ಲೇಖಕ: admin

ಮಡಿಕೇರಿ ಡಿ.27 NEWS DESK : ಮಡಿಕೇರಿ ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದುವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದಲ್ಲಿ ಮುಂಜಾನೆಯಿಂದಲೇ ಕವಟ ಪೂಜೆ, ತೈಲಾಭ್ಯಂಜನ, ಪಂಚಭೂತ ಅಭಿಷೇಕ, ಧ್ವಜಸ್ತಂಭ ಪೂಜೆ, ದೇವರು ಜಳಕಕ್ಕೆ ಹೊರಡುವುದು, ದೇವಾಲಯದ ಆವರಣದಲ್ಲಿ ನೃತ್ಯ ಬಲಿ ಸೇರಿದಂತೆ  ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಗ್ರಾಮದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

Read More

ಮಡಿಕೇರಿ ಡಿ.27 NEWS DESK :  ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳುವುದರೊಂದಿಗೆ ತಾವು ಓದಿದ ವಿದ್ಯಾಸಂಸ್ಥೆಯ ಹೆಸರಿಗೆ ಚ್ಯುತಿ ಬಾರದಂತೆ ಜೀವನ ಸಾಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಸಲಹೆ ನೀಡಿದರು. ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ಅವರು ಮಾತನಾಡಿದರು.  ನಾಡಿನಾದ್ಯಂತ ಖ್ಯಾತಿ ಹೊಂದಿರುವ ಕಾವೇರಿ ಕಾಲೇಜು, ವಿದ್ಯಾರ್ಥಿಗಳ ಭವಿಷ್ಯವನ್ನು ಹಾಗೂ ಸರ್ವತೋಮುಖ ಪ್ರಗತಿಯನ್ನು ಗುರುತಿಸುವಲ್ಲಿ ಹಾಗೂ ಅವರ ಭವಿಷ್ಯವನ್ನು ವಿನ್ಯಾಸಗೊಳಿಸುವಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿಯ ಆಡಳಿತ ಮಂಡಳಿ ಹಾಗೂ ಪ್ರಾಧ್ಯಾಪಕ ವೃಂದದವರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಇದು ಕೊಡಗಿನ ಏಳಿಗೆಗೂ ಕೊಡುಗೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  ಸಂಸ್ಥೆಯು ಸದಾ ವಿದ್ಯಾರ್ಥಿಗಳ ಏಳಿಗೆಯನ್ನು ಬಯಸುತ್ತಿದ್ದು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಹೆಸರು ಮಾಡಿದರೆ ಅದು ಸಂಸ್ಥೆಗೆ ಒಳ್ಳೆಯ ಹೆಸರು ತಂದುಕೊಡುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ  ಕಾವೇರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು…

Read More

ಕುಶಾಲನಗರ NEWS DESK  ಡಿ.27 : ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಗಳ ಅಳವಡಿಕೆ ಮೂಲಕ ಅಪರಾಧ ಮುಕ್ತ ವ್ಯವಸ್ಥೆ ನಿರ್ಮಾಣವಾಗಲು ಸಹಕಾರಿಯಾಗುತ್ತದೆ ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ ಪಿ ದಿನೇಶ್ ಕುಮಾರ್ ತಿಳಿಸಿದ್ದಾರೆ. ಅವರು ಕುಶಾಲನಗರ ಗುಮ್ಮನಕೊಲ್ಲಿ ಬಸವೇಶ್ವರ ಬಡಾವಣೆ, ಬಯಲು ಬಸವೇಶ್ವರ ದೇವಾಲಯ ಸಮಿತಿ ಕುಶಾಲನಗರದ ವ್ಯಾಪ್ತಿಯ ಆಯಕಟ್ಟಿನ ಪ್ರದೇಶಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಉದ್ಘಾಟನೆ ಮತ್ತು ಅದರ ನಿರ್ವಹಣೆಗಾಗಿ ಪೊಲೀಸ್ ಇಲಾಖೆ ಮತ್ತು ಪುರಸಭೆಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ದಿನಗಳಲ್ಲಿ ಅಪರಾಧಗಳನ್ನು ಪತ್ತೆಹಚ್ಚಲು ಸಿಸಿ ಕ್ಯಾಮೆರಾ ಮಹತ್ತರ ಪಾತ್ರ ವಹಿಸುತ್ತಿದೆ ಎಂದ ಅವರು, ಪ್ರತಿಯೊಬ್ಬರು ತಮ್ಮ ಮನೆ ವ್ಯಾಪಾರ ವಹಿವಾಟು ಮಾಡುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆ ಮೂಲಕ ಅಪರಾಧ ತಡೆ ಸಾಧ್ಯ ಎಂದರು.  ಸಮಿತಿ ಮೂಲಕ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾಮೆರಾಗಳನ್ನು ಸಾರ್ವಜನಿಕವಾಗಿ  ಅಳವಡಿಸಿ ಸ್ವಚ್ಛ ಹಾಗೂ ಸ್ವಸ್ಥ ಸಮಾಜ ನಿರ್ಮಾಣದ ಗುರಿಯೊಂದಿಗೆ ಸಮಾಜಮುಖಿ ಸೇವೆ ಸಲ್ಲಿಸಿರುವ ಬಗ್ಗೆ ಶ್ಲಾಘನೆ…

Read More

ಕುಶಾಲನಗರ, ಡಿ.27 NEWS DESK  : 2007 ರಿಂದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಪ್ರಖ್ಯಾತ ವಸತಿ ಶಿಕ್ಷಣ ಸಂಸ್ಥೆಯಾದ ಸೈನಿಕ ಶಾಲೆ ಕೊಡಗು ತನ್ನ ಶೈಕ್ಷಣಿಕ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನಿರಂತರವಾಗಿ ಮಹತ್ವದ ಪ್ರಗತಿ ಸಾಧಿಸುತ್ತಿದೆ. 2025ರ ಡಿ.25ರಂದು ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿಯಾಗಿ, ಶಾಲೆಯ ಸಾಧನೆಗಳು ಹಾಗೂ ಗಣನೀಯ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, ಶಾಲೆಯ ಪರಿಣಾಮಕಾರಿ ಕಾರ್ಯನಿರ್ವಹಣೆ, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿ ಎ) ಹಾಗೂ ನೌಕಾ ಅಕಾಡೆಮಿ(ಐ ಎನ್ ಎ)ಗೆ ಸೇರ್ಪಡೆಯಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯ ಏರಿಕೆಹಾಗೂ ನಾಗರಿಕ ಸೇವೆಗಳನ್ನೂ ಒಳಗೊಂಡಂತೆ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಾದ್ಯಂತ ದೇಶಸೇವೆಯಲ್ಲಿ ತೊಡಗಿರುವ ಹಳೆಯ ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು. ಜೊತೆಗೆ, ಸಿ ಬಿ ಎಸ್ ಸಿ ಬೋರ್ಡ್ ಪರೀಕ್ಷೆಗಳಲ್ಲಿ ಶಾಲೆಯ ನಿರಂತರ ಶೈಕ್ಷಣಿಕ ಸಾಧನೆ ಹಾಗೂ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ರಾಜ್ಯ…

Read More

ಮಡಿಕೇರಿ ಡಿ.27 NEWS DESK  : ಕ್ರೀಡೆಯೊಂದಿಗೆ ಸಮಾಜದ ಒಳಿತಿಗಾಗಿ ಸಂಘ ಸಂಸ್ಥೆಗಳು ಉಚಿತ ಆರೋಗ್ಯ ತಪಾಸಣೆ ಶಿಬಿರಗಳ ಆಯೋಜನೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರಯತ್ನಿಸಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಲಹೆ ನೀಡಿದರು.  ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಜರುಗಿದ ಬಿಲ್ಲವ ಸಮಾಜದ ಸ್ಕೋರ್ಪಿನ್ ಪ್ರೀಮಿಯರ್ ಲೀಗ್ ಸೀಸನ್ 1 ಕ್ರಿಕೆಟ್ ಪಂದ್ಯಾವಳಿ ಯಶಸ್ವಿಯಾಗಿ ನಡೆದ ಹಿನ್ನಲೆಯಲ್ಲಿ ಪಂದ್ಯಾವಳಿಗೆ ಸಂಪೂರ್ಣ ಸಹಕಾರ ನೀಡಿದ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಆಯೋಜಕರು ಶಾಸಕರ ಗೃಹ ಕಛೇರಿಗೆ ತೆರಳಿ ಧನ್ಯವಾದಗಳನ್ನು ಸಮರ್ಪಿಸಿ, ಸನ್ಮಾನಿಸುವ ಮೂಲಕ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಯುವ ಸಮೂಹ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ತೋರುವುದರಿಂದ ಸ್ವಾಸ್ಥ್ಯ ಸಮಾಜದ ನಿರ್ಮಾಣವಾಗುತ್ತದೆ. ಹಾಗಾಗಿ ಎಲ್ಲಾ ಕ್ರೀಡಾಕೂಟಗಳಿಗೆ ತಮ್ಮ ಸಹಕಾರ ಇರುತ್ತದೆ ಎಂದು ತಿಳಿಸಿದರು.

Read More

ದಾವಣಗೆರೆ ಡಿ.27 NEWS DESK : ಶಾಮನೂರು ಶಿವಶಂಕರಪ್ಪ ಅವರು ಬಡವರು, ಕಷ್ಟದಲ್ಲಿರುವವರಿಗೆ ಟ್ರಸ್ಟ್ ಮೂಲಕ ನೆರವಾಗುವ ಕೊಡುಗೈದಾನಿಯಾಗಿದ್ದರು. ಪ್ರತಿಯೊಬ್ಬರಿಗೂ ಹುಟ್ಟು ಆಕಸ್ಮಿಕ, ಆದರೆ ಸಾವು ಖಚಿತ, ಈ ನಡುವಿನ ಪಯಣದಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳುವುದು ಮುಖ್ಯ. ದು:ಖದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ನಿಜಕ್ಕೂ ಸಾರ್ಥಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದಾವಣಗೆರೆಯ ಶ್ರೀ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಆಯೋಜಿಸಿದ್ದ ಹಿರಿಯ ಶಾಸಕರು, ಮಾಜಿ‌ ಸಚಿವರು ಆದ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪಾಲ್ಗೊಂಡು, ಅಗಲಿದ ಅಜಾತಶತ್ರುವಿಗೆ ನಮಿಸಿದರು. ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗಿ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದೆ. ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ…

Read More

ಮಡಿಕೇರಿ ಡಿ.27 NEWSDESK :  ಜಿಲ್ಲೆಯ ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್‌ಸಿ-ಎಸ್‌ಟಿ ಸಮುದಾಯದ ವಸತಿ ನಿರಾಶ್ರಿತರಿಗೆ  ಸೂರು ಕಲ್ಪಿಸಿ ಕೊಡುವಂತೆ ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಎಸ್‌ಸಿ, ಎಸ್‌ಟಿ ಘಟಕದ ಮುಖಂಡರುಗಳ ನಿಯೋಗ ಸಂಸದ ಯದುವೀರ್ ಒಡಯರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಘಟಕದ ಜಿಲ್ಲಾಧ್ಯಕ್ಷೆ  ಜಯಮ್ಮ ಅಮ್ಮತ್ತಿ ಅವರ ನೇತೃತ್ವದಲ್ಲಿ ಸಂಸದರನ್ನು ಭೇಟಿಯಾಗಿ ಬೇಡಿಕೆಯ ಈಡೇರಿಕೆಗೆ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಸಲ್ಲಿಸಲಾಯಿತು. ನಿಯೋಗದಲ್ಲಿ ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಶಿಯಾಬುದ್ದೀನ್, ಮಡಿಕೇರಿ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಶ್ರಫ್ ಹಾಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷ ಸೈಫುದ್ದೀನ್ ಜಾಮಿಯಾಲ, ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಆಬಿದ್ ಹುಸೈನ್, ಮೈಸೂರು ಜಿಲ್ಲಾ ಯುವ ಜೆಡಿಎಸ್ ಮುಖಂಡ ಪ್ರವೀಣ್ ಸಂದರ್ಭ ಹಾಜರಿದ್ದರು.

Read More

ಮಡಿಕೇರಿ ಡಿ.27 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವು 2026 ರ ಜ.1 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕರ್ನಾಟಕ ರಾಜ್ಯ ವಿಶ್ವಕರ್ಮ…

Read More

ಮಡಿಕೇರಿ ಡಿ.27 NEWS DESK : 2026 ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್‍ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್‍ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು. ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು. ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ ಪದ್ಧತಿಗಳು ಮತ್ತು ಕಾನೂನುಗಳ…

Read More

ಮಡಿಕೇರಿ ಡಿ.27 NEWS DESK : ಕೇಂದ್ರ ಮತ್ತು ರಾಜ್ಯ ಸರ್ಕಾರದ ಪುರಸ್ಕøತವಾದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವುದು(ರ್ಯಾಂಪ್) ಯೋಜನೆಯಡಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಪಾಲುದಾರರಾದ ವಿವಿಧ ಇಲಾಖಾ ಅಧಿಕಾರಿಗಳಿಗೆ ಹಾಗೂ ಕೈಗಾರಿಕಾ ಸಂಘ- ಸಂಸ್ಥೆಗಳಿಗೆ know your msme eco system ಕಾರ್ಯಾಗಾರವು ಡಿ.30 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೋಟೆಲ್ ರಾಜ್‍ದರ್ಶನ್ ಪಾರ್ಟಿ ಹಾಲ್‍ನಲ್ಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Read More