ಪಾಲಿಬೆಟ್ಟ ನ.27 NEWS DESK : ಲಯನ್ಸ್ ಕ್ಲಬ್ ಪಾಲಿಬೆಟ್ಟ ಮತ್ತು ಮಡಿಕೇರಿ ಇಕ್ಷಾ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಡಿ.7 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಅನುಗ್ರಹ ಲಯನ್ಸ್ ಸೇವಾ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದ ಶಿಬಿರದಲ್ಲಿ ನೇತ್ರ ತಜ್ಞರಾದ ಡಾ.ಎ.ಜಿ.ಚಿನ್ನಪ್ಪ ಹಾಗೂ ಡಾ. ಎಂ.ಎನ್.ಗುರುಪ್ರಸಾದ್ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಪಾಲಿಬೆಟ್ಟ ಲಯನ್ಸ್ ಕ್ಲಬ್ ಅಧ್ಯಕ್ಷ ಪಿ.ಎಸ್.ಸುಬ್ರಮಣಿ ಮನವಿ ಮಾಡಿದರು.
ಲೇಖಕ: admin
ಕುಶಾಲನಗರ ನ.27 NEWS DESK : ಕುಶಾಲನಗರದ ಶ್ರೀ ರಾಮಾಂಜನೇಯ ಉತ್ಸವ ಸಮಿತಿ, ದೇವಸ್ಥಾನ ಸೇವಾ ಟ್ರಸ್ಟ್ ಹಾಗೂ ಶ್ರೀ ಆಂಜನೇಯ ಸೇವಾ ಸಮಿತಿ ಆಶ್ರಯದಲ್ಲಿ ಡಿ.1 ಮತ್ತು 2 ರಂದು 40ನೇ ವರ್ಷದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಮಾಂಜನೇಯ ಉತ್ಸವ ಸಮಿತಿ ಉಪಾಧ್ಯಕ್ಷ ನವನೀತ್ ಪೊನ್ನೇಟಿ ಹಾಗೂ ಕಾರ್ಯದರ್ಶಿ ಕೆ.ವಿ.ಅನುದೀಪ್ ತಿಳಿಸಿದ್ದಾರೆ. ಕುಶಾಲನಗರದಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಿ.1 ರಂದು ರಥ ಬೀದಿಯಲ್ಲಿರುವ ಆಂಜನೇಯ ದೇವಾಲಯದಲ್ಲಿ ಪವನಾಮ ಹೋಮ, ಧ್ವಜಾರೋಹಣ ಮತ್ತು ಮಹಾಪೂಜೆ ನಡೆಯಲಿದೆ. 2 ರಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕ್ತರಿಗೆ ಅನ್ನ ಪ್ರಸಾದ ಸಂತರ್ಪಣೆ ನೆರವೇರಿಸಲಾಗುವುದು. ಅಂದು ಸಂಜೆ ಅಲಂಕೃತ ಮಂಟಪದಲ್ಲಿ ಶ್ರೀ ಆಂಜನೇಯ ಸ್ವಾಮಿಯ ಉತ್ಸವ ಮೂರ್ತಿಯ ಅದ್ದೂರಿ ಮೆರವಣಿಗೆ ಬೈಚನಹಳ್ಳಿ ಮಾರಮ್ಮ ದೇವಾಲಯದ ತನಕ ಸಾಗಲಿದೆ. ಮಧ್ಯಾಹ್ನ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿಸಲಾಗುವುದು. ಸಂಜೆ ಕೊಡಗಿನ ವಿವಿಧೆಡೆಗಳಿಂದ…
ಮಡಿಕೇರಿ ನ.27 NEWS DESK : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಈ ದೇಶದ ಸಂವಿಧಾನ ಪ್ರಪಂಚದಲ್ಲಿ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ದೇಶವದ ಬಡವರನ್ನು ಬದುಕಿಸುವ ಶಾಸನವಾಗಿದೆ. ಸಂವಿಧಾನದ ಎಲ್ಲಾ ಪ್ರಯೋಜನವನ್ನು ಪಡೆಯುವ ಮೂಲಕ ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕೆಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ದ.ಸಂ.ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ಮಾತನಾಡಿ, ನಮ್ಮ ಸಮಿತಿಯು ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದ್ದು, ಈ ವಿದ್ಯಾರ್ಥಿ ನಿಲಯದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಇನ್ನು ಮುಂದೆಯೂ ವಿದ್ಯಾಭ್ಯಾಸವನ್ನು ನಮ್ಮ ಧ್ಯೇಯವನ್ನಾಗಿಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಮಾಡುವತ್ತ ಶ್ರಮವಹಿಸುತ್ತೇವೆ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಜಿಲ್ಲಾ ಖಜಾನಾಧಿಕಾರಿ ರಘುನಾಥ್ ಅವರು ಮಾತನಾಡಿ ವಿದ್ಯಾರ್ಥಿಗಳು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಇತಿಹಾಸವನ್ನು ಓದುವ ಮೂಲಕ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಪ್ರಮುಖ ಹುದ್ದೆಗಳಿಗೆ ಏರಬೇಕು ಎಂದರು. ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳೆಂದು ಖಾತ್ರಿಪಡಿಸಬೇಕು.…
ವಿರಾಜಪೇಟೆ ನ.27 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆಯ ಕಾನೂರು ವಲಯದ ಕುಟ್ಟ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುಷ್ಪಾ ಅವರು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶ, ಪ್ರೌಢಾವಸ್ಥೆಯ ಮಕ್ಕಳು ಸಾಮಾಜಿಕವಾಗಿ, ಮಾನಸಿಕವಾಗಿ ಹೇಗೆ ಬಲಿಷ್ಟರಾಗಿರಬೇಕು ಎನ್ನುದರ ಕುರಿತು ಹಾಗೂ ದುಶ್ಚಟಗಳ ಬಗ್ಗೆ ಜಾಗೃತಿ ಮೂಡಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಧ್ಯಾಯರಾದ ದಿನೇಶ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಅಧ್ಯಾಪಕ ವೃಂದ, ಒಕ್ಕೂಟ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.
ಸುಂಟಿಕೊಪ್ಪ ನ.27 NEWS DESK : ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ದೇವಾಲಯಗಳಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಪನ್ಯದ ಮಳ್ಳೂರು ಬೆಳ್ಳಾರಿಕಮ್ಮ ದೇವಾಲಯದಲ್ಲಿ ವಿಶೇಷ ಪೂಜೆಗಳು, ನಾಗ ಪೂಜೆ, ಅಭಿμÉೀಕ ಪೂಜೆ, ಅರಸಿನ, ಕುಂಕುಮಾರ್ಚನೆ ಪೂಜೆಯನ್ನು ಪ್ರಧಾನ ಅರ್ಚಕ ಮಂಜುನಾಥ್ ಉಡುಪ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ಮಾಗಲು ವಸಂತ, ಪಟ್ಟೆಮನೆ ಅನಿಲ್ ಕುಮಾರ್ ಸೇರಿದಂತೆ ಇತರರು ಇದ್ದರು. ಕೆದಕಲ್ ಭದ್ರಕಾಳಿ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿμÉೀಕ, ಹರಕೆ ಒಪ್ಪಿಸುವುದು, ವಿಶೇಷ ಪೂಜೆ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಮಧ್ಯಾಹ್ನ ದೀಪರಾಧನೆ, ಮಹಾಪೂಜೆ ನೆರವೇರಿತು. ಸುಂಟಿಕೊಪ್ಪ, ಬೋಯಿಕೇರಿ, ಕೆದಕಲ್, ಮಡಿಕೇರಿ, ಹಾಲೇರಿ ಸೇರಿದಂತೆ ಇತರೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದರು. ನೆರೆದವರಿಗೆ ಅನ್ನದಾನ ನಡೆಯಿತು. ಸುಂಟಿಕೊಪ್ಪ ಮಧುರಮ್ಮ ಬಡಾವಣೆಯಲ್ಲಿ ನಾಗದೇವರ ದೇವಾಲಯದಲ್ಲಿ ಸುಬ್ರಮಣ್ಯ ಷಷ್ಠಿ ಅಂಗವಾಗಿ ನಾಗದೇವರ 32ನೇ ವರ್ಷದ ಪೂಜಾ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ…
ಸುಂಟಿಕೊಪ್ಪ ನ.27 NEWS DESK : ಕುಡಿಯುವ ನೀರಿನ ವ್ಯತ್ಯಯ, ಆಮೆಗತಿಯ ಜಲಜೀವನ್ ಕಾಮಗಾರಿ, ಕಸ ವಿಲೇವಾರಿ ಘಟಕದ ಅವೈಜ್ಞಾನಿಕ ನಿರ್ಮಾಣದಿಂದ ಕಲುಷಿತಗೊಂಡ ವಾತಾವರಣ, ಆರೋಗ್ಯ ಕೇಂದ್ರ ತುರ್ತು ಪ್ರಾಥಮಿಕ ಚಿಕಿತ್ಸೆ ಆಲಭ್ಯ, ಪಶುವೈಧ್ಯ ಇಲಾಖೆಯಿಂದ ರೈತರಿಗೆ ಸಿಗದೆ ಮನ್ನಣೆ, ಬೀದಿ ನಾಯಿಗಳ ಹಾವಳಿ, ಆಸ್ಸಾಂ ಕಾರ್ಮಿಕರ ಅನಧಿಕೃತ ಆಧಾರಕಾರ್ಡ್ ಬಳಕೆ ಬಗ್ಗೆ ಮಾದಾಪುರ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯಲ್ಲಿ ಗಂಭೀರ ಚರ್ಚೆಗೆ ಗ್ರಾಸವಾಯಿತು. ಮಾದಾಪುರ ಗ್ರಾಮ ಪಂಚಾಯಿತಿ ಗ್ರೇಡ್-1 ರ 2025-26ನೇ ಸಾಲಿನ ವಾರ್ಷಿಕ ಗ್ರಾಮ ಸಭೆಯು ಮಾದಾಪುರ ಸಮುದಾಯ ಭವನದಲ್ಲಿ ಗ್ರಾ.ಪಂ.ಅಧ್ಯಕ್ಷ ಮರುವಂಡ ಜಾಲಿ ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗೆ ಪಂಚಾಯಿತಿಯಿಂದ ಕ್ರಮ ಕೈಗೊಂಡಿಲ್ಲ. ಕಾರೆಕಾಡು ಜಂಬೂರು ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಬಡಾವಣೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಜನಸಾಮಾನ್ಯರಿಗೆ ಲಭಿಸುತ್ತಿಲ್ಲ. ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕನಿಷ್ಠ ಗಾಯಗೊಂಡವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಜಾಗದಲ್ಲಿ ಜನರ ಉಪಯೋಗಕ್ಕಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ…
ಸೋಮವಾರಪೇಟೆ ನ.27 NEWS DESK : ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದಿಂದ ಕೊಡಗು ಜಿಲ್ಲೆಯ ಒಕ್ಕಲಿಗ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಡಿ.6 ರಂದು ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಒಕ್ಕಲಿಗರ ಸಂಘದ ಜಿಲ್ಲಾ ನಿರ್ದೇಶಕ ಹೆಚ್.ಎನ್.ರವೀಂದ್ರ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಡಿ.6 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ನಿರ್ದೇಶಕರುಗಳು ಭಾಗಿಯಾಗಲಿದ್ದಾರೆ. ಪೋಷಕರು ತಮ್ಮ ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಮಕ್ಕಳನ್ನು ಕರೆತಂದರೆ ಹೆಚ್ಚಿನ ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರೊಂದಿಗೆ ಸಮುದಾಯದ ಇತರರಿಗೂ ಪ್ರೇರಣೆಯಾಗುತ್ತದೆ ಎಂದರು. ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ನಗದು ಬಹುಮಾನದೊಂದಿಗೆ ಪುರಸ್ಕರಿಸಲಾಗುವುದು ಎಂದರು. ಈ ಹಿಂದೆಯೇ ಸೋಮವಾರಪೇಟೆಯಲ್ಲಿ ಒಕ್ಕಲಿಗ ಸಮುದಾಯದ ವಿದ್ಯಾರ್ಥಿನಿಯರ ವಸತಿ ನಿಲಯ ಸ್ಥಾಪನೆಗೆ ಕ್ರಮ ವಹಿಸಲಾಗಿತ್ತು. ಕಾಣದ ಕೈಗಳ ರಾಜಕೀಯ ಕುತಂತ್ರದಿಂದಾಗಿ ಅಲ್ಪ ಹಿನ್ನಡೆಯಾಗಿತ್ತು. ಇದೀಗ ಒತ್ತಡ ಹಾಕಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ.…
ಸೋಮವಾರಪೇಟೆ ನ.27 NEWS DESK : ವಿದ್ಯಾರ್ಥಿಗಳು ಪರಿಸರ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರಬೇಕೆಂದು ಪಟ್ಟಣದ ಸಾಯಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಇಮಾನಿ ಸಲಹೆ ನೀಡಿದರು. ವಿಶ್ವ ವೃಕ್ಷ ಮತ್ತು ಸ್ವಾಸ್ಥ್ಯ ಫೌಂಡೇಷನ್ ಹಾಗೂ ಸಾಯಿ ಆಸ್ಪತ್ರೆಯ ಸಹಯೋಗದೊಂದಿಗೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಚನ್ನಬಸಪ್ಪ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪರಿಸರ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ, ಉತ್ತಮ ಜೀವನ ಶೈಲಿಯನ್ನು ರೂಪಿಸಿಕೊಳ್ಳಬೇಕು. ಪರಿಸರ ಸಂರಕ್ಷಣೆಯ ಉದ್ದೇಶದಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡವನ್ನು ನೆಡಬೇಕು ಎಂದು ಮನವಿ ಮಾಡಿದರು. ವಿಶ್ವ ವೃಕ್ಷಮತ್ತು ಸ್ವಾಸ್ಥ್ಯ ಫೌಂಡೇಷನ್ ಸಂಯೋಜಕ ದೇವರಾಜ್ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳು ಮತ್ತು ಸಮುದಾಯಗಳು ಒಂದು ಕೋಟಿಗೂ ಹೆಚ್ಚು ಗಿಡ ನೆಡುವುದಕ್ಕೆ ಗುರಿಯನ್ನು ಹೊಂದಬೇಕು ಎಂದರು. ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಯಪ್ಪ, ಸಂಪನ್ಮೂಲ ವ್ಯಕ್ತಿ ಎನ್.ವಿ.ಅಭಿಶೇಕ್ ಮಾತನಾಡಿದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ಕಾರ್ಡ್ ನೀಡಲಾಯಿತು.
ಪುತ್ತೂರು ನ.27 NEWS DESK : ಹೊಸತನದ ಮತ್ತು ಶ್ರೇಷ್ಟವಾದ ವಿಚಾರಗಳನ್ನು ಕಷ್ಟಪಟ್ಟಾದರೂ ಕಲಿಯಬೇಕು. ಕಲಿಯುವ ವಿಷಯದಲ್ಲಿ ನಾವು ಪರಿಣಿತರಾದರೆ ಅದು ಜ್ಞಾನದ ಜತೆಯಲ್ಲಿ ಸಾಮಾಜಿಕ ಸ್ಥಾನಮಾನವನ್ನೂ ತಂದುಕೊಡುತ್ತದೆ ಎಂದು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಅಸೋಸಿಯೇಟ್ ಫ್ರೊಫೆಸರ್ ಡಾ.ಪಲ್ಲವಿ.ಕೆ.ಎನ್ ಹೇಳಿದರು. ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಮತ್ತು ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ-2025 ಕ್ಕೆ ಚಾಲನೆ ನೀಡಿ ಮಾತಾಡಿದರು. ಪ್ರಸಕ್ತ ಸನ್ನಿವೇಶದಲ್ಲಿ ಕಾರ್ಯಕ್ಷೇತ್ರದಲ್ಲಿ ಒದಗಿಬರುವ ಸವಾಲುಗಳನ್ನು ಎದುರಿಸಲು ಅಪಾರವಾದ ಮತ್ತು ಅಗಾಧವಾದ ಜ್ಞಾನಶಕ್ತಿ ಹಾಗೂ ಮನೋಶಕ್ತಿಗಳು ಅಗತ್ಯ ಎಂದರು. ಪ್ರತಿಯೊಬ್ಬರೂ ಕೂಡಾ ತಾವು ಕಲಿತ ತಂತ್ರಜ್ಞಾನಗಳನ್ನು ಸಮಾಜದ ಒಳಿತಿಗಾಗಿ ಬಳಸಬೇಕು, ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಮೂಲಕ ನೆಲದ ಸಂಸ್ಕೃತಿಯನ್ನು…
ಮಡಿಕೇರಿ ನ.27 NEWS DESK : ಸಂವಿಧಾನವು ಭಾರತ ದೇಶದ ಪ್ರಜಾಪ್ರಭುತ್ವದ ಮೂಲಭೂತ ಆಧಾರವಾಗಿದ್ದು, ಸಮಾಜದಲ್ಲಿ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ಬಲಪಡಿಸುವ ಮಹತ್ವದ ದಾಖಲೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ.ರಾಘವ.ಬಿ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್‍ಸಿಸಿ ವಿಭಾಗದ ವತಿಯಿಂದ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆಯನ್ನು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನದ ರಚನೆಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನ ಸಭಾ ಸದಸ್ಯರ ಅಮೂಲ್ಯ ಕೊಡುಗೆಯನ್ನು ಅವರು ಸ್ಮರಿಸಿದರು. 1949 ರ ನವೆಂಬರ್ 26 ರ ದಿನ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಿದ್ದನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವರ್ಷ ಈ ದಿನವನ್ನು ಸಂವಿಧಾನ ದಿನವಾಗಿಯಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದ ಭಾಗವಾಗಿ ಸಂವಿಧಾನ ಪ್ರಸ್ತಾವನೆಯ ಸಾಮೂಹಿಕ…






