ಮಡಿಕೇರಿ ನ.25 NEWS DESK : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನದಡಿಯಲ್ಲಿ ಡಿ.9 ರವರೆಗಿನ 14 ದಿನಗಳು ಆಶಾ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಅವರು ಚಾಲನೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ವಿ.ಶ್ರೀನಾಥ್ ಮಾತನಾಡಿ, ಕಳೆದ 5 ವರ್ಷಗಳ ಹಿಂದಿನ ರೋಗ ಪ್ರಕರಣಗಳು ಕಂಡು ಬಂದಿರುವ ಮಡಿಕೇರಿ ತಾಲ್ಲೂಕಿನ ಆಯ್ದ ಗ್ರಾಮಗಳಾದ ಗಾಳಿಬೀಡು ಮತ್ತು ಪೆರಾಜೆ ಗ್ರಾಮಗಳಲ್ಲಿ 14 ದಿನಗಳ ಸರ್ವೇಕ್ಷಣಾ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಯವರು ಕ್ಷೇತ್ರ ಭೇಟಿ ನೀಡಿ ಶಂಕಿತ ಕುಷ್ಠರೋಗ ಪ್ರಕರಣಗಳನ್ನು ಗುರುತಿಸಲು ಮನೆ ಮನೆಗಳಿಗೆ ಆಶಾ ಕಾರ್ಯಕರ್ತರು ಬರುವ ಸಮಯದಲ್ಲಿ ಸಹಕಾರ ನೀಡುವಂತೆ ಕೋರಿದರು. ಚರ್ಮದ ಮೇಲಿನ ಯಾವುದೇ ತಿಳಿ, ಬಿಳಿ,…
ಲೇಖಕ: admin
ಮಡಿಕೇರಿ ನ.25 NEWS DESK : ಟ್ರೇಡ್ಸ್ ಯೋಜನೆಯಡಿ ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳಿಗೆ ಹಲವು ಯೋಜನೆಗಳಿದ್ದು, ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಬಿ.ಆರ್.ನಾಗೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ. 2025-26 ನೇ ಸಾಲಿಗೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಹಾಗೂ ವೇಗಗೊಳಿಸುವ (ಆರ್‍ಎಎಂಪಿ) ಯೊಜನೆಯಡಿ ಕೊಡಗು ಜಿಲ್ಲೆಯಲ್ಲಿ ಉದ್ಯಮ ನೋಂದಣಿ ಪಡೆದಿರುವ ನೋಂದಾಯಿತ ಉದ್ಯಮಿಗಳಿಗೆ ಟ್ರೇಡ್ ರಿಸಿವೇಬಲ್ಸ್ ಡಿಸ್ಕೌಂಟಿಂಗ್ ಸಿಸ್ಟಮ್ (ಟಿಆರ್‍ಎಡಿಎಸ್) (ಟ್ರೆಡ್ಸ್ ಎಂದರೆ ವ್ಯಾಪಾರ ಹಣ ರಿಯಾಯಿತಿ ವ್ಯವಸ್ಥೆ) ಆನ್‍ಲೈನ್ ಪ್ಲಾಟ್‍ಫಾರ್ಮ್‍ಗೆ ಸಂಬಂಧಿಸಿದಂತೆ ನಗರದ ಹೋಟೆಲ್ ರೆಡ್‍ಬ್ರಿಕ್ಸ್‍ನಲ್ಲಿ ನಡೆದ ಅರಿವು ಮೂಡಿಸುವ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವ ಜನರಿಗೆ ಉದ್ಯೋಗ ಒದಗಿಸುವಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಪಾತ್ರ ಹೆಚ್ಚಿನದ್ದಾಗಿದೆ ಎಂದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ…
ಮಡಿಕೇರಿ ನ.24 NEWS DESK : ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚದಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸೂಡೆಂಟ್ಸ್ ಆರ್ಗನೈಜೇಷನ್ ಕೊಡಗು ಜಿಲ್ಲಾ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಮಿತಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಎಐಡಿಎಸ್‍ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, ಕರ್ನಾಟಕ ಪಬ್ಲಿಕ್ ಶಾಲೆಗಳ (ಏPS) – ಮ್ಯಾಗ್ನೆಟ್ ಶಾಲೆಗಳ ಯೋಜನೆ ಅಡಿಯಲ್ಲಿ ಸರ್ಕಾರವು ರಾಜ್ಯದಾದ್ಯಂತ 40,000ಕ್ಕೂ ಹೆಚ್ಚು ಶಾಲೆಗಳನ್ನು ವಿಲೀನಗೊಳಿಸಲು ಮತ್ತು ಅವುಗಳನ್ನು ಸಂಪೂರ್ಣವಾಗಿ ಮುಚ್ಚಲು ಸಿದ್ಧತೆ ನಡೆಸುತ್ತಿದೆ. ಗುಣಮಟ್ಟ ಮತ್ತು ಮಾದರಿ ಶಾಲೆಗಳು ಎಂಬ ಆಕರ್ಷಕ ಪದಗಳ ಹಿಂದೆ, ಉಚಿತ ಮತ್ತು ಸಾರ್ವತ್ರಿಕ ಶಿಕ್ಷಣದ ನಮ್ಮ ನವೋದಯ ಚಿಂತಕರು, ಕ್ರಾಂತಿಕಾರಿಗಳು ಕಷ್ಟಪಟ್ಟು ಗಳಿಸಿದ ವ್ಯವಸ್ಥೆಯನ್ನು ನಾಶಪಡಿಸುವ ಪ್ರಯತ್ನ ಅಡಗಿದೆ ಎಂದು ಆರೋಪಿಸಿದರು. ಕೇವಲ ಕೆಪಿಎಸ್ ಶಾಲೆಯಿಂದ ಸಮಸ್ಯೆಯಿಲ್ಲ. ಆದರೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ…
ಮಡಿಕೇರಿ ನ.24 NEWS DESK : ಭಾರತ್ ಸ್ಕೌಟ್ಸ್, ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಮಡಿಕೇರಿ ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ “ದೇಶಭಕ್ತಿ *ಗೀತ ಗಾಯನ *”ಗಾನ ಸುಧೆ’ *ಕಾರ್ಯಕ್ರಮಕ್ಕೆ ಭಾನುವಾರ ಸಂಜೆ *ವರ್ಣರಂಜಿತ ತೆರೆ ಬಿದ್ದಿತು. ವಿಭಾಗಮಟ್ಟದ ಎಂಟು ಜಿಲ್ಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಸಮವಸ್ತ್ರದೊಂದಿಗೆ ತಮ್ಮ ಸುಶ್ರಾವ್ಯ ಕಂಠದಿಂದ ಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು. ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಕರ್ನಾಟಕದ ಸಹಾಯಕ ರಾಜ್ಯ ಆಯುಕ್ತ( ಸ್ಕೌಟ್) ಬಿ.ಕೆ.ಬಸವರಾಜ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವುದ ರೊಂದಿಗೆ ಅವರಲ್ಲಿ ದೇಶಪ್ರೇಮ, ಸೌಹಾರ್ದತೆ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಉತ್ತಮ ವೇದಿಕೆ ಒದಗಿಸುತ್ತದೆ ಎಂದರು. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ದೇಶದ ಹಿರಿಮೆ ಸಾರುವ ದೇಶಭಕ್ತಿ ಗೀತೆಗಳಿಂದ ಅಗಾದ ದೇಶಪ್ರೇಮ…
ಮಡಿಕೇರಿ ನ.24 NEWS DESK : ಕೊಡಗಿನ ಚಿತ್ರಶಿಲ್ಪ ಕಲಾವಿದ ಬಿ.ಕೆ.ಗಣೇಶ್ ರೈ ಅವರ ಶಿಲ್ಪಕಲಾ ವೃತ್ತಿ ಜೀವನದ 50ನೇ ಸುವರ್ಣ ಮಹೋತ್ಸವಕ್ಕೆ ಮಡಿಕೇರಿಯ ಕಲಾನಗರ ಸಾಂಸ್ಕೃತಿಕ ವೇದಿಕೆ ವತಿಯಿಂದ “ಚಿತ್ರಶಿಲ್ಪ ಕಲಾ ತಪಸ್ವಿ” ಪ್ರಶಸ್ತಿ ಪ್ರದಾನ ಮಾಡಲಾಯಿತು. ನಗರದ ರಾಘವೇಂದ್ರ ದೇವಾಲಯದ ಬಳಿಯ ಕಲಾನಗರ ಸಾಂಸ್ಕøತಿಕ ಕಲಾ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸೂರ್ಯ ಕುಮಾರ್, ಕಲಾನಗರ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷ ಮಹೇಶ್ ಹಾಗೂ ಇತರ ಗಣ್ಯರು ಬಿ.ಕೆ.ಗಣೇಶ್ ರೈ ಅವರಿಗೆ ಹುಟ್ಟೂರ ಸನ್ಮಾನ ಮಾಡಿ, ಚಿತ್ರಶಿಲ್ಪ ತಪಸ್ವಿ ಬಿರುದು ಪ್ರದಾನಿಸಿ ಐವತ್ತು ವರ್ಷಗಳ ಹೆಜ್ಜೆಗುರುತುಗಳನ್ನು ದಾಖಲಿಸಿ “ಕಲಾ ದರ್ಪಣ” ಅಭಿನಂದನಾ ಗ್ರಂಥವನ್ನು ಪ್ರದಾನ ಮಾಡಿದರು. ಕಾರ್ಯಕ್ರಮವನ್ನು ಪ್ರತಿಮಾ ರೈ ನಿರೂಪಿಸಿದರು. ಕೊಡಗಿನ ಮಡಿಕೇರಿಯವರಾಗಿರುವ ಚಿತ್ರ ಶಿಲ್ಪ ಕಲಾವಿದ ಹಾಗೂ ಕ್ರಿಯಾತ್ಮಕ ಕಲಾನಿರ್ದೇಶಕರಾಗಿರುವ ಬಿ.ಕೆ.ಗಣೇಶ್ ರೈ ತಮ್ಮ ಚಿತ್ರಶಿಲ್ಪ ಕಲಾ ವೃತ್ತಿಯನ್ನು 1974ರಲ್ಲಿ ಪ್ರಾರಂಭಿಸಿ, 2025ಕ್ಕೆ ತಮ್ಮ ವೃತ್ತಿ ಜೀವನದ 50ನೇ ವರ್ಷದ ಸುವರ್ಣ ಸಂಭ್ರಮ. ಮಡಿಕೇರಿ ಸರ್ಕಾರಿ ಜೂನಿಯರ…
ಮಡಿಕೇರಿ ನ.24 NEWS DESK : ಕಿಕ್ಕಿರಿದು ಸೇರಿದ್ದ ಕಲಾಪ್ರೇಮಿಗಳ ಸಮ್ಮುಖದಲ್ಲಿ ಕನ್ನಡದ ಅಪೂವ೯ ಗೀತೆಗಳ ಮಾಧುಯ೯ ಅನಾವರಣಗೊಳ್ಳುತ್ತಿರುವಂತೆಯೇ ಕೇಳುಗರು ಚಪ್ಪಾಳೆ ತಟ್ಟಿ, ತಲೆದೂಗಿ ಕನ್ನಡದ ಗೀತೆಗಳ ಸಾಹಿತ್ಯ, ಸಂಗೀತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಲ್ಕು ಗಂಟೆಗಳ ಕಾಲ ಮಧುರವಾದ ಗೀತೆಗಳು ಸಭಾಂಗಣದಲ್ಲಿ ಮಾಧ೯ನಿಸಿದವು. ನಗರದ ರೆಡ್ ಬ್ರಿಕ್ಸ್ ನ ಸತ್ಕಾರ್ ಸಭಾಂಗಣದಲ್ಲಿ ಕೊಡಗು ಪತ್ರಕತ೯ರ ಸಂಘ ಮತ್ತು ಮುಳಿಯ ಚಿನ್ನಾಭರಣಗಳ ಸಂಸ್ಥೆ ವತಿಯಿಂದ ಆಯೋಜಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತಗಾಯನ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 53 ಕಲಾವಿದರ 33 ಹಾಡುಗಳು ಕಲಾಪ್ರೇಮಿಗಳ ಮನಸೂರೆಗೊಂಡವು. ಕಾಯ೯ಕ್ರಮದಲ್ಲಿ ಕಲಾವಿದರಿಗೆ ಗೌರವಾಪ೯ಣೆ ನೆರವೇರಿಸಿ ಮಾತನಾಡಿದ ಮುಳಿಯ ಚಿನ್ನಾಭರಣ ಸಂಸ್ಥೆಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಭಾರತದಲ್ಲಿರುವವರೆಲ್ಲರೂ ಹೇಗೆ ಭಾರತೀಯರೋ ಹಾಗೇ ಕನಾ೯ಟಕದಲ್ಲಿರುವವರೆಲ್ಲರೂ ಕನ್ನಡಿಗರೇ ಆಗಿದ್ದಾರೆ. ಬೆಂಗಳೂರಿನಂಥ ರಾಜಧಾನಿಯಲ್ಲಿ ಕನ್ನಡ ಉಳಿಸಿ ಎಂಬ ಕೂಗು ಹೆಚ್ಚಾಗುತ್ತಿರುವಾಗ ಮಡಿಕೇರಿಯಂಥ ಪುಟ್ಟ ನಗರಗಳಲ್ಲಿ ಕನ್ನಡದ ಮಹತ್ವ ಸಾರುವ ಕಾಯ೯ಕ್ರಮಗಳಿಗೆ ಅತ್ಯಧಿಕ ಕನ್ನಡ ಪ್ರೇಮಿಗಳು ಸೇರಿರುವುದು ಹೆಮ್ಮೆ ತಂದಿದೆ ಎಂದರು. ಕೊಡಗಿನ…
ಮಡಿಕೇರಿ ನ.24 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ನ.26 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ಸವದ ಕುರಿತು ಮಾಹಿತಿ ನೀಡಿದ ಅವರು, ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಷಷ್ಠಿಯಂದು ಮುಂಜಾನೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಪೂಜೆ ಸಲ್ಲಿಸುವ ಭಕ್ತಾದಿಗಳಿಗೆ ದೇವಸ್ಥಾನದ ವತಿಯಿಂದಲೆ ಎಳನೀರು ಮತ್ತು ಹಾಲನ್ನು ಒದಗಿಸಲಾಗುತ್ತದೆಂದು ಮಾಹಿತಿಯನ್ನಿತ್ತರು. ಉತ್ಸವದ ಅಂಗವಾಗಿ ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬಹ್ಮಣ್ಯ ದೇವರ ಶ್ರೀ ಭೂತ ಬಲಿ(ಕ್ಷೇತ್ರ ಪ್ರದಕ್ಷಿಣೆ), 12.30 ಗಂಟೆಗೆ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆಯೆಂದು ವಿವರಗಳನ್ನಿತ್ತರು. :: ದೈವಗಳ ವೆಳ್ಳಾಟಂ ::…
ಮಡಿಕೇರಿ ನ.24 NEWS DESK : ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸಮಿತಿಯ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಮೂಲಭೂತ ಸಮಸ್ಯೆಗಳ ಬಗ್ಗೆ ಅರಿವಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿ ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು. ಇದರಿಂದ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿರುವ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ಶಾಸಕ ಎ.ಎಸ್.ಪೊನ್ನಣ್ಣ ಅವರು ಪೌರ ಕಾರ್ಮಿಕ ಸಮೂಹದ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಡವರ್ಗ, ದಲಿತ, ಕಾರ್ಮಿಕ ಸಮೂಹದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರ ಸಂಕಷ್ಟಗಳ ನಿವಾರಣೆಗಾಗಿ ಶಾಸಕರು ಅಧಿಕಾರಿಗಳ ಮಟ್ಟದಲ್ಲಿ ಕುಂದು ಕೊರತೆ ಸಭೆಯನ್ನು ನಡೆಸುವ ಮೂಲಕ ಸಮಸ್ಯೆಗಳ ಬಗೆಹರಿಕೆಯ ನಿಟ್ಟಿನ ಪ್ರಯತ್ನಗಳನ್ನು ನಡೆಸಿದ್ದಾರೆ. ಇಂತಹ ಸಭೆ ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಯೂ ನಡೆಸಿದ್ದು ಕಂಡು ಬಂದಿಲ್ಲ. ಈ ರೀತಿ ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ…
ಮಡಿಕೇರಿ ನ.24 NEWS DESK : ಮಡಿಕೇರಿಯ ಕಗ್ಗೊಡ್ಲು ಬಳಿ ಇರುವ ಅಂಬರ ಹಾಲ್ ಅಥವಾ ಮಂಗಳೂರು ರಸ್ತೆಯ ಕಾರ್ ಪಾರ್ಕಿಂಗ್ ಬಳಿ ಇಂದು (24/11/2025) ರಂದು ಅಪ್ಪಂಗಳ ನಿವಾಸಿ ಹೆಚ್.ಬಿ.ಗಣೇಶ್ ಎಂಬುವವರಿಗೆ ಸೇರಿದ 12 ಗ್ರಾಂ ನ ಚಿನ್ನದ ಸರ ಕಳೆದು ಹೋಗಿದೆ. ಸಿಕ್ಕಿದವರು 8660100502 ಮೊಬೈಲ್ ನಂಬರನ್ನು ಸಂಪರ್ಕಿಸಲು ಕೋರಿದೆ.
ಮಡಿಕೇರಿ ನ.24 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನ.26 ರಂದು 35ನೇ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾರ್ವರ್ಡ್ ವಿಶ್ವವಿದ್ಯಾನಿಲಯದ ವಿದ್ವಾಂಸ ಡಾ.ಸಂಜೀವ್ ಚೋಪ್ರಾ, ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅಡಗೂರ್ ಹೆಚ್.ವಿಶ್ವನಾಥ್, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಹಾಗೂ ಹೆಸರಾಂತ ವೈದ್ಯ, ಸಮಾಜ ಸೇವಕ ಡಾ.ಮಾತಂಡ ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ.ಸಂಜೀವ್ ಚೋಪ್ರಾ ಅವರು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಕುರಿತು ಮಾತನಾಡಲಿದ್ದಾರೆ. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತ, ಎಸ್‍ಟಿ ವರ್ಗೀಕರಣ, ಕೊಡವ ಸ್ಯಾಕ್ರಮೆಂಟಲ್ ಗನ್-ತೋಕ್ ಹಕ್ಕು ಸೇರಿದಂತೆ ಆದಿಮಸಂಜಾತ ಏಕ-ಜನಾಂಗೀಯ, ಆನಿಮಿಸ್ಟಿಕ್ ಕೊಡವರಿಗಾಗಿ 10…






