ಮಡಿಕೇರಿ ಆ.20 NEWS DESK : ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ರತಿಜ್ಞಾ ವಿಧಿಯನ್ನು ವಾರ್ತಾಧಿಕಾರಿ ಚಿನ್ನಸ್ವಾಮಿ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಬೋಧಿಸಿದರು. ಅಲ್ಲದೇ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಮಂಗಲ ವಿ.ಎಚ್., ವಿಶೇಷ ಚೇತನರ ಅಧಿಕಾರಿ ವಿಮಲ, ಶಿರಸ್ತೇದಾರ್ ಮಹೇಶ್, ಷಣ್ಮುಖ, ಇತರರು ಇದ್ದರು.
ಲೇಖಕ: admin
ಮಡಿಕೇರಿ ಆ.20 NEWS DESK : ಡಿ.ದೇವರಾಜ ಅರಸು ಅವರು ರಾಜ್ಯದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಿ ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಡಿ.ದೇವರಾಜ ಅರಸು ಅವರು ‘ಉಳುವವನೆ ಭೂಮಿಯ ಒಡೆಯ’ ಕಾಯ್ದೆ ಜಾರಿಗೊಳಿಸುವ ಮೂಲಕ ಭೂಮಿಯ ಹಕ್ಕನ್ನು ಕೊಡಿಸಿ ಬಡವರಿಗೆ ಬೆಳಕಾಗಿ ಕಂಡರು ಎಂದು ಜಿಲ್ಲಾಧಿಕಾರಿ ಅವರು ವರ್ಣಿಸಿದರು. ಹಾವನೂರು ಆಯೋಗ ರಚಿಸುವ ಮೂಲಕ ಸಣ್ಣ ಸಣ್ಣ ಸಮಾಜಗಳು ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಸಾಮಾಜಿಕ ಕ್ರಾಂತಿಗೆ ಚಾಲನೆ ನೀಡಿದರು ಎಂದು ತಿಳಿಸಿದರು. ಡಿ.ದೇವರಾಜ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಸಾಮಾಜಿಕ…
ಸುಂಟಿಕೊಪ್ಪ, ಆ.20 NEWS DESK : ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಸುಂಟಿಕೊಪ್ಪ ಶಾಖೆಯು 2025-26ನೇ ಸಾಲಿನಲ್ಲಿ ರೂ.51.70 ಕೋಟಿ ಠೇವಣಿ ಸಂಗ್ರಹಿಸಿ, ರೂ.42.01 ಕೋಟಿ ಸಾಲ ವಿತರಿಸುವ ಮೂಲಕ ರೂ.1.29 ಕೋಟಿ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ತಿಳಿಸಿದ್ದಾರೆ. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಗುಂಡುಗುಟ್ಟಿ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಬ್ಯಾಂಕಿನ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಜಿಲ್ಲೆಯಲ್ಲಿ 25 ಶಾಖೆಗಳನ್ನು ಹೊಂದಿದ್ದು, ಎಲ್ಲ ಶಾಖೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. 2025-26ನೇ ಸಾಲಿನಲ್ಲಿ ಬ್ಯಾಂಕ್ ವಿವಿಧ ರೀತಿಯ ರೂ.2,043 ಕೋಟಿ ಠೇವಣಿ ಸಂಗ್ರಹಿಸಿದ್ದು, ಸದಸ್ಯರಿಗೆ ರೂ.1,772 ಕೋಟಿ ವಿವಿಧ ರೀತಿಯ ಸಾಲಗಳನ್ನು ವಿತರಿಸಿದೆ. ಈ ಅವಧಿಯಲ್ಲಿ ರೂ.22.39 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಮಾಹಿತಿ ನೀಡಿದರು. ಸಾಲ ವಸೂಲಾತಿಯಲ್ಲಿ ಶೇ.98ರಷ್ಟು ಪ್ರಗತಿ ಸಾಧಿಸಲಾಗಿದ್ದು, ಬ್ಯಾಂಕಿನ ಒಟ್ಟು ಅನುತ್ಪಾದಕ…
ಗೋಣಿಕೊಪ್ಪ ಆ.20 NEWS DESK : ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹೊಸ ಸಮವಸ್ತ್ರವನ್ನು ವಿತರಿಸಲಾಯಿತು. ಶಾಲೆಯ ವಿವೇಕ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೋಷಕರ ಸಹಕಾರದೊಂದಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಶಿಕ್ಷಕರು ಸಿದ್ಧಪಡಿಸಿದ ಹೊಸ ಬಣ್ಣದ ಸಮವಸ್ತ್ರವನ್ನು ಗೋಣಿಕೊಪ್ಪ ರೋಟರಿ ಸಂಸ್ಥೆ ಅಧ್ಯಕ್ಷ ಪ್ರಮೋದ್ ಕಾಮತ್ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಪ್ರಮೋದ್ ಕಾಮತ್, ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ ಹಾಗೂ ಪ್ರೇರಣೆ ಹೆಚ್ಚಿಸಲು ಸಮವಸ್ತ್ರವೂ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಶಾಲೆಯ ಎಸ್‌ಡಿಎಂಸಿ ಸಮಿತಿ ಹಾಗೂ ಶಿಕ್ಷಕರು ಕೈಗೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ. ಹಳದಿ ಬಣ್ಣದ ಸಮವಸ್ತ್ರವು ಮಕ್ಕಳನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತಿದ್ದು, ಸರ್ಕಾರಿ ಶಾಲೆಯಲ್ಲಿ ಕೈಗೊಂಡಿರುವ ಈ ವಿನೂತನ ಪ್ರಯತ್ನ ಮೆಚ್ಚುವಂತದ್ದು ಎಂದರು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಹಾಗೂ ಏಕತಾ ಮನೋಭಾವ ಬೆಳೆಸುವ ಉದ್ದೇಶದಿಂದ ಹೊಸ ಬಣ್ಣದ ಸಮವಸ್ತ್ರವನ್ನು ವಾರದಲ್ಲಿ ಎರಡು ದಿನ…
ಕುಶಾಲನಗರ ಆ.20 NEWS DESK : ಕರ್ನಾಟಕ ಆರ್ಯವೈಶ್ಯ ಮಹಾಸಭಾ ಆಶ್ರಯದಲ್ಲಿ ಡಿ.25 ರಿಂದ ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಗ್ಲೋಬಲ್ ಆಕ್ಸಿಲರೇಟರ್ ವಿಷನ್ ಸಮಿಟ್’ ಅಂತರರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಕುಶಾಲನಗರ ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ತಿಳಿಸಿದರು. ಕುಶಾಲನಗರದ ಕನ್ನಿಕಾ ಇಂಟರ್‌ನ್ಯಾಷನಲ್ ಆವರಣದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ಪೀಳಿಗೆಯನ್ನು ಅಂತರರಾಷ್ಟ್ರೀಯ ಮಟ್ಟದ ಉದ್ಯಮಿಗಳನ್ನಾಗಿ ರೂಪಿಸುವ ಉದ್ದೇಶದಿಂದ ಸಮಾವೇಶದಲ್ಲಿ ಗುಣಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಉದ್ಯೋಗ ಅರಸುವ ಬದಲು ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಲು ಯುವಜನತೆಗೆ ಅಗತ್ಯವಾದ ಮಾರ್ಗದರ್ಶನ, ತರಬೇತಿ ಹಾಗೂ ಪ್ರೇರಣೆಯನ್ನು ನೀಡಲಾಗುವುದು. ನವೋದ್ಯಮಗಳ ಸ್ಥಾಪನೆ, ಈಗಿರುವ ವ್ಯಾಪಾರ-ಉದ್ಯಮಗಳ ಅಭಿವೃದ್ಧಿ, ಆರ್ಥಿಕ ಪಾಲುದಾರಿಕೆ, ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಸದ್ಬಳಕೆ, ಆಮದು-ರಫ್ತು, ರಿಯಲ್ ಎಸ್ಟೇಟ್, ಆಧುನಿಕ ಉದ್ಯಮಗಳು, ಸ್ಪರ್ಧಾತ್ಮಕ ಸವಾಲುಗಳು, ಕೃಷಿ ಚಟುವಟಿಕೆಗಳ ವೈವಿಧ್ಯತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಹೊಸ ಆವಿಷ್ಕಾರಗಳ ಅಳವಡಿಕೆ ಕುರಿತು ಪರಿಣಿತರಿಂದ ಮಾಹಿತಿ ಮತ್ತು…
ಮಡಿಕೇರಿ NEWS DESK ಆ.20 : ಅಯ್ಯಂಗೇರಿಯ ಗೌಡ ಯುವ ಒಕ್ಕೂಟದ ವತಿಯಿಂದ ಆ.29 ಮತ್ತು 30ರಂದು ಭಾಗಮಂಡಲದ ಶ್ರೀ ಭಗಂಡೇಶ್ವರ ದೇಗುಲದ ಮುಂಭಾಗದಲ್ಲಿರುವ ಕುದುಕುಳಿ ಕುಶಾಲಪ್ಪನವರ ಗದ್ದೆಯಲ್ಲಿ ಪ್ರಥಮ ವರ್ಷದ ರಾಜ್ಯ ಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ನಡೆಯಲಿದೆ. ಗೌಡ ಯುವ ಒಕ್ಕೂಟದ ಅಧ್ಯಕ್ಷ ಭರತ್ ಕಾವೇರಿಮನೆ ಅವರು ಕ್ರೀಡಾಕೂಟದ ವಿವರಗಳನ್ನು ನೀಡಿ, ಆ.29 ರಂದು ಕೆಸರುಗದ್ದೆಯ ಕ್ರಿಕೆಟ್ ಪಂದ್ಯಾವಳಿ ಆಯೋಜಿತವಾಗಿದ್ದು, ಈಗಾಗಲೆ 24 ತಂಡಗಳು ನೋಂದಣಿಯಾಗಿದೆ. 3 ಓವರ್‌ಗಳಿಗೆ ಸೀಮಿತವಾದ ಈ ಪಂದ್ಯಾವಳಿಯನ್ನು ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಪಂದ್ಯಾವಳಿ ವಿಜೇತ ತಂಡಕ್ಕೆ 10 ಸಾವಿರ ರೂ., ದ್ವಿತೀಯ 8 ಸಾವಿರ ನಗದು ಹಾಗೂ ಆಕರ್ಷಕ ಟ್ರೋಫಿಗಳನ್ನು ಬಹುಮಾನವಾಗಿ ವಿತರಿಸಲಾಗುತ್ತದೆಂದರು. ಆ.30 ರಂದು ಬೆಳಗ್ಗೆ 10 ಗಂಟೆಗೆ ಮಹಿಳೆಯರ ವಿಭಾಗದ ವಾಲಿಬಾಲ್ ಪಂದ್ಯಾವಳಿ ನಡೆಯಲಿದ್ದು, ಇದನ್ನು ಮಡಿಕೇರಿ ತಾಲ್ಲೂಕು ಕಸಾಪ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಉದ್ಘಾಟಿಸಲಿದ್ದಾರೆ. ಪಂದ್ಯಾವಳಿ ವಿಜೇತ…
ಮಡಿಕೇರಿ NEWS DESK ಆ.20 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬ್ ದುರಂತ ನರಮೇಧದ ಸ್ಥಳದಲ್ಲಿ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮದ ಪ್ರಯುಕ್ತ ಅಗಲಿದ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿತು. ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪುಷ್ಪ ನಮನ ಸಲ್ಲಿಸುವ ಮೂಲಕ ಮುಂದಿನ ತಮ್ಮ ಹೋರಾಟದ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಕೊಡವಲ್ಯಾಂಡ್ ಮತ್ತು ಆದಿಮಸಂಜಾತ ಕೊಡವ ಬುಡಕಟ್ಟು ಸಮುದಾಯಕ್ಕಾಗಿ ತಮ್ಮ ಅಮೂಲ್ಯ ಪ್ರಾಣವನ್ನು ತ್ಯಾಗ ಮಾಡಿದ ಪೂರ್ವಜರು ಹಾಗೂ ಹಿರಿಯರನ್ನು ಸ್ಮರಿಸುವುದರೊಂದಿಗೆ ಆಶೀರ್ವಾದವನ್ನು ಕೋರಲಾಗಿದೆ ಎಂದರು. ದೇವಟ್ ಪರಂಬ್ ದುರಂತ ನರಮೇಧವನ್ನು ವಿಶ್ವಸಂಸ್ಥೆಯ ಹೊಲೊಕಾಸ್ಟ್ (ನರಮೇಧ) ಸ್ಮರಣಾರ್ಥ ಪಟ್ಟಿಗೆ ಸೇರಿಸಬೇಕು. ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿ ನಡೆದ ಅರಮನೆ ಪಿತೂರಿಯ ಮೂಲಕ ಕೊಡವರ ರಾಜಕೀಯ ಹತ್ಯೆಗಳನ್ನು ಗುರುತಿಸಬೇಕು. ಭಾರತೀಯ ಸಂವಿಧಾನದ 49 ನೇ ವಿಧಿ ಮತ್ತು ಯುನೆಸ್ಕೋದ 1964 ರ ವೆನಿಸ್ ಚಾರ್ಟರ್ ಅಡಿಯಲ್ಲಿ ಈ ದುರಂತಗಳನ್ನು ಅಂತರರಾಷ್ಟ್ರೀಯ ಹೊಲೊಕಾಸ್ಟ್ ಸ್ಮಾರಕ, ವಿಶ್ವಸಂಸ್ಥೆಯ ಅಂತರರಾಷ್ಟ್ರೀಯ…
ವಿರಾಜಪೇಟೆ NEWS DESK ಆ.20 : ಹೈದರಾಬಾದ್ ನಲ್ಲಿ ಜರುಗಿದ 4 ನೇ ರಾಷ್ಟ್ರ ಮಟ್ಟದ ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕವನ್ನು ಗೆದ್ದು ಕೊಡಗು ಜಿಲ್ಲೆಗೆ ಹಾಗೂ ಕರ್ನಾಟಕಕ್ಕೆ ಕೀರ್ತಿಯನ್ನು ತಂದ ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಅಲ್ಬಿನ್ ಅಂತೋನಿ ಸಿ. ಕೆ. ಅವರನ್ನು ಇತ್ತೀಚೆಗೆ ವಿರಾಜಪೇಟೆ ತಾಲೂಕು ಮೈದಾನದಲ್ಲಿ ನಡೆದ ಸ್ವಾತಂತ್ರೋತ್ಸವದ ಸಮಾರಂಭದಲ್ಲಿ ಗಣ್ಯರು ಸನ್ಮಾನಿಸಿ ಗೌರವಿಸಿದರು.ವಿರಾಜಪೇಟೆಯವರಾದ ಅಲ್ಬಿನ್ ಅಂತೋನಿ ಕ್ರಿಸ್ಟಿ ಸಿ. ಎ ಹಾಗೂ ಸಂತ ಅನ್ನಮ್ಮ ಶಾಲೆಯ ದೈಹಿಕ ಶಿಕ್ಷಕಿ ಶೈನಿ ಆನ್ಸಿ ಸಿ ಎ ದಂಪತಿಗಳ ಪುತ್ರ. ಅಲ್ಬಿನ್ ಅಂತೋನಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯಲ್ಲಿ ವ್ಯಾಸಂಗವನ್ನು ಮಾಡುತ್ತಿದ್ದು ವಿದ್ಯಾರ್ಥಿಯ ಸಾಧನೆಗೆ ಸಂತ ಅನ್ನಮ್ಮ ಪಿಯು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಮದಲೈ ಮುತ್ತು ಹಾಗೂ ಕಾಲೇಜಿನ ಉಪನ್ಯಾಸಕರು ಪ್ರಶಂಸೆಯನ್ನು ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
ಮಡಿಕೇರಿ NEWS DESK ಆ.20 : ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು. ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ ಆಡಳಿತದ ಮೌಲ್ಯಗಳು ಬಡವರ ಪರವಾಗಿತ್ತು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್ ಬಣ್ಣಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಪ್ರಚಾರ ಸಮಿತಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಡಿಕೇರಿ ಬ್ಲಾಕ್ ಪ್ರಚಾರ ಸಮಿತಿ ಮತ್ತು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯ ಸಂಯುಕ್ತಾಶ್ರಯದಲ್ಲಿ ರಾಜೀವ್ ಗಾಂಧಿ ಅವರ 84ನೇ ಜನ್ಮ ದಿನಾಚರಣೆ ಮತ್ತು ದೇವರಾಜ ಅರಸು ಅವರ 111 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಟಿ.ಪಿ.ರಮೇಶ್ ಅವರು ದೇಶದ 18 ವರ್ಷದ ಯುವಕರಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಯುವ ಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಿದ ರಾಜೀವ್ ಗಾಂಧಿ ಅವರ ಆದರ್ಶ ಇತರರಿಗೆ ಮಾದರಿಯಾಗಿದೆ.…
ಮಡಿಕೇರಿ NEWS DESK ಆ.20 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 26ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಪೂಜೆ ನಡೆಯಲಿದೆ. ಬಳಿಕ 13 ದಿನಗಳ ಕಾಲ ಪ್ರತಿದಿನ ಸಂಜೆ ಭಜನೆ ಮತ್ತು ಮಹಾಪೂಜೆ ನಡೆಯಲಿದೆ. ಸೆಪ್ಟೆಂಬರ್ 23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ಧೂರಿ ಶೋಭಾಯಾತ್ರೆಯ ಮೂಲಕ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದು ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಸೆಪ್ಟೆಂಬರ್ 20ರಂದು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದೆ. ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಹಾಗೂ ತನು, ಮನ, ಧನ ಸಹಾಯದ ಮೂಲಕ ಸಹಕರಿಸುವಂತೆ…






