ಲೇಖಕ: admin

ಪುತ್ತೂರು ನ.28 NEWS DESK : ಕಾಲೇಜಿನಲ್ಲಿ ಕಲಿಯುತ್ತಿರುವ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯನ್ನು ತಿಳಿದು ಕೊಳ್ಳುವುದಕ್ಕಾಗಿ ಹೆತ್ತವರು ಅಥವಾ ಪೋಷಕರು ನಿಯಮಿತವಾಗಿ ಕಾಲೇಜಿನ ಸಂಪರ್ಕದಲ್ಲಿರುವುದು ಅವಶ್ಯಕ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ವಿಭಾಗ ಮತ್ತು ಪೇರೆಂಟ್ ರಿಲೇಶನ್ ಸೆಲ್ ಇದರ ಸಂಯುಕ್ತ ಆಶ್ರಯದಲ್ಲಿ ಸಾವರ್ಕರ್ ಸಭಾಭವನದಲ್ಲಿ ನಡೆದ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ವರ್ಷದ ವಿದ್ಯಾರ್ಥಿಗಳ ಹೆತ್ತವರ ಮತ್ತು ಪೋಷಕರ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದರು. ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಕೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ನೀಡದೇ ಗೊಂದಲಗಳು ಉಂಟಾದ ಹಲವಾರು ಉದಾಹರಣೆಗಳು ನಮ್ಮ ಮುಂದಿದ್ದು, ಉಪನ್ಯಾಸಕರು, ವಿಭಾಗ ಮುಖ್ಯಸ್ಥರು ಅಥವಾ ಪ್ರಾಂಶುಪಾಲರ ಜತೆಗೆ ಚರ್ಚಿಸಿಯೇ ನೀವು ಮುಂದಡಿ ಇಡಬೇಕು ಎಂದು ಹೇಳಿದರು. ಕಾಲೇಜಿನ ಬೆಳ್ಳಿಹಬ್ಬದ ಪ್ರಯುಕ್ತ ಪಂಚವಿಂಶತಿ ಸರಣಿ ಕಾರ್ಯಕ್ರಮಗಳು ನಡೆಯುತ್ತಿವೆ ಇದರಲ್ಲಿ ವಿದ್ಯಾರ್ಥಿಗಳು ಪೂರ್ಣ…

Read More

ಮಡಿಕೇರಿ ನ.28 NEWS DESK : ನೂರಾರು ವರ್ಷಗಳ ಕಾಲ ಪ್ರಾಣಿ ಪಕ್ಷಗಳ ಆವಾಸ ಸ್ಥಾನವಾಗಿ, ಬಿಸಿಲ ಬೇಗೆಗೆ ತಂಪಾದ ನೆರಳು ನೀಡಿ ಕಳೆದ ಮುಂಗಾರಿನ ಅವಧಿಯಲ್ಲಿ ಧರೆಗುರುಳಿ ಇತಿಹಾಸ ಸೇರಿದ ನಗರದ ಜಿಲ್ಲಾ ಕ್ರೀಡಾಂಗಣ ಬಳಿಯ ಕೊಡವ ಸಮಾಜದ ‘ಮಂದ್’ನ ಅತ್ತಿಮರವಿದ್ದ ಜಾಗದಲ್ಲಿ ‘ಅರಳಿ ಗಿಡ’ವನ್ನು ನೆಟ್ಟು, ಅದನ್ನು ಸಂರಕ್ಷಿಸುವ ನಿರ್ಧಾರ ತಳೆಯಲಾಯಿತು. ಮಡಿಕೇರಿ ಕೊಡವ ಸಮಾಜದ ಮಂದ್‍ನಲ್ಲಿ ಅರಳಿ ಗಿಡವನ್ನು ನೆಡಲು ಕೈಜೋಡಿಸಿದ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಂದ್‍ನ ರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಹೊಣೆಯಾಗಿದೆಯೆಂದರು. ಸುಮಾರು ಎರಡೂವರೆ ಶತಮಾನಗಳ ಇತಿಹಾಸ ಹೊಂದಿರುವ ಮಂದ್‍ನಲ್ಲಿದ್ದ ಬೃಹತ್ ಅತ್ತಿ ಮರ ಮರಿದು ಬಿದ್ದ ಹಿನ್ನೆಲೆಯಲ್ಲಿ ನೂತನ ಕಟ್ಟೆ ನಿರ್ಮಿಸಿ ಅರಳಿ ಗಿಡವನ್ನು ನೆಡಲಾಗಿದೆಯೆಂದು ತಿಳಿಸಿದರು. ಮಡಿಕೇರಿ ಕ್ಷೇತ್ರರ ಶಾಸಕ ಮಂತರ್ ಗೌಡ ಮಾತನಾಡಿ, ಹಿಂದೂ ಸಂಪ್ರದಾಯದಲ್ಲಿ ಧಾರ್ಮಿಕ ಆಚರಣೆಯಂತೆ ಊರಿಗೆ ಒಂದು ಅರಳಿ ಮರ ಇರುತ್ತಿತ್ತು. ಅದರಂತೆ ಮಡಿಕೇರಿಯಲ್ಲಿರುವ ಮಂದ್‍ನಲ್ಲಿ ಕೊಡವ ಸಂಪ್ರದಾಯದಂತೆ ಅರಳಿ ಗಿಡವನ್ನು ನೆಟ್ಟಿರುವುದು ಹೆಮ್ಮೆಯ ವಿಷಯ.…

Read More

ಉಡುಪಿ ನ.28 NEWS DESK : ದೇಶದ ಪ್ರಧಾನಮಂತ್ರಿಗಳಾದ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ನರೇಂದ್ರ ಮೋದಿಯವರನ್ನು ಕರಾವಳಿಯ ಮಂದಿ ಹೂಮಳೆ ಸುರಿಸಿ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಆಗಮಿಸಿದ ಮೋದಿಯವರು, ಅಲ್ಲಿಂದ ಸೇನಾ ಹೆಲಿಕಾಪ್ಟರ್’ನಲ್ಲಿ ಉಡುಪಿಯ ಹೆಲಿಪ್ಯಾಡ್’ಗೆ ಬಂದಿಳಿದರು. ಅಲ್ಲಿಂದ ರೋಡ್ ಶೋ ಆರಂಭವಾಗಿದ್ದು, ದಾರಿಯುದ್ದಕ್ಕೂ ಲಕ್ಷಾಂತರ ಮಂದಿ ಹೂಮಳೆ ಸುರಿಸಿ, ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದ್ದಾರೆ. ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ.

Read More

ಮಡಿಕೇರಿ ನ.28 NEWS DESK : ಡಿಸೆಂಬರ್ 9 ರಿಂದ  14 ರವರೆಗೆ ಚೆನ್ನೈನಲ್ಲಿ ಸ್ಮಾಶ್ ವಿಶ್ವಕಪ್ ನಡೆಯಲಿದ್ದು ಮೂಲತಃ ಕೊಡಗಿನವರಾದ ಕುಟ್ಟಂಡ ಜೋಶ್ನಾ ಚಿಣ್ಣಪ್ಪ ಅವರು ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ. ಟೂರ್ನಿಯಲ್ಲಿ ಇರಾನ್, ಜಪಾನ್, ಮಲೇಷಿಯಾ, ರಿಪಬ್ಲಿಕ್ ಆಫ್ ಕೊರಿಯಾ, ಹಾಂಗ್ ಕಾಂಗ್, ಚೀನಾ, ಈಜಿಪ್ಟ್, ದಕ್ಷಿಣ ಆಫ್ರಿಕಾ, ಪೋಲ್ಯಾಂಡ್, ಸ್ವಿಟ್ಟರ್ ಲ್ಯಾಂಡ್, ಆಸ್ಟ್ರೇಲಿಯಾ ಹಾಗೂ ಬ್ರೆಸಿಲ್ ತಂಡಗಳು ಭಾಗವಹಿಸಲಿವೆ. ಭಾರತವನ್ನು ಜೋಶ್ನಾ ಸೇರಿದಂತೆ ಅನಾಹತ್‌ ಸಿಂಗ್, ಅಭಯ್ ಸಿಂಗ್, ವೆಲಾವನ್ ಎಸ್ ಅವರುಗಳು ಪ್ರತಿನಿಧಿಸಲಿದ್ದಾರೆ. ಚೆನ್ನೈನಲ್ಲಿ ಭಾರತ ತಂಡದ ವಿಶ್ವಕಪ್ ಜರ್ಸಿ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶ್ನಾ ಅವರು, 2028ರಲ್ಲಿ ಅಮೇರಿಕಾದ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಂಪಿಕ್ಸ್‌ನಲ್ಲಿ ಆಡುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಸ್ಕ್ವಾಶ್ ಆಟ ಇದೇ ಮೊದಲ ಬಾರಿಗೆ ಒಲಂಪಿಕ್ಸ್‌ನಲ್ಲಿ ಸ್ಥಾನ ಪಡೆದಿದ್ದು, ಚಿಕ್ಕಂದಿನಿಂದಲೇ ಒಲಂಪಿಕ್ಸ್‌ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಬೇಕೆಂಬ ಕನಸು ಕಂಡಿದ್ದ ಜೋಶ್ನಾ ಅವರು ಆಡುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಜೋಶ್ನಾ ಅವರು 22 ವರ್ಷಗಳ ಕಾಲ…

Read More

ಮಡಿಕೇರಿ ನ.28 NEWS DESK : ಕುಶಾಲನಗರ ತಾಲ್ಲೂಕು ತ್ರೈಮಾಸಿಕ ಕೆ.ಡಿ.ಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್, 01 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಶಾಲನಗರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

Read More

ನಾಪೋಕ್ಲು ನ.28 NEWS DESK : ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ವತಿಯಿಂದ ಕೊಡವ ಸಮಾಜದಲ್ಲಿ ನಡೆದ ಲಯನ್ಸ್ ಕ್ಲಬ್ ಕಾರ್ಯಕ್ರಮದಲ್ಲಿ ಕ್ಲಬ್‍ನ ಹಿರಿಯ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಸ್ಥಳೀಯ ಲಯನ್ಸ್ ಕ್ಲಬ್ ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸಿ ಸಮಾಜ ಸೇವೆ ಮಾಡಿರುವ ನಾಪೋಕ್ಲುಲಯನ್ಸ್ ಕ್ಲಬ್‍ನ ಹಿರಿಯ ಸದಸ್ಯರುಗಳಾದ ಅಪ್ಪಾರಂಡ ಸಮ್ಮಿ ಅಪ್ಪಣ್ಣ, ಕುಂಡ್ಯೋಳಂಡ ಗಣೇಶ್ ಮುತ್ತಪ್ಪ, ಅಪ್ಪಾರಂಡ ಸುಭಾಷ್ ತಿಮ್ಮಯ್ಯ ಅವರನ್ನು ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಮಾದೆಯಂಡ ಬಿ.ಕುಟ್ಟಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಂತೀಯ ಅಧ್ಯಕ್ಷೆ ಭೇಟಿ ಸಮಾರಂಭದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಲಯನ್ಸ್ ಕ್ಲಬ್ ನ ಪ್ರಾಂತೀಯ ಅಧ್ಯಕ್ಷೆ ಬಿಂದು ಗಣಪತಿ, ಲಯನ್ಸ್ ಜೋನ್ ಅಧ್ಯಕ್ಷ ಡಾ.ಕೋಟೆರ ಪಂಚಮ್ ತಿಮ್ಮಯ್ಯ, ಸ್ಥಳೀಯ ಲಯನ್ಸ್ ಕ್ಲಬ್ ಕಾರ್ಯದರ್ಶಿ ಬನ್ಸಿ ಭೀಮಯ್ಯ, ಖಜಾಂಚಿ ಅಪ್ಪಚೆಟೋಳಂಡ ವಸಂತ ಮುತ್ತಪ್ಪ, ಲಿಯೋ ಕ್ಲಬ್ ಅಧ್ಯಕ್ಷೆ ಕನ್ನಿಕಾ, ಕಾರ್ಯದರ್ಶಿ ದೃವ್ ದೇವಯ್ಯ,…

Read More

ನಾಪೋಕ್ಲು ನ.28 NEWS DESK : ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಸಾಧಕ ಮಕ್ಕಳ ಪೋಷಕರು ಹಾಗೂ ಸಮಾಜ ಸೇವಕರನ್ನು ಸನ್ಮಾನಿಸಿದರು. ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಜೈನುಲ್ ಆಬಿದ್ ಅವರ ಅಧ್ಯಕ್ಷತೆಯಲ್ಲಿ ನಾಪೋಕ್ಲುವಿನ ಕೆಪಿಎಸ್ ಶಾಲಾ ಆಟದ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯ ಸನ್ಮಾನ ಕಾರ್ಯಕ್ರಮದಲ್ಲಿ ಉನ್ನತ ಶ್ರೇಣಿಯಲ್ಲಿ ಅಂಕ ಪಡೆದು ವೈದ್ಯಕೀಯ ಶಿಕ್ಷಣದಲ್ಲಿ ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಾದ ಎಂ.ಎಂ.ಶಮ ಇವರ ಪೋಷಕರಾದ ಡೆಕ್ಕನ್ ಯೂತ್ ಕ್ಲಬ್ ಮಾಜಿ ಅಧ್ಯಕ್ಷರು, ಜೆಡಿಎಸ್ ವಕ್ತರ ಎಂ.ಎ.ಮನ್ಸೂರ್ ಆಲಿ ಹಾಗೂ ಹಫೀಯ ಫಾತಿಮಾ ಪೋಷಕರಾದ ಹುಸೇನ್ ಮತ್ತು ವಿರಾಜಪೇಟೆಯ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಶನ್ ಆಗಿ ಕಾರ್ಯನಿರ್ವಹಿಸುತ್ತಿರುವ ಇಂದಿರ ನಗರದ ನಿವಾಸಿ ಪಿ.ಜಿ ಸುಬ್ರಮಣಿ ಅವರನ್ನು ಡೆಕ್ಕನ್ ಯೂತ್ ಕ್ಲಬ್ ಪರವಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಹೊದ್ದೂರು ಗ್ರಾ.ಪಂ ಅಧ್ಯಕ್ಷ ಹಂಸ ಕೊಟ್ಟಮುಡಿ, ವಿಎಸ್‍ಎಸ್‍ಎನ್ ನಿರ್ದೇಶಕ ಅರೆಯಡ ರತ್ನ ಪೆಮ್ಮಯ್ಯ, ನಾಪೋಕ್ಲು ಪಂಚಾಯತಿ…

Read More

ಮಡಿಕೇರಿ ನ.28 NEWS DESK : ಕಾಂತೂರು-ಮೂರ್ನಾಡು , ಹೊದ್ದೂರು ಪಂಚಾಯಿತಿ , ಕಂದಾಯ ಇಲಾಖೆಯ ನೇತೃತ್ವದಲ್ಲಿ ಬೃಂದಾವನ ಆಸ್ಪತ್ರೆ ಮೈಸೂರು ಸಹಯೋಗದಲ್ಲಿ ಮೂರ್ನಾಡುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.  ಮೂರ್ನಾಡುವಿನ ಪಿ.ಎಂ ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ  200ಕ್ಕು ಹೆಚ್ಚು ಸಾರ್ವಜನಿಕರು ಪಾಲ್ಗೊಂಡು  ಉಚಿತವಾಗಿ ಬಿಪಿ, ಶುಗರ್, ನೇತ್ರ, ಮೂಳೆ, ಕೀಲು , ನರರೋಗ, ಕಿವಿ ಮೂಗು, ಗಂಟಲು ತಪಾಸಣೆ,ಸ್ತ್ರೀರೋಗ ತಜ್ಞರಿಂದ ತಪಾಸಣೆ ಮಾಡಿಸಿಕೊಂಡು ಔಷಧಿಯನ್ನು ಪಡೆದರು. ಹಿರಿಯ ತಜ್ಞರಿಂದ ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ ನಡೆಸಲಾಯಿತು. ಮೈಸೂರು ಬೃಂದಾವನ ಆಸ್ಪತ್ರೆಯ ನಿರ್ದೇಶಕರಾದ ಡಾ.ಮಾತಂಡ ಆರ್.ಅಯ್ಯಪ್ಪ ಶಿಬಿರವನ್ನು ಉದ್ಘಾಟಿಸಿ, ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದಿಂದ ದೊರೆಯುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಕಿವಿಮಾತು ಹೇಳಿದರು. ವೈದ್ಯರಾದ ಡಾ.ಮನೋರಂಜಿನಿ, ಡಾ.ಶ್ರೇಯಸ್, ಡಾ.ಅಂಕಿತ , ಸಿಬ್ಬಂದಿಗಳಾದ ಪಿ.ಆರ್.ಓ ಗುರುರಾಜ್ ಹಾಗೂ ಮುರುಳಿ, ಆಸ್ಪತ್ರೆಯ…

Read More

ಕುಶಾಲನಗರ ನ.28 NEWS DESK : ಹನ್ನೆರಡನೇ ಶತಮಾನದ ವಚನಕಾರರು ರಚಿಸಿದ ವಚನಗಳಲ್ಲಿ ಮನುಷ್ಯನ ಬದುಕನ್ನು ಸುಂದರ ಗೊಳಿಸುವ ಜೀವನ ಮೌಲ್ಯಗಳು ಅಡಕವಾಗಿದ್ದು ಅವುಗಳನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿತ್ವವನ್ನು ಹೊಳಪು ಮಾಡಿಕೊಳ್ಳಿ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಗಮಕ ಕಲಾ ವಿದ್ವಾನ್ ಎಸ್.ಜಿ.ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ” ಕನ್ನಡ ಸಾಹಿತ್ಯಕ್ಕೆ ಶರಣರ ಕೊಡುಗೆಗಳು ” ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಪಠ್ಯಗಳ ಜೊತೆಯಲ್ಲಿ ನೈತಿಕ ಪ್ರಜ್ಞೆ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಶರಣರ ವಚನಗಳನ್ನು ಅರಿತರೆ ಬದುಕು ಸಾರ್ಥಕ ವಾಗುತ್ತದೆ. ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟದಲ್ಲಿ ಶ್ರೀಮಂತ ಗೊಳಿಸಿದ ವಚನಸಾಹಿತ್ಯ ಈ ನೆಲ ಮೂಲ ಸಂಸ್ಕ್ರತಿಯ ತಾಯಿ ಬೇರು ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದರು. ಯಾರಿಗೂ ನೋವಾಗದಂತೆ…

Read More

ಮಡಿಕೇರಿ ನ.28 NEWS DESK : ಮಡಿಕೇರಿ ಕೊಡವ ಸಮಾಜ ವತಿಯಿಂದ ಆಯೋಜಿಸಿದ ಆಲ್ ಮರ ನಡ್’ಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಿ, ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣ ಬಳಿ ಇರುವ ಕೋಲ್ ಮಂದ್ ಜಾಗದಲ್ಲಿ  ಆಲದ ಗಿಡ ನೆಟ್ಟರು. ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ  ಮಂಡುವಂಡ ಪಿ ಮುತ್ತಪ್ಪ, ಸದಸ್ಯರು ಪದಾಧಿಕಾರಿಗಳು, ನಾಪೋಕು ಬ್ಲಾಕ್ ಅಧ್ಯಕ್ಷರು ಇಸ್ಮಾಯಿಲ್, ತೆನ್ನಿರ ಮೈನಾ,ಆಹ್ವಾನಿತ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More