ಗೋಣಿಕೊಪ್ಪ ನ.28 NEWS DESK : ಪೋಲಿಯೋ ನಿರ್ಮೂಲನೆಗೆ ಅಳವಡಿಸುವ ಲಸಿಕೆಗೆ ಕಳೆದ ಬಾರಿ ಮೂರು ಬಿಲಿಯನ್ ಅಸಾಧಾರಣ ಮೊತ್ತದ ವೆಚ್ಚವನ್ನು ರೋಟರಿ ಸಂಸ್ಥೆ ನಿಭಾಯಿಸಿದೆ ಎಂದು ರೋಟರಿ ಸಂಸ್ಥೆಯ ಜಿಲ್ಲಾ ಗವರ್ನರ್ ಪಿ.ಕೆ ರಾಮಕೃಷ್ಣ ತಿಳಿಸಿದರು. ಗೋಣಿಕೊಪ್ಪ ರೋಟರಿ ಸಂಸ್ಥೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಹಿನ್ನೆಲೆ ಕುಕೂನ್ ಸಭಾಂಗಣದಲ್ಲಿ ಹಮ್ಮಿಕೊಂಡ ಸರ್ವ ಸದಸ್ಯರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು. ಪ್ರಪಂಚದಲ್ಲಿ 39 ಪೋಲಿಯೋ ಪ್ರಕರಣಗಳು ಬೆಳಕಿಗೆ ಬಂದಿದೆ. ಅವುಗಳಲ್ಲಿ 30 ಪ್ರಕರಣ ಪಾಕಿಸ್ತಾನ ಮತ್ತು 9 ಪ್ರಕರಣ ಅಪಘಾನಿಸ್ತಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ವರ್ಷ ಡಿ.21ರಂದು ಪೋಲಿಯೋ ಲಸಿಕೆ ಕಾರ್ಯಕ್ರಮ ದೇಶದಾದ್ಯಂತ ನಡೆಯಲಿದೆ ಎಂದು ಹೇಳಿದರು. ಪೋಲಿಯೋ ನಿರ್ಮೂಲನೆ ಮಾಡುವುದೇ ರೋಟರಿ ಸಂಸ್ಥೆಯ ಬಹುದೊಡ್ಡ ಉದ್ದೇಶವಾಗಿ ಹಬ್ಬಿಕೊಂಡಿದೆ. ಪ್ರತಿಯೊಬ್ಬರು 5 ವರ್ಷದ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕುವ ಮೂಲಕ ಪೆÇಲೀಯೋ ನಿರ್ಮೂಲನೆಯೆಡೆಗೆ ಜಾಗೃತರಾಗಬೇಕೆಂದು ಸಲಹೆ ನೀಡಿದರು. ಇದರ ಜೊತೆಗೆ ಅಪಾರವಾದ ಸಾಮಾಜಿಕ ಕಳಕಳಿಯನ್ನು ಸಂಸ್ಥೆ ಹೊಂದಿದೆ. ರಕ್ತ ಸಂಗ್ರಹ ಘಟಕ, ಮತ್ತು…
ಲೇಖಕ: admin
ಮಡಿಕೇರಿ NEWS DESK ನ.27 : ಭಾಗಮಂಡಲದಲ್ಲಿ ನ.28 ರಂದು ಬೆಳಿಗ್ಗೆ 10.30 ಗಂಟೆಗೆ ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಲಿದೆ. ಕಾರ್ಯಕ್ರಮದಲ್ಲಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ವಿಧಾಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಮತ್ತಿತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ವಿರಾಜಪೇಟೆ ಮಂಡಲ ಬಿಜೆಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. 2022-23ರ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅಂದು ಶಾಸಕರಾಗಿದ್ದ ಕೆ.ಜಿ.ಬೋಪಯ್ಯ ಅವರ ಮನವಿ ಮೇರೆಗೆ ಕೊಡವರ ಶ್ರೇಯೋಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದರು. ಇದರಲ್ಲಿ 1 ಕೋಟಿ ರೂ.ಗಳನ್ನು ಕೊಡವ ಮತ್ತು ಅಮ್ಮ ಕೊಡವ ಸಮಾಜದ ಸಮುದಾಯ ಭವನಕ್ಕೆ ಮೀಸಲಿರಿಸಲಾಗಿತ್ತು ಎಂದು ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ನವೆಂಬರ್ 29 ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಮಡಿಕೇರಿ ನ.27 NEWS DESK : ಕೊಡಗು ಜಿಲ್ಲೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆಸೇನಾಪಡೆಯ 13 ನೇ ವಾರ್ಷಿಕ ಮಹಾಸಭೆಯು ನವೆಂಬರ್, 28 ರಂದು ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಎಂ.ಜಿ.ಯತೀಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿದೆ. ಕೊಡಗು ಜಿಲ್ಲೆಯ ಅರೆ ಸೇನಾಪಡೆಯ ಮಾಜಿ ಯೋಧರು, ವೀರನಾರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸದಸ್ಯತ್ವ ಪಡೆದುಕೊಳ್ಳುವಂತೆ ಅರೆಸೇನಾಪಡೆಯ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಸಂಚಾಲಕರು/ಕಾರ್ಯದರ್ಶಿ ಎನ್.ಎಂ.ಭೀಮಯ್ಯ ಅವರು ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‌ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ. ತುಂತುರು ನೀರಾವರಿ ಉಪಕರಣಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿ ಪಡೆಯಬೇಕೆಂದು ಕೋರಿದೆ. ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತಿದ್ದು, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ…
ಮಡಿಕೇರಿ ನ.27 NEWS DESK : ಅಂಚೆ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 08 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ ಅಶೋಕ್ ಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 05 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, 08 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾವೇರಿ ಕಾರ್ನಿವಲ್ ನ ಲೋಗೋ ಹಾಗೂ ಬ್ಯಾನರ್ ಗಳನ್ನು ಬಿಡುಗಡೆ ಮಾಡಲಾಯಿತು. ಗೋಣಿಕೊಪ್ಪಲು ಕಾವೇರಿ ಎಜುಕೇಶನ್ ಸೊಸೈಟಿ ನಿರ್ದೇಶಕರಾದ ಪಳಗಂಡ ವಾಣಿ ಚಂಗಪ್ಪ ಲೋಗೋ ಹಾಗೂ ಬ್ಯಾನರ್ ಗಳನ್ನು ಬಿಡುಗಡೆಗೊಳಿಸಿ ವಿದ್ಯಾರ್ಥಿಗಳಿಗೆ ಶುಭಕೋರಿದರು. ಕಾರ್ಯಕ್ರಮದ ಪೂರ್ವ ತಯಾರಿ ಹಿಂದಿನ ಜವಾಬ್ದಾರಿಗಳು ಪ್ರಾಂಶುಪಾಲರ, ಎಲ್ಲಾ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಅಪಾರವೆಂದರು. ಡಿ.2 ರಂದು ನಡೆಯುವ ಕಾವೇರಿ ಕಾರ್ನಿವಲ್ 2025 ಜಿಲ್ಲಾ ಮಟ್ಟದ ಅಂತರ ಶಾಲಾ ಸ್ಪರ್ಧೆಯನ್ನು ಆಯೋಜಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳೊಂಡು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ಶುಭ ನುಡಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎನ್.ಎಂ.ನಾಣಯ್ಯ, ಪದವಿ ಕಾಲೇಜಿನ ಪ್ರಾಂಶುಪಾಲರು ಬೇನೆಡಿಕ್ಟ್ ಸಾಲ್ದಾನ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾಗರಾಜು ಕಾರ್ಯಕ್ರಮದ ಮುಂದಿನ ಕಾರ್ಯಯೋಜನೆಗೆ ಶುಭಕೋರಿದರು. ಉಪನ್ಯಾಸಕರು, ಪದವಿ ಉಪನ್ಯಾಸಕರು, ಬೋಧಕೇತರ ವೃಂದ ಹಾಗೂ ಸರ್ವ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳ ನೃತ್ಯ…
ಮಡಿಕೇರಿ ನ.27 NEWS DESK : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿ.1 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.
ಮಡಿಕೇರಿ ನ.27 NEWS DESK : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಉದ್ಘಾಟಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನ.29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ವಿರಾಜಪೇಟೆ ನ.27 NEWS DESK : ಪೆರುಂಬಾಡಿಯಲ್ಲಿರುವ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವವು ವಿವಿಧ ಸಾಂಸ್ಕೃತಿಕ, ಆರೋಗ್ಯ, ಪರಿಸರ ಕಾಳಜಿ, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು. ಎಸ್ ಇ ಎ ಕ್ಯಾಂಪಸ್ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕರಾದ ಬಿಂದು ಉದ್ಘಾಟಿಸಿ ಮಾತನಾಡಿ ಈ ಹಿಂದೆ ಅದೆಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಲವು ಸಮಸ್ಯೆಗಳ ನಡುವೆಯೂ ಶಿಕ್ಷಣ ಕಲಿತು ಉನ್ನತ ಹುದ್ದೆಯೊಂದಿಗೆ ಸೇವಾ ಸಾಧನೆ ಮೂಲಕ ಗುರುತಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅನುಗುಣವಾಗಿ ಶಾಲೆ ಕಾಲೇಜುಗಳಲ್ಲಿ ಪೂರಕವಾದ ವಾತಾವರಣ ಇದ್ದು, ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕೆಂದರು. ಬ್ಲಾಕ್ ಸಂಪನ್ಮೂಲ ವ್ಯಕ್ತಿ ಶೈಲಾ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವ ಉದ್ದೇಶದಿಂದ ಮಹಿಳಾ ಕಾಲೇಜು ಪ್ರಾರಂಭ ಮಾಡಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣವು…






