ಲೇಖಕ: admin

ಮಡಿಕೇರಿ NEWS DESK ನ.23 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಕೊಡಗು ಜಿಲ್ಲಾ ಸಂಸ್ಥೆ,, ಮಡಿಕೇರಿ, ವತಿಯಿಂದ ಕಬ್ಸ್-ಬುಲ್ ಬುಲ್ಸ್-ಸ್ಕೌಟ್ಸ್-ಗೈಡ್ಸ್-ರೋವರ್ಸ್-ರೇಂಜರ್ಸ್ ಮಕ್ಕಳಿಗೆ ಮೈಸೂರು ವಿಭಾಗ ಮಟ್ಟದ ದೇಶಭಕ್ತಿ ಗೀತೆಗಾಯನ ಸ್ಪರ್ಧೆ-2025 ‘ಗಾನ ಸುಧೆ’ ಮಡಿಕೇರಿಯಲ್ಲಿ ನಡೆಯಿತು. ಒಟ್ಟು 8 ಜಿಲ್ಲೆಗಳ 320 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೀತೆ ಗಾಯನದ ಮೂಲಕ ದೇಶಭಕ್ತಿ ಮೆರೆದರು. ಮಡಿಕೇರಿ ನಗರದ ಜೂನಿಯರ್ ಕಾಲೇಜು ಆವರಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ(ಪಿಎಂಶ್ರೀ) ಸಭಾಂಗಣದಲ್ಲಿ ನಡೆದ ‘ಗಾನ ಸುಧೆ’ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಿವೈಎಸ್‌ಪಿ ಪೆಮ್ಮಂಡ ಎ.ಸೂರಜ್ ಅವರು ಈ ರೀತಿಯ ಸ್ಪರ್ಧಾ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಐಕ್ಯತೆಯನ್ನು ಮೂಡಿಸುತ್ತದೆ ಮತ್ತು ಪೂರ್ವಜರ ದೇಶಭಕ್ತಿಯನ್ನು ನೆನಪಿಸುತ್ತದೆ ಎಂದರು. ಐಕ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಸಮವಸ್ತçಧಾರಿ ವಿಭಾಗವಾದ ಪೊಲೀಸ್ ಮತ್ತು ಸೇನೆ ಕೂಡ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಮಹತ್ವಪೂರ್ಣವಾದ ಈ ರೀತಿಯ ಕಾರ್ಯಮಗಳು ವಿದ್ಯಾರ್ಥಿಗಳಿಂದ ಸದ್ಬಳಕೆಯಾಗಬೇಕು ಎಂದು ತಿಳಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉತ್ತಮ…

Read More

ಕಣಿವೆ ನ.22 NEWS DESK : ಮೆಡಿಕಲ್ ಸರ್ವಿಸ್ ಸೆಂಟರ್ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರಿಗಾಗಿ ಎರಡು ದಿನಗಳ  ಅಧ್ಯಯನ ಶಿಬಿರ ನಡೆಯಿತು. ಕುಶಾಲನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು “ಗ್ರಾಮೀಣ ವೈದ್ಯರ ಅನುಭವಗಳು” ಎಂಬ ಧ್ಯೇಯದಡಿ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದ ಶಸ್ತ್ರಚಿಕಿತ್ಸಕರೂ ಹಾಗೂ ಕಾದಂಬರಿಗಾರ್ತಿ ಕೊಡಗಿನ ಡಾ. ಕಾವೇರಿ ನಂಬೀಸನ್ ಅವರು ಬಿಹಾರ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಅವರು ದಶಕಗಳಿಂದ ಸಲ್ಲಿಸಿದ ಸೇವೆಯನ್ನು ಉಲ್ಲೇಖಿಸಿ, ಆರೋಗ್ಯ ಸೇವೆಗಳು ಸೀಮಿತವಾಗಿರುವ ಹಿಂದುಳಿದ ಗ್ರಾಮೀಣ ಸಮುದಾಯಗಳಿಗೆ ತಮ್ಮ ಜ್ಞಾನ ಮತ್ತು ಸಹಾನುಭೂತಿಯನ್ನು ಮೀಸಲಿಡಲು  ಯುವ ವೈದ್ಯರಿಗೆ ಕರೆ ನೀಡಿದರು. ಕರ್ತವ್ಯದಲ್ಲಿ ಸವಾಲುಗಳಿದ್ದರೂ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವುದು ಆಳವಾದ ವೃತ್ತಿಪರತೆಯನ್ನು ಒದಗಿಸುತ್ತದೆ ಮತ್ತು ವೈದ್ಯಕೀಯ ಅಭ್ಯಾಸದ ನೈತಿಕ ಅಡಿಪಾಯವನ್ನು ಬಲಪಡಿಸುತ್ತದೆ ಎಂದು ಹೇಳಿದರು. ಮೆಡಿಕಲ್ ಸರ್ವಿಸ್ ಸೆಂಟರ್ ನ ರಾಜ್ಯ ಅಧ್ಯಕ್ಷರಾದ ಡಾ.ಸುಧಾ ಕಾಮತ್,  ರಾಜ್ಯ ಕಾರ್ಯದರ್ಶಿ ಡಾ. ವಸುದೇಂದ್ರ, ಡಾ. ಗಂಗಾಧರ್, ಡಾ.…

Read More

ಮಡಿಕೇರಿ ನ.22 NEWS DESK  : ಪೊನ್ನಂಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಸದರಿ ವ್ಯಾಪ್ತಿಗೊಂಡಿರುವ ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ/ ಮೀನುಗಾರಿಕೆ ವೃತ್ತಿ ಅವಲಂಬಿಸಿರುವವರಿಗೆ ದ್ವಿಚಕ್ರ ಮೀನು ಮಾರಾಟ ವಾಹನ ಖರೀದಿಗೆ ಶೇ.90 ಆರ್ಥಿಕ ನೆರವು ನೀಡಲು ಒಂದು ಭೌತಿಕ ಗುರಿ ನಿಗಧಿಪಡಿಸಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು ಅವಶ್ಯ ದಾಖಲಾತಿಯನ್ನು ಡಿಸೆಂಬರ್, 04 ರ ಸಂಜೆ 5 ಗಂಟೆಯೊಳಗೆ ಪೊನ್ನಂಪೇಟೆ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಪೊನ್ನಂಪೇಟೆ ತಾಲ್ಲೂಕಿನವರು 08274-261477 ನ್ನು ಅಥವಾ ಪೊನ್ನಂಪೇಟೆ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಪೊನ್ನಂಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಎಂ.ಸಚಿನ್ ಅವರು ತಿಳಿಸಿದ್ದಾರೆ.

Read More

ಮಡಿಕೇರಿ ನ.22 NEWS DESK : ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ 66/11 ಕೆ.ವಿ  ಉಪ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಮಾರ್ಗಗಳಲ್ಲಿ ನ.25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3ನೇ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಣಗಾಲು, ದೊಡ್ಡಳ್ಳಿ, ಗೋಣಿಮರೂರು, ಬಾಣವಾರ, ಸಿದ್ದಲಿಂಗಪುರ, ಮಾಲಂಬಿ, ಹೊಸಗುತ್ತಿ, ಕೈಸರದಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.  ಹಾಗೆಯೇ 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1  ಪಾರಾಣೆ ಮಾರ್ಗದಲ್ಲಿ ಫೀಡರ್ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಲಮುರಿ, ಪಾರಾಣೆ, ಬಾವಲಿ, ಕೈಕಾಡು, ಕಿರಂದಾಡು, ಎಡಪಾಲ, ಕಡಂಗ, ಚೆಂಯ್ಯಂಡಾಣೆ, ಚೇಲವಾರ, ಮರಂದೋಡ, ಕೋಕೇರಿ…

Read More

ಮಡಿಕೇರಿ ನ.22 NEWS DESK : ಮುಂದಿನ ಜನವರಿಯಿಂದ ‘ಇಂದಿರಾ ಆಹಾರ ಕಿಟ್’ ಯೋಜನೆ ಜಾರಿಗೆ ಬರಲಿದ್ದು, ಬಡ ಜನರ ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಚುನಾವಣಾ ಸಂದರ್ಭದಲ್ಲಿನ ಆಸ್ವಾಶನೆಯಂತೆ ಪಂಚ ಗ್ಯಾರಂಟಿ ಯೋಜನೆಯನ್ನು ಈಡೇರಿಸಿ, ಜನರ ನಂಬಿಕೆ ಮತ್ತು ವಿಶ್ವಾಸವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಉಳಿಸಿಕೊಂಡಿದೆ ಎಂದು ಭೋಸರಾಜು ಅವರು…

Read More

ಮಡಿಕೇರಿ ನ.22 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ನ.29 ಮತ್ತು 30ರಂದು ವಿದ್ಯಾರ್ಥಿಗಳಿಗಾಗಿ “ಕೊಡಗು ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‍ಶಿಪ್ 2025-26” ನಡೆಯಲಿದೆ. ನ.29 ರಂದು ಬೆಳಿಗ್ಗೆ 9.30 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ಪಂದ್ಯಾವಳಿಯನ್ನು ಗಣ್ಯರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಟೇಬಲ್ ಟೆನ್ನಿಸ್ ಕೊಡಗು ಜಿಲ್ಲಾ ಚಾಂಪಿಯನ್ ಮಲ್ಲೇಂಗಡ ರಚನ್ ಪೊನ್ನಪ್ಪ ಭಾಗವಹಿಸಲಿದ್ದಾರೆ. *ಪಂದ್ಯಾವಳಿಯ ವಿವರ* ನಾಕೌಟ್ ಮಾದರಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಸಿಂಗಲ್ಸ್ ವಿಭಾಗದಲ್ಲಿ ಪ್ರತಿ ಶಾಲೆಯ 5 ಆಟಗಾರರು ಭಾಗವಹಿಸುಬಹುದು, ಡಬಲ್ಸ್‍ನಲ್ಲಿ ಪ್ರತಿ ಶಾಲೆಯ 2 ತಂಡಗಳಿಗೆ ಸ್ಪರ್ಧಿಸಲು ಅವಕಾಶವಿರುತ್ತದೆ. 14 ವರ್ಷದೊಳಗಿನ ಬಾಲಕ, ಬಾಲಕಿಯರು ಹಾಗೂ 16 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಗೆ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾರ್ಥಿ ಐಡಿ ಕಾರ್ಡ್ ಅನ್ನು ತರಬೇಕು. ಸ್ಪರ್ಧಿಗಳು ನ.24ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಮತ್ತು ಹೆಚ್ಚಿನ ಮಾಹಿತಿಗೆ ಮೊ.ಸಂ : ಹೆಚ್.ಬಿ.ಪೃಥ್ವಿ 9880073440 ಹಾಗೂ ಹರಿಶಂಕರ್ 8618369238 ನ್ನು ಸಂಪರ್ಕಿಸಬಹುದಾಗಿದೆ.…

Read More

ಮಡಿಕೇರಿ ನ.22 NEWS DESK : ವಿರಾಜಪೇಟೆ-ಕೊಟ್ಟೋಳಿ-ಕೆದಮುಳ್ಳೂರು-ಪಾಲಂಗಾಲ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಕೊಟ್ಟೋಳಿಯ ಅಂಗನವಾಡಿ ಕೇಂದ್ರ ಬಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಈ ಸಾಲಿನಲ್ಲಿ ವಿಪರೀತ ಹಾಗೂ ಅಕಾಲಿಕ ಮಳೆ ಆಗುತ್ತಿರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೊಂಚ ತೊಡಕು ಉಂಟಾಗಿದೆ. ಮಳೆ ಸಂಪೂರ್ಣ ದೂರ ಆದಂತೆ ಪ್ರತಿಯೊಂದು ರಸ್ತೆಯ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯಲಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್, ಕೆ ಡಿ ಪಿ ಸದಸ್ಯರು ಮಳೆಟೀರ ಪ್ರಶಾಂತ್ ಉತ್ತಪ್ಪ, ಪಂಚಾಯಿತಿ ಅಧ್ಯಕ್ಷರು ಜೇಫ್ರಿ ಚಂಗಪ್ಪ, ಪಂಚಾಯಿತಿ ಸದಸ್ಯರು ಇಸ್ಮಾಯಿಲ್, ಪವಿತ್ರ, ವನಿತಾ, ತಯಮ್ಮ, ಬೂತ್ ಅಧ್ಯಕ್ಷರು ವಿಜಯ ಕುಮಾರ್,…

Read More

ಮಡಿಕೇರಿ ನ.22 NEWS DESK : ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ರೈತರು ಹಾಗೂ ಬೆಳೆಗಾರರ ಭೂಮಿ ಸಮಸ್ಯೆ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ರೈತರು, ಬೆಳೆಗಾರರು, ‘ಸಿ ಮತ್ತು ಡಿ’ ಭೂಮಿ ಹೋರಾಟಗಾರರು, ರೈತ ಸಂಘದ ಮುಖಂಡರು ಕಸ್ತೂರಿ ರಂಗನ್ ವರದಿ ಹಾಗೂ ಸಿ ಮತ್ತು ಡಿ ಭೂಮಿ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರುಗಳ ಮುಂದೆ ತಮ್ಮ ಅಳಲು ತೋಡಿಕೊಂಡರು. ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮಾಡಿದ ಗೊಂದಲಗಳಿಂದ ಇಂದು ಜಿಲ್ಲೆಯ ಸಹಸ್ರಾರು ರೈತರು ಮತ್ತು ಬೆಳೆಗಾರರು ತೊಂದರೆ ಅನುಭವಿಸುವಂತಾಗಿದೆ. ಈ ಗೊಂದಲಗಳನ್ನು ಸರಿಪಡಿಸಿ ರೈತರು ಮತ್ತು ಬೆಳೆಗಾರರ ಪರವಾಗಿ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು. ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದ ಭೂಮಿಯನ್ನು ಇದೀಗ ಅರಣ್ಯ…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಕೊಡಗು-ಮೈಸೂರು ಸಂಸತ್ ಸದಸ್ಯರಾದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಲಾಯಿತು. ಕೊಡಗು ಜಿಲ್ಲೆಯಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚಿನ ಮಂದಿ ಅರೆಸೇನಾಪಡೆಯಲ್ಲಿ ಕರ್ತವ್ಯದಲ್ಲಿರುವ ಹಾಗೂ ನಿವೃತ್ತರಾಗಿರುವ ಯೋಧರಿದ್ದೇವೆ. ಬಹಳಷ್ಟು ಮಂದಿ ವೀರಾಂಗನೆಯರೂ (ವಿಧವೆಯರು)ಕೂಡ ಇದ್ದು, ಕಳೆದ 13 ವರ್ಷಗಳಿಂದಲೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸಾಕಷ್ಟು ಮನವಿ ಸಲ್ಲಿಸುತ್ತಾ ಬಂದಿದ್ದರೂ ಸರ್ಕಾರದ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಗೆ ಅರೆಸೇನಾಪಡೆಯ ಯೋಧರನ್ನು ಪರಿಗಣಿಸಬೇಕು ಅಥವಾ ಅರೆಸೇನಾಪಡೆಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಅರೆಸೇನಾಪಡೆ ಯೋಧರ ಕುಟುಂಬಗಳಿಗೆ ನೆರವು ನೀಡಬೇಕು, ಈಗಾಗಲೇ ಸ್ವಾಧೀನದಲ್ಲಿರುವ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 10/2 ರಲ್ಲಿನ 0.20 ಸೆಂಟು ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ, ಸರ್ಕಾರದಿಂದ ಅನುದಾನ ಒದಗಿಸಬೇಕು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಿಜಿಹೆಚ್‍ಎಸ್ ವೆಲ್ ನೆಸ್ ಸೆಂಟರ್ ತೆರೆಯಬೇಕು.…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗೆ ನ.25 ರಂದು ಚಾಲನೆ ದೊರೆಯಲಿದೆ. ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಉಪಾಧ್ಯಕ್ಷ ಮದನ್ ಗೌಡ ಆಡಳಿತ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸಂಘದ ಕಾರ್ಯಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು…

Read More