ನಾಪೋಕ್ಲು ನ.22 NEWS DESK : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಭಾರತ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಕೆ.ಫಾತಿಮತ್ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ, ಬಾತ್ಮಿದಾರ ಸುಧಾ ಗಣಪತಿ, ಮುಖ್ಯ ಶಿಕ್ಷಕ ಅನಿಲ್ ರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕೆ.ಡಿ.ಬೋಪಣ್ಣ ಮಾರ್ಗದರ್ಶನ ನೀಡಿದರು. ವರದಿ : ದುಗ್ಗಳ ಸದಾನಂದ.
ಲೇಖಕ: admin
ಕುಶಾಲನಗರ ನ.22 NEWS DESK : ನಾವು ಕನ್ನಡ ಭಾಷೆಯನ್ನು ಪ್ರತಿನಿತ್ಯ ಬಳಸಿದರೆ ಭಾಷೆಯು ತನ್ನಿಂದ ತಾನೇ ಬೆಳೆಯುತ್ತದೆ. ನಮ್ಮ ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು. ನೌಕರರ ನೇಮಕಾತಿಗಳಲ್ಲಿ ಕನ್ನಡ ಭಾಷಿಕರಿಗೆ ಮೊದಲ ಆದ್ಯತೆ ಸಿಗಬೇಕು ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರಿನ ಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ ಹೇಳಿದರು. ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್. ಕನ್ವೆನ್ನನ್ ಸಭಾಂಗಣದಲ್ಲಿ ಜರುಗಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರು, ವೇದಿಕೆಯ ಕೊಡಗು ಜಿಲ್ಲಾ ಘಟಕ, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಹಾಗೂ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿ ಸಿಗಬೇಕು ಎಂದರು. ಕನ್ನಡ ಸಾಹಿತ್ಯ ಪರಂಪರೆ ಬಹಳ ಅಭೂತಪೂರ್ವವಾದದ್ದು, ವೈಶಿಷ್ಟ ಭಾಷೆಯಾದ ಕನ್ನಡ…
ನಾಪೋಕ್ಲು ನ.22 NEWS DESK : ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿ ಕೆ.ಎ.ತಿನಿತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 10ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ.ಗಾನವಿ ಉದ್ದ ಜಿಗಿತ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ. ವಿದ್ಯಾರ್ಥಿ ನಿತೀಶ್ ನಂಜಪ್ಪ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಹಾಗೂ ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಗಂಗಮ್ಮ ಬಿ.ಎಸ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಟೇಬಲ್ ಟೆನ್ನಿಸ್ ನಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಪರಿಧಿ ಪೂವಮ್ಮ ಕೆ.ಬಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲರಾದ ಬಿ.ಎಂ.ಶಾರದ, ಶಿಕ್ಷಕರಾದ ಮೂಡೇರ ಕಾಳಯ್ಯ, ಸವಿತಾ ಮಾರ್ಗದರ್ಶ ನೀಡಿದರು. ವರದಿ :…
ವಿರಾಜಪೇಟೆ ನ.21 NEWS DESK : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ ತಾಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ಕ್ರಿಸ್ಮಸ್ ಗಾನ ತರಂಗ-2025 ಕ್ರಿಸ್ಮಸ್ ಗಾಯನ ಸ್ಪರ್ಧೆಯನ್ನು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಆಂಟೋನಿ ರಾಬಿನ್ ಹೇಳಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ.7 ರಂದು ಬೆಳಿಗ್ಗೆ 10 ಗಂಟೆಗೆ ಸ್ಫರ್ದೆ ಪ್ರಾರಂಭವಾಗಲಿದೆ. ಗಾಯನ ಸ್ಫರ್ಧೇಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ 20,000 ಹಾಗೂ ಟ್ರೋಫಿ, ದ್ವಿತೀಯ 15,000 ಹಾಗೂ ಟ್ರೋಫಿ, ತೃತೀಯ 10000 ಹಾಗೂ ಟ್ರೋಫಿ ನೀಡಲಾಗುತ್ತದೆ. ಚಿತ್ರಕಲಾ ಸ್ಪರ್ಧೇಯಲ್ಲಿ ವಿಜೇತ ತಂಡಕ್ಕೆ ಕ್ರಮವಾಗಿ 3000,2000,1000 ರೂ ಹಾಗೂ ಟ್ರೋಫಿ ನೀಡಲಾಗುತ್ತದೆ. ನೋಂದಾವಣೆಗೆ ಡಿ.5 ಕೊನೆಯ ದಿನ ಎಂದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ಮಾತನಾಡಿ,ಪ್ರತಿ ತಂಡಕ್ಕೆ ನೋಂದಣಿ ಶುಲ್ಕ ರೂ 500 ಇದ್ದು, ಒಂದು ಧರ್ಮ ಕೇಂದ್ರದಿಂದ ಹಾಗೂ…
ಮಡಿಕೇರಿ ನ.22 NEWS DESK : ಮಳೆಹಾನಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಟ್ಟು ಐದು ವರ್ಷಗಳೇ ಕಳೆದಿದ್ದರೂ ಇಲ್ಲಿಯವರೆಗೆ ಶುದ್ಧ ಕುಡಿಯುವ ನೀರು ಒದಗಿಸದ ಆಡಳಿತ ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಮೇಕೇರಿ ಗ್ರಾ.ಪಂ ವ್ಯಾಪ್ತಿಯ ಬಿಳಿಗೇರಿ ಗ್ರಾಮದ ವಾರ್ಡ್ ಸಂಖ್ಯೆ 2 ರ ನಿವಾಸಿಗಳು ನಿರ್ಧರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಅವರು ಮುಂದಿನ 3 ದಿನಗಳೊಳಗೆ ಕುಡಿಯುವ ನೀರನ್ನು ಒದಗಿಸದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ನಿವಾಸಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. 2018ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಮಡಿಕೇರಿ ನಗರಸಭಾ ವ್ಯಾಪ್ತಿಯ ಇಂದಿರಾ ನಗರದ 22 ಕುಟುಂಬಗಳನ್ನು ಬಿಳಿಗೇರಿ ಗ್ರಾಮದ ವಾರ್ಡ್ ಸಂಖ್ಯೆ 2ಕ್ಕೆ ಸ್ಥಳಾಂತರಿಸಲಾಯಿತು. ಈ ಕುಟುಂಬಗಳಿಗೆ ಸರಕಾರ ಮನೆಗಳನ್ನು ನಿರ್ಮಿಸಿ ಕೊಟ್ಟಿದೆಯಾದರೂ ಇಲ್ಲಿಯವರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಕೊಳವೆ ಬಾವಿಯೊಂದರ ನೀರನ್ನು ಟ್ಯಾಂಕ್ ಗೆ ಸಂಗ್ರಹಿಸಿ ಸರಬರಾಜು ಮಾಡಲಾಗುತ್ತಿದೆಯಾದರೂ ಗಡುಸಾದ ಈ ನೀರು…
ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಗೆ ಸೂಕ್ತ ದಾಖಲಾತಿ, ಅನುಮತಿ ಸಹಿತ ತೆರಿಗೆ ಪಾವತಿಸದೇ ಹೊರ ರಾಜ್ಯದಿಂದ ಆಗಮಿಸಿದ್ದ ವಾಹನಗಳಿಗೆ ದಂಡ ವಿಧಿಸುವ ಮೂಲಕ ಕೊಡಗು ಪ್ರಾದೇಶಿಕ ಸಾರಿಗೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಜಿಲ್ಲಾ ಚೆಕ್ ಪೋಸ್ಟ್‍ಗಳಲ್ಲಿ ಈ ಕುರಿತು ತಪಾಸಣೆ ತೀವ್ರಗೊಳಿಸಿದ ಪರಿಣಾಮ ಅಕ್ಟೋಬರ್ 1ರಿಂದ ನವೆಂಬರ್ 19ರವರೆಗೆ 1 ಕೋಟಿ 46 ಲಕ್ಷ ರೂ. ದಂಡ ವಿಧಿಸಿ ರಾಜಸ್ವ ಸಂಗ್ರಹಿಸಲಾಗಿದೆ ಎಂದು ಕೊಡಗು ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಆಯುಕ್ತ ಸತೀಶ್ ಅವರು ತಿಳಿಸಿದ್ದಾರೆ. ಸಾಮಾನ್ಯವಾಗಿ ಅಕ್ಟೋಬರ್‍ನಿಂದ ಜನವರಿ ತಿಂಗಳನ್ನು ಟೂರಿಸಂ ತಿಂಗಳು ಎಂದು ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ ಜಿಲ್ಲೆಯ ಚೆಕ್ ಪೋಸ್ಟ್‍ಗಳಲ್ಲಿ ಸಾರಿಗೆ ಇಲಾಖೆ ನಿರೀಕ್ಷಕರನ್ನು ನಿಯೋಜಿಸಿ ಹೊರ ರಾಜ್ಯದ ವಾಹನಗಳ ದಾಖಲಾತಿಗಳ್ನು ಪರಿಶೀಲಿಸಲಾಗುತ್ತದೆ. ಈ ಸಂದರ್ಭ ನೂರಾರು ವಾಹನಗಳು ತೆರಿಗೆ ಪಾವತಿಸದಿರುವುದು, ಸೂಕ್ತ ಅನುಮತಿ ಪಡೆಯದಿರುವುದು ಕಂಡು ಬಂದ ಕಾರಣ ದಂಡ ವಿಧಿಸುವ ಮೂಲಕ 1 ಕೋಟಿ 46 ಲಕ್ಷ ರೂ. ರಾಜಸ್ವ…
ಸುಂಟಿಕೊಪ್ಪ ನ.22 NEWS DESK : ಸಮಾಜ ಸೇವಕ ಬಾಪ್ಪುಟ್ಟಿ ಅವರು ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಟ್ರ್ಯಾಕ್‍ಶೂಟ್ ಅನ್ನು ವಿತರಿಸಿದರು. ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 40 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ಅನ್ನು ವಿತರಿಸಿ ಮಾತನಾಡಿದ ಅವರು ಸರಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಬೇಡಿಕೆಯನ್ನು ಸಲ್ಲಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಶೂಟ್ ವಿತರಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಪ್ರಜೆಗಳಾಗಿ ಮೂಡಿಬರಲೆಂದು ಅವರು ಹಾರೈಸಿದರು. ಸುಂಟಿಕೊಪ್ಪ ಹಿರಿಯ ಪತ್ರಕರ್ತರಾದ ಬಿ.ಡಿ.ರಾಜುರೈ ಮಾತನಾಡಿ ಸಮಾಜ ಸೇವೆಯಲ್ಲಿ ನಿರಂತವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಸಮಾಜ ಸೇವಕ ಬಾಪ್ಪು ಅವರು ಈ ಹಿಂದೆಯೇ ಕೊವಿಡ್, ಪ್ರಾಕೃತಿಕ ವಿಕೋಪ ಸಂದರ್ಭ ನಿರಾಶ್ರಿತರು ಮತ್ತು ನಿರ್ಗತಿಕರು ಮತ್ತು ಅನಾಥರಿಗೆ ತಮ್ಮ ಕೈಯಲಾದ ನೆರವು ನೀಡಿದ್ದು ಅವರ ಸೇವೆ ಇತರರಿಗೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲಾ ಶಿಕ್ಷಕಿ ಮೀನಾಕುಮಾರಿ, ಮಹಮ್ಮದ್…
ಮಡಿಕೇರಿ ನ.22 NEWS DESK : ಎನ್‍ಸಿಸಿ ರೈಝಿಂಗ್ ಡೇ ಪ್ರಯುಕ್ತ ನಗರದ ಕೊಡಗು ವಿದ್ಯಾಲಯದ ಎನ್‍ಸಿಸಿ ಕೆಡೆಟ್ ಗಳು ಮಡಿಕೇರಿಯ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ‘ಸ್ವಚ್ಛ ಕೊಡಗು, ಸುಂದರ ಕೊಡಗು’ ಅಭಿಯಾನ ನಡೆಸಿದರು. ಪ್ರಯಾಣಿಕರಿಗೆ ಬಸ್‌ನಲ್ಲಿ ಕಸವನ್ನು ಹೊರಗೆ ಎಸೆಯಬಾರದು ಎಂದು ಕೆಡೆಟ್ ಗಳು ಮನವಿ ಮಾಡಿದರು. ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕೈಗೊಂಡರು. ಶಾಲೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ, ಆಡಳಿತ ವ್ಯವಸ್ಥಾಪಕ ರವಿ ಪಿ., ಶಾಲೆಯ ಎನ್.ಸಿ.ಸಿ ಅಧಿಕಾರಿ ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಕೆಡೆಟ್‌ಗಳೊಂದಿಗೆ ಭಾಗವಹಿಸಿದರು.
ಮಡಿಕೇರಿ ನ.22 NEWS DESK : ಸಾಹಿತ್ಯ ಲೋಕದಲ್ಲಿ ಅನುವಾದ ಕೃತಿಗೆ ಅದರದ್ದೇ ಆದ ಮಹತ್ವವಿದೆ. ಅನುವಾದ ಕೃತಿ ಎರಡು ಕಾಲಘಟ್ಟ, ಸಂಸ್ಕøತಿ ಮತ್ತು ಎರಡು ಭಾಷೆಗಳ ನಡುವೆ ಸಂಪರ್ಕ ಸೇತುವೆಯ ರಾಯಭಾರಿಯಾಗಿ ಕೆಲಸ ಮಾಡುತ್ತದೆ ಎಂದು ಲೇಖಕಿ ಐಚಂಡ ರಶ್ಮಿ ಮೇದಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ ಕೂಟದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ತಾವು ರಚಿಸಿರುವ “ಕೊಡಗ್ ಸಂಸ್ಥಾನ v/s ಬ್ರಿಟಿಷ್ ಸಾಮ್ರಾಜ್ಯ” ಕೊಡವ ಅನುವಾದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೂಲ ಕೃತಿಯ ಲೇಖಕರು ಹಾಗೂ ಅನುವಾದಕರಿಗೂ ಮಹತ್ವ ಇದೆ ಎಂಬುವುದನ್ನು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ದೀಪಭಾಸ್ತಿಯವರು ತೋರಿಸಿಕೊಟ್ಟಿದ್ದಾರೆ. ಅನುವಾದ ಎಂದರೆ ಮರುಸೃಷ್ಟಿ ಎಂದರ್ಥ, ಮೂಲ ಕೃತಿಯ ತಿರುಳನ್ನು ನಾವು ಬೇರೆ ಬೇರೆ ಭಾಷೆಗಳಲ್ಲಿ ಹೊರತಂದಾಗ ಅದು ಹೆಚ್ಚು ಹೆಚ್ಚು ಜನರನ್ನು ತಲುಪುತ್ತದೆ ಮತ್ತು ಕೃತಿಗೂ ಉತ್ತಮವಾದ ಸ್ಪಂದನೆ ದೊರೆಯುತ್ತದೆ. ಆದರೆ ಅನುವಾದ ಮಾಡುವವರಿಗೆ ಎರಡೂ ಭಾಷೆಗಳ ಮೇಲೆ ಹಿಡಿತವಿರಬೇಕು ಮತ್ತು ಮೂಲಕೃತಿಗೆ…
ಮಡಿಕೇರಿ ನ.22 NEWS DESK : ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದ ಕಲೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆ ನಡೆಯಿತು. ಇದರಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವನ್ನು ಸಾಧಿಸುವ ಮೂಲಕ ಪ್ರಥಮ ರನ್ನರ್ಸ್ ಟ್ರೋಫಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ರಸ ಪ್ರಶ್ನೆ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು.ಎಸ್, 9ನೇ ತರಗತಿ ವಿದ್ಯಾರ್ಥಿ ಉನ್ನತಿ ಎಂ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡರು. ಕಲಾಕೃತಿ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ಹನಿಯ ಎ, 8ನೇ ತರಗತಿ ವಿದ್ಯಾರ್ಥಿ ಗಳಾದ ಆರ್ನವ್ ವಿ, ಅಕ್ಷರ ಸಂತೋಷ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ನೃತ್ಯ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ಹನಾ ಫಲಕ್, ಸಾಯೋಜ್ಯ ಪಿ,ಸುಹಾನಿ ರಾಜ್ ಪುರೋಹಿತ್, ಹೈಜಾ ಬಿ. ಐ, ಬೊಳ್ಳೆಪಂಡ ದೀಪ್ತಿ ತಂಗಮ್ಮ, 9ನೇ ತರಗತಿ ವಿದ್ಯಾರ್ಥಿಗಳಾದ ಕೂಡoಡ ನಯಾನಿಕ ಎಸ್, ಸಾಹಿತ್ಯ ಪಿ. ಜಿ, ಜೀವನ್ಯ ಎಂ. ಡಿ, ಅಯ್ಯಮಂಡ…






