ಲೇಖಕ: admin

ನಾಪೋಕ್ಲು ನ.27 NEWS DESK : ಪಾಲೂರು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಷಷ್ಠಿ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಷಷ್ಠಿ ಹಬ್ಬದ ಪ್ರಯುಕ್ತ ದೇವಾಲಯದಲ್ಲಿ ನಾಗನ ಬನಕ್ಕೆ ರುದ್ರಾಭಿಷೇಕ, ಹಾಲು ಎಳೆ ನೀರು ಸೇರಿದಂತೆ ವಿವಿಧ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ನೆರವೇರಿತು. ಮಧ್ಯಾಹ್ನ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಬಳಿಕ ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಅರ್ಚಕ ಅರುಣ್ ಕುಮಾರ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ದೇವಾಲಯದ ಪಾರುಪತ್ಯಗಾರ ಟಿ.ಕೆ.ಮನು, ತಕ್ಕ ಮುಖ್ಯಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ.

Read More

ನಾಪೋಕ್ಲು ನ.27 NEWS DESK : ಹಳೆತಾಲ್ಲೂಕಿನ ಶಿವಚಾಳಿಯಂಡ ಕುಟುಂಬದ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಮುಂಜಾನೆಯಿಂದಲೇ ದೇವರಿಗೆ ಹಾಲು, ಎಲೆನೀರು ಅಭಿಷೇಕ ಸೇರಿದಂತೆ ವಿವಿಧ ಪೂಜಾ ವಿಧಿಗಳನ್ನು ನೆರವೇರಿಸಲಾಯಿತು. ಅರ್ಚಕ ಜಗದೀಶ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು. ಈ ಸಂದರ್ಭ ಹಿರಿಯರಾದ ವಚಾಳಿಯಂಡ ಸಹದೇವ, ಮಾದಪ್ಪ, ಅಂಬಿ ಕಾರ್ಯಪ್ಪ, ಕಿಶೋರ್ ಬೋಪಣ್ಣ, ಲವ, ಸುಭಾಷ್ ಇನ್ನಿತರ ಉಪಸ್ಥಿತರಿದ್ದು. ವರದಿ : ದುಗ್ಗಳ ಸದಾನಂದ. 

Read More

ವಿರಾಜಪೇಟೆ ನ.27 NEWS DESK : ನಗರದ ತೆಲುಗರ ಬೀದಿಯಲ್ಲಿರುವ ಶ್ರೀ ಅಂಗಾಳ ಪರಮೇಶ್ವರಿ ದೇವಾಲಯದಲ್ಲಿ ಸುಬ್ರಹಣ್ಯ ಷಷ್ಠಿ ಪ್ರಯುಕ್ತ ನಾಗದೇವರ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆಯಿಂದಲೇ ದೇವರಿಗೆ ಹಾಲಿನ ಅಭಿಷೇಕ, ವಿಶೇಷ ಪೂಜೆಗಳು ನಡೆಯಿತು. ತಂಬಿಲ ಸೇವೆ, ಕ್ಷೀರಾಭಿಷೇಕ, ಕುಂಕುಮಾರ್ಚನೆ ಮತ್ತು ಪುಷ್ಪಾರ್ಚನೆಯೊಂದಿಗೆ ಮಹಾ ಮಂಗಳಾರತಿಯನ್ನು ನೆರವೇರಿಸಲಾಯಿತು. ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು. ಪೂಜೆಯ ಅಂಗವಾಗಿ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ನಾಗನ ರೂಪ ಹೋಲುವಂತೆ ದೇವರ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು. ನಗರದ ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.27 NEWS DESK : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ ಲಿಖಿತ ಸಂವಿಧಾನದಲ್ಲಿ, ರೀಬಿಲ್ ಮಾಡುವ ಅವಕಾಶವಿಲ್ಲ. ಆದರೆ ನಮ್ಮ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ, ಕಾನೂನನ್ನು ಹಿಂದಕ್ಕೆ ಪಡೆಯುವ ಅವಕಾಶ ಕಲ್ಪಿಸಿದ್ದಾರೆ. ಆರ್ಟಿಕಲ್ 14, ಸಮಾನತೆ, ಸಮಾಜದಲ್ಲಿ ಎಲ್ಲಾ ಜಾತಿ, ಧರ್ಮ, ಲಿಂಗ, ಪಂಗಡ ಸಮಾನವಾಗಿ ಜೀವನ ನಡೆಸಬೇಕು ಎಂದು ತಿಳಿಸುತ್ತದೆ. ಸಂವಿಧಾನ ಅರ್ಥ ಮಾಡಿಕೊಂಡರೆ, ಈ ಸಂವಿಧಾನ ನಮ್ಮನ್ನು, ನಮ್ಮ ಪಕ್ಷವನ್ನು ರಕ್ಷಣೆ ಮಾಡುತ್ತದೆ. ಸಂವಿಧಾನದ ಮೇಲೆ ಜನರ ವಿಶ್ವಾಸ ಕಳೆದು…

Read More

ಮಡಿಕೇರಿ ನ.27 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಪೌಂಡೇಶನ್, ಬೆಂಗಳೂರು,  ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಪೊನ್ನಂಪೇಟೆ ಕೂರ್ಗ್ ಇನ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance (RAMP) ರಡಿ  Incubation ಯೋಜನೆ ಕುರಿತು  ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‍ಒ ಎಂಎಸ್‍ಎಂಇ ನಿವೃತ್ತ ಉಪ ನಿರ್ದೇಶಕರಾದ  ಗೋಪಿನಾಥ್ ರಾವ್ ಆರ್. ಅವರು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು.

Read More

ಮಡಿಕೇರಿ ನ.27 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಪೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance (ರ್ಯಾಂಪ್) ರಡಿ Incubation ಯೋಜನೆ ಕುರಿತು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‍ಒ ಎಂಎಸ್‍ಎಂಇ ನಿವೃತ್ತ ಉಪ ನಿರ್ದೇಶಕರಾದ ಗೋಪಿನಾಥ್ ರಾವ್, ಆರ್. ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು. ಈ ಕಾರ್ಯಕ್ರಮವನ್ನು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹನುಮಂತರಾಯ ಕೆ., ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ: ಪರಶಿವಮೂರ್ತಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪ್ರಾದ್ಯಾಪಕರುಗಳಾದ ಡಾ ಎನ್.ಎಸ್. ಸತೀಶ, ಡಾ.…

Read More

ಸೋಮವಾರಪೇಟೆ ನ.27 NEWS DESK : ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ಕೊಡಗು ಜಿಲ್ಲಾ ಘಟಕ ಹಾಗೂಮಹಾಸಭಾದ ಸೋಮವಾರಪೇಟೆ ತಾಲ್ಲೂಕು ಘಟಕ ಹಾಗೂ ಮಹಾಸಭಾದ ಯುವ ಘಟಕದ ವತಿಯಿಂದ ತಾಲ್ಲೂಕಿನ ಗೌಡಳ್ಳಿ ಬಿ.ಜಿ.ಎಸ್.ವಿದ್ಯಾಸಂಸ್ಥೆಯ ಆವರಣದಲ್ಲಿ ಬಸವಣ್ಣನವರ ಜಯಂತಿ, ಹಾನಗಲ್ ಕುಮಾರಸ್ವಾಮಿ ಜಯಂತಿ, ಡಾ ಶಿವಕುಮಾರ ಸ್ವಾಮೀಜಿ ಹಾಗೂ ರೇಣುಕಾಚಾರ್ಯ ಜಯಂತಿ ಅಂಗವಾಗಿ ಧಾರ್ಮಿಕ ಸಭೆ , ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಹಕಾರಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ , ಬಸವಣ್ಣನ ಅನುಯಾಯಿಗಳಾದ ನಾವು ಸಮಾಜ ಮುಖಿ ಚಿಂತನೆಗಳನ್ನು ಅಳವಡಿಸಿಕೊಂಡು ಧರ್ಮ ಮಾರ್ಗದಲ್ಲಿ ನಡೆಯುವ ಮೂಲಕ ಇತರರಿಗೆ ಮಾದರಿಯಾಗಿ ಬದುಕಬೇಕು ಎಂದರು. ಕಲುಷಿತಗೊಳ್ಳುತ್ತಿರುವ ಸಾಮಾಜಿಕ ಬದುಕನ್ನು ಉತ್ತಮ ಪಡಿಸಿಕೊಳ್ಳಲು ಪ್ರತಿಯೊಬ್ಬರೂ ಬಸವಾದಿ ಶರಣರ ಜೀವನ ಮತ್ತು ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಡಾ ಮಂತರ್ ಗೌಡ ಸಲಹೆ ನೀಡಿದರು. ಇಂದು ನಮ್ಮ ನಾಡಿನಲ್ಲಿ ಮಠ- ಮಾನ್ಯಗಳು…

Read More

ಮಡಿಕೇರಿ ನ.27 NEWS DESK : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರಜಾಪ್ರಭುತ್ವದ ಬೆನ್ನೆಲುಬಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ನೀಡಿ ಅವರು ಮಾತನಾಡಿದರು. ಭಾರತ ಸಂವಿಧಾನವು ಸ್ವಾತಂತ್ರ್ಯದ ರಕ್ಷಣೆಯಾಗಿದ್ದು, ಪ್ರತಿಯೊಬ್ಬರಲ್ಲೂ ಹೊಣೆಗಾರಿಕೆಯನ್ನು ಹೆಚ್ಚಿಸಿದೆ. ಭಾರತೀಯ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಎತ್ತಿ ಹಿಡಿದಿದೆ ಎಂದು ಜಿಲ್ಲಾಧಿಕಾರಿ ಅವರು ವಿವರಿಸಿದರು. ಭಾರತೀಯರು ಪ್ರತಿಯೊಬ್ಬರೂ ಸಂವಿಧಾನದ ಮೌಲ್ಯ ಎತ್ತಿ ಹಿಡಿಯಬೇಕು. ಪ್ರಜಾಪ್ರಭುತ್ವವನ್ನು ಬಲಪಡಿಸಲು ಮುಂದಾಗಬೇಕು ಎಂದರು. ಭಾರತ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ತಿಳಿಸಲಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಪಾಲಿಸುವುದು ಅತೀ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ‘ಸಂವಿಧಾನ ಪ್ರಸ್ತಾವನೆಯಲ್ಲಿ ಹೇಳಿರುವಂತೆ ‘ಭಾರತೀಯ ಪ್ರಜೆಗಳಾದ ನಾವು’ ಎಂಬುದರಿಂದ ಆರಂಭವಾಗಿದೆ. ನಮಗಾಗಿ…

Read More

ಮಡಿಕೇರಿ NEWS DESK  ನ.26 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ 35ನೇ ವರ್ಷದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನವನ್ನು ಆಚರಿಸಲಾಯಿತು. ಮಡಿಕೇರಿ ನಗರದ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 10 ಹಕ್ಕೊತ್ತಾಯಗಳನ್ನು ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಖ್ಯಾತ ರಾಜಕೀಯ ತಜ್ಞ, ಇತಿಹಾಸಕಾರ, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾರ್‌ವಾರ್ಡ್ ವಿದ್ವಾಂಸ ಡಾ.ಸಂಜೀವ್ ಚೋಪ್ರ ಅವರು ಸಿಎನ್‌ಸಿ ಮಂಡಿಸಿದ ಹಕ್ಕೊತ್ತಾಯಗಳನ್ನು ಸಮರ್ಥಿಸಿ ಮಾತನಾಡಿದರು. ಎನ್.ಯು.ನಾಚಪ್ಪ ಅವರ ನೇತೃತ್ವದ ಸಿಎನ್‌ಸಿ ಸಂಘಟನೆ ಕೇಳುತ್ತಿರುವ ಕೊಡವಲ್ಯಾಂಡ್ ತೀರ ವಾಸ್ತವಿಕ ಮತ್ತು ಕಾರ್ಯಸಾಧನೆಯಾಗಲಿರುವ ಅಂಶವಾಗಿದೆ. ಪ್ರತ್ಯೇಕ ರಾಷ್ಟçವನ್ನು ಕೇಳುವುದು ಅವಾಸ್ತವಿಕ, ರಾಜ್ಯ ಕೇಳುವುದು ಜಟಿಲ ವಿಚಾರ. ಸಿಎನ್‌ಸಿ ಇದೆರಡನ್ನು ಕೇಳದೆ ತಮ್ಮ ಕಳೆದುಹೋದ ತಾಯಿನೆಲವನ್ನು ಸಂವಿಧಾನದ 5 ಮತ್ತು 6ನೇ ಶೆಡ್ಯೂಲ್‌ನಡಿ ಕೇಳುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಯ ಅತೀ ಮುಖ್ಯ…

Read More

ಮಡಿಕೇರಿ ನ.26 NEWS DESK : ಕೂಡಿಗೆಯ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿಯ 57ನೇ ವಾರ್ಷಿಕ ಮಹಾರಥೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮಾರ್ಗಶಿರ ಶುಕ್ಲಚಂಪಾ ಷಷ್ಠಿಯ ಅಂಗವಾಗಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಮುಂಜಾನೆಯಿಂದಲೇ ವಿಶೇಷ ಅಭಿಷೇಕ, ಹೋಮ ಹವನ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆದು ನಂತರ ಶ್ರೀ ಸ್ವಾಮಿ ಸನ್ನಿಧಿಯಲ್ಲಿ ಧಿಗ್ಬಲಿ, ರಥ ಬಲಿ, ರಥ ಪೂಜೆ ಸೇರಿದಂತೆ ವಿವಿಧ ಪೂಜೆಗಳು ನೆರವೇರಿತು. ನಂತರ ಶ್ರೀ ಸ್ವಾಮಿಯ ವಿಗ್ರಹವನ್ನು ಹೂವಿನಿಂದ ಸಿಂಗಾರಗೊಂಡಿದ ಭವ್ಯ ರಥದಲ್ಲಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ನಂತರ ಭಕ್ತರ ಜೈಘೋಷದೊಂದಿಗೆ ಮಹಾ ರಥೋತ್ಸವಕ್ಕೆ ಚಾಲನೆ ದೊರೆಯಿತು. ರಥೋತ್ಸವಕ್ಕೂ ಮುನ್ನ ಅಯ್ಯಪ್ಪ ವ್ರತಾಧಾರಿಗಳು ದೇವರ ಕೀರ್ತನೆಗಳನ್ನು ಹಾಡಿ ಬೃಹತ್ ಪ್ರಮಾಣದ ಕರ್ಪೂರವನ್ನು ಹಚ್ಚಿ ಭಕ್ತಿ ಮೆರೆದರು. ರಥೋತ್ಸವವು ಸ್ವಾಮಿಯ ಸನ್ನಿದಿಯಿಂದ ಸಂಪ್ರದಾಯದಂತೆ ಕೂಡಿಗೆ ಮುಖ್ಯ ರಸ್ತೆಯ ಮೂಲಕ ಕೂಡುಮಂಗಳೂರು ಗ್ರಾಮದವರೆಗೆ ಸಾಗಿತು. ಈ ಸಂದರ್ಭ ಸಾವಿರಾರು ಭಕ್ತರು ರಥಕ್ಕೆ ಪೂಜೆ ಸಲ್ಲಿಸುವುದರ ಜೊತೆಗೆ ಬಾಳೆ ಹಣ್ಣು, ಜವನಗಳನ್ನು ರಥಕ್ಕೆ…

Read More