ಲೇಖಕ: admin

ಮಡಿಕೇರಿ ಅ.21 NEWS DESK : ಪೊನ್ನಂಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮದ ಪೆಮ್ಮಂಡ ಕುಟುಂಬಸ್ಥರ ವತಿಯಿಂದ ಪ್ರಥಮ ಬಾರಿಗೆ ‘ತೋಕ್ ನಮ್ಮೆ’ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಿದರು.

Read More

ಮಡಿಕೇರಿ ಅ.21 NEWS DESK : ದೇಶದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಆಸ್ತಿ ರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸರಿಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ.ಪಿ.ದಿನೇಶ್ ಕುಮಾರ್ ಸೇರಿದಂತೆ ಹಲವರು ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಹೂಗುಚ್ಛ ಅರ್ಪಿಸಿ, ಗೌರವ ನಮನ ಸಲ್ಲಿಸಿದರು. ಪೊಲೀಸ್ ಕವಾಯತು ಸಿಬ್ಬಂದಿಗಳು ಮೂರು ಸುತ್ತು ವಾಲಿ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಗಣ್ಯರು ಸೇರಿದಂತೆ ಎಲ್ಲರೂ ಎದ್ದು ನಿಂತು ಗೌರವ ವಂದನೆ ಸಲ್ಲಿಸಿದರು. ಹುತಾತ್ಮರ ಸ್ಮರಣಾರ್ಥ ಎಲ್ಲರೂ ಎದ್ದು ನಿಂತು ಎರಡು ನಿಮಿಷ ಮೌನಾಚರಣೆ ಮಾಡಿದರು.

Read More

ಪುತ್ತೂರು ಅ.21 NEWS DESK : ಆರ್ಥಿಕವಾಗಿ ಸದೃಢರಾದವರು ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ. ಸಂವಿಧಾನದ ಸಮ ಸಮಾಜ ಉದ್ದೇಶ, ಬಸವಣ್ಣನ ಕಾಯಕ ಮತ್ತು ದಾಸೋಹ ತತ್ವ ಎಲ್ಲವೂ ಇದೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ ಇತರರಿಗೆ ಅವರು ಸ್ಫೂರ್ತಿಯಾಗಲಿ. ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು. ಶಕ್ತಿ ಯೋಜನೆ ಜಾರಿಯಾದ ನಂತರ…

Read More

ಬೆಂಗಳೂರು ಅ.21 NEWS DESK :  ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು. ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ…

Read More

ನಾಪೋಕ್ಲು ಅ.21 NEWS DESK : ಕರ್ನಾಟಕ ಗಮಕ ಕಲಾ ಪರಿಷತ್ ಮತ್ತು, ಬೆಂಗಳೂರು ಮತ್ತು ದ.ಕ.ಜಿಲ್ಲಾ ಘಟಕದ ವತಿಯಿಂದ ಸುಬ್ರಾಯ ಸಂಪಾಜೆ ಅವರಿಗೆ ಪಾವಂಜೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಪುತ್ತೂರಿನಲ್ಲಿ ನಡೆದ 10ನೇ ದ.ಕ. ಜಿಲ್ಲಾ ಗಮಕ ಕಲಾ ಸಮ್ಮೇಳನದಲ್ಲಿ ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರನ್ನು ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕನ್ನಡ ಕಾವ್ಯಗಳ ಆಯ್ದ ಭಾಗಗಳನ್ನು ಕೊಡಗಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಭಗವದ್ಗೀತೆಯನ್ನು ಆಕಾಶವಾಣಿಯ ಪ್ರಸಾರದಲ್ಲಿ ಗಮಕ ರೂಪದಲ್ಲಿ ಪ್ರಸ್ತುತ ಪಡಿಸಿದ ವಿಶೇಷ ಸಾಧನೆಗಾಗಿ ಕೊಡಗಿನ ಏಕೈಕ ಗಮಕಿ ಸಂಪಾಜೆ ಅವರಿಗೆ ಈ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು. ಖ್ಯಾತ ಗಮಕಿ ಮುಳಿಯ ಶಂಕರ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಸ್ವಾಮೀಜಿಯವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವರದಿ : ದುಗ್ಗಳ ಸದಾನಂದ. 

Read More

ನಾಪೋಕ್ಲು ಅ.21 NEWS DESK : ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ವಾಹನ ಚಾಲಕರ ಸಂಘದ ವತಿಯಿಂದ ಸಂತೆ ಮೈದಾನದಲ್ಲಿ ಆಯೋಜಿಸಲಾಗಿದ್ದ 33ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮದಲ್ಲಿ ಸಂಘ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ ಸುಕುಮಾರ್ ಅಧ್ಯಕ್ಷತೆ ವಹಿಸಿದ್ದ ಸಭಾ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಆಟೋ ಚಾಲಕರಾದ ವೆಂಕಪ್ಪ, ಅಂತೋನಿ, ಅಬ್ದುಲ್ ರಜಾಕ್ (ಗುಂಡು) ಅವರುಗಳನ್ನು ಸಂಘದ ಪರವಾಗಿ ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿ ಗಣ್ಯರು ಹಾಗೂ ಸಂಘ ಉಪ ಅಧ್ಯಕ್ಷರು ರಾಶಿದ್, ಕಾರ್ಯದರ್ಶಿ ಸತೀಶ್, ಖಜಾಂಜಿ, ಚೇತನ್ ನಿರ್ದೇಶಕರು ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ. 

Read More

ಮಡಿಕೇರಿ NEWS DESK ಅ.20 : ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೋಷಕರು ಪ್ರೋತ್ಸಾಹ ನೀಡಬೇಕು, ಆದರೆ, ಇಂತಹದ್ದೇ ವಿಷಯವನ್ನು ಆಯ್ಕೆ ಮಾಡಿ ಓದುವಂತೆ ಯಾವುದೇ ಕಾರಣಕ್ಕೂ ಒತ್ತಡ ಹೇರಬಾರದು ಎಂದು ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ಪಿ.ದಿನೇಶ್ ಕುಮಾರ್ ಅವರು ಸಲಹೆ ನೀಡಿದ್ದಾರೆ. ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉನ್ನತ ಹುದ್ದೆಯನ್ನು ಅಲಂಕರಿಸಲು ಎಲ್ಲರಿಗೂ ಸಾಮರ್ಥ್ಯ ಇದೆ, ಆದರೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಸ್ವಂತ ಸಾಮರ್ಥ್ಯದ ಮೇಲೆ ನಂಬಿಕೆ ಇದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ. ಪ್ರತಿಯೊಬ್ಬರು ಉನ್ನತ ಶಿಕ್ಷಣವನ್ನು ಪಡೆದು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಬೇಕು. ಆ ಭಾವನೆಯನ್ನು ಪೋಷಕರು ಮಕ್ಕಳಲ್ಲಿ ಬೆಳೆಸಬೇಕು ಎಂದು ಕರೆ ನೀಡಿದರು. ಪೋಷಕರು ಮಕ್ಕಳಿಗೆ ಡಾಕ್ಟರ್, ಇಂಜಿನಿಯರ್ ಗಳಾಗುವಂತೆ ಒತ್ತಡ ಹೇರದೆ ಅವರ ಆಸಕ್ತಿಯ ಕ್ಷೇತ್ರಗಳಿಗೆ ಪ್ರೋತ್ಸಾಹ ನೀಡಬೇಕು.…

Read More

ಮಡಿಕೇರಿ NEWS DESK ಅ.20 : ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿಶಾಲವಾಗಿ ಬೆಳೆದಿದ್ದು, ಇದರ ಪ್ರಗತಿಯನ್ನು ಸಹಿಸಲಾಗದ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಘಟನೆಯ ಮೇಲೆ ನಿರ್ಬಂಧ ಹೇರಲು ಮುಂದಾಗಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಎನ್ನುವುದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಸಂಘಟನೆಯಲ್ಲ. ಇದರಲ್ಲಿ ರಾಷ್ಟ್ರಭಕ್ತರು ಯಾರು ಬೇಕಾದರು ಪಾಲ್ಗೊಳ್ಳ್ಳಬಹುದಾಗಿದೆ. ಆರ್‌ಎಸ್‌ಎಸ್ ನಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ ಎನ್ನುವ ಶಾಖೆಯೂ ಇದೆಯೆಂದು ತಿಳಿಸಿದರು. ಸಂಘದ ಬೆಳವಣಿಗೆಯನ್ನು ಸಹಿಸಲಾಗದೆ ಸಚಿವ ಪ್ರಿಯಾಂಕ ಖರ್ಗೆಯವರ ಪತ್ರದ ಆಧಾರದಲ್ಲಿ ಆರ್‌ಎಸ್‌ಎಸ್ ಮೇಲೆ ನಿರ್ಬಂಧ ಹೇರಲು ಮುಂದಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ‘ಧಮ್’ ಇದ್ದಲ್ಲಿ ಸಂಘವನ್ನು ಬ್ಯಾನ್ ಮಾಡಲಿ ಎಂದು ಸವಾಲು ಹಾಕಿದರು. ಆರ್‌ಎಸ್‌ಎಸ್ ಸಂಘಟನೆಯನ್ನು 1979 ಮತ್ತು 1992 ರಲ್ಲಿ ಬ್ಯಾನ್ ಮಾಡಲಾಗಿತ್ತು, ಆದರೆ ನಂತರದ ದಿನಗಳಲ್ಲಿ ದೇಶಭಕ್ತ ಸಂಘಟನೆಗೆ ಮತ್ತೆ ಅವಕಾಶವನ್ನು ಮಾಡಿಕೊಡಲಾಗಿತ್ತು ಎಂದರು. ಖರ್ಗೆಯವರ ಸ್ವ ಕ್ಷೇತ್ರವೆ ಆಗಿರುವ ಗುಲ್ಬರ್ಗ ಜಿಲ್ಲೆಯಲ್ಲಿ ಕನಿಷ್ಟ…

Read More

ಗೋಣಿಕೊಪ್ಪ ಅ.20 NEWS DESK : ಸಮೀಕ್ಷೆ ವಿಸ್ತರಣೆಯ ನೆಪದಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ ಸಲ್ಲದ ಒತ್ತಡ ಹೇರುತ್ತಿರುವುದನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಸಂಘಟನೆ ಖಂಡಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಅಂಗನವಾಡಿ ಕಾರ್ಯಕರ್ತರ ಅಧ್ಯಕ್ಷೆ ಸುಮಿತ್ರ ಸಮೀಕ್ಷೆಯಿಂದ ಕಾರ್ಯಕರ್ತರಿಗೆ ಆಗುತ್ತಿರುವ ಮಾನಸಿಕ ಒತ್ತಡದ ಬಗ್ಗೆ ಅಳಲು ತೋಡಿಕೊಂಡರು. ಪ್ರತಿ ಬಾರಿಯೂ ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಬಗ್ಗೆ ಜನರಿಗೆ ತಲುಪಿಸುವ ಮತ್ತು ಸರ್ವೆ ಕಾರ್ಯ ಮಾಡುವ ವ್ಯವಸ್ಥೆಯನ್ನು ಪೂರಕವಾಗಿ ನಡೆಸುತ್ತಿದ್ದಾರೆ. ತಮ್ಮ ಹಲವಾರು ಜವಾಬ್ದಾರಿಯುತ ಕರ್ತವ್ಯಗಳ ನಡುವೆ ಇತರ ವ್ಯವಸ್ಥೆಗಳ ಬಗ್ಗೆಯು ಗಮನಹರಿಸಲಾಗುತ್ತಿದೆ ಆದರೂ, ಕಾರ್ಯಕರ್ತರ ಸಂಕಷ್ಟಗಳಿಗೆ ಪರಿಹಾರ ಸಿಗುತ್ತಿಲ್ಲ ಎಂದು ಆರೋಪಿಸಿದರು. ತೀವ್ರ ನಿಧಾನ ಗತಿ ಸಮೀಕ್ಷೆಯಿಂದ ಪ್ರಮಾಣವನ್ನು ಗುರಿಯತ್ತ ಸಾಗಿಸುವ ನಿಟ್ಟಿನಲ್ಲಿ ವಿಸ್ತರಣೆಗೊಂಡ ಸಮೀಕ್ಷೆಗೆ ಸರ್ಕಾರದ ಆದೇಶವಿಲ್ಲದಿದ್ದರೂ, ಅಂಗನವಾಡಿ ಕಾರ್ಯಕರ್ತರನ್ನ ಒತ್ತಾಯ ಪೂರಕವಾಗಿ ಸಮೀಕ್ಷೆ ನಡೆಸಲು ಹೇಳುತ್ತಿರುವುದು ಖಂಡನೀಯ ಎಂದರು. ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲೇಖಿಸಿ ಪೊನ್ನಂಪೇಟೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಇಲಾಖಾಧಿಕಾರಿ ಕಾರ್ಯಕರ್ತರ ಮೇಲೆ ಒತ್ತಡ…

Read More

ಮಡಿಕೇರಿ ಅ.20 NEWS DESK : ಸರಕಾರದ ಮಹತ್ವಾಕಾಂಕ್ಷೆಯ ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಲ್ಲಿ ಪಾಲ್ಗೊಂಡ ವಿರಾಜಪೇಟೆ ಕ್ಷೇತ್ರದ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢ ಶಾಲೆ ಶಿಕ್ಷಕರು, ಇತರ ಇಲಾಖೆ ಸಿಬ್ಬಂದಿಗಳು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ ಚರ್ಚಿಸಿದರು. ಸಮೀಕ್ಷೆ ಸಂದರ್ಭದಲ್ಲಿ ಸಮೀಕ್ಷಕರು ಅನುಭವಿಸುತ್ತಿರುವ ತೊಡಕುಗಳನ್ನು ಹಾಗೂ ಕೆಲವು ತಾಂತ್ರಿಕ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಎಲ್ಲವನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಂಡು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

Read More