ಲೇಖಕ: admin

ಮಡಿಕೇರಿ NEWS DESK ನ.13 : ಮಡಿಕೇರಿ ಅರಣ್ಯ ಭವನದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವಿನ ಜನನವಾಗಿ ಎರಡು ವಾರಗಳಾಗಿದ್ದು, ಮೂರು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದು, ಮಡಿಕೇರಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ನಗರ ಠಾಣಾ ಪೊಲೀಸ್, ಶಿಶು ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Read More

ಮಡಿಕೇರಿ ನ.13 NEWS DESK : ಕೊಡಗು ಸಾರ್ವಜನಿಕ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿರಾಜಪೇಟೆ ತಾಲ್ಲೂಕನ್ನು ಪ್ರತಿನಿಧಿಸಿದ್ದ ಸರ್ವದೈವತ ಶಾಲೆಯ ಬಾಲಕ ಬಾಲಕಿಯರ ತಂಡ ಥ್ರೋಬಾಲ್ ನಲ್ಲಿ ಪ್ರಥಮ, ವಾಲಿಬಾಲ್ ನಲ್ಲಿ ಬಾಲಕಿಯರು ಪ್ರಥಮ, ಟೇಬಲ್ ಟೆನ್ನಿಸ್ ನಲ್ಲಿ ಬಾಲಕರು ಪ್ರಥಮ ಮತ್ತು ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಲ್ಲದೆ, ರಾಜ್ಯಮಟ್ಟಕ್ಕೂ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ಬೋಧಕ ವರ್ಗ ಹರ್ಷ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ಪ್ರಮೋದ್ ಗೌಡ ತರಬೇತಿ ನೀಡುತ್ತಿದ್ದಾರೆ.

Read More

ಮೈಸೂರು, ನ.13 NEWS DESK : ಸಂಸದರ ಕ್ರೀಡಾ ಮಹೋತ್ಸವದ ಅಂಗವಾಗಿ ಮೈಸೂರು-ಕೊಡಗು ಸಂಸದರಾದ ಮೈಸೂರು-ಕೊಡಗು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ನಡೆಯಲಿರುವ “ಸಂಸದರ ಕಪ್‌ ಬ್ಯಾಡ್ಮಿಂಟನ್‌ ಕಪ್‌” ಪೋಸ್ಟರ್‌ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಬೋಗಾದಿ ಎರಡನೇ ಹಂತದ ರಾಜರಾಜೇಶ್ವರಿ ನಗರದಲ್ಲಿರುವ ಸ್ಫೋರ್ಟ್ಸ್‌ ಪಾರ್ಕ್‌ನಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಮೈಸೂರಿನ ಕ್ರೀಡಾಸಕ್ತರು ಈ ಸದವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಜ್ಯೂನಿಯರ್‌, ಸೀನಿಯರ್‌ ವಿಭಾಗದಲ್ಲಿ ಪಂದ್ಯಗಳು ನಡೆಯಲಿವೆ. ಬಾಲಕ-ಬಾಲಕಿಯರಿಗಾಗಿ ಮೂರು ವಿಭಾಗದಲ್ಲಿ ಹಾಗೂ ಸೀನಿಯರ್‌ನಲ್ಲಿ ಪುರುಷರು ಮತ್ತು ಮಹಿಳೆಯರ ವಿಭಾಗದಲ್ಲಿ ಪಂದ್ಯಗಳನ್ನು ಆಯೋಜಿಸಲಾಗಿದೆ. ನ.15ರಂದು ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳಲು ನವೆಂಬರ್‌ 14ರಂದು ಸಂಜೆ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕೂಲ್‌ 10x, ಎಪಿಎನ್‌ ಪ್ರಾಪರ್ಟೀಸ್‌, SWISS, ರಾಜೇಂದ್ರ ಹಾರ್ಡ್‌ವೇರ್‌ ಅಂಡ್‌ ಪ್ಲೈವುಡ್‌ ಸ್ಫೋರ್‌ ಪ್ರಾಯೋಜಕತ್ವದಲ್ಲಿ ಈ ಪಂದ್ಯಾವಳಿ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ 99166 73300 ದೂರವಾಣಿ ಸಂಖ್ಯೆಯನ್ನು…

Read More

ಸುಂಟಿಕೊಪ್ಪ,ನ.13 NEWS DESK : ಬಡಾವಣೆಗಳಿಗೆ ಮೂಲಭೂತ ಸೌಕರ್ಯಗಳು, ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಬೇಕೆಂಬ ಸಲಹೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮಾರ್ಪಡುಗೊಳ್ಳಬೇಕು, ಪೈಸಾರಿ ಜಾಗಗಳು ಪಂಚಾಯಿತಿ ಸುರ್ಪದಿಗೆ ಒಳಪಟ್ಟು ಬಡವರಿಗೆ ಸೂರು ಹಂಚಿಕೆಗೊಳ್ಳಬೇಕೆಂದು ಗ್ರಾಮಸಭೆಯಲ್ಲಿ ಗ್ರಾಮಸ್ಥರ ಹಕ್ಕೊತ್ತಾಯ ಕೇಳಿ ಬಂತು. ಸುಂಟಿಕೊಪ್ಪ ಗ್ರೇಡ್  1 ಗ್ರಾಮ ಪಂಚಾಯಿತಿ 2025-26ನೇ ಸಾಲಿನ ಗ್ರಾಮಸಭೆಯ ಅಧ್ಯಕ್ಷತೆಯನ್ನು  ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್ ವಹಿಸಿದ್ದರು. ಶ್ರೀ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ  ನಡೆಸಲಾದ ಸಭೆಯಲ್ಲಿ  ಕಳೆದ ಬಾರಿ ಗ್ರಾಮಸಭೆಯಲ್ಲಿ ಚರ್ಚಿಸಲಾದ ವಿಚಾರಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರ ಮಾಹಿತಿ ಗಂಭೀರ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳದಿರುವ ಬಗ್ಗೆ ಗ್ರಾಮಸ್ಥರಾದ ಸೂಪಿ, ಇಬ್ರಾಹಿಂ, ಕೆ.ಎ.ಲತೀಫ್, ರಜಾಕ್ , ದಿನೇಶ್ , ಉದಯಕುಮಾರ್ ಡೆವಿಡ್  ಜನ್ಸಾನ್, ಮಮತ ಸೇರಿದಂತೆ ಮತ್ತಷ್ಟು ಗ್ರಾಮಸ್ಥರು ವರದಿಯ ಬಗ್ಗೆ ಅಸಾಮಾದಾನ ವ್ಯಕ್ತಪಡಿಸಿದರು.  ಇಬ್ರಾಹಿಂ ಮಾತನಾಡಿ ಪ್ರತಿ ಗ್ರಾಮಸಭೆಯಲ್ಲಿ ನಾವು ಹೇಳುವುದು ನೀವು ಬರೆದುಕೊಳ್ಳುವುದು ಮತ್ತು ಸಭೆಯಲ್ಲಿ ಓದುವುದಕ್ಕೆ  ಮಾತ್ರ ಸೀಮಿತವಾಗಿದೆ ಯಾವ ಯಾವ ಬೇಡಿಕೆಗಳು…

Read More

ಸೋಮವಾರಪೇಟೆ ನ.13 NEWS DESK : ಆಡಳಿತದ ಅನುಮತಿ ಪಡೆಯದೆ ತಾಲ್ಲೂಕಿನ ಹಲವೆಡೆ ಅಳವಡಿಸಿರುವ ಫ್ಲೆಕ್ಸ್‍ಗಳನ್ನು ಪಂಚಾಯಿತಿ ಆಡಳಿತ ತಕ್ಷಣವೆ ತೆರವುಗೊಳಿಸಬೇಕು ಎಂದು ಮಂಡಲ ಬಿಜೆಪಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಜನಪ್ರತಿನಿಧಿಗಳು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ಜನರಿಗೆ ಹತ್ತಿರವಾಗಬೇಕು. ಫ್ಲೆಕ್ಸ್‍ಗಳ ಹಾಕಿ ಪ್ರಚಾರ ಮಾಡಿದರೆ ಜನರಿಗೆ ಹತ್ತಿರವಾಗಲು ಸಾಧ್ಯವಿಲ್ಲದ ಮಾತು ಎಂದು ಮಂಡಲ ಅಧ್ಯಕ್ಷ ಗೌತಮ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೊಡಗಿನ ಗಲ್ಲಿಗಲ್ಲಿಗಳಲ್ಲಿ ಫ್ಲೆಕ್ಸ್‍ಗಳನ್ನು ಹಾಕಿ ಪ್ರಚಾರ ಪಡೆಯುವ ಪದ್ದತಿ ಇತ್ತೀಚಿನ ವರ್ಷಗಳಲ್ಲಿ ಜಾಸ್ತಿಯಾಗಿದೆ. ಒಂದೆರಡು ದಿನ ಫ್ಲೆಕ್ಸ್ ಹಾಕಿ ನಂತರ ತೆರವುಗೊಳಿಸಿದರೆ ಸಮಸ್ಯೆಯಿಲ್ಲ. ಆದರೆ ತಿಂಗಳುಗಟ್ಟಲೆ ಅಲ್ಲೇ ಬಿಡುವುದು ತಪ್ಪು. ಇನ್ನಾದರೂ ಸ್ಥಳೀಯ ಆಡಳಿತ ಕ್ರಮಕೈಗೊಳ್ಳಬೇಕು. ಅಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಖಂಡನೀಯ ಎಂದು ಹೇಳಿದರು. ತಾಲ್ಲೂಕು ಕಚೇರಿಯನ್ನು ಶುದ್ದ ಮಾಡುತ್ತೇನೆ. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ವೈದ್ಯರನ್ನು ತರುತ್ತೇನೆ ಎಂದು ಹಾಲಿ ಶಾಸಕರು ಹೇಳಿ ಎರಡೂವರೆ ವರ್ಷಗಳೇ ಕಳೆದಿವೆ. ಹಿಂದಿನ ಶಾಸಕರು ಅವಧಿಯಲ್ಲಿ 13 ವೈದ್ಯರು ಕೆಲಸ ಮಾಡುತ್ತಿದ್ದರು. ಈಗ ಮೂವರು…

Read More

ಮಡಿಕೇರಿ NEWS DESK ನ.12 : ಹಾರಂಗಿ ಹಿನ್ನೀರಿನಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕುಶಾಲನಗರ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ.  ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುಂಟಿಕೊಪ್ಪ ಪೊಲೀಸರು, ಕುಶಾಲನಗರ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ದುಬಾರೆ ರ‍್ಯಾಫ್ಟರ್‌ಗಳು ಮೃತ ದೇಹಗಳಿಗಾಗಿ ಶೋಧ ಕಾರ್ಯ ನಡೆಸಿದರು. ಮಡಿಕೇರಿ ನಗರದ ಜ್ಯೂನಿಯರ್ ಕಾಲೇಜ್ ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ಹೆಬ್ಬೆಟ್ಟಗೇರಿ ಗ್ರಾಮ ನಿವಾಸಿ ಪಾಂಡೀರ ಪೂವಯ್ಯ ಎಂಬುವವರ ಪುತ್ರ ಚಂಗಪ್ಪ(17) ಹಾಗೂ ಕಾಲೂರು ಗ್ರಾಮದ ನಿವಾಸಿ ಚನ್ನಪಂಡ ತಮ್ಮಯ್ಯ ಎಂಬುವವರ ಪುತ್ರ ತರುಣ್ ತಿಮ್ಮಯ್ಯ(17) ಎಂಬುವವರೇ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಘಟನೆ ಕುರಿತು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಧ್ಯಾಹ್ನ 2 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಸಂಜೆಯವರೆಗೆ ಶೋಧ ಕಾರ್ಯ ನಡೆಯಿತು. ರಕ್ಷಣಾ ತಂಡ ಚಂಗಪ್ಪ ಎಂಬಾತನ ಮೃತದೇಹವನ್ನು ಹೊರ ತೆಗೆಯುವಲ್ಲಿ ಸಫಲವಾಗಿದೆ.

Read More

ಮಡಿಕೇರಿ ನ.12 NEWS DESK : ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಬಿ.ಬಿ.ಹೇಮಲತ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೇಮಲತ ಅವರು ತಿಳಿಸಿದರು. ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ…

Read More

ಮಡಿಕೇರಿ ನ.12 NEWS DESK : ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ‍್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್‌ಗಳನ್ನು ಪಡೆಯುವ ಕುಟುಂಬದ ಪೋಸ್ಟ್‌ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು. ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್ ಪೆಂಡೆಂಟ್ ವಿಜೇತರಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More

ಮಡಿಕೇರಿ ನ.12 NEWS DESK : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಯಶಸ್ವೀ ಅನುಷ್ಠಾನದ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವುದು, ವಿರೋಧ ಪಕ್ಷಗಳ ಆಧಾರ ರಹಿತ ಟೀಕೆಗಳಿಗೆ ಪ್ರತ್ಯುತ್ತರ ನೀಡುವುದು ಮತ್ತು ವೋಟ್ ಚೋರಿ ಅಭಿಯಾನ ನಡೆಸಲು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ನಿರ್ಧರಿಸಿದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಮತ್ತು ರಾಜ್ಯ ಸರಕಾರದ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಪ್ರಚಾರ ಮಾಡಲು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಜಿಲ್ಲೆಯ ಇಬ್ಬರು ಶಾಸಕರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, 6 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರುಗಳ ಸಹಕಾರ ಪಡೆದು ಕಾರ್ಯೋನ್ಮುಖವಾಗಲು ಜಿಲ್ಲಾ ಕಾರ್ಯಕಾರಿ ಸಮಿತಿ ತೀರ್ಮಾನಿಸಿತು. ಆಯಾ ಬ್ಲಾಕ್ ನ ನೂತನ ಅಧ್ಯಕ್ಷರುಗಳು ಎಲ್ಲಾ ಕಾಂಗ್ರೆಸ್ ನಾಯಕರುಗಳ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ಈ ತಿಂಗಳ ಅಂತ್ಯದೊಳಗೆ ಅರ್ಥಪೂರ್ಣವಾಗಿ ಅಧಿಕಾರ ಸ್ವೀಕರಿಸಬೇಕು. ಪ್ರತಿ ವಲಯ…

Read More

ಮಡಿಕೇರಿ ನ.12 NEWS DESK : ಸರಕಾರದ ವಿವಿಧ ಇಲಾಖೆಗಳ ಬಹಳಷ್ಟು ಲೋಪಗಳು ಲೋಕಾಯುಕ್ತರ ಗಮನಕ್ಕೆ ಬರುತ್ತಿದ್ದು, ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಅಧಿಕಾರಿಗಳು ಸರಕಾರಿ ಕೆಲಸವನ್ನು ಲಘುವಾಗಿ ಪರಿಗಣಿಸಬಾರದು ಮತ್ತು ವಿಳಂಬವಿಲ್ಲದೆ ಜನಪರವಾಗಿ ಕಾರ್ಯನಿರ್ವಹಿಸಬೇಕು ಎಂದು ಮಡಿಕೇರಿ ಲೋಕಾಯುಕ್ತ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರು ಸೂಚನೆ ನೀಡಿದ್ದಾರೆ. ನಗರದ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಇರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಪ್ರತಿನಿತ್ಯ ಚಲನವಲನ ಬಗ್ಗೆ ದಾಖಲು ಮಾಡಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಸಮಯ ಪಾಲನೆ ಅತೀ ಮುಖ್ಯ. ಆ ನಿಟ್ಟಿನಲ್ಲಿ ಚಲನವಲನ ವಹಿಯನ್ನು ಸರಿಯಾಗಿ ನಿರ್ವಹಿಸಬೇಕು. ರಜೆ ಪಡೆದಿದ್ದಲ್ಲಿ ರಜೆ ಅರ್ಜಿ ಕಚೇರಿಯಲ್ಲಿ ಇರಬೇಕು. ನಗದು ವಹಿ ಬರೆಯಬೇಕು. ಕಚೇರಿ ಕೆಲಸ ನಿರ್ವಹಣೆ ಸಂಬಂಧ ಸರಿಯಾಗಿ ಪಾಲನೆ ಅತೀ ಮುಖ್ಯ ಎಂದು…

Read More