ಸುಂಟಿಕೊಪ್ಪ, ಡಿ.24 NEWS DESK : ಮಹಾ ಶಿವರಾತ್ರಿಯ ಹಿನ್ನೆಲೆಯಲ್ಲಿ ಕೊಯಂಬತ್ತೂರಿನ ಈಶಾ ಕೇಂದ್ರ್ರದ ವತಿಯಿಂದ ಕೃಷ್ಣನ ನಗರಿ ಉಡುಪಿಯಿಂದ ಆರಂಭಗೊಂಡ ‘ಆದಿ ಯೋಗಿ ರಥ ಯಾತ್ರೆ’ಗೆ ಗದ್ದೆಹಳ್ಳದ ಗಾಂಧಿ ವೃತ್ತದಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಗದ್ದೆಹಳ್ಳದಿಂದ ನೂರಾರು ಸಂಖ್ಯೆ ಯಲ್ಲಿ ನೇರಿದ್ದ ಭಕ್ತಾಧಿಗಳು ರಥವನ್ನು ಎಳೆದು ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟದಲ್ಲಿ ತಂಗಿತು. ನಂತರ ಬೆಳಗ್ಗಿನ ಪೂಜೆಯನ್ನು ಸಲ್ಲಿಸಿದ ಬಳಿಕ ಕುಶಾಲನಗರದತ್ತ ಪ್ರಯಾಣ ಬೆಳೆಸಿತು. ಶ್ರೀಪುರಂ ಅಯ್ಯಪ್ಪ ಕ್ಷೇತ್ರದ ಬಳಿ ಪೂಜೆಯನ್ನು ಸ್ವೀಕರಿಸಿದ ಬಳಿಕ ಕೊಡಗರಹಳ್ಳಿ ಶ್ರೀ ಬೈತೂರಪ್ಪ ದೇವಾಲಯಕ್ಕೆ ಆಗಮಿಸಿತು. ದೇವಾಲಯದಲ್ಲಿ ಪೂಜೆ ನೇರವೇರಿಸಿದ ಬಳಿಕ ಧ್ಯಾನ ಭಜನೆಯ ಮೂಲಕ ಕೊಡಗರಹಳ್ಳಿ ಮಾರುತಿ ನಗರದ ಶ್ರೀ ಆಂಜನೇಯ ದೇವಸ್ಥಾನ, 7ನೇ ಹೊಸಕೋಟೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ಕೃಷ್ಣ ದೇವಸ್ಥಾನ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಚಾರಿಟೇಬಲ್ ಟ್ರಸ್ಟ್ ನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಧ್ಯಾಹ್ನ ದ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಸಂದರ್ಭ ಆಯಾ ವ್ಯಾಪ್ತಿಯ ದೇವಸ್ಥಾನ…
ಲೇಖಕ: admin
ಮಡಿಕೇರಿ ಡಿ.24 NEWS DESK : ಮುಂದಿನ ವರ್ಷ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ಕೊಡವ ಕುಟುಂಬಗಳ ನಡುವಿನ ‘ಚೇನಂಡ ಕಪ್ ಹಾಕಿ ಉತ್ಸವ’ದ ಅಂಗವಾಗಿ ಪ್ರತಿಭಾವಂತ ಯುವ ಹಾಕಿ ಪಟುಗಳನ್ನು ಬೆಳಕಿಗೆ ತರುವ ಪ್ರಯತ್ನವಾಗಿ ಜ.1 ರಿಂದ 4 ರವರೆಗೆ ಮೂರ್ನಾಡುವಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇನಂಡ ಕಪ್ ಹಾಕಿ ಉತ್ಸವದ ಆಯೋಜನಾ ಸಮಿತಿಯ ಅಧ್ಯಕ್ಷ ಚೇನಂಡ ಕಂಬಣಿ ಕರುಂಬಯ್ಯ ಅವರು 4ನೇ ತರಗತಿಯಿಂದ 7ನೇ ತರಗತಿವರೆಗಿನ ಪ್ರಾಥಮಿಕ ವಿಭಾಗ ಮತ್ತು 8 ರಿಂದ 10ನೇ ತರಗತಿವರೆಗಿನ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರಿಗಾಗಿ ಮೂರ್ನಾಡು ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿ ಯಾವುದೇ ಒಂದು ಸಮೂಹಕ್ಕೆ ಸೀಮಿತವಾಗಿಲ್ಲ, ಮುಕ್ತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು. ಪಂದ್ಯಾವಳಿಗೆ ಕೊಡಗಿನ ಎಲ್ಲಾ ಪಾಥಮಿಕ ಮತ್ತು ಪೌಢಶಾಲಾ ಶಾಲೆಗಳ ಪ್ರಮುಖರು ತಮ್ಮ ಶಾಲೆಯ ಹಾಕಿ ತಂಡಗಳನ್ನು ಕಳುಹಿಸಿ ಕೊಡಬೇಕು. ಯಾವುದೇ ಶಾಲೆಯಲ್ಲಿ…
ಮಡಿಕೇರಿ ಡಿ.24 NEWS DESK : ಶತಮಾನೋತ್ಸವದ ಸಂಭ್ರಮದಲ್ಲಿರುವ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ‘ಶತ ಸಂಭ್ರಮ’ದ ಅಂಗವಾಗಿ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮ ಡಿ.25 ರಂದು ಮಡಿಕೇರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದೆ ಮಿಲನ ಭರತ್ ಉದ್ಘಾಟಿಸಲಿದ್ದಾರೆ. ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಗರಸಭಾ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ವ್ಯವಸ್ಥಾಪಕ ಗುರು ಪ್ರಸಾದ್ ಬಂಗೇರ, ಮಡಿಕೇರಿಯ ವೃತ್ತ ನಿರೀಕ್ಷ ಪಿ.ಕೆ.ರಾಜು ಹಾಗೂ ಮಡಿಕೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಜಗದೀಶ್ ಎಂ.ಎನ್. ಅವರು ಪಾಲ್ಗೊಳ್ಳಲಿದ್ದಾರೆ. ಸೌಹಾರ್ದ ಸಹಕಾರಿಯ ಶತಮಾನೋತ್ಸವದ ಅಂಗವಾಗಿ ಕೊಡಗು ಜಿಲ್ಲಾ ಸರಕಾರಿ…
ವಿರಾಜಪೇಟೆ ಡಿ.24 NEWS DESK : ವಿರಾಜಪೇಟೆ ಸಮೀಪದ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೂತಂಡ ಪೂವಯ್ಯ ಮತ್ತು ಪಾರ್ವತಿ ಪೂವಯ್ಯ ಜ್ಞಾಪಕಾರ್ಥವಾಗಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ಸಾಧನೆ ಬಗ್ಗೆ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಹರ್ಷ ಹಾಗೂ ಪುಣ್ಯ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಏಕಲವ್ಯ ವಸತಿ ಕಾಲೇಜಿನ ಪವಿತ್ರ ಹಾಗೂ ನವಿತಾ ದ್ವಿತೀಯ ಸ್ಥಾನವನ್ನು ಗಳಿಸಿದರು. ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಹರಿಕೃಷ್ಣ ಹಾಗೂ ಕಾರ್ಯಪ್ಪ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕೂರ್ಗ್ ಎಜುಕೇಶನ್ ಫಂಡಿನ ಸದಸ್ಯರಾದ ಕೆ.ಪಿ.ಉತ್ತಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಕೆ.ಜೆ.ದಿವಾಕರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಾಬು ಕಾಳಪ್ಪ ಎಂ.ಎಂ, ಪಾಲಿಬೆಟ್ಟ ಪ್ರೌಢಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯ ಕೆ.ವಾಣಿ ಉತ್ತಪ್ಪ ಮಾತನಾಡಿ, ಸ್ವಾಮಿ ವಿವೇಕಾನಂದರ ಜೀವನ ಹಾಗೂ ಸಂದೇಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು…
ಮಡಿಕೇರಿ ಡಿ.24 NEWS DESK : ವಿರಾಜಪೇಟೆಯ ಮಾಜಿ ಸೈನಿಕರ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆಯ ಮಾಜಿ ಸೈನಿಕರ ಸಂಘದ ಮೂರನೇ ಮಹಡಿಯ ಕಟ್ಟಡ ನಿರ್ಮಾಣಕ್ಕೆ, ಸರ್ಕಾರದ ವತಿಯಿಂದ ಹಣಕಾಸು ನೆರವು ಕೇಳಿದ್ದು, ಸರ್ಕಾರದ ವತಿಯಿಂದ ಹಣ ಬರುವುದು ಸ್ವಲ್ಪ ವಿಳಂಬ ಆಗಬಹುದು ಎಂಬ ಕಾರಣದಿಂದಾಗಿ ಶಾಸಕ ಪೊನ್ನಣ್ಣ ಅವರು, ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕಾಮಗಾರಿ ಮುಂದುವರೆಯಲು ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸೈನಿಕ ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು ಶಾಸಕರ ಗೃಹ ಕಚೇರಿಯಲ್ಲಿ ಶಾಸಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜೋಕಿಮ್, ಬಟ್ಟಕಳ್ಳಂಡ ರಾಜ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಮಂಜುನಾಥ್, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಮಾಜಿ…
ಮಡಿಕೇರಿ ಡಿ.24 NEWS DESK : ಭಾಗಮಂಡಲ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜು ಹಾಗೂ ಕೆವಿಜಿ ಐಟಿಐ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಸಂಬಂಧಿತ ಕಾನೂನು ಅರಿವು ಮೂಡಿಸಿದರು.
ಕುಶಾನಲಗರ NEWS DESK ಡಿ.24 : ಕುಶಾಲನಗರದ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಬಳಿ ಮಂಗಳವಾರ ಬೆಳಗ್ಗೆ ವಾಹನವೊಂದು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮುಗ್ಧ ಆಕಳು (ಪುಟ್ಟ ಕರು) ಗಂಭೀರ ಗಾಯಗೊಂಡಿತ್ತು. ಅಂದರೆ ವೇಗದಲ್ಲಿ ಬಂದ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕರುವಿನ ಕಣ್ಣ ಕೆಳಗೆ ಬಲವಾದ ಪೆಟ್ಟು ಬಿದ್ದು ಎರಡು ಮೂರು ಇಂಚಿನಷ್ಟು ತೂತು ಬಿದ್ದಿತ್ತು. ಕೊಂಬಿನ ಭಾಗವೂ ಘಾಸಿಯಾಗಿತ್ತು. ಹಾಗಾಗಿ ತೀವ್ರತರಹದ ರಕ್ತ ಸ್ರಾವ ವಾಗಿತ್ತು. ಅತ್ತ ತನ್ನ ಕರುಳ ಬಳ್ಳಿಗಾಗಿ ಅಂದರೆ ತನ್ನ ಕರುವಿಗಾಗಿ ಹುಡುಕಾಡುತ್ತಿದ್ದ ತಾಯಿ ಹಸುವಿಗೆ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ನಿತ್ರಾಣಗೊಂಡಿದ್ದ ಕರುವಿನ ದರ್ಶನವಾದೊಡನೆಯೇ, ಅಯ್ಯೋ ಕಂದಾ ಏನಾಯಿತು ನಿನಗೆ…? ನಿನ್ನ ಈ ಸ್ಥಿತಿಗೆ ಕಾರಣರಾರು ? ಎಂದು ಘೀಳಿಟ್ಟು ಗೋಳಾಡಿದ ಹೆತ್ತ ಕರುಳು ರಕ್ತ ಸ್ರಾವದಿಂದ ಒದ್ದೆಯಾಗಿದ್ದ ಕಂದಮ್ಮನ ಹಣೆ, ಮುಖ, ಹೊಟ್ಟೆ ಎಲ್ಲವನ್ನು ತನ್ನ ನಾಲಿಗೆಯಿಂದ ಸಾವರಿಸಿ ಕಂದಮ್ಮನು ಅನಭವಿಸುತ್ತಿದ್ದ ನೋವು ನುಂಗಲು ಹರಸಾಹಸ ಪಟ್ಟಿತು. ಮನುಷ್ಯರಂತೆಯೇ ಕಂದಮ್ಮನ ಸ್ಥಿತಿಗೆ ಪರದಾಡಿ ಮನದಲ್ಲೇ ವ್ಯಥೆ…
ಶ್ರೀಹರಿಕೋಟಾ ಡಿ.24 NEWS DESK : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ (ISRO) ಬಾಹ್ಯಾಕಾಶದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆಯನ್ನು ಮಾಡಿದೆ. ಅಮೆರಿಕಾದ ಬ್ಲ್ಯೂಬರ್ಡ್ ಬ್ಲ್ಯಾಕ್-2 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹವನ್ನು ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. LVM3-M6 ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಉಡಾವಣೆಯಾದ ಸುಮಾರು 15 ನಿಮಿಷಗಳ ನಂತರ ಕೆಳ ಭೂಮಿಯ ಕಕ್ಷೆಗೆ ಸೇರಿಸಿತು. ಇದು ಭೂ ಕಕ್ಷೆಯಲ್ಲಿ ನಿಯೋಜಿಸಲಾದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹವಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವು ಭಾರತೀಯ ನೆಲದಿಂದ ಐಗಿಒ3 ನಿಂದ ಉಡಾವಣೆ ಮಾಡಲಾದ ಅತ್ಯಂತ ಭಾರವಾದ ಪೇಲೋಡ್ ಆಗಿದೆ. ಬ್ಲೂಬರ್ಡ್ ಬ್ಲಾಕ್-2 ಮಿಷನ್ ಜಾಗತಿಕ LEO ಸಮೂಹದ ಭಾಗವಾಗಿದ್ದು, ಇದು ಉಪಗ್ರಹದ ಮೂಲಕ ನೇರ-ಮೊಬೈಲ್ ಸಂಪರ್ಕವನ್ನು ಒದಗಿಸುತ್ತದೆ. ಈ ಸಮೂಹವು 4G ಮತ್ತು 5G ಧ್ವನಿ ಮತ್ತು ವೀಡಿಯೊ ಕರೆಗಳು, ಪಠ್ಯಗಳು, ಸ್ಟ್ರೀಮಿಂಗ್…
ಕುಶಾಲನಗರ ಡಿ.24 NEWS DESK : ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ರೈತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಹಲವು ಸುಧಾರಣೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಸ್ಮರಣೆಗಾಗಿ ಕೂಡಿಗೆ ಕೃಷಿ ಫಾರಂ ನಲ್ಲಿ ರೈತ ದಿನಾಚರಣೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಮಣ್ಣು ಹಾಗೂ ನೀರನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರ ಮಾಡಬೇಕಿದೆ. ಇತ್ತೀಚಿನ ದಿನಗಳಲ್ಲಿ ರೈತರು ಬೆಳೆವ ಬೆಳೆಗಳಿಗೆ ಕೀಟ ಬಾಧೆ ಕಾಡುತ್ತಿದ್ದು ಅದರ ಹತೋಟಿಗೆ ಕೃಷಿ ವಿಜ್ಞಾನಿಗಳು ನೀಡುವ ಸಲಹೆಗಳನ್ನು ರೈತರು ಪಾಲಿಸಬೇಕಿದೆ. ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣೆ ಹಾಗೂ ಉದ್ಯಮಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯಡಿ ಸಿಗುವ ಸವಲತ್ತುಗಳನ್ನು ರೈತರಿಗೆ ಒದಗಿಸಲಾಗುತ್ತಿದೆ. ಈಗಾಗಲೇ 7.50 ಕೋಟಿ ರೂಗಳ ಸಹಾಯ ಧನದಲ್ಲಿ ಕೊಡಗಿನಲ್ಲಿ 107 ಕೃಷಿಕರು ಪ್ರಯೋಜನ ಪಡೆದುಕೊಂಡಿದ್ದಾರೆ. ಅಲ್ಲದೇ ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಕಾಫಿ, ಜೇನು, ಮೀನು, ಚಪಾತಿ ಸಂಸ್ಕರಣೆ, ಎಣ್ಣೆಯ ಗಾಣಗಳು ಸೇರಿದಂತೆ ವಿವಿಧ ಆಹಾರಗಳ…
ಮಡಿಕೇರಿ ಡಿ.24 NEWS DESK : ಮೈಸೂರಿನ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿ ಕೊಡಗಿನ ಬಿ.ದಿಯಾ ಭೀಮಯ್ಯಗೆ ಕರ್ನಾಟಕ ಸರ್ಕಾರದ ಬಾಲ ವಿಕಾಸ ಅಕಾಡೆಮಿಯಿಂದ ಕೊಡಲ್ಪಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ ಲಭಿಸಿದೆ. ಅಕಾಡೆಮಿಯು ಘೋಷಿಸಿದ ಆಯ್ಕೆ ಪಟ್ಟಿಯಂತೆ 202223 ನೇ ಸಾಲಿನ ಜೂನಿಯರ್ ವಿಭಾಗದ ಕ್ರೀಡಾ ಕ್ಷೇತ್ರಕ್ಕೆ ಈ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯನ್ನು ಕುಂದಾನಗರಿ ಬೆಳಗಾವಿಯ ಸುವರ್ಣ ಸೌಧದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಜಕ್ಸ್ತಾನ್ ನಲ್ಲಿ ನಡೆಯುತ್ತಿರುವ ಅಸ್ತಾನ ಇಂಟರ್ನ್ಯಾಷನಲ್ ಚಾಲೆಂಜ್ 2025 ಟೂರ್ನಿಯಲ್ಲಿ ಭಾಗವಹಿಸಲು ತೆರಳಿರುವ ದಿಯಾ ಭೀಮಯ್ಯ ಪರವಾಗಿ ಪ್ರಶಸ್ತಿಯನ್ನು ಅವರ ತಾಯಿ ಕುಸುಮ ಅವರು ಸ್ವೀಕರಿಸಿದರು. ಕರ್ನಾಟಕ ಅಗ್ರ ಶ್ರೇಯಾಂಕದ ಆಟಗಾರ್ತಿಯಾದ ಬಿ.ದಿಯಾ ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಬ್ಯಾಡ್ಮಿಂಟನ್ ತರಬೇತಿಯನ್ನು ಮೇದುರ ಅರುಣ್ ಪೆಮ್ಮಯ್ಯ ಅವರಿಂದ ಪಡೆದಿದ್ದು,…






