲು ನ.15 NEWS DESK : ಶಿಸ್ತು ಸಂಯಮ ಹಾಗೂ ದುಶ್ಚಟ ರಹಿತವಾಗಿ ಏಕಾಗ್ರತೆಯಿಂದ ನಡೆಸುವ ಜೀವನ ಸಮೃದ್ಧ ಆರೋಗ್ಯಕ್ಕೆ ಪೂರಕವಾಗಿದೆ ಎಂದು ನಾಪೋಕ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಸಿ.ಪಲ್ಲವಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಮಡಿಕೇರಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪದವಿ ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ನಾಪೋಕ್ಲು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಿದ ಮಹನೀಯರನ್ನು ಮಾದರಿಯಾಗಿ ತೆಗೆದುಕೊಂಡು ಶ್ರದ್ಧೆಯಿಂದ ಕಲಿತರೆ ಜವಾಬ್ದಾರಿಯುತ ಸ್ಥಾನ ಹಾಗೂ ಹುದ್ದೆಯನ್ನು ಪಡೆಯಬಹುದು. ನಮ್ಮಲ್ಲಿ ಹಾಗೂ ನಮ್ಮ ಪರಿಸರದಲ್ಲಿ ಸ್ವಾಸ್ಥ್ಯ ಸಂಕಲ್ಪಕ್ಕೆ ಸ್ವಚ್ಛತೆ…

Read More

ಮಡಿಕೇರಿ ನ.15 NEWS DESK : ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆಯು ಸಂಭ್ರಮದಿಂದ ಜರುಗಿತು. ಶಿಕ್ಷಕರೇ ಸಂಪೂರ್ಣ ಕಾರ್ಯಕ್ರಮವನ್ನು ನಿವ೯ಹಿಸಿ, ಮಕ್ಕಳಿಗೆ ಹಬ್ಬದ ಸಂಭ್ರಮವನ್ನು ನೆನಪಿಸಿದರು. ಕಲಾ, ಕ್ರೀಡೆ, ಹಾಸ್ಯ ಮತ್ತು ಸಂಭ್ರಮಗಳ ಸಂಯೋಜನೆಯಾಗಿ ಕೊಡಗು ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ ವಿದ್ಯಾಥಿ೯ಗಳಿಗೂ ಶಿಕ್ಷಕರಿಗೂ ಸ್ಮರಣೀಯ ಅನುಭವ ನೀಡಿತ್ತು.  ಶಾಲಾ ನಾಯಕ ಧಾರ್ಮಿಕ್ ಹಾಗೂ ಉಪನಾಯಕ ಶೌರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಶಾಲಾ ಕೌನ್ಸಿಲ್‌ ಲೀಡರ್ ಗಳು ದೀಪ ಬೆಳಗಿಸಿದರು. ಶಿಕ್ಷಕಿ ಚಿತ್ರ ಮತ್ತು ತಂಡ ಪ್ರಸ್ತುತಪಡಿಸಿದ ಸ್ವಾಗತ ನೃತ್ಯ ಮಕ್ಕಳಲ್ಲಿ ಹೊಸ ಚೈತನ್ಯವನ್ನು ತುಂಬಿದರೆ, ಶಿಕ್ಷಕಿ ಪೊನ್ನಮ್ಮ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದ ಮಾಹಿತಿ ಪ್ರೇರಣಾದಾಯಕವಾಗಿತ್ತು. ದಾಮೋದರ್ ಗೌಡ ಹಾಗೂ ತಂಡದವರು ಪ್ರದರ್ಶಿಸಿದ ಹಾಸ್ಯನಾಟಕ ಪ್ರಮುಖ ಆಕರ್ಷಣೆಯಾಗಿ ಹಾಸ್ಯದ ಹೊನಲನ್ನೇ ಹರಿಸಿತ್ತು. ದಿವ್ಯ ಹಾಗೂ ತಂಡದ ನೃತ್ಯ ಪ್ರದರ್ಶನ ಮತ್ತು ಸಂಗೀತ ಶಿಕ್ಷಕಿ ಪ್ರತಿಭಾ ತಂಡದವರ ಗಾಯನ ಕಾರ್ಯಕ್ರಮವೂ ಮಕ್ಕಳನ್ನು ರಂಜಿಸಿದವು. ಶಾಲೆಯ ಪ್ರಾಂಶುಪಾಲರಾದ ಸುಮಿತ್ರ ಕೆ.ಎಸ್. ಹಾಗೂ ನಾಗರಾಜ್…

Read More

ಸುಂಟಿಕೊಪ್ಪ ನ.15 NEWS DESK : ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಪೋಷಕರು, ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ಸಂತೆ ನಡೆಯಿತು. ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ನಡೆದ ಪೋಷಕರ ಮತ್ತು ಶಿಕ್ಷಕರ ಮಹಾಸಭೆಯಲ್ಲಿ ಸರಕಾರಿ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಬಾಲಕೃಷ್ಣ ಅವರು ಮಾತನಾಡಿ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಮಕ್ಕಳ ವಿದ್ಯಾರ್ಜನೆಗೆ ಪರಿಶ್ರಮ ವಹಿಸಿದರೆ ಸಾಲದು, ಮಕ್ಕಳ ವ್ಯಾಸಂಗದ ಸಂದರ್ಭದಲ್ಲಿ ಪ್ರಶಾಂತ ವಾತಾವರಣವನ್ನು ಒದಗಿಸಿಕೊಡಬೇಕೆಂದರು. ಆಗ ಮಕ್ಕಳ ಭವಿಷ್ಯವು ಉತ್ತಮವಾಗಿರಲು ಸಾಧ್ಯ ಎಂದರು. ಕಾಲ ಕಲಾಕ್ಕೆ ಪೋಷಕರು ಶಿಕ್ಷಕರೊಂದಿಗೆ ನಿಕಟ ಸಂಪರ್ಕ ಹಾಗೂ ಶಾಲೆಗಳಿಗೆ ಭೇಟಿ ನೀಡುವುದರಿಂದ ಮಕ್ಕಳ ಕಲಿಕೆಯ ಪ್ರಮಾಣವು ಅಭಿವೃದ್ಧಿಗೊಳ್ಳಲು ಸಹಕಾರಿಯಾಗುತ್ತದೆ ಎಂದು ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.  :: ಮಕ್ಕಳ ಸಂತೆ :: ಇದೇ ಸಂದರ್ಭ ಶಾಲೆಯಲ್ಲಿ ಮಕ್ಕಳ ಸಂತೆ ಗಮನ ಸೆಳೆಯಿತು. ನಿತ್ಯ ಪಾಠ ಪ್ರವಚನದ ಶಬ್ಧ ಕೇಳಿ ಬರುತ್ತಿದ್ದ ಶಾಲೆಯ ಆವರಣದಲ್ಲಿ ಮಕ್ಕಳ ವ್ಯವಹಾರಿಕ ಜ್ಞಾನವನ್ನು ಅಭಿವೃದ್ಧಿ ಪಡಿಸುವ ದಿಸೆಯಲ್ಲಿ ಮಕ್ಕಳು ಮನೆ ಹಾಗೂ ತೋಟಗಳಲ್ಲಿ…

Read More