ಬೆಂಗಳೂರು NEWS DESK ಆ.20 : ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಭೇಟಿಯಾಗಿ ಮಾತುಕತೆ ನಡೆಸಿದರು. ರಾಜ್ಯದ ಪ್ರಸ್ತುತ ವಿಚಾರಗಳು ಹಾಗೂ ಕೆಪಿಎಸ್‌ಸಿ ಎದುರಿಸುತ್ತಿರುವ ಆರೋಪಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ಮಾಡಿದರು.
ಲೇಖಕ: admin
ಮಡಿಕೇರಿ NEWS DESK ಆ.20 : ಮಡಿಕೇರಿಯ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಶಾಂತಿನಿಕೇತನ ಬಡಾವಣೆಯಲ್ಲಿ 48ನೇ ವರ್ಷದ ಅದ್ಧೂರಿ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 26ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 14ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಪೂಜೆ ನಡೆಯಲಿದೆ. ಬಳಿಕ 13 ದಿನಗಳ ಕಾಲ ಪ್ರತಿದಿನ ಸಂಜೆ ಭಜನೆ ಮತ್ತು ಮಹಾಪೂಜೆ ನಡೆಯಲಿದೆ. ಸೆಪ್ಟೆಂಬರ್ 23ರಂದು ಸಂಜೆ 7 ಗಂಟೆಗೆ ಸಾಮೂಹಿಕ ರಂಗಪೂಜೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್ 26ರಂದು ಮಹಾಪೂಜೆಯ ನಂತರ ಶ್ರೀ ಮಹಾ ಗಣಪತಿ ಮೂರ್ತಿಯನ್ನು ಕಥಾ ಸಾರಾಂಶವುಳ್ಳ ಅಲಂಕೃತ ಮಂಟಪದಲ್ಲಿ ಅದ್ಧೂರಿ ಶೋಭಾಯಾತ್ರೆಯ ಮೂಲಕ ಮಡಿಕೇರಿಯ ಪ್ರಮುಖ ಬೀದಿಗಳಲ್ಲಿ ಕೊಂಡೊಯ್ದು ಗೌರಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಸೆಪ್ಟೆಂಬರ್ 20ರಂದು ಸಾರ್ವಜನಿಕರಿಗೆ ಕ್ರೀಡಾಕೂಟವನ್ನು ಕೂಡ ಆಯೋಜಿಸಲಾಗಿದೆ. ಎಲ್ಲಾ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವತಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಹಾಗೂ ತನು, ಮನ, ಧನ ಸಹಾಯದ ಮೂಲಕ ಸಹಕರಿಸುವಂತೆ…
ಮಡಿಕೇರಿ NEWS DESK ಆ.20 : ಪಶ್ಚಿಮಘಟ್ಟಗಳ ಪರಿಸರ ಸೂಕ್ಷö್ಮ ಪ್ರದೇಶಗಳ ಗಡಿ ಗುರುತಿಸುವಿಕೆ ಹಿನ್ನೆಲೆಯಲ್ಲಿ ಕೊಡಗಿನ ಜನರ ಹಿತರಕ್ಷಣೆಗೆ ಕೇಂದ್ರ ಪರಿಸರ ಸಚಿವಾಲಯದೊಂದಿಗೆ ನಿರಂತರ ಮಾತುಕತೆಯಲ್ಲಿ ತೊಡಗಿರುವುದಾಗಿ ಮೈಸೂರು- ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಡಾ.ಕೆ.ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯನಿರತ ತಂಡದ ವರದಿ ಆಧಾರಿತ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶಗಳ ಕರಡು ಅಧಿಸೂಚನೆಯ ಹಿನ್ನೆಲೆಯಲ್ಲಿ, ಕೊಡಗು ಜಿಲ್ಲೆಯ ಜನರ ಹಕ್ಕುಗಳು, ಜೀವನೋಪಾಯ ಮತ್ತು ಆಸ್ತಿಗಳನ್ನು ರಕ್ಷಿಸಲು ತಮ್ಮ ಕಚೇರಿಯು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ಜಿಲ್ಲೆಯಾದ್ಯಂತ ಸ್ಥಳೀಯ ಸಮುದಾಯಗಳು, ರೈತರು, ಬೆಳೆಗಾರರು ಮತ್ತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಎತ್ತಿರುವ ಪ್ರತಿಯೊಂದು ನ್ಯಾಯಯುತ ಕಳಕಳಿ, ಆಕ್ಷೇಪಣೆ ಹಾಗೂ ವಾಸ್ತವಾಂಶಗಳನ್ನು ಕ್ರಮಬದ್ಧವಾಗಿ ದಾಖಲಿಸಿ ಕೇಂದ್ರ ಸಚಿವಾಲಯದ ಗಮನಕ್ಕೆ ತರಲಾಗುತ್ತಿದೆ ಎಂದು ಸಂಸದರು ಪುನರುಚ್ಚರಿಸಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು…
ಮಡಿಕೇರಿ ಆ.19 NEWS DESK : ಮಡಿಕೇರಿಯ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್‌ನ ನಾಲ್ವರು ಪ್ರತಿಭಾವಂತ ವಿದ್ಯಾರ್ಥಿಗಳು ದಕ್ಷಿಣ ವಲಯ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಅಂಡರ್-17 ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಜೀವಿತ್ ಚಂಗಪ್ಪ ಹಾಗೂ ಶೋಬಿತ್ ಕೆ.ಎಲ್. ಅವರು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿರುವುದು ಶಾಲೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ತಂಡದಲ್ಲಿ ಫಾರ್ವರ್ಡ್ ಆಟಗಾರರಾಗಿ ಹರ್ಷಿತ್ ಬಿ. ನಾಯಕ್, ಸಾಯಿ ತಿಮ್ಮಯ್ಯ, ಹಾಗೂ ಜೀವಿತ್ ಚಂಗಪ್ಪ ಗೋಲ್ ಕೀಪರ್ ಆಗಿ ಶೋಬಿತ್ ಕೆ.ಎಲ್. ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಶಾಲೆಯ ಕ್ರೀಡಾ ತರಬೇತುದಾರರಾದ ಹಂಚೆಟ್ಟಿರ ಈರಪ್ಪ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ. ಕರ್ನಾಟಕ ತಂಡವು ಆಗಸ್ಟ್ 21ರಂದು ಬೆಂಗಳೂರಿನ ಬಿಷಪ್ ಕಾಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಗೋವಾ ರಾಜ್ಯದ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಮಡಿಕೇರಿಯಿಂದ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿರುವ ನಾಲ್ವರು ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ,…
ಕುಶಾಲನಗರ, ಆ.16 NEWS DESK : ಕುಶಾಲನಗರ ತಾಲ್ಲೂಕಿನ ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಬೆಂಗಳೂರಿನ ಕ್ಲೌಡ್ ಸ್ಟಾಪ್ ಇಂಡಿಯಾ ಕಂಪನಿಯ ವತಿಯಿಂದ ಸಿ.ಎಸ್.ಆರ್. ಯೋಜನೆಯಡಿ 5 ಲ್ಯಾಪ್ ಟಾಪ್ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಯಿತು. ಕಂಪ್ಯೂಟರ್ ಗಳನ್ನು ಶಾಲೆಗೆ ಹಸ್ತಾಂತರಿಸಿ ಕಂಪ್ಯೂಟರ್ ಕಲಿಕಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಕ್ಲೌಡ್ ಸ್ಟಾಪ್ ಇಂಡಿಯಾ ಕಂಪನಿಯ ಜನರಲ್ ಮೆನೇಜರ್ ಸಬ್ಬಂಡ್ರ ಜಗದೀಶ್ ಕುಶಾಲಪ್ಪ , ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಹಾಗೂ ಕೌಶಲ್ಯಗಳನ್ನು ಬಳಸಿಕೊಂಡು ಉತ್ತಮ ಶಿಕ್ಷಣ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಪಿ.ಸೋಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕಂಪ್ಯೂಟರ್ ಶಿಕ್ಷಣ ಪಡೆಯಬೇಕು ಎಂದರು. ಕಾಲೇಜು ಪ್ರೌಢಶಾಲಾ ವಿಭಾಗದ ಹಿರಿಯ ಶಿಕ್ಷಕಿ ಶೈಲಜಾ ಮನು ಅಚ್ಚಮಯ್ಯ ಮಾತನಾಡಿ , ಸಮುದಾಯದ ಸಹಭಾಗಿತ್ವ ಕಾರ್ಯಕ್ರಮದಡಿ ಸಿ.ಎಸ್.ಆರ್.ಯೋಜನೆಯಡಿ ತಮ್ಮ ಶಾಲೆಗೆ ಲ್ಯಾಪ್ ಟಾಪ್ ಗಳನ್ನು ನೀಡಿದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು. ಕಾಲೇಜು ಅಭಿವೃದ್ಧಿ…
ಮಡಿಕೇರಿ ಆ.19 NEWS DESK : ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ‘ನಶೆ ಮುಕ್ತರಾಗುವ ಪ್ರತಿಜ್ಞೆ’ ಅಭಿಯಾನವನ್ನು ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕರಾದ ಕೋಮಲ ಅವರು, ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಎಂಬ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಕರೆ ನೀಡಿದರು. ಮಾದಕ ವಸ್ತುಗಳ ವ್ಯಸನ ಹಾಗೂ ಇತರ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದರು. ನಶೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯಕರ ಹಾಗೂ ಉತ್ತಮ ಜೀವನ ನಡೆಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಕುಟುಂಬ, ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಅವರು ತಿಳಿಸಿದರು. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಜೊತೆಗೆ ಪರಮಾತ್ಮನಲ್ಲಿ ನಂಬಿಕೆ ಇಟ್ಟು ಮನಸ್ಸನ್ನು ಕೇಂದ್ರೀಕರಿಸಲು ಧ್ಯಾನವನ್ನು ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಜಾಪತಿ ಬ್ರಹ್ಮಕುಮಾರಿ…
ಮಡಿಕೇರಿ, ಆ. 19 NEWS DESK : ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸುವುದಾಗಿ ಹೋಮ-ಹವನ ನಡೆಸಿರುವುದನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ (ದಸಂಸ) ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿಯಾದ ದಸಂಸ ಪ್ರಮುಖರು, ಹಿಂದೂ ಸಂಘಟನೆಯೊಂದು ನಡೆಸಿರುವ ಈ ಕೃತ್ಯ ರಾಷ್ಟ್ರವಿರೋಧಿಯಾಗಿದ್ದು, ಅಸ್ಪೃಶ್ಯತೆ ಆಚರಣೆಗೆ ಪ್ರೋತ್ಸಾಹ ನೀಡುವಂತಿದೆ ಎಂದು ಆರೋಪಿಸಿದರು. ಇಂತಹ ಘಟನೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ದಸಂಸ ಸಂಯೋಜಕ ಎಂ.ಎನ್. ರಾಜಪ್ಪ, ರಾಜಶೇಖರ್, ಪ್ರಮುಖರಾದ ಎಂ.ಇ. ಪೊನ್ನಪ್ಪ, ಚಂದ್ರಶೇಖರ್, ಕಿರಣ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಮಡಿಕೇರಿ NEWS DESK : ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಕಾಮಗಾರಿಯನ್ನು ಮಡಿಕೇರಿ ನಗರಸಭೆಯ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ. ಸತೀಶ್ ಹಾಗೂ ಪ್ರತಿಮೆ ನಿರ್ಮಾಣ ಸಮಿತಿ ಸದಸ್ಯ ಎಚ್.ಎಸ್. ಪ್ರೇಮ್ ಕುಮಾರ್ ವೀಕ್ಷಿಸಿದರು. ಬೆಂಗಳೂರಿಗೆ ಭೇಟಿ ನೀಡಿದ ಅವರು, ಪ್ರತಿಮೆ ನಿರ್ಮಾಣದ ಶಿಲ್ಪಿ ಕೃಷ್ಣ ನಾಯಕ್ ಅವರೊಂದಿಗೆ ಕಾಮಗಾರಿಯ ಪ್ರಗತಿ ಹಾಗೂ ನಿರ್ಮಾಣದ ಗುಣಮಟ್ಟವನ್ನು ಪರಿಶೀಲಿಸಿದರು. ಪ್ರತಿಮೆ ನಿರ್ಮಾಣದ ವಿವಿಧ ಹಂತಗಳ ಕುರಿತು ಶಿಲ್ಪಿಯಿಂದ ಮಾಹಿತಿ ಪಡೆದು, ಅಗತ್ಯ ಸಲಹೆಗಳನ್ನು ನೀಡಿದರು. ನಮ್ಮ ಸಮುದಾಯದ ಬಹುದಿನಗಳ ಕನಸಾಗಿರುವ ಅಂಬೇಡ್ಕರ್ ಪ್ರತಿಮೆ ಸುಂದರವಾಗಿ ಹಾಗೂ ಗುಣಮಟ್ಟದಿಂದ ನಿರ್ಮಾಣಗೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಪ್ರತಿಮೆ ನಿರ್ಮಾಣದ ಪ್ರಗತಿಯನ್ನು ಖುದ್ದಾಗಿ ವೀಕ್ಷಿಸಿ, ಕಾಮಗಾರಿಯನ್ನು ನಿಗದಿತ ಗುಣಮಟ್ಟದಲ್ಲಿ ಪೂರ್ಣಗೊಳಿಸುವ ಕುರಿತು ಚರ್ಚಿಸಲಾಯಿತು.
ಮಡಿಕೇರಿ ಆ.19 NEWS DESK : ಪ್ರತಿಯೊಬ್ಬರು ಛಾಯಾಗ್ರಾಹಕರೇ ಆಗಿರುವ ಪ್ರಸ್ತುತ ಕಾಲ ಘಟ್ಟದಲ್ಲಿ, ತೆಗೆಯುವ ಫೋಟೋಗಳಲ್ಲಿ ಮನಸ್ಸನ್ನು ಕೇಂದ್ರೀಕರಿಸಿ “ಮೌಲ್ಯ”ವನ್ನು ತುಂಬುವ ಪ್ರಯತ್ನ ಮಾಡಬೇಕಾಗಿದೆಯೆಂದು ಖ್ಯಾತ ಛಾಯಾಗ್ರಾಹಕರು, ಪಕ್ಷಿ ತಜ್ಞರು ಆದ ಡಾ.ಎಸ್.ವಿ.ನರಸಿಂಹನ್ ಕರೆ ನೀಡಿದರು. ಕೊಡಗು ಪತ್ರಕರ್ತರ ಸಂಘ ಮತ್ತು ವೀರಾಜಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ವೀರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಸಂತ ಅನ್ನಮ್ಮ ಪದವಿ ಕಾಲೇಜು ಸಭಾಂಗಣದಲ್ಲಿ ಆಯೋಜಿತ “ವಿಶ್ವ ಛಾಯಾಗ್ರಹಣ ದಿನಾಚರಣೆ-2026″ನ್ನು ಕ್ಯಾಮೆರಾದಿಂದ ಛಾಯಾಚಿತ್ರವನ್ನು ಕ್ಲಿಕ್ಕಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಫಿಲ್ಮ್ ರೋಲ್ ಗಳನ್ನು ಳಸಿ ಛಾಯಾಗ್ರಹಣ ಮಾಡುತ್ತಿದ್ದ ಹಳೆಯ ಕಾಲ ಘಟ್ಟದಲ್ಲಿ ಛಾಯಾಗ್ರಾಹಕ ಮತ್ತು ಪತ್ರಕರ್ತರು ಬೇರೆ ಬೇರೆಯಾಗಿ ಗುರುತಿಸಲ್ಪಡುತ್ತಿದ್ದರು. ಡಿಜಿಟಲ್ ಛಾಯಾಗ್ರಹಣ ಬಂದ ಬಳಿಕ ಒಟ್ಟು ಛಾಯಾಗ್ರಹಣದ ಆಯಾಮವೇ ಬದಲಾವಣೆಯನ್ನು ಕಂಡು ಕೊಂಡಿದೆ. ಪ್ರಸ್ತುತ ಅತ್ಯುನ್ನತ ತಂತ್ರಜ್ಞಾನದ ಮೊಬೈಲ್‌ಗಳ ಮೂಲಕ ಗುಣಮಟ್ಟದ ಛಾಯಾಗ್ರಹಣ ಸಾಧ್ಯವಾಗಿದೆಯೆಂದು ನರಸಿಂಹನ್ ತಿಳಿಸಿದರು. :: ಮೈಕ್ರೋ ಪೋಟೋಗ್ರಾಫಿಯತ್ತ ಆಸಕ್ತರಾಗಿ :: …
ಮಡಿಕೇರಿ ಆ.19 NEWS DESK : ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆ 21 ರಂದು ವಿಶ್ವನಾಗರಿಕರ ದಿನದ ಅಂಗವಾಗಿ ಜಿಲ್ಲೆಯ 25 ಶಾಲೆಗಳಲ್ಲಿ ಹಿರಿಯ ನಾಗರಿಕರಿಗೆ ಗೌರವ ಸನ್ಮಾನದ ಮೂಲಕ ವಿಭಿನ್ನವಾಗಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಗುತ್ತಿದೆ ಎಂದು ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಪಿ.ಆರ್ ಮತ್ತು ಕಾಯ೯ಕ್ರಮ ಸಂಚಾಲಕ ಅನಿಲ್ ಹೆಚ್.ಟಿ. ಮಾಹಿತಿ ನೀಡಿದ್ದಾರೆ. ರೋಟರಿ ಜಿಲ್ಲೆ 3181 ನ ಗವನ೯ರ್ ಸತೀಶ್ ಬೊಳಾರ್ ಮಾಗ೯ದಶ೯ನದಲ್ಲಿ ಈ ವಷ೯ ರೋಟರಿ ಸಂಸ್ಥೆಗಳು ವಿಭಿನ್ನವಾಗಿ ಹಿರಿಯ ನಾಗರಿಕರ ದಿನವನ್ನು ಆಚರಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮಿಸ್ಟಿ ಹಿಲ್ಸ್ ವತಿಯಿಂದ 25 ಶಾಲೆಗಳಲ್ಲಿ ಕಾಯ೯ಕ್ರಮ ಆಯೋಜಿಸಿ ಆ ಶಾಲಾ ವ್ಯಾಪ್ತಿಯ ಆಯ್ದ ಹಿರಿಯರನ್ನು ಗೌರವಿಸಲಾಗುತ್ತಿದೆ ಎಂದು ರಾಜೇಶ್ ಮಾಹಿತಿ ನೀಡಿದರು. ರೋಟರಿ ಮಿಸ್ಟಿ ಹಿಲ್ಸ್ 13 ವಷ೯ಗಳಿಂದ ಮಡಿಕೇರಿ ದಸರಾದಲ್ಲಿ ಮಕ್ಕಳ ದಸರಾ ಆಯೋಜಿಸುತ್ತಾ ಬಂದಿದ್ದು 3 ವಷ೯ಗಳಿಂದ ಕಾಗಿ೯ಲ್ ವಿಜಯದಿವಸ್ ಸಮಾರಂಭವನ್ನು ಸಾವ೯ಜನಿಕರನ್ನು ಒಗ್ಗೂಡಿಸಿ ಆಚರಿಸುತ್ತಿದೆ. ಸೈನಿಕಶಾಲೆಗೆ ಸೇಪ೯ಡೆಯಾಗುವ ವಿದ್ಯಾಥಿ೯ಗಳಿಗೆ…






